Subscribe to Updates
Get the latest creative news from FooBar about art, design and business.
Author: kannadanewsnow57
ಬೆಂಗಳೂರು : ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿ ವತಿಯಿಂದ ಪಿಎಂಎವೈ ಯೋಜನೆಯಡಿಯಲ್ಲಿ ರಾಜ್ಯಾದ್ಯಂತ ಪ್ರಗತಿಯಲ್ಲಿರುವ 1,80,253 ಮನೆಗಳ ಕಾಮಗಾರಿ ಯನ್ನು 2026 ಡಿಸೆoಬರ್ ಒಳಗೆ ಪೂರ್ಣಗೊಳಿಸಲಾಗುವುದು ಎಂದು ವಸತಿ ಸಚಿವ ಜಮೀರ್ ಅಹಮದ್ ಖಾನ್ ತಿಳಿಸಿದ್ದಾರೆ. ಶಾಸಕ ಸಿದ್ದು ಪಾಟೀಲ್ ಅವರ ಪ್ರೆಶ್ನೆಗೆ ಉತ್ತರಿಸಿದ ಸಚಿವರು, ಫಲಾನುಭವಿಗಳ ವಂತಿಗೆ ಪಾವತಿ ಆಗದ ಕಾರಣ ಯೋಜನೆಗೆ ಸಮಸ್ಯೆ ಉಂಟಾಗಿತ್ತು ಮುಖ್ಯಮಂತ್ರಿ ಯವರಿಗೆ ಸಮಸ್ಯೆ ಮನವರಿಕೆ ಮಾಡಿಕೊಟ್ಟು ಬಡವರ ಮನೆಗೆ ಸರ್ಕಾರವೇ ಫಲಾನುಭವಿಗಳ ವಂತಿಗೆ ಪಾವತಿಸುವ ಮಹತ್ವದ ತೀರ್ಮಾನ ಕೈಗೊಳ್ಳಲಾಯಿತು. 500ಕೋಟಿ ರೂ. ಬಿಡುಗಡೆ ನಂತರ ಮೊದಲ ಹಂತದಲ್ಲಿ 36789 ಮನೆ ಹಂಚಿಕೆ ಮಾಡಿ ಎರಡನೇ ಹಂತದಲ್ಲಿ 40345 ಮನೆ ಹಂಚಿಕೆಗೆ ಸಿದ್ಧತೆ ನಡೆದಿದೆ ಎಂದು ತಿಳಿಸಿದರು. ಮುಖ್ಯಮಂತ್ರಿ ಯವರು2026 ರೊಳಗೆ ಪೂರ್ಣ ಗೊಳಿಸಲು ಸೂಚಿಸಿದ್ದು ಅದರಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು. ಅರವಿಂದ್ ಬೆಲ್ಲದ್ ಅವರ ಉಪ ಪ್ರೆಶ್ನೆಗೆ ಉತ್ತರಿಸಿದ ಸಚಿವರು, ರಾಜೀವ್ ಗಾಂಧಿ ವಸತಿ ನಿಗಮ ವತಿಯಿಂದ ಬಡ ಕುಟುಂಬ ಗಳಿಗೆ…
ಬೆಂಗಳೂರು : ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿ ವತಿಯಿಂದ ಪಿಎಂಎವೈ ಯೋಜನೆಯಡಿಯಲ್ಲಿ ರಾಜ್ಯಾದ್ಯಂತ ಪ್ರಗತಿಯಲ್ಲಿರುವ 1,80,253 ಮನೆಗಳ ಕಾಮಗಾರಿ ಯನ್ನು 2026 ಡಿಸೆoಬರ್ ಒಳಗೆ ಪೂರ್ಣಗೊಳಿಸಲಾಗುವುದು ಎಂದು ವಸತಿ ಸಚಿವ ಜಮೀರ್ ಅಹಮದ್ ಖಾನ್ ತಿಳಿಸಿದ್ದಾರೆ. ಶಾಸಕ ಸಿದ್ದು ಪಾಟೀಲ್ ಅವರ ಪ್ರೆಶ್ನೆಗೆ ಉತ್ತರಿಸಿದ ಸಚಿವರು, ಫಲಾನುಭವಿಗಳ ವಂತಿಗೆ ಪಾವತಿ ಆಗದ ಕಾರಣ ಯೋಜನೆಗೆ ಸಮಸ್ಯೆ ಉಂಟಾಗಿತ್ತು ಮುಖ್ಯಮಂತ್ರಿ ಯವರಿಗೆ ಸಮಸ್ಯೆ ಮನವರಿಕೆ ಮಾಡಿಕೊಟ್ಟು ಬಡವರ ಮನೆಗೆ ಸರ್ಕಾರವೇ ಫಲಾನುಭವಿಗಳ ವಂತಿಗೆ ಪಾವತಿಸುವ ಮಹತ್ವದ ತೀರ್ಮಾನ ಕೈಗೊಳ್ಳಲಾಯಿತು. 500ಕೋಟಿ ರೂ. ಬಿಡುಗಡೆ ನಂತರ ಮೊದಲ ಹಂತದಲ್ಲಿ 36789 ಮನೆ ಹಂಚಿಕೆ ಮಾಡಿ ಎರಡನೇ ಹಂತದಲ್ಲಿ 40345 ಮನೆ ಹಂಚಿಕೆಗೆ ಸಿದ್ಧತೆ ನಡೆದಿದೆ ಎಂದು ತಿಳಿಸಿದರು. ಮುಖ್ಯಮಂತ್ರಿ ಯವರು2026 ರೊಳಗೆ ಪೂರ್ಣ ಗೊಳಿಸಲು ಸೂಚಿಸಿದ್ದು ಅದರಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು. ಅರವಿಂದ್ ಬೆಲ್ಲದ್ ಅವರ ಉಪ ಪ್ರೆಶ್ನೆಗೆ ಉತ್ತರಿಸಿದ ಸಚಿವರು, ರಾಜೀವ್ ಗಾಂಧಿ ವಸತಿ ನಿಗಮ ವತಿಯಿಂದ ಬಡ ಕುಟುಂಬ ಗಳಿಗೆ…
ಬೆಂಗಳೂರು : ಉತ್ತರಪ್ರದೇಶದ ಶಿವಸೇನೆಯ ಮಾಜಿ ಶಾಸಕನ ವಿರುದ್ಧ ಅತ್ಯಾಚಾರ ಆರೋಪ ಕೇಳಿಬಂದಿದ್ದು, ಬೆಂಗಳೂರಿನ ಕೆಂಪೇಗೌಡ ಏರ್ ಪೋರ್ಟ್ ಠಾಣೆಯಲ್ಲಿ ಎಫ್ ಐ ಆರ್ (FIR) ದಾಖಲಾಗಿದೆ. ಮಾಜಿ ಶಾಸಕ ಭಗವಾನ್ ಶರ್ಮಾ ವಿರುದ್ಧ ಈ ಆರೋಪ ಕೇಳಿಬಂದಿದೆ. 40 ವರ್ಷದ ಸಂತ್ರಸ್ತ ಮಹಿಳೆ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಾಗಿದೆ. ರಿಜಿಸ್ಟಾರ್ ಮದುವೆ ಆಗುವುದಾಗಿ ನಂಬಿಸಿ ಮಹಿಳೆಯನ್ನು ಏರ್ ಪೋರ್ಟ್ ಹೋಟೆಲ್ ಗೆ ಕರೆಸಿಕೊಂಡು ಅತ್ಯಾಚಾರ ಎಸಗಲಾಗಿದೆ. ಖಾಸಗಿ ವಿಡಿಯೋ ಇಟ್ಟುಕೊಂಡು ಹೆದರಿಸಿ ಕೊಲೆ ಬೆದರಿಕೆ ಹಾಕಿದ್ದಾರೆ ಎಂದು ಮಹಿಳೆ ಆರೋಪಿಸಿದ್ದಾರೆ. ಚಿತ್ರದುರ್ಗ, ಬೆಂಗಳೂರಿನಲ್ಲಿ ಮಹಿಳೆ ಮೇಲೆ ಅತ್ಯಾಚಾರ ಎಸಗಿರುವ ಮಾಜಿ ಶಾಸಕ ನಂತರ ಖಾಸಗಿ ವಿಡಿಯೋ ಇಟ್ಟುಕೊಂಡು ಬ್ಲ್ಯಾಕ್ ಮೇಲ್ ಮಾಡಿರುವ ಆರೋಪ ಕೇಳಿಬಂದಿದೆ. ಈ ಸಂಬಂಧ ಕೆಂಪೇಗೌಡ ಏರ್ ಪೋರ್ಟ್ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ.
ಬೆಂಗಳೂರು : ಇಂದು ಬೆಂಗಳೂರಿನ ನೂತನ ಹೆಬ್ಬಾಳ್ ಫ್ಲೈಓವರ್ ಉದ್ಘಾಟಿಸಲಾಗಿದ್ದು, ಈ ವೇಳೆ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ರೋಡ್ಕಿಂಗ್ ಬೈಕ್ ಸವಾರಿ ಮಾಡಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಡಿಸಿಎಂ ಡಿಕೆಶಿ, ಹೆಬ್ಬಾಳ ಮೇಲ್ಸೇತುವೆಯಲ್ಲಿ ಯೆಜ್ಡಿ ರೋಡ್ಕಿಂಗ್ ಬೈಕ್ ಸವಾರಿ ಮಾಡುವ ಮೂಲಕ ಕಾಲೇಜು ದಿನಗಳನ್ನು ಮೆಲುಕು ಹಾಕಿದೆ. ಬೆಂಗಳೂರಿನ ನಾಗರಿಕರೇ, ಜಾಗತಿಕವಾಗಿ ಗುರುತಿಸಿಕೊಂಡಿರುವ ನಮ್ಮ ಬೆಂಗಳೂರು ನಗರಕ್ಕೆ ಹೊಸರೂಪವನ್ನು ನೀಡಲು ನಾವು ಬದ್ಧರಿದ್ದೇವೆ. ಹೆಬ್ಬಾಳ ಜಂಕ್ಷನ್ನಲ್ಲಿ ಕೆ.ಆರ್.ಪುರಂ ಕಡೆಯಿಂದ ಮೇಖ್ರಿ ವೃತ್ತದ ಕಡೆಗೆ ಸಂಚರಿಸಲು ನಿರ್ಮಿಸಿರುವ ಮೇಲ್ಸೇತುವೆಯನ್ನು ಇಂದು ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯ ಅವರೊಂದಿಗೆ ಲೋಕಾರ್ಪಣೆಗೊಳಿಸಲಾಯಿತು. ಇಂದಿನಿಂದ ಹೆಬ್ಬಾಳದ ಹೊಸ ಮೇಲ್ಸೇತುವೆ ರ್ಯಾಂಪ್ ಸಾರ್ವಜನಿಕರ ವಾಹನಗಳ ಸಂಚಾರಕ್ಕೆ ಮುಕ್ತವಾಗಿದೆ. 80 ಕೋಟಿ ರೂ. ವೆಚ್ಚದಲ್ಲಿ 700 ಮೀಟರ್ ಉದ್ದದ ಹೆಬ್ಬಾಳ ಫ್ಲೈಓವರ್ ನಿರ್ಮಾಣದಿಂದ ಹೆಬ್ಬಾಳದ ಟ್ರಾಫಿಕ್ ದಟ್ಟಣೆ ಶೇಕಡಾ 30ರಷ್ಟು ನಿವಾರಣೆಯಾಗುವ ನಿರೀಕ್ಷೆ ಇದೆ ಎಂದು ಹೇಳಿದ್ದಾರೆ. https://twitter.com/ANI/status/1957330050707042671?ref_src=twsrc%5Etfw%7Ctwcamp%5Etweetembed%7Ctwterm%5E1957330050707042671%7Ctwgr%5E43e92f746518ae19932797d6b5146936d752e150%7Ctwcon%5Es1_c10&ref_url=https%3A%2F%2Fkannadadunia.com%2Fdcm-d-k-shivakumar-rides-bike-on-hebbals-new-flyover-video-goes-viral-watch-video%2F https://twitter.com/DKShivakumar/status/1957332496154325050
ಬೆಂಗಳೂರು: ರಾಜ್ಯದಲ್ಲಿ ಹೃದಯಸ್ತಂಭನದಿಂದ ಸಾವನ್ನಪ್ಪುವ ವರ ಸಂಖ್ಯೆ ಮೂರು ಪಟ್ಟು ಹೆಚ್ಚಾಗಿದೆ. ಡಾ. ಪುನೀತ್ ರಾಜಕುಮಾರ್ ಅವರ ಹೆಸರಿನಲ್ಲಿ ಸ್ಥಾಪನೆಯಾದ ಹೃದಯಜ್ಯೋತಿ ಯೋಜನೆಯಡಿ ಈ ಅಂಕಿ ಅಂಶಗಳು ಹೊರ ಬಿದ್ದಿದೆ. 2023-24 ರ ಅವಧಿಯಲ್ಲಿ ಹೃದಯ ಸ್ತಂಭನದಿಂದ ಸಾವನ್ನಪ್ಪಿದವರ ಸಂಖ್ಯೆ 229 ಇದ್ದದ್ದು 2024-25 ರ ವೇಳೆಗೆ ಈ ಸಂಖ್ಯೆ 608 ಕ್ಕೆ ಏರಿಕೆಯಾಗಿದೆ ಎಂದು ಅಧಿವೇಶನದಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಈ ಮಾಹಿತಿ ಹಂಚಿಕೊಂಡಿದ್ದಾರೆ. ಕರ್ನಾಟಕದ ಡಾ. ಪುನೀತ್ ರಾಜ್ಕುಮಾರ್ ಹೃದಯ ಜ್ಯೋತಿ ಯೋಜನೆಯಡಿಯಲ್ಲಿ ದಾಖಲಾದ ಹೃದಯಾಘಾತಕ್ಕೆ ಸಂಬಂಧಿಸಿದ ಸಾವುಗಳು ಬಹುತೇಕ ಮೂರು ಪಟ್ಟು ಹೆಚ್ಚಾಗಿದ್ದು, 2023–24ರಲ್ಲಿ 229 ರಿಂದ 2024–25ರಲ್ಲಿ 608 ಕ್ಕೆ ಏರಿದೆ ಎಂದು ರಾಜ್ಯ ಆರೋಗ್ಯ ಇಲಾಖೆಯ ಅಂಕಿಅಂಶಗಳು ತಿಳಿಸಿವೆ. ರಾಜ್ಯದಲ್ಲಿ ಹೃದಯಾಘಾತ ಪ್ರಕರಣಗಳಲ್ಲಿ ಹೆಚ್ಚಳ ವರದಿಯಾದ ನಂತರ ಮತ್ತು 45 ವರ್ಷಕ್ಕಿಂತ ಕಡಿಮೆ ವಯಸ್ಸಿನ ವ್ಯಕ್ತಿಗಳಲ್ಲಿ ಹಠಾತ್ ಹೃದಯ ಸಂಬಂಧಿ ಘಟನೆಗಳನ್ನು ಪರಿಶೀಲಿಸಲು ಸಮಿತಿಯನ್ನು ರಚಿಸಿದ ನಂತರ ಸಚಿವರು ಈ ಘೋಷಣೆ ಮಾಡಿದ್ದರು.…
ಬೆಂಗಳೂರು : ಅಶ್ಲೀಲ ಕಮೆಂಟ್ ಮಾಡಿದ 7 ಜನರನ್ನು ಪೊಲೀಸರು ಬಂಧಿಸಿದ್ದಾರೆ, ಇನ್ನೂ ಬಹಳಷ್ಟು ಜನ ಅರೆಸ್ಟ್ ಆಗೋದು ಬಾಕಿಯಿದೆ ಎಂದು ನಟಿ ರಮ್ಯಾ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸೋಶಿಯಲ್ ಮೀಡಿಯಾದಲ್ಲಿ ಅಶ್ಲೀಲ ಕಮೆಂಟ್ ಮಾಡಿದ 7 ಜನರು ಅರೆಸ್ಟ್ ಆಗಿದ್ದಾರೆ. ಇನ್ನೂ ಬಹಳಷ್ಟು ಜನರು ಅರೆಸ್ಟ್ ಆಗೋದು ಬಾಕಿ ಇದೆ. ಈ ಅಶ್ಲೀಲ ಕಮೆಂಟ್ ಬರೋದು ಕಡಿಮೆಯಾಗಿದೆ. ಕೆಟ್ಟದಾಗಿರೋ ಮೆಸೇಜ್ ಗಳು ನನಗೆ ಬರುತ್ತಿಲ್ಲ ಎಂದು ಹೇಳಿದ್ದಾರೆ. ಯಾವ ಮಹಿಳೆಗೂ ಈ ರೀತಿ ಆಗಬಾರದು, ಸದ್ಯ 7 ಜನರನ್ನು ಪೊಲೀಸರು ಬಂಧಿಸಿದ್ದಾರೆ. ಇನ್ನೂ ಹಲವರು ಅರೆಸ್ಟ್ ಆಗುವುದು ಬಾಕಿ ಇದೆ ಎಂದು ತಿಳಿಸಿದ್ದಾರೆ.
ಬೆಂಗಳೂರು : ಕಾವೇರಿ ನಿವಾಸದಲ್ಲಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕನಕರಾಜ ಸಿನಿಮಾದ ಪೋಸ್ಟರ್ ಬಿಡುಗಡೆ ಮಾಡಿದ್ದಾರೆ. ಕಾವೇರಿ ನಿವಾಸದಲ್ಲಿ ಇಂದು “ಕನಕರಾಜ” ಸಿನಿಮಾದ ಪೋಸ್ಟರ್ ಬಿಡುಗಡೆಗೊಳಿಸಿ, ಚಿತ್ರ ಯಶಸ್ವಿಯಾಗಲಿ ಎಂದು ಮನದುಂಬಿ ಹಾರೈಸಿದ್ದಾರೆ. https://twitter.com/siddaramaiah/status/1957316710119412099 ಮಾಜಿ ಸಚಿವರು, ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಹೆಚ್.ಎಂ.ರೇವಣ್ಣ ಮತ್ತು ಸಿನಿಮಾ ತಂಡ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಮೈಸೂರು : ಮೈಸೂರಿನಲ್ಲಿ ಭೀಕರ ಹತ್ಯೆಯೊಂದು ನಡೆದಿದ್ದು, ಮದ್ಯ ಸೇವಿಸಲು ಹಣ ನೀಡದಿದ್ದಕ್ಕೆ ಪತಿಯೋರ್ವ ಪತ್ನಿಯನ್ನೇ ಕೊಚ್ಚಿ ಕೊಲೆ ಮಾಡಿದ್ದಾನೆ. ಮೈಸೂರಿನ ಮಹದೇಶ್ವರ ಬಡಾವಣೆಯಲ್ಲಿ ಈ ಘಟನೆ ನಡೆದಿದ್ದು, ಕೊಲೆಯಾದ ಮಹಿಳೆಯನ್ನು ಗಾಯತ್ರಿ ಎಂದು ಗುರುತಿಸಲಾಗಿದೆ. ಕುಡಿತದ ಚಟಕ್ಕೆ ದಾಸನಾಗಿದ್ದ ಪಾಪಣ್ಣ ಕುಡಿದ ಮತ್ತಿನಲ್ಲಿ ಈ ಕೃತ್ಯ ಎಸಗಿದ್ದಾನೆ. ಹಣಕ್ಕಾಗಿ ಪತ್ನಿ ಹಾಗೂ ಮಕ್ಕಳನ್ನು ಪೀಡಿಸುತ್ತಿದ್ದ ಪತಿ ಮನೆಯಲ್ಲಿ ಯಾರೂ ಇಲ್ಲದ ವೇಳೆ ಮಚ್ಚಿನಿಂದ ಕೊಚ್ಚಿ ಪತ್ನಿ ಗಾಯತ್ರಿಯನ್ನು ಕೊಲೆ ಮಾಡಿ ಪರಾರಿಯಾಗಿದ್ದ. ಬಳಿಕ ಪೊಲೀಸರು ತನಿಖೆ ಕೈಗೊಂಡಿದ್ದು, ಸದ್ಯ ಪಾಪಣ್ಣನನ್ನ ಪೊಲೀಸರು ಬಂಧಿಸಿದ್ದಾರೆ.
ಹಾಸನ : ಹಾಸನ ಜಿಲ್ಲೆಯಲ್ಲಿ ಹಲವೆಡೆ ಮಳೆಯ ಆರ್ಭಟ ಮುಂದುವರೆದಿದ್ದು, ಶಿರಾಡಿಘಾಟ್ ನ ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ತಡೆಗೋಡೆ ಕುಸಿತವಾಗಿದೆ. ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ದೋಣಿಗಲ್ ಬಳಿ ಶಿರಾಡಿಘಾಟ್ ನ ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ತಡೆಗೋಡೆ ಕುಸಿತವಾಗಿದೆ.
ಬೆಂಗಳೂರು : ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಮತ್ತೆ ಜೈಲು ಪಾಲಾಗಿರುವ ನಟ ದರ್ಶನ್ & ಗ್ಯಾಂಗ್ ನ ಸ್ಥಳಾಂತರಕ್ಕೆ ಕೋರಿ ಪ್ರಾಸಿಕ್ಯೂಷನ್ ಪರ ಅಭಿಯೋಜಕರಿಂದ ಕೋರ್ಟ್ ಗೆ ಅರ್ಜಿ ಸಲ್ಲಿಸಲಾಗಿದೆ. ಹೌದು, ನಟ ದರ್ಶನ್ ಸೇರಿ ಇತರೆ ಆರೋಪಿಗಳನ್ನು ಜಾಮೀನಿಗೂ ಮುಂಚಿನ ಜೈಲುಗಳಿಗೆ ವರ್ಗಾವಣೆ ಮಾಡುವಂತೆ ಕೋರ್ಟ್ ಗೆ ಮನವಿ ಮಾಡಲಾಗಿದೆ. ಈ ಸಂಬಂಧ ಬೆಂಗಳೂರಿನ ಸೆಷನ್ಸ್ ಕೋರ್ಟ್ ಗೆ ಅರ್ಜಿ ಸಲ್ಲಿಸಲಾಗಿದೆ. ಬೆಂಗಳೂರಿನ ಜೈಲಿನಲ್ಲಿ ರಾಜಾತಿಥ್ಯ ಹಿನ್ನೆಲೆಯಲ್ಲಿ ಬಳ್ಳಾರಿ ಜೈಲಿಗೆ ವರ್ಗಾವಣೆ ಮಾಡಲಾಗಿತ್ತು. ಇದೀಗ ಜಾಮೀನಿಗೂ ಮುಂಚೆ ಇದ್ದ ಜೈಲಿಗೆ ದರ್ಶನ್ ಸೇರಿ ಇತರೆ ಆರೋಪಿಗಳನ್ನು ವರ್ಗಾವಣೆ ಮಾಡುವಂತೆ ಮನವಿ ಮಾಡಲಾಗಿದೆ. ಈ ಮೂಲಕ ನಟ ದರ್ಶನ್ ಮತ್ತೆ ಬಳ್ಳಾರಿ ಜೈಲಿಗೆ ವರ್ಗಾವಣೆ ಆಗುವ ಸಾಧ್ಯತೆ ಇದೆ ಎನ್ನಲಾಗಿದೆ. ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಜಾಮೀನು ರದ್ದುಪಡಿಸಿದ ಹಿನ್ನೆಲೆಯಲ್ಲಿ ನಟ ದರ್ಶನ್ ಪರಪ್ಪನ ಅಗ್ರಹಾರ ಸೇರಿದ್ದಾರೆ.













