Author: kannadanewsnow57

ತುಮಕೂರು : ಕೇಂದ್ರ ಸಚಿವ ವಿ. ಸೋಮಣ್ಣ ಅವರು ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಕುರಿತು ಮಹತ್ವದ ಘೋಷಣೆಯೊಂದನ್ನು ಮಾಡಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸೋಮಣ್ಣ, ಆ ದೇವರು ಬಂದು ಚುನಾವಣೆಗೆ ಸ್ಪರ್ಧಿಸುವಂತೆ ಸೂಚಿಸಿದರೂ ನಾನು ಮತ್ತೊಮ್ಮೆ ಚುನಾವಣೆಗೆ ಸ್ಪರ್ಧಿಸುವುದಿಲ್ಲ, ನನ್ನ ಭಾವನೆ ಅದೇ ರೀತಿಯಲ್ಲಿದೆ. ಅಧಿಕಾರವಿದ್ದಾಗ ಹೆಜ್ಜೆ ಗುರುತು ಬಿಟ್ಟು ಹೋಗಬೇಕು ಎಂಬುದು ನನ್ನ ಆಸೆಯಾಗಿದೆ ಎಂದು ಹೇಳಿದ್ದಾರೆ. ರೈಲ್ವೆ ಯೋಜನೆಗಳನ್ನು ಜಿಲ್ಲೆಗೆ ತರುತ್ತೇನೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಯೋಜನೆಗಳು ಬರಲಿದೆ. ನಾನು ರಾಜಕೀಯ ಮಾಡಿಕೊಂಡು, ಯಾರನ್ನೋ ಹೊಗಳಿಕೊಂಡು ಹೋಗಲು ರಾಜಕೀಯಕ್ಕೆ ಬಂದಿಲ್ಲ ಎಂದು ತಿಳಿಸಿದ್ದಾರೆ.

Read More

ಬೆಂಗಳೂರು : 2025-26 ನೇ ಸಾಲಿನಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳನ್ನು ಪ್ರೌಢ ಶಾಲೆಗಳನ್ನಾಗಿ ಉನ್ನತೀಕರಿಸಿರುವ ಕುರಿತು ರಾಜ್ಯ ಸರ್ಕಾರವು ಆದೇಶ ಹೊರಡಿಸಿದೆ. ವಿಷಯಕ್ಕೆ ಸಂಬಂಧಿಸಿದಂತೆ ಮೇಲೆ ಓದಲಾದ ಕ್ರಮಾಂಕ (1) ರಲ್ಲಿ 2025-26ನೇ ಸಾಲಿನ ಆಯವ್ಯಯ ಭಾಷಣದ ಕಂಡಿಕೆ-110ರಲ್ಲಿ ಘೋಷಿಸಿರುವಂತೆ 100 ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳನ್ನು ಪ್ರೌಢಶಾಲೆಗಳನ್ನಾಗಿ ಉನ್ನತೀಕರಿಸುವ ಸಂಬಂಧ ಸರ್ಕಾರದ ನಿರ್ದೇಶನದಂತೆ (i) CSR/SDMC/ದಾನಿಗಳು/ಸ್ಥಳೀಯ ಸಂಸ್ಥೆ/ ಇತರೆ ಮೂಲಗಳಿಂದ 3 ಅಥವಾ 3 ಕ್ಕಿಂತೆ ಹೆಚ್ಚಿನ ವರ್ಷಗಳಿಗೆ ಶಾಲೆಗಳಿಗೆ ಉನ್ನತೀಕರಣ ಸಂಬಂಧ ಬೆಂಬಲ ದೊರೆಕಲಿರುವ ಶಾಲೆಗಳ ಪಟ್ಟಿ (ii) ರಾಜ್ಯ ಬಜೆಟ್ ಘೋಷಣೆಯಡಿಯಲ್ಲಿ ಉನ್ನತೀಕರಣಕ್ಕೆ ಅರ್ಹವಿರುವ ಶಾಲೆಗಳ ಪಟ್ಟಿ (iii) ಸಮಗ್ರ ಶಿಕ್ಷಣ ಕರ್ನಾಟಕದಡಿಯಲ್ಲಿ PAB ಅನುಮೋದಿತ ಶಾಲೆಗಳ ಪಟ್ಟಿಯನ್ನು ಒದಗಿಸಲು ತಿಳಿಸಲಾಗಿದ್ದು ಇದರಂತೆ ಪ್ರಸ್ತಾವನೆಯನ್ನು ಸಲ್ಲಿಸಲಾಗಿತ್ತು. CSR ಬೆಂಬಲಿತ 65 ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳು ಹಾಗೂ ಬಜೆಟ್ ಘೋಷಣೆಯಂತೆ 76 ಹಿರಿಯ ಪ್ರಾಥಮಿಕ ಶಾಲೆಗಳು ಹಾಗೂ ಸಮಗ್ರ ಶಿಕ್ಷಣ ಕರ್ನಾಟಕ, ಕೇಂದ್ರ ಶಿಕ್ಷಣ ಮಂತ್ರಾಲಯ,…

Read More

ಬೆಂಗಳೂರು : 2025-26ನೇ ಸಾಲಿನ ಅನುಸೂಚಿತ ಜಾತಿಗಳ ಮತ್ತು ಅನುಸೂಚಿತ ಬುಡಕಟ್ಟುಗಳ ರಾಜ್ಯ ಮಟ್ಟದ ಜಾಗೃತಿ ಮತ್ತು ಮೇಲ್ವಿಚಾರಣಾ ಸಮಿತಿ ಸಭೆಯನ್ನು ದಿನಾಂಕ:25-08-2025 ರಂದು ಹಮಿಕೊಳ್ಳಲಾಗಿದ್ದು, ತುರ್ತಾಗಿ ಈ ಮಾಹಿತಿ ಸಲ್ಲಿಸುವಂತೆ ರಾಜ್ಯದ ಎಲ್ಲಾ ಶಾಲೆಗಳಿಗೆ ರಾಜ್ಯ ಸರ್ಕಾರ ಸೂಚನೆ ನೀಡಿದೆ. ವಿಷಯಕ್ಕೆ ಸಂಬಂಧಿಸಿದಂತೆ ಉಲ್ಲೇಖಿತ ಸಭಾ ಸೂಚನಾ ಪತ್ರದಂತೆ 2025-26ನೇ ಸಾಲಿನ ಅನುಸೂಚಿತ ಜಾತಿಗಳ ಮತ್ತು ಅನುಸೂಚಿತ ಬುಡಕಟ್ಟುಗಳ ರಾಜ್ಯ ಮಟ್ಟದ ಜಾಗೃತಿ ಮತ್ತು ಮೇಲ್ವಿಚಾರಣಾ ಸಮಿತಿ ಸಭೆಯನ್ನು ದಿನಾಂಕ:25-08-2025 ರಂದು ಹಮಿಕೊಳ್ಳಲಾಗಿದೆ. ಸದರಿ ಸಭೆಗೆ ಸಂಬಂಧಿಸಿದಂತೆ ಸರ್ಕಾರಿ ಪ್ರೌಢ ಶಾಲಾ ಶಿಕ್ಷಕರ ವಿರುದ್ಧ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಂದ ಅಟ್ರಾಸಿಟಿ ಪ್ರಕರಣಗಳು ದಾಖಲಾಗಿದ್ದಲ್ಲಿ ವಿವರವನ್ನು ಸಭೆಗೆ ಮಾಹಿತಿಯನ್ನು ಒದಗಿಸಬೇಕಾಗಿರುವುದರಿಂದ ಸದರಿ ಮಾಹಿತಿಯನ್ನು ಈ ಕೆಳಗಿನ ನಮೂನೆಯಲ್ಲಿ ತಪ್ಪದೇ ಈ ಮೇಲ್ ವಿಳಾಸ est4cpibng@gmail.com ಕಳುಹಿಸಲು ತಿಳಿಸಿದೆ. ಒಂದು ವೇಳೆ ಜಿಲ್ಲೆಯಲ್ಲಿ ಪ್ರೌಢ ಶಾಲಾ ಶಿಕ್ಷಕರಿಗೆ ಸಂಬಂಧಿಸಿದ ಯಾವುದೇ ಪ್ರಕರಣಗಳು ಇರದೇ ಇದ್ದಲ್ಲಿ ಶೂನ್ಯ ವರದಿಯನ್ನು ಸಲ್ಲಿಸುವುದು ಎಂದು…

Read More

ಹೈದರಾಬಾದ್ : 10 ನೇ ತರಗತಿಯ ವಿದ್ಯಾರ್ಥಿಯೊಬ್ಬ 10 ವರ್ಷದ ಬಾಲಕಿಯನ್ನು ಹತ್ಯೆಯ ಮಾಡಿದ್ದು, ಹತ್ಯೆಗೂ ಮುನ್ನ OTT ಕ್ರೈಂ ವೆಬ್ ಸಿರೀಸ್ ವೀಕ್ಷಿಸಿದ್ದಾನೆ. ಹೈದರಾಬಾದ್‌ನ ಕುಕತ್‌ಪಲ್ಲಿ ಪೊಲೀಸರು 10 ವರ್ಷದ ಬಾಲಕಿ ಸಹಸ್ರಳ ಕೊಲೆ ಪ್ರಕರಣವನ್ನು ಭೇದಿಸಿದ್ದಾರೆ. ಆಗಸ್ಟ್ 18 ರಂದು ಅಮಾಯಕರನ್ನು ಇರಿದು ಕೊಂದ ಅಪ್ರಾಪ್ತ ಬಾಲಕನನ್ನು ಪೊಲೀಸರು ಬಂಧಿಸಿದ್ದಾರೆ. 10 ನೇ ತರಗತಿಯ ವಿದ್ಯಾರ್ಥಿ ಸಿಸಿಟಿವಿ ತಪ್ಪಿಸಿಕೊಂಡು ಕೊಲೆ ಮಾಡಿದ ನಂತರ ಯಾವುದೇ ಭಯವಿಲ್ಲದೆ ನೆರೆಹೊರೆಯಲ್ಲಿ ವಾಸಿಸುತ್ತಿದ್ದ. ಆ ಹುಡುಗ ಅಪರಾಧವನ್ನು ಕಾರ್ಯಗತಗೊಳಿಸಲು ಕಾಗದದ ಮೇಲೆ ಯೋಜನೆಯನ್ನು ಸರಿಯಾಗಿ ಸಿದ್ಧಪಡಿಸಿದ್ದ. ಕಳ್ಳತನ ಮಾಡುವುದು ಹೇಗೆ? ಯಾರಾದರೂ ಅಲ್ಲಿ ವಾಸಿಸುತ್ತಿದ್ದರೆ, ಪ್ಲಾನ್ ಬಿ ಅಡಿಯಲ್ಲಿ, ಅವನನ್ನು ಹೇಗೆ ಕೊಲ್ಲುವುದು, ಇದೆಲ್ಲವನ್ನೂ ಬರೆಯಲಾಗಿದೆ. ಯಾರಾದರೂ ಅವನು ಕದಿಯುವುದನ್ನು ನೋಡಿದರೆ, ಕೊಲ್ಲಲು ಅವನ ಬಳಿ ಚಾಕು ಕೂಡ ಇತ್ತು. ಇದನ್ನು ಬಳಸಿಕೊಂಡು ಅವನು ಕೊಲೆ ಮಾಡಿದ್ದಾನೆ. ಸಿಸಿಟಿವಿ ಕಣ್ಣಿಗೆ ಬೀಳದಿರಲು, ಅವನು ಒಂದು ಕಟ್ಟಡದಿಂದ ಇನ್ನೊಂದು ಕಟ್ಟಡಕ್ಕೆ ಹಾರಿ ಮೇಲಿನಿಂದ ಕೆಳಕ್ಕೆ…

Read More

ಬೆಂಗಳೂರು : ಬೆಂಗಳೂರಿನಲ್ಲಿ ಹಿಟ್ & ರನ್ ಗೆ ಮತ್ತೊಂದು ಬಲಿಯಾಗಿದ್ದು, ಕಾರು ಡಿಕ್ಕಿಯಾಗಿ ಫ್ಲೈಓವರ್ ಮೇಲಿಂದು ಬಿದ್ದು ಮಹಿಳೆಯೊಬ್ಬರು ಸಾವನ್ನಪ್ಪಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಬಚ್ಚಳ್ಳಿ ಗೇಟ್ ಫ್ಲೈಓವರ್ ಮೇಲೆ ಘಟನೆ ನಡೆದಿದೆ. ಒನ್ ವೇನಲ್ಲಿ ಬಂದ ಕಾರು ಚಾಲಕನಿಂದ ಭೀಕರ ಅಪಘಾತವಾಗಿದ್ದು, ಫ್ಲೈಓವರ್ ಮೇಲಿಂದ ಬಿದ್ದು ನೇತ್ರಾವತಿ (31) ಮೃತಪಟ್ಟಿದ್ದಾರೆ. ಮೃತ ನೇತ್ರಾವತಿ ಬೆಂಗಳೂರಿನ ಬಾಣಸವಾಡಿ ಮೂಲದವರಾಗಿದ್ದು, ಡಿಕ್ಕಿ ರಭಸಕ್ಕೆ ಫ್ಲೈಓವರ್ ಮೇಲಿಂದ ಬಿದ್ದು ಸಾವನ್ನಪ್ಪಿದ್ದಾರೆ.ಬೈಕ್ ನ ಎಡಭಾಗಕ್ಕೆ ಬಿದ್ದ ಪತಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಅಪಘಾತವೆಸಗಿ ಕಾರು ಚಾಲಕ ಪರಾರಿಯಾಗಿದ್ದಾನೆ.

Read More

ಬೆಂಗಳೂರು : ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಗೆ ಅರ್ಜಿ ಆಹ್ವಾನಿಸಲಾಗಿದ್ದು, ಆನ್ ಲೈನ್ ಮೂಲಕ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆ.28ರಿಂದ ಆರಂಭಗೊಳ್ಳಲಿದೆ. ಅರ್ಜಿ ಸಲ್ಲಿಸಲು ಸೆ.18 ಕೊನೆಯ ದಿನವಾಗಿದ್ದು, ಅರ್ಜಿ ಶುಲ್ಕ ಪಾವತಿಗೆ ಸೆ.19ರವರೆಗೆ ಅವಕಾಶವಿರುತ್ತದೆ. ಅ.24ರಂದು ಪ್ರವೇಶ ಪತ್ರ (ಹಾಲ್ ಟಿಕೆಟ್) ಬಿಡುಗಡೆಯಾಗಲಿದೆ. ಆನ್ ಲೈನ್ ಮೂಲಕ ಮಾತ್ರವೇ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಕೆಸೆಟ್-2025 ಪರೀಕ್ಷೆಯ ವೇಳಾಪಟ್ಟಿ ಈ ಕೆಳಗಿನಂತಿದೆ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಕೆ ಪ್ರಾರಂಭದ ದಿನಾಂಕ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಕೆಯ ಕೊನೆಯ ದಿನಾಂಕ : 18.09.2015 ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ 19.09.2025, ಪ್ರವೇಶ ಪತ್ರ (Hall Ticketh ಬಿಡುಗಡೆ ದಿನಾಂಕ 24.10.2025 ಪರೀಕ್ಷಾ ದಿನಾಂಕ : 02.11.2025 ಅಭ್ಯರ್ಥಿಗಳು ಕೆಸೆಟ್-2025ಕ್ಕೆ ಆನ್‌ಲೈನ್‌ ಮೂಲಕ ಮಾತ್ರ ಅರ್ಜಿ ಸಲ್ಲಿಸಬಹುದು, ಯಾವುದೇ ಇತರ ಮನೆಯಲ್ಲಿ ಅರ್ಜಿಯನ್ನು ಸ್ವೀಕರಿಸಲಾಗುವುದಿಲ್ಲ. ಕೆಲ ವೆಬ್‌ಸೈಟ್ https:/lettininkarnataka.gov.in/kol ಅನ್ನು ಪ್ರವೇಶಿಸುವ ಮೂಲಕ ಆನ್‌ಲೈನ್‌ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿಯನ್ನು…

Read More

ಬೆಂಗಳೂರು : ಎಲ್ಲ ಖಾಸಗಿ ರಸ್ತೆಗಳನ್ನು ‘ಸರ್ಕಾರಿ ರಸ್ತೆಗಳು’ ಎಂದು ಘೋಷಣೆ ಮಾಡಲಾಗುತ್ತದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ವಿಧಾನ ಮಂಡಲದ ಅಧಿವೇಶನದಲ್ಲಿ ಪ್ರಶ್ನೋತ್ತರ ಕಲಾಪದ ವೇಳೆ ಈ ಬಗ್ಗೆ ಮಾಹಿತಿ ನೀಡಿದ ಅವರು, 50×80 ಅಡಿ ಅಳತೆವರೆಗಿನ ಕಟ್ಟಡಗಳ ನಿರ್ಮಾಣಕ್ಕೆ ಸ್ವಯಂಚಾಲಿತ ‘ನಂಬಿಕೆ ನಕ್ಷೆ’ ಯೋಜನೆಯಲ್ಲಿ ಒಂಬತ್ತು ಸಾವಿರ ನಕ್ಷೆಗಳನ್ನು ನೀಡಲಾಗಿದೆ. ಬಡಾವಣೆಗಳನ್ನು ನಿರ್ಮಿಸಿದ ನಂತರ ಕಂದಾಯ ನಿವೇಶನಗಳನ್ನು ಹಂಚಿ, ಅಲ್ಲಿರುವ ರಸ್ತೆಗಳು ಮಾಲೀಕನ ಹೆಸರಿನಲ್ಲಿ ಇದ್ದ ಅನೇಕ ಪ್ರಕರಣಗಳಿದ್ದವು. ಈ ಎಲ್ಲ ಖಾಸಗಿ ರಸ್ತೆಗಳನ್ನು ‘ಸರ್ಕಾರಿ ರಸ್ತೆಗಳು’ ಎಂದು ಘೋಷಣೆ ಮಾಡಲಾಗುತ್ತದೆ. 7.5 ಲಕ್ಷ ಬಿ ಖಾತೆಗಳನ್ನು ‘ಎ’ ಖಾತೆಗಳನ್ನಾಗಿ ಮಾಡಲಾಗುತ್ತದೆ. ‘ಅಭಿವೃದ್ದಿ ಹೊಂದಿದ ಜಮೀನು ’ ಎಂದು ಮಾರ್ಗಸೂಚಿ ದರದ ಶೇ 5.5ರಷ್ಟು ಶುಲ್ಕ ಪಾವತಿಸಿಕೊಂಡು ‘ಎ’ ಖಾತೆ ನೀಡಲು ತೀರ್ಮಾನ ಮಾಡಿದ್ದೇವೆ ಎಂದು ತಿಳಿಸಿದ್ದಾರೆ. https://twitter.com/KarnatakaVarthe/status/1959189818963099928

Read More

ಬೆಂಗಳೂರು : ಬೆಂಗಳೂರಿನಲ್ಲಿ ಗೌರಿ-ಗಣೇಶ ಹಬ್ಬಕ್ಕೆ ಪೊಲೀಸ್ ಇಲಾಖೆ ಮಾರ್ಗಸೂಚಿ ಪ್ರಕಟಿಸಿದೆ. ದಿನಾಂಕ: 27-08-2025 ರಿಂದ ಬೆಂಗಳೂರು ನಗರದಾದ್ಯಂತ ಸಾರ್ವಜನಿಕರು ಗೌರಿ-ಗಣೇಶ ಹಬ್ಬವನ್ನು ಆಚರಿಸಲಿದ್ದು, ಈ ಸಮಯದಲ್ಲಿ ಶಾಂತಿ ಮತ್ತು ಸುವ್ಯವಸ್ಥೆಯನ್ನು ಕಾಪಾಡಲು ಈ ಕೆಳಕಂಡ ಸೂಚನೆಗಳನ್ನು ಪಾಲಿಸುವಂತೆ ಸೂಚಿಸಲಾಗಿದೆ. ನಗರದ ಎಲ್ಲಾ ಪೊಲೀಸ್ ಠಾಣೆಗಳ ಠಾಣಾಧಿಕಾರಿಗಳು ತಮ್ಮ ವ್ಯಾಪ್ತಿಗಳಲ್ಲಿ ಗಣೇಶ ವಿಗ್ರಹಗಳನ್ನು ಪ್ರತಿಷ್ಠಾಪಿಸುವ ಬಗ್ಗೆ ಸಂಬಂಧಪಟ್ಟವರಿಂದ ಅನುಮತಿ ಅರ್ಜಿಗಳನ್ನು ಪಡೆದುಕೊಳ್ಳುವುದು. 2023 ಮತ್ತು 2024ನೇ ಸಾಲಿನಲ್ಲಿ ಪ್ರತಿಷ್ಠಾಪಿಸಲಾದ ಗಣಪತಿ ವಿಗ್ರಹಗಳ ಆಧಾರದ ಮೇಲೆ ಯಾವ ಯಾವ ಸ್ಥಳಗಳಲ್ಲಿ ಪ್ರಸ್ತುತ ಸಾಲಿನಲ್ಲಿ ಪ್ರತಿಷ್ಠಾಪಿಸಬಹುದು ಎಂಬುದನ್ನು ಗುರುತಿಸಿಕೊಳ್ಳುವುದು. ಸಂಘ-ಸಂಸ್ಥೆಗಳು ಗಣಪತಿ ವಿಗ್ರಹವನ್ನು ಪ್ರತಿಷ್ಠಾಪಿಸುವ ಜಾಗ, ದಿನ, ಮುಂತಾದವುಗಳ ಬಗ್ಗೆ ಮಾಹಿತಿಯನ್ನು ಸಂಗ್ರಹಿಸಿ, ಮುಂಚಿತವಾಗಿ ಏಕ ಗವಾಕ್ಷಿ ವ್ಯವಸ್ಥೆ ((Single window System) ಮೂಲಕ ಪರವಾನಗಿ ಪಡೆದುಕೊಳ್ಳುವಂತೆ ಸೂಚಿಸುವುದು. ಸಾರ್ವಜನಿಕ ರಸ್ತೆ ಹಾಗೂ ಸಾರ್ವಜನಿಕರು ಓಡಾಡುವ ಜಾಗಗಳಲ್ಲಿ ವಾಹನ ಮತ್ತು ಪಾದಚಾರಿಗಳ ಓಡಾಟಕ್ಕೆ ಅಡಚಣೆಯಾಗುವ ರೀತಿಯಲ್ಲಿ ಪೆಂಡಾಲ್, ಚಪ್ಪರ ಹಾಕಿ ಗಣಪತಿ ವಿಗ್ರಹವನ್ನು ಪ್ರತಿಷ್ಠಾಪಿಸಲು…

Read More

ಬೆಂಗಳೂರು : ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಆಗಸ್ಟ್ 27ರಿಂದ ಮತ್ತೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದಲ್ಲಿ ಮಳೆ ಅಬ್ಬರ ಕಡಿಮೆಯಾಗಿದೆ. ಆ.27 ರಿಂದ ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಮಳೆ ಮಾರುತಗಳು ಚುರುಕುಗೊಳ್ಳಲಿದ್ದು, ಹೆಚ್ಚಿನ ಪ್ರಮಾಣದ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಶಿವಮೊಗ್ಗ, ಚಿಕ್ಕಮಗಳೂರು ಹಾಗೂ ಕೊಡಗು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ. ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡಿನ ಎಲ್ಲಾ ಜಿಲ್ಲೆಗಳಲ್ಲಿ ಮಳೆ ಬಿರುಸುಗೊಳ್ಳಲಿದೆ. ಆ.24ಕ್ಕೆ ರಾಜಧಾನಿ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಹಾಗೂ ಹಗುರ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Read More

ಬೆಂಗಳೂರು : ಖಾಸಗಿ ಅನುದಾನಿತ ಕಾಲೇಜುಗಳ ಸಿಬ್ಬಂದಿಗಳಿಗೆ ರಜೆ (ವಿಶೇಷ ಸಾಂರ್ಭಿಕ ರಜೆ) ಸೌಲಭ್ಯಗಳನ್ನು ಮಂಜೂರು ಮಾಡುವ ಬಗ್ಗೆ ರಾಜ್ಯ ಸರ್ಕಾರವು ಮಹತ್ವದ ಆದೇಶ ಹೊರಡಿಸಿದೆ. ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ, ಖಾಸಗಿ ಅನುದಾನಿತ ಕಾಲೇಜಿನ ನೌಕರರಿಗೆ ವೈದ್ಯರ ಸಲಹೆ ಮೇರೆಗೆ ಕ್ಯಾನ್ಸರ್ ಖಾಯಿಲೆಯಿಂದ ಬಳಲುತ್ತಿರುವ ಸಿಬ್ಬಂದಿಗಳಿಗೆ ವಿಶೇಷ ಸಾಂದರ್ಭಿಕ ರಜೆಯನ್ನು ಮಂಜೂರು ಮಾಡುವ ಕುರಿತು ಸರ್ಕಾರವನ್ನು ಉಲ್ಲೇಖ(1)ರಲ್ಲಿ ಕೋರಲಾಗಿತ್ತು. ಸದರಿ ಪ್ರಸ್ತಾವನೆಯನ್ನು ಪರಿಶೀಲಿಸಿದ ಸರ್ಕಾರವು “ರಾಜ್ಯ ಸರ್ಕಾರಿ ನೌಕರರಿಗೆ ಕ್ಯಾನ್ಸರ್ ಖಾಯಿಲೆಯಿಂದ ಬಳಲುತ್ತಿರುವ ನೌಕರರಿಗೆ ವೈದ್ಯರ ಸಲಹೆ ಮೇರೆಗೆ ಗರಿಷ್ಟ 06 ತಿಂಗಳುಗಳ ಮಿತಿಗೊಳಪಟ್ಟು ವಿಶೇಷ ಸಾಂದರ್ಭಿಕ ರಜೆ ಸೌಲಭ್ಯವನ್ನು ಮಂಜೂರು ಮಾಡಿರುವಂತೆಯೇ ಖಾಸಗಿ ಅನುದಾನಿತ ಶಿಕ್ಷಣ ಸಿಬ್ಬಂದಿಗಳಿಗೆ ಸ್ವಯಂ ಚಾಲಿತವಾಗಿ ರಜೆ ಸೌಲಭ್ಯವನ್ನು ಮಂಜೂರು ಮಾಡುವ ಪ್ರಸ್ತಾವನೆಯನ್ನು ಪರಿಗಣಿಸಲು ಸಾಧ್ಯವಿಲ್ಲ. ಒಂದು ವೇಳೆ ಅಂತಹ ಸಂದರ್ಭಗಳಲ್ಲಿ ಸಂಬಂಧಪಟ್ಟ ಸಿಬ್ಬಂದಿಗಳಿಗೆ ಲಭ್ಯವಿರುವ ಅಸಾಧಾರಣ ರಜೆಗಳನ್ನು ಒಳಗೊಂಡಂತೆ ಎಲ್ಲಾ ರಜೆಗಳನ್ನು ಮೊದಲು ಬಳಸಿಕೊಂಡು ನಂತರ ಅಗತ್ಯವಿದ್ದರೆ ಆರ್ಥಿಕ ಇಲಾಖೆಯ ಸಹಮತಿ ಪಡೆದು ವಿಶೇಷ…

Read More