Subscribe to Updates
Get the latest creative news from FooBar about art, design and business.
Author: kannadanewsnow57
ನವದೆಹಲಿ : ದೆಹಲಿ ಮುಸ್ತಫಾಬಾದ್ ಪ್ರದೇಶದಲ್ಲಿ ಕಟ್ಟಡ ಕುಸಿದು 4 ಜನರು ಸಾವನ್ನಪ್ಪಿದ್ದಾರೆ; ರಕ್ಷಣಾ ಮತ್ತು ಶೋಧ ಕಾರ್ಯಾಚರಣೆ ನಡೆಯುತ್ತಿದೆ. 8-10 ಜನರು ಇನ್ನೂ ಸಿಲುಕಿಕೊಂಡಿರುವ ಶಂಕೆ ಇದೆ ಎಂದು ಈಶಾನ್ಯ ಜಿಲ್ಲೆಯ ಹೆಚ್ಚುವರಿ ಡಿಸಿಪಿ ಸಂದೀಪ್ ಲಂಬಾ ಹೇಳಿದ್ದಾರೆ. ದೆಹಲಿಯ ಮುಸ್ತಫಾಬಾದ್ನಲ್ಲಿ ಶನಿವಾರ ಮುಂಜಾನೆ ಕಟ್ಟಡ ಕುಸಿದ ನಂತರ ಹಲವಾರು ಜನರು ಸಿಕ್ಕಿಬಿದ್ದಿದ್ದಾರೆ ಎಂದು ಶಂಕಿಸಲಾಗಿದೆ. ಘಟನೆಯ ನಂತರ, ರಾಷ್ಟ್ರೀಯ ವಿಪತ್ತು ಪ್ರತಿಕ್ರಿಯೆ ಪಡೆ (ಎನ್ಡಿಆರ್ಎಫ್) ಮತ್ತು ಪೊಲೀಸ್ ತಂಡಗಳು ಶ್ವಾನದಳದೊಂದಿಗೆ ಸ್ಥಳಕ್ಕೆ ತಲುಪಿ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿವೆ. ಘಟನೆಯ ಬಗ್ಗೆ ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ. https://twitter.com/ANI/status/1913409660956381447?ref_src=twsrc%5Egoogle%7Ctwcamp%5Eserp%7Ctwgr%5Etweet
ನಮ್ಮಲ್ಲಿ ಹೆಚ್ಚಿನವರು ದಿನವಿಡೀ ಹಲವು ರೀತಿಯ ಪಾನೀಯಗಳನ್ನು ಕುಡಿಯುತ್ತೇವೆ. ಕೆಲವೊಮ್ಮೆ ಆಯಾಸ ನಿವಾರಿಸಲು, ಕೆಲವೊಮ್ಮೆ ರುಚಿಗಾಗಿ ಮತ್ತು ಕೆಲವೊಮ್ಮೆ ಅವು ಸುಲಭವಾಗಿ ಲಭ್ಯವಿರುವುದರಿಂದ. ಆದರೆ ನಿಮ್ಮ ಈ ಅಭ್ಯಾಸವೇ ನಿಮ್ಮ ಮೂತ್ರಪಿಂಡಗಳನ್ನು ನಿಧಾನವಾಗಿ ವಿನಾಶದತ್ತ ಕೊಂಡೊಯ್ಯುತ್ತಿದೆ ಎಂದು ನಿಮಗೆ ತಿಳಿದಿದೆಯೇ? ನಾವು ಯೋಚಿಸದೆ ಸೇವಿಸುವ ಕೆಲವು ಸಾಮಾನ್ಯ ಪಾನೀಯಗಳು ನಮ್ಮ ದೇಹದ ಪ್ರಮುಖ ಅಂಗವಾದ ಮೂತ್ರಪಿಂಡಗಳಿಗೆ ಹೆಚ್ಚಿನ ಹಾನಿಯನ್ನುಂಟುಮಾಡುತ್ತವೆ ಎಂದು ವೈದ್ಯರು ಮತ್ತು ಆರೋಗ್ಯ ತಜ್ಞರು ಪದೇ ಪದೇ ಎಚ್ಚರಿಸುತ್ತಾರೆ. ಮೂತ್ರಪಿಂಡಗಳು ನಮ್ಮ ದೇಹದಿಂದ ವಿಷಕಾರಿ ಅಂಶಗಳನ್ನು ತೆಗೆದುಹಾಕುತ್ತವೆ, ಆದರೆ ನಾವು ಪ್ರತಿದಿನ ಅವುಗಳಿಗೆ ಹಾನಿ ಮಾಡುವ ಅಂತಹ ಪಾನೀಯಗಳನ್ನು ಕುಡಿಯುತ್ತಿದ್ದರೆ, ಕ್ರಮೇಣ ಅವುಗಳ ಕಾರ್ಯವು ದುರ್ಬಲಗೊಳ್ಳುತ್ತದೆ. ಪ್ರತಿ ಗುಟುಕಿನಲ್ಲಿಯೂ ನಿಮ್ಮ ಮೂತ್ರಪಿಂಡದ ಆರೋಗ್ಯದ ಮೇಲೆ ದಾಳಿ ಮಾಡುವ ಆ 5 ಪಾನೀಯಗಳ ಬಗ್ಗೆ ನಮಗೆ ತಿಳಿಸಿ. 1. ಗಾಢ ಬಣ್ಣದ ಸೋಡಾ ಗಾಢ ಬಣ್ಣದ ತಂಪು ಪಾನೀಯಗಳು (ಕೋಲಾ ನಂತಹವು) ಹೆಚ್ಚಿನ ಪ್ರಮಾಣದ ಫಾಸ್ಪರಿಕ್ ಆಮ್ಲವನ್ನು ಹೊಂದಿರುತ್ತವೆ, ಇದು ಮೂತ್ರಪಿಂಡದ…
ದಾವಣಗೆರೆ : ದಾವಣಗೆರೆ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಅಲ್ಪಸಂಖ್ಯಾತರ ಮೌಲಾನಾ ಆಜಾದ್ ಮಾದರಿ ಶಾಲೆಗಳಿಗೆ ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ 6ನೇ ತರಗತಿ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. ಈ ಶಾಲೆಗಳಲ್ಲಿ ಅಲ್ಪಸಂಖ್ಯಾತ ವರ್ಗದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಸಿಖ್, ಬೌದ್ಧ, ಪಾರ್ಸಿ ವಿದ್ಯಾರ್ಥಿಗಳಿಗೆ ಶೇ.75%ರಷ್ಟು ಮತ್ತು ಪರಿಶಿಷ್ಠ ಜಾತಿ, ಪರಿಶಿಷ್ಟ ಪಂಗಡ ಇತರೆ ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಗೆ ಶೇ.25%ರಷ್ಟು ಪ್ರವೇಶಕ್ಕಾಗಿ ಲಭ್ಯವಿರುತ್ತದೆ. ಮತ್ತು ಶೇ.50% ರಷ್ಟು ಹೆಣ್ಣು ಮಕ್ಕಳಿಗೆ ಸ್ಥಾನಗಳನ್ನು ಮೀಸಲಿರಿಸಲಾಗಿದೆ. ಅಲ್ಪಸಂಖ್ಯಾತರ ಅಭ್ಯರ್ಥಿಗಳು ಮೇ.10 ರೊಳಗಾಗಿ ಸೇವಾ ಸಿಂಧು ಪೋರ್ಟಲ್ ವೆಬ್ ಸೈಟ್ https://sevasindhu services.karnataka.gov.in ನಲ್ಲಿ ಅರ್ಜಿ ಸಲ್ಲಿಸಬಹುದು.
ಬೆಂಗಳೂರು ; ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಹವಾಮಾನ ಇಲಾಖೆಯ ಮಾಹಿತಿ ಪ್ರಕಾರ, ಕರಾವಳಿಯ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಯಾದಗಿರಿ, ಬೀದರ್, ಕಲಬುರಗಿ, ಗದಗ, ರಾಯಚೂರು ಜಿಲ್ಲೆಗಳಲ್ಲಿ ಹಗುರ ಮಳೆ ಅಥವಾ ಗುಡುಗು ಸಹಿತ ಮಳೆ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಕೊಡಗು, ಮೈಸೂರು, ಹಾಸನ, ಚಿಕ್ಕಮಗಳೂರು, ಬಳ್ಳಾರಿ, ಚಿತ್ರದುರ್ಗ, ಚಾಮರಾಜನಗರ, ರಾಮನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಕೋಲಾರ, ತುಮಕೂರು, ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ನಾಳೆ ಉತ್ತರ ಒಳನಾಡಿನ ಬಾಗಲಕೋಟೆ, ಗದಗ, ಧಾರವಾಡ, ಹಾವೇರಿ ಜಿಲ್ಲೆಗಳಲ್ಲಿ ಹಗುರ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಕೊಡಗು, ಮೈಸೂರು, ಹಾಸನ, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಗುಡುಗು ಸಹಿತ ಹಗುರ…
ನವದೆಹಲಿ:ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್ಟಿಎ) ಜಂಟಿ ಪ್ರವೇಶ ಪರೀಕ್ಷೆ (ಜೆಇಇ) ಮೇನ್ 2025 ಸೆಷನ್ 2 ರ ಫಲಿತಾಂಶಗಳನ್ನು ಅಧಿಕೃತವಾಗಿ ಪ್ರಕಟಿಸಿದೆ. ಪರೀಕ್ಷೆಗೆ ಹಾಜರಾದ ವಿದ್ಯಾರ್ಥಿಗಳು ಈಗ ತಮ್ಮ ಅಪ್ಲಿಕೇಶನ್ ಸಂಖ್ಯೆ ಮತ್ತು ಹುಟ್ಟಿದ ದಿನಾಂಕವನ್ನು ಬಳಸಿಕೊಂಡು ಅಧಿಕೃತ ವೆಬ್ಸೈಟ್ – jeemain.nta.nic.in ಗೆ ಲಾಗಿನ್ ಆಗುವ ಮೂಲಕ ತಮ್ಮ ವೈಯಕ್ತಿಕ ಸ್ಕೋರ್ ಕಾರ್ಡ್ಗಳನ್ನು ಪ್ರವೇಶಿಸಬಹುದು. ಏಪ್ರಿಲ್ 2, 3, 4, 7, 8 ಮತ್ತು 9 ರಂದು ನಡೆದ ಸೆಷನ್ 2 ಪರೀಕ್ಷೆಯು ಬಿಇ / ಬಿಟೆಕ್ (ಪೇಪರ್ 1), ಬಿಆರ್ಕ್ (ಪೇಪರ್ 2 ಎ) ಮತ್ತು ಬಿಇ ಪ್ಲಾನಿಂಗ್ (ಪೇಪರ್ 2 ಬಿ) ಸೇರಿದಂತೆ ಅನೇಕ ವಿಭಾಗಗಳನ್ನು ಒಳಗೊಂಡಿತ್ತು. ಸ್ಕೋರ್ ಕಾರ್ಡ್ ಗಳ ಬಿಡುಗಡೆಯ ಜೊತೆಗೆ, ಎನ್ ಟಿಎ ಏಪ್ರಿಲ್ ಸೆಷನ್ ನ ಅಂತಿಮ ಉತ್ತರ ಕೀಯನ್ನು ಸಹ ಪ್ರಕಟಿಸಿದೆ. ರಾಜ್ಯಗಳಲ್ಲಿ ಟಾಪರ್ಸ್: ರಾಜಸ್ಥಾನ ಮತ್ತು ಪಶ್ಚಿಮ ಬಂಗಾಳದಿಂದ ಬಲವಾದ ಪ್ರದರ್ಶನ ಈ ವರ್ಷದ ಟಾಪರ್ಗಳ ಪಟ್ಟಿಯಲ್ಲಿ ದೇಶಾದ್ಯಂತದ…
ಬೆಂಗಳೂರು : ರಾಜ್ಯ ಸರ್ಕಾರಿ ನೌಕರರ 2024-25ನೇ ಸಾಲಿನ ರಾಜ್ಯ ಮಟ್ಟದ ಕ್ರೀಡಾಕೂಟಗಳನ್ನು ಮೇ-2025ನೇ ಮಾಹೆಯಲ್ಲಿ ಆಯೋಜಿಸಲಾಗುತ್ತಿದ್ದು, ರಾಜ್ಯ ಮಟ್ಟದ ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳಿಗೆ ಆಯ್ಕೆಯಾಗಿರುವ ಕ್ರೀಡಾಪಟುಗಳು ನಿರ್ವಹಿಸಬೇಕಾದ ಈ ಕೆಳಕಂಡ ವಿಷಯಗಳ ಬಗ್ಗೆ ಕ್ರಮವಹಿಸಲು ಸೂಚಿಸಿದೆ. ಜಿಲ್ಲಾ ಮಟ್ಟದ ವೈಯಕ್ತಿಕ ಕ್ರೀಡೆಗಳಲ್ಲಿ ಪ್ರಥಮ ಮತ್ತು ದ್ವಿತೀಯ ಸ್ಥಾನ ಪಡೆದ ಕ್ರೀಡಾಪಟುಗಳು ಹಾಗೂ ಗುಂಪು ಸ್ಪರ್ಧೆಗಳಲ್ಲಿ ಪ್ರಥಮ ಸ್ಥಾನ ಪಡೆದ ಕ್ರೀಡಾಪಟುಗಳು ಮಾತ್ರ ರಾಜ್ಯ ಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಲು ಅರ್ಹರಿರುತ್ತಾರೆ. ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುವ ಕ್ರೀಡಾಪಟುಗಳು ರಾಜ್ಯ ಸರ್ಕಾರಿ ನೌಕರರ ಸಂಘವು ಈಗಾಗಲೇ ಜಿಲ್ಲಾವಾರು ಬಿಡುಗಡೆ ಮಾಡಿರುವ Online Link ನಲ್ಲಿ ಕೇಳಲಾಗಿರುವ ಸಂಪೂರ್ಣ ಮಾಹಿತಿಯನ್ನು ಭರ್ತಿಮಾಡಿ ಹೆಸರು ನೋಂದಾಯಿಸಿಕೊಳ್ಳುವುದು. Online Link ನಲ್ಲಿ ಕೇಳಲಾಗಿರುವ ತಮ್ಮ ಟ್ರಾಕ್ಟ್ ಅಳತೆಯನ್ನು ನಮೂದಿಸುವುದು. ಒಂದಕ್ಕಿಂತ ಹೆಚ್ಚು ಕ್ರೀಡೆಗಳಲ್ಲಿ ಭಾಗವಹಿಸುತ್ತಿದ್ದಾಗ್ಯೂ, ಭಾಗವಹಿಸಲಿರುವ ಎಲ್ಲಾ ಕ್ರೀಡೆಗಳನ್ನು ಹೆಸರನ್ನು ನಮೂದಿಸಿ ಒಂದು ಬಾರಿ ಮಾತ್ರ Online ನಲ್ಲಿ ನೋಂದಾಯಿಸಿಕೊಳ್ಳುವುದು. Online…
ಬೆಂಗಳೂರು : ರಾಜಕೀಯದ ಮಧ್ಯೆ ಬಿಡುವು ಮಾಡಿಕೊಂಡು ಸಿಎಂ ಸಿದ್ದರಾಮಯ್ಯ ಅವರು ಬೆಂಗಳೂರಿನ ಸಿಟಿಆರ್ ಗೆ ಭೇಟಿ ನೀಡಿ ದೋಸೆ ಸವಿದಿದ್ದಾರೆ. ಈ ಕುರಿತು ಮಾಹಿತಿ ಹಂಚಿಕೊಂಡಿರುವ ಸಿಎಂ ಸಿದ್ದರಾಮಯ್ಯ, ರಾಜಕೀಯದ ಮಧ್ಯೆ ಬಿಡುವು ಮಾಡಿಕೊಂಡು ಸಿಟಿಆರ್ ಎಂದೇ ಜನಪ್ರಿಯವಾಗಿರುವ ಮಲ್ಲೇಶ್ವರಂನ ಸೆಂಟ್ರಲ್ ಟಿಫಿನ್ ರೂಮ್‌ಗೆ ಹೋಗಿದ್ದೆ. ವರ್ಷಗಳ ಹಿಂದೆ ಅಲ್ಲಿ ದೋಸೆ ತಿಂದದ್ದು ನೆನಪಾಯಿತು. ದೋಸೆಯ ರುಚಿಯ ಗುಣಮಟ್ಟವನ್ನು ಈಗಲೂ ಸಿಟಿಆರ್ ನಲ್ಲಿ ಕಾಯ್ದುಕೊಂಡು ಬಂದಿದ್ದಾರೆ ಎನ್ನುವುದು ಇಂದು ಅಲ್ಲಿ ಮತ್ತೆ ಮಸಾಲೆ ದೋಸೆ ತಿನ್ನುವಾಗ ಮನವರಿಕೆಯಾಯಿತು. https://twitter.com/siddaramaiah/status/1913281213286256682
ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲೂಕು ಕೋಣಂದೂರು ಪ್ರಾಥಮಿಕ ಆರೋಗ್ಯ ಕೇಂದ್ರ ವ್ಯಾಪ್ತಿಯ ದತ್ತರಾಜಾಪುರ ಗ್ರಾಮದ 8 ವರ್ಷದ ಬಾಲಕ ರಚಿತ್ ಕೆ ಎಫ್ ಡಿ ಕಾಯಿಲೆಯಿಂದ ನಿನ್ನೆ ದಿ.17-04-2025 ರಂದು ಕೆಎಂಸಿ ಮಣಿಪಾಲ ಆಸ್ಪತ್ರೆಯಲ್ಲಿ ಮೃತಪಟ್ಟಿರುತ್ತಾರೆ. ಏಪ್ರಿಲ್ 4ನೇ ತಾರೀಕು ರಚಿತ್ ರವರ ಅಕ್ಕ ರಮ್ಯಾ ಇವರಿಗೆ ಜ್ವರ ಇದ್ದ ಪ್ರಯುಕ್ತ ಜೆಸಿ ಆಸ್ಪತ್ರೆ ತೀರ್ಥಹಳ್ಳಿ ಯಲ್ಲಿ ದಾಖಲಾಗಿ ಕೆಎಫ್ ಡಿ ಪರೀಕ್ಷೆ ಮಾಡಿಸಿದಾಗ ಕೆಎಫ್ ಡಿ ಪಾಸಿಟಿವ್ ಬಂದಿರುತ್ತದೆ. ರಚಿತ್ ಗೆ ಏಪ್ರಿಲ್ 5ನೇ ತಾರೀಕು ಸುಸ್ತು ಮತ್ತು ವಾಂತಿ ಇದ್ದ ಪ್ರಯುಕ್ತ ಜೆಸಿ ಆಸ್ಪತ್ರೆಗೆ ದಾಖಲಾಗಿ ಕೆಎಫ್ ಡಿ ಪರೀಕ್ಷೆ ಮಾಡಿಸಿದಾಗ ಪಾಸಿಟಿವ್ ಬಂದಿದ್ದು ರಮ್ಯಾ ಮತ್ತು ರಚಿತ್ ಇಬ್ಬರಿಗೂ 6ನೇ ತಾರೀಕು ಕೆಎಂಸಿ ಮಣಿಪಾಲ ಆಸ್ಪತ್ರೆಗೆ ದಾಖಲು ಮಾಡಿ ಎಬಿಎಆರ್ ಕೆ ಅಡಿ ಉಚಿತ ಚಿಕಿತ್ಸೆ ನೀಡಲಾಗಿದ್ದು ರಮ್ಯಾ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ಮನೆಗೆ ಬಂದಿರುತ್ತಾರೆ. ರಚಿತ್ ಆರೋಗ್ಯ ಚೇತರಿಸದೇ ಇದ್ದುದರಿಂದ ಆಸ್ಪತ್ರೆಯಲ್ಲಿಯೇ ಇರಿಸಿ…
ಬೆಂಗಳೂರು: ಯುಜಿ ಸಿಇಟಿ 2025ರ ಪರೀಕ್ಷೆಗೆ ಸಂಬಂಧಿಸಿದಂತೆ ಕೀ ಉತ್ತರಗಳನ್ನು ಪ್ರಕಟಿಸಿರುವುದಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತಿಳಿಸಿದೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಯುಜಿಸಿಇಟಿ 2025ರ ಪರೀಕ್ಷೆಯ ಭೌತಶಾಸ್ತ್ರ, ರಸಾಯನ ಶಾಸ್ತ್ರ, ಗಣಿತ ಶಾಸ್ತ್ರ ಮತ್ತು ಜೀವಶಾಸ್ತ್ರ ವಿಷಯಗಳಿಗೆ ಸಂಬಂಧಿಸಿದಂತೆ ದಿನಾಂಕ: 16.04.2025 ಮತ್ತು 17.04.2025 ರಂದು ಪರೀಕ್ಷೆಗಳನ್ನು ನಡೆಸಲಾಗಿದ್ದು, ಸದರಿ ಪರೀಕ್ಷೆಗಳ 16 ವರ್ಷನ್‌ಗಳ ಕೀ ಉತ್ತರಗಳನ್ನು ಪ್ರಾಧಿಕಾರದ ವೆಬ್‌ಸೈಟ್‌ನಲ್ಲಿ ಅಭ್ಯರ್ಥಿಗಳ ಮಾಹಿತಿಗಾಗಿ ಪ್ರಕಟಿಸಲಾಗಿರುತ್ತದೆ ಎಂದಿದೆ. ಈ ಪ್ರಕಟಿತ ಕೀ ಉತ್ತರಗಳಿಗೆ ಆಕ್ಷೇಪಣೆಗಳಿದ್ದಲ್ಲಿ, ಅಭ್ಯರ್ಥಿಗಳು ಪ್ರಾಧಿಕಾರದ ವೆಬ್‌ಸೈಟ್‌ನಲ್ಲಿ ಒದಗಿಸಲಾದ ಆನ್‌ಲೈನ್ ಪೋರ್ಟಲ್ https://cetonline.karnataka.gov.in/keaobjections/forms/login.aspx ಲಿಂಕ್ ಮೂಲಕ ಮಾತ್ರವೇ ದಿನಾಂಕ:22.04.2025 ಸಂಜೆ 5:00 ರೊಳಗೆ ಸಲ್ಲಿಸಬಹುದಾಗಿರುತ್ತದೆ ಎಂದು ಹೇಳಿದೆ. ಆಕ್ಷೇಪಣೆಗಳನ್ನು ಸಲ್ಲಿಸುವ ಸಂದರ್ಭದಲ್ಲಿ ಪತ್ರಿಕೆಯ ವಿವರ, ಪರೀಕ್ಷಾ ದಿನಾಂಕ, ವರ್ಷನ್ ಕೋಡ್, ಪ್ರಶ್ನೆ ಸಂಖ್ಯೆ ಹಾಗೂ ಪೂರಕ ದಾಖಲೆಗಳನ್ನು PDF ರೂಪದಲ್ಲಿ ಸಲ್ಲಿಸಬೇಕು. ಪ್ರಶ್ನೆ ಸಂಖ್ಯೆ ಅಥವಾ ವರ್ಷನ್ ಕೋಡ್ ನಮೂದಿಸದೇ ಇರುವ ಅಥವಾ ಆಧಾರರಹಿತವಾಗಿರುವ ಆಕ್ಷೇಪಣೆಗಳನ್ನು ಪರಿಗಣಿಸಲಾಗುವುದಿಲ್ಲ.…
ಬೆಂಗಳೂರು : ರಾಮನಗರ ತಾಲೂಕಿನ ಬಿಡದಿ ಗೇಟ್ ಬಳಿ ಮಾಜಿ ಡಾನ್ ಮುತ್ತಪ್ಪ ರೈ ಪುತ್ರನ ಮೇಲೆ ಗುಂಡಿನ ದಾಳಿಯಾಗಿದೆ. ರಾತ್ರಿ ಮನೆ ಗೇಟ್ ಬಳಿ ಮುತ್ತಪ್ಪ ರೈ ಪುತ್ರನ ಮೇಲೆ ಫೈರಿಂಗ್ ಆಗಿದ್ದು, ಕಾರಿನ ಹಿಂಬದಿ ಸೀಟಿನಲ್ಲಿ ಕುಳಿತಿದ್ ದಮುತ್ತಪ್ಪ ರೈ. ಒಂದು ಸುತ್ತು ಫೈರಿಂಗ್ ನಡೆಸಿ ದುಷ್ಕರ್ಮಿ ಪರಾರಿಯಾಗಿದ್ದಾನೆ. ಡ್ರೈವರ್ ಹಾಗೂ ಗನ್ ಮ್ಯಾನ್ ಜೊತೆಗೆ ಬಿಡದಿ ಮನೆಯಿಂದ ಬೆಂಗಳೂರಿಗೆ ತೆರಳುತ್ತಿದ್ದ ವೇಳೆ ಗುಂಡಿನ ದಾಳಿಯಾಗಿದೆ. ದಾಳಿ ವೇಳೆ ರಿಕ್ಕಿ ರೈ ಮೂಗು, ಕೈ ಭಾಗಕ್ಕೆ ಗಂಭೀರವಾದ ಗಾಯವಾಗಿದೆ. ಮಧ್ಯರಾತ್ರಿ 12.30 ರ ಸುಮಾರಿಗೆ ಘಟನೆ ನಡೆದಿದೆ. ಸ್ಥಳಕ್ಕೆ ಬಿಡದಿ ಠಾಣೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.