Author: kannadanewsnow57

ಬೆಂಗಳೂರು : ಕಳೆದ ಹತ್ತು ವರ್ಷದಲ್ಲಿ 480 ಕ್ಕೂ ಹೆಚ್ಚು ವಿಪಕ್ಷ ಶಾಸಕರ ಮೇಲೆ ಐಟಿ- ಇಡಿ ಮೂಲಕ ದಾಳಿ ನಡೆಸಿ, ಬೆದರಿಸಿ ಅಪರೇಷನ್ ಮೂಲಕ ಬಿಜೆಪಿಗೆ ಸೇರ್ಪಡೆಗೊಳಿಸಿದ್ದಾರೆ ಎಂದು ಸಚಿವ ಪ್ರಿಯಾಂಕ್‌ ಖರ್ಗೆ ಆರೋಪಿಸಿದ್ದಾರೆ. ರಾಜ್ಯದಲ್ಲಿ ಬಿಜೆಪಿ ಸಮರ್ಥವಾಗಿ ವಿರೋಧಪಕ್ಷವನ್ನು ಮುನ್ನಡೆಸಲು ಸಾಧ್ಯವಾಗದೆ ಇದ್ದಾಗ ಕೇಂದ್ರ ಬಿಜೆಪಿ ಸರ್ಕಾರ ಐಟಿ-ಇಡಿ ಮೂಲಕ ಸಹಾಯಕ್ಕೆ ಬರುತ್ತದೆ. ಕಳೆದ ಹತ್ತು ವರ್ಷದಲ್ಲಿ 480 ಕ್ಕೂ ಹೆಚ್ಚು ವಿಪಕ್ಷ ಶಾಸಕರ ಮೇಲೆ ಐಟಿ- ಇಡಿ ಮೂಲಕ ದಾಳಿ ನಡೆಸಿ, ಬೆದರಿಸಿ ಅಪರೇಷನ್ ಮೂಲಕ ಬಿಜೆಪಿಗೆ ಸೇರ್ಪಡೆಗೊಳಿಸಿದ್ದಾರೆ. ಇದು ಪ್ರಜಾಪ್ರಭುತ್ವದ ಕಗ್ಗೊಲೆ ಅಲ್ಲದೆ ಮತ್ತೇನು. ಸಾಲು-ಸಾಲು ಹಗರಣಗಳನ್ನು ಹೊಂದಿರುವ ಬಿಜೆಪಿ ಶಾಸಕರು, ನಾಯಕರ ಮೇಲೆ ಐಟಿ -ಇಡಿ ದಾಳಿ ನಡೆದಿಲ್ಲ, ಇದಕ್ಕೆ ಕಾರಣವೇನು? ಎಂದು ಪ್ರಶ್ನಿಸಿದ್ದಾರೆ. ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪನವರ ಮೇಲೆ ದಾಳಿ ಇಲ್ಲ, ಬಳ್ಳಾರಿ ರೆಡ್ಡಿ ಬ್ರದರ್ ಮೇಲೆ ಇದ್ದ ಕೇಸ್’ಗಳು ಬಿಜೆಪಿ ಸೇರಿದ ಕೊಡಲೇ ಎಲ್ಲವು ಖುಲಾಸೆ ಆಗಿದೆ. ಹೀಗೆ ಕೇಂದ್ರ ಸಚಿವರುಗಳು,…

Read More

ಬಳ್ಳಾರಿ : ಈಡಿಸ್ ಸೊಳ್ಳೆ ಉತ್ಪತ್ತಿಯಾಗುವ ಮನೆ ಒಳಗಿನ ಫ್ರಿಜ್, ಎರ್‍ಕೂಲರ್, ಅಲಂಕೃತ ಗಿಡಗಳ ಕುಂಡಗಳನ್ನು ವಾರಕ್ಕೊಮ್ಮೆ ಸ್ವಚ್ಛಗೊಳಿಸಿ ಡೆಂಗ್ಯು ಹರಡದಂತೆ ಎಚ್ಚರವಹಿಸಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಯಲ್ಲಾ ರಮೇಶ್ ಬಾಬು ಅವರು ತಿಳಿಸಿದ್ದಾರೆ. ಈಡಿಸ್ ಸೊಳ್ಳೆಗಳ ಕಚ್ಚುವಿಕೆಯಿಂದ ಹರಡುವ ಡೆಂಗ್ಯು ರೋಗಕ್ಕೆ ನಿರ್ದಿಷ್ಟ ಚಿಕಿತ್ಸೆ ಇಲ್ಲವಾದರೂ ಸಹ ಲಕ್ಷಣಗಳಾಧರಿಸಿ ಎಲ್ಲ ಆರೋಗ್ಯ ಕೇಂದ್ರಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇದರ ಹೊರತಾಗಿ ಸಾರ್ವಜನಿಕರು ಮನೆಯ ಒಳಗೆ ಸೊಳ್ಳೆ ಉತ್ಪತ್ತಿಯಾಗುವಂತಹ ಫ್ರಿಜ್‍ನ ಹಿಂಭಾಗ, ಅಲಂಕೃತವಾಗಿ ಬಳಸುವ ಮನಿಪ್ಲಾಂಟ್ ಕುಂಡಗಳು (ಬಾಟಲ್), ಸ್ನಾನಗೃಹದಲ್ಲಿ ಮುಚ್ಚಳ ಮುಚ್ಚಲು ಸಾಧ್ಯವಿಲ್ಲದ ಸಿಮೆಂಟ್ ತೊಟ್ಟಿಗಳಲ್ಲಿ ವಾರಕ್ಕೊಮ್ಮೆ ನೀರು ಖಾಲಿ ಮಾಡಬೇಕು ಎಂದು ಹೇಳಿದ್ದಾರೆ. ಶಿಕ್ಷಕರು ಶಾಲೆ, ಅಂಗನವಾಡಿಗಳಲ್ಲಿ ಪ್ರಾರ್ಥನೆ ವೇಳೆ ಮಕ್ಕಳಿಗೆ ತಮ್ಮ ಮನೆಯಲ್ಲಿ ನೀರು ಸಂಗ್ರಹಾರಕಗಳನ್ನು ವಾರಕ್ಕೊಮ್ಮೆ ಸ್ವಚ್ಚಗೊಳಿಸಿ ನೀರು ತುಂಬಿದ ನಂತರ ಮುಚ್ಚಳ ಮುಚ್ಚುವಂತೆ ಪಾಲಕರ ಮನವೊಲಿಸಲು ತಿಳಿಸಬೇಕು. ಲಾರ್ವಾ ಪತ್ತೆ ಹಚ್ಚಿ ಮಾಹಿತಿ ತಿಳಿಸಿದ ವಿದ್ಯಾರ್ಥಿಗಳಿಗೆ ಎಲ್ಲರ ಸಮ್ಮುಖದಲ್ಲಿ ಪ್ರಶಂಸಿಸಬೇಕು ಎಂದು…

Read More

ಬೆಂಗಳೂರು : ರಾಜ್ಯ ಸರ್ಕಾರವು ಮಹಿಳೆಯರಿಗೆ ಮತ್ತೊಂದು ಸಿಹಿಸುದ್ದಿ ನೀಡಿದ್ದು, ಹೈನುಗಾರಿಕೆಯನ್ನು ಪ್ರೋತ್ಸಾಹಿಸಲು ಹಸು/ಎಮ್ಮೆ ಖರೀದಿಗೆ ಪಡೆಯುವ ಸಾಲವನ್ನು ಸಕಾಲದಲ್ಲಿ ಮರುಪಾವತಿ ಮಾಡುವ ಮಹಿಳೆಯರಿಗೆ ರಾಜ್ಯ ಸರ್ಕಾರದಿಂದ ಶೇ.6 ರ ಬಡ್ಡಿ ಸಹಾಯಧನ ನೀಡಲಾಗುತ್ತದೆ. ಪ್ರಸಕ್ತ(2024-25) ಸಾಲಿನಲ್ಲಿ ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯಿಂದ ರೈತ ಮಹಿಳೆಯರಲ್ಲಿ ಹೈನುಗಾರಿಕೆಯನ್ನು ಪ್ರೋತ್ಸಾಹಿಸಲು ಹಸು/ಎಮ್ಮೆ ಖರೀದಿಗೆ ಪಡೆಯುವ ಸಾಲವನ್ನು ಸಕಾಲದಲ್ಲಿ ಮರುಪಾವತಿ ಮಾಡುವ ಮಹಿಳೆಯರಿಗೆ ರಾಜ್ಯ ಸರ್ಕಾರದಿಂದ ಶೇ.6 ರ ಬಡ್ಡಿ ಸಹಾಯಧನ ನೀಡಲಾಗುತ್ತದೆ. ಪ್ರಸಕ್ತ ಸಾಲಿನಲ್ಲಿ ಹೈನುಗಾರಿಕೆಗಾಗಿ ವಿವಿಧ ಬ್ಯಾಂಕ್‍ಗಳಲ್ಲಿ ಸಾಲ ಪಡೆಯುವ ಪ್ರತಿ ಫಲಾನುಭವಿಗಳಿಗೆ ಗರಿಷ್ಠ 65 ಸಾವಿರ ರೂ ಸಾಲದ ಮೊತ್ತಕ್ಕೆ ಶೇ.6 ಬಡ್ಡಿ ಸಹಾಯಧನ (3625 ರೂ.) ನೀಡಲಾಗುತ್ತದೆ. ಪ್ರತಿ ಹಸು/ಎಮ್ಮೆ ಘಟಕದ ಮೊತ್ತ ರೂ:65000, ಶೇ.6 ವಾರ್ಷಿಕ ಬಡ್ಡಿ ಸಹಾಯಧನದ ಪ್ರತಿ ಫಲಾನುಭವಿಗೆ ಗರಿಷ್ಟ ರೂ.3624.50/-(3625), ಆಸಕ್ತ ಫಲಾನುಭವಿಗಳು ಯೋಜನೆಯ ಪ್ರಯೋಜನ ಪಡೆದುಕೊಳ್ಳುವಂತೆ ಹಾಗೂ ಹೆಚ್ಚಿನ ಮಾಹಿತಿಗೆ ಹತ್ತಿರದ ಪಶುವೈದ್ಯಕೀಯ ಸಂಸ್ಥೆಗಳನ್ನು ಅಥವಾ ಸಂಬಂಧಪಟ್ಟ ಪಶು ಆಸ್ಪತ್ರೆಗಳನ್ನು…

Read More

ಬೆಂಗಳೂರು : 2024-25ನೇ ಸಾಲಿಗೆ ಸಮಾಜ ಕಲ್ಯಾಣ ಇaಲಾಖೆಯ ಪರೀಕ್ಷಾ ಪೂರ್ವ ತರಬೇತಿ ಕೇಂದ್ರದ ಮೂಲಕ ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡಗಳ ಅಭ್ಯರ್ಥಿಗಳಿಗೆ ಊಟ-ವಸತಿಯೊಂದಿಗೆ, ಯು.ಪಿ.ಎಸ್.ಸಿ ಸಂಯೋಜಿತ ಪದವಿ (Integrated Under Graduate Degree) ತರಬೇತಿ ನೀಡುವ ಬಗ್ಗೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. 2024-25ನೇ ಸಾಲಿಗೆ ಸಮಾಜ ಕಲ್ಯಾಣ ಇಲಾಖೆಯ ಪರೀಕ್ಷಾ ಪೂರ್ವ ತರಬೇತಿ ಕೇಂದ್ರದ ಮೂಲಕ ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡಗಳ ಅಭ್ಯರ್ಥಿಗಳಿಗೆ ಊಟ-ವಸತಿಯೊಂದಿಗೆ, ಯು.ಪಿ.ಎಸ್.ಸಿ ಸಂಯೋಜಿತ ಪದವಿ (Integrated Under Graduate Degree) ತರಬೇತಿ ನೀಡಲು ಉದ್ದೇಶಿಸಲಾಗಿದೆ. ಯು.ಪಿ.ಎಸ್.ಸಿ ಸಂಯೋಜಿತ ಪದವಿ (Integrated Under Graduate Degree) ತರಬೇತಿಯ ಅವಧಿ, ಶೈಕ್ಷಣಿಕ ವಿದ್ಯಾರ್ಹತೆ, ಅರ್ಜಿಸಲ್ಲಿಸಬೇಕಾದ ವೆಬ್ ಸೈಟ್ ವಿಳಾಸ ಮತ್ತು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕದ ವಿವರಗಳು ಈ ಕೆಳಕಂಡಂತಿದೆ.

Read More

ಬೆಂಗಳೂರು: ಯಾವುದೇ ರೀತಿಯ ಒಮ್ಮತದ ಸಂಬಂಧವು ತನ್ನ ಸಂಗಾತಿಯ ಮೇಲೆ ಹಲ್ಲೆ ನಡೆಸಲು ವ್ಯಕ್ತಿಗೆ ಪರವಾನಗಿ ನೀಡುವುದಿಲ್ಲ ಎಂದು ಕರ್ನಾಟಕ ಹೈಕೋರ್ಟ್ ತೀರ್ಪು ನೀಡಿದೆ. ಆದಾಗ್ಯೂ, ಅತ್ಯಾಚಾರ ಮತ್ತು ವಂಚನೆಗೆ (ಮದುವೆಯ ಭರವಸೆಯ ಮೇಲೆ) ಸಂಬಂಧಿಸಿದಂತೆ ನ್ಯಾಯಾಲಯವು ಆರೋಪವನ್ನು ರದ್ದುಗೊಳಿಸಿತು. ಅರ್ಜಿದಾರರು ಮತ್ತು ದೂರುದಾರರು ಇಬ್ಬರೂ ಸಾಫ್ಟ್ವೇರ್ ವೃತ್ತಿಪರರಾಗಿದ್ದು, ಬೆಂಗಳೂರಿನ ನಿವಾಸಿಗಳಾಗಿದ್ದು, ಸಾಫ್ಟ್ವೇರ್ ಕಂಪನಿಯಲ್ಲಿ ಸಹೋದ್ಯೋಗಿಗಳಾಗಿದ್ದರು. ಅವರು ಐದು ವರ್ಷಗಳಿಂದ ಸಂಬಂಧದಲ್ಲಿದ್ದರು. ಜುಲೈ 2022 ರಲ್ಲಿ, ಅರ್ಜಿದಾರರು ಮದುವೆಯ ಭರವಸೆಯ ಅಡಿಯಲ್ಲಿ ತನ್ನೊಂದಿಗೆ ದೈಹಿಕ ಸಂಬಂಧ ಹೊಂದಿದ್ದಾರೆ ಮತ್ತು ಈ ಭರವಸೆಯನ್ನು ಉಲ್ಲಂಘಿಸಿದ್ದಾರೆ ಎಂದು ಆರೋಪಿಸಿ ಮಹಿಳೆ ಪೊಲೀಸ್ ದೂರು ದಾಖಲಿಸಿದ್ದಾರೆ. ಅನ್ನಪೂರ್ಣೇಶ್ವರಿ ನಗರ ಪೊಲೀಸರು ಐಪಿಸಿ ಸೆಕ್ಷನ್ 376 (ಅತ್ಯಾಚಾರ), 417 (ವಂಚನೆಗೆ ಶಿಕ್ಷೆ), 504 (ಶಾಂತಿ ಉಲ್ಲಂಘನೆಯನ್ನು ಪ್ರಚೋದಿಸುವ ಉದ್ದೇಶದಿಂದ ಉದ್ದೇಶಪೂರ್ವಕ ಅವಮಾನ) ಮತ್ತು 506 (ಕ್ರಿಮಿನಲ್ ಬೆದರಿಕೆ) ಅಡಿಯಲ್ಲಿ ಎಫ್ಐಆರ್ ದಾಖಲಿಸಿದ್ದಾರೆ. ಮದುವೆಯ ಭರವಸೆಯ ಮೇಲೆ ಲೈಂಗಿಕ ಕ್ರಿಯೆಯಲ್ಲಿ ತೊಡಗಿದ್ದಾನೆ ಎಂದು ಆರೋಪಿಸಿ ದೂರುದಾರರು ಫೆಬ್ರವರಿ 2020…

Read More

ಬೆಂಗಳೂರು : 2024-25 ನೇ ಸಾಲಿನ ಆಯವ್ಯಯ ಕಂಡಿಕೆ-163 ರಲ್ಲಿ ವಸತಿ ಶಾಲೆಗಳು ಇಲ್ಲದಿರುವ ಹೋಬಳಿಗಳ ಪೈಕಿ, 20 ಹೋಬಳಿಗಳಲ್ಲಿ ಹೊಸ ವಸತಿ ಶಾಲೆಗಳನ್ನು ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಮೂಲಕ ಪ್ರಾರಂಭಿಸುವ ಕುರಿತು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. 2024-25ನೇ ಸಾಲಿನ ಆಯವ್ಯಯದ ಕಂಡಿಕೆ-163 ರಲ್ಲಿ ವಸತಿ ಶಾಲೆಗಳು ಇಲ್ಲದಿರುವ ಹೋಬಳಿಗಳ ಪೈಕಿ 20 ಹೋಬಳಿಗಳಲ್ಲಿ ಹೊಸ ವಸತಿ ಶಾಲೆಗಳನ್ನು ಕ್ರೈಸ್ ಸಂಸ್ಥೆಯ ಮೂಲಕ ಪ್ರಾರಂಭಿಸಲಾಗುವುದೆಂದು ಘೋಷಿಸಲಾಗಿದೆ. ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದಡಿಯಲ್ಲಿ ರಾಜ್ಯದ 31 ಜಿಲ್ಲೆಗಳು, 231- ತಾಲ್ಲೂಕುಗಳಲ್ಲಿ 770 ಹೋಬಳಿಗಳ ಪೈಕಿ, ಪರಿಶಿಷ್ಟ ಜಾತಿ- 503, ಪರಿಶಿಷ್ಟ ವರ್ಗದ -144 ಹಾಗೂ ಹಿಂದುಳಿದ ವರ್ಗದ-174 ವಸತಿ ಶಾಲೆಗಳು ಒಟ್ಟಾರೆ 821 ವಸತಿ ಶಾಲೆ / ಕಾಲೇಜುಗಳು ಕಾರ್ಯನಿರ್ವಹಿಸುತ್ತಿವೆ. ಬೆಂಗಳೂರು ನಗರ ಮತ್ತು ಕಸಬಾ ಹೋಬಳಿಗಳನ್ನು ಹೊರತುಪಡಿಸಿ, ಒಟ್ಟು 114 ಹೋಬಳಿಗಳಲ್ಲಿ ವಸತಿ ಶಾಲೆಗಳು ಇರುವುದಿಲ್ಲ. 2024-25ನೇ ಸಾಲಿನ ಆಯವ್ಯಯದಲ್ಲಿ 20 ಹೋಬಳಿಗಳಲ್ಲಿ ಹೊಸ ಶಾಲೆಗಳನ್ನು…

Read More

ಬೆಂಗಳೂರು : 2024-25 ನೇ ಶೈಕ್ಷಣಿಕ ಸಾಲಿಗೆ NMMS ವಿದ್ಯಾರ್ಥಿ ವೇತನಕ್ಕಾಗಿ, ಅರ್ಹ ಫಲಾನುಭವಿಗಳು ಅರ್ಜಿ ಸಲ್ಲಿಸಲು ನ್ಯಾಷನಲ್ ಸ್ಕಾಲರ್ಶಿಪ್ ಪೋರ್ಟಲ್ (NSP) ತೆರೆಯಲಾಗಿದೆ. ಮೇಲಿನ ವಿಷಯಕ್ಕೆ ಸಂಬಂಧಿಸಿದಂತೆ, 2024-25ನೇ ಸಾಲಿನಲ್ಲಿ NMMS ವಿದ್ಯಾರ್ಥಿ ವೇತನಕ್ಕಾಗಿ National Scholarship Portal ನಲ್ಲಿ ಅರ್ಹ ಫಲಾನುಭವಿಗಳು ಅರ್ಜಿ ಸಲ್ಲಿಸಲು ಈ ಕೆಳಗಿನಂತೆ ವೇಳಾಪಟ್ಟಿ ನಿಗಧಿ ಪಡಿಸಿರುವುದಾಗಿ ಮೇಲಿನ ಉಲ್ಲೇಖಿತ ಪತ್ರದಲ್ಲಿ ತಿಳಿಸಿರುತ್ತಾರೆ. ಪ್ರಮುಖ ದಿನಾಂಕಗಳು ಪೋರ್ಟಲ್ ಆರಂಭ – 30-6-2024 ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು/ನವೀಕರಿಸಲು ಅಂತಿಮ ದಿನಾಂಕ- 31-8-2024 ಶಾಲಾ/ ಕಾಲೇಜು ಹಂತದಲ್ಲಿ INO ಗಳಿಂದ ಅರ್ಜಿ ಪರಿಶೀಲನೆಗೆ ಅಂತಿಮ ದಿನಾಂಕ- 15-9-2024 ಜಿಲ್ಲಾ ಹಂತದಲ್ಲಿ DNO ಗಳಿಂದ ಅರ್ಜಿ ಪರಿಶೀಲನೆಗೆ ಅಂತಿಮ ದಿನಾಂಕ- 30-9-2024 ಪ್ರಸಕ್ತ ಸಾಲಿನಲ್ಲಿ National Scholarship Portal ನಲ್ಲಿ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಸಲ್ಲಿಸಲು, ಅನುಸರಿಸಬೇಕಾದ ಪ್ರಮುಖ ಅಂಶಗಳು : 2024-25ನೇ ಸಾಲಿನಲ್ಲಿ Fresh ಹಾಗೂ Renewal ವಿದ್ಯಾರ್ಥಿಗಳು (NSP) ಯಲ್ಲಿ ಅರ್ಜಿಗಳನ್ನು ಸಲ್ಲಿಸಲು One Time…

Read More

ಬೆಂಗಳೂರು : ಉದ್ಯೋಗಾಕಾಂಕ್ಷಿಗಳಿಗೆ ರಾಜ್ಯ ಸರ್ಕಾರವು ಭರ್ಜರಿ ಸಿಹಿಸುದ್ದಿ ನೀಡಿದ್ದು, ಶೀಘ್ರವೇ ಕೆಪಿಎಸ್‌ಸಿ ಮೂಲಕ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದು ಸಭಾ ನಾಯಕ ಬೋಸರಾಜು ತಿಳಿಸಿದ್ದಾರೆ. ಈ ಕುರಿತು ವಿಧಾನಪರಿಷತ್‌ ನಲ್ಲಿ ಮಾಹಿತಿ ನೀಡಿರುವ ಅವರು, ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಹಂತ ಹಂತವಾಗಿ ಕೆಪಿಎಸ್‌ಸಿ ಮೂಲಕ ಭರ್ತಿ ಮಾಡಲಾಗುವುದು. ವಿವಿಧ ಇಲಾಖೆಯಲ್ಲಿ ಖಾಲಿ ಇರುವ 2243 ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಲಾಗಿದೆ. 1070 ಹುದ್ದೆ ಗಳಿಗೆ ಲಿಖಿತ ಪರೀಕ್ಷೆ ದಿನಾಂಕ ನಿಗದಿಮಾಡಲಾಗಿದೆ. 928 ಹುದ್ದೆಗಳಿಗೆ ಲಿಖಿತ ಪರೀಕ್ಷೆ ನಿಗದಿಗೊಳಿಸಬೇಕಾಗಿದೆ ಎಂದರು.

Read More

ಬೆಂಗಳೂರು : ಖಾಸಗಿ ವಲಯದಲ್ಲೂ ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ಕಲ್ಪಿಸುವ ಕುರಿತು ವಿಧೇಯಕದ ಬಗ್ಗೆ ಮುಂದಿನ ಸಂಪುಟ ಸಭೆಯಲ್ಲಿ ಪೂರ್ಣ ಚರ್ಚೆ ಮಾಡಿ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಈ ಕುರಿತು ಮಾಹಿತಿ ಹಂಚಿಕೊಂಡಿರುವ ಸಿಎಂ ಸಿದ್ದರಾಮಯ್ಯ, ಕನ್ನಡಿಗರಿಗೆ ಖಾಸಗಿ ಕಂಪನಿಗಳ ಉದ್ಯೋಗದಲ್ಲಿ ಮೀಸಲಾತಿ ಕಲ್ಪಿಸುವ ವಿಧೇಯಕದ ಬಗ್ಗೆ ಸಚಿವ ಸಂಪುಟದಲ್ಲಿ ಸಮಗ್ರವಾದ ಚರ್ಚೆ ಇನ್ನೂ ನಡೆದಿಲ್ಲ. ಮತ್ತೆ ಸಂಪುಟದ ಮುಂದಿಟ್ಟು ಕೂಲಂಕಷವಾಗಿ ಚರ್ಚಿಸಿ ನಿರ್ಣಯ ಕೈಗೊಳ್ಳಲಾಗುವುದು. ಈ ಹಿನ್ನೆಲೆಯಲ್ಲಿ ಕೊಂಚ ಗೊಂದಲ ಉಂಟಾಗಿತ್ತು, ಮುಂದಿನ ದಿನಗಳಲ್ಲಿ ಈ ಗೊಂದಲಗಳನ್ನು ನಿವಾರಣೆ ಮಾಡಲಾಗುವುದು ಎಂದು ಹೇಳಿದ್ದಾರೆ. ಕನ್ನಡಿಗರಿಗೆ ಖಾಸಗಿ ವಲಯದ ಸಂಸ್ಥೆಗಳು, ಕೈಗಾರಿಕೆಗಳು ಹಾಗೂ ಉದ್ದಿಮೆಗಳಲ್ಲಿ ಮೀಸಲಾತಿ ಕಲ್ಪಿಸುವ ಸಂಬಂಧ ಸಂಪುಟ ಅನುಮೋದನೆ ನೀಡಲಾಗಿದ್ದ ವಿಧೇಯಕವನ್ನು ತಾತ್ಕಾಲಿಕವಾಗಿ ತಡೆಹಿಡಿಯಲಾಗಿದೆ. ಮುಂದಿನ ದಿನಗಳಲ್ಲಿ ಈ ಬಗ್ಗೆ ಮತ್ತೊಮ್ಮೆ ಪರಾಮರ್ಶಿಸಿ ನಿರ್ಧರಿಸಲಾಗುವುದು ಅಂತ ತಿಳಿಸಿದ್ದಾರೆ.

Read More

ಬೆಂಗಳೂರು : ರಾಜ್ಯದಲ್ಲಿ ಎಡಬಿಡದೇ ಮಳೆ ಸುರಿಯುತ್ತಿದೆ. ಇಂದೂ ಕೂಡ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಈ ಹಿನ್ನಲೆಯಲ್ಲಿ ಇಂದು ರಾಜ್ಯದ ಏಳು ಜಿಲ್ಲೆಗಳಲ್ಲಿ ಎಲ್ಲಾ ಶಾಲಾ ಕಾಲೇಜುಗಳಿಗೆ ರಜಾ ಘೋಷಿಸಲಾಗಿದೆ. ಕರಾವಳಿ, ಮಲೆನಾಡು ಸೇರಿ ರಾಜ್ಯದ ಹಲವೆಡೆ ಮಳೆ ಅಬ್ಬರಿಸುತ್ತಿದ್ದು, ಅಘನಾಶಿನಿ, ಕಾವೇರಿ, ನೇತ್ರಾವತಿ, ತುಂಗಾ-ಭದ್ರಾ ಸೇರಿ ಪ್ರಮುಖ ನದಿಗಳಲ್ಲಿ ಪ್ರವಾಹದ ಭೀತಿ ಎದುರಾಗಿದೆ. ರಾಜ್ಯದಲ್ಲಿ ಇನ್ನೂ ಮೂರು ದಿನ ಮಳೆಯಬ್ಬರ ಮುಂದುವರೆಯುವ ಸಾಧ್ಯತೆ ಇದ್ದು, ಹಲವು ಜಿಲ್ಲೆಗಳಿಗೆ ಯೆಲ್ಲೋ, ರೆಡ್‌ ಅಲರ್ಟ್‌ ಘೋಷಿಸಲಾಗಿದೆ. ಇಂದು ಈ ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಉಡುಪಿ, ಶಿವಮೊಗ್ಗ, ಹಾಸನ, ಉತ್ತರ ಕನ್ನಡ, ಕೊಡಗಿನ ಎಲ್ಲಾ, ಬೆಳಗಾವಿ ಜಿಲ್ಲೆಯ ಖಾನಾಪುರ,ದಕ್ಷಿಣ ಕನ್ನಡ ಜಿಲ್ಲೆಯ 5, ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ, ಕಳಸ, ಮೂಡಿಗೆರೆ, ಶೃಂಗೇರಿ, ಎನ್.ಆರ್.ಪುರ ತಾಲೂಕುಗಳ ಶಾಲಾ-ಕಾಲೇಜುಗಳಿಗೆ ಶುಕ್ರವಾರವಾದ ಇಂದು ರಜೆ ಘೋಷಿಸಲಾಗಿದೆ.

Read More