Author: kannadanewsnow57

ಬೆಂಗಳೂರು : ಈ ವರ್ಷ 26 ವಸತಿ ಶಾಲೆ ಘೋಷಣೆ ಮಾಡಿದ್ದೇನೆ. ಮುಂದಿನ ವರ್ಷ ಎಲ್ಲ ಹೋಬಳಿಗಳಲ್ಲಿ ಶಾಲೆ ಮಾಡುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. ಕೆಪಿಸಿಸಿ ಕಚೇರಿಯ ಭಾರತ್ ಜೋಡೋ ಭವನದಲ್ಲಿ ಆಯೋಜಿಸಿದ್ದ 134ನೇ ಅಂಬೇಡ್ಕರ್ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಆಂಧ್ರಪ್ರದೇಶ ಹೋಬಳಿಗೊಂದು ವಸತಿ ಮಾದರಿ ಶಾಲೆ, ಮೈಸೂರು ವಿ.ವಿ.ಯಲ್ಲಿ ಅಂಬೇಡ್ಕರ್ ಸಂವಿಧಾನ ಅಧ್ಯಯನ ಪೀಠ, ಮ್ಯೂಸಿಯಂ ಬೆಂಗಳೂರಲ್ಲಿ ಆಂಧ್ರಪ್ರದೇಶ ಮಾದರಿ ಅಂಬೇಡ್ಕರ್ ಮ್ಯೂಸಿಯಂ ನಿರ್ಮಾಣ, ದೇಶದಲ್ಲೇ ದೊಡ್ಡ ಅಂಬೇಡ್ಕರ್ ಪ್ರತಿಮೆ ಸ್ಥಾಪನೆ ಮಾಡುವುದಾಗಿ ಸಿಎಂ ಸಿದ್ದರಾಮಯ್ಯ ಪ್ರಕಟಿಸಿದರು. ಈ ವರ್ಷ 26 ವಸತಿ ಶಾಲೆ ಘೋಷಣೆ ಮಾಡಿದ್ದೇನೆ. ಮುಂದಿನ ವರ್ಷ ಎಲ್ಲ ಹೋಬಳಿಗಳಲ್ಲಿ ಶಾಲೆ ಮಾಡುತ್ತೇವೆ. ಬಜೆಟ್ ಗಾತ್ರ ಹೆಚ್ಚಾದಂತೆ ಎಸ್ ಸಿಎಸ್‌ಪಿ/ಟಿಎಸ್‌ಪಿ ಹಣ ಹೆಚ್ಚಾಗಬೇಕು. ಆದರೆ ಬಿಜೆಪಿ ಸರ್ಕಾರ ಕಡಿಮೆ ಮಾಡಿತ್ತು. ನಾವು ಅಧಿಕಾರಕ್ಕೆ ಬಂದ ಬಳಿಕ ಮತ್ತೆ ಯೋಜನಾಗಾತ್ರಕ್ಕೆ ತಕ್ಕಂತೆ ಹೆಚ್ಚಿಸಿದ್ದೇವೆ. ಈ ಬಾರಿ 42,018 ಕೋಟಿ ರೂ. ತೆಗೆದಿಟ್ಟಿದ್ದೇವೆ ಎಂದು…

Read More

ಬೆಂಗಳೂರು : ಬೆಂಗಳೂರಿನಲ್ಲಿ ಮೆಟ್ರೋ ಕಾಮಗಾರಿ ವೇಳೆ ಮತ್ತೊಂದು ದುರಂತ ಸಂಭವಿಸಿದ್ದು, ಟ್ರ್ಯಾಕ್ ಗೆ ಹಾಕುವ ಬೃಹತ್ ತಡೆಗೋಡೆ ಬಿದ್ದು ವ್ಯಕ್ತಿಯೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಬೆಂಗಳೂರಿನ ಯಲಹಂಕ ಬಳಿಯ ಕೋಗಿಲು ಕ್ರಾಸ್ ಬಳಿ ಘಟನೆ ನಡೆದಿದೆ. ವಯಾಡೆಕ್ಟ್ ಆಟೋ ಮೇಲೆ ಬಿದ್ದು ಚಾಲಕ ಖಾಸಿಂ ಎಂಬುವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಲಾರಿಯಲ್ಲಿ ವಯಾಡೆಕ್ಟ್ ಸಾಗಿಸುವಾಗ ಉರುಳಿ ಬಿದ್ದು ದುರಂತ ಸಂಭವಿಸಿದೆ. 18 ಚಕ್ರದ ದೊಡ್ಡ ಲಾರಿಯಲ್ಲಿ ವಯಾಡೆಕ್ಟ್ ಸಾಗಿಸುತ್ತಿದ್ದರು. ಈ ವೇಳೆ ಲಾರಿ ತುಂಡಾಗಿ ಬೃಹತ್ ವಯಾಡೆಕ್ಟ್ ನೆಲಕ್ಕುರುಳಿದೆ. ಏಕಾಏಕಿ ಆಟೋ ಮೇಲೆ ವಯಾಡೆಕ್ಟ್ ಬಿದ್ದ ಪರಿಣಾಮ ಆಟೋ ಚಾಲಕ ಖಾಸಿಂ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

Read More

ಬೆಂಗಳೂರು : ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದಿನಿಂದ ಮೂರು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಏ.16ರ ಇಂದು ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ, ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಬೆಳಗಾವಿ, ರಾಯಚೂರು, ಕೊಪ್ಪಳ, ಧಾರವಾಡ, ಗದಗ ಮತ್ತು ಹಾವೇರಿ ಜಿಲ್ಲೆಯ ಕೆಲವೆಡೆ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೊಡಗು ಜಿಲ್ಲೆಯ ಕೆಲವೆಡೆ ಇಂದು ಗುಡುಗು ಸಿಡಿಲಿನೊಂದಿಗೆ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ರೆಡ್ ಅಲರ್ಟ್ ನೀಡಿದೆ. ಏಪ್ರಿಲ್ 18 ರವರೆಗೆ ದಕ್ಷಿಣ ಕನ್ನಡ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ಮಂಡ್ಯ, ರಾಮನಗರ, ಚಿಕ್ಕಬಳ್ಳಾಪುರ, ಕೋಲಾರ, ಶಿವಮೊಗ್ಗ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ದಾವಣಗೆರೆ, ವಿಜಯನಗರದಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ…

Read More

ಧಾರವಾಡ : ಭಾರತದ ಸಂವಿಧಾನ ರಚಿಸಿರುವ ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ ಅವರ 134 ನೇ ಜಯಂತಿ ಅಂಗವಾಗಿ ಧಾರವಾಡ ಜಿಲ್ಲಾಡಳಿತ ಮತ್ತು ಮಹಾನಗರಪಾಲಿಕೆ ಸಹಯೋಗದಲ್ಲಿ ರಾಜ್ಯದಲ್ಲಿ ಪ್ರಥಮ ಬಾರಿಗೆ ಭಾರತ ಸಂವಿಧಾನದ ಪೀಠಿಕೆಯ ಬೃಹತ್ ಲೋಹದ ಪ್ರತಿಯನ್ನು ಸಂವಿಧಾನ ಪುಸ್ತಕ ರೀತಿಯಲ್ಲಿ ನಿರ್ಮಿಸಿ, ನಗರದ ಪ್ರಸಿದ್ದ ರಾಣಿ ಕಿತ್ತೂರು ಚನ್ನಮ್ಮ ಉದ್ಯಾನವನದಲ್ಲಿ ಇಂದು ಬೆಳಿಗ್ಗೆ ಸಚಿವ ಸಂತೋಷ ಲಾಡ್ ಅವರಿಂದ ಲೋಕಾರ್ಪಣೆ ಮಾಡಲಾಯಿತು. ಕಾರ್ಮಿಕ ಇಲಾಖೆ ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ ಲಾಡ್ ಅವರು ಲೋಹದಲ್ಲಿ ರಚಿತ ಪೀಠಿಕೆಯನ್ನು ಲೋಕಾರ್ಪಣೆ ಮಾಡಿ, ಗೌರವ ಸಲ್ಲಿಸಿ, ಸಂತಸ ವ್ಯಕ್ತಪಡಿಸಿದರು. ಜಿಲ್ಲಾಧಿಕಾರಿ ದಿವ್ಯ ಪ್ರಭು ಹಾಗೂ ಮಹಾನಗರಪಾಲಿಕೆ ಆಯುಕ್ತ ಡಾ.ರುದ್ರೇಶ ಘಾಳಿ ಅವರು ಲೋಹದಿಂದ ರಚಿತ ಸಂವಿಧಾನ ಪೀಠಿಕೆಯ ವಿಶೇಷತೆಗಳನ್ನು ಹಾಗೂ ಅನುಕೂಲತೆಗಳನ್ನು ವಿವರಿಸಿದರು. ಈ ಸಂದರ್ಭದಲ್ಲಿ ಹುಬ್ಬಳ್ಳಿ ಧಾರವಾಡ ಮಹಾನಗರಪಾಲಿಕೆ ಮಹಾಪೌರರಾದ ರಾಮಣ್ಣ ಬಡಿಗೇರ, ಉಪಮಹಾಪೌರರಾದ ದುರ್ಗಮ್ಮ ಬಿಜವಾಡ, ಜಿಲ್ಲಾ ಪೊಲೀಸ ಅಧೀಕ್ಷಕ ಡಾ.ಗೋಪಾಲ ಬ್ಯಾಕೋಡ, ಅಪರ ಜಿಲ್ಲಾಧಿಕಾರಿ ಗೀತಾ‌ ಸಿ.ಡಿ.,…

Read More

ಚಿತ್ರದುರ್ಗ :ಬರುವ ಏಪ್ರಿಲ್ 21 ಸರ್ಕಾರಿ ನೌಕರರ ದಿನಾಚರಣೆಯಂದು ರಾಜ್ಯ ಸರ್ಕಾರ ಆರೋಗ್ಯ ಸಂಜೀವಿನಿ ಯೋಜನೆ ಜಾರಿ ಮಾಡಲಿದೆ. ಈಗಾಗಲೇ ಮುಖ್ಯಮಂತ್ರಿಗಳು ಯೋಜನೆ ಜಾರಿ ಆದೇಶ ಹೊರಡಿಸಿದ್ದಾರೆ. ಆರೋಗ್ಯ ಸಂಜೀವಿನಿ ಯೋಜನೆಯಿಂದ ಸರ್ಕಾರಿ ನೌಕರರರು ಹಾಗೂ ಅವರ ಅವಲಂಬಿತರಿಗೆ ನಗದು ರಹಿತ ಉಚಿತ ಆರೋಗ್ಯ ಸೇವೆ ದೊರಕಲಿದೆ ಎಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ ಹೇಳಿದ್ದಾರೆ. ಕ್ರೀಡಾಕೂಟದ ಉದ್ಘಾಟನೆ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ ಅವರು, ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆಗಳ ನಡುವೆಯೂ 7ನೇ ವೇತನ ಆಯೋಗ ಶಿಫಾರಸ್ಸನ್ನು ಜಾರಿ ಮಾಡಿದೆ. ಇದರೊಂದಿಗೆ ಆರೋಗ್ಯ ಸಂಜೀವಿನಿ ಯೋಜನೆಗೂ ಅನುಮತಿ ನೀಡಿದೆ. ಸರ್ಕಾರಿ ನೌಕರರಿಗೆ ರಾಷ್ಟಿçÃಕೃತ ಬ್ಯಾಂಕುಗಳಲ್ಲಿ ಸ್ಯಾಲರಿ ಪ್ಯಾಕಜ್ ಅಕೌಂಟ್ ವ್ಯವಸ್ಥೆ ಜಾರಿಗೊಳಿಸಲಾಗಿದೆ. ಈ ಯೋಜನೆಯಲ್ಲಿ ಸರ್ಕಾರಿ ನೌಕರರು ಕೆಲಸದ ವೇಳೆ ಅಪಘಾತದಲ್ಲಿ ಮೃತಪಟ್ಟರೆ ರೂ.1 ಕೋಟಿ ಪರಿಹಾರ ನೀಡಲಾಗುವುದು. ಅಂಗವೈಕಲ್ಯತೆಗೆ ಒಳಗಾದರೆ ರೂ.35 ಲಕ್ಷದ ವರೆಗೆ ಪರಿಹಾರ ದೊರಕಲಿದೆ. ಕಡಿಮೆ ಬಡ್ಡಿ ದರದಲ್ಲಿ ವೈಯಕ್ತಿಕ, ಗೃಹ, ಹಾಗೂ…

Read More

ದಾವಣಗೆರೆ :ಆಹಾರ ಮತ್ತು ನಾಗರಿಕ ಸರಬರಾಜು ನಿಗಮದ ಮೂಲಕ ಪ್ರಸಕ್ತ ಸಾಲಿನ ಹಿಂಗಾರು ಹಂಗಾಮಿನಲ್ಲಿ ಭತ್ತ ಹಾಗೂ ಬಿಳಿ ಜೋಳವನ್ನು ರೈತರಿಂದ ಖರೀದಿಸಲು ಅವಕಾಶ ಕಲ್ಪಿಸಿದೆ. ಅದರಂತೆ ಜಿಲ್ಲಾ ವ್ಯಾಪ್ತಿಯಲ್ಲಿನ ಬಿತ್ತನೆ ಪ್ರಮಾಣ ಆಧರಿಸಿ ಭತ್ತ ಕ್ವಿಂಟಾಲ್‍ಗೆ ರೂ.2300 ಹಾಗೂ ಭತ್ತ ಗ್ರೇಡ್‍ಎ ರೂ.2320 ಗಳಂತೆ ಮತ್ತು ಹೈಬ್ರಿಡ್ ಜೋಳವನ್ನು ಪ್ರತಿ ಕ್ವಿಂಟಾಲ್‍ಗೆ ರೂ.3371/- ಹಾಗೂ ಮಾಲ್ದಂಡಿ ಜೋಳವನ್ನು ಕ್ವಿಂಟಾಲ್‍ಗೆ ರೂ. 3421/- ನಂತೆ ಯಾವುದೇ ವ್ಯತ್ಯಾಸಗಳಿಗೆ ಅವಕಾಶ ನೀಡದೆ ನೊಂದಣಿ ಮತ್ತು ಖರೀದಿಗೆ ಕ್ರಮವಹಿಸಲು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸುರೇಶ್ ಬಿ.ಇಟ್ನಾಳ್ ತಿಳಿಸಿದರು. ಪ್ರಸಕ್ತ ಸಾಲಿನ ಹಿಂಗಾರು ಋತುವಿನಲ್ಲಿ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ಭತ್ತ ಮತ್ತು ಬಿಳಿಜೋಳ ಖರೀದಿಸಲು ಮಾರ್ಚ್ 15 ರಿಂದ ನೊಂದಣಿ ಪ್ರಕ್ರಿಯ ಪ್ರಾರಂಭಿಸಲಾಗಿದ್ದು, ಮೇ 31 ರವರೆಗೆ ನೊಂದಣಿ ಮತ್ತು ಖರೀದಿ ಪ್ರಕ್ರಿಯೆ ನಡೆಯಲಿದೆ. ಖರೀದಿ ಕೇಂದ್ರಗಳನ್ನು ಎಲ್ಲಾ ಕೃಷಿ ಉತ್ಪನ್ನ ಮಾರುಕಟ್ಟೆ ಆವರಣದಲ್ಲಿ ಆರಂಭಿಸಲಾಗಿದೆ. ರೈತರಿಂದ…

Read More

ಗ್ರಾಮ ಪಂಚಾಯತ್‌ ಅರಿವು ಕೇಂದ್ರದ ಮೂಲಕ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರಗಳನ್ನು ನಡೆಸಲು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆಯು ಸಜ್ಜಾಗಿದೆ. ಸ್ಥಳೀಯ ಅಂಚೆ ಕಚೇರಿ, ಹಾಲು ಉತ್ಪಾದಕ ಸಹಕಾರ ಸಂಘ, ಬ್ಯಾಂಕ್‌, ಪಶುವೈದ್ಯಕೀಯ ಆಸ್ಪತ್ರೆ, ಅಂಗನವಾಡಿ ಕೇಂದ್ರ, ಗ್ರಾಮ ಪಂಚಾಯತ್‌, ಆಸ್ಪತ್ರೆ ಮುಂತಾದ ಸ್ಥಳಗಳಿಗೆ ಮಕ್ಕಳನ್ನು ಕರೆದೊಯ್ದು ಮಕ್ಕಳಿಗೆ ಪರಿಚಯ ಮಾಡಿಸಲಾಗುವುದು ಎಂದು ಸಚಿವರಾದ ಪ್ರಿಯಾಂಕ್ ಖರ್ಗೆ ಅವರು ತಿಳಿಸಿದ್ದಾರೆ. ಯೋಜನಾ ಚಟುವಟಿಕೆಗಳಲ್ಲಿ ಮಕ್ಕಳನ್ನು ತೊಡಗಿಸಿಕೊಳ್ಳಲು ಯೋಜಿಸಲಾಗಿದ್ದು, ಪ್ರಮುಖವಾಗಿ ನಮ್ಮೂರಿನ ಪಕ್ಷಿಗಳು, ನೀರಿನ ಪಯಣ, ನನ್ನ ಊರು, ನಮ್ಮೂರಿನ ಇತಿಹಾಸ, ನಮ್ಮೂರ ಜಾತ್ರೆ, ನಮ್ಮೂರ ಜಾನಪದ ಗೀತೆಗಳು – ಕಥೆಗಳು, ನಮ್ಮೂರ ಕ್ರೀಡೆಗಳು, ನಮ್ಮೂರ ಕಲೆಗಳ ಬಗ್ಗೆ ಮಕ್ಕಳಿಗೆ ಮಾಹಿತಿ ಒದಗಿಸಲಾಗುವುದು ಎಂದು ಹೇಳಿದ್ದಾರೆ. ಮಕ್ಕಳಲ್ಲಿ ವಿಜ್ಞಾನಕ್ಕೆ ಸಂಬಂಧಿಸಿದಂತೆ ಕೌಶಲ್ಯಗಳನ್ನು ಅಭಿವೃದ್ಧಿಪಡಿಸಲು ಕಾಮನಬಿಲ್ಲು ಮೂಡಿಸುವಿಕೆ, ವಿವಿಧ ಗಣಿತದ ಘನಾಕೃತಿಗಳ ಪರಿಚಯ, ಚಿನ್ನಿದಾಂಡು, ಗ್ರಾಮದಲ್ಲಿ ಬಳಸುವ ಅಳತೆ ಮತ್ತು ಮಾಪಕಗಳು, ಟ್ಯಾನ್‌ಗ್ರ್ಯಾಮ್‌, ಪೇಪರ್‌ ಫ್ಯಾನ್‌, ಜೆಟ್‌ ಪ್ಲೇನ್‌, ಕಣ್ಣುಮಿಟುಕಿಸುವ ಗೊಂಬೆ, ಚದುರಂಗ,…

Read More

ಕಲಬುರಗಿಯ ಪ್ರತಿಭಾವಂತ ಯುವ ಸಮುದಾಯಕ್ಕೆ ಉದ್ಯೋಗ ಒದಗಿಸಿಕೊಡುವ ನಿಟ್ಟಿನಲ್ಲಿ ಕೌಶಲ್ಯಾಭಿವೃದ್ಧಿ ಇಲಾಖೆಯ ವತಿಯಿಂದ ಕಲಬುರಗಿಯ ಕೆಸಿಟಿ ಕಾಲೇಜ್ ಕ್ಯಾಂಪಸ್‌ನಲ್ಲಿ ಇದೇ ಏಪ್ರಿಲ್ 16ನೇ ತಾರೀಖಿನಂದು ವಿಭಾಗೀಯ ಮಟ್ಟದ ಬೃಹತ್ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ. 200ಕ್ಕೂ ಹೆಚ್ಚು ರಾಜ್ಯದ ಪ್ರತಿಷ್ಠಿತ ಕಂಪೆನಿಗಳು ಭಾಗಿಯಾಗುವ ಈ ಉದ್ಯೋಗ ಮೇಳದ ಪ್ರಯೋಜನವನ್ನು ಉದ್ಯೋಗಾಕಾಂಕ್ಷಿಗಳು ಪಡೆದುಕೊಂಡು ಭವಿಷ್ಯ ರೂಪಿಸಿಕೊಳ್ಳುವತ್ತ ಹೆಜ್ಜೆ ಇಡಬೇಕು. ಯಾವುದೇ ವಿದ್ಯಾರ್ಹತೆ ಇದ್ದರೂ ಸಹ ಉದ್ಯೋಗ ಮೇಳದಲ್ಲಿ ಭಾಗಿಯಾಗಬಹುದು. ಸ್ಕಿಲ್ ಕನೆಕ್ಟ್ ಪೋರ್ಟಲ್ (skillconnect. http://Kaushalkar.com) ಮೂಲಕ ನೋಂದಣಿ ಮಾಡಿಕೊಂಡು ತಮ್ಮ ಆಯ್ಕೆಯ ಕಂಪೆನಿಗಳ ಸಂದರ್ಶನದಲ್ಲಿ ಭಾಗಿಯಾಗಬಹುದು. ಕಲಬುರಗಿಯ ಯುವ ಜನರು ತಮ್ಮ ಭವಿಷ್ಯ ರೂಪಿಸಿಕೊಳ್ಳಲು ಈ ಉತ್ತಮ ವೇದಿಕೆಯನ್ನು ಸದುಪಯೋಗಪಡಿಸಿಕೊಳ್ಳಬೇಕು.

Read More

ಬೆಂಗಳೂರು : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಸಖಿ ಒನ್ ಸ್ಟಾಪ್ ಸೆಂಟರ್ ನಲ್ಲಿ ಕಾರ್ಯನಿರ್ವಹಿಸಲು ಹೊರ ಗುತ್ತಿಗೆ ಆಧಾರ ಮೇಲೆ ಘಟಕ ಆಡಳಿತಾಧಿಕಾರಿಗಳು 02 ಹುದ್ದೆ, ಆಪ್ತ ಸಮಾಲೋಚಕರು 01 ಹುದ್ದೆ, ಸಮಾಜ ಸೇವಾ ಕಾರ್ಯಕರ್ತರು / ಕೇಸ್ ವರ್ಕರ್ 07 ಹುದ್ದೆ, ಕಾನೂನು ಸಲಹೆಗಾರರು, ವಕೀಲರು (ಪ್ಯಾರಾ ಲೀಗಲ್ ) 09 ಹುದ್ದೆ ಮತ್ತು ವಿವಿದೋದ್ದೇಶ ಸ್ವಚ್ಛತಗಾರರು / ಸೆಕ್ಯೂರಿಟಿ 07 ಹುದ್ದೆಗಳಿಗೆ ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ವಿದ್ಯಾರ್ಹತೆ : ಘಟಕ ಆಡಳಿತಾಧಿಕಾರಿಗಳು ಹುದ್ದೆಗೆ ಎಂ.ಎಸ್ ಡಬ್ಲೂ., ಸ್ನಾತಕೋತ್ತರ ಕಾನೂನು ಪದವಿ., ಎಂ.ಎಸ್.ಸಿ ಹೋಮ್ ಸೈನ್ಸ್ (ಹ್ಯೂಮನ್ ಡೆವೆಲಪ್ ಮೆಂಟ್ & ಫ್ಯಾಮಿಲಿರಿಲೇಷನ್) ಎಂ.ಎಸ್.ಸಿ. ಸೈಕಾಲಜಿ., ಎಂ.ಎಸ್.ಸಿ ಸೈಕಿಯಾಟ್ರಿ ಹೊಂದಿರಬೇಕು. ಆಪ್ತ ಸಮಾಲೋಚಕರ ಹುದ್ದೆಗೆ ಎಂ.ಎಸ್ ಡಬ್ಲೂ., ಎಂ.ಎಸ್.ಸಿ ಹೋಮ್ ಸೈನ್ಸ್ (ಹ್ಯೂಮನ್ ಡೆವೆಲಪ್ ಮೆಂಟ್ & ಫ್ಯಾಮಿಲಿರಿಲೇಷನ್) ಎಂ.ಎಸ್.ಸಿ. ಸೈಕಾಲಜಿ., ಎಂ.ಎಸ್.ಸಿ ಸೈಕಿಯಾಟ್ರಿ ಪದವಿ ಹೊಂದಿರಬೇಕು. ಸಮಾಜ ಸೇವಾ ಕಾರ್ಯಕರ್ತರ /…

Read More

ಬೆಂಗಳೂರು : ಬೆಂಗಳೂರು : ವೃತ್ತಿಪರ ಪದವಿ ಕೋರ್ಸ್ ಪ್ರವೇಶಕ್ಕೆ ಏಪ್ರಿಲ್ 16, 17 ರಂದು ರಾಜ್ಯದ 775 ಪರೀಕ್ಷಾ ಕೇಂದ್ರಗಳಲ್ಲಿ ಸಿಇಟಿ ಪರೀಕ್ಷೆ ನಡೆಯಲಿದ್ದು, ಅಕ್ರಮ ತಡೆಗೆ ವೆಬ್ ಕಾಸ್ಟಿಂಗ್ ನಡೆಸಲಾಗುತ್ತದೆ. ವೃತ್ತಿಪರ ಕೋರ್ಸ್‍ಗಳ ಪ್ರವೇಶಕ್ಕಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವತಿಯಿಂದ ಇದೇ ಏಪ್ರಿಲ್ 16 ಮತ್ತು 17ರಂದು ಸಾಮಾನ್ಯ ಪ್ರವೇಶ ಪರೀಕ್ಷೆ ನಡೆಯಲಿದೆ. ಯಾವುದೇ ಪರೀಕ್ಷಾ ಅವ್ಯವಹಾರ ನಡೆಯದಂತೆ ಸೂಕ್ಷ್ಮವಾಗಿ, ಪಾರದರ್ಶಕವಾಗಿ ಪರೀಕ್ಷೆ ನಡೆಸುವಂತೆ ಸೂಚನೆ ನೀಡಲಾಗಿದೆ. ಏಪ್ರಿಲ್ 16ರಂದು ಬೆಳಿಗ್ಗೆ 10.30 ರಿಂದ 11.50 ರವರೆಗೆ ಭೌತಶಾಸ್ತ್ರ, ಮಧ್ಯಾಹ್ನ 2.30 ರಿಂದ 3.50 ರವರೆಗೆ ರಸಾಯನಶಾಸ್ತ್ರ ಹಾಗೂ ಏಪ್ರಿಲ್ 17ರಂದು ಬೆಳಿಗ್ಗೆ 10.30 ರಿಂದ ಮಧ್ಯಾಹ್ನ 11.50 ರವರೆಗೆ ಗಣಿತಶಾಸ್ತ್ರ, ಮಧ್ಯಾಹ್ನ 2.30 ರಿಂದ 3.50 ರವರೆಗೆ ಜೀವಶಾಸ್ತ್ರ ವಿಷಯದ ಪರೀಕ್ಷೆ ನಡೆಯಲಿದೆ. ಪರೀಕ್ಷಾ ಕೇಂದ್ರಗಳಿಗೆ ಪರೀಕ್ಷಾ ಪ್ರಾರಂಭವಾಗುವುದಕ್ಕಿಂತ ಒಂದು ಗಂಟೆ ಮೊದಲು ಹಾಗೂ ಪರೀಕ್ಷಾ ನಂತರ 30 ನಿಮಿಷಗಳು ಪೊಲೀಸ್ ಬಂದೋಬಸ್ತಿನ ಅವಶ್ಯಕತೆ ಇರುತ್ತದೆ. ಪರೀಕ್ಷಾ…

Read More