Subscribe to Updates
Get the latest creative news from FooBar about art, design and business.
Author: kannadanewsnow57
ಕಾರ್ಕಳ : ಬಿಜೆಪಿ ಶಾಸಕ ಸುನಿಲ್ ಕುಮಾರ್‌ಗೆ ಪಿತೃ ವಿಯೋಗವಾಗಿದೆ. ಅವರ ತಂದೆ ಕೆ.ಎಂ. ವಾಸುದೇವ (87) ಅವರು ಮುಂಜಾನೆ ಮಣಿಪಾಲದ ಕೆಎಂಸಿ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ. ವಯೋ ಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಇತ್ತೀಚೆಗಷ್ಟೇ ಮಣಿಪಾಲ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ತೀವ್ರ ನಿಗಘಟಕದಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಆದ್ರೆ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಮೃತರು ಪತ್ನಿ, ಪುತ್ರ ಹಾಗೂ ಪುತ್ರಿಯನ್ನು ಅಗಲಿದ್ದಾರೆ. ವೃತ್ತಿಯಲ್ಲಿ ಶಿಕ್ಷಕರಾಗಿದ್ದ ಅವರು, ರಾಷ್ಟ್ರೀಯ ಸ್ವಯಂ ಸೇವಕ ಸಂಘದಲ್ಲಿ ವಿವಿಧ ಹುದ್ದೆಗಳನ್ನು ನಿರ್ವಹಿಸಿದ್ದರು. ಇಂದು ಸಂಜೆ ಕಲಂಬಾಡಿ ಪದವಿನಲ್ಲಿರುವ ಶಾಸಕರ ಸ್ವಗೃಹದಲ್ಲಿ ಅಂತಿಮ ವಿಧಿವಿಧಾನ ನಡೆಯಲಿದೆ ಎಂದು ಕುಟುಂಬದ ಮೂಲಗಳ ತಿಳಿಸಿದೆ.
ದಕ್ಷಿಣ ಕನ್ನಡ ಜಿಲ್ಲೆ : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಗೆ ಗುಡ್ಡ ಕುಸಿತವಾಗಿದ್ದು, ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಸಂಚಾರ ಬಂದ್ ಆಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಮಣ್ಣಗುಂಡಿ ಬಳಿ ಗುಡ್ಡ ಕುಸಿತವಾಗಿದ್ದು, ಬೆಂಗಳೂರು-ಮಂಗಳೂರು ಸಂಪರ್ಕಿಸುವ ರಸ್ತೆ ಸಂಪೂರ್ಣ ಬಂದ್ ಆಗಿದೆ. ಇನ್ನೂ ಕೊಪ್ಪಳ ಜಿಲ್ಲೆಯಲ್ಲಿ ಸತತ ಮಳೆಗೆ ಮನೆ ಕುಸಿದು ಬಿದ್ದು ಒಂದೂವರೆ ವರ್ಷದ ಮಗು ಸಾವನ್ನಪ್ಪಿರುವ ಘಟನೆ ನಡೆದಿದೆ. ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಹೆಬ್ಬಾಳ ಗ್ರಾಮದಲ್ಲಿ ಮನೆ ಗೋಡೆ ಕುಸಿದು ಒಂದೂವರೆ ವರ್ಷದ ಪ್ರಶಾಂತಿ ಸಾವನ್ನಪ್ಪಿದ್ದು, 6 ಜನರು ಗಾಯಗೊಂಡಿದ್ದಾರೆ.
ನವದೆಹಲಿ : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಲೆ ಆರೋಪಿ ನಟ ದರ್ಶನ್ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಇಂದು ಸುಪ್ರೀಂ ಕೋರ್ಟ್ ನಲ್ಲಿ ನಡೆಯಲಿದ್ದು, ದರ್ಶನ್ ಅವರ ಜಾಮೀನು ಭವಿಷ್ಯ ನಿರ್ಧಾರವಾಗಲಿದೆ. ದರ್ಶನ್ ಅವರ ಜಾಮೀನು ರದ್ದು ಕೋರಿ ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಿತ್ತು. ಕೊಲೆ ಪ್ರಕರಣದಲ್ಲಿ 7 ಆರೋಪಿಗಳ ಜಾಮೀನು ರದ್ದು ಕೋರಿ ರಾಜ್ಯ ಸರ್ಕಾರ ಅರ್ಜಿ ಸಲ್ಲಿಸಿದೆ. ಡಿಸೆಂಬರ್ 2024ರಲ್ಲಿ ಹೈಕೋರ್ಟ್ ಜಾಮೀನು ನೀಡಿದ್ದು, ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್ ಗೆ ಸರ್ಕಾರ ಮೇಲ್ಮನವಿ ಸಲ್ಲಿಸಿದ್ದು, ಇಂದು ಸುಪ್ರೀಂ ಕೋರ್ಟ್ ಅರ್ಜಿಯ ವಿಚಾರಣೆ ನಡೆಸಲಿದೆ.
ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ನೇತೃತ್ವದಲ್ಲಿ ಇಂದು ಬೆಳಗ್ಗೆ 11 ಗಂಟೆಗೆ ವಿಧಾನಸೌಧದಲ್ಲಿ ರಾಜ್ಯ ಸರ್ಕಾರದ ಮಹತ್ವದ ಸಚಿವ ಸಂಪುಟ ಸಭೆ ನಡೆಯಲಿದೆ. ಈ ಕುರಿತು ಸಚಿವ ಸಂಪುಟದ ಸರ್ಕಾರದ ಅಪರ ಕಾರ್ಯದರ್ಶಿ ಮಾಹಿತಿ ನೀಡಿದ್ದು, ದಿನಾಂಕ 17-07-2025ರಂದು ಗುರುವಾರ ಬೆಳಗ್ಗೆ 11 ಗಂಟೆಗೆ ಸಚಿವ ಸಂಪುಟದ 2025ನೇ ಸಾಲಿನ 15ನೇ ಸಭೆಯನ್ನು ವಿಧಾನಸೌಧದ ಸಚಿವ ಸಂಪುಟ ಸಭಾಮಂದಿರದಲ್ಲಿ ಕರೆಯಲಾಗಿದೆ ಎಂದು ತಿಳಿಸಿದ್ದಾರೆ. ಜುಲೈ.17ರಂದು ನಿಗದಿಯಾಗಿರುವಂತ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ರಾಜ್ಯದ ಅಭಿವೃದ್ಧಿ ಕಾಮಗಾರಿಗಳಿಗೆ ಅನುದಾನ ಸೇರಿದಂತೆ ಮಹತ್ವದ ನಿರ್ಣಯಗಳಿಗೆ ಅನುಮೋದನೆಯನ್ನು ನೀಡುವ ಸಾಧ್ಯತೆ ಇದೆ.
ನವದೆಹಲಿ : ಛಂಗೂರ್ ಬಾಬಾ ಮತಾಂತರ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ದೇಶದ ಹಲವಡೆ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಉತ್ತರ ಪ್ರದೇಶದ ಬಲರಾಂಪುರದಲ್ಲಿ 12 ಮತ್ತು ಮುಂಬೈನಲ್ಲಿ ಎರಡು ಸ್ಥಳಗಳಲ್ಲಿ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದು, ಪರಿಶೀಲನೆ ನಡೆಸಿದ್ದಾರೆ.
ಮುಂಬೈ : ಬಾಂಬೆ ಹೈಕೋರ್ಟ್‌ನ ಔರಂಗಾಬಾದ್ ಪೀಠವು ತನ್ನ ಅಜ್ಜಿಯರೊಂದಿಗೆ ವಾಸಿಸುತ್ತಿರುವ ಐದು ವರ್ಷದ ಬಾಲಕಿಯ ಪಾಲನೆಯನ್ನು ಆಕೆಯ ತಾಯಿಗೆ ಹಸ್ತಾಂತರಿಸಿದೆ. ತಂದೆಯ ನಂತರ, ಅಪ್ರಾಪ್ತ ಮಗುವಿನ ನೈಸರ್ಗಿಕ ರಕ್ಷಕ ತಾಯಿ ಎಂದು ಪೀಠ ಹೇಳಿದೆ. ಹಿಂದೂ ಅಲ್ಪಸಂಖ್ಯಾತ ಮತ್ತು ಪಾಲನೆ ಕಾಯ್ದೆಯ ಪ್ರಕಾರ, ಅಪ್ರಾಪ್ತ ಮಗುವಿನ ನೈಸರ್ಗಿಕ ರಕ್ಷಕ ಮೊದಲು ತಂದೆ ಮತ್ತು ನಂತರ ತಾಯಿ ಎಂದು ನ್ಯಾಯಮೂರ್ತಿ ಎಸ್‌ಜಿ ಚಾಪಲ್‌ಗಾಂವ್ಕರ್ ಅವರ ಪೀಠ ಹೇಳಿದೆ. ಮಗುವಿನ ಹಿತಾಸಕ್ತಿಯನ್ನು ಖಚಿತಪಡಿಸಿಕೊಳ್ಳಲು ಆಕೆಗೆ ಯಾವುದೇ ಪ್ರತಿಕೂಲ ಹಿತಾಸಕ್ತಿ ಅಥವಾ ಅಸಮರ್ಥತೆ ಇದೆ ಎಂದು ಸಾಬೀತಾಗದ ಹೊರತು ಕಾನೂನುಬದ್ಧವಾಗಿ ಅಪ್ರಾಪ್ತ ಬಾಲಕಿಯನ್ನು ತಾಯಿಯ ವಶಕ್ಕೆ ನೀಡಬೇಕು ಎಂದು ಹೈಕೋರ್ಟ್ ಹೇಳಿದೆ. ನ್ಯಾಯಾಲಯವು ಯಾವ ಪ್ರಕರಣದಲ್ಲಿ ಈ ಆದೇಶವನ್ನು ನೀಡಿತು? 25 ವರ್ಷದ ಮಹಿಳೆ ಸಲ್ಲಿಸಿದ ಅರ್ಜಿಯ ಮೇರೆಗೆ ಈ ಆದೇಶವನ್ನು ಅಂಗೀಕರಿಸಲಾಗಿದೆ. ಇದರಲ್ಲಿ, ಏಪ್ರಿಲ್ 2025 ರಲ್ಲಿ ಜಿಲ್ಲಾ ನ್ಯಾಯಾಲಯವು ನೀಡಿದ ಆದೇಶವನ್ನು ಪ್ರಶ್ನಿಸಲಾಯಿತು, ಇದರಲ್ಲಿ ಆಕೆಯ ಐದು ವರ್ಷದ ಮಗಳ ಪಾಲನೆಯನ್ನು…
01,🦑ಮೇಷ ರಾಶಿ🦑 📖,ಹೊಸ ವ್ಯವಹಾರಗಳನ್ನು ಪ್ರಾರಂಭಿಸಿ ಲಾಭವನ್ನು ಪಡೆಯುತ್ತೀರಿ. ಸಮಾಜದಲ್ಲಿ ಪ್ರತಿಷ್ಠೆ ಹೆಚ್ಚಿದಂತೆ ಎಲ್ಲಾ ಕಡೆಯಿಂದಲೂ ಆದಾಯದ ಮಾರ್ಗಗಳಿರುತ್ತವೆ. ವೃತ್ತಿಪರ ಉದ್ಯೋಗಗಳಲ್ಲಿ ಶುಭ ಸುದ್ದಿ ದೊರೆಯುತ್ತದೆ. ಸಂಗಾತಿಯೊಂದಿಗೆ ಮನೆಯಲ್ಲಿ ಸಂತೋಷದಿಂದ ಕಳೆಯುತ್ತೀರಿ 9980060275 02,🦑ವೃಷಭ ರಾಶಿ🦑 📖,ಉದ್ಯೋಗಿಗಳಲ್ಲಿ ಅನುಕೂಲಕರ ಬದಲಾವಣೆಗಳಾಗುತ್ತವೆ. ಪ್ರಮುಖ ವ್ಯವಹಾರಗಳು ಸಕಾಲದಲ್ಲಿ ಪೂರ್ಣಗೊಳ್ಳುತ್ತವೆ. ಕುಟುಂಬ ವ್ಯವಹಾರಗಳಲ್ಲಿ ಸಣ್ಣಪುಟ್ಟ ಸಮಸ್ಯೆಗಳನ್ನು ನಿವಾರಿಸುತ್ತೀರಿ. ಹೊಸ ಸಾಲ ಪ್ರಯತ್ನಗಳು ಫಲ ನೀಡುತ್ತವೆ. ವೃತ್ತಿಪರ ವ್ಯವಹಾರಗಳು ಅಭಿವೃದ್ಧಿ ಹೊಂದುತ್ತವೆ,9980060275 03,🦑ಮಿಥುನ ರಾಶಿ🦑 📖,ಹೊಸ ವ್ಯವಹಾರಗಳಿಗೆ ಹೂಡಿಕೆಗಳು ದೊರೆಯುತ್ತವೆ. ಮಕ್ಕಳ ವಿವಾಹ ಉದ್ಯೋಗ ಪ್ರಯತ್ನಗಳು ಅನುಕೂಲಕರವಾಗಿರುತ್ತವೆ. ಬಹಳ ದಿನಗಳಿಂದ ಕಾಡುತ್ತಿದ್ದ ಸಮಸ್ಯೆಗಳು ದೂರವಾಗುತ್ತವೆ. ಹಠಾತ್ ಆರ್ಥಿಕ ಲಾಭ ದೊರೆಯುತ್ತದೆ. ಉದ್ಯೋಗಿಗಳ ಜವಾಬ್ದಾರಿಯಲ್ಲಿನ ಅಡೆತಡೆಗಳನ್ನು ನಿವಾರಿಸಿ ಮುಂದೆ ಸಾಗುತ್ತೀರಿ. ಸೇವಾ ಕಾರ್ಯಕ್ರಮಗಳನ್ನು ನಿರ್ವಹಿಸುತ್ತೀರಿ,9980060275 04,🦑ಕರ್ಕ ರಾಶಿ🦑 📖,ಹಳೆ ಸಾಲ ವಸೂಲಿಯಾಗುತ್ತದೆ. ವ್ಯಾಪಾರ ವ್ಯವಹಾರಗಳಲ್ಲಿ ಪ್ರಮುಖ ನಿರ್ಧಾರಗಳನ್ನು ಕಾರ್ಯಗತಗೊಳಿಸಲಾಗುತ್ತದೆ. ದೀರ್ಘಕಾಲದ ಆರೋಗ್ಯ ಸಮಸ್ಯೆಗಳಿಂದ ಪರಿಹಾರ ಪಡೆಯುತ್ತೀರಿ. ಉದ್ಯೋಗಿಗಳಿಗೆ ಉನ್ನತ ಹುದ್ದೆ ದೊರೆಯುತ್ತದೆ. ಮನೆಯಲ್ಲಿ ಹೊಸ ಕಾರ್ಯಕ್ರಮಗಳನ್ನು ಪ್ರಾರಂಭಿಸುತ್ತೀರಿ,9980060275 05,🦑ಸಿಂಹ…
ಬೆಂಗಳೂರು : ಹಿಂಸೆ ಹಾಗೂ ಪ್ರಚೋದನೆಗಳನ್ನು ತಡೆದರೆ ಸಮಾಜದ ಒಳಿತು ಸಾಧ್ಯ. ಸಮಾಜದ ಶಾಂತಿ ಸುವ್ಯವಸ್ಥೆ, ಜನರ ಆಸ್ತಿ, ಮಾನ, ಪ್ರಾಣಗಳನ್ನು ಕಾಪಾಡುವಲ್ಲಿ ಪೊಲೀಸ್ ಇಲಾಖೆ ಬಹುಮುಖ್ಯ ಪಾತ್ರ ವಹಿಸುತ್ತದೆ. ಯಾವುದೇ ಪ್ರದೇಶ ಸುರಕ್ಷಿತವಾಗಿದ್ದಲ್ಲಿ, ಅಲ್ಲಿನ ಪೊಲೀಸರ ಶ್ರಮವಿರುತ್ತದೆ. ರಾಜ್ಯದಲ್ಲಿ ಏಳು ಕೋಟಿ ಜನರ ರಕ್ಷಣೆಗೆ ಪೊಲೀಸರು ಬದ್ಧತೆ ತೋರುತ್ತಾರೆ. ರಾಜ್ಯದಲ್ಲಿ 2023ಕ್ಕೆ ಹೋಲಿಸದರೆ 2024 ರಲ್ಲಿ ಅಪರಾಧಗಳ ಸಂಖ್ಯೆ ಕಡಿಮೆಯಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಬೆಂಗಳೂರಿನ ಕೋರಮಂಗಲದ ಸಿಲ್ಕ್ ಬೋರ್ಡ್ ಜಂಕ್ಷನ್ ಹತ್ತಿರ ನಿರ್ಮಿಸಿರುವ ಕೆಎಸ್‌ಆರ್‌ಪಿ ಸಮುದಾಯ ಭವನದ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ರಾಜ್ಯದ ಅಭಿವೃದ್ಧಿಯು , ಪೊಲೀಸರ ಕಾರ್ಯಕ್ಷಮತೆಯ ಮೇಲೆ ಅವಲಂಬಿತವಾಗಿರುತ್ತದೆ. ರಾಜ್ಯದಲ್ಲಿ ಶಾಂತಿ ಸುವ್ಯವಸ್ಥೆ ಹಾಗೂ ಅಭಿವೃದ್ಧಿಗೆ ನೇರ ಸಂಬಂಧವಿದೆ. ಈ ದಿಸೆಯಲ್ಲಿ ಪೊಲೀಸರು ಶ್ರಮಿಸುತ್ತಿರುವುದು ಅಭಿನಂದನೀಯ. ರಾಜ್ಯದಲ್ಲಿ ಅಪರಾಧಗಳ ಸಂಖ್ಯೆಯನ್ನು ಮತ್ತಷ್ಟು ಕಡಿಮೆಗೊಳಿಸುವತ್ತ ಪೊಲೀಸರು ಹೆಚ್ಚಿನ ಗಮನ ನೀಡಬೇಕು. ಸಮಾಜದಲ್ಲಿ ಅಶಾಂತಿ, ಹಿಂಸೆ, ಕ್ರೌರ್ಯ, ದ್ವೇಷಪೂರಿತ ಭಾಷಣದಿಂದ ಪ್ರಚೋದನೆಗಳು ಹೆಚ್ಚುತ್ತಿರುವುದನ್ನು ಕಾಣಲಾಗುತ್ತಿದೆ.…
ರಾಯಚೂರ : ಕರ್ನಾಟಕ ರಾಜ್ಯದಿಂದಲೇ ಹೆಚ್ಚಿನ ಸಂಖ್ಯೆಯಲ್ಲಿ ಬರುವ ಭಕ್ತರ ಅನುಕೂಲಕ್ಕಾಗಿ ಮಂತ್ರಾಲಯದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ವಸತಿ ಗೃಹಗಳ ನಿರ್ಮಾಣಕ್ಕೆ ಕ್ರಮವಹಿಸುವುದಾಗಿ ಸಾರಿಗೆ ಮತ್ತು ಮುಜರಾಯಿ ಸಚಿವರಾದ ರಾಮಲಿಂಗಾರೆಡ್ಡಿ ಅವರು ಹೇಳಿದರು. ಜುಲೈ 15ರಂದು ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯ ಮಂತ್ರಾಲಯಕ್ಕೆ ಭೇಟಿ ನೀಡಿ ಶ್ರೀ ರಾಘವೇಂದ್ರ ಸ್ವಾಮಿ ಅವರ ದರ್ಶನದ ಪಡೆದು, ಮಂತ್ರಾಲಯದ ಕರ್ನಾಟಕ ಛತ್ರದಲ್ಲಿ ಧಾರ್ಮಿಕ ದತ್ತಿ ಇಲಾಖೆಯಿಂದ ನಿರ್ಮಾಣ ಮಾಡಿರುವ ನೂತನ ಹಾಗೂ ಹಳೆ ಕಟ್ಟಡಗಳ ಪರಿಶೀಲನೆ ನಡೆಸಿ ಕರ್ನಾಟಕ ರಾಜ್ಯ ವಸತಿ ಗೃಹ ಕಟ್ಟಡದ ಸಭಾಂಗಣದಲ್ಲಿ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ಮಂತ್ರಾಲಯಕ್ಕೆ ಪ್ರತಿ ದಿನ ಅಂದಾಜು 200 ಬಸ್ಸಗಳು ರಾಜ್ಯದ ಬೇರೆ ಬೇರೆ ಭಾಗಗಳಿಂದ ಬರುತ್ತವೆ. ರೈಲಿನ ಮೂಲಕವು ಜನರು ಮಂತ್ರಾಲಯಕ್ಕೆ ಬರುತ್ತಾರೆ. ಆಂಧ್ರಕ್ಕೆ ಹೋಲಿಸಿದರೆ ಶೇ.60ರಷ್ಟು ಜನರು ಕರ್ನಾಟಕ ರಾಜ್ಯದಿಂದಲೇ ಮಂತ್ರಾಲಯಕ್ಕೆ ಆಗಮಿಸುತ್ತಾರೆ. ಈ ಬಗ್ಗೆ ಮಂತ್ರಾಲಯದ ಸ್ವಾಮೀಜಿ ಅವರೊಂದಿಗೆ ಚರ್ಚಿಸಿದಾಗ, ಕರ್ನಾಟಕದಿಂದ ಬರುವ ಭಕ್ತರ ಅನುಕೂಲಕ್ಕಾಗಿ ಮಂತ್ರಾಲಯದಲ್ಲಿ ವಸತಿ ಗೃಹಗಳ ನಿರ್ಮಾಣಕ್ಕೆ ಸೂಕ್ತವಾದ ಜಾಗದ…
ಬೆಂಗಳೂರು : ಬೆಂಗಳೂರು: ಸರ್ಕಾರಿ ಶಾಲಾ ಮಕ್ಕಳಿಗೆ ಕೃತಕ ಬುದ್ಧಿಮತ್ತೆ ಆಧಾರಿತ ಆನ್ಲೈನ್ ಹಾಜರಾತಿಗೆ ಸಿದ್ಧತೆ ನಡೆಸುತ್ತಿರುವ ಬೆನ್ನಲ್ಲೇ ಶಾಲಾ ಶಿಕ್ಷಣ ಇಲಾಖೆ ಸಿಬ್ಬಂದಿಗೂ ಆನ್ಲೈನ್ ಹಾಜರಾತಿಗೆ ಆದೇಶ ಹೊರಡಿಸಿದೆ. ಈ ಸಂಬಂಧ ಕೂಡಲೇ ಆಧಾರ್ ಸಂಖ್ಯೆ ಅಪ್ಡೇಟ್ ಮಾಡಬೇಕು, ಇಲ್ಲವಾದಲ್ಲಿ ಮುಂದಿನ ತಿಂಗಳ ವೇತನ ಪಾವತಿ ಮಾಡುವುದಿಲ್ಲ ಎಂಬ ಎಚ್ಚರಿಕೆ ನೀಡಿದೆ. ಕರ್ನಾಟಕ ಸರ್ಕಾರದಲ್ಲಿ ಪ್ರಸ್ತುತ ಚಾಲ್ತಿಯಲ್ಲಿರುವ ಹಾಜರಾತಿ ನಿರ್ವಹಣೆ ವ್ಯವಸ್ಥೆಯಲ್ಲಿ ಅನುಸರಿಸುತ್ತಿರುವ ರಿಜಿಸ್ಟರ್ ಆಧಾರಿತ ದಾಖಲಾತಿ ಮತ್ತು ಹಸ್ತಚಾಲಿತ ಸಹಿಗಳನ್ನೊಳಗೊಂಡ ಹಾಜರಾತಿಯನ್ನು ಸೆರೆಹಿಡಿಯುವ ಸಾಂಪ್ರದಾಯಿಕ ವಿಧಾನಗಳ ದೃಢಿಕರಣದ ಕುರಿತು ಸವಾಲುಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಕರ್ನಾಟಕ ಹಾಜರಾತಿ ನಿರ್ವಹಣ ವ್ಯವಸ್ಥೆ ಎಂಬ ವಿನೂತನ ತಂತ್ರಾಂಶವನ್ನು (ಮೊಬೈಲ್ ಆಧಾರಿತ ಅಪ್ಲಿಕೇಶನ್ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ (ಇ-ಆಡಳಿತ) ಇಲಾಖೆಯ ಇ-ಆಡಳಿತ ಕೇಂದ್ರವು ಅಭಿವೃದ್ಧಿಪಡಿಸಿರುತ್ತಾರೆ ಹಾಗೂ ಸದರಿ ತಂತ್ರಾಂಶವು ಕೃತಕ ಬುದ್ಧಿಮತ್ತೆ (Artificial Intelligence) ಆಧಾರಿತ face recognistion ಮತ್ತು geographical information system (GIS) ಆಧಾರಿತ ಆಧುನಿಕ ತಂತ್ರಜ್ಞಾನಗಳೊಂದಿಗೆ ಸರಳೀಕರಿಸಲಾಗಿರುತ್ತದೆ. ಆಡಳಿತ…














