Subscribe to Updates
Get the latest creative news from FooBar about art, design and business.
Author: kannadanewsnow57
ಬೆಂಗಳೂರು : ಬೆಂಗಳೂರಿನಲ್ಲಿ ಮತ್ತೊಂದು ಅಗ್ನಿ ಅವಘಡ ಸಂಭವಿಸಿದ್ದು, ಶಾರ್ಟ್ ಸರ್ಕ್ಯೂಟ್ ನಿಂದ ಮನೆಗೆ ಬೆಂಕಿ ಬಿದ್ದು ಮಗುವೊಂದು ಸಾವನ್ನಪ್ಪಿದೆ. ಬೆಂಗಳೂರಿನ ಸ್ಯಾಂಕಿ ರಸ್ತೆಯ ಸಮ್ಮಿಟ್ ಅಪಾರ್ಟ್ ಮೆಂಟ್ ನಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ನೇಪಾಳ ಮೂಲದ ದಂಪತಿಯ 18 ತಿಂಗಳ ಮಗು ಅನು ಮೃತಪಟ್ಟಿದೆ. ಮೃತಪಟ್ಟ ಅನು ಪುಷ್ಕರ್ ಕುಮಾರ್-ಜ್ಯೋತಿ ಕುಮಾರಿ ದಂಪತಿಯ ಪುತ್ರಿಯಾಗಿದ್ದು, ಶಾರ್ಟ್ ಸರ್ಕ್ಯೂಟ್ ನಿಂದ ಮನೆಗೆ ಬೆಂಕಿ ಬಿದ್ದ ಪರಿಣಾಮ ಮಗು ಮೃತಪಟ್ಟಿದೆ. ಕಳೆದ 8 ವರ್ಷಗಳಿಂದ ದಂಪತಿ ಬೆಂಗಳೂರಿನಲ್ಲಿ ನೆಲೆಸಿದ್ದರು. ಅಪಾರ್ಟ್ಮೆಂಟ್ ನಲ್ಲಿ 10*10 ಅಳತೆಯ ರೂಂನಲ್ಲಿ ವಾಸವಾಗಿದ್ದರು. ಮಗುವನ್ನು ಮನೆಯಲ್ಲಿ ಬಿಟ್ಟು ಪೋಷಕರು ಕೆಲಸಕ್ಕೆ ಹೋಗಿದ್ದರು. ಈ ವೇಳೆ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂಕಿ ಹೊತ್ತಿಕೊಂಡು ಮಗು ಸಾವನ್ನಪ್ಪಿದೆ. ಹೈ ಗ್ರೌಂಡ್ಸ್ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಮಾಹಿತಿ ತಿಳಿದ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಬೆಂಗಳೂರು : ರಿಲಯನ್ಸ್ ಜಿಯೋ ಕರ್ನಾಟಕದಲ್ಲಿ ತನ್ನ ಉತ್ತಮ ಬೆಳವಣಿಗೆಯನ್ನು ಮುಂದುವರೆಸಿದೆ, ಜುಲೈ 2025 ರಲ್ಲಿ 46,187 ಹೊಸ ಮೊಬೈಲ್ ಚಂದಾದಾರರನ್ನು ಸೇರಿಸಿದೆ. ಟೆಲಿಕಾಂ ರೆಗ್ಯುಲೇಟರಿ ಅಥಾರಿಟಿ ಆಫ್ ಇಂಡಿಯಾದ (ಟ್ರಾಯ್) ಇತ್ತೀಚಿನ ಅಂಕಿ-ಅಂಶಗಳ ಪ್ರಕಾರ, ಕರ್ನಾಟಕದಲ್ಲಿ, ಜಿಯೋ ಸ್ಥಿರ ವೈರ್ಲೆಸ್ ಆಕ್ಸೆಸ್ (ಎಫ್‌ಡಬ್ಲ್ಯೂಎ) ನಲ್ಲಿ ತನ್ನ ನಾಯಕತ್ವವನ್ನು ಬಲಪಡಿಸುತ್ತಿದೆ. ಜಿಯೋ ಏರ್‌ಫೈಬರ್ ಸೇವೆಯು ಸ್ಪಷ್ಟ ಮಾರುಕಟ್ಟೆ ನಾಯಕನಾಗಿ ಹೊರಹೊಮ್ಮುತ್ತಿದೆ. ರಾಜ್ಯದಲ್ಲಿ ಸಕ್ರಿಯ ಜಿಯೋ ಏರ್‌ಫೈಬರ್ ಬಳಕೆದಾರರ ಸಂಖ್ಯೆ ಜುಲೈನಲ್ಲಿ 3,51,817 ಕ್ಕೆ ಏರಿದೆ. ಇದು 2025 ರ ಜೂನ್‌ನಲ್ಲಿ 3,39,981 ರಷ್ಟಿತ್ತು. ಭಾರ್ತಿ ಏರ್ಟೆಲ್ 1,74,477 ಎಫ್‌ಡಬ್ಲ್ಯೂಎ ಚಂದಾದಾರರನ್ನು ಹೊಂದಿದೆ. ಜುಲೈ 2025 ರಲ್ಲಿ ರಾಷ್ಟ್ರವ್ಯಾಪಿ ಸಕ್ರಿಯ ಚಂದಾದಾರರ ಸೇರ್ಪಡೆಯನ್ನು ಹೊಂದಿರುವ ಏಕೈಕ ಟೆಲಿಕಾಂ ಆಪರೇಟರ್ ಜಿಯೋ ಆಗಿದ್ದು, 4,82,954 ಲಕ್ಷಕ್ಕೂ ಹೆಚ್ಚು ಸಕ್ರಿಯ ಬಳಕೆದಾರರು ಸೇರ್ಪಡೆ ಆಗಿದ್ದಾರೆ. ಇದು ಸತತ ಎರಡನೇ ತಿಂಗಳು 50 ಲಕ್ಷಕ್ಕೂ ಹೆಚ್ಚು ವಿಎಲ್ಆರ್ (ವಿಸಿಟರ್ ಲೊಕೇಶನ್ ರಿಜಿಸ್ಟರ್) ಸೇರ್ಪಡೆಯನ್ನು ಸೂಚಿಸುತ್ತದೆ. ಇದಕ್ಕೆ ವ್ಯತಿರಿಕ್ತವಾಗಿ,…
ಹಾಸನ : ನಾಡಹಬ್ಬ ಮೈಸೂರು ದಸರಾ ಉದ್ಘಾಟಕರಾಗಿ ಆಯ್ಕೆಯಾಗಿರುವ ಅಂತಾರಾಷ್ಟ್ರೀಯ ಬೂಕರ್ ಪ್ರಶಸ್ತಿ ವಿಜೇತರಾದ ಸಾಹಿತಿ ಬಾನು ಮುಷ್ತಾಕ್ ಅವರನ್ನು ಸರ್ಕಾರದ ಪರವಾಗಿ ಮೈಸೂರು ಜಿಲ್ಲಾಡಳಿತದ ವತಿಯಿಂದ ಆಹ್ವಾನಿಸಲಾಯಿತು. ಮೈಸೂರಿನ ಜಿಲ್ಲಾಧಿಕಾರಿ ಲಕ್ಷ್ಮೀಕಾಂತ ರೆಡ್ಡಿ ಅವರು ಇಂದು ಹಾಸನ ನಗರದ ಅಮೀರ್ ಮೊಹಲ್ಲದಲ್ಲಿರುವ ಸಾಹಿತಿ ಬಾನು ಮುಷ್ತಾಕ್ ಅವರ ಮನೆಗೆ ಭೇಟಿ ನೀಡಿ ಮೈಸೂರು ಪೇಟತೊಡಿಸಿ, ಶಾಲು ಹೊದಿಸಿ ದಸರಾ ಕಾರ್ಯಕ್ರಮದ ಆಹ್ವಾನ ಪತ್ರಿಕೆ ನೀಡುವ ಮೂಲಕ ಅಧಿಕೃತವಾಗಿ ಈ ಬಾರಿಯ ದಸರಾ ಉದ್ಘಾಟನೆಗೆ ಆಹ್ವಾನಿಸಿದರು. ಇದೇ ವೇಳೆ ಮೈಸೂರು ಅಪರ ಜಿಲ್ಲಾಧಿಕಾರಿ ಶಿವರಾಜ್, ಚಾಮುಂಡಿ ದೆವಾಲಯ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ರೂಪ, ಜಿ.ಪಂ. ಸಿಇಒ ಯುಕೇಶ್ ಕುಮಾರ್, ಮೈಸೂರು ಮಹಾನಗರ ಪಾಲಿಕೆ ಅಯುಕ್ತರಾದ ತನ್ವಿರ್ ಆಶಿಫ್ ಮತ್ತಿತರರು ಉಪಸ್ಥಿತರಿದ್ದರು.
ಬೆಂಗಳೂರು : ಉಪ ಮುಖ್ಯಮಂತ್ರಿ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವರಾದ ಡಿ.ಕೆ. ಶಿವಕುಮಾರ್ ರವರು ಇಂದು ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಕೇಂದ್ರ ಕಛೇರಿಗೆ ಆಗಮಿಸಿ ಪೂಜೆ ಸಲ್ಲಿಸಿ ಜಿ.ಬಿ.ಎ ನಾಮಫಲಕ ಉದ್ಘಾಟಿಸಿದರು. ಐದು ಪಾಲಿಕೆಗಳ ನೂತನ ಕಚೇರಿಗೆ ಭೂಮಿಪೂಜೆಯನ್ನು ನವೆಂಬರ್ 1 ರಂದು ನೆರವೇರಿಸಲಾಗುವುದು. ಎಲ್ಲಾ ಪಾಲಿಕೆಗಳ ಗಡಿ ಭಾಗಗಳಲ್ಲಿ ಗಡಿ ಗೋಪುರಗಳನ್ನು ನಿರ್ಮಾಣ ಮಾಡಲಾಗುವುದು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ಗ್ರೇಟರ್ ಬೆಂಗಳೂರು ಪ್ರಾಧಿಕಾರ ಕಚೇರಿಯ ನಾಮಫಲಕ ಅನಾವರಣಗೊಳಿಸಿದ ನಂತರ ಶಿವಕುಮಾರ್ ಅವರು ಬುಧವಾರ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದರು. “ಪ್ರತಿ ಪಾಲಿಕೆ ವ್ಯಾಪ್ತಿಯಲ್ಲಿ ರಸ್ತೆಗಳ ಸುಧಾರಣೆ ಹಾಗೂ ಆಡಳಿತಾತ್ಮಕ ದೃಷ್ಟಿಯಿಂದ 500 ಮಂದಿ ಎಂಜಿನಿಯರ್ ಗಳಿಗೆ ಅನುಮೋದನೆ ನೀಡಲಾಗಿದೆ. ಈ ಹಿಂದೆ 198 ವಾರ್ಡ್ ಗಳಿದ್ದವು. ಈಗ 500 ವಾರ್ಡ್ ಗಳ ರಚನೆಯ ಅನುಮತಿಗೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಪಾಲಿಕೆಗಳ ಆಡಳಿತಾತ್ಮಕ ವೆಚ್ಚ, ಸಂಬಳ ಹಾಗೂ ನಿವೃತ್ತಿ ವೇತನಕ್ಕೆ ಎಂದು ಬಿಬಿಎಂಪಿಯಿಂದ ಸುಮಾರು 300 ಕೋಟಿ ರೂ.…
ನವದೆಹಲಿ: ಕೇವಲ 1 ರೂ.ಗೆ 30 ದಿನಗಳ ವ್ಯಾಲಿಡಿಟಿ ಯೋಜನೆಯನ್ನು ಒದಗಿಸುವ ತನ್ನ ಇತ್ತೀಚಿನ ಪ್ರಚಾರದ ಕೊಡುಗೆಯನ್ನು BSNL ವಿಸ್ತರಿಸಿದೆ. ಈ ವಿಶೇಷ ಯೋಜನೆಯಲ್ಲಿ ಅನಿಯಮಿತ ಕರೆ, 2GB ದೈನಂದಿನ ಡೇಟಾ ಮತ್ತು ಉಚಿತ SMS ಸೇರಿವೆ. ಮೂಲತಃ ಆಗಸ್ಟ್ 31 ರಂದು ಮುಕ್ತಾಯಗೊಳ್ಳಲು ನಿರ್ಧರಿಸಲಾಗಿದ್ದ ಈ ಕೊಡುಗೆಯನ್ನು ಈಗ ಸೆಪ್ಟೆಂಬರ್ 15 ರವರೆಗೆ ವಿಸ್ತರಿಸಲಾಗಿದೆ. ಈ ಯೋಜನೆಯನ್ನು ಆರಂಭದಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಪ್ರಚಾರವಾಗಿ ಪ್ರಾರಂಭಿಸಲಾಯಿತು, ಕನಿಷ್ಠ ವೆಚ್ಚದಲ್ಲಿ ಬಳಕೆದಾರರಿಗೆ ಗಮನಾರ್ಹ ಪ್ರಯೋಜನಗಳನ್ನು ನೀಡುತ್ತದೆ. ಈ ರೂ. 1 ಯೋಜನೆಯು ಹೊಸ BSNL ಬಳಕೆದಾರರಿಗೆ ಮಾತ್ರ ಲಭ್ಯವಿದೆ. ಆಫರ್ ಅವಧಿಯಲ್ಲಿ ಹೊಸ BSNL ಸಿಮ್ ಖರೀದಿಸುವ ಯಾರಾದರೂ 30 ದಿನಗಳ ಯೋಜನೆಗೆ ಅರ್ಹರಾಗಿರುತ್ತಾರೆ. BSNL ನ ಕೊಡುಗೆ ವಿವರಗಳು ಈ ಯೋಜನೆಯು ಅನಿಯಮಿತ ಧ್ವನಿ ಕರೆ, 100 ಉಚಿತ ದೈನಂದಿನ ರಾಷ್ಟ್ರೀಯ SMS ಮತ್ತು 2GB ದೈನಂದಿನ ಹೈ-ಸ್ಪೀಡ್ ಡೇಟಾವನ್ನು ಒದಗಿಸುತ್ತದೆ, ಇದು 30 ದಿನಗಳ ಅವಧಿಯಲ್ಲಿ ಒಟ್ಟು 60GB ಆಗಿದೆ.…
ಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಆರೋಪಿಗಳಾದ ನಟ ದರ್ಶನ್ ಸೇರಿ 17 ಆರೋಪಿಗಳಿಗೆ ಮರಣದಂಡನೆ ಶಿಕ್ಷೆ ವಿಧಿಸಬೇಕು ಎಂದು ಒತ್ತಾಯಿಸಿ ಅಪರಿಚಿತ ವ್ಯಕ್ತಿಯೊಬ್ಬರು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಲು ಮುಂದಾಗಿದ್ದು, ನ್ಯಾಯಾಧೀಶರು ಅದನ್ನು ಸ್ವೀಕರಿಸಲು ನಿರಾಕರಿಸಿದ್ದಾರೆ. ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣ ಸಂಬಂಧ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲು ಸೇರಿರುವ ನಟ ದರ್ಶನ್ ಬಳ್ಳಾರಿ ಜೈಲಿಗೆ ಸ್ಥಳಾಂತರಿಸುವ ಕುರಿತಂತೆ ಬೆಂಗಳೂರಿನ 64ನೇ ಸಿಸಿಹೆಚ್ ಕೋರ್ಟ್ ನಲ್ಲಿ ವಿಚಾರಣೆ ನಡೆದಿದ್ದು, ಈ ವೇಳೆ ಅಪರಿಚಿತ ವ್ಯಕ್ತಿಯೊಬ್ಬ ಕೋರ್ಟ್ ಗೆ ನುಗ್ಗಿದ ಘಟನೆ ನಡೆದಿದೆ. ಇಂದು ನಟ ದರ್ಶನ್ ಸೇರಿ ಐವರು ಆರೋಪಿಗಳ ಸ್ಥಳಾಂತರ ಸಂಬಂಧ ಬೆಂಗಳೂರಿನ 64ನೇ ಸಿಸಿಹೆಚ್ ಕೋರ್ಟ್ ನಲ್ಲಿ ಅರ್ಜಿ ವಿಚಾರಣೆ ನಡೆಸಲಾಗಿದ್ದು, ಈ ವೇಳೆ ಕೋರ್ಟ್ ಗೆ ಪತ್ರ ಹಿಡಿದು ಅಪರಿಚಿತ ವ್ಯಕ್ತಿಯೊಬ್ಬ ನುಗ್ಗಿದ್ದಾನೆ. ರೇಣುಕಾಸ್ವಾಮಿ ಕೊಲೆ ಕೇಸ್ ನ 17 ಆರೋಪಿಗಳಿಗೆ ಗಲ್ಲು ಶಿಕ್ಷೆ ವಿಧಿಸಿ ಆರೋಪಿಗಳಿಗೆ ಜಾಮೀನು ನೀಡಬಾರದು ಎಂದು ಅಪರಿಚಿತ ವ್ಯಕ್ತಿ ಹೇಳಿದ್ದಾನೆ.…
ಯುವಕನೊಬ್ಬ ತನ್ನ ಗೆಳತಿಯೊಂದಿಗೆ ಮಾತನಾಡಲು ಸಾಧ್ಯವಾಗದ ಹಿನ್ನೆಲೆಯಲ್ಲಿ ಇಡೀ ಗ್ರಾಮದ ವಿದ್ಯುತ್ ಸಂಪರ್ಕ ಕಡಿತಗೊಳಿಸಿದ್ದಾನೆ. ಹೌದು, ಈ ವಿಚಿತ್ರ ಘಟನೆಯ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದೆ. ಸಾಮಾಜಿಕ ಮಾಧ್ಯಮ ಬಳಕೆದಾರರು ಇದರ ಬಗ್ಗೆ ತೀವ್ರವಾಗಿ ಕಾಮೆಂಟ್ ಮಾಡುತ್ತಿದ್ದಾರೆ. ಯುವಕ ತನ್ನ ಗೆಳತಿಯೊಂದಿಗೆ ಫೋನ್‌ನಲ್ಲಿ ಮಾತನಾಡಲು ಬಯಸಿದ್ದ ಆದರೆ ಪ್ರೇಯಸಿಯ ಫೋನ್ ನಿರಂತರವಾಗಿ ಕಾರ್ಯನಿರತವಾಗಿತ್ತು. ಇದರಿಂದ ಕೋಪಗೊಂಡ ಅವನು ಆಘಾತಕಾರಿ ಹೆಜ್ಜೆ ಇಟ್ಟು ವಿದ್ಯುತ್ ಕಂಬವನ್ನು ಹತ್ತಿ ಎಲ್ಲಾ ತಂತಿಗಳನ್ನು ಕತ್ತರಿಸಿದನು. ಇದರಿಂದಾಗಿ ಗೆಳತಿಯ ಇಡೀ ಗ್ರಾಮದ ವಿದ್ಯುತ್ ಕಡಿತಗೊಂಡಿತು. ವೈರಲ್ ವೀಡಿಯೊದಲ್ಲಿ ಯುವಕ ಕೈಯಲ್ಲಿ ದೊಡ್ಡ ಇಕ್ಕಳ ಹಿಡಿದು ವಿದ್ಯುತ್ ಕಂಬವನ್ನು ಹತ್ತುತ್ತಿರುವುದನ್ನು ಸ್ಪಷ್ಟವಾಗಿ ಕಾಣಬಹುದು. ಕಂಬಕ್ಕೆ ಹಲವು ತಂತಿಗಳು ಜೋಡಿಸಲ್ಪಟ್ಟಿದ್ದು, ಯುವಕ ಒಂದೊಂದಾಗಿ ತಂತಿಗಳನ್ನು ಕತ್ತರಿಸುತ್ತಿರುವುದು ಕಂಡುಬರುತ್ತದೆ. ತಂತಿಗಳು ಕತ್ತರಿಸಿದ ತಕ್ಷಣ, ಇಡೀ ಪ್ರದೇಶದ ವಿದ್ಯುತ್ ಕಡಿತಗೊಳ್ಳುತ್ತದೆ. ಹತ್ತಿರದಲ್ಲಿ ನಿಂತಿರುವ ಜನರು ಈ ದೃಶ್ಯವನ್ನು ನೋಡಿ ಆಶ್ಚರ್ಯಚಕಿತರಾಗುವುದು ವೀಡಿಯೊದಲ್ಲಿ ಸ್ಪಷ್ಟವಾಗಿ ಗೋಚರಿಸುತ್ತದೆ. ಈ ವೀಡಿಯೊವನ್ನು ಇನ್‌ಸ್ಟಾಗ್ರಾಮ್ ಐಡಿಯಲ್ಲಿ ಹಂಚಿಕೊಳ್ಳಲಾಗಿದೆ.…
ಈ ದಿನ ನರಸಿಂಹ ದೇವರನ್ನು ತುಪ್ಪದ ದೀಪ ಹಚ್ಚಿ ಪೂಜಿಸುವವರು ತಮ್ಮ ಕೆಲಸ ಮತ್ತು ವೃತ್ತಿಯಲ್ಲಿ ಯಶಸ್ಸನ್ನು ಸಾಧಿಸುತ್ತಾರೆ
ವಿಜಯದ ಮೇಲೆ ವಿಜಯ ಸಾಧಿಸಲು ನರಸಿಂಹ ದೇವರನ್ನು ಪೂಜಿಸಿ. ಒಬ್ಬ ವ್ಯಕ್ತಿಯು ತನ್ನ ಜೀವನದಲ್ಲಿ ಶ್ರೇಷ್ಠತೆಯನ್ನು ಸಾಧಿಸಲು ಬಯಸಿದರೆ, ಅವನು ಮಾಡುವ ಕೆಲಸದಲ್ಲಿ ಶ್ರೇಷ್ಠತೆಯನ್ನು ಸಾಧಿಸಬೇಕು ಅಥವಾ ಅವನು ಮಾಡುವ ವೃತ್ತಿಯಲ್ಲಿ ಶ್ರೇಷ್ಠತೆಯನ್ನು ಸಾಧಿಸಬೇಕು. ಅನೇಕ ಜನರು ತಮ್ಮ ಕೌಶಲ್ಯಗಳಿಗೆ ಸರಿಹೊಂದುವ ಉದ್ಯೋಗವನ್ನು ಹುಡುಕಲು ಹೆಣಗಾಡುತ್ತಾರೆ, ತಾತ್ಕಾಲಿಕ ಉದ್ಯೋಗವು ಶಾಶ್ವತವಲ್ಲ ಎಂದು ನಿರಾಶೆಗೊಳ್ಳುತ್ತಾರೆ ಮತ್ತು ವೃತ್ತಿಯಲ್ಲಿ ಉತ್ತಮ ಅನುಭವವಿದ್ದರೂ ಪ್ರಯತ್ನಗಳನ್ನು ಮಾಡಿದರೂ ಒಂದೇ ಒಂದು ಯಶಸ್ಸನ್ನು ಸಾಧಿಸಲು ಹೆಣಗಾಡುತ್ತಾರೆ. ಈ ಆಧ್ಯಾತ್ಮಿಕ ಪೋಸ್ಟ್‌ನಲ್ಲಿ, ನರಸಿಂಹ ದೇವರನ್ನು ಪೂಜಿಸಿದರೆ ಅಂತಹ ಜನರು ತಮ್ಮ ಜೀವನದಲ್ಲಿ ಹೇಗೆ ಯಶಸ್ಸನ್ನು ಸಾಧಿಸಬಹುದು ಎಂಬುದನ್ನು ನಾವು ನೋಡಲಿದ್ದೇವೆ. ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರ ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು…
ಬೆಂಗಳೂರು : ರಾಜ್ಯದಲ್ಲಿ ಮೊಟ್ಟ ಮೊದಲ ಬಾರಿಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯು ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳ ವರ್ಗಾವಣೆಯನ್ನು ಕೌನ್ಸಿಲಿಂಗ್ ಮೂಲಕ ಕೈಗೊಂಡಿದ್ದು, ಕರ್ನಾಟಕ ಪಂಚಾಯತ್ ರಾಜ್ ಆಯುಕ್ತಾಲಯದಲ್ಲಿ ಇಲಾಖಾ ಸಚಿವರಾದ ಪ್ರಿಯಾಂಕ್ ಖರ್ಗೆ ಅವರು ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳ ವಿಶೇಷ ಪ್ರಕರಣಗಳ ವರ್ಗಾವಣೆ ಕೌನ್ಸಿಲಿಂಗ್ ಗೆ ಚಾಲನೆ ನೀಡಿ, ಡಿಜಿಟಲ್ ಸಹಿ ಇರುವ ವರ್ಗಾವಣೆ ಆದೇಶ ಪತ್ರವನ್ನು ನೀಡಿದರು. ಮೊದಲನೇ ದಿನವಾದ ಇಂದು ವಿಶೇಷ ಪ್ರಕರಣಗಳ 109 ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳಿಗೆ ವರ್ಗಾವಣೆ ಆದೇಶ ಪತ್ರಗಳನ್ನು ನೀಡುವುದರೊಂದಿಗೆ ವರ್ಗಾವಣೆ ಕೌನ್ಸಿಲಿಂಗ್ ಪ್ರಕ್ರಿಯೆ ಯಶಸ್ವಿಯಾಗಿ ನಡೆಯಿತು. ಈ ಸಂದರ್ಭದಲ್ಲಿ ಸರ್ಕಾರದ ಕಾರ್ಯದರ್ಶಿ(ಪಂ.ರಾಜ್) ಗಳಾದ ಶ್ರೀ ರಂದೀಪ್ ಡಿ., ಕರ್ನಾಟಕ ಪಂಚಾಯತ್ ರಾಜ್ ಆಯುಕ್ತಾಲಯದ ಆಯುಕ್ತರಾದ ಡಾII ಅರುಂಧತಿ ಚಂದ್ರಶೇಖರ್, ಶ್ರೀಮತಿ ವಾಣಿ ಬಿ., ಉಪ ಕಾರ್ಯದರ್ಶಿ (ಆಡಳಿತ), ಶ್ರೀ ಅಮರೇಶ್ ಆರ್. ನಿರ್ದೇಶಕರು -1, ಡಾ.ಎನ್. ನೋಮೇಶ್ ಕುಮಾರ್ ನಿರ್ದೇಶಕರು (ಪಂ.ರಾಜ್) ಹಾಗೂ ಆಯುಕ್ತಾಲಯದ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರು…
ಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣ ಸಂಬಂಧ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲು ಸೇರಿರುವ ನಟ ದರ್ಶನ್ ಬಳ್ಳಾರಿ ಜೈಲಿಗೆ ಸ್ಥಳಾಂತರಿಸುವ ಕುರಿತಂತೆ ಬೆಂಗಳೂರಿನ 64ನೇ ಸಿಸಿಹೆಚ್ ಕೋರ್ಟ್ ನಲ್ಲಿ ವಿಚಾರಣೆ ನಡೆದಿದ್ದು, ಈ ವೇಳೆ ಅಪರಿಚಿತ ವ್ಯಕ್ತಿಯೊಬ್ಬ ಕೋರ್ಟ್ ಗೆ ನುಗ್ಗಿದ ಘಟನೆ ನಡೆದಿದೆ. ಇಂದು ನಟ ದರ್ಶನ್ ಸೇರಿ ಐವರು ಆರೋಪಿಗಳ ಸ್ಥಳಾಂತರ ಸಂಬಂಧ ಬೆಂಗಳೂರಿನ 64ನೇ ಸಿಸಿಹೆಚ್ ಕೋರ್ಟ್ ನಲ್ಲಿ ಅರ್ಜಿ ವಿಚಾರಣೆ ನಡೆಸಲಾಗಿದ್ದು, ಈ ವೇಳೆ ಕೋರ್ಟ್ ಗೆ ಪತ್ರ ಹಿಡಿದು ಅಪರಿಚಿತ ವ್ಯಕ್ತಿಯೊಬ್ಬ ನುಗ್ಗಿದ್ದಾನೆ. ರೇಣುಕಾಸ್ವಾಮಿ ಕೊಲೆ ಕೇಸ್ ನ 17 ಆರೋಪಿಗಳಿಗೆ ಗಲ್ಲು ಶಿಕ್ಷೆ ವಿಧಿಸಿ ಆರೋಪಿಗಳಿಗೆ ಜಾಮೀನು ನೀಡಬಾರದು ಎಂದು ಅಪರಿಚಿತ ವ್ಯಕ್ತಿ ಹೇಳಿದ್ದಾನೆ. ಈ ವೇಳೆ ಜಡ್ಜ್ ನೀವು ಯಾರು ಎಂದು ಅಪರಿಚಿತ ವ್ಯಕ್ತಿಯನ್ನು ಪ್ರಶ್ನಿಸಿದ್ದಾರೆ. ಈ ವೇಳೆ ಉತ್ತರಿಸಿದ ಅಪರಿಚಿತ ವ್ಯಕ್ತಿ ನಾನು ರವಿ ಬೆಳೆಗೆರೆ ಕಡೆಯವನು ಎಂದು ಹೇಳಿದ್ದಾನೆ. ಏನೇ ಇದ್ರೂ ಸರ್ಕಾರದ ಮುಖಾಂತರ ಬರುವಂತೆ…