Author: kannadanewsnow57

ಪ್ರಸ್ತುತ ಯುಗದಲ್ಲಿ ಮೊಬೈಲ್ ವಯಸ್ಕರ ಜೊತೆಗೆ, ಚಿಕ್ಕ ಮಕ್ಕಳು ಸಹ ಅತಿಯಾಗಿ ಬಳಸುತ್ತಿದ್ದಾರೆ. ಈ ಅತಿಯಾದ ಬಳಕೆಯು ವಯಸ್ಕರಿಗಿಂತ ಮಕ್ಕಳ ಮೇಲೆ ಗಂಭೀರ ಪರಿಣಾಮ ಬೀರುತ್ತದೆ. ಇದು ಅವರಿಗೆ ದೈಹಿಕ ಮತ್ತು ಮಾನಸಿಕ ಸಮಸ್ಯೆಗಳನ್ನು ಉಂಟುಮಾಡುತ್ತದೆ. ನಿಮ್ಮ ಮಕ್ಕಳು ಕೂಡ ಅತಿಯಾಗಿ ಫೋನ್ ನೋಡುತ್ತಿದ್ದರೆ, ಆ ಅಭ್ಯಾಸದಿಂದ ಅವರನ್ನು ತಕ್ಷಣ ದೂರ ಮಾಡುವುದು ಹೇಗೆ ಎಂದು ತಿಳಿಯಿರಿ. ಮಕ್ಕಳಲ್ಲಿ ಫೋನ್ ನೋಡುವ ಅಭ್ಯಾಸ ಕ್ರಮೇಣ ವ್ಯಸನವಾಗುತ್ತದೆ. ಇದು ಮಕ್ಕಳ ದಿನಚರಿ, ಅಧ್ಯಯನ, ಆಟಗಳು ಮತ್ತು ಸಾಮಾಜಿಕ ಚಟುವಟಿಕೆಗಳ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ. ಮೊಬೈಲ್ ಫೋನ್‌ಗಳ ಅತಿಯಾದ ಬಳಕೆಯು ಮಕ್ಕಳ ಗಮನ, ನಿದ್ರೆ ಮತ್ತು ಮಾನಸಿಕ ಆರೋಗ್ಯದ ಮೇಲೂ ಪರಿಣಾಮ ಬೀರುತ್ತದೆ. ಅಂತಹ ಪರಿಸ್ಥಿತಿಯಲ್ಲಿ, ಈ ಅಭ್ಯಾಸವನ್ನು ಹೇಗೆ ನಿಯಂತ್ರಿಸುವುದು ಮತ್ತು ಮಕ್ಕಳನ್ನು ಸಮತೋಲಿತ ಮತ್ತು ಆರೋಗ್ಯಕರ ದಿನಚರಿಯತ್ತ ಹೇಗೆ ಪ್ರೇರೇಪಿಸುವುದು ಎಂಬುದನ್ನು ಅರ್ಥಮಾಡಿಕೊಳ್ಳುವುದು ಬಹಳ ಮುಖ್ಯ. ಮೊಬೈಲ್ ಫೋನ್‌ಗಳ ಅತಿಯಾದ ಬಳಕೆಯು ದೈಹಿಕ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುತ್ತದೆ.…

Read More

2025-26ನೇ ಸಾಲಿಗೆ ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ (ಪಿಯುಸಿ ಮತ್ತು ಸಾಮಾನ್ಯ ಪದವಿ ಕೋರ್ಸುಗಳನ್ನು ಹೊರತುಪಡಿಸಿ ಉಳಿದ) ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1 ಅಲೆಮಾರಿ/ಅರೆ ಅಲೆಮಾರಿ ವಿದ್ಯಾರ್ಥಿಗಳಿಂದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ನೀಡಲಾಗುತ್ತಿರುವ “ವಿದ್ಯಾರ್ಥಿ ವೇತನ, ವಿದ್ಯಾಸಿರಿ, ಊಟ ಮತ್ತು ವಸತಿ ಸಹಾಯ, ಹಾಗೂ ಶುಲ್ಕ ವಿನಾಯಿತಿ ಸೌಲಭ್ಯಕ್ಕಾಗಿ” ಆನ್ಲೈಾನ್ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು 2026 ರ ಜನವರಿ, 31 ರವರೆಗೆ ಅವಧಿ ವಿಸ್ತರಿಸಲಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ದೀಪಕ್ ಅವರು ತಿಳಿಸಿದ್ದಾರೆ. ಆನ್ಲೈ ನ್ ಮೂಲಕ ಅರ್ಜಿ ಸಲ್ಲಿಸಬೇಕಾದ ವೆಬ್ಸೈಿಟ್ ವಿಳಾಸ: https://ssp.postmatric.karnataka.gov.in/ ಕಾರ್ಯಕ್ರಮಗಳ ವಿವರ, ಸೌಲಭ್ಯ ಪಡೆಯಲು ಇರಬೇಕಾದ ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳು ಹಾಗೂ ಕಾರ್ಯಕ್ರಮಗಳ ಸರ್ಕಾರಿ ಆದೇಶಗಳಿಗಾಗಿ ಇಲಾಖಾ ವೆಬ್ಸೈ್ಟ್ https://bcwd.karnataka.gov.in ನ್ನು ನೋಡಬಹುದು. ಇಲಾಖಾ ಸಹಾಯವಾಣಿ ಸಂಖ್ಯೆ 8050770004, ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶದ ಸಹಾಯವಾಣಿ ಇಮೇಲ್: postmatrichelp@karnataka.gov.in ದೂರವಾಣಿ ಸಂಖ್ಯೆ:08272-295628 ನ್ನು ಸಂಪರ್ಕಿಸಬಹುದು…

Read More

ಬೆಂಗಳೂರು : ದಿನಾಂಕ: 02-01-2026 ರಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಕೈಗೊಳ್ಳಲಾದ ಪ್ರಮುಖ ನಿರ್ಣಯಗಳು ಹೀಗಿವೆ. ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ, 2005 (MGNREGA) ಯೋಜನೆಯ ಬದಲಾಗಿ ವಿಕಸಿತ್ ಭಾರತ್ -ಗ್ಯಾರಂಟಿ ಫಾರ್ ರೋಜ್ಗಾರ್ & ಆಜೀವಿಕ ಮಿಷನ್ (ಗ್ರಾಮೀಣ) ಕಾಯ್ದೆ 2025 (VB-G RAM G) ಜಾರಿಗೊಳಿಸಿರುವ ಕೇಂದ್ರದ ಕ್ರಮವನ್ನು ತೀವ್ರವಾಗಿ ಖಂಡಿಸಲು  ಸಚಿವಸಂಪುಟ ನಿರ್ಣಯ ಕೈಗೊಂಡಿದೆ. ಅಧಿಕಾರ ವಿಕೇಂದ್ರೀಕರಣ, ಗ್ರಾಮಗಳಿಗೆ ಅಭಿವೃದ್ಧಿ ತಲುಪಿಸುವ ಅಧಿಕಾರವನ್ನು ಗ್ರಾಮಪಂಚಾಯತಿಗಳಿಗೆ ನೀಡಲಾಗಿದ್ದ ಎಲ್ಲ ರಚನಾತ್ಮಕ, ಸಕಾರಾತ್ಮಕ, ಸ್ವರಾಜ್ಯದ ಪರಿಕಲ್ಪನೆಯನ್ನು ಬುಡಮೇಲು ಮಾಡುವ ಪ್ರಯತ್ನವನ್ನು ಕೇಂದ್ರ ಸರ್ಕಾರ ಮಾಡಿದೆ. ಈ ಯೋಜನೆ ರದ್ಧತಿ ಕುರಿತು ವಿವರವಾದ ಪತ್ರಿಕಾಗೋಷ್ಠಿಯನ್ನು ಮುಖ್ಯಮಂತ್ರಿಗಳು ನಾಳೆ ಕೈಗೊಳ್ಳಲಿದ್ದಾರೆ ಎಂದು ಕಾನೂನು ಮತ್ತು ಪ್ರವಾಸೋದ್ಯಮ ಸಚಿವ ಶ್ರೀ ಹೆಚ್.ಕೆ.ಪಾಟೀಲ್ ರವರು ತಿಳಿಸಿದರು. ಕರ್ನಾಟಕ ಲೋಕಾಯುಕ್ತ (ತಿದ್ದುಪಡಿ) ವಿಧೇಯಕ, 2025″ಕ್ಕೆ ಅನುಮೋದನೆ ನೀಡಲು ಸಚಿವ ಸಂಪುಟ ನಿರ್ಣಯಿಸಿದೆ. 2025-26ನೇ ಸಾಲಿನ ರಾಷ್ಟ್ರೀಯ…

Read More

ಶಿವಮೊಗ್ಗ : ಭದ್ರಾ ಜಲಾಶಯದಲ್ಲಿನ ನೀರನ್ನು ಜನವರಿ 03ರಿಂದ ಎಡದಂಡೆ ನಾಲೆಗೆ ಹಾಗೂ ಜನವರಿ 08ರಿಂದ ಬಲದಂಡೆ ನಾಲೆಗೆ ನಿರಂತರವಾಗಿ 120ದಿನಗಳ ಕಾಲ ನೀರನ್ನು ಹರಿಸಲು ಭದ್ರಾ ಜಲಾಶಯದ 88ನೇ ನೀರಾವರಿ ಸಲಹಾ ಸಮಿತಿಯ ಅಧ್ಯಕ್ಷರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಮಧು ಬಂಗಾರಪ್ಪ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಸರ್ವಾನುಮತ ನಿರ್ಣಯ ಕೈಗೊಳ್ಳಲಾಯಿತು. ಮಲವಗೊಪ್ಪದ ಭದ್ರಾ ಅಚ್ಚುಕಟ್ಟು ಪ್ರಾಧಿಕಾರದ ಕಚೇರಿ ಸಭಾಂಗಣದಲ್ಲಿ ಭದ್ರಾ ಯೋಜನೆಯ ಅಚ್ಚುಕಟ್ಟು ಪ್ರದೇಶದ 2025-26ನೇ ಸಾಲಿನ ಬೇಸಿಗೆ ಬೆಳೆಗೆ ನೀರು ಹರಿಸುವ ಕುರಿತು ಏರ್ಪಡಿಸಲಾಗಿದ್ದ ಸಭೆಯ ಅಧ್ಯಕ್ಷತೆ ವಹಿಸಿದ್ದ ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಮಧು ಬಂಗಾರಪ್ಪ ಅವರು ಮಾತನಾಡಿ, ಮುಂದಿನ ಬೇಸಿಗೆ ಹಂಗಾಮಿನ ಕೃಷಿ ಚಟುವಟಿಕೆಗಳಿಗೆ ಯಾವುದೇ ಅಡಚಣೆ ಆಗದಂತೆ ಅವಶ್ಯಕವಾಗಿರುವ ನೀರನ್ನು ಒದಗಿಸಲು ಮತ್ತು ನಗರ ಪಟ್ಟಣ ಪ್ರದೇಶಗಳಿಗೆ ಕುಡಿಯುವ ನೀರನ್ನು ಪೂರೈಸುವುದನ್ನು ಗಮನದಲ್ಲಿಟ್ಟುಕೊಂಡು ನೀರನ್ನು ಬಿಡಲು ಕ್ರಮ ಕೈಗೊಳ್ಳಲಾಗಿದೆ ಎಂದವರು ನುಡಿದರು. ಅಚ್ಚುಕಟ್ಟು…

Read More

ಬೆಂಗಳೂರು : ಗೃಹಲಕ್ಷ್ಮಿ ಸೇರಿದಂತೆ ಸರ್ಕಾರದ ವಿವಿಧ ಯೋಜನೆಗಳಿಗೆ 2025-26ನೇ ಸಾಲಿನಲ್ಲಿ ಜನವರಿ-2026 ಯಿಂದ ಮಾರ್ಚ್-2026 ವರೆಗಿನ ನಾಲ್ಕನೇ ತ್ರೈಮಾಸಿಕ ಕಂತಿನ ಹಣ ಬಿಡುಗಡೆಗೆ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಕಾಲಕಾಲಕ್ಕೆ ಹೊರಡಿಸಲಾಗುವ ಸರ್ಕಾರದ ಆದೇಶಗಳ ಮೂಲಕ ಆಡಳಿತ ಇಲಾಖೆಗಳಿಗೆ ಹಣ ಬಿಡುಗಡೆ ಮಾಡಲು ಆರ್ಥಿಕ ಅಧಿಕಾರ ಪ್ರತ್ಯಾಯೋಜಿಸಲಾಗುತ್ತಿದೆ. 2025-26ನೇ ಸಾಲಿಗೆ ಪ್ರತ್ಯಾಯೋಜಿಸಿರುವ ಈ ಆರ್ಥಿಕ ಅಧಿಕಾರಗಳ ಆದೇಶವು, 2025-26ನೇ ಸಾಲಿನ ರಾಜಸ್ವ ವೆಚ್ಚ ಮತ್ತು ಬಂಡವಾಳ ವೆಚ್ಚಗಳನ್ನು ಬಿಡುಗಡೆ ಮಾಡುವುದಕ್ಕೆ ಅನ್ವಯವಾಗುತ್ತದೆ. ಈ ಆದೇಶದಲ್ಲಿರುವ ಅಧಿಕಾರ ಪ್ರತ್ಯಾಯೋಜನೆಯನ್ನು ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳು/ಪ್ರಧಾನ ಕಾರ್ಯದರ್ಶಿಗಳು/ ಕಾರ್ಯದರ್ಶಿಗಳು ಚಲಾಯಿಸತಕ್ಕದ್ದೇ ಹೊರತು ಪುನ‌ರ್ ಪ್ರತ್ಯಾಯೋಜನೆ ಮಾಡತಕ್ಕದ್ದಲ್ಲ. ಸರ್ಕಾರದ ಆದೇಶ ಸಂ: ಎಫ್‌ಡಿ 04 ಟಿಎಫ್‌ಪಿ: 2025, ಬೆಂಗಳೂರು, ದಿನಾಂಕ:01.01.2026 ಭಾಗ-I ಆಡಳಿತಾತ್ಮಕ ಅನುಮೋದನೆ: ಒಂದು ಆರ್ಥಿಕ ವರ್ಷದಲ್ಲಿ ಮುಂದುವರಿದ ಅಥವಾ ಹೊಸ ಯೋಜನೆಗಳೆಂದು ಅನುಮೋದನೆಗೊಂಡಿರುವ ಯೋಜನೆಗಳಿಗೆ ಮಾತ್ರ ಹಣವನ್ನು ಆಡಳಿತ ಇಲಾಖೆಗಳು ಬಿಡುಗಡೆಗೊಳಿಸಬಹುದಾಗಿದೆ. ಮೇಲೆ (2) ಮತ್ತು (3) ರಲ್ಲಿ ಉಲ್ಲೇಖಿಸಲಾದ…

Read More

ದಿನನಿತ್ಯ ಬಳಸುವ ರಸ್ತೆಯಲ್ಲಿ ಪ್ರತಿಯೊಬ್ಬರ ಜೀವನ ಅಡಗಿದ್ದು, ಜಾಗರೂಕರಾಗಿ ವಾಹನ ಚಲಾಯಿಸಬೇಕು ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ರಾಜೇಶ್ ಎನ್.ಹೊಸಮನೆ ಅವರು ಹೇಳಿದರು. ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಚೇರಿ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಇವರ ಸಹಯೋಗದಲ್ಲಿ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಚೇರಿ ಆವರಣದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ 37 ನೇ ರಸ್ತೆ ಸುರಕ್ಷತಾ ಮಾಸಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ರಸ್ತೆ ಅಪಘಾತಗಳು ಅಪಾಯಕಾರಿಯಾಗಿದ್ದು, ಸಾರ್ವಜನಿಕ ರಸ್ತೆಗಳಲ್ಲಿ ಸಂಚರಿಸುವ ಪ್ರತಿಯೊಬ್ಬರೂ ರಸ್ತೆ ನಿಯಮಗಳನ್ನು ಪಾಲಿಸಬೇಕು. ಸಾರ್ವಜನಿಕರಲ್ಲಿ ರಸ್ತೆ ಸುರಕ್ಷತಾ ನಿಯಮಗಳ ಕುರಿತು ಅರಿವು ಮೂಡಿಸಲು ಜನವರಿ ಮಾಸಾದ್ಯಂತ ಜಿಲ್ಲೆಯಲ್ಲಿ ವಿವಿಧ ರೀತಿಯ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು. ರಸ್ತೆ ಅಪಘಾತಗಳಲ್ಲಿ ಪ್ರತಿವರ್ಷ ಸಾವನ್ನಪ್ಪುವವರ ಸಂಖ್ಯೆ ಮೊದಲನೇ ಮತ್ತು ಎರಡನೇ ಮಹಾಯುದ್ಧದಲ್ಲಿ ಸಾವನ್ನಪ್ಪಿದ್ದ ಸಂಖ್ಯೆಗೆ ಹೋಲಿಸಬಹುದಾಗಿದೆ. 2025ರ ಅಂಕಿ-ಸAಖ್ಯೆ ಪ್ರಕಾರ ದೇಶದಲ್ಲಿ ಸುಮಾರು 4.08 ಲಕ್ಷ ರಸ್ತೆ ಅಪಘಾತ ಘಟನೆಗಳು…

Read More

ಬೆಂಗಳೂರು : ಪೂರ್ವಾನುಮತಿ ಇಲ್ಲದೇ ಅನಧಿಕೃತವಾಗಿ ರಜೆ ಹಾಕುವುದು ಉದ್ಯೋಗಿಯ ಹಕ್ಕಲ್ಲ ಎಂದು ಹೈಕೋರ್ಟ್ ಪೀಠ ಅಭಿಪ್ರಾಯಪಟ್ಟಿದೆ. ಅನಧಿಕೃತವಾಗಿ ಉದ್ಯೋಗಕ್ಕೆ ಗೈರಾದ ಹಿನ್ನೆಲೆಯಲ್ಲಿ ಟ್ರೈನಿ ಚಾಲಕನಾಗಿ ಕೆಲಸ ಮಾಡುತ್ತಿದ್ದ ವೆಂಕಟರಾಮಯ್ಯ ಎಂಬುವರನ್ನು ಸೇವೆಯಿಂದ ತೆಗೆದುಹಾಕಿದ್ದ ಆದೇಶ ರದ್ದುಪಡಿಸಿದ್ದ ಕಾರ್ಮಿಕ ಕೋರ್ಟ್ ನ ಆದೇಶ ಪ್ರಶ್ನಿಸಿ ಬಿಎಂಟಿಸಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿತ್ತು. ಈ ಅರ್ಜಿ ಪುರಸ್ಕರಿಸಿರುವ ನ್ಯಾ.ಎಂ.ಜ್ಯೋತಿ ಅವರ ಪೀಠ, ಪೂರ್ವಾನುಮತಿ ಇಲ್ಲದೆ ನೌಕರಿಗೆ ಗೈರಾಗುವುದು ದುರ್ನತಡೆ. ಶ್ರದ್ದೆಯಿಂದ ಕೆಲಸ ಮಾಡದ ಉದ್ಯೋಗಿಗೆ ಸಹಾನುಭೂತಿ ತೋರುವ ಅಗತ್ಯವಿಲ್ಲ ಎಂದು ಹೈಕೋರ್ಟ್ ಅಭಿಪ್ರಾಯ ಪಟ್ಟಿದೆ. ಪೂರ್ವಾನುಮತಿ ಮತ್ತು ರಜೆ ಪಡೆಯದೆ ವೆಂಕಟರಾಮಯ್ಯ 2016ರ ಡಿ.1ರ ನಂತರ ಅನಧಿಕೃತವಾಗಿ ಉದ್ಯೋ ಗಕ್ಕೆ ಗೈರಾಗಿದ್ದಾರೆ. ಈ ಅಪರಾಧ ಸಾಬೀತಾದ ಹಿನ್ನೆಲೆಯಲ್ಲಿ ಬಿಎಂಟಿಸಿ ಸೇವೆಯಿಂದ ವಜಾಗೊಳಿಸಿದೆ. ಉದ್ಯೋಗ ನಿರ್ವಹಣೆ ವೇಳೆ ಸಕಾರಣವಿಲ್ಲದೆ ಉದ್ಯೋಗಕ್ಕೆ ನೌಕರ ಅನಧಿ ಕೃತವಾಗಿ ಗೈರಾಗಬಾರದು. ರಜೆಯಿಲ್ಲದೆ ಗೈರಾಗುವುದು ದುರ್ನಡತೆ ಆಗಲಿದೆ ಎಂದು ಕೋರ್ಟ್ ಪೀಠ ಹೇಳಿದೆ.

Read More

ಬೆಂಗಳೂರು: 2026ನೇ ಸಾಲಿನ ಸಿಇಟಿ ಪರೀಕ್ಷೆಗೆ ನಾವು ಈಗಿನಿಂದಲೇ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದ್ದು, ಜ.17ರಂದು ಅರ್ಜಿ ಬಿಡುಗಡೆ ಮಾಡಲಿದ್ದೇವೆ. ಈ ಬಾರಿಯ ವಿಶೇಷ ಅಂದರೆ, ಅರ್ಜಿ ಸಲ್ಲಿಸುವ ಪ್ರತಿಯೊಬ್ಬ ಅಭ್ಯರ್ಥಿಯ ಹೆಸರೂ, ಹುಟ್ಟಿದ ದಿನಾಂಕ, ವಿಳಾಸ ಇತ್ಯಾದಿ ವಿವರಗಳನ್ನು ಆಧಾರ್ ಅಥವಾ ಡಿಜಿ ಲಾಕರ್ ಮೂಲಕ ಪ್ರಾಮಾಣೀಕರಿಸುವ ವ್ಯವಸ್ಥೆ ಮಾಡಲಾಗಿದೆ. ಇದರಿಂದ ಹೆಸರು ಬರೆಯುವುದರಲ್ಲಿ ಆಗುತ್ತಿದ್ದ ತಪ್ಪು ಗಳನ್ನು ತಪ್ಪಿಸಬಹುದು ಎಂಬುದಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ತಿಳಿಸಿದೆ. ಸಚಿವ ಡಾ.ಎಂ.ಸಿ.ಸುಧಾಕರ ಮತ್ತು ಡಾ.ಶರಣ ಪ್ರಕಾಶ ಪಾಟೀಲ ಅವರ ಪತ್ರಿಕಾಗೋಷ್ಠಿಯ ಮುಖ್ಯಾಂಶಗಳು * ವೃತ್ತಿಪರ ಶಿಕ್ಷಣ ಕೋರ್ಸ್‌ಗಳ ಅಧ್ಯಯನ ಮಾಡಲು ಬಯಸುವವರಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಯನ್ನು ಮೂರು ದಶಕಗಳಿಂದಲೂ ನಡೆಸಿಕೊಂಡು ಬರುತ್ತಿರುವ ಹೆಗ್ಗಳಿಕೆ ಹೊಂದಿದೆ. * ಪಿಜಿ ಮತ್ತು ಯುಜಿ ನೀಟ್‌ ಕೌನ್ಸೆಲಿಂಗ್‌, ಪಿಜಿಸಿಇಟಿ/ಪಿಜಿಇಟಿ, ಕೆ-ಸೆಟ್‌ ಹಾಗೂ ಪದವಿ ಕಾಲೇಜು ಉಪನ್ಯಾಸಕರು, ಪಿಎಸ್‌ಐ ಸೇರಿದಂತೆ ಇತರ ಪ್ರಮುಖ ನೇಮಕಾತಿ ಪರೀಕ್ಷೆಗಳನ್ನೂ ಅತ್ಯಂತ ಸಮರ್ಥವಾಗಿ ನಡೆಸಿಕೊಂಡು ಬಂದಿದೆ. *…

Read More

ಬೆಂಗಳೂರು : ಶಿಕ್ಷಕ ಹುದ್ದೆ ಆಕಾಂಕ್ಷಿಗಳಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, ರಾಜ್ಯದಲ್ಲಿ 18 ಸಾವಿರ ಶಿಕ್ಷಕರ ನೇಮಕಾತಿಗೆ ಇದೇ ತಿಂಗಳು ಅಧಿಸೂಚನೆ ಪ್ರಕಟವಾಗುವ ಸಾಧ್ಯತೆ ಇದೆ.   ರಾಜ್ಯದಲ್ಲಿ ಶಾಲಾರಂಭವಾಗುವ ಜೂನ್ ವೇಳೆಗೆ ರಾಜ್ಯ ಸರ್ಕಾರ 18 ಸಾವಿರ ಶಿಕ್ಷಕರ ನೇಮಕಾತಿ ನಡೆಸಲಿದೆ. ಇದಕ್ಕಾಗಿ ಈಗಾಗಲೇ ಟಿಇಟಿಯನ್ನು ಮುಗಿಸಿ ಫಲಿತಾಂಶ ಪ್ರಕಟಿಸಿದೆ. ಜನವರಿಯಲ್ಲಿ ಶಿಕ್ಷಕರ ನೇಮಕಾತಿ ಅಧಿಸೂಚನೆ ಪ್ರಕಟಿಸಲಾಗುತ್ತದೆ. ಒಟ್ಟಾರೆ ಜೂನ್ ವೇಳೆಗೆ ನೇಮಕಾತಿ ಪ್ರಕ್ರಿಯೆ ಪೂರ್ಣಗೊಳಿಸಲಾಗುತ್ತದೆ.ಇನ್ನೂ ಆಗಸ್ಟ್-ಅಕ್ಟೋಬರ್ ನಲ್ಲಿ ಬ್ಯಾಂಕಿಂಗ್ ಪರೀಕ್ಷೆಗಳ ಸರಣಿ ಆರಂಭವಾಗಲಿದ್ದು, 5,000ಕ್ಕೂ ಹೆಚ್ಚಿನ ಹುದ್ದೆಗಳಿಗೆ ನೇಮಕಾತಿ ನಿರೀಕ್ಷಿಸಲಾಗಿದೆ.

Read More

ಬೆಂಗಳೂರು: ಕಂದಾಯ ಅದಾಲತ್ ಕಾರ್ಯಕ್ರಮದ ಮೂಲಕ ಪಹಣಿ ತಿದ್ದುಪಡಿ ಅಧಿಕಾರವನ್ನು ತಹಶೀಲ್ದಾರರಿಗೆ ಪ್ರತ್ಯಾಯೋಜಿಸುವ ಅವಧಿಯನ್ನು ವಿಸ್ತರಿಸಿ ರಾಜ್ಯ ಸರ್ಕಾರ ಆದೇಶಿಸಿದೆ.  ಈ ಕುರಿತಂತೆ ಕಂದಾಯ ಇಲಾಖೆಯ ಆಯುಕ್ತರು ರಾಜ್ಯದ ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದಿದ್ದು, ರಾಜ್ಯ ಸರ್ಕಾರದ ವಿವಿಧ ಆದೇಶಗಳಲ್ಲಿ ಕಾಲಕಾಲಕ್ಕೆ ಪಹಣಿ ತಿದ್ದುಪಡಿ ಅಧಿಕಾರವನ್ನು ಸಹಾಯಕ ಆಯುಕ್ತರಿಂದ ತಹಶೀಲ್ದಾರರಿಗೆ ಪ್ರತ್ಯಾಯೋಜಿಸಿ ಮುಂದುವರೆಸಿಕೊಂಡು ಬರಲಾಗುತ್ತಿದೆ. ಅದರಂತೆ ದಿನಾಂಕ:30.06.2025 ಕ್ಕೆ ಸದರಿ ಪ್ರತ್ಯಾಯೋಜನೆಯ ಅವಧಿಯು ಮುಕ್ತಾಯಗೊಂಡಿರುತ್ತದೆ ಎಂದಿದ್ದಾರೆ. ಸದರಿ ಕಂದಾಯ ಅದಾಲತ್ ಯೋಜನೆಯನ್ನು 2014ನೇ ಸಾಲಿನಿಂದ ಆರಂಭಿಸಿದ್ದು, ಜೂನ್ 2025 ರವರೆಗೂ ವಿಸ್ತರಿಸಲಾಗಿರುತ್ತದೆ. ಆದಾಗ್ಯೂ ಪಹಣಿ ತಿದ್ದುಪಡಿ ಪ್ರಕರಣಗಳನ್ನು ವಿಲೇವಾರಿ ಮಾಡುವ ಸಂಬಂಧ ಕಂದಾಯ ಅದಾಲತ್‌ ಅವಧಿಯನ್ನು ವಿಸ್ತರಿಸಲು ಕೋರಿ ಕೆಲವು ತಾಲ್ಲೂಕುಗಳಿಂದ ಮನವಿಗಳು ಸ್ವೀಕೃತವಾಗಿರುತ್ತವೆ ಎಂದು ಹೇಳಿದ್ದಾರೆ. ಈ ಹಿನ್ನಲೆಯಲ್ಲಿ ಕಂದಾಯ ಅದಾಲತ್ ಕಾರ್ಯಕ್ರಮದ ಮೂಲಕ ಪಹಣಿ ತಿದ್ದುಪಡಿ ಅಧಿಕಾರವನ್ನು ತಹಶೀಲ್ದಾರರಿಗೆ ಪ್ರತ್ಯಾಯೋಜಿಸುವ ಅವಧಿಯನ್ನು ವಿಸ್ತರಿಸುವ ಕುರಿತಂತೆ ತಮ್ಮ ಸ್ಪಷ್ಟ ಅಭಿಪ್ರಾಯವನ್ನು 15 ದಿನಗಳಲ್ಲಿ ಸಲ್ಲಿಸಲು ತಿಳಿಸಿದ್ದಾರೆ.

Read More