Subscribe to Updates
Get the latest creative news from FooBar about art, design and business.
Author: kannadanewsnow57
01,🪐ಮೇಷ ರಾಶಿ🪐 📖,ಸಮಾಜದ ಹಿರಿಯರ ಕೃಪಾಕಟಾಕ್ಷದಿಂದ ಮಹತ್ವದ ಕಾರ್ಯಗಳು ಪೂರ್ಣಗೊಳ್ಳುತ್ತವೆ. ಹೊಸ ವ್ಯವಹಾರವನ್ನು ಪ್ರಾರಂಭಿಸುತ್ತೀರಿ. ಬಂಧು ಮಿತ್ರರಿಂದ ಶುಭ ಆಹ್ವಾನಗಳು ಬರುತ್ತವೆ. ಹಠಾತ್ ಧನಲಾಭ ದೊರೆಯುತ್ತದೆ. ವ್ಯಾಪಾರಗಳು ಹೆಚ್ಚು ಅಭಿವೃದ್ಧಿ ಹೊಂದುತ್ತವೆ. ವೃತ್ತಿಪರ ಉದ್ಯೋಗಗಳಲ್ಲಿ ನಿರೀಕ್ಷಿತ ಪ್ರಗತಿ ಸಾಧಿಸಲಾಗುತ್ತದೆ, 9980060275 ಅನಿರುದ್ಧ ಜೋಶಿ 02,🪐ವೃಷಭ ರಾಶಿ🪐 📖,ಪ್ರಯಾಣದ ವಿಷಯದಲ್ಲಿ ಜಾಗರೂಕರಾಗಿರಬೇಕು, ವೃತ್ತಿ ಮತ್ತು ವ್ಯಾಪಾರದಲ್ಲಿ ಶ್ರಮ ಶೀಲತೆ ಹೆಚ್ಚಾಗುತ್ತದೆ. ಕುಟುಂಬದ ಸದಸ್ಯರ ಅನಾರೋಗ್ಯ ಸಮಸ್ಯೆಗಳು ಭಾವನಾತ್ಮಕವಾಗಿ ನೋವುಂಟು ಮಾಡುತ್ತದೆ. ನಿರುದ್ಯೋಗ ಪ್ರಯತ್ನಗಳು ನಿಧಾನವಾಗಿ ಸಾಗುತ್ತದೆ. ಹೊಸ ಸಾಲದ ಪ್ರಯತ್ನಗಳು ಕೂಡಿ ಬರುವುದಿಲ್ಲ. ಪ್ರಮುಖ ವಿಷಯಗಳ ಬಗ್ಗೆ ಯೋಚಿಸಿ ಮುಂದೆ ಸಾಗಬೇಕು,9980060275 ಅನಿರುದ್ಧ ಜೋಶಿ 03,🪐ಮಿಥುನ ರಾಶಿ🪐 📖,ಮಾತೃಪಕ್ಷದ ಬಂಧು ಮಿತ್ರರೊಂದಿಗೆ ಸ್ಥಿರಾಸ್ತಿ ವಿವಾದ ಉಂಟಾಗುತ್ತದೆ. ವೃತ್ತಿಪರ ವ್ಯವಹಾರದಲ್ಲಿ ನಷ್ಟದ ಸೂಚನೆಗಳಿವೆ. ಹೆಚ್ಚಿನ ಪ್ರಯತ್ನದಿಂದ ಕಡಿಮೆ ಫಲಿತಾಂಶವನ್ನು ಪಡೆಯುತ್ತೀರಿ. ಉದ್ಯೋಗದಲ್ಲಿ ಅಧಿಕಾರಿಗಳೊಂದಿಗೆ ವಿವಾದ ಉಂಟಾಗುತ್ತದೆ. ಕೈಗೊಂಡ ಕೆಲಸಗಳಲ್ಲಿ ರಸ್ತೆ ತಡೆ ಉಂಟಾಗುತ್ತದೆ. ಕುಟುಂಬ ಸದಸ್ಯರೊಂದಿಗೆ ದೇಗುಲಗಳಿಗೆ ಭೇಟಿ ನೀಡುತ್ತೀರಿ, 9980060275 ಅನಿರುದ್ಧ ಜೋಶಿ…
ಬೆಂಗಳೂರು : ರಾಜ್ಯದಲ್ಲಿ ಹೆಚ್ಚುತ್ತಿರುವ ಆನೆ-ಮಾನವ ಸಂಘರ್ಷ ನಿಯಂತ್ರಿಸಲು ಮತ್ತು ಕಾಡಿನಂಚಿನ ರೈತರ ಬೆಳೆ ರಕ್ಷಿಸುವ ನಿಟ್ಟಿನಲ್ಲಿ ಆನೆ ಪಥ (ಕಾರಿಡಾರ್), ಆವಾಸಸ್ಥಾನ ರಕ್ಷಣೆಗೆ ಆಧುನಿಕ ತಂತ್ರಜ್ಞಾನ ಬಳಸಲು ತೀರ್ಮಾನಿಸಲಾಗಿದ್ದು, ಐಐಎಸ್.ಸಿ.ಯೊಂದಿಗೆ ಒಡಂಬಡಿಕೆಗೆ ಸಹಿ ಹಾಕಲಾಗಿದೆ ಎಂದು ಅರಣ್ಯ, ಜೀವಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ. ವಿಕಾಸಸೌಧದ ತಮ್ಮ ಕಚೇರಿಯಲ್ಲಿ ಐ.ಐ.ಎಸ್.ಸಿ.ಯ ಪ್ರೊ. ರಮನ್ ಸುಕುಮಾರ್ ಮತ್ತು ಮುಖ್ಯ ವನ್ಯಜೀವಿ ಪರಿಪಾಲಕ ಪಿ.ಸಿ. ರೇ ಸಹಿ ಹಾಕಿ ಒಡಂಬಡಿಕೆ ವಿನಿಮಯ ಮಾಡಿಕೊಂಡ ಕಾರ್ಯಕ್ರಮಕ್ಕೆ ಸಾಕ್ಷಿಯಾಗಿ ಮಾತನಾಡಿದ ಅವರು, ಹಾಸನ, ಕೊಡಗು ಭಾಗದಲ್ಲಿ ಹೆಚ್ಚಾಗಿ ಆನೆ-ಮಾನವ ಸಂಘರ್ಷವಿದ್ದು, ಜೀವಹಾನಿ, ಬೆಳೆ ಹಾನಿ ಸಂಭವಿಸುತ್ತಿದೆ ಇದರ ನಿಯಂತ್ರಣಕ್ಕೆ ಎಲ್ಲ ಸಾಧ್ಯ ಕ್ರಮಗಳನ್ನು ಇಲಾಖೆ ಕೈಗೊಳ್ಳುತ್ತಿದೆ ಎಂದರು. ಪ್ರಸ್ತುತ ಮಾನವ-ಆನೆ ಸಂಘರ್ಷ ಇತರ ಪ್ರದೇಶಕ್ಕೂ ವಿಸ್ತರಿಸುತ್ತಿದ್ದು, ಪರಿಸರ ಸಂಶೋಧನೆ ಮತ್ತು ಕ್ಷೇತ್ರ ಅನುಷ್ಠಾನವನ್ನು ಸಮನ್ವಯಗೊಳಿಸುವ ಮೂಲಕ, ಆನೆಪಥ, ಆವಾಸಸ್ಥಾನಗಳ ಸಂರಕ್ಷಣೆಗೆ ಈ ಒಡಂಬಡಿಕೆ ಮಾಡಿಕೊಳ್ಳಲಾಗಿದೆ. ಏಷ್ಯನ್ ಆನೆಗಳ ಭೂಪ್ರದೇಶ ನಿರ್ವಹಣೆ”ಗಾಗಿ ಐದು…
ಬೆಂಗಳೂರು : ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿ ಸಾರಿಗೆ ಇಲಾಖೆಯ ನೌಕರರು ಸರ್ಕಾರದ ವಿರುದ್ಧ ಸಿಡಿದೆದ್ದಿದ್ದು. ಆಗಸ್ಟ್ 5 ರಿಂದ ಮುಷ್ಕರಕ್ಕೆ ಕರೆ ಕೊಟ್ಟಿದ್ದು, ಬಸ್ ಸಂಚಾರದಲ್ಲಿ ವ್ಯತ್ಯಯವಾಗುವ ಸಾಧ್ಯತೆಯಿದೆ. ವೇತನ ಪರಿಷ್ಕರಣೆಯ 38 ತಿಂಗಳ ಹಿಂಬಾಕಿ ಪಾವತಿ ಸೇರಿದಂತೆ ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಆಗಸ್ಟ್ 5 ರಿಂದ ಸಾರಿಗೆ ನೌಕರರ ಮುಷ್ಕರಕ್ಕೆ ಕರೆ ನೀಡಲಾಗಿದೆ. ಬೇಡಿಕೆಗಳ ಈಡೇರಿಕೆ ಬಗ್ಗೆ ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸದ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ಆಗಸ್ಟ್ 5 ರಿಂದ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಿದೆ. ಸಮಿತಿ ಪದಾಧಿಕಾರಿಗಳೊಂದಿಗೆ ಜುಲೈ 7 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸಭೆ ನಡೆಸಿದ್ದು, ನೌಕರರ ವೇತನ ಪರಿಷ್ಕರಣಿಯ 38 ತಿಂಗಳ ಹಿಂಬಾಕಿ ಪಾವತಿ ಸೇರಿ ಬೇಡಿಕೆಗಳ ಬಗ್ಗೆ ಮುಂದಿನ ಒಂದು ವಾರದೊಳಗೆ ಸಭೆ ನಡೆಸುವುದಾಗಿ ಭರವಸೆ ನೀಡಿದ್ದರು. ಇದಾಗಿ 12 ದಿನ ಕಳೆದರೂ ಸಭೆ ಕರೆದಿಲ್ಲ. ಹೀಗಾಗಿ ಮುಷ್ಕರಕ್ಕೆ…
ಬೆಂಗಳೂರು : ಬೆಂಗಳೂರಿನಲ್ಲಿ ರಾಕ್ಷಸಿ ಕೃತ್ಯವೊಂದು ನಡೆದಿದ್ದು, ರಸ್ತೆಯಲ್ಲಿ ಮಲಗಿದ್ದ ನಾಯಿ ಮೇಲೆ ಕಾರು ಹತ್ತಿಸಿ ಚಾಲಕ ವಿಕೃತಿ ಮೆರೆದಿದ್ದಾನೆ. ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯಲ್ಲಿ ಜುಲೈ 13 ರಂದು ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ರಸ್ತೆ ಪಕ್ಕದಲ್ಲಿ ತನ್ನ ಪಾಡಿಗೆ ಮಲಗಿದ್ದ ನಾಯಿ ಮೇಲೆ ಕಾರು ಚಾಲಕ ಏಕಾಏಕಿ ಕಾರು ಹತ್ತಿಸಿ ಹೋಗಿದ್ದಾನೆ. ಗಂಭೀರವಾಗಿ ಗಾಯಗೊಂಡ ನಾಯಿ ನರಳಾಡಿದೆ. ಚಾಲಕನ ಕೃತ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಆತನ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಸಾರ್ವಜನಿಕರು ಆಗ್ರಹಿಸಿದ್ದಾರೆ. https://twitter.com/P00jaaaa/status/1944691632038883714?ref_src=twsrc%5Etfw%7Ctwcamp%5Etweetembed%7Ctwterm%5E1944691632038883714%7Ctwgr%5E0310dbca1aaac4fac062a0f3bcb32e2d3f5efc60%7Ctwcon%5Es1_c10&ref_url=https%3A%2F%2Fkannadadunia.com%2Fshocking-a-car-was-run-over-a-sleeping-dog-in-bengaluru%2F
ಶಿಕ್ಷಕಿ ಮತ್ತು ವಿದ್ಯಾರ್ಥಿನಿಯ ನಡುವಿನ ಪ್ರೀತಿ ಮತ್ತು ವಿವಾಹದ ಬಗ್ಗೆ ನಾವು ಬಹಳಷ್ಟು ಸುದ್ದಿಗಳನ್ನು ಕೇಳಿದ್ದೇವೆ. ಆದರೆ ಶಿಕ್ಷಕ ಹಾಗೂ ವಿದ್ಯಾರ್ಥಿನಿ ಸ್ಟಾಫ್ ರೂಮಿನಲ್ಲಿ ರೋಮ್ಯಾನ್ಸ್ ನಡೆಸಿರುವ ವಿಡಿಯೋವೊಂದು ವೈರಲ್ ಆಗಿದೆ. ಪ್ರಸ್ತುತ ವೈರಲ್ ಆಗುತ್ತಿರುವ ವೀಡಿಯೊದಲ್ಲಿ.. ಶಿಕ್ಷಕ ಮೊದಲು ಸ್ಟಾಫ್ ರೂಮಿಗೆ ಬಂದರು. ನಂತರ ವಿದ್ಯಾರ್ಥಿನಿ ಹಿಂಬಾಲಿಸಿದರು. ಮುತ್ತು ಮತ್ತು ಅಪ್ಪುಗೆಯನ್ನು ಕೇಳಿದಾಗ.. ಶಿಕ್ಷಕ ತಕ್ಷಣ ತಬ್ಬಿಕೊಂಡಿದ್ದಾರೆ. ಇದಕ್ಕೆ ಸಂಬಂಧಿಸಿದ ಕ್ಲಿಪಿಂಗ್ ಪ್ರಸ್ತುತ ಸಾಮಾಜಿಕ ಮಾಧ್ಯಮದಲ್ಲಿ ಚರ್ಚೆಯಾಗುತ್ತಿದೆ. ತಪ್ಪಿತಸ್ಥರು ಶಿಕ್ಷಕರೇ? ವಿದ್ಯಾರ್ಥಿಯೇ? ಅಂದರೆ. ಅಪ್ರಾಪ್ತ ಬಾಲಕಿಗೆ ಇದನ್ನೆಲ್ಲಾ ಕಲಿಸುತ್ತಿರುವ ಶಿಕ್ಷಕರೇ ತಪ್ಪು ಎಂದು ನೆಟ್ಟಿಗರು ಕಿಡಿಕಾರಿದ್ದಾರೆ. https://twitter.com/ShoneeKapoor/status/1944643377938448502?ref_src=twsrc%5Etfw%7Ctwcamp%5Etweetembed%7Ctwterm%5E1944643377938448502%7Ctwgr%5E36ffc280bba5d3080ba7a5373e2ff08f54dbbedf%7Ctwcon%5Es1_c10&ref_url=https%3A%2F%2Fm.dailyhunt.in%2Fnews%2Findia%2Fhindi%2Fkhabarindiatv-epaper-dh0578a8eab9504bc89b94918499d3e35c%2Fodishakolejmekhudkoaaglaganevalichatrakiaiimsmehuimautcmnekarravaikadiyabharosa-newsid-n672580883
ಇಂದಿನ ಕಾಲದಲ್ಲಿ ಹೆಚ್ಚುತ್ತಿರುವ ವಿದ್ಯುತ್ ಬಿಲ್ಗಳು ಪ್ರತಿ ಮನೆಯ ಬಜೆಟ್ ಅನ್ನು ಹಾಳು ಮಾಡುತ್ತಿವೆ. ನೀವು ಪ್ರತಿ ತಿಂಗಳು ಭಾರಿ ಬಿಲ್ ಪಾವತಿಸಲು ಆಯಾಸಗೊಂಡಿದ್ದರೆ, ಜಿಯೋದ 3 ಕಿಲೋವ್ಯಾಟ್ ಸೌರಶಕ್ತಿ ವ್ಯವಸ್ಥೆಯು ನಿಮಗೆ ಉತ್ತಮ ಆಯ್ಕೆಯಾಗಿದೆ. ವಿಶೇಷವೆಂದರೆ ಇದು 100% ಸಬ್ಸಿಡಿಯ ಪ್ರಯೋಜನವನ್ನು ಪಡೆಯುತ್ತಿದೆ, ಇದರಿಂದ ನೀವು ನಾಮಮಾತ್ರ ವೆಚ್ಚದಲ್ಲಿ ವಿದ್ಯುತ್ ಉತ್ಪಾದನೆಯನ್ನು ಪ್ರಾರಂಭಿಸಬಹುದು. ಪ್ರತಿ ತಿಂಗಳು ಎಷ್ಟು ಯೂನಿಟ್ ವಿದ್ಯುತ್ ಉತ್ಪಾದಿಸಲಾಗುತ್ತದೆ? 3 ಕಿಲೋವ್ಯಾಟ್ ಜಿಯೋ ಸೌರಶಕ್ತಿ ವ್ಯವಸ್ಥೆಯೊಂದಿಗೆ, ನೀವು ಪ್ರತಿ ತಿಂಗಳು ಸುಮಾರು 300 ರಿಂದ 450 ಯೂನಿಟ್ ವಿದ್ಯುತ್ ಉತ್ಪಾದಿಸಬಹುದು. ಅಂದರೆ, ನಿಮ್ಮ ಮನೆಯ ಫ್ಯಾನ್ಗಳು, ದೀಪಗಳು, ಟಿವಿ, ಫ್ರಿಡ್ಜ್ ಮತ್ತು 1.5 ಟನ್ ಎಸಿ ಸಹ ಆರಾಮವಾಗಿ ಕಾರ್ಯನಿರ್ವಹಿಸಬಹುದು. ಯಾವ ಉಪಕರಣಗಳು ಕಾರ್ಯನಿರ್ವಹಿಸುತ್ತವೆ? ಈ ಸೌರಶಕ್ತಿ ವ್ಯವಸ್ಥೆಯೊಂದಿಗೆ, ನೀವು ಸಬ್ಮರ್ಸಿಬಲ್ ಪಂಪ್ಗಳು, ಫ್ಯಾನ್ಗಳು, ಎಲ್ಇಡಿ ದೀಪಗಳು, ಟಿವಿ ಮತ್ತು ಇತರ ಸಣ್ಣ ಉಪಕರಣಗಳಂತಹ ನಿಮ್ಮ ಅಗತ್ಯ ಗೃಹೋಪಯೋಗಿ ಉಪಕರಣಗಳನ್ನು ಯಾವುದೇ ಸಮಸ್ಯೆಯಿಲ್ಲದೆ ಚಲಾಯಿಸಬಹುದು. ಈ ವ್ಯವಸ್ಥೆಯು…
ಬೆಂಗಳೂರು : ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಮುಂದಿನ ಮೂರು ದಿನ ಧಾರಾಕಾರ ಮಳೆ ಆಗುವ ಸಾಧ್ಯತೆ ಇದ್ದು, ಕರಾವಳಿ ಹಾಗೂ ಒಳನಾಡು ಸೇರಿ 7 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ. ಬೆಂಗಳೂರಿಗೆ ಜುಲೈ 18 ಮತ್ತು 19 ರಂದು ಸಾಧಾರಣದಿಂದ ಭಾರೀ ಮಳೆ ಬರಲಿದೆ. ಇದರೊಂದಿಗೆ ಬೆಂಗಳೂರು ಗ್ರಾಮಾಂತರ, ಶಿವಮೊಗ್ಗ, ಮಂಡ್ಯ, ಮೈಸೂರು ಮತ್ತು ಕೋಲಾರ ಜಿಲ್ಲೆಗಳಲ್ಲಿ ಸಹ ಭಾರೀ ಮಳೆ ನಿರೀಕ್ಷೆ ಹಿನ್ನೆಲೆ ಎರಡು ದಿನ ಯೆಲ್ಲೋ ಅಲರ್ಟ್ ನೀಡಲಾಗಿದೆ. ಅರಬ್ಬಿ ಸಮುದ್ರ ಭಾಗದಲ್ಲಿ ಮತ್ತೆ ವಾಯುಭಾರ ಕುಸಿತ ಉಂಟಾಗಿ ರುವ ಕಾರಣ ಮುಂದಿನ ಮೂರುದಿನ ಗಳಲ್ಲಿ ಒಳನಾಡು ಜಿಲ್ಲೆಗಳು ಸೇರಿದಂತೆ ರಾಜ್ಯದಲ್ಲಿ ವಿವಿಧ ಜಿಲ್ಲೆಗಳಲ್ಲಿ ಧಾರಾಕಾರ ಮಳೆ ಆಗಲಿದೆ. ಜುಲೈ 16 ಮತ್ತು 17 ರಂದು ಕರಾವಳಿಯ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ ಬರಲಿದ್ದು, ಎರಡು ದಿನ ‘ಆರೆಂಜ್ ಅಲರ್ಟ್’ ನೀಡಲಾಗಿದೆ.
ಈಗ ಮೊಬೈಲ್ ಬಳಕೆದಾರರಿಗೆ ಸ್ಪ್ಯಾಮ್ ಮತ್ತು ನಿಜವಾದ SMS ಅನ್ನು ಗುರುತಿಸುವುದು ಸುಲಭವಾಗಿದೆ. ಟೆಲಿಕಾಂ ಆಪರೇಟರ್ಗಳು SMS ಹೆಡರ್ಗೆ ಹೊಸ ಪ್ರತ್ಯಯಗಳನ್ನು (ಅಕ್ಷರಗಳು) ಸೇರಿಸಲು ಪ್ರಾರಂಭಿಸಿದ್ದಾರೆ, ಇದು ಕಳುಹಿಸುವವರ ಗುರುತು ಮತ್ತು ಸಂದೇಶದ ಸ್ವರೂಪವನ್ನು ಅರ್ಥಮಾಡಿಕೊಳ್ಳಲು ಸಹಾಯ ಮಾಡುತ್ತದೆ. ಸೆಲ್ಯುಲಾರ್ ಆಪರೇಟರ್ಸ್ ಅಸೋಸಿಯೇಷನ್ ಆಫ್ ಇಂಡಿಯಾ (COAI) ಮಂಗಳವಾರ ಈ ಮಾಹಿತಿಯನ್ನು ನೀಡಿದೆ. COAI ರಿಲಯನ್ಸ್ ಜಿಯೋ, ಏರ್ಟೆಲ್ ಮತ್ತು ವೊಡಾಫೋನ್ ಐಡಿಯಾದಂತಹ ಪ್ರಮುಖ ಟೆಲಿಕಾಂ ಆಪರೇಟರ್ಗಳನ್ನು ಒಳಗೊಂಡಿದೆ. ಈಗ SMS ನಲ್ಲಿ ಸಂದೇಶವು ಯಾವ ವರ್ಗಕ್ಕೆ ಸೇರಿದೆ ಎಂದು ನೀವು ನೋಡುತ್ತೀರಿ COAI ಮಹಾನಿರ್ದೇಶಕ ಎಸ್ಪಿ ಕೊಚಾರ್ ಮಾತನಾಡಿ, ಎಲ್ಲಾ ಟೆಲಿಕಾಂ ಸೇವಾ ಪೂರೈಕೆದಾರರು ಪ್ರಚಾರ (‘ಪಿ’), ಸೇವೆಗೆ ಸಂಬಂಧಿಸಿದ (‘ಎಸ್’), ವಹಿವಾಟು (‘ಟಿ’) ಮತ್ತು ಸರ್ಕಾರಿ (‘ಜಿ’) ಸಂದೇಶಗಳಿಗೆ ಪ್ರತ್ಯಯ ವ್ಯವಸ್ಥೆಯನ್ನು ಜಾರಿಗೆ ತಂದಿದ್ದಾರೆ ಎಂದು ಹೇಳಿದರು. ಈ ಕ್ರಮವನ್ನು ಟೆಲಿಕಾಂ ವಾಣಿಜ್ಯ ಸಂವಹನ ಗ್ರಾಹಕ ಆದ್ಯತೆ ನಿಯಂತ್ರಣ (TCCCPR) ಅಡಿಯಲ್ಲಿ ತೆಗೆದುಕೊಳ್ಳಲಾಗಿದೆ, ಇದನ್ನು ಫೆಬ್ರವರಿ 12, 2025…
ಬೆಂಗಳೂರು: ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ಮಾಡಲಾಗಿದ್ದು, 6 ಮಂದಿ ಕೆಎಎಸ್ ಅಧಿಕಾರಿಗಳು, 34 ಮಂದಿ ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶಿಸಿದೆ. ಈ ಸಂಬಂಧ ರಾಜ್ಯ ಸರ್ಕಾರದಿಂದ ಆದೇಶ ಹೊರಡಿಸಲಾಗಿದ್ದು, ಬೆಂಗಳೂರು ಕೇಂದ್ರ ವಿಭಾಗ ಡಿಸಿಪಿಯಾಗಿ ಅಕ್ಷಯ್ ಮಚೀಂದ್ರ ಸೇರಿದಂತೆ 34 ಮಂದಿ ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ. ವರ್ಗಾವಣೆಗೊಂಡ ಐಪಿಎಸ್ ಅಧಿಕಾರಿಗಳ ಪಟ್ಟಿ ಹೀಗಿದೆ ಬೆಂಗಳೂರು ಪಶ್ಚಿಮ ವಿಭಾಗದ ಡಿಸಿಪಿ ಸಂಚಾರ ಅನೂಪ್ ಶೆಟ್ಟಿ ಬೆಂಗಳೂರು ಲೋಕಾಯುಕ್ತ ಎಸ್ಪಿಯಾಗಿ ಶಿವಪ್ರಕಾಶ್ ದೇವರಾಜು ಬೆಂಗಳೂರು ಉತ್ತರ ಸಂಚಾರ ವಿಭಾಗದ ಡಿಸಿಪಿಯಾಗಿ ಜಯಪ್ರಕಾಶ್ ಎಲೆಕ್ಟ್ರಾನಿಕ್ ಸಿಟಿ ವಿಭಾಗದ ಡಿಸಿಪಿಯಾಗಿ ಎಂ. ನಾರಾಯಣ್ ಬೆಂಗಳೂರು ಆಗ್ನೇಯ ವಿಭಾಗ ಡಿಸಿಪಿಯಾಗಿ ಅನಿತಾ ಬಿ. ಹದ್ದಣ್ಣನವರ್ ಧಾರವಾಡ ಎಸ್ಪಿಯಾಗಿ ಗುಂಜನ್ ಆರ್ಯ ಬಾಗಲಕೋಟೆ ಎಸ್ಪಿಯಾಗಿ ಸಿದ್ದಾರ್ಥ ಗೋಯಲ್ ಗದಗ ಎಸ್ಪಿಯಾಗಿ ರೋಹನ್ ಜಗದೀಶ್ ಕೆಜಿಎಫ್ ಎಸ್‌ಪಿಯಾಗಿ ಶಿವಾಂಶು ರಜಪೂತ್ ಮಂಗಳೂರು ನಗರ ಕಾನೂನು ಸುವ್ಯವಸ್ಥೆ ಡಿಸಿಪಿಯಾಗಿ ಜಿತೇಂದ್ರ ಕುಮಾರ್. ಉತ್ತರ…
ಚನ್ನಪಟ್ಟಣ: ಇತ್ತೀಚಿಗೆ ಡಿಜಿಟಲ್ ಅರೆಸ್ಟ್ ಪ್ರಕರಣಗಳು ಹೆಚ್ಚಾಗುತ್ತಿದ್ದು, ರಾಜ್ಯದಲ್ಲಿ ಮತ್ತೊಬ್ಬ ವ್ಯಕ್ತಿ ಡಿಜಿಟಲ್ ಅರೆಸ್ಟ್ ಗೆ ಬಲಿಯಾಗಿರುವ ಘಟನೆ ಚನ್ನಪಟ್ಟಣ ತಾಲೂಕಿನಲ್ಲಿ ನಡೆದಿದೆ. ಚನ್ನಪಟ್ಟಣ ತಾಲೂಕಿನ ಕೆಲಗೆರೆ ಗ್ರಾಮದಲ್ಲಿ ಸೈಬರ್ ವಂಚನೆ ಜಾಲಕ್ಕೆ ಸಿಲುಕಿದ ವ್ಯಕ್ತಿಯೊಬ್ಬ ಸೋಮವಾರ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ಕೆ. ಕುಮಾರ್ (48) ಮೃತ. ವಂಚನೆಯ ಬಗ್ಗೆ ಡೆತ್ ನೋಟ್ ಬರೆದಿಟ್ಟು, ಮನೆಯಲ್ಲೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕುಮಾರ್ ಬೆಸ್ಕಾಂನಲ್ಲಿ ಹೊರಗುತ್ತಿಗೆ ಆಧಾರದಲ್ಲಿ ಸೇವೆ ಸಲ್ಲಿಸುತ್ತಿದ್ದರು. ಪತ್ನಿ ಹಾಗೂ ಗಂಡುಮಗು ವಿನೊಂದಿಗೆ ಬೆಂಗಳೂರಿನ ಎಚ್ಎಸ್ಆರ್ ಲೇಔಟ್ನಲ್ಲಿ ವಾಸವಾಗಿದ್ದರು. ‘ವಿಕ್ರಮ್ ಗೋಸ್ವಾಮಿ ಹೆಸರಿನ ವ್ಯಕ್ತಿ ಸಿಬಿಐ ಅಧಿಕಾರಿ ಎಂದು ಕರೆಮಾಡಿ, ನಿನ್ನ ಮೇಲೆ ಅರೆಸ್ಟ್ ವಾರಂಟ್ ಬಂದಿದೆ ಎಂದು ಹೆದರಿಸಿದ್ದ. ನಿನ್ನನ್ನು ಪ್ರಕರಣವೊಂದರಲ್ಲಿ ಬಂಧಿಸುತ್ತೇನೆ ಎಂಬ ಬೆದರಿಕೆ ಹಾಕಿ ನಂತರ ಸಹಾಯದ ನೆಪದಲ್ಲಿ 1.95 ಲಕ್ಷ ರೂ. ಗಳನ್ನು ತನ್ನ ಖಾತೆಗೆ ಹಾಕಿಸಿಕೊಂಡಿದ್ದ. ಬಳಿಕ ವಿವಿಧ ಬ್ಯಾಂಕ್ ಖಾತೆಗಳಿಗೆ ಸುಮಾರು 11 ಲಕ್ಷ ರೂ.ವರೆಗೂ ಹಾಕಿಸಿಕೊಂಡಿದ್ದನು. ಇಷ್ಟಕ್ಕೆ ಸುಮ್ಮನಾಗದೆ ಮತ್ತೆ…













