Author: kannadanewsnow57

ಬೆಂಗಳೂರು : ಒಂದು ಕಡೆ ವಿಪಕ್ಷ ನಾಯಕರು ನವೆಂಬರ್ನಲ್ಲಿ ಭಾರಿ ಕ್ರಾಂತಿ ಅಗಲಿದೆ ರಾಜ್ಯ ರಾಜಕಾರಣದಲ್ಲಿ ಹಲವು ಬದಲಾವಣೆ ಆಗಲಿದೆ ಎಂದು ಹೇಳಿಕೆ ನೀಡುತ್ತಿದ್ದಾರೆ. ಇನ್ನೊಂದು ಕಡೆ ಸಿಎಂ ಸಿದ್ದರಾಮಯ್ಯ ತಮ್ಮ ಎಲ್ಲಾ ಸಂಪುಟ ಸಹ ಉದ್ಯೋಗಿಗಳಿಗೆ ಇಂದು ಔತಣಕೂಟ ಏರ್ಪಡಿಸಿದ್ದಾರೆ. ಈ ಮೂಲಕ ಬಿಹಾರ ಚುನಾವಣೆಯ ಬಳಿಕ ರಾಜ್ಯ ಸಚಿವ ಸಂಪುಟ ಪುನಾರಚನೆ ಮಾಡೋದು ಬಹುತೇಕ ಫಿಕ್ಸ್ ಎಂಬಂತೆ ಈ ಒಂದು ಔತಣಕೂಟದ ಮೂಲಕ ಸುಳಿವು ನೀಡಿದ್ದಾರೆ ಎಂದು ಹೇಳಲಾಗುತ್ತಿದೆ. ಹೌದು ಇಂದು ಸಂಪುಟ ಸಹೋದ್ಯೋಗಿಗಳಿಗೆ ಸಿಎಂ ಸಿದ್ದರಾಮಯ್ಯ ಔತಣಕೂಟ ಏರ್ಪಡಿಸಿದ್ದು, ಸಚಿವ ಸಂಪುಟ ಪುನಾರಚನೆಗು ಮುನ್ನ ಸಿಎಂ ಸಿದ್ದರಾಮಯ್ಯ ಔತಣಕೂಟ ಏರ್ಪಡಿಸಿದ್ದಾರೆ. ಬಿಹಾರ ಎಲೆಕ್ಷನ್ ಫಲಿತಾಂಶದ ಬಳಿಕ ಸಂಪುಟ ಪುನಾರಚನೆ ಬಹುತೇಕ ಪಕ್ಕಾ ಎಂದು ಹೇಳಲಾಗುತ್ತಿದೆ. ಬೇರೆ ಬೇರೆ ರಾಜ್ಯಗಳ ಚುನಾವಣೆ ಹಿನ್ನೆಲೆಯಲ್ಲೂ ಕೂಡ ಈ ಒಂದು ಔತಣಕೂಟ ಭಾರಿ ಮಹತ್ವ ಪಡೆದುಕೊಂಡಿದೆ. ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯ ಕಾಂಗ್ರೆಸ್ ನಾಯಕರು ಹಾಗೂ ಸಚಿವರು ಹೇಗೆ ತೊಡಗಿಸಿಕೊಳ್ಳಬೇಕು ಎಂಬ…

Read More

ಬೆಂಗಳೂರು: ರಾಜ್ಯದಲ್ಲಿ ಸಾಮಾಜಿಕ ಶೈಕ್ಷಣಿಕ ಗಣತಿ ಮುಂದುವರೆದಿದ್ದು, ಈವರೆಗೆ 131,65,809 ಮನೆಗಳ 4,87,21,722 ಜನರ ಮಾಹಿತಿ ದಾಖಲಾಗಿದೆ. ಒಟ್ಟಾರೆ ಶೇ.88.88 ರಷ್ಟು ಗಣತಿ ಪೂರ್ಣಗೊಂಡಿದೆ. ಒಟ್ಟಾರೆ 1,47,88,831 ಮನೆಗಳ ಸಮೀಕ್ಷೆ ಗುರಿ ಹೊಂದಿದ್ದು, ಬಹುತೇಕ ಜಿಲ್ಲೆಗಳಲ್ಲಿ ಶೇ.95ಕ್ಕಿಂತ ಹೆಚ್ಚು ಸಮೀಕ್ಷೆ ಪೂರ್ಣಗೊಂಡಿದೆ. ಭಾನುವಾರ 1,85,232 ಮನೆಗಳ ಸಮೀಕ್ಷೆ ಮಾಡಲಾಗಿದೆ. ಇದುವರೆಗೂ ಬೆಂಗಳೂರು ನಗರದಲ್ಲಿ 11.95 ಲಕ್ಷ ಮನೆಗಳ ಸಮೀಕ್ಷೆ ಪೂರ್ಣಗೊಂಡಿದೆ. ಇಂದು ಒಂದು ದಿನ 1,35,2732 ಮನೆಗಳ ಸಮೀಕ್ಷೆ ಪೂರ್ಣಗೊಂಡಿದೆ. ಕಳೆದ 9 ದಿನಗಳಲ್ಲಿ ಒಟ್ಟು 11,95,717 ಮನೆಗಳ ಸಮೀಕ್ಷೆ ಕಾರ್ಯ ಪೂರ್ಣಗೊಂಡಿದೆ. ಕೇಂದ್ರ ನಗರ ಪಾಲಿಗೆ ವ್ಯಾಪ್ತಿಯಲ್ಲಿ ರೂ. 1,53,839 ಮಣಿಗಳ ಸಮೀಕ್ಷೆ ಪೂರ್ಣಗೊಂಡಿದೆ. ಪೂರ್ವ ನಗರಪಾಲಿಕೆ ವ್ಯಾಪ್ತಿಯಲ್ಲಿ 1,75,480 ಮನೆಗಳ ಸಮೀಕ್ಷೆ ಪೂರ್ಣಗೊಂಡಿದೆ. ಇನ್ನು ಉತ್ತರ ನಗರ ಪಾಲಿಕೆ ವ್ಯಾಪ್ತಿಯಲ್ಲಿ 2,92,239 ಮನೆಗಳ ಸಮೀಕ್ಷೆ ಪೂರ್ಣಗೊಂಡಿದೆ. ಅದೇ ರೀತಿಯಾಗಿ ದಕ್ಷಿಣ ನಗರ ಪಾಲಿಕೆ ವ್ಯಾಪ್ತಿಯಲ್ಲಿ 2,11, 38 ಮನೆಗಳ ಸಮೀಕ್ಷೆ ಪೂರ್ಣಗೊಂಡಿದೆ. ಹಾಗೂ ಪಶ್ಚಿಮ ನಗರ ಪಾಲಿಕೆ ವ್ಯಾಪ್ತಿಯಲ್ಲಿ…

Read More

ದಕ್ಷಿಣ ಅಮೆರಿಕದ ದಕ್ಷಿಣ ಕೆರೊಲಿನಾದಲ್ಲಿ ಜನದಟ್ಟಣೆಯ ಬಾರ್‌ನಲ್ಲಿ ನಡೆದ ಸಾಮೂಹಿಕ ಗುಂಡಿನ ದಾಳಿಯಲ್ಲಿ ನಾಲ್ವರು ಜನರು ಸಾವನ್ನಪ್ಪಿದ್ದಾರೆ ಮತ್ತು ಕನಿಷ್ಠ 20 ಜನರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಭಾನುವಾರ ಮುಂಜಾನೆ ಸೇಂಟ್ ಹೆಲೆನಾ ದ್ವೀಪದ ಜನಪ್ರಿಯ ಬಾರ್‌ನಲ್ಲಿ ನೂರಾರು ಜನರು ಜಮಾಯಿಸಿದ್ದರು, ಗುಂಡಿನ ಚಕಮಕಿ ನಡೆಯಿತು, ಬಾರ್‌ನಲ್ಲಿ ನಾಲ್ವರು ಜನರು ಸಾವನ್ನಪ್ಪಿದ್ದಾರೆ ಎಂದು ಘೋಷಿಸಲಾಯಿತು ಮತ್ತು ಕನಿಷ್ಠ 20 ಜನರು ಗಾಯಗೊಂಡಿದ್ದಾರೆ, ಇದರಲ್ಲಿ ನಾಲ್ವರನ್ನು ಗಂಭೀರ ಸ್ಥಿತಿಯಲ್ಲಿ ಸ್ಥಳೀಯ ಆಸ್ಪತ್ರೆಗಳಿಗೆ ಕಳುಹಿಸಲಾಗಿದೆ ಎಂದು ಶೆರಿಫ್ ಕಚೇರಿ ತಿಳಿಸಿದೆ. ಘಟನೆ ಇನ್ನೂ ತನಿಖೆಯಲ್ಲಿದೆ ಮತ್ತು ಸಂಭಾವ್ಯ ಶಂಕಿತರನ್ನು ಶೆರಿಫ್ ಕಚೇರಿ ಪರಿಶೀಲಿಸುತ್ತಿದೆ ಎಂದು ಅದು ಹೇಳಿದೆ. https://twitter.com/MarcLiverman/status/1977498645864780194

Read More

ವಿಜಯಪುರ : ರಾಜ್ಯದಲ್ಲಿ ಮತ್ತೊಂದು ಭೀಕರ ಮರ್ಡರ್ ನಡೆದಿದ್ದು, ಹಳೇ ದ್ವೇಷ ಹಿನ್ನೆಲೆ ಕಲ್ಲಿನಿಂದ ಜಜ್ಜಿ ಇಬ್ಬರು ಯುವಕರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ವಿಜಯಪುರ ತಾಲೂಕಿನ ಕನ್ನೂರು ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಸಾಗರ್ ಬೆಳುಂಡಗಿ (25), ಇಸಾಕ್ ಖುರೇಶಿ (24) ಕಲ್ಲಿನಿಂದ ಜಜ್ಜಿ ಕೊಲೆ ಮಾಡಿ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. 2 ವರ್ಷದ ಹಿಂದೆ ಗ್ರಾಮದ ಈರಣ್ಣಗೌಡ ಮೇಲೆ ಕೊಲೆಯಾದ ಸಾಗರ್ ಹಾಗೂ ಇಸಾಕ್ ಹಲ್ಲೆ ನಡೆಸಿದ್ದರು. ಕೆಲ ದಿನಗಳ ಹಿಂದೆ ಚಿಕಿತ್ಸೆ ಫಲಿಸದೇ ಈರಣ್ಣಗೌಡ ಮೃತಪಟ್ಟಿದ್ದ. ಇದೇ ದ್ವೇಷಕ್ಕೆ ಕೊಲೆಗೈದಿರುವ ಸಂಶಯ ವ್ಯಕ್ತವಾಗಿದ್ದು, ಸ್ಥಳಕ್ಕೆ ವಿಜಯಪುರ ಗ್ರಾಮೀಣ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ವಿಜಯಪುರ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ನವದೆಹಲಿ : ದೇಶಾದ್ಯಂತ ರೈಲ್ವೆ ಪ್ರದೇಶಗಳಲ್ಲಿ 2025 ರ ವರ್ಷಕ್ಕೆ ತಾಂತ್ರಿಕೇತರ ಜನಪ್ರಿಯ ವರ್ಗಗಳ ಪದವೀಧರ ಮತ್ತು ಪದವಿಪೂರ್ವ ಹುದ್ದೆಗಳ ನೇಮಕಾತಿಗಾಗಿ ರೈಲ್ವೆ ನೇಮಕಾತಿ ಮಂಡಳಿ (RRB) ಕೇಂದ್ರೀಕೃತ ಉದ್ಯೋಗ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಈ ಅಧಿಸೂಚನೆಯ ಅಡಿಯಲ್ಲಿ ಒಟ್ಟು 8,050 ಖಾಲಿ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ. ಇದರಲ್ಲಿ 5,000 ಪದವೀಧರ ಹುದ್ದೆಗಳು ಮತ್ತು 3,050 ಪದವಿಪೂರ್ವ ಹುದ್ದೆಗಳು ಸೇರಿವೆ. ಈ ಪದವೀಧರ ಹುದ್ದೆಗಳಿಗೆ ಆನ್ಲೈನ್ ಅರ್ಜಿಗಳು ಅಕ್ಟೋಬರ್ 21 ರಿಂದ ಪ್ರಾರಂಭವಾಗುತ್ತವೆ. ಪದವಿಪೂರ್ವ ಹುದ್ದೆಗಳಿಗೆ ಅರ್ಜಿಗಳು ಅಕ್ಟೋಬರ್ 28, 2025 ರಿಂದ ಪ್ರಾರಂಭವಾಗುತ್ತವೆ. ಇತರ ವಿವರಗಳನ್ನು ಕೆಳಗೆ ಪರಿಶೀಲಿಸಬಹುದು. ಆರ್ಆರ್ಬಿ ಅಹಮದಾಬಾದ್, ಅಜ್ಮೀರ್, ಬೆಂಗಳೂರು, ಭೋಪಾಲ್, ಭುವನೇಶ್ವರ, ಬಿಲಾಸ್ಪುರ್, ಚಂಡೀಗಢ, ಚೆನ್ನೈ, ಗುವಾಹಟಿ, ಗೋರಖ್ಪುರ, ಜಮ್ಮು – ಶ್ರೀನಗರ, ಕೋಲ್ಕತ್ತಾ, ಮಾಲ್ಡಾ, ಮುಂಬೈ, ಮುಜಫರ್ಪುರ್, ಪಾಟ್ನಾ, ಪ್ರಯಾಗ್ರಾಜ್, ರಾಂಚಿ, ಸಿಕಂದರಾಬಾದ್, ಸಿಲಿಗುರಿ, ತಿರುವನಂತಪುರಂ ಪ್ರದೇಶಗಳಿಂದ ಈ ಹುದ್ದೆಗಳನ್ನು ಭರ್ತಿ ಮಾಡುತ್ತದೆ. RRB NTPC ನೇಮಕಾತಿ ಅಡಿಯಲ್ಲಿ ಭರ್ತಿ ಮಾಡಲಾಗುವ ಹುದ್ದೆಗಳು…

Read More

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಮಾಧ್ಯಮ ಪಟ್ಟಿಯಲ್ಲಿರುವ ಮಾಧ್ಯಮ ಸಂಸ್ಥೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ತಾಲ್ಲೂಕು ಮಟ್ಟದ ಪತ್ರಕರ್ತರು ತಮ್ಮ ವೃತ್ತಿ ನಿರತ ಚಟುವಟಿಕೆಗಳ ಸಂಬಂಧ ತಮ್ಮ ಜಿಲ್ಲಾದ್ಯಂತ ಉಚಿತವಾಗಿ ಸಂಚರಿಸಲು ಅನುಕೂಲವಾಗುವಂತೆ ಉಚಿತ ಬಸ್ ಪಾಸ್ ನೀಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಪತ್ರಕರ್ತರು ತಾವು ಕಾರ್ಯನಿರ್ವಹಿಸುತ್ತಿರುವ ಮಾಧ್ಯಮ ಸಂಸ್ಥೆಗಳಿಂದ ಸೇವಾ ಪ್ರಮಾಣಪತ್ರ, ಶಿಫಾರಸ್ಸು ಪತ್ರ ಮತ್ತು 11 ತಿಂಗಳುಗಳ ವೇತನಪತ್ರ (ಲೈನೇಜ್/ಸಂಭಾವನೆ/ಕಮೀಷನ್ ಪಡೆದಿರುವ ದಾಖಲೆ)ಗಳನ್ನು ಅಥವಾ ವೇತನ ಜಮಾ‌ ಆಗಿರುವ ಮಾಹಿತಿ ಇರುವಂತಹ ಬ್ಯಾಂಕ್ ಸ್ಟೇಟಮೆಂಟ್ ಲಗತ್ತಿಸಿ “ಸೇವಾಸಿಂಧು” ಪೋರ್ಟಲ್ (https://sevasindhu.karnataka.gov.in) ಮೂಲಕ ಆನ್ ಲೈನ್ ನಲ್ಲಿ ಅರ್ಜಿಗಳನ್ನು ಸಲ್ಲಿಸಬಹುದು. ಆನ್ ಲೈನ್ ನಲ್ಲಿ ಸಲ್ಲಿಸಲಾದ ಅರ್ಜಿ ಮತ್ತು ಲಗತ್ತಿಸಲಾಗಿರುವ ದಾಖಲೆಗಳ ಒಂದು ಪ್ರತಿಯನ್ನು ಜಿಲ್ಲಾ ವಾರ್ತಾಧಿಕಾರಿಗಳ ಕಚೇರಿಗೆ ಸಲ್ಲಿಸಬೇಕು. ಸ್ವೀಕೃತ ಅರ್ಜಿಗಳನ್ನು ಆಯ್ಕೆ ಸಮಿತಿಯ ಸಭೆಯಲ್ಲಿ ಪರಿಶೀಲಿಸಿ ಬಸ್ ಪಾಸ್ ಮಂಜೂರು ಮಾಡಲಾಗುತ್ತದೆ. ರಾಜ್ಯದ ಎಲ್ಲ ತಾಲ್ಲೂಕುಗಳ ಅರ್ಹ ಪತ್ರಕರ್ತರು ಕೂಡಲೇ “ಸೇವಾಸಿಂಧು” ಪೋರ್ಟಲ್ ಮೂಲಕ ಅರ್ಜಿಗಳನ್ನು ಸಲ್ಲಿಸುವುದರ ಮೂಲಕ…

Read More

ಬೆಂಗಳೂರು : ಕರ್ನಾಟಕದ 10 ಮಂದಿ ಹಿರಿಯ ಸಾಹಿತಿಗಳಿಗೆ 2024 ರ ಸಾಹಿತ್ಯಶ್ರೀ ಪ್ರಶ್ತಿಯನ್ನು ಘೋಷಣೆ ಮಾಡಲಾಗಿದೆ. ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ನೀಡಿರುವ ಅಮೂಲ್ಯವಾದ ಸೇವೆಯನ್ನು ಪರಿಗಣಿಸಿ 50 ರಿಂದ 60ರ ವಯೋಮಾನದ ಈ ಕೆಳಕಂಡ 10 ಮಂದಿ ಸಾಹಿತಿಗಳಿಗೆ ಕರ್ನಾಟಕ ಸಾಹಿತ್ಯ ಅಕಾಡೆಮಿಯ 2024ನೆಯ ವರ್ಷದ ಸಾಹಿತ್ಯಶ್ರೀ ಪ್ರಶಸ್ತಿಯನ್ನು ನೀಡಲು ಅಕಾಡೆಮಿ ಅಧ್ಯಕ್ಷರಾದ ಎಲ್. ಎನ್. ಮುಕುಂದರಾಜ್ ಅವರ ಅಧ್ಯಕ್ಷತೆಯಲ್ಲಿ ದಿನಾಂಕ: 09-10-2025 ರಂದು ನಡೆದ ಸರ್ವಸದಸ್ಯರ ಸಭೆಯಲ್ಲಿ ಸರ್ವಾನುಮತದಿಂದ ತೀರ್ಮಾನಿಸಿತು. ಈ ಪ್ರಶಸ್ತಿಯು ಇಪ್ಪತ್ತೈದು ಸಾವಿರ ರೂಪಾಯಿಗಳ ನಗದು, ಪ್ರಶಸ್ತಿಫಲಕ, ಶಾಲು, ಹಾರ ಹಾಗೂ ಪ್ರಮಾಣ ಪತ್ರಗಳನ್ನು ಒಳಗೊಂಡಿದೆ. 1. ಡಾ. ಬಿ.ಎಂ ಪುಟ್ಟಯ್ಯ – ಚಿಕ್ಕಮಗಳೂರು 2. ಡಾ. ಕೆ.ವೈ ನಾರಾಯಣಸ್ವಾಮಿ ಬೆಂಗಳೂರು 3. ಶ್ರೀ ಪದ್ಮಾಲಯ ನಾಗರಾಜ್ ಕೋಲಾರ 4. ಡಾ. ಬಿ.ಯು ಸುಮಾ ತುಮಕೂರು 5. ಡಾ. ಮಮತಾ ಸಾಗರ ಶಿವಮೊಗ್ಗ 6. ಡಾ. ಸಬಿತಾ ಬನ್ನಾಡಿ ಉಡುಪಿ 7. ಶ್ರೀ ಅಬ್ದುಲ್ ಹೈ…

Read More

ಬೆಂಗಳೂರು : ಬೆಂಗಳೂರಿನ ನಮ್ಮ ಮೆಟ್ರೋ ಹಳದಿ ಮಾರ್ಗದ ಮೆಟ್ರೋದಲ್ಲಿ ತಾಂತ್ರಿಕ ಸಮಸ್ಯೆ ಎದುರಾಗಿದ್ದು, ಪ್ರಯಾಣಿಕರು ಸಹಕರಿಸುವಂತೆ ಕೋರಲಾಗಿದೆ. ಇಂದು ರೈಲಿನಲ್ಲಿ ತಾಂತ್ರಿಕ ದೋಷ ಉಂಟಾಗಿರುವ ಕಾರಣದಿಂದ 10:15 ಗಂಟೆಯಿಂದ ಹಳದಿ ಮಾರ್ಗದ ರೈಲುಗಳು 25 ನಿಮಿಷಗಳ ಅಂತರದಲ್ಲಿ ಸಂಚರಿಸುತ್ತಿವೆ. ಪ್ರಯಾಣಿಕರು ಈ ಕುರಿತು ಗಮನಿಸಿ ಇದರಿಂದ ಆದ ಅನಾನುಕೂಲತೆಗೆ ಸಹಕರಿಸಬೇಕು ಎಂದು ವಿನಂತಿಸಲಾಗಿದೆ. https://twitter.com/OfficialBMRCL/status/1977252682722427088?ref_src=twsrc%5Etfw%7Ctwcamp%5Etweetembed%7Ctwterm%5E1977252682722427088%7Ctwgr%5Ecb98ceffa00b1814a968ab14067101c3062f6056%7Ctwcon%5Es1_c10&ref_url=https%3A%2F%2Fpublictv.in%2Ftechnical-problem-on-the-yellow-line-metro-travelling-public-are-requested-to-note-and-co-operate-please-bmrcl%2F

Read More

ಬೆಂಗಳೂರು : ಬಿಜೆಪಿ ಶಾಸಕ ಮುನಿರತ್ನ ಮೇಲೆ ಹಲ್ಲೆಗೆ ಪ್ರಯತ್ನ ನಡೆದಿದ್ದು, ರಾಜ್ಯದಲ್ಲಿ ಕಾಂಗ್ರೆಸ್ ಗೂಂಡಾಗಿರಿ ಶುರುವಾಗಿದೆ ಎಂದು ವಿಪಕ್ಷ ನಾಯಕ ಆರ್. ಅಶೋಕ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಕಾಂಗ್ರೆಸ್ ನ ಗೂಂಡಾಗಿರಿ ಶುರುವಾಗಿದೆ. ಮುನಿರತ್ನ ಪ್ರತಿಭಟನೆಗೆ ನಮ್ಮ ಬೆಂಬಲ ಇದೆ. ಶಾಸಕರ ಮೇಲೆ ಹಲ್ಲೆ ಮಾಡುವ ಪ್ರಯತ್ನ, ಸಂಸದರನ್ನು ಕಾರ್ಯಕ್ರಮಕ್ಕೆ ಕರೆಯದಿರುವುದು ತಪ್ಪು, ಇದು ನಿಜಕ್ಕೂ ಗೂಂಡಾಗಿರಿ ಎಂದು ವಾಗ್ದಾಳಿ ನಡೆಸಿದ್ದಾರೆ. ಸರ್ಕಾರದ ಕಾರ್ಯಕ್ರಮ ಎಂದು ಹೇಳಿ ಆ ಭಾಗದ ಶಾಸಕರು, ಸಂಸದರಿಗೆ ಆಹ್ವಾನಿಸಿಲ್ಲ. ಇದನ್ನು ಪ್ರಶ್ನೆ ಮಾಡಿದ್ದಕ್ಕೆ ಮುನಿರತ್ನ ಮೇಲೆ ಹಲ್ಲೆಗೆ ಯತ್ನಿಸಿದ್ದಾರೆ. ಓರ್ವ ಶಾಸಕರ ಮೇಲೆ ಹಲ್ಲೆಗೆ ಯತ್ನ ನಡೆಸಿದ್ದು ಎಷ್ಟು ಸರಿ? ಇದನ್ನು ಸಹಿಸಲು ಸಾಧ್ಯವಿಲ್ಲ. ಕಾಂಗ್ರೆಸ್ ಸರ್ಕಾರ ಗೂಂಡಾಗಿರಿ ಮಾಡುತ್ತಿದೆ, ರಸ್ತೆಗಳಲ್ಲಿ ಎಲ್ಲೆಂದರಲ್ಲಿ ಕಸದ ರಾಶಿ ಸುರಿಯುತ್ತಿದ್ದಾರೆ. ರಸ್ತೆಗಳಲ್ಲಿ ಗುಂಡಿ ಬಿದ್ದು ಜನರು ಸಾಯುತ್ತಿದ್ದಾರೆ. ಇದ್ಯಾವುದನ್ನೂ ಸರಿಪಡಿಸದೇ ನಡಿಗೆ ಕಾರ್ಯಕ್ರಮ ಮಾಡುತ್ತಿದ್ದಾರೆ. ಯಾವ ಪುರುಷಾರ್ಥಕ್ಕೆ ಇವರು ನಡಿಗೆ ಮಾಡುತ್ತಿದ್ದಾರೆ? ಇದು ನಡುಗೆ…

Read More

ಬೆಂಗಳೂರು : ಬೆಂಗಳೂರಿನಲ್ಲಿ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಕಾರ್ಯಕ್ಕೆ ತೆರಳಿದ್ದ ಶಿಕ್ಷಕಿಯೊಬ್ಬರಿಗೆ ಹೃದಯಾಘಾತ ಸಂಭವಿಸಿರುವ ಘಟನೆ ನಡೆದಿದೆ. ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ಬೊಮ್ಮಸಂದ್ರದಲ್ಲಿ ಯಶೋಧಾ ಎಂಬ ಶಿಕ್ಷಕಿ ಹೃದಯಾಘಾತಕ್ಕೆ ಒಳಗಾಗಿದ್ದಾರೆ. ಯಶೋಧಾ ಅವರು ಬೊಮ್ಮಸಂದ್ರ ಸರ್ಕಾರಿ ಶಾಲೆಯಲ್ಲಿ ದೈಹಿಕ ಶಿಕ್ಷಕಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಬೊಮ್ಮಸಂದ್ರದಲ್ಲಿ ಸಮೀಕ್ಷೆ ಕಾರ್ಯದಲ್ಲಿದ್ದಾಗಲೇ ಕುಸಿದು ಬಿದ್ದಿದ್ದಾರೆ. ಕೂಡಲೇ ಸ್ಥಳೀಯರು ಅವರನ್ನು ನಾರಾಯಣ ಹೆಲ್ತ್ ಸಿಟಿ ಆಸ್ಪತ್ರೆಗೆ ದಾಖಲಿಸಿದ್ದಾರೆ.ಅಲ್ಲಿ ವೈದ್ಯರು ಆಪರೇಷನ್ ಮಾಡಿ ಸ್ಟೆಂಟ್ ಅಳವಡಿಸಿದ್ದಾರೆ.

Read More