Subscribe to Updates
Get the latest creative news from FooBar about art, design and business.
Author: kannadanewsnow57
ಬೆಂಗಳೂರು : ರಾಜ್ಯದ 265 ಗ್ರಾಮಪಂಚಾಯಿತಿ ಚುನಾವಣೆಗಳಿಗೆ ರಾಜ್ಯ ಚುನಾವಣಾ ಆಯೋಗವು ಪರಿಷ್ಕೃತ ವೇಳಾಪಟ್ಟಿ ಪ್ರಕಟಿಸಿದ್ದು, ಮೇ.25 ರಂದು ಮತದಾನ ನಡೆಯಲಿದೆ. ರಾಜ್ಯ ಸರ್ಕಾರದ ಮನವಿ ಮೇರೆಗೆ ಮೇ 11ರಂದು ಗ್ರಾಪಂನ 265 ಸ್ಥಾನಗಳಿಗೆ ನಡೆಯಬೇಕಿದ್ದ ಉಪಚುನಾವಣೆಯನ್ನು ಮುಂದೂಡಿದ್ದ ರಾಜ್ಯಚುನಾವಣಾ ಆಯೋಗ ಪರಿಷ್ಕೃತ ವೇಳಾಪಟ್ಟಿ ಪ್ರಕಟಿಸಿದ್ದು, ಮೇ.25 ರಂದು 31 ಜಿಲ್ಲೆಯ 135 ತಾಲೂಕಿನ 223 ಗ್ರಾಪಂನ 265 ಸ್ಥಾನಗಳಿಗೆ ಉಪ ಚುನಾವಣೆ ನಡೆಯಲಿದೆ ಎಂದು ರಾಜ್ಯ ಚುನಾವಣಾ ಆಯೋಗ ತಿಳಿಸಿದೆ. ಮೇ. 25ರಂದು ಮತದಾನ ನಡೆಯಲಿದೆ. ಮೇ. 28ರಂದು ಮತ ಎಣಿಕೆ ನಡೆಸಲಿದೆ ಎಂದು ರಾಜ್ಯ ಚುನಾವಣಾ ಆಯೋಗ ಮಾಹಿತಿ ನೀಡಿದೆ.
ಬೆಂಗಳೂರು : ಕರ್ನಾಟಕದ ಹಲವು ಭಾಗಗಳಲ್ಲಿ ಗುಡುಗು – ಸಿಡಿಲು ಸಾಮಾನ್ಯವಾಗಿ ಮುಂಗಾರು ಪೂರ್ವದಲ್ಲಿ ಹಾಗೂ ಮುಂಗಾರಿನಲ್ಲಿ ಕಾಣಿಸಿಕೊಳ್ಳುತ್ತದೆ. ಸಿಡಿಲು ಸಾಮಾನ್ಯವಾಗಿ ಮಧ್ಯಾಹ್ನ ಅಥವಾ ಸಂಜೆ ಸಂಭವಿಸುವ ಸಾಧ್ಯತೆ ಹೆಚ್ಚಾಗಿರುತ್ತದೆ. ಗುಡುಗು ಸಿಡಿಲಿನಿಂದಾಗುವ ಅಪಾಯಗಳನ್ನು ತಗ್ಗಿಸಲು ಈ ಕೆಳಕಂಡ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಲಾಗಿದೆ: ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರವು ಗುಡುಗು ಮತ್ತು ಸಿಡಿಲು ಬಡಿತದಿಂದ ಉಂಟಾಗುವ ಪ್ರತಿಕೂಲ ಪರಿಣಾಮಗಳನ್ನು ತಗ್ಗಿಸಲು ರಾಷ್ಟ್ರೀಯ ವಿಪತ್ತು ನಿರ್ವಹಣಾ (Advisory and Do’s and Don’ts on Thunderstorm & Lightning)ಸಲಹೆ/ಸೂಚನೆಗಳ ಬಗ್ಗೆ ವಿವರಿಸಿರುತ್ತದೆ. ಗುಡುಗು ಸಿಡಿಲಿನ ಸಂದರ್ಭದಲ್ಲಿ ಸಾರ್ವಜನಿಕರು ಪಾಲಿಸಬೇಕಾದ ಸಲಹೆ ಸೂಚನೆಗಳು 1. ಹೊರಗೆ ಹೋಗುವ ಅನಿವಾರ್ಯವಿದ್ದಲ್ಲಿ ಹವಾಮಾನ ಮುನ್ಸೂಚನೆ ಹಾಗೂ Common Alerting Protocol (CAP) ವಿಕೋಪ ಉಸ್ತುವಾರಿ ಕೇಂದ್ರದಿಂದ ಬರುವ Alerts / ಸಂದೇಶಗಳನ್ನು ಗಮನಿಸುವುದು. 2. ಪ್ರತಿಕೂಲ ಹವಾಮಾನದ ಸಮಯದಲ್ಲಿ ವಿಶೇಷವಾಗಿ ಕೃಷಿ ಕ್ಷೇತ್ರದಲ್ಲಿ ಕೆಲಸ ಮಾಡಲು, ಜಾನುವಾರುಗಳನ್ನು ಮೇಯಿಸಲು, ಮೀನುಗಾರಿಕೆ ಮತ್ತು ದೋಣಿಗಳನ್ನು ಓಡಿಸಲು ಅಥವಾ ಸಾಮಾನ್ಯ…
ಆಧಾರ್ ಕಾರ್ಡ್ ಭಾರತದ ಅತ್ಯಂತ ಪ್ರಮುಖ ಗುರುತಿನ ಚೀಟಿಯಾಗಿದೆ. ಪ್ರತಿಯೊಂದು ಪ್ರಮುಖ ಕೆಲಸಕ್ಕೂ ಆಧಾರ್ ಅಗತ್ಯವಿದೆ. ಆದಾಗ್ಯೂ, ಆಧಾರ್ ಕಾರ್ಡ್ ಫೋಟೋಗಳನ್ನು ಬದಲಾಯಿಸುವ ಪ್ರಕ್ರಿಯೆಯ ಬಗ್ಗೆ ಅನೇಕ ಜನರಿಗೆ ತಿಳಿದಿಲ್ಲ. ಹೌದು, ನಿಮ್ಮ ಆಧಾರ್ ಕಾರ್ಡ್‌ನಲ್ಲಿರುವ ಫೋಟೋಗಳನ್ನು ನೀವು ತುಂಬಾ ಸರಳವಾಗಿ ಬದಲಾಯಿಸಬಹುದು. ಆಧಾರ್‌ನಲ್ಲಿ ನಿಮ್ಮ ಫೋಟೋ ಬದಲಾಯಿಸಲು, ಮೊದಲು UIDAI ವೆಬ್‌ಸೈಟ್ uidai.gov.in ಗೆ ಲಾಗಿನ್ ಮಾಡಿ. ನೀವು ಅದರಲ್ಲಿ ಆಧಾರ್ ದಾಖಲಾತಿ ಫಾರ್ಮ್ ಅನ್ನು ಡೌನ್‌ಲೋಡ್ ಮಾಡಿಕೊಳ್ಳಬೇಕು. ಅದರಲ್ಲಿ ವಿವರಗಳನ್ನು ನಮೂದಿಸಿ ಆಧಾರ್ ಕೇಂದ್ರಕ್ಕೆ ಸಲ್ಲಿಸಿ. ನಂತರ, ಆಧಾರ್ ದಾಖಲಾತಿ ಕೇಂದ್ರದ ಸಿಬ್ಬಂದಿ ನಿಮ್ಮ ಬಯೋಮೆಟ್ರಿಕ್ ವಿವರಗಳು ಮತ್ತು ನಿಮ್ಮ ಛಾಯಾಚಿತ್ರವನ್ನು ತೆಗೆದುಕೊಳ್ಳುತ್ತಾರೆ. 25 ರೂಪಾಯಿ ಕೊಟ್ಟರೆ ಹೊಸ ಫೋಟೋ ಅಪ್ಡೇಟ್ ಆಗುತ್ತೆ. URN ಇರುವ ಸ್ಲಿಪ್ ನೀಡಲಾಗುವುದು. ನಿಮ್ಮ ಆಧಾರ್ ಕಾರ್ಡ್ ಫೋಟೋ ಬದಲಾಗಿದೆಯೇ ಎಂದು ನೀವು ಪರಿಶೀಲಿಸಬಹುದು. ನವೀಕರಿಸಿದ ನಂತರ ನೀವು ಆಧಾರ್ ಕಾರ್ಡ್ ಅನ್ನು ಡೌನ್‌ಲೋಡ್ ಮಾಡಬಹುದು.
ಬೆಂಗಳೂರು : ರಾಜ್ಯದಲ್ಲಿ ಮೇ ತಿಂಗಳಲ್ಲಿ 33 ಕೊರೋನಾ ಸೋಂಕು ಪ್ರಕರಣ ದೃಢಪಟ್ಟಿದ್ದು, ಪ್ರಸ್ತುತ 16 ಸಕ್ರಿಯ ಕೊರೋನಾ ಸೋಂಕು ಪ್ರಕರಣ ವರದಿಯಾಗಿವೆ ಎಂದು ಆರೋಗ್ಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ರಾಜ್ಯದಲ್ಲಿ ಸದ್ಯ 16 ಸಕ್ರಿಯ ಕೊರೊನಾ ಪ್ರಕರನಗಳು ಪತ್ತೆಯಾಗಿದ್ದು, ಯಾರೂ ಆಸ್ಪತ್ರೆಗೆ ದಾಖಲಾಗಿಲ್ಲ ರಾಜ್ಯದಲ್ಲಿ ಸಕ್ರಿಯವಾಗಿರುವ 16 ಪ್ರಕರಣಗಳಲ್ಲೂ ಎಲ್ಲರೂ ಮನೆಯಲ್ಲೇ ಸ್ವಯಂ ನಿಗಾದಲ್ಲಿ ಇದ್ದಾರೆ. ಯಾರಿಗೂ ತೀವ್ರ ರೋಗ ಲಕ್ಷಣಗಳು ಇಲ್ಲ. ಯಾರೊಬ್ಬರೂ ಆಸ್ಪತ್ರೆಗೆ ದಾಖಲಾಗಿಲ್ಲ. ಹೀಗಾಗಿ ಅನಗತ್ಯ ಆತಂಕ ಬೇಡ. ಎಂದು ಅಧಿಕಾರಿಗಳು ತಿಳಿಸಿದ್ದಾರೆ. ರಾಜ್ಯದಲ್ಲಿ 16 ಕೊರೋನಾ ಸೋಂಕು ಪ್ರಕರಣ ಪತ್ತೆಯಾಗಿದೆ. ಬೇರೆ ಬೇರೆ ದೇಶಗಳಲ್ಲಿ ಕೊರೋನಾ ಪ್ರಕರಣಗಳು ಹೆಚ್ಚಾಗಿ ವರದಿಯಾಗುತ್ತಿವೆ. ಆದರೆ ನಮ್ಮಲ್ಲಿ ಅಂತಹ ಯಾವುದೇ ಲಕ್ಷಣಗಳು ಪತ್ತೆಯಾಗಿಲ್ಲ. ಹೀಗಾಗಿ ಅನಗತ್ಯವಾಗಿ ಆತಂಕಪಡುವುದು ಬೇಡ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಬೆಂಗಳೂರು : ವಿಶ್ವವಿದ್ಯಾಲಯಗಳಲ್ಲಿರುವ ಡಾ.ಬಿ.ಆರ್. ಅಂಬೇಡ್ಕರ್ ಅಧ್ಯಯನ ಕೇಂದ್ರ ಪೀಠದ ಮೂಲಕ ಸಂವಿಧಾನದ ಬಗ್ಗೆ ಜಾಗೃತಿಯನ್ನು ಮೂಡಿಸುವ ಕುರಿತು ಕಾಲೇಜು ಶಿಕ್ಷಣ ಇಲಾಖೆ ಮಹತ್ವದ ಆದೇಶ ಹೊರಡಿಸಿದೆ. ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ, ಪ್ರತಿ ವರ್ಷ 26 ನವೆಂಬರ್ ನ್ನು ಸಂವಿಧಾನ ದಿನವನ್ನಾಗಿ ಆಚರಣೆ ಮಾಡುತ್ತಿದ್ದು, ಸಂವಿಧಾನದ ಪ್ರಸ್ತಾವನೆಯನ್ನು ಪ್ರತಿದಿನ ಎಲ್ಲಾ ಶಿಕ್ಷಣ ಸಂಸ್ಥೆಗಳಲ್ಲಿ ವಾಚಿಸುವ ಬಗ್ಗೆ ಈಗಾಗಲೇ ಕ್ರಮ ಕೈಗೊಳ್ಳಲಾಗಿರುತ್ತದೆ. ವಿಶ್ವವಿದ್ಯಾಲಯಗಳಲ್ಲಿರುವ ಡಾ.ಬಿ.ಆರ್. ಅಂಬೇಡ್ಕರ್ ಅಧ್ಯಯನ ಕೇಂದ್ರ/ ಡಾ.ಬಿ.ಆರ್. ಅಂಬೇಡ್ಕರ್ ಪೀಠಗಳು ವಿಶ್ವವಿದ್ಯಾಲಯ ಮಟ್ಟದಲ್ಲಿ ಕಾಲೇಜುಗಳ ಹಂತದಲ್ಲಿ ಮತ್ತು ಸಮಾಜ ಕಲ್ಯಾಣ ಇಲಾಖಾ ವ್ಯಾಪ್ತಿಯಲ್ಲಿನ ವಿದ್ಯಾರ್ಥಿನಿಲಯಗಳಲ್ಲಿ ಸಂವಿಧಾನದ ಬಗ್ಗೆ ಮತ್ತು ಡಾ.ಬಿ.ಆರ್. ಅಂಬೇಡ್ಕರ್ ರವರ ಸಿದ್ಧಾಂತಗಳ ಬಗ್ಗೆ ವಿದ್ಯಾರ್ಥಿಗಳಲ್ಲಿ ಜಾಗೃತಿಯನ್ನು ಮೂಡಿಸುವುದು ಸೂಕ್ತವಾಗಿದು, ಈ ಹಿನ್ನಲೆಯಲ್ಲಿ ಈ ಕೆಳಕಂಡ ಕಾರ್ಯಕ್ರಮಗಳನ್ನು ಸರ್ಕಾರಿ, ಖಾಸಗಿ ಮತ್ತು ಅನುದಾನರಹಿತ ಪದವಿ ಕಾಲೇಜುಗಳು ಹಾಗೂ ಪಾಲಿಟೆಕ್ನಿಕ್/ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಅನುಷ್ಠಾನಗೊಳಿಸಲು ಸಂಬಂಧಪಟ್ಟ ಪ್ರಾಂಶುಪಾಲರಿಗೆ ಸೂಚಿಸಲಾಗಿರುತ್ತದೆ. ಡಾ. ಬಿ.ಆರ್. ಅಂಬೇಡ್ಕರ್ ರವರ ಸಿದ್ಧಾಂತಗಳು ಮತ್ತು ಸಂವಿಧಾನದ ಆಶಯಗಳ…
ಬೆಂಗಳೂರು : ರಾಜ್ಯದಲ್ಲಿ ಮಳೆಯ ಆರ್ಭಟ ಮುಂದುವರೆದಿದ್ದು, ರಾಜ್ಯದಲ್ಲಿ ಇಂದೂ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ಕರಾವಳಿಯ ಮೂರು ಜಿಲ್ಲೆಗಳು ಸೇರಿ ಒಟ್ಟು 7 ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.ಮೇ 22 ರ ಇಂದು ಮೂರು ಜಿಲ್ಲೆಗಳಿಗೆ ‘ರೆಡ್ ಅಲರ್ಟ್’, ಚಿಕ್ಕಮಗಳೂರು, ಶಿವಮೊಗ್ಗಕ್ಕೆ ಮುಂದಿನ ಎರಡು ದಿನಕ್ಕೆ ಹಾಗೂ ಹಾಸನ ಮತ್ತು ಕೊಡಗು ಜಿಲ್ಲೆಗಳಿಗೆ ಮುಂದಿನ 24 ಗಂಟೆಗೆ ‘ರೆಡ್ ಅಲರ್ಟ್’ ಎಚ್ಚರಿಕೆ ನೀಡಲಾಗಿದೆ. ತುಮಕೂರು, ರಾಮನಗರ, ಕೋಲಾರ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಬೆಂಗಳೂರುನಗರ, ಬೆಂಗಳೂರು ಗ್ರಾಮಾಂತರ, ಬೀದರ್, ವಿಜಯಪುರ, ಕೊಪ್ಪಳ, ಕಲಬುರಗಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಎಚ್ಚರಿಕೆ ನೀಡಲಾಗಿದೆ. ಬೆಳಗಾವಿ, ಧಾರವಾಡ, ಗದಗ, ಹಾವೇರಿ, ದಾವಣಗೆರೆ, ಮೈಸೂರು ಜಿಲ್ಲೆಗಳಿಗೆ ಮುಂದಿನ ಎರಡು ದಿನಕ್ಕೆ ‘ಆರೆಂಜ್ ಅಲರ್ಟ್’ ನೀಡಲಾಗಿದೆ.
ಬೆಂಗಳೂರು : 1 ನೇ ತರಗತಿಗೆ ಸೇರುವ ಮಕ್ಕಳಿಗೆ ಜೂನ್ 1ಕ್ಕೆ 6 ವರ್ಷ ಪೂರ್ಣಗೊಂಡಿರಬೇಕು ಎಂಬ ನಿಯಮ ರೂಪಿಸಲಾಗಿದೆ. ಆದರೆ, ಈ ನಿಯಮ 2025-26ನೇ ಶೈಕ್ಷಣಿಕ ಸಾಲಿಗೆ ಅನ್ವಯಿಸುವುದಿಲ್ಲ. ಮುಂದಿನ ವರ್ಷದಿಂದ ಶಾಲೆಗೆ ಸೇರಿಸುವ ಮಕ್ಕಳಿಗೆ ಈ ನಿಯಮ ಕಡ್ಡಾಯ. 2026-27ನೇ ಶೈಕ್ಷಣಿಕ ವರ್ಷದಿಂದ ಜೂನ್ ಒಂದನೇ ತಾರೀಖಿಗೆ 06 ವರ್ಷಗಳು ಪೂರ್ಣಗೊಂಡಿರುವ ಮಕ್ಕಳನ್ನು ಮಾತ್ರ ಒಂದನೇ ತರಗತಿಗೆ ದಾಖಲಿಸಿಕೊಳ್ಳತಕ್ಕದ್ದು ಮತ್ತು ಸರ್ಕಾರದ ಆದೇಶ ಸಂಖ್ಯೆ : ಇಪಿ 100 ಪಿಜಿಸಿ 22024 ದಿನಾಂಖ 26.06.2024 ರಲ್ಲಿ ಈಗಾಗಲೇ ಎಲ್ ಕೆಜಿ ಪ್ರವೇಶಾತಿಗೆ 4 ವರ್ಷ ಮತ್ತು ಯು.ಕೆ.ಜಿ ಪ್ರವೇಶಾತಿಗೆ 5 ವರ್ಷಗಳ ಕನಿಷ್ಠ ವಯೋಮಿತಿ ನಿಗಧಿಪಡಿಸಲಾಗಿರುತ್ತದೆ. ಅದರಂತೆ 2025-26ನೇ ಶೈಕ್ಷಣಿಕ ವರ್ಷದಿಂದ ಎಲ್.ಕೆ.ಜಿ. ಅಥವಾ ತತ್ಸಮಾನ ದಾಖಲಾತಿಗೆ 4 ವರ್ಷ ಪೂರ್ಣಗೊಂಡಿರುವ ಮತ್ತು ಯು.ಕೆ.ಜಿ ಅಥವಾ ತತ್ಸಮಾನ ದಾಖಲಾತಿಗೆ 5 ವರ್ಷ ಪೂರ್ಣಗೊಂಡಿರುವ ಮಕ್ಕಳನ್ನು ಮಾತ್ರ ದಾಖಲಿಸಿಕೊಳ್ಳತಕ್ಕದ್ದು. ಮಕ್ಕಳನ್ನು ಶಾಲೆಗೆ ಸೇರಿಸುವಾಗ ಈ ದಾಖಲೆಗೂ ಹೊಂದಿರುವುದು ಕಡ್ಡಾಯ ಮಕ್ಕಳ…
ಬೆಂಗಳೂರು : ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್‌ನ ದಿನಾಂಕ: 18-4-2023ರ ಅಧಿಕೃತ ಜ್ಞಾಪನ ಪತ್ರದಲ್ಲಿ ಸರ್ಕಾರಿ ಆಸ್ಪತ್ರೆ/ ಆರೋಗ್ಯ ಸಂಸ್ಥೆಗಳ ಜೊತೆಗೆ ಖಾಸಗಿ ಆಸ್ಪತ್ರೆ / ಆರೋಗ್ಯ ಸಂಸ್ಥೆಗಳನ್ನು ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ ಅಡಿಯಲ್ಲಿ ನೋಂದಾವಣಿ ಮಾಡಿಕೊಳ್ಳಲು ಅವಕಾಶ ನೀಡಿ ಮಾರ್ಗಸೂಚಿ (SOP) ಯನ್ನು ಬಿಡುಗಡೆಗೊಳಿಸಿ ಜಿಲ್ಲಾವಾರು ಸಂಯೋಜಕರನ್ನು ನೇಮಕಗೊಳಿಸಲಾಗಿದೆ. ಆದ್ದರಿಂದ ತಾವು ತಮ್ಮ ಜಿಲ್ಲಾ / ತಾಲ್ಲೂಕು ವ್ಯಾಪ್ತಿಯಲ್ಲಿ ಈಗಾಗಲೇ ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ಗುರುತಿಸಿರುವ ಖಾಸಗಿ ಆಸ್ಪತ್ರೆ /ಆರೋಗ್ಯ ಸಂಸ್ಥೆಗಳೂ ಸೇರಿದಂತೆ (ಆಸ್ಪತ್ರೆಗಳ ಪಟ್ಟಿ ಲಗತ್ತಿಸಿದೆ) ಇನ್ನಾವುದೇ ಆಸ್ಪತ್ರೆ/ ಆರೋಗ್ಯ ಸಂಸ್ಥೆಗಳಿದ್ದಲ್ಲಿ ಅಂತಹ ಆಸ್ಪತ್ರೆಗಳನ್ನು ಈ ಯೋಜನೆಯಡಿಯಲ್ಲಿ ನೋಂದಾಯಿಸಿಕೊಳ್ಳುವ ಸಂಬಂಧ ತಮ್ಮ ಜಿಲ್ಲಾ ಸಂಯೋಜಕರು (District Coordinators of SATS) ಮತ್ತು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು ಹಾಗೂ ತಾಲ್ಲೂಕು ಆರೋಗ್ಯಾಧಿಕಾರಿಗಳನ್ನು ಸಂಪರ್ಕಿಸಿ ದಿನಾಂಕ: 28-04-2028ರೊಳಗಾಗಿ ನೋಂದಣೆ ಪ್ರಕ್ರಿಯೆಯನ್ನು ಪೂರ್ಣಗೊಳಿಸುವ ಸಂಬಂಧ ತುರ್ತು ಕ್ರಮವಹಿಸಲು ಸೂಚಿಸಿದೆ.
ಬೆಂಗಳೂರು: ಎಸ್.ಎಸ್.ಎಲ್.ಸಿ ಪರೀಕ್ಷೆ-02 ರ ವಿದ್ಯಾರ್ಥಿಗಳಿಗೆ ಪರೀಕ್ಷ-2ಗೆ ಪರೀಕ್ಷಾ ಪ್ರವೇಶ ಪತ್ರದೊಂದಿಗೆ ಪರೀಕ್ಷಾ ಕೇಂದ್ರಗಳವರೆಗೆ ಬಿಎಂಟಿಸಿಯ ಸಾಮಾನ್ಯ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅನುಮತಿಸಲಾಗಿದೆ. ಈ ಮೂಲಕ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ನೀಡಲಾಗಿದೆ. ಈ ಕುರಿತು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ವಿದ್ಯಾರ್ಥಿ ಸಮುದಾಯದ ಹಿತವನ್ನು ಗಮನದಲ್ಲಿಟ್ಟುಕೊಂಡು ರಿಯಾಯಿತಿ ದರದಲ್ಲಿ ವಿದ್ಯಾರ್ಥಿ ಪಾಸುಗಳನ್ನು ವಾಸಸ್ಥಳದಿಂದ ಶಾಲಾ/ಕಾಲೇಜಿಗೆ ಪ್ರಯಾಣಿಸಲು ಅವಕಾಶ ಕಲ್ಪಿಸಿ ವಿತರಣೆ ಮಾಡುತ್ತಿದೆ ಎಂದಿದೆ. ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳ ಪರೀಕ್ಷೆ -02 ಬೇರೆ ಬೇರೆ ಶಾಲಾ/ಕಾಲೇಜುಗಳಲ್ಲಿ ಇರುವುದರಿಂದ ಸಂಸ್ಥೆಯು ವಿದ್ಯಾರ್ಥಿಗಳ ಹಿತವನ್ನು ಗಮನದಲ್ಲಿಟ್ಟುಕೊಂಡು ಕೆಳಕಂಡ ಸೌಲಭ್ಯಗಳನ್ನು ಕಲ್ಪಿಸಿರುತ್ತದೆ. ಎಸ್.ಎಸ್.ಎಲ್.ಸಿ ಪರೀಕ್ಷೆ-02 ರ ವಿದ್ಯಾರ್ಥಿಗಳಿಗೆ ದಿನಾಂಕ 26.05.2025 ರಿಂದ 02.06.2025 ರವರೆಗೆ ಪರೀಕ್ಷೆಗಳು ನಡೆಯುವ ದಿನಾಂಕಗಳಂದು ಪರೀಕ್ಷೆಗೆ ಹಾಜರಾಗಲು ವಾಸಸ್ಥಳದಿಂದ ನಿಯೋಜಿತ ಪರೀಕ್ಷಾ ಕೇಂದ್ರದವರೆಗೆ ಹೋಗುವಾಗ ಮತ್ತು ಹಿಂದಿರುಗುವಾಗ ಸಂಸ್ಥೆಯ ಸಾಮಾನ್ಯ ಸೇವೆಗಳಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷಾ ಪ್ರವೇಶ ಪತ್ರವನ್ನು ತೋರಿಸಿ, ಉಚಿತವಾಗಿ ಪ್ರಯಾಣಿಸಲು ಅವಕಾಶ…
ಬೆಂಗಳೂರು : ವಿದ್ಯಾವಿಕಾಸ ಯೋಜನೆಯಡಿ 2025-56ನೇ ಸಾಲಿಗೆ ಎಲ್ಲಾ ವಿಭಾಗದ ಜಿಲ್ಲೆಗಳ ಸರ್ಕಾರಿ ಶಾಲಾ ಮಕ್ಕಳಿಗೆ ಎರಡು ಜೊತೆ ಉಚಿತ ಸಮವಸ್ತ್ರ, ಬಟ್ಟೆ ಸರಬರಾಜು ಮಾಡುವ ಬಗ್ಗೆ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. 2025-26ನೇ ಸಾಲಿಗೆ ವಿದ್ಯಾವಿಕಾಸ ಯೋಜನೆಯಡಿ ರಾಜ್ಯದಲ್ಲಿನ ಎಲ್ಲಾ ಜಿಲ್ಲೆಗಳ 1 ರಿಂದ 10ನೇ ತರಗತಿಯ ಸರ್ಕಾರಿ ಶಾಲಾ ಮಕ್ಕಳಿಗೆ ಉಲ್ಲೇಖ (1)ರಲ್ಲಿ ಸರ್ಕಾರದ ಆಡಳಿತಾತ್ಮಕ ಅನುಮೋದನೆ ಪಡೆದು, ಕೆಳಕಂಡ ಸಂಸ್ಥೆಗಳ ಮೂಲಕ ಎರಡು ಜೊತೆ ಉಚಿತ ಸಮವಸ್ತ್ರ, ಬಟ್ಟೆಗಳ ಸರಬರಾಜು ಕಾರ್ಯಕ್ರಮವನ್ನು ಕೈಗೊಳ್ಳಲಾಗಿರುತ್ತದೆ. ಸಂಸ್ಥೆ ಸರಬರಾಜು ಮಾಡುವ ಜಿಲ್ಲೆಗಳು ಬೆಂಗಳೂರು ವಿಭಾಗದ ಎಲ್ಲಾ 11 ಮತ್ತು ಮೈಸೂರು ವಿಭಾಗದ ಎಲ್ಲಾ 8 ಜಿಲ್ಲೆಗಳ 1 ರಿಂದ 7ನೇ ತರಗತಿಯ ಗಂಡು ಹಾಗೂ 1 ರಿಂದ 5ನೇ ತರಗತಿಯ ಹೆಣ್ಣು ಮಕ್ಕಳಿಗೆ ಒಂದು ಜೊತೆ ಕಲಬುರಗಿ ವಿಭಾಗದ ಎರಡು ಜಿಲ್ಲೆಗಳಾದ ಬಳ್ಳಾರಿ ಮತ್ತು ಯಾದಗಿರಿ ಜಿಲ್ಲೆಗಳ 1 ರಿಂದ 10ನೇ ತರಗತಿಯ ಎಲ್ಲಾ ಮಕ್ಕಳಿಗೆ ಎರಡು ಜೊತೆ.…