Subscribe to Updates
Get the latest creative news from FooBar about art, design and business.
Author: kannadanewsnow57
ನವದೆಹಲಿ : ದೆಹಲಿಯಲ್ಲಿ ಹೃದಯ ವಿದ್ರಾವಕ ಘಟನೆಯೊಂದು ನಡೆದಿದೆ. ದೆಹಲಿಯ ತೀಸ್ ಹಜಾರಿ ನ್ಯಾಯಾಲಯದಲ್ಲಿ ದೆಹಲಿ ಪೊಲೀಸ್ ಎಎಸ್ಐ ಒಬ್ಬರು ಹೃದಯಾಘಾತದಿಂದ ಸಾವನ್ನಪ್ಪಿದರು. ಅವರನ್ನು ದೆಹಲಿ ಪೊಲೀಸ್ ಭದ್ರತಾ ವಿಭಾಗದಲ್ಲಿ ನಿಯೋಜಿಸಲಾಗಿತ್ತು. ಈ ವೀಡಿಯೊವನ್ನು ನೋಡುವುದರಿಂದ ಪ್ರಯಾಣದಲ್ಲಿರುವ ಯಾರಿಗಾದರೂ ಸಾವು ಸಂಭವಿಸಬಹುದು ಎಂದು ನಿಮಗೆ ಮನವರಿಕೆಯಾಗುತ್ತದೆ. ತೀಸ್ ಹಜಾರಿ ನ್ಯಾಯಾಲಯದಲ್ಲಿ ಎಎಸ್ಐ ಕರ್ತವ್ಯದಲ್ಲಿದ್ದರು. ಘಟನೆಯ ಸಿಸಿಟಿವಿ ದೃಶ್ಯಾವಳಿಗಳು ಹೊರಬಂದಿವೆ. ಎಸ್ಕಲೇಟರ್ ಏರುವ ಮೊದಲೇ ಎಎಸ್ಐ ಪ್ರಜ್ಞಾಹೀನರಾಗಿ ನೆಲಕ್ಕೆ ಬಿದ್ದರು. ಅಕ್ಟೋಬರ್ 6 ರಂದು ಬೆಳಿಗ್ಗೆ 9:15 ರ ಸುಮಾರಿಗೆ ಈ ಘಟನೆ ಸಂಭವಿಸಿದೆ. https://twitter.com/iAtulKrishan1/status/1975935177772937253?ref_src=twsrc%5Etfw%7Ctwcamp%5Etweetembed%7Ctwterm%5E1975935177772937253%7Ctwgr%5Ef2c81ae08f5d5ff6d18857a224c0afb43dc850d7%7Ctwcon%5Es1_c10&ref_url=https%3A%2F%2Fkalingatv.com%2Fnation%2Fdelhi-police-asi-dies-of-heart-attack-at-tis-hazari-court-cctv-footage-goes-viral%2F
ಬೆಂಗಳೂರು: ಬೆಂಗಳೂರಿನಲ್ಲಿ ಬೆಚ್ಚಿ ಬೀಳಿಸುವ ಘಟನೆ ನಡೆದಿದ್ದು, ಪ್ರೇಮಿಗಳಿಬ್ಬರು ಲಾಡ್ಜ್ನಲ್ಲಿ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಶರಣಾದ ಪರಿಣಾಮ ರೆಸ್ಟೋರೆಂಟ್ನಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದೆ. ಬೆಂಗಳೂರಿನ ಯಲಹಂಕ ನ್ಯೂ ಟೌನ್ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಅಗ್ನಿ ದುರಂತದಲ್ಲಿ ಗದಗ ಮೂಲದ ರಮೇಶ್ ಮತ್ತು ಕಾವೇರಿ ಸಾವನ್ನಪ್ಪಿದ್ದಾರೆ. ಮೃತಪಟ್ಟ ಪ್ರೇಮಿಗಳಿಬ್ಬರು ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ. ಇಬ್ಬರೂ ಯಲಹಂಕ ನ್ಯೂ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರುವ ಕಿಚನ್-6 ಫ್ಯಾಮಿಲಿ ರೆಸ್ಟೋರೆಂಟ್ ಕಟ್ಟಡದ ಮೂರನೇ ಮಹಡಿಯಲ್ಲಿರುವ ಲಾಡ್ಜ್ಗೆ ಬಂದಿದ್ದರು. ಲಾಡ್ಜ್ನಲ್ಲಿ ಕೊಠಡಿ ಪಡೆದ ಕೆಲವೇ ಸಮಯದಲ್ಲಿ, ಪೆಟ್ರೋಲ್ ತಂದು ತಮ್ಮ ಮೈ ಮೇಲೆ ಸುರಿದುಕೊಂಡು ಬೆಂಕಿ ಹಚ್ಚಿಕೊಂಡಿದ್ದಾರೆ. ಸದ್ಯ ಯಲಹಂಕ ನ್ಯೂ ಟೌನ್ ಪೊಲೀಸರು ತನಿಖೆ ಕೈಗೊಂಡಿದ್ದು, ಇದು ಆತ್ಮಹತ್ಯೆ ನಾ ಅಥವಾ ಬೆಂಕಿಯ ಅವಘಡ ದಿಂದ ನಡೆದಿರೋದಾ ಅನ್ನೋದು ತಿಳಿದುಬರಬೇಕಿದೆ.
ಮಂಗಳೂರು : ರಾಜ್ಯ ಸರ್ಕಾರವು ಕಂಬಳ ಕ್ರೀಡೆಗೆ ಅಧಿಕೃತ ಮಾನ್ಯತೆ ನೀಡಿದ್ದು, ಕರ್ನಾಟಕ ಕ್ರೀಡಾ ಪ್ರಾಧಿಕಾರದಡಿ ‘ಕರ್ನಾಟಕ ರಾಜ್ಯ ಕಂಬಳ ಅಸೋಸಿಯೇಷನ್’ ರಚಿನೆಗೆ ಗ್ರೀನ್ ಸಿಗ್ನಲ್ ನೀಡಿದೆ. ರಾಜ್ಯ ಕಂಬಳ ಅಸೋಸಿಯೇಷನ್ಗೆ ಮೂರು ವರ್ಷದ ಅವಧಿ ಅಥವಾ ಮುಂದಿನ ಆದೇಶದವರೆಗೆ ಮಾನ್ಯತೆ ನೀಡಲಾಗಿದೆ. ಕ್ರೀಡಾ ಇಲಾಖೆ ಪ್ರಧಾನ ಕಾರ್ಯದರ್ಶಿ ನೇತೃತ್ವದಲ್ಲಿ ಅ.15ರಂದು ಮೊದಲ ಸಭೆ ಬೆಂಗಳೂರಿನಲ್ಲಿ ನಡೆಯಲಿದೆ. ಈ ಸಭೆಯಲ್ಲಿ ಕಂಬಳ ಅಸೋಸಿಯೇಷನ್ನ ಬೈಲಾದ ಕರಡು ಪ್ರತಿ ಅನುಮೋದನೆ ಸಿಗಲಿದೆ. ಅಸೋಸಿಯೇಷನ್ ಪ್ರತಿವರ್ಷಜೂ.30ರೊಳಗೆ ಕಾರ್ಯಚಟುವಟಿಕೆಗಳ ಆಡಳಿತ ವರದಿ, ವಾರ್ಷಿಕ ವಹಿವಾಟುವಿನ ಆಡಿಟ್ ವರದಿ, ವಾರ್ಷಿಕ ಸಾಮಾನ್ಯ ಸಮಿತಿ ಮತ್ತು ಕಾರ್ಯಕಾರಿ ಸಮಿತಿ ಸಭೆಗಳ ನಡವಳಿ ಪ್ರತಿ, ಕ್ಯಾಲೆಂಡರ್ ಆಫ್ ಇವೆಂಟ್, ಸಂಘಗಳ ನೋಂದಣಿ ಕಾಯಿದೆ 1960ರಡಿ ಸಕ್ಷಮ ಪ್ರಾಧಿಕಾರದಿಂದ ರಾಜ್ಯ ಕಂಬಳ ಅಸೋಸಿಯೇಷನ್ ನವೀಕರಿಸಿರುವ ಪ್ರತಿ ಒದಗಿಸಲು ಆದೇಶದಲ್ಲಿ ತಿಳಿಸಲಾಗಿದೆ. ಸಂಸ್ಥೆಯ ಅಧ್ಯಕ್ಷರಾಗಿ ಬೆಳಪು ದೇವಿಪ್ರಸಾದ್ ಶೆಟ್ಟಿ ಅವರನ್ನು ನೇಮಕ ಮಾಡಲಾಗಿದೆ.
ಕೋಲಾರ : ಹೊಸ ರೇಷನ್ ಕಾರ್ಡ್ ನಿರೀಕ್ಷೆಯಲ್ಲಿ ರಾಜ್ಯದ ಜನತೆಗೆ ಭರ್ಜರಿ ಸಿಹಿಸುದ್ದಿ ಸಿಕ್ಕಿದ್ದು, ಶೀಘ್ರವೇ ಹೊಸ ಬಿಪಿಎಲ್ ಕಾರ್ಡ್ ವಿತರಿಸಲಾಗುವುದು ಎಂದು ಆಹಾರ ಸಚಿವ ಕೆ.ಎಚ್. ಮುನಿಯಪ್ಪ ಭರವಸೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, . ಕಳೆದ ಎರಡು ವರ್ಷಗಳಿಂದ ಬಿಪಿಎಲ್ ಕಾರ್ಡ್ಗಾಗಿ ಕಾಯುತ್ತಿರುವವರಿಗೆ ಶೀಘ್ರದಲ್ಲೇ ವಿತರಿಸಲಾಗುವುದು, ಅರ್ಹತೆ ಇಲ್ಲದವರನ್ನು ಎಪಿಎಲ್ ಪಟ್ಟಿಗೆ ಸೇರಿಸುವ ಕೆಲಸ ನಡೆಯುತ್ತಿದೆ. ಅರ್ಹತೆ ಇರುವ ಎಲ್ಲರಿಗೂ ಬಿಪಿಎಲ್ ಕಾರ್ಡ್ಗಳನ್ನು ವಿತರಿಸಲಾಗುವುದು ಎಂದು ಹೇಳಿದರು. ಸದ್ಯ ಆಹಾರ ಇಲಾಖೆಯಿಂದ ಕರ್ನಾಟಕದೆಲ್ಲೆಡೆ ಅಕ್ರಮ ಬಿಪಿಎಲ್ ಕಾರ್ಡ್ ಪತ್ತೆ ಕಾರ್ಯ ನಡೆಯುತ್ತಿದೆ. ಅರ್ಹರೆ ಇಲ್ಲದೇ ಇದ್ದರೂ ಬಿಪಿಎಲ್ ಕಾರ್ಡ್ ಹೊಂಡಿದ್ದರೆ ಅಂತಹವರನ್ನು ಪತ್ತೆ ಮಾಡಿ ಅವರ ಕಾರ್ಡ್ ಅನ್ನು ಎಪಿಎಲ್ಗೆ ಬದಲಾವಣೆ ಮಾಡಲಾಗುತ್ತಿದೆ ಎಂದು ತಿಳಿಸಿದ್ದಾರೆ.
ಬೆಂಗಳೂರು : ರೈತರ ಅನುಕೂಲಕ್ಕಾಗಿ ಆಯಾ ಊರಿನ ವ್ಯಾಪ್ತಿಯ ಪೋಡಿ ನಕ್ಷೆಯನ್ನು ಆನ್ ಲೈನ್ ನಲ್ಲಿ ಡೌನ್ ಲೋಡ್ ಮಾಡಲು ರಾಜ್ಯ ಸರ್ಕಾರವು ಅವಕಾಶ ನೀಡಲಾಗುತ್ತಿದೆ. ನೀವು ಪೋಡಿ ನಕ್ಷೆಯನ್ನು ಕುಳಿತಲ್ಲೇ ಡೌನ್ ಲೋಡ್ ಮಾಡಿಕೊಳ್ಳಲು ಮುಂದಿನ ಹಂತಗಳನ್ನು ಅನುಸರಿಸಿ. ಡಿಜಿಟಲ್ ಆ್ಯಪ್ ಮುಖಾಂತರ ಮಾಡುವುದರಿಂದ ಸರಳ, ವೇಗವಾಗಿ ಕಡತಗಳನ್ನು ತಯಾರಿಸಬಹುದು. ಯಾರ ಬಳಿ ವಿಳಂಬವಾಗಿದೆ ಎಂಬುದು ಪಾರದರ್ಶಕವಿರುವುದರಿಂದ, ವೇಗವಾಗಿ ಕೆಲಸವಾಗಬಹುದು. ಮೂಲ ಮಂಜೂರಿ ದಾಖಲೆಗಳನ್ನು ಸುರಕ್ಷಿತವಾಗಿಡಬಹುದು. ಮುಂದೆ ತಿದ್ದಲು, ನಕಲು ಮಾಡಲು ಸಾಧ್ಯವಿಲ್ಲ. ಒಬ್ಬ ರೈತನಿಗೆ ತಯಾರು ಮಾಡಿದ 1-5 (ನಮೂನೆ)ಕಡತ, ಆ ಸರ್ವೆ ನಂಬರಿನ ಎಲ್ಲಾ ರೈತರಿಗೂ ಅದೇ ಕಡತ ಅನುಕೂಲವಾಗುತ್ತದೆ. 1-5(ನಮೂನೆ)ಕಡತ ಕಾಣೆಯಾಗಲು ಅಥವಾ ಕಳೆದು ಹೋಗಲು ಸಾಧ್ಯವಿಲ್ಲ. ಕುಟುಂಬದ ಸದಸ್ಯರ ಪಾಲುಗಾರಿಕೆ, ಭೂ ಆಸ್ತಿಯ ಕೆಲವು ಭಾಗ ಮಾರಾಟ, ದಾನಪತ್ರ, ನಿವೇಶನಕ್ಕೆ ಬಳಕೆ, ಭೂ ಪರಿವರ್ತನೆ ಸೇರಿ ಹಲವು ಚಟುವಟಿಕೆಗಳಿಗೆ ಪೋಡಿ ನಕ್ಷೆ ಅವಶ್ಯಕವಾಗಿದೆ. ಒಂದು ಸರ್ವೇ ನಂಬರಿನಲ್ಲಿ ಹಲವರ ಹೆಸರಿದ್ದರೆ ಮುಂದೆ ಸರ್ಕಾರದಿಂದ ಸೌಲಭ್ಯ…
ಬೆಂಗಳೂರು : ರಾಜ್ಯ ಸರ್ಕಾರವು ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ಮಾಡಿದ್ದು, ಮತ್ತೆ 10 ಮಂದಿ ಕೆಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಕರ್ನಾಟಕ ಆಡಳಿತ ಸೇವೆಗೆ ಸೇರಿದ ಈ ಕೆಳಕಂಡ ಅಧಿಕಾರಿಗಳನ್ನು ಸಾರ್ವಜನಿಕ ಹಾಗೂ ಆಡಳಿತಾತ್ಮಕ ಹಿತದೃಷ್ಟಿಯಿಂದ ಈ ಕೂಡಲೇ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಅವರುಗಳ ಹೆಸರಿನ ಮುಂದೆ ನಮೂದಿಸಿರುವ ಹುದ್ದೆಗಳಿಗೆ ವರ್ಗಾಯಿಸಿ / ಸ್ಥಳ ನಿಯುಕ್ತಿಗೊಳಿಸಿ ಆದೇಶಿಸಿದೆ.
ಬೆಂಗಳೂರು : ರಾಜ್ಯದಲ್ಲಿ ಕೆರೆಗಳ ಸಂರಕ್ಷಣೆ ಸರ್ಕಾರ ಹಾಗೂ ಪ್ರತಿನಾಗರಿಕನ ಜವಾಬ್ದಾರಿ. ಹಾಗಾಗಿ ಒತ್ತುವರಿ ಮಾಡಿಕೊಂಡಿರುವವರು ತಾವಾಗಿಯೇ ಆ ಜಾಗ ಬಿಟ್ಟುಕೊಟ್ಟರೆ ಒಳಿತು. ತಪ್ಪಿದರೆ ಅಧಿಕಾರಿಗಳು ಮುಲಾಜಿಲ್ಲದೆ ಅಂಥ ಒತ್ತುವರಿ ತೆರವು ಮಾಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಆಯೋಜಿಸಿದ್ದ “ನೀರಿದ್ದರೆ ನಾಳೆ” ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಕೆರೆಗಳಿಗೆ ನೀರು ತುಂಬಿಸುವುದರಲ್ಲಿ ಏಷ್ಯಾದಲ್ಲೇ ಉತ್ತಮ ಕಾರ್ಯ ನಮ್ಮ ರಾಜ್ಯದಲ್ಲಿ ಆಗುತ್ತಿದೆ. ನಾಗರಿಕತೆ ಬೆಳೆದದ್ದು – ಉಳಿದಿರುವುದು ನೀರಿನಿಂದಲೇ. ಜನರಲ್ಲಿ ನೀರಿನ ಬಳಕೆ, ನೀರಿನ ಮೌಲ್ಯ ಮತ್ತು ಅಂತರ್ಜಲ ವೃದ್ಧಿ ಬಗ್ಗೆ ಸಚಿವ ಬೋಸರಾಜು ಅವರು ಇಲಾಖೆಯ ವತಿಯಿಂದ ಉತ್ತಮ ಕಾರ್ಯಕ್ರಮಗಳನ್ನು ರೂಪಿಸುತ್ತಿದ್ದಾರೆ. ಇದು ಆರೋಗ್ಯಕರ ಸಂಗತಿ ಎಂದರು. ರಾಜ್ಯದಲ್ಲಿ 37 ಲಕ್ಷ ಬೋರ್ ವೆಲ್ ಗಳ ಮೂಲಕ ಅಂತರ್ಜಲ ಬಳಕೆ ಆಗುತ್ತಿದೆ. ದಾಖಲೆಗಳಲ್ಲಿ ಇಲ್ಲದ ಲಕ್ಷಾಂತರ ಅನಧಿಕೃತ ಬೋರ್ ವೆಲ್ ಗಳೂ ಇವೆ. ರಾಷ್ಟ್ರೀಯ ಸರಾಸರಿಗಿಂತ ಶೇ.8 ರಷ್ಟು ಹೆಚ್ಚಿನ ಬಳಕೆ ಆಗುತ್ತಿದೆ…
ಹಾಸನ : ಪ್ರಸಿದ್ಧ ಹಾಸನಾಂಬೆ ದೇವಿ ಗರ್ಭಗುಡಿ ಬಾಗಿಲು ನಿನ್ನೆ ತೆರೆದಿದ್ದು, ದೇವಾಲಯಕ್ಕೆ ಅರ್ಚಕರ ತಂಡ ಪೂಜಾ ಸಾಮಗ್ರಿಗಳನ್ನು ತಂದಿದ್ದು, ಮಂಗಳವಾದ್ಯಗಳೊಂದಿಗೆ ಪೂಜಾ ಸಾಮಗ್ರಿಗಳ ಸಮೇತ ಆಗಮಿಸಿ ಅರ್ಚಕರು, ಪ್ರಧಾನ ಅರ್ಚಕ ನಾಗರಾಜ ನೇತ್ರತ್ವದಲ್ಲಿ ದೇಗುಲದ ಬಾಗಿಲು ತೆರೆಯಲಾಯಿತು. ಅರ್ಚಕರಿಂದ ಪೂಜೆ ನೆರವೇರಿಸಿದ ಬಳಿಕ ಗರ್ಭಗುಡಿ ಬಾಗಿಲು ತೆರೆಯಲಾಯಿತು. ಈ ವೇಳೆ ಆಡಿ ಚುಂಚನಗಿರಿ ಮಠದ. ಪೀಠಾಧ್ಯಕ್ಷ ನಿರ್ಮಲಾನಂದನಾಥ್ ಸ್ವಾಮೀಜಿ, ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣ ಭೈರೇಗೌಡ, ಸಂಸದ ಶ್ರೇಯಸ್ ಪಟೇಲ್, ಹಾಸನ ಡಿಸಿ ಎಸ್.ಪಿ ಸಮ್ಮುಖದಲ್ಲಿ ಗರ್ಭಗುಡಿ ಬಾಗಿಲು ತೆರೆಯಲಾಯಿತು. ಅಕ್ಟೊಬರ್ 23 ವೆರೆಗೆ ಹಾಸನಾಂಬೆ ದೇವಿ ಜಾತ್ರೆ ನಡೆಯಲಿದೆ. ದೇವಿಯ ದರ್ಶನಕ್ಕೆ ಬರುವ ಭಕ್ತರಿಗೆ ವಿಶೇಷ ವ್ಯವಸ್ಥೆ ಕಲ್ಪಿಸಲಾಗಿದೆ. ಭಕ್ತರ ದರ್ಶನಕ್ಕೆ ವಸ್ತ್ರ ಸಂಹಿತೆ ಜಾರಿ ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಅಧಿನಿಯಮ 1997 ಸೆಕ್ಷನ್ 58ರಡಿಯಲ್ಲಿ ದೇವಸ್ಥಾನದ ರೂಢಿ, ಸಂಪ್ರದಾಯ ಮತ್ತು ಆಚರಣೆಯಂತೆ ದೇವಾಲಯದ ಗರ್ಭಗುಡಿ, ಒಳಾಂಗಣ ಮತ್ತು ಹೊರಾಂಗಣದಲ್ಲಿ ಕೆಲಸ ನಿರ್ವಹಿಸುತ್ತಿರುವ…
ನವದೆಹಲಿ : ದೇಶಾದ್ಯಂತ ರೈಲ್ವೆ ಪ್ರದೇಶಗಳಲ್ಲಿ 2025 ರ ವರ್ಷಕ್ಕೆ ತಾಂತ್ರಿಕೇತರ ಜನಪ್ರಿಯ ವರ್ಗಗಳ ಪದವೀಧರ ಮತ್ತು ಪದವಿಪೂರ್ವ ಹುದ್ದೆಗಳ ನೇಮಕಾತಿಗಾಗಿ ರೈಲ್ವೆ ನೇಮಕಾತಿ ಮಂಡಳಿ (RRB) ಕೇಂದ್ರೀಕೃತ ಉದ್ಯೋಗ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಈ ಅಧಿಸೂಚನೆಯ ಅಡಿಯಲ್ಲಿ ಒಟ್ಟು 8,050 ಖಾಲಿ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ. ಇದರಲ್ಲಿ 5,000 ಪದವೀಧರ ಹುದ್ದೆಗಳು ಮತ್ತು 3,050 ಪದವಿಪೂರ್ವ ಹುದ್ದೆಗಳು ಸೇರಿವೆ. ಈ ಪದವೀಧರ ಹುದ್ದೆಗಳಿಗೆ ಆನ್ಲೈನ್ ಅರ್ಜಿಗಳು ಅಕ್ಟೋಬರ್ 21 ರಿಂದ ಪ್ರಾರಂಭವಾಗುತ್ತವೆ. ಪದವಿಪೂರ್ವ ಹುದ್ದೆಗಳಿಗೆ ಅರ್ಜಿಗಳು ಅಕ್ಟೋಬರ್ 28, 2025 ರಿಂದ ಪ್ರಾರಂಭವಾಗುತ್ತವೆ. ಇತರ ವಿವರಗಳನ್ನು ಕೆಳಗೆ ಪರಿಶೀಲಿಸಬಹುದು. ಆರ್ಆರ್ಬಿ ಅಹಮದಾಬಾದ್, ಅಜ್ಮೀರ್, ಬೆಂಗಳೂರು, ಭೋಪಾಲ್, ಭುವನೇಶ್ವರ, ಬಿಲಾಸ್ಪುರ್, ಚಂಡೀಗಢ, ಚೆನ್ನೈ, ಗುವಾಹಟಿ, ಗೋರಖ್ಪುರ, ಜಮ್ಮು – ಶ್ರೀನಗರ, ಕೋಲ್ಕತ್ತಾ, ಮಾಲ್ಡಾ, ಮುಂಬೈ, ಮುಜಫರ್ಪುರ್, ಪಾಟ್ನಾ, ಪ್ರಯಾಗ್ರಾಜ್, ರಾಂಚಿ, ಸಿಕಂದರಾಬಾದ್, ಸಿಲಿಗುರಿ, ತಿರುವನಂತಪುರಂ ಪ್ರದೇಶಗಳಿಂದ ಈ ಹುದ್ದೆಗಳನ್ನು ಭರ್ತಿ ಮಾಡುತ್ತದೆ. RRB NTPC ನೇಮಕಾತಿ ಅಡಿಯಲ್ಲಿ ಭರ್ತಿ ಮಾಡಲಾಗುವ ಹುದ್ದೆಗಳು…
ರಾಜ್ಯದ ಎಲ್ಲಾ ಸರ್ಕಾರಿ, ಖಾಸಗಿ ಮಹಿಳಾ ಉದ್ಯೋಗಿಗಳಿಗೆ ಗುಡ್ ನ್ಯೂಸ್ : ತಿಂಗಳಲ್ಲಿ 1 ದಿನ ವೇತನ ಸಹಿತ `ಋತುಚಕ್ರ ರಜೆ’
ಬೆಂಗಳೂರು: ರಾಜ್ಯದ ಸರ್ಕಾರಿ, ಖಾಸಗಿ ಮಹಿಳಾ ನೌಕರರಿಗೆ ಸರ್ಕಾರ ಬಂಫರ್ ಗಿಫ್ಟ್ ನೀಡಿದೆ. ಇನ್ಮುಂದೆ ತಿಂಗಳಲ್ಲಿ 1 ದಿನ ವೇತನ ಸಹಿತ ಋತುಚಕ್ರ ರಜೆ ನೀಡಲು ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರವನ್ನು ಕೈಗೊಳ್ಳಲಾಗಿದೆ. ರಾಜ್ಯ ಸಚಿವ ಸಂಪುಟದ ಬಳಿಕ ಕಾನೂನು ಸಚಿವ ಹೆಚ್.ಕೆ ಪಾಟೀಲ್ ಅವರು ಸಂಪುಟದ ನಿರ್ಧಾರಗಳನ್ನು ಮಾಧ್ಯಮಗಳಿಗೆ ಮಾಹಿತಿ ನೀಡಿದರು. ಋತುಚಕ್ರ ರಜೆ ನೀಡಲು ಸಂಪುಟ ಒಪ್ಪಿಗೆ ನೀಡಲಾಗಿದೆ. ಸರ್ಕಾರಿ, ಖಾಸಗಿ ನೌಕರರಿಗೆ ಅನ್ವಯ ಆಗಲಿದೆ. ಗಾರ್ಮೆಂಟ್ಸ್, ಕೈಗಾರಿಕೆಗಳಿಗೂ ಅನ್ವಯಿಸಲಿದೆ. ಹೆಣ್ಣುಮಕ್ಕಳಿಗೆ ಒಂದು ದಿನ ರಜೆ ನೀಡಲು ಒಪ್ಪಿಗೆ ನೀಡಲಾಗಿದೆ. ಉದ್ಯೋಗ ಮಾಡುವ ಮಹಿಳೆಯರಿಗೆ ಅನುಕೂಲವಾಗಲಿದೆ. ವೇತನ ಸಹಿತ ಒಂದು ದಿನದ ರಜೆ ಸಿಗಲಿದೆ ಎಂದರು. ಕ್ಯಾಬಿನೆಟ್ ಸಭೆಯ ಬಳಿಕ ಮಾತನಾಡಿದ ಸಚಿವ ಸಂತೋಷ ಲಾಡ್, ಹೆಣ್ಣು ಮಕ್ಕಳಿಗೆ ಋತು ಚಕ್ರ ರಜೆ ನೀಡಲು ಕ್ಯಾಬಿನೆಟ್ ನಲ್ಲಿ ಒಪ್ಪಿಗೆ ಆಗಿದೆ. ವರ್ಷದಲ್ಲಿ 12 ದಿನ ರಜೆ ಸಂಬಳ ಸಹಿತ ಕೊಡಲಾಗುತ್ತದೆ. ತಿಂಗಳಲ್ಲಿ ಋತುಚಕ್ರವಾದಾಗ ಯಾವ ದಿನ ಬೇಕಾದರೂ…














