Author: kannadanewsnow57

ಬೆಂಗಳೂರು : ಬೆಂಗಳೂರಿನಲ್ಲಿ ಡೆಂಗ್ಯೂ ಜ್ವರದ ಆತಂಕದ ನಡುವೆಯೇ ಇದೀಗ ಜಾಂಡೀಸ್‌ ಆತಂಕ ಶುರುವಾಗಿದ್ದು, ಮಕ್ಕಳಲ್ಲಿ ಜಾಂಡೀಸ್‌ ಪ್ರಕರಣಗಳು ಹೆಚ್ಚಾಗಿ ಕಂಡುಬರುತ್ತಿವೆ. ರಾಜ್ಯದಲ್ಲಿ ನಿನ್ನೆ ಒಂದೇ ದಿನ 445 ಜನರಿಗೆ ರಾಜ್ಯಾಧ್ಯಂತ ಡೆಂಗ್ಯೂ ಪಾಸಿಟಿವ್ ಅಂತ ತಿಳಿದು ಬಂದಿದೆ. ಹೀಗಾಗಿ ಸಕ್ರೀಯ ಪ್ರಕರಣಗಳ ಸಂಖ್ಯೆ 9,527ಕ್ಕೆ ಏರಿಕೆಯಾಗಿದೆ. ಈ ಕುರಿತಂತೆ ರಾಜ್ಯ ಆರೋಗ್ಯ ಇಲಾಖೆಯಿಂದ ಮಾಹಿತಿ ಹಂಚಿಕೊಂಡಿದ್ದು, ಕಳೆದ 24 ಗಂಟೆಯಲ್ಲಿ 2630 ಜನರನ್ನು ಡೆಂಗ್ಯೂ ಪತ್ತೆ ಪರೀಕ್ಷೆಗೆ ಒಳಪಡಿಸಲಾಗಿದೆ. ಇವರಲ್ಲಿ 445 ಮಂದಿಗೆ ಡೆಂಗ್ಯೂ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ ಅಂತ ತಿಳಿಸಿದೆ. ಬಿಬಿಎಂಪಿ ವ್ಯಾಪ್ತಿಯಲ್ಲಿ 294, ತುಮಕೂರು 19, ಧಾರವಾಡ 12, ಬೀದರ್ 72, ಬಳ್ಳಾರಿ 3, ಮಂಡ್ಯ 33, ದಕ್ಷಿಣ ಕನ್ನಡ 62, ಉಡುಪಿ 5 ಹಾಗೂ ಚಿಕ್ಕಮಗಳೂರು 13 ಸೇರಿದಂತೆ 445 ಜನರಿಗೆ ಡೆಂಗ್ಯೂ ಪಾಸಿಟಿವ್ ಅಂತ ಪರೀಕ್ಷೆಯಿಂದ ತಿಳಿದು ಬಂದಿದೆ. ಬೆಂಗಳೂರಿನಲ್ಲಿ ಕಳೆದ ಕೆಲದಿನಗಳಿಂದ ಡೆಂಗ್ಯೂ ಜ್ವರ ಅಬ್ಬರ ಶುರುವಾಗಿದ್ದು, ಈ ನಡುವೆ ಇದೀಗ ಜಾಂಡೀಸ್‌ ಸೋಂಕಿನ…

Read More

ಬೆಂಗಳೂರು : ಇಂದಿನಿಂದ ವಿಧಾನಮಂಡಲದ ಅಧಿವೇಶನ ನಡೆಯುತ್ತಿದ್ದು, ಪರಿಷತ್‌ ಸಭಾನಾಯಕರಾಗಿ ಎನ್.ಎಸ್.‌ ಭೋಸರಾಜು ಅವರು ನೇಮಕರಾಗಿದ್ದಾರೆ. ವಿಧಾನ ಪರಿಷತ್‌ ಸಭಾನಾಯಕರಾಗಿ ಜೆಡಿಎಸ್‌ ನ ವಿಧಾನಪರಿಷತ್‌ ಸದಸ್ಯರಾಗಿರುವ ಎನ್.ಎಸ್.‌ ಬೋಸರಾಜು ಅವರು ನೇಮಕರಾಗಿದ್ದಾರೆ. ವಿಧಾನಮಂಡಲ ಅಧಿವೇಶನ ಆರಂಭವಾಗಿದ್ದು, ಮೊದಲಿಗೆ ಅಗಲಿದ ಗಣ್ಯರಿಗೆ ಸಂತಾಪ ಸೂಚಿಸಲಾಗಿದೆ.

Read More

ನವದೆಹಲಿ : ಭಾರತದ ವಿದೇಶಾಂಗ ಕಾರ್ಯದರ್ಶಿಯಾಗಿ ವಿಕ್ರಮ್ ಮಿಸ್ರಿ ಸೋಮವಾರ ಅಧಿಕಾರ ಸ್ವೀಕರಿಸಿದರು. ವಿದೇಶಾಂಗ ವ್ಯವಹಾರಗಳ ಸಚಿವಾಲಯ (ಎಂಇಎ) ವಿದೇಶಾಂಗ ಕಾರ್ಯದರ್ಶಿ ಮಿಸ್ರಿ ಅವರಿಗೆ ಮುಂಬರುವ ಯಶಸ್ವಿ ಅಧಿಕಾರಾವಧಿಗಾಗಿ ಆತ್ಮೀಯ ಗೌರವ ಮತ್ತು ಶುಭಾಶಯಗಳನ್ನು ವ್ಯಕ್ತಪಡಿಸಿದೆ. “ಶ್ರೀ ವಿಕ್ರಮ್ ಮಿಸ್ರಿ ಅವರು ಇಂದು ವಿದೇಶಾಂಗ ಕಾರ್ಯದರ್ಶಿಯಾಗಿ ಅಧಿಕಾರ ವಹಿಸಿಕೊಂಡರು. #TeamMEA ವಿದೇಶಾಂಗ ಕಾರ್ಯದರ್ಶಿ ಮಿಸ್ರಿ ಅವರಿಗೆ ಆತ್ಮೀಯ ಸ್ವಾಗತವನ್ನು ನೀಡುತ್ತೇವೆ ಮತ್ತು ಅವರ ಮುಂದಿನ ಯಶಸ್ವಿ ಅಧಿಕಾರಾವಧಿಯನ್ನು ಬಯಸುತ್ತೇವೆ” ಎಂದು ಎಂಇಎ ವಕ್ತಾರ ರಣಧೀರ್ ಜೈಸ್ವಾಲ್ ಎಕ್ಸ್ನಲ್ಲಿ ಪೋಸ್ಟ್ ಮಾಡಿದ್ದಾರೆ. ವಿನಯ್ ಮೋಹನ್ ಕ್ವಾತ್ರಾ ಅವರ ನಂತರ ವಿಕ್ರಮ್ ಮಿಸ್ರಿ ಅವರನ್ನು ಮುಂದಿನ ವಿದೇಶಾಂಗ ಕಾರ್ಯದರ್ಶಿಯಾಗಿ ನೇಮಿಸಲು ವಿದೇಶಾಂಗ ಸಚಿವಾಲಯ ಮಾಡಿದ ಪ್ರಸ್ತಾಪವನ್ನು ಸಂಪುಟದ ನೇಮಕಾತಿ ಸಮಿತಿ (ಎಸಿಸಿ) ಅನುಮೋದಿಸಿದೆ. ಜುಲೈ 14 ರಂದು, ವಿದೇಶಾಂಗ ಸಚಿವ ಎಸ್ ಜೈಶಂಕರ್ ನಿರ್ಗಮಿತ ವಿದೇಶಾಂಗ ಕಾರ್ಯದರ್ಶಿ ಕ್ವಾತ್ರಾ ಅವರಿಗೆ ವಿದಾಯ ಹೇಳಿದರು, ಕಳೆದ ದಶಕದಲ್ಲಿ ಭಾರತದ ವಿದೇಶಾಂಗ ನೀತಿ ಮತ್ತು ರಾಷ್ಟ್ರೀಯ ಭದ್ರತೆಗೆ…

Read More

ಬೆಂಗಳೂರು: ಯಜಮಾನಿಯರಿಗೆ ರಾಜ್ಯ ಸರ್ಕಾರವು ಭರ್ಜರಿ ಸಿಹಿಸುದ್ದಿ ನೀಡಿದ್ದು, ಇಂದು ಸಂಜೆ ಒಳಗೆ ಗೃಹಲಕ್ಷ್ಮಿ ಹಣ ಖಾತೆಗೆ ಜಮಾ ಆಗಲಿದ್ದು, ಇನ್ಮುಂದೆ ಪ್ರತಿ ತಿಂಗಳ ೧೫ ನೇ ತಾರೀಕ್‌ ಯಜಮಾನಿಯರ ಖಾತೆಗೆ ಹಣ ಜಮೆ ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಚುನಾವಣೆ ನೀತಿ ಸಂಹಿತೆಯಿಂದಾಗಿ ಜೂನ್‌ ತಿಂಗಳ ರಾಜ್ಯದ ಮಹಿಳೆಯರ ಸಬಲೀಕರಣಕ್ಕಾಗಿ ಕರ್ನಾಟಕ ರಾಜ್ಯ ಸರ್ಕಾರವು “ಗೃಹ ಲಕ್ಷ್ಮೀ” ಯೋಜನೆ (Gruha Lakshmi Scheme Karnataka) ಯನ್ನು ರೂಪಿಸಿದೆ. ಮಹಿಳೆಯರ ಆರ್ಥಿಕ ಸಬಲೀಕರಣದ ದೃಷ್ಠಿಯಿಂದ ಈ ಯೋಜನೆಯನ್ನು ಜಾರಿಗೆ ತರಲಾಗಿದೆ. ಕುಟುಂಬದ ನಿರ್ವಹಣೆಯಲ್ಲಿ ಮನೆ ಯಜಮಾನಿಯ ಪಾತ್ರ ಬಹುದೊಡ್ಡದು. ಆದ್ದರಿಂದ ಮನೆಯ ನಿರ್ವಹಣೆಗೆ ಅನುಕೂಲವಾಲೆಂದು ಸರ್ಕಾರವು ಕುಟುಂಬದ ಯಜಮಾನಿಯ ಖಾತೆಗೆ ಪ್ರತಿ ತಿಂಗಳು ರೂ.2,000 ಜಮಾ ಮಾಡಲು ಯೋಜನೆ ಅನುಷ್ಠಾನ ಮಾಡಿದೆ.ಹಣ ಸ್ಪಲ್ಪ ತಡವಾಗಿದೆ. ಹೀಗಾಗಿ ಇಂದು ಜೂನ್‌, ಜುಲೈ ತಿಂಗಳ ಗೃಹ ಲಕ್ಷ್ಮಿ ಹಣ ಖಾತೆಗೆ ಜಮಾ ಆಗಲಿದ್ದು, ಇನ್ಮುಂದೆ ಪ್ರತಿ ತಿಂಗಳ 15ರೊಳಗೆ ಹಣ ಪಾವತಿಯಾಗಲಿದೆ ಎಂದು ಮಹಿಳಾ…

Read More

ನವದೆಹಲಿ : ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್ಬಿಐ) ಜುಲೈ 15 ರಿಂದ ಜಾರಿಗೆ ಬರುವಂತೆ ಹೆಚ್ಚಿನ ಅವಧಿಗಳಲ್ಲಿ ತನ್ನ ಮಾರ್ಜಿನಲ್ ಕಾಸ್ಟ್ ಆಫ್ ಲೆಂಡಿಂಗ್ ದರಗಳನ್ನು (ಎಂಸಿಎಲ್ಆರ್) 5 ರಿಂದ 10 ಬೇಸಿಸ್ ಪಾಯಿಂಟ್ಗಳಷ್ಟು (ಬಿಪಿಎಸ್) ಹೆಚ್ಚಿಸಿದೆ. ಈ ಹೆಚ್ಚಳವು ಗ್ರಾಹಕರಿಗೆ ಸಾಲಗಳು ಮತ್ತು ಸಮಾನ ಮಾಸಿಕ ಕಂತುಗಳ (ಇಎಂಐ) ಮೇಲೆ ಪರಿಣಾಮ ಬೀರುವ ನಿರೀಕ್ಷೆಯಿದೆ, ವಿಶೇಷವಾಗಿ ಹೆಚ್ಚಿನ ಕಾರ್ಪೊರೇಟ್ ಸಾಲಗಳ ಮೇಲೆ ಪರಿಣಾಮ ಬೀರುತ್ತದೆ. ಎಂಸಿಎಲ್ಆರ್ಗೆ ಲಿಂಕ್ ಮಾಡಲಾದ ವೈಯಕ್ತಿಕ ಮತ್ತು ವಾಹನ ಸಾಲಗಳ ಇಎಂಐಗಳು ಹೆಚ್ಚಾಗುತ್ತವೆ, ಆದರೆ ರೆಪೊ ದರಕ್ಕೆ ಸಂಬಂಧಿಸಿದ ಗೃಹ ಸಾಲಗಳು ಬದಲಾಗುವುದಿಲ್ಲ. ಏಪ್ರಿಲ್ 2016 ರಲ್ಲಿ ಪರಿಚಯಿಸಲಾದ ಎಂಸಿಎಲ್ಆರ್ ಕನಿಷ್ಠ ಬಡ್ಡಿದರವಾಗಿದ್ದು, ಬ್ಯಾಂಕುಗಳು ಸಾಲ ನೀಡಲು ಸಾಧ್ಯವಿಲ್ಲ. ಎಸ್ಬಿಐ ಎಂಸಿಎಲ್ಆರ್ ದರ ಏರಿಕೆ ರಾತ್ರೋರಾತ್ರಿ ಸಾಲದ ಅವಧಿ: 5 ಬಿಪಿಎಸ್ ನಿಂದ 8.10% ಕ್ಕೆ ಹೆಚ್ಚಳ ಒಂದು ತಿಂಗಳ ಸಾಲದ ಅವಧಿ: 10 ಬಿಪಿಎಸ್ ನಿಂದ 8.35% ಕ್ಕೆ ಹೆಚ್ಚಳ ಮೂರು ತಿಂಗಳ…

Read More

ಬೆಂಗಳೂರು : ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದಲ್ಲಿ ಹೆಸರು ಕೇಳಿಬಂದ ಹಿನ್ನೆಲಯಲ್ಲಿ ನಾಪತ್ತೆಯಾಗಿದ್ದ ಶಾಸಕ ಬಸನಗೌಡ ದದ್ದಲ್‌ ಪ್ರತ್ಯೇಕ್ಷರಾಗಿದ್ದಾರೆ.  ಬೆಂಗಳೂರಿನ ವಿಧಾನಸೌಧದಲ್ಲಿ ಇಂದು ವಿಧಾನಮಂಡಲ ಅಧಿವೇಶನಕಕೆ ಆಗಮಿಸಿದ್ದಾರೆ. ಈ ವೇಳೆ ಮಾತನಾಡಿದ ಅವರು, ಎರಡು ದಿನ ಊರಿಗೆ ಹೋಗಿದ್ದೆ.  ಸದನದಲ್ಲಿ ವಾಲ್ಮೀಕಿ ಹಗರಣದ ಬಗ್ಗೆ ಮಾತನಾಡುತ್ತೇನೆ ಎಂದು ತಿಳಿಸಿದ್ದಾರೆ. ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದಲ್ಲಿ ಹೆಸರು ಕೇಳಿ ಬಂದ ಬಳಿಕ ಶಾಸಕ ಬಸನಗೌಡ ದದ್ದಲ್‌ ಕಾಣೆಯಾಗಿದ್ದಾರೆ ಎಂದು ಬಿಜೆಪಿ ನಿನ್ನೆಯಷ್ಟೇ ಪೋಸ್ಟರ್‌ ರಿಲೀಸ್‌ ಮಾಡಿತ್ತು.  ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದ 187 ಕೋಟಿ ರೂಪಾಯಿ ಹಗರಣ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಈ ಪ್ರಕರಣ ಸಂಬಂಧ ಈಗಾಗಲೇ ಈ ಇಲಾಖೆಯ ಸಚಿವರಾಗಿದ್ದ ಶಾಸಕ ನಾಗೇಂದ್ರ ಅವರನ್ನು ಇಡಿ ಅಧಿಕಾರಿಗಳು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸಿದ್ದಾರೆ.

Read More

ನವದೆಹಲಿ : ಪಿಎಂ-ಕಿಸಾನ್ ಯೋಜನೆ ನಮ್ಮ ದೇಶದಲ್ಲಿ ಜಾರಿಗೆ ತರಲಾಗುತ್ತಿರುವ ಅತ್ಯುತ್ತಮ ಯೋಜನೆಗಳಲ್ಲಿ ಒಂದಾಗಿದೆ. ಮೋದಿ ಸರ್ಕಾರವು ಮೂರು ಕಂತುಗಳಲ್ಲಿ ರೈತರ ಖಾತೆಗಳಿಗೆ 6,000 ರೂ.ಗಳನ್ನು ಜಮಾ ಮಾಡುತ್ತಿದೆ. ಈ ಯೋಜನೆಯು ರೈತರ ಕಲ್ಯಾಣದ ಗುರಿಯನ್ನು ಹೊಂದಿದೆ ಎಂಬುದು ಗಮನಾರ್ಹವಾಗಿದೆ. ಯೋಜನೆಯ ಅನುಷ್ಠಾನದಿಂದ ರೈತರು ಸಂಪೂರ್ಣ ತೃಪ್ತರಾಗಿದ್ದಾರೆ. ಕೆಲವು ದಿನಗಳ ಹಿಂದೆ, ಈ ವರ್ಷದ ರೈತರ ಖಾತೆಗಳಿಗೆ ಹಣವನ್ನು ಜಮಾ ಮಾಡಲಾಗಿದೆ. ಆದಾಗ್ಯೂ, ಕೆಲವು ರೈತರು ತಮ್ಮ ಖಾತೆಗಳಿಗೆ ಹಣವನ್ನು ಜಮಾ ಮಾಡುತ್ತಿಲ್ಲ ಎಂದು ಹೇಳುತ್ತಾರೆ. ಈ ಯೋಜನೆ 2019 ರಿಂದ ಜಾರಿಯಲ್ಲಿದೆ. ಕೆಲವು ಮಾನದಂಡಗಳ ಪ್ರಕಾರ ಕೆಲವು ಜನರಿಗೆ ಪಿಎಂ-ಕಿಸಾನ್ ಯೋಜನೆಯ ಪ್ರಯೋಜನಗಳನ್ನು ಪಡೆಯಲು ಸಾಧ್ಯವಿಲ್ಲ ಎಂದು ತೋರುತ್ತದೆ. ಸ್ವಂತ ಕೃಷಿ ಭೂಮಿ ಇಲ್ಲದವರು ಈ ಯೋಜನೆಗೆ ಅರ್ಹರಾಗಿರುವುದಿಲ್ಲ. ವಾರ್ಷಿಕ ಆದಾಯವು ಆದಾಯ ತೆರಿಗೆ ಇಲಾಖೆಯ ಮಾನದಂಡಗಳಿಗಿಂತ ಹೆಚ್ಚಿದ್ದರೂ ಸಹ ಈ ಯೋಜನೆಯ ಪ್ರಯೋಜನಗಳನ್ನು ಪಡೆಯಲು ಸಾಧ್ಯವಿಲ್ಲ. ಈ ಕೆವೈಸಿಯನ್ನು ಪೂರ್ಣಗೊಳಿಸದವರು ಸಹ ಈ ಯೋಜನೆಯ ಪ್ರಯೋಜನಗಳನ್ನು ಪಡೆಯಲು ಸಾಧ್ಯವಾಗುವುದಿಲ್ಲ.…

Read More

ಬೆಂಗಳೂರು : ಇಂದಿನಿಂದ ವಿಧಾನಮಂಡಲ ಅಧಿವೇಶನ ನಡೆಯಲಿದ್ದು, ವಿಧಾನಸೌಧಕ್ಕೆ ಅಗಮಿಸಿದ ಸಿಎಂ ಸಿದ್ದರಾಮಯ್ಯ ಪ್ರತಿಭಟನೆಯ ಬಿಸಿ ತಟ್ಟಿದೆ. ವಾಲ್ಮೀಕಿ, ಮುಡಾ ಹಗರಣ ಖಂಡಿಸಿ ಇಂದು ಬಿಜೆಪಿ ಪ್ರತಿಭಟನೆ ನಡೆಸುತ್ತಿದ್ದು, ಈ ವೇಳೆ ಬೆಂಗಳೂರಿನ ವಾಲ್ಮೀಕಿ ಪ್ರತಿಮೆಯಿಂದ ಪ್ರತಿಭಟನೆ ಶುರು ಮಾಡಿದೆ. ಈ ವೇಳೆ ವಿಧಾನಸೌಧಕ್ಕೆ ಆಗಮಿಸಿದ ಸಿಎಂ ಸಿದ್ದರಾಮಯ್ಯಗೆ ಪ್ರತಿಭಟನೆ ಬಿಸಿ ತಟ್ಟಿದ್ದು, ಬಿಜೆಪಿ ನಾಯಕರು ರಾಜ್ಯ ಸರ್ಕಾರದ ವಿರುದ್ಧ ದಿಕ್ಕಾರ ಕೂಗಿದ್ದಾರೆ. ವಾಲ್ಮೀಕಿ ನಿಗಮದ ಬಹುಕೋಟಿ‌ ಹಗರಣ,‌ ಎಸ್.ಸಿ.ಎಸ್.ಪಿ/ಟಿ.ಎಸ್.ಪಿ. ಅನುದಾನ ದುರ್ಬಳಕೆ‌ ಹಾಗೂ ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರ ಖಂಡಿಸಿ ಜುಲೈ 15ರ ಸೋಮವಾರ ಬೆಂಗಳೂರಿನ ಶಾಸಕರ ಭವನದ ಮಹರ್ಷಿ ವಾಲ್ಮೀಕಿ ಪ್ರತಿಮೆ ಬಳಿ ಬಿಜೆಪಿ ಪ್ರತಿಭಟನೆ ನಡೆಸಲಿದೆ ಎಂದು ಬಿಜೆಪಿ ತಿಳಿಸಿದೆ.

Read More

ಬೆಂಗಳೂರು : ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಶೂ ಕಳ್ಳತನವಾಗಿದ್ದು, ಎಷ್ಟೇ ಹುಡುಕಿದರೂ ಸಿಗದಿದ್ದಾಗ  ಬೇರೆ ಶೂ ಹಾಕಿಕೊಂಡು ಹೋಗಿದ್ದಾರೆ. ಬೆಂಗಳೂರಿನ ವೈಟ್‌ ಟಾಪಿಂಗ್‌ ಕಾಮಗಾರಿಗೆ ಪೂಜೆಗೆ ಆಗಮಿಸಿದ್ದ ಡಿಸಿಎಂ ಡಿ.ಕೆ. ಶಿವಕುಮಾರ್‌ ಪೂಜೆಗೆ ಶೂ ಬಿಚ್ಚಿ ಪೂಜೆ ಮಾಡಿದ್ದಾರೆ. ಬಳಿಕ ಶೂ ಹಾಕಿಕೊಳ್ಳಲು ಹೋದಾಗ ಕಳ್ಳತನವಾಗಿದೆ. ಸದಾಶಿವನಗರದ ಭಾಷ್ಯಂ ಸರ್ಕಲ್‌ ನಲಿ ಈ ಘಟನೆ ನಡೆದಿದ್ದು, ಎಷ್ಟೇ ಹುಡುಕಿದ್ರೂ ಶೂ ಸಿಗದ ಹಿನ್ನೆಲೆಯಲ್ಲಿ ಕಾರಿನಲ್ಲಿದ್ದ ಬೇರೆ ಶೂ ಹಾಕಿಕೊಂಡು ಪ್ರಯಾಣ ಬೆಳೆಸಿದ್ದಾರೆ.

Read More

ಬೆಂಗಳೂರು : ಜೆಡಿಎಸ್‌ ಪಕ್ಷದ ಶಾಸಕಾಂಗದ ನಾಯಕರಾಗಿ ಚಿಕ್ಕನಾಯಕನಹಳ್ಳಿ ಶಾಸಕ ಸುರೇಶ ಬಾಬು ಅವರು ಆಯ್ಕೆಯಾಗಿದ್ದಾರೆ ಎಂದು ವರದಿಯಾಗಿದೆ.  ಚಿಕ್ಕನಾಯಕನಹಳ್ಳಿ ಜೆಡಿಎಸ್‌ ಶಾಸಕ ಸುರೇಶ್‌ ಬಾಬು ಹಾಗೂ ಶಾಸಕ ಜಿ.ಟಿ. ದೇವೇಗೌಡ ನಡುವೆ ಶಾಸಕಾಂಗ ನಾಯಕನ ಸ್ಥಾನಕ್ಕೆ ಭಾರೀ ಪೈಪೋಟಿ ಏರ್ಪಟ್ಟಿತ್ತು. ಕೊನೆಗೂ ಸುರೇಶ್‌ ಬಾಬು ಅವರು ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾಗಿದ್ದಾರೆ.

Read More