Subscribe to Updates
Get the latest creative news from FooBar about art, design and business.
Author: kannadanewsnow57
ಬೆಂಗಳೂರು : ಹೆಚ್.ಆರ್.ಎಂ.ಎನ್-2.0 ತಂತ್ರಾಂಶವು ಅಭಿವೃದ್ಧಿಯ ಹಂತದಲ್ಲಿದ್ದು ಇಲಾಖೆಗೆ ಸರ್ಕಾರಿ ನೌಕರರಿಗೆ ಸಂಬಂಧಿಸಿದ ಮಾಹಿತಿಯನ್ನು ನವೀಕರಿಸಿ ಈ ಪ್ರಕ್ರಿಯೆಗಳನ್ನು ಆದ್ಯತೆ ಮೇರೆಗೆ ಪೂರ್ಣಗೊಳಿಸುವ ಬಗ್ಗೆ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಮೆಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ, ಹೆಚ್.ಆರ್.ಎಂ.ಎಸ್. – 2.0 ಯೋಜನೆಯು ಅಭಿವೃದ್ಧಿ ಹಂತದಲ್ಲಿದ್ದು ಈಗಾಗಲೇ ವೇತನ ಮಾಡ್ಯುಲ್ (Pay Roll Module) ಅನ್ನು 21 ಇಲಾಖೆಗಳಿಗೆ ಪ್ರಾಯೋಗಿಕವಾಗಿ ಜಾರಿಗೆ ತರಲಾಗಿದೆ. ಹೆಚ್.ಆರ್.ಎಂ.ಎಸ್. -2.0 ವೇತನ ಮಾಡ್ಯುಲ್ (Pay Roll Modula) ಮೂಲಕವೇ ಪ್ರಾಯೋಗಿಕವಾಗಿ ಆಯ್ಕೆ ಮಾಡಲಾದ ಈ 21 ಇಲಾಖೆಗಳ ಸರ್ಕಾರಿ ನೌಕರರಿಗೆ ವೇತನವನ್ನು ವಿಸ್ತರಿಸಲಾಗುತ್ತಿದೆ. ಮುಂದುವರೆದು, ಹೆಚ್ .ಆರ್.ಎಂ.ಎಸ್.-2.0ನ ಯೋಜನೆಯ ತಂತ್ರಾಂಶದಲ್ಲಿ 36 ಮಾಡ್ಯುಲ್‌ಗಳು ಅಭಿವೃದ್ಧಿಯ ಹಂತದಲ್ಲಿದ್ದು ಹಾಗೂ ಈ ಯೋಜನೆಯನ್ನು ಯಶಸ್ವಿಗೊಳಿಸಲು ಈ 36 ಮಾಡ್ಯುಲ್‌ಗಳು ಒಂದಕ್ಕೊಂದು ಸಮಕ್ಷಮ ಹೊಂದಾಣಿಕೆಯಿಂದ ನಡೆಸಲೇ ಬೇಕಾಗಿರುವುದರಿಂದ ಈ ಕೆಳಗಿನಂತೆ ಕೋರಿರುವ ಮಾಹಿತಿಯನ್ನು ಒದಗಿಸುವುದು. 1. ನೌಕರರ ಕೆ.ಜಿ.ಐ.ಡಿ – ಆಧಾರ್ ಜೋಡಣೆ (KGID – ADHAAR Seeding): ಕರ್ನಾಟಕ ಆರೋಗ್ಯ…
ಬೆಂಗಳೂರು : ಮಡಿವಾಳ ಸಮುದಾಯದ ಪ್ರಗತಿಗೆ ಕಾಂಗ್ರೆಸ್ ಸರ್ಕಾರ ಬದ್ಧವಾಗಿದೆ: ಮುಖ್ಯವಾಹಿನಿಗೆ ಬರುವ ಪ್ರಯತ್ನ ನಿಮ್ಮಿಂದ ಹೆಚ್ಚೆಚ್ಚು ಆಗಬೇಕು. ಈ ಕಾರಣಕ್ಕೇ ವಿದ್ಯಾಸಿರಿ ಯೋಜನೆಯ ಮೊತ್ತವನ್ನು ಎರಡು ಸಾವಿರ ರೂಪಾಯಿಗೆ ಹೆಚ್ಚಳ ಮಾಡ್ತೀನಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಹತ್ವದ ಘೋಷಣೆ ಮಾಡಿದರು. ಕೆಂಗೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಲಿದೇವ ಕನ್ವೆಷ್ನನ್ ಹಾಲ್ ಲೋಕಾರ್ಪಣೆಗೊಳಿಸಿ ಮಾತನಾಡಿದರು. ಮಡಿವಾಳ ಮತ್ತು ಹಿಂದುಳಿದ ಸಮುದಾಯದ ಮಕ್ಕಳು ಶಿಕ್ಷಣವಂತರಾಗಬೇಕು. ಇದಕ್ಕೇ ವಿದ್ಯಾಸಿರಿ ಮೊತ್ತವನ್ನು ಪ್ರತೀ ವಿದ್ಯಾರ್ಥಿಗೆ ಒಂದೂವರೆ ಸಾವಿರದಿಂದ ಎರಡು ಸಾವಿರ ರೂಪಾಯಿಗೆ ಹೆಚ್ಚಿಸಲಾಗುವುದು ಎಂದು ಘೋಷಿಸಿದರು. 12ನೇ ಶತಮಾನದಲ್ಲೇ ಮಡಿವಾಳ ಮಾಚಿ ದೇವರು ಬಸವಣ್ಣನವರ ಜೊತೆ ಸೇರಿ ಸಮಾಜದ ಬದಲಾವಣೆಗೆ ಮುಂದಾಗಿದ್ದರು. ನಮ್ಮ ಸಮಾಜದಲ್ಲಿ ಜಾತಿ ವ್ಯವಸ್ಥೆ ಕಾರಣಕ್ಕೆ ಅಸಮಾನತೆ ಇದೆ. ಈ ಕಾರಣಕ್ಕೆ ಉದ್ಯೋಗ, ಶಿಕ್ಷಣ ಸಿಗದೆ ಆರ್ಥಿಕ ಅಸಮಾನತೆ ಹೆಚ್ಚಿ ಅಸಮಾನತೆ ಹೆಚ್ಚಾಯಿತು ಎಂದು ವಿವರಿಸಿದರು. ಬಸವಾದಿ ಶರಣರು ಜಾತಿಮುಕ್ತ ಮನುಷ್ಯ ಸಮಾಜ ನಿರ್ಮಾಣಕ್ಕೆ ಹೋರಾಡಿದ್ದರು. ಒಟ್ಟಿಗೆ ಕುಳಿತು ಊಟ ಮಾಡಲಾಗದ ಅನಿಷ್ಠ…
ಕೊಪ್ಪಳ : ಭ್ರೂಣಲಿಂಗ ಪತ್ತೆಮಾಡುವುದು ಶಿಕ್ಷ್ಯಾರ್ಹ ಅಪರಾಧವಾಗಿದ್ದು ಕೊಪ್ಪಳ ಜಿಲ್ಲೆಯ ಯಾವುದೇ ಸ್ಕ್ಯಾನಿಂಗ್ ಕೇಂದ್ರಗಳಲ್ಲಿ ಭ್ರೂಣಲಿಂಗ ಪತ್ತೆ ಮಾಡಭಾರದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಲಿಂಗರಾಜು ಟಿ ಹೇಳಿದರು. ಅವರು ಗುರುವಾರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಛೇರಿಯಲ್ಲಿ ನಡೆದ ಪಿ.ಸಿ ಮತ್ತು ಪಿ.ಎನ್.ಡಿ.ಟಿ. ಜಿಲ್ಲಾ ಮಟ್ಟದ ಸಲಹಾ ಸಮಿತಿ ಸಭೆಯಲ್ಲಿ ಅಧ್ಯಕ್ಷತೆವಹಿಸಿ ಮಾತನಾಡಿದರು. ಭ್ರೂಣಲಿಂಗ ಪತ್ತೆ ಮಾಡುವ ವೈದ್ಯರಿಗೆ 3 ರಿಂದ 5 ವರ್ಷಗಳವರೆಗೆ ಜೈಲು ಶಿಕ್ಷೆ ಹಾಗೂ 10 ರಿಂದ 50 ಸಾವಿರದವರೆ ಪಿ.ಸಿ ಮತ್ತು ಪಿ.ಎನ್.ಡಿ.ಟಿ ಕಾಯ್ದೆಯಡಿ ದಂಡ ವಿಧಿಸಲಾಗುತ್ತದೆ. ಮೊದಲ ಅಫರಾದಕ್ಕೆ 5 ವರ್ಷಗಳವರೆಗೆ ಲೈಸೆನ್ಸ್ ರದ್ದುಮಾಡಲಾಗುತ್ತದೆ. ಎರಡನೆ ಅಫರಾದಕ್ಕೆ ಜೀವಿತಾವಧಿ ಸ್ಕ್ಯಾನಿಂಗ್ ಕೇಂದ್ರಗಳ ಲೈಸೆನ್ಸಗಳನ್ನು ರದ್ದು ಮಾಡಲಾಗುತ್ತದೆ ಹಾಗಾಗಿ ಯಾರು ಇಂಥಹ ಕೃತ್ಯಗಳಲ್ಲಿ ಭಾಗವಹಿಸಭಾರದು ಎಂದರು. ಸಾರ್ವಜನಿಕರಾಗಿದ್ದಲ್ಲಿ 50 ಸಾವಿರದಿಂದ 1 ಲಕ್ಷದವರೆಗೆ ದಂಡ ಮತ್ತು ಮೊದಲ ಅಫರಾದಕ್ಕೆ 3 ವರ್ಷಗಳ ಜೈಲು ಶಿಕ್ಷೆ ಎರಡನೇ…
ಕಲಬುರಗಿ : ಸಿದ್ದರಾಮಯ್ಯ ಸಿಎಂ ಆದ ಮೇಲೆ ಲವ್ ಜಿಹಾದ್ ಹೆಚ್ಚಾಗುತ್ತಿದೆ. ಆದರೂ ಸಿಎಂ ಮುಸ್ಲಿಂ ಮಹಿಳೆಯರ ರಕ್ಷಣೆಗೆ ಹಣ ನೀಡುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ವಾಗ್ದಾಳಿ ನಡೆಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಸಾವಿರಾರು ಹಿಂದೂ ಮಹಿಳೆಯರ ಜೀವನ ಹಾಳು ಮಾಡುತ್ತಿದ್ದಾರೆ. ಲವ್ ಜಿಹಾದ್ ಮೂಲಕ ಮಹಿಳೆಯರ ಜೀವನ ಹಾಳು ಮಾಡುತ್ತಿದ್ದಾರೆ. ರಕ್ಷಣೆಗೆ ಮುಂದಾಗುವ ಬದಲು ಹಿಂದೂ ವಿರೋಧಿ ನೀತಿ ಅನುಸರಿಸುತ್ತಿದ್ದಾರೆ. ಕಾಂಗ್ರೆಸ್ನ ಹಲ್ಕಟ್ ರಾಜಕಾರಣಕ್ಕೆ ಕಾರ್ಯಕರ್ತರು ಜೀವ ಬಿಟ್ಟಿದ್ದಾರೆ ಎಂದು ಕಿಡಿಕಾರಿದ್ದಾರೆ. ಪಕ್ಷ, ಹಿಂದೂ ಕಾರ್ಯಕರ್ತರ ಜೀವದ ಜೊತೆಗೆ ಚೆಲ್ಲಾಟ ಆಡಬಾರದು. ಕಾರ್ಯಕರ್ತರಿಗೆ ಅಪಮಾನ ಆಗದ ರೀತಿಯಲ್ಲಿ ಕೆಲಸ ಮಾಡಬೇಕಿದೆ. ಎಲ್ಲರೂ ಒಗ್ಗಟ್ಟಾಗಿ ಕಾರ್ಯಕರ್ತರ ರಕ್ಷಣೆ ಮಾಡುವ ಕೆಲಸ ಮಾಡುತ್ತೇವೆ ಎಂದು ಹೇಳಿದ್ದಾರೆ.
ವಾಹನ ನೀವು ಚಾಲನೆ ಮಾಡುವಾಗ ಯಾವಾಗಲೂ ನಿಮ್ಮೊಂದಿಗೆ ಕೆಲವು ದಾಖಲೆಗಳನ್ನು ಹೊಂದಿರುವುದು ಮುಖ್ಯವಾಗಿದೆ. ಅವುಗಳಲ್ಲಿ ಈ ಐದು ಕಡ್ಡಾಯ ದಾಖಲೆಗಳು ಪ್ರಮುಖವಾಗಿವೆ. ಅವು ಯಾವುವುವೆಂದು ನೋಡೋಣ ಬನ್ನಿ… ಚಾಲಕರ ಪರವಾನಗಿ (DL ನೀವು ವಾಹನ ಚಾಲನೆ ಮಾಡುವಾಗ ನಿಮ್ಮೊಂದಿಗೆ ಕೊಂಡೊಯ್ಯಬೇಕಾದ ಐದು ಅಗತ್ಯ ದಾಖಲೆಗಳಿವೆ. ಮೊದಲನೆಯದಾಗಿ, ನಿಮ್ಮ ಚಾಲಕನ ಪರವಾನಗಿ. ವಾಹನವನ್ನು ನಿರ್ವಹಿಸಲು ನಿಮಗೆ ಕಾನೂನುಬದ್ಧವಾಗಿ ಅನುಮತಿ ಇದೆ ಎಂದು ಸಾಬೀತುಪಡಿಸುವ ಪ್ರಮುಖ ದಾಖಲೆ ಇದು. ನಿಮ್ಮ ಡ್ರೈವಿಂಗ್ ಲೈಸೆನ್ಸ್ ಜೊತೆಗೆ, ನಿಮ್ಮ ನೋಂದಣಿ ಮತ್ತು ವಿಮೆಯ ಪುರಾವೆಯನ್ನು ಸಹ ನೀವು ಹೊಂದಿರಬೇಕು. ಇತ್ತೀಚಿನ ಮೋಟಾರು ವಾಹನ ಕಾಯಿದೆಯ ಪ್ರಕಾರ, ನೀವು ನಿಮ್ಮ ಡ್ರೈವಿಂಗ್ ಲೈಸೆನ್ಸ್ ಅನ್ನು ಹೊಂದಿಲ್ಲದಿದ್ದರೆ ನಿಮಗೆ 5,000 ರೂ ದಂಡ ವಿಧಿಸಬಹುದು. ನಿಮಗೆ ತಿಳಿದಿರುವಂತೆ, ಆಸ್ಟ್ರೇಲಿಯಾ, ಯುನೈಟೆಡ್ ಸ್ಟೇಟ್ಸ್ ಆಫ್ ಅಮೇರಿಕಾ, ನ್ಯೂಜಿಲೆಂಡ್, ಫ್ರಾನ್ಸ್, ಯುನೈಟೆಡ್ ಕಿಂಗ್‌ಡಮ್, ಸ್ವಿಟ್ಜರ್ಲೆಂಡ್, ದಕ್ಷಿಣ ಆಫ್ರಿಕಾ, ಸ್ವೀಡನ್, ಜರ್ಮನಿ, ಭೂತಾನ್, ಕೆನಡಾ ಮತ್ತು ಮಲೇಷ್ಯಾದಂತಹ ವಿವಿಧ ದೇಶಗಳು ಭಾರತೀಯ ಚಾಲನಾ ಪರವಾನಗಿಯನ್ನು…
ಬೆಳಗಾವಿ : ಬೆಳಗಾವಿಯಲ್ಲಿ ಘೋರ ದುರಂತವೊಂದು ಸಂಭವಿಸಿದ್ದು, ಪೈಪ್ ಲೈನ್ ಗೆ ಮಣ್ಣು ಅಗೆಯುವ ವೇಳೆ ಮಣ್ಣು ಕುಸಿದು ಬಿದ್ದು ಇಬ್ಬರು ಕಾರ್ಮಿಕರು ಸಾವನ್ನಪ್ಪಿರುವ ಘಟನೆ ನಡೆದಿದೆ. ಬೆಳಗಾವಿ ಸಮೀಪದ ಬೆಂಗಳೂರು-ಪುಣೆ ಹೆದ್ದಾರಿಯಲ್ಲಿ ಈ ಘಟನೆ ನಡೆದಿದೆ. ಪೈಪ್ ಲೈನ್ ಗಾಗಿ ಗುಂಡಿ ಅಗೆಯುವಾಗ ಗುಂಡಿಯಲ್ಲಿ ಇಳಿದಿದ್ದ ವೇಳೆ ಏಕಾಏಕಿ ಮಣ್ಣು ಕುಸಿದ ಬಿದ್ದ ಪರಿಣಾಮ ಇಬ್ಬರು ಕಾರ್ಮಿಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
ಬೆಂಗಳೂರು : ರಾಜ್ಯ ಸರ್ಕಾರವು ಪೋಷಕರು, ಮಕ್ಕಳಿಗೆ ಸಿಹಿಸುದ್ದಿ ನೀಡಿದ್ದು, 1 ನೇ ತರಗತಿ ಪ್ರವೇಶಕ್ಕೆ 6 ವರ್ಷ ಕಡ್ಡಾಯವಲ್ಲ, 5 ವರ್ಷ 6 ತಿಂಗಳು ತುಂಬಿದ್ರೆ 1 ನೇ ತರಗತಿಗೆ ಪ್ರವೇಶ ನೀಡುವುದಾಗಿ ಘೋಷಣೆ ಮಾಡಿದೆ. ಹೌದು, ರಾಜ್ಯದಲ್ಲಿ 1 ನೇ ತರಗತಿಗೆ 6 ವರ್ಷ ಪೂರ್ಣ ಕಡ್ಡಾಯ ಎಂಬ ನಿಯಮವನ್ನು ಶಿಕ್ಷಣ ಇಲಾಖೆ ಸಡಿಲಗೊಳಿಸಿದ್ದು, 1 ನೇ ತರಗತಿ ಪ್ರವೇಶಕ್ಕೆ 6 ವರ್ಷ ಕಡ್ಡಾಯವಲ್ಲ, 5 ವರ್ಷ 6 ತಿಂಗಳು ತುಂಬಿದ್ರೆ 1 ನೇ ತರಗತಿಗೆ ಪ್ರವೇಶ ನೀಡಲು ಶಿಕ್ಷಣ ಇಲಾಖೆ ನಿರ್ಧರಿಸಿದೆ. SEP ವರದಿ ಆಧಾರದ ಮೇಲೆ ಮಕ್ಕಳ 1ನೇ ತರಗತಿ ಪ್ರವೇಶಕ್ಕೆ 6 ವರ್ಷ ಪೂರ್ಣ ಕಡ್ಡಾಯ ಎಂಬ ನಿಯಮವನ್ನು ಸಡಿಲಿಕೆ ಮಾಡಲಾಗಿದೆ. ಈ ಮೂಲಕ ಮಕ್ಕಳ ವಯೋಮಿತಿ ಬಗ್ಗೆ ಟೆನ್ಷನ್ ನಲ್ಲಿದ್ದವರಿಗೆ ಬಿಗ್ ರಿಲೀಫ್ ನೀಡಿದೆ. ಈ ಶೈಕ್ಷಣಿಕ ವರ್ಷದಲ್ಲಿ 1ನೇ ತರಗತಿ ಪ್ರವೇಶಕ್ಕೆ ಜೂ.1ಕ್ಕೆ ಆರು ವರ್ಷ ತುಂಬಿರ ಬೇಕು ಎಂಬ ವಯೋಮಿತಿ…
ಬೆಂಗಳೂರು : ರಾಜ್ಯ ಸರ್ಕಾರವು ಪೋಷಕರು, ಮಕ್ಕಳಿಗೆ ಸಿಹಿಸುದ್ದಿ ನೀಡಿದ್ದು, 1 ನೇ ತರಗತಿ ಪ್ರವೇಶಕ್ಕೆ 6 ವರ್ಷ ಕಡ್ಡಾಯವಲ್ಲ, 5 ವರ್ಷ 6 ತಿಂಗಳು ತುಂಬಿದ್ರೆ 1 ನೇ ತರಗತಿಗೆ ಪ್ರವೇಶ ನೀಡುವುದಾಗಿ ಘೋಷಣೆ ಮಾಡಿದೆ. ಹೌದು, ರಾಜ್ಯದಲ್ಲಿ 1 ನೇ ತರಗತಿಗೆ 6 ವರ್ಷ ಪೂರ್ಣ ಕಡ್ಡಾಯ ಎಂಬ ನಿಯಮವನ್ನು ಶಿಕ್ಷಣ ಇಲಾಖೆ ಸಡಿಲಗೊಳಿಸಿದ್ದು, ಶಾಲಾ ವಯೋಮಿತಿ ಸಡಿಲಿಕೆಗೆ ಶಿಕ್ಷಣ ಇಲಾಖೆ ನಿರ್ಧಾರ ಮಾಡಿದೆ. SEP ವರದಿ ಆಧಾರದ ಮೇಲೆ ಮಕ್ಕಳ 1ನೇ ತರಗತಿ ಪ್ರವೇಶಕ್ಕೆ 6 ವರ್ಷ ಪೂರ್ಣ ಕಡ್ಡಾಯ ಎಂಬ ನಿಯಮವನ್ನು ಸಡಿಲಿಕೆ ಮಾಡಲಾಗಿದೆ. ಈ ಮೂಲಕ ಮಕ್ಕಳ ವಯೋಮಿತಿ ಬಗ್ಗೆ ಟೆನ್ಷನ್ ನಲ್ಲಿದ್ದವರಿಗೆ ಬಿಗ್ ರಿಲೀಫ್ ನೀಡಿದೆ. ಈ ಶೈಕ್ಷಣಿಕ ವರ್ಷದಲ್ಲಿ 1ನೇ ತರಗತಿ ಪ್ರವೇಶಕ್ಕೆ ಜೂ.1ಕ್ಕೆ ಆರು ವರ್ಷ ತುಂಬಿರ ಬೇಕು ಎಂಬ ವಯೋಮಿತಿ ನಿಗದಿ ಮಾಡಿರುವುದನ್ನು ಸಡಿಲಿಕೆ ಮಾಡುವಂತೆ ಪಾಲಕರು ಒತ್ತಾಯಿಸಿದ್ದರು. ಇದಕ್ಕೆ ಮಣಿದಿರುವ ಸರ್ಕಾರವು ವಯೋಮಿತಿ ಸಡಿಲಿಕೆ ಮಾಡಿ ಆದೇಶ…
ಕಲಬುರಗಿ : ನಾಳೆ ಸಾಮಾಜಿಕ, ಆರ್ಥಿಕ ಸಮೀಕ್ಷೆಯ ಕುರಿತು ಪ್ರತ್ಯೇಕವಾಗಿ ಸಚಿವ ಸಂಪುಟ ಸಭೆಯನ್ನು ಕರೆಯಲಾಗಿದ್ದು, ಈ ಬಗ್ಗೆ ಚರ್ಚೆ ಮಾಡಲಾಗುವುದು. ಶಾಸಕರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ನಾಳೆ ಅಂತಿಮವಾಗಿ ತೀರ್ಮಾನ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಕಲಬುರಗಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ನಾಳೆ ಸಾಮಾಜಿಕ, ಆರ್ಥಿಕ ಸಮೀಕ್ಷೆಯ ಕುರಿತು ಪ್ರತ್ಯೇಕವಾಗಿ ಸಚಿವ ಸಂಪುಟ ಸಭೆಯನ್ನು ಕರೆಯಲಾಗಿದ್ದು, ಈ ಬಗ್ಗೆ ಚರ್ಚೆ ಮಾಡಲಾಗುವುದು. ಶಾಸಕರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ನಾಳೆ ಅಂತಿಮವಾಗಿ ತೀರ್ಮಾನ ಮಾಡಲಾಗುವುದು. ಸಾಮಾಜಿಕ, ಆರ್ಥಿಕ ಸಮೀಕ್ಷೆ ಇದಾಗಿದ್ದು, ಯಾವ ಸಮುದಾಯದವರಿಗೂ ಅನ್ಯಾಯವಾಗಲು ನಾವು ಬಿಡುವುದಿಲ್ಲ ಎಂದು ಹೇಳಿದ್ದಾರೆ. ಉದ್ಯೋಗ ಮೇಳಗಳನ್ನು ಏರ್ಪಡಿಸುವ ಮೂಲಕ ಯುವಜನತೆಗೆ ಉದ್ಯೋಗ ನೀಡುವುದು ನಮ್ಮ ಸರ್ಕಾರದ ಬದ್ಧತೆ. ಭಾಗೀಯ ಮಟ್ಟದ ಉದ್ಯೋಗ ಮೇಳವನ್ನು ಕಲಬುರ್ಗಿಯಲ್ಲಿ ಇಂದು ಏರ್ಪಡಿಸಲಾಗಿದೆ. ಮೈಸೂರು ಹಾಗೂ ಹುಬ್ಬಳ್ಳಿ, ಧಾರವಾಡದಲ್ಲಿಯೂ ಉದ್ಯೋಗ ಮೇಳವನ್ನು ಏರ್ಪಡಿಸಲಾಗುತ್ತಿದೆ. ಯುವನಿಧಿ ಯೋಜನೆಯನ್ನು ಜಾರಿ ಮಾಡಿದ್ದು, ನಮಗೆ ನಿರುದ್ಯೋಗದ ಸಮಸ್ಯೆ ನಿವಾರಣೆಯ ಉದ್ದೇಶವಿದೆ. ಉದ್ಯೋಗವನ್ನು…
ಹಾವೇರಿ : ರಾಜ್ಯದಲ್ಲಿ ಜಾತಿಗಣತಿ ವರದಿ ಜಾರಿಯಾದ್ರೆ ಸರ್ಕಾರ ಪತನವಾಗಲಿದೆ ಎಂದು ಹಾವೇರಿಯಲ್ಲಿ ರಂಭಾಪುರಿ ಶ್ರೀಗಳು ಭವಿಷ್ಯ ನುಡಿದಿದ್ದಾರೆ. ಹಾವೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಾತಿ ಗಣತಿ ಜಾರಿಯಾದ್ರೆ ಸರ್ಕಾರ ಪತನವಾಗುತ್ತೆ ಅಂತ ಕಾಂಗ್ರೆಸ್ ನಾಯಕರೇ ಹೇಳ್ತಾರೆ ಎಂದು ಹೇಳಿದ್ದಾರೆ. ಹೀಗಾಗಿ ಜಾತಿಗಣವತಿ ವರದಿ ಪಾರದರ್ಶವಕಾಗಿ ಆಗಿಲ್ಲ ಎಂದು ಎಲ್ಲರಿಗೂ ಗೊತ್ತಿದೆ. ಹೀಗಾಗಿ ಜಾತಿಗಣತಿ ವರದಿ ಜಾರಿಯಾಗಬಾರದು ಎಂದು ಹೇಳಿದ್ದಾರೆ. ಜಾತಿಗಣತಿ ವರದಿ ಬಗ್ಗೆ ವಿವಿಧ ಸಮುದಾಯಗಳ ಮುಖಂಡರಿಂದ ತೀವ್ರ ವಿರೋಧ ವ್ಯಕ್ತವಾಗುತ್ತಿರುವ ಹಿನ್ನೆಲೆಯಲ್ಲಿ ನಾಳೆ ನಡೆಯಲಿರುವ ಸಚಿವ ಸಂಪುಟ ಸಭೆ ಮಹತ್ವ ಪಡೆದುಕೊಂಡಿದ್ದು, ನಾಳಿನ ಸಭೆಯಲ್ಲಿ ಜಾತಿಗಣತಿ ವರದಿ ಕುರಿತ ನಿರ್ಧಾರ ಮಹತ್ವ ಪಡೆದುಕೊಂಡಿದೆ.