Author: kannadanewsnow57

2025-26 ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಜಿಲ್ಲೆಯಲ್ಲಿ ಇದುವರೆಗೂ ಒಟ್ಟು 291340 ಹೆ. ಕ್ಷೇತ್ರದಲ್ಲಿ ಬಿತ್ತನೆಯಾಗಿರುತ್ತದೆ. ಜಿಲ್ಲೆಯಾದ್ಯಂತ ಪೀಡೆ ಸರ್ವೇಕ್ಷಣಾ ಸಮೀಕ್ಷೆ ಕೈಗೊಂಡಿದ್ದು, ಮುಂಗಾರು ಮುಖ್ಯ ಬೆಳೆಗಳಾದ ಹೆಸರು, ಗೋವಿನಜೋಳ, ಶೇಂಗಾ, ಸೋಯಾಬಿನ್ ಇತ್ಯಾದಿಗಳಲ್ಲಿ ಕೀಟ ಅಥವಾ ರೋಗ ಬಾಧೆ ಕಂಡುಬಂದಿದ್ದು, ಈ ಬೆಳೆಗಳ ಸಂರಕ್ಷಣೆ ಅಗತ್ಯವಿರುವುದರಿಂದ ರೈತ ಬಾಂಧವರು ಬೆಳೆ ನಿರ್ವಹಣಾ ಕ್ರಮಗಳನ್ನು ಅನುಸರಿಸಲು ತಿಳಿಸಿದೆ. ಸೋಯಾ ಮತ್ತು ಅವರೆ ಸೋಯಾ ಅವರೆ ಬೆಳೆಯು 60 ರಿಂದ 70 ದಿವಸದ ಬೆಳೆಯಿದ್ದು ಸ್ಪೊಡಾಪ್ಟರಾ ಮತ್ತು ಹೆಲಿಕೋವರ್ಪಾ ಕೀಟಗಳ ಬಾಧೆಯು ಹೆಚ್ಚಾಗಿದ್ದು, ಎಲೆಗಳನ್ನು ತಿಂದು ಹಾನಿ ಮಾಡುವುದಲ್ಲದೆ ಎಳೆ ಕಾಯಿಗಳನ್ನು ಹಾನಿ ಮಾಡುತ್ತಿದೆ. ಕಾರಣ ಕೂಡಲೇ ನಿರ್ವಹನಾ ಕ್ರಮಗಳನ್ನು ಅನುಸರಿಸಬೇಕು. ನಿರ್ವಹಣೆ – ಎಲೆ ತಿನ್ನುವ ಕೀಡೆಗಳ ಹತೋಟಿಗೆ ಕ್ವಿನಾಲ್ಫಾಸ್ 25 ಇಸಿ ಅಥವಾ 0.5 ಮಿ.ಲೀ. ಲ್ಯಾಂಬ್ಡಾಸೈಲೋಥ್ರಿನ್ 5 ಇ.ಸಿ ಅಥವಾ 0.3 ಗ್ರಾಂ ಇಮಾಮೆಕ್ಟಿನ್ ಬೆಂಝೊಯೆಟ್ 5 ಎಸ್.ಜಿ ಅಥವಾ 0.5 ಮಿ.ಲೀ. ಫ್ಲೂಬೇಂಡಿಮೈಡ್ 20% ಡಬ್ಲೂಜಿ ಅಥವಾ…

Read More

ಬೆಂಗಳೂರು : ರಾಜ್ಯದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳನ್ನು ಪ್ರೌಢಶಾಲೆಗಳನ್ನಾಗಿ ಉನ್ನತೀಕರಣ ಮಾಡುವ ಕುರಿತು ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಮೇಲೆ ಓದಲಾದ ಕ್ರಮಾಂಕ (1)ರಲ್ಲಿ ಆಯುಕ್ತರು, ಶಾಲಾ ಶಿಕ್ಷಣ ಇಲಾಖೆ, ಇವರು 2025-26ನೇ ಸಾಲಿನ ಆಯವ್ಯಯ ಭಾಷಣದ ಕಂಡಿಕೆ-110ರಲ್ಲಿ ಘೋಷಿಸಿರುವಂತೆ 100 ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳನ್ನು ಪ್ರೌಢಶಾಲೆಗಳನ್ನಾಗಿ ಉನ್ನತೀಕರಿಸುವ ಸಂಬಂಧ ಸರ್ಕಾರಕ್ಕೆ ಪ್ರಸ್ತಾವನೆಯನ್ನು ಸಲ್ಲಿಸಿರುತ್ತಾರೆ. ಸದರಿ ಪ್ರಸ್ತಾವನೆಯನ್ನು ಪರಿಶೀಲಿಸಿ, ಉನ್ನತೀಕರಿಸಲು ಅರ್ಹವಿರುವ ಶಾಲೆಗಳ ಬಗ್ಗೆ ವರದಿ ಪಡೆದು ಉನ್ನತೀಕರಿಸಲು ಉದ್ದೇಶಿಸಿರುವ ಶಾಲೆಗಳಲ್ಲಿ 2025-26ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಎಷ್ಟು ಪ್ರಾಥಮಿಕ ಶಾಲೆಗಳನ್ನು ಉನ್ನತೀಕರಿಸಬೇಕೆಂಬ ಬಗ್ಗೆ ಸೂಕ್ತ ನಿರ್ಣಯ ಕೈಗೊಂಡು ಅರ್ಹ ಶಾಲೆಗಳ ಪಟ್ಟಿಯನ್ನು ತಯಾರಿಸಿ (KPS ಶಾಲೆಗಳ ಪಟ್ಟಿಯಲ್ಲಿರುವ ಶಾಲೆಗಳನ್ನು ಹೊರತುಪಡಿಸಿ) ಸಲ್ಲಿಸುವಂತೆ ಹಾಗೂ ಮೂಲಭೂತ ಸೌಲಭ್ಯಗಳ ವಿವರ, 8 ನೇ ತರಗತಿಯಲ್ಲಿ ವಿಧ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳ ವಿವರ, 2025-26ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಉನ್ನತೀಕರಿಸುವ ಶಾಲೆಗಳಿಗೆ ಅವಶ್ಯವಿರುವ ಆವರ್ತಕ ಹಾಗೂ ಅನಾವರ್ತಕ ವೆಚ್ಚಗಳ ವಿವರ ಮತ್ತು…

Read More

ಪ್ರತಿಯೊಬ್ಬ ಅರ್ಹ ಮಗುವಿಗೂ ಲಸಿಕೆ ಹಾಕಿಸಲು ಕ್ರಮ ಕೈಗೊಳ್ಳಬೇಕು ಎಂದು ಕೊಪ್ಪಳ ಜಿಲ್ಲಾಧಿಕಾರಿ ಡಾ. ಸುರೇಶ ಬಿ. ಇಟ್ನಾಳ ಹೇಳಿದರು. ಅವರು ಸೋಮವಾರ ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಹಮ್ಮಿಕೊಂಡಿದ್ದ ರಾಷ್ಟ್ರೀಯ ಸಾರ್ವತ್ರಿಕ ಲಸಿಕಾ ಕಾರ್ಯಕ್ರಮದ ಜಿಲ್ಲಾ ಮಟ್ಟದ ಜಾಗೃತ ಸಮಿತಿಯ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದರು. ರಾಷ್ಟ್ರೀಯ ಆರೋಗ್ಯ ಅಭಿಯಾನದ ರಾಷ್ಟ್ರೀಯ ಸಾರ್ವತ್ರಿಕ ಲಸಿಕಾ ಕಾರ್ಯಕ್ರಮದಡಿಯಲ್ಲಿ ಸಾರ್ವತ್ರಿಕ ಲಸಿಕಾ ಕಾರ್ಯಕ್ರಮವನ್ನು ನಡೆಸಲಾಗುತ್ತಿದೆ. ಮಗು ಜನಿಸಿದ 24 ಗಂಟೆಯೊಳಗೆ ಹಾಕಬೇಕಾದ ಕಡ್ಡಾಯ ಲಸಿಕೆಗಳು, ಮಗುವಿನ ಬೆಳವಣಿಗೆಯ ವಿವಿಧ ಹಂತಗಳಲ್ಲಿ ಹಾಕಬೇಕಾದ ಲಸಿಕೆಗಳಿಂದ ಜಿಲ್ಲೆಯ ಯಾವುದೇ ಮಗು ವಂಚಿತರಾಗಬಾರದು. ಈ ಹಿನ್ನೆಲೆಯಲ್ಲಿ ಲಸಿಕೆಯಿಂದ ಮಗುವಿಗೆ ಆಗುವ ಆರೋಗ್ಯ ಪ್ರಯೋಜನೆಗಳು ಮತ್ತು ಲಸಿಕೆ ಹಾಕಿಸದೇ ಇರುವುದರಿಂದ ಆಗುವ ತೊಂದರೆಗಳು ಸೇರಿದಂತೆ ನಾನಾ ವಿಷಯಗಳ ಕುರಿತು ಎಲ್ಲಾ ತಾಯಂದಿರಿಗೆ ಗೊತ್ತಿರಬೇಕು. ಈ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ನೀಡಬೇಕು. ಮಗುವಿನ ಆರೋಗ್ಯದ ಬಗ್ಗೆ ಅತಿ ಹೆಚ್ಚಿನ ಕಾಳಜಿ ವಹಿಸಲು ಮತ್ತು…

Read More

ಬೆಂಗಳೂರು : ನ್ಯಾಯಮೂರ್ತಿ ಹೆಚ್.ಎನ್. ನಾಗಮೋಹನ್ ದಾಸ್ ಏಕ ಸದಸ್ಯ ವಿಚಾರಣಾ ಆಯೋಗದ ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆ-2025 ರಲ್ಲಿ ಗಣತಿ ಕಾರ್ಯನಿರ್ವಹಿಸಿದ ಸಮೀಕ್ಷಾದಾರರಿಗೆ ಗೌರವಧನ ಪಾವತಿಸುವ ಕುರಿತು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಉಲ್ಲೇಖ (1) ರ ಸರ್ಕಾರದ ಆದೇಶಗಳಲ್ಲಿ ಕರ್ನಾಟಕ ರಾಜ್ಯದಲ್ಲಿ ಶಿಕ್ಷಣ ಮತ್ತು ಸರ್ಕಾರಿ ಸೇವೆಗಳಲ್ಲಿ ಪರಿಶಿಷ್ಟ ಜಾತಿಯ ವಿವಿಧ ಉಪ ಜಾತಿಗಳಿಗೆ ಸೇರಿದವರ ಪ್ರಾತಿನಿದ್ಯತೆ ಕುರಿತು Empirical Data ಪಡೆದು ಪರಿಶಿಷ್ಟ ಜಾತಿಗಳಲ್ಲಿ ಒಳ ಮೀಸಲಾತಿ ಬಗ್ಗೆ ಸೂಕ್ತ ಶಿಫಾರಸ್ಸುಗಳೊಂದಿಗೆ ವರದಿ ಸಲ್ಲಿಸಲು ನ್ಯಾಯಮೂರ್ತಿ ಹೆಚ್. ಎನ್. ನಾಗಮೋಹನ್ ದಾಸ್ ಏಕ ಸದಸ್ಯ ವಿಚಾರಣಾ ಆಯೋಗವನ್ನು ರಚಿಸಲಾಗಿರುತ್ತದೆ. ಈ ಸಂಬಂಧ ಸದರಿ ಆಯೋಗವು ದಿನಾಂಕ:27-03-2025 ರಂದು ಸನ್ಮಾನ್ಯ ಮುಖ್ಯಮಂತ್ರಿಗಳಿಗೆ ಮಧ್ಯಂತರ ವರದಿಯನ್ನು ಸಲ್ಲಿಸಿರುತ್ತದೆ. ಸದರಿ ಮಧ್ಯಂತರ ವರದಿಯಲ್ಲಿ ಕರ್ನಾಟಕ ರಾಜ್ಯದಲ್ಲಿರುವ ಪರಿಶಿಷ್ಟ ಜಾತಿ ಕುಟುಂಬಗಳ ಮನೆ-ಮನೆ ಸಮೀಕ್ಷೆ ನಡೆಸಲು ಶಿಫಾರಸ್ಸು ಮಾಡಲಾಗಿರುತ್ತದೆ. ಗೌರವಾನ್ವಿತ ಹೆಚ್. ಎನ್. ನಾಗಮೋಹನ್ ದಾಸ್ ಏಕ ಸದಸ್ಯ ವಿಚಾರಣಾ ಆಯೋಗದಿಂದ ಪರಿಶಿಷ್ಟ…

Read More

ಬೆಂಗಳೂರು : ಹೊಸ `BPL’ ರೇಷನ್ ಕಾರ್ಡ್ ನಿರೀಕ್ಷೆಯಲ್ಲಿದ್ದವರಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, ಪರಿಷ್ಕರಣೆ ಬಳಿಕ ಹೊಸ ಕಾರ್ಡ್ ವಿತರಿಸಲಾಗುವುದು ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವರಾದ ಕೆ.ಹೆಚ್. ಮುನಿಯಪ್ಪ ತಿಳಿಸಿದ್ದಾರೆ. ವಿಧಾನ ಪರಿಷತ್ ನಲ್ಲಿ ಪ್ರತಾಪ್ ಸಿಂಹ ನಾಯಕ್ ಕೆ. ಮತ್ತು ಡಾ. ಯತೀಂದ್ರ ಎಸ್. ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಪರಿಷ್ಕರಣೆ ಕಾರ್ಯ ಪೂರ್ಣಗೊಂಡ ತಕ್ಷಣ ಅರ್ಹ ಫಲಾನುಭವಿಗಳಿಗೆ ಹೊಸ ಬಿಪಿಎಲ್ ಪಡಿತರ ಕಾರ್ಡ್ಗಳನ್ನು ವಿತರಿಸಲಾಗುವುದು. ಈ ಪ್ರಕ್ರಿಯೆಯಲ್ಲಿ ಎಲ್ಲರ ಸಹಕಾರ ಅಗತ್ಯ ಎಂದರು. ಕಳೆದ ಸರ್ಕಾರಗಳಿಂದ ಬಾಕಿ ಉಳಿದ ಅರ್ಜಿಗಳನ್ನು ಹಂತ ಹಂತವಾಗಿ ಪರಿಶೀಲನೆ ನಡೆಸಲಾಗುತ್ತಿದೆ. ನಮ್ಮ ರಾಜ್ಯದಲ್ಲಿ ಶೇ.75 ರಿಂದ 80ರಷ್ಟು ಜನರು ಬಿಪಿಎಲ್ ಕಾರ್ಡ್ ಹೊಂದಿದ್ದಾರೆ – ಅರ್ಹರಿಗೇ ಸೌಲಭ್ಯ ಕಲ್ಪಿಸಲು ಕ್ರಮ ಕೈಗೊಳ್ಳಲಾಗುವುದು. ಪರಿಷ್ಕರಣೆ ಪ್ರಕ್ರಿಯೆಯಲ್ಲಿ ಪಾರದರ್ಶಕತೆ ಹಾಗೂ ನ್ಯಾಯವನ್ನು ಸರ್ಕಾರ ಖಚಿತಪಡಿಸುತ್ತದೆ ಎಂದು ತಿಳಿಸಿದ್ದಾರೆ. 1.28 ಕೋಟಿ ಕಾರ್ಡ್ ಗೆ ಅಕ್ಕಿ ನೀಡಲಾಗುತ್ತಿದೆ. 3.27 ಲಕ್ಷ ಬಿಪಿಎಲ್ ಕಾರ್ಡ್…

Read More

ಉತ್ತರ ಪ್ರದೇಶದ ಝಾನ್ಸಿಯಲ್ಲಿ ಗ್ರಾಮಸ್ಥರು ದೈತ್ಯ ಹೆಬ್ಬಾವನ್ನು ಕ್ರೂರವಾಗಿ ಕೊಂದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ರೈತನೊಬ್ಬನ ಮೇಕೆಯನ್ನು ಹೆಬ್ಬಾವಿನಿಂದ ರಕ್ಷಿಸಲು ಗ್ರಾಮಸ್ಥರು ಈ ದೈತ್ಯ ಹಾವನ್ನು ಕೊಂದಿದ್ದಾರೆ ಎಂದು ವರದಿಯಾಗಿದೆ. ಗ್ರಾಮಸ್ಥರು ಸತ್ತ ಮೇಕೆ ಮತ್ತು ಹೆಬ್ಬಾವನ್ನು ರಸ್ತೆಯಲ್ಲಿ ಎಳೆದುಕೊಂಡು ಹೋಗುತ್ತಿರುವ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ಕಾಣಿಸಿಕೊಂಡಿದೆ. ರಕ್ಸಾ ಪೊಲೀಸ್ ಠಾಣೆ ವ್ಯಾಪ್ತಿಯ ಪುನವಾಲಿ ಗ್ರಾಮದಲ್ಲಿ ಈ ಘಟನೆ ನಡೆದಿದೆ ಎಂದು ವರದಿಯಾಗಿದೆ. ಸುಮಾರು 15 ರಿಂದ 20 ಅಡಿ ಉದ್ದದ ದೈತ್ಯ ಹೆಬ್ಬಾವು ಹೊಲದಲ್ಲಿ ಮೇಕೆಯ ಮೇಲೆ ದಾಳಿ ಮಾಡಿ ಅದನ್ನು ನುಂಗಿದೆ. ವರದಿಗಳ ಪ್ರಕಾರ, ಮುಕುಂದಿ ರಾಜ್ಪುರ ನಿವಾಸಿಯ ಮಗ ಜಸ್ವಂತ್ ರಜಪೂತ್ (35) ರಾಜ್ಘಾಟ್ ಕಾಲುವೆಯ ಬಳಿಯ ಹೊಲದಲ್ಲಿ ತನ್ನ ಮೇಕೆಗಳು ಮತ್ತು ಇತರ ದನಗಳನ್ನು ಮೇಯಿಸುತ್ತಿದ್ದ. ಪ್ರಾಣಿಗಳು ಮೇಯುತ್ತಿದ್ದ ಪ್ರದೇಶವು ಪೊದೆಗಳಿಂದ ಆವೃತವಾಗಿತ್ತು. ಮೇಕೆಯ ಜೋರಾದ ಕಿರುಚಾಟ ಕೇಳಿದ ಜಸ್ವಂತ್ ಅಲ್ಲಿಗೆ ಧಾವಿಸಿದರು ಮತ್ತು ಹಾವು ಮೇಕೆಯನ್ನು ಹಿಡಿದು ನುಂಗಲು ಪ್ರಯತ್ನಿಸುತ್ತಿರುವುದನ್ನು ನೋಡಿ ಆಶ್ಚರ್ಯ…

Read More

ಧಾರವಾಡ : ಧಾರವಾಡ ಜಿಲ್ಲೆಯಲ್ಲಿ ಕಳೆದ ಎರಡು ಮೂರು ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಮಕ್ಕಳ ಆರೋಗ್ಯ ಹಾಗೂ ಸುರಕ್ಷತೆ ದೃಷ್ಟಿಯಿಂದ ನಾಳೆ ಆಗಸ್ಟ್ 19 ರಂದು ಜಿಲ್ಲೆಯ ಎಲ್ಲ ಅಂಗನವಾಡಿ ಕೆಂದ್ರಗಳಿಗೆ, ಪ್ರಾಥಮಿಕ ಶಾಲೆಗಳಿಗೆ, ಪ್ರೌಢಶಾಲೆಗಳಿಗೆ ಮತ್ತು ಪಿಯು ಕಾಲೇಜುಗಳಿಗೆ ಒಂದು ದಿನದ ರಜೆ ಘೋಷಿಸಿ ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಇಂದು ಆದೇಶ ಹೊರಡಿಸಿದ್ದಾರೆ. ಈ ಆಗಸ್ಟ್ 19 ರ ರಜಾ ದಿನವನ್ನು ಮುಂದಿನ ಸಾರ್ವತ್ರಿಕ ರಜಾ ದಿನಗಳಲ್ಲಿ ವರ್ಗಗಳನ್ನು ನಡೆಸುವ ಮೂಲಕ ಹೊಂದಾಣಿಕೆ ಮಾಡಲು ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರಿಗೆ ಆದೇಶದಲ್ಲಿ ಅವರು ನಿರ್ದೇಶಿಸಿದ್ದಾರೆ.

Read More

ಬೆಂಗಳೂರು : ಸಿಎಂ ಸಿದ್ದರಾಮಯ್ಯ ವಿರುದ್ಧ ಕೊಲೆ ಆರೋಪ ಮಾಡಿದ್ದ ಮಹೇಶ್ ತಿಮರೋಡಿ ವಿರುದ್ಧ ಪ್ರಕರಣ ದಾಖಲಿಸುವಂತೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಆದೇಶಿಸಿದ್ದಾರೆ. ಧರ್ಮಸ್ಥಳದ ಸೌಜನ್ಯ ಪರ ಹೋರಾಟದಲ್ಲಿ ಗುರುತಿಸಿಕೊಂಡಿರುವ ಮಹೇಶ್ ಶೆಟ್ಟಿ ತಿಮರೋಡಿ ಸಿಎಂ ಸಿದ್ದರಾಮಯ್ಯ 24 ಕೊಲೆ ಮಾಡಿದ್ದಾರೆ ಎಂಬ ಹೇಳಿಕೆ ನೀಡಿದ್ದರು. ಇಂದು ಸದನದಲ್ಲಿ ತಿಮ್ಮರೋಡಿ ಹೇಳಿಕೆ ಬಗ್ಗೆ ಚರ್ಚೆ ನಡೆಸಿದ್ದು, ಗೃಹ ಸಚಿವ ಡಾ.ಜಿ. ಪರಮೇಶ್ವರ್ ಅವರು ದೂರು ದಾಖಲಿಸುವಂತೆ ಪೊಲೀಸರಿಗೆ ಅದೇಶಿಸಿದ್ದಾರೆ.

Read More

ಬೆಂಗಳೂರು : ಸಿಎಂ ಸಿದ್ದರಾಮಯ್ಯ ವಿರುದ್ಧ ಕೊಲೆ ಆರೋಪ ಮಾಡಿದ್ದ ಮಹೇಶ್ ತಿಮರೋಡಿ ವಿರುದ್ಧ ಪ್ರಕರಣ ದಾಖಲಿಸುವಂತೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಆದೇಶಿಸಿದ್ದಾರೆ. ಧರ್ಮಸ್ಥಳದ ಸೌಜನ್ಯ ಪರ ಹೋರಾಟದಲ್ಲಿ ಗುರುತಿಸಿಕೊಂಡಿರುವ ಮಹೇಶ್ ಶೆಟ್ಟಿ ತಿಮರೋಡಿ ಸಿಎಂ ಸಿದ್ದರಾಮಯ್ಯ 24 ಕೊಲೆ ಮಾಡಿದ್ದಾರೆ ಎಂಬ ಹೇಳಿಕೆ ನೀಡಿದ್ದರು. ಇಂದು ಸದನದಲ್ಲಿ ತಿಮ್ಮರೋಡಿ ಹೇಳಿಕೆ ಬಗ್ಗೆ ಚರ್ಚೆ ನಡೆಸಿದ್ದು, ಗೃಹ ಸಚಿವ ಡಾ.ಜಿ. ಪರಮೇಶ್ವರ್ ಅವರು ದೂರು ದಾಖಲಿಸುವಂತೆ ಪೊಲೀಸರಿಗೆ ಅದೇಶಿಸಿದ್ದಾರೆ.

Read More

ನವದೆಹಲಿ : ಸ್ವಾತಂತ್ರ್ಯ ದಿನಾಚರಣೆಯಂದು ಪ್ರಧಾನಿ ನರೇಂದ್ರ ಮೋದಿ ಸಾರ್ವಜನಿಕರನ್ನು ಉದ್ದೇಶಿಸಿ ಭಾಷಣ ಮಾಡಿದರು. ಈ ಭಾಷಣದಲ್ಲಿ, ಅವರು ಸಾಮಾನ್ಯ ಜನರಿಗೆ ಹಲವು ದೊಡ್ಡ ಘೋಷಣೆಗಳನ್ನು ಮಾಡಿದರು. ಇವುಗಳಲ್ಲಿ ದೊಡ್ಡ ಘೋಷಣೆಯೆಂದರೆ ಅಕ್ಟೋಬರ್‌ನಲ್ಲಿ ಜಿಎಸ್‌ಟಿಯಲ್ಲಿ ಹೊಸ ಸುಧಾರಣೆಗಳನ್ನು ಜಾರಿಗೆ ತರಲಾಗುವುದು. ಜಿಎಸ್‌ಟಿ ಸುಧಾರಣೆಗಳು: ಏನು ಬದಲಾಗುತ್ತದೆ? ವರದಿಗಳ ಪ್ರಕಾರ, ಜಿಎಸ್‌ಟಿಯಲ್ಲಿನ ಸುಧಾರಣೆಯಿಂದಾಗಿ ಅನೇಕ ದಿನನಿತ್ಯದ ವಸ್ತುಗಳು ಅಗ್ಗವಾಗುತ್ತವೆ. ಅನೇಕ ಉತ್ಪನ್ನಗಳ ಮೇಲೆ ತೆರಿಗೆ ಶೇಕಡಾ 10 ರಷ್ಟು ಕಡಿಮೆಯಾಗುತ್ತದೆ. ಆದಾಗ್ಯೂ, ಸರ್ಕಾರ ಇನ್ನೂ ಅದನ್ನು ದೃಢಪಡಿಸಿಲ್ಲ.ಅದೇ ಸಮಯದಲ್ಲಿ, ಜಿಎಸ್‌ಟಿ ತೆರಿಗೆ ಸ್ಲ್ಯಾಬ್‌ನಲ್ಲಿಯೂ ಬದಲಾವಣೆ ಇರುತ್ತದೆ. ಪ್ರಸ್ತುತ, ನಾಲ್ಕು ಜಿಎಸ್‌ಟಿ ತೆರಿಗೆ ಸ್ಲ್ಯಾಬ್‌ಗಳಿವೆ – 5 ಪ್ರತಿಶತ ತೆರಿಗೆ (ದೈನಂದಿನ ಉತ್ಪನ್ನಗಳು) 12 ಪ್ರತಿಶತ ತೆರಿಗೆ (ಪ್ರಮಾಣಿತ ಸರಕುಗಳು) 18 ಪ್ರತಿಶತ ತೆರಿಗೆ (ಎಲೆಕ್ಟ್ರಾನಿಕ್ ಉತ್ಪನ್ನಗಳು) ಮತ್ತು 28 ಪ್ರತಿಶತ ತೆರಿಗೆ (ಐಷಾರಾಮಿ ಉತ್ಪನ್ನಗಳು). ಜಿಎಸ್‌ಟಿಯಲ್ಲಿನ ಸುಧಾರಣೆಯೊಂದಿಗೆ, ಎಲ್ಲಾ ಉತ್ಪನ್ನಗಳನ್ನು ಈಗ ಎರಡು ತೆರಿಗೆ ಸ್ಲ್ಯಾಬ್‌ಗಳಾಗಿ ವಿಂಗಡಿಸಲಾಗಿದೆ, 5 ಪ್ರತಿಶತ ತೆರಿಗೆ ಮತ್ತು…

Read More