Author: kannadanewsnow57

ಬೆಂಗಳೂರು : ರಾಜ್ಯದಲ್ಲಿ ಮಳೆಯ ಅಬ್ಬರ ಮುಂದುವರೆದಿದ್ದು, ಮಕ್ಕಳ ಹಿತದೃಷ್ಟಿಯಿಂದ ಕೊಡಗು ಹಾಗೂ ಉತ್ತರ ಕನ್ನಡ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ಇಂದು ರಜೆ ಘೋಷಿಸಲಾಗಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಇಂದು ಶಾಲಾ-ಕಾಲೇಜುಗಳಿಗೆ ರಜೆ ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಈ ಹಿನ್ನಲೆಯಲ್ಲಿ ಉತ್ತರ ಕನ್ನಡ ಜಿಲ್ಲೆಯ ಹತ್ತು ತಾಲ್ಲೂಕಿನ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಈ ಕುರಿತಂತೆ ಉತ್ತರ ಕನ್ನಡ ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ಅವರು ಆದೇಶ ಹೊರಡಿಸಿದ್ದು, ಸೋಮವಾರ ಭಾರೀ ಮಳೆ ಜಿಲ್ಲೆಯಾಧ್ಯಂತ ಆಗಲಿದೆ ಅಂತ ಮುನ್ಸೂಚನೆ ನೀಡಿದೆ. ಅಲ್ಲದೇ ರೆಡ್ ಅಲರ್ಟ್ ಕೂಡ ಘೋಷಣೆ ಮಾಡಿದೆ. ಈ ಹಿನ್ನಲೆಯಲ್ಲಿ ಉತ್ತರ ಕನ್ನಡ ಜಿಲ್ಲೆಯ ಎಲ್ಲಾ ತಾಲ್ಲೂಕಿನ ಶಾಲಾ-ಕಾಲೇಜುಗಳಿಗೆ ರಜೆಯನ್ನು ಘೋಷಣೆ ಮಾಡಲಾಗಿದೆ ಅಂತ ತಿಳಿಸಿದ್ದಾರೆ. ಕೊಡಗು ಜಿಲ್ಲೆ ಇನ್ನೂ ಕೊಡಗು ಜಿಲ್ಲೆಯಲ್ಲೂ ಮಳೆಯ ಅಬ್ಬರ ಮುಂದುವರೆದಿದ್ದು, ಇಂದೂ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈಹಿನ್ನೆಲೆಯಲ್ಲಿ ಕೊಡಗಿನ ಎಲ್ಲಾ ಶಾಲಾ-ಕಾಲೇಜುಗಳಿಗೆ,…

Read More

ಬೆಂಗಳೂರು : ರಾಜ್ಯದ ಬಡ ಮತ್ತು ಮಧ್ಯಮ ವರ್ಗದ ಕುಟುಂಬಗಳು ಸುಧಾರಣೆಯ ಕಾರಣದಿಂದ ಅವರ ಕನಿಷ್ಠ ಬದುಕಿನ ಭದ್ರತೆಯನ್ನು ಒದಗಿಸುವ ದೃಷ್ಟಿಯಿಂದ ಗ್ಯಾರಂಟಿ ಯೋಜನೆಗಳನ್ನು ನೀಡಲಾಗಿದೆ. ಇದಕ್ಕೆ ಎಸ್‌ ಸಿಎಸ್‌ ಪಿ/ಟಿಎಸ್‌ ಪಿ ಹಣ ದುರ್ಬಳಕೆ ಮಾಡಿಲ್ಲ ಎಂದು ಸಚಿವ ಡಾ.ಹೆಚ್.ಸಿ. ಮಹದೇವಪ್ಪ ಹೇಳಿದ್ದಾರೆ. 2023 ಕ್ಕೂ ಮುನ್ನ ಚುನಾವಣಾ ಸಂದರ್ಭದಲ್ಲಿ ನಾವು ಜನರಿಗೆ ನೀಡಿದ ಬದುಕಿನ ಗ್ಯಾರಂಟಿಗಳಿಗೆ ಅನುಸಾರವಾಗಿ ರಾಜ್ಯದ ಬಜೆಟ್ ಗಾತ್ರಕ್ಕೆ ಅನುಗುಣವಾಗಿ ಎಲ್ಲ ಬಡ ಜನರಿಗೆ, ಉಚಿತ ವಿದ್ಯುತ್, ಆಹಾರ ಧಾನ್ಯ, ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಹಾಗೂ ಶ್ರಮವಿದ್ದರೂ ಆದಾಯ ಕಾಣದ ಗೃಹಿಣಿಯರಿಗೆ 2000 ರೂಪಾಯಿಗಳನ್ನು ನೀಡಲಾಗುತ್ತಿದೆ. ಕಳೆದ ಸರ್ಕಾರದಲ್ಲಿ ಉಂಟಾದ ವಿಪರೀತ ಬೆಲೆ ಏರಿಕೆ, ನಿರುದ್ಯೋಗ ಮತ್ತು ಆರ್ಥಿಕ ಕುಸಿತದಿಂದ ಎಲ್ಲ ಸಮುದಾಯಗಳ ಜನರ ಬದುಕು ತೀರಾ ಸಂಕಷ್ಟಕ್ಕೆ ಸಿಲುಕಿತ್ತು. ಇದರ ಜೊತೆಗೆ ಕರೋನಾ ಸಂದರ್ಭದ ಕೆಟ್ಟ ನಿರ್ವಹಣೆ, ಜನರಿಗೆ ದುಡಿಮೆ ಇಲ್ಲದ ಸ್ಥಿತಿ ಮತ್ತು ಪ್ರಧಾನಿ ಮೋದಿಯವರ ಸುಳ್ಳಿನ 20 ಲಕ್ಷ ಕೋಟಿ…

Read More

ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಪತ್ನಿಯ ವಿರುದ್ಧ ವಿಪಕ್ಷ ಬಿಜೆಪಿ ನಾಯಕರು ಮುಡಾದಿಂದ ಅಕ್ರಮವಾಗಿ ನಿವೇಶನ ಪಡೆದಿದ್ದಾರೆ ಎಂಬುದಾಗಿ ಗಂಭೀರ ಆರೋಪ ಮಾಡಿದ್ದರು. ಇದೀಗ ರಾಜ್ಯ ಸರ್ಕಾರದಿಂದ ಮುಡಾ ಅಕ್ರಮ ಕುರಿತಂತೆ ಕರ್ನಾಟಕ ಹೈಕೋರ್ಟ್ ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆಗೆ ಆದೇಶಿಸಿದೆ. ಈ ಕುರಿತಂತೆ ಒಳಾಡಳಿತ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಅಧಿಸೂಚನೆ ಹೊರಡಿಸಿದ್ದಾರೆ. ಅದರಲ್ಲಿ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಿವೇಶನ ಹಂಚಿಕೆ ವಿಷಯದಲ್ಲಿ ಆರೋಪಗಳು ಸರ್ಕಾರದ ಗಮನಕ್ಕೆ ಬಂದಿರುವುದಲ್ಲದೆ, ಈ ಕುರಿತು ದಿನ ಪತ್ರಿಕೆಗಳಲ್ಲಿ ಮಾಧ್ಯಮಗಳಲ್ಲಿಯೂ ಸಹ ವರದಿಯಾಗಿರುತ್ತದೆ. ಈ ಪುಕರಣದಲ್ಲಿ ವಿಚಾರಣೆ ನಡೆಸುವುದು ಸೂಕ್ತವೆಂದು ಮನಗಂಡು, Commission of Inquiry Act, 1952ರ ನಿಯಮ 3 ರ ಉಪನಿಯಮ (1) ರನ್ವಯ ಮಾನ್ಯ ಉಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಾಧೀಶರಿಂದ ವಿಚಾರಣೆ ನಡೆಸಲು ವಿಚಾರಣಾ ಆಯೋಗವನ್ನು ರಚಿಸಲು ಸರ್ಕಾರವು ತೀರ್ಮಾನಿಸಿದೆ ಅಂತ ತಿಳಿಸಿದ್ದಾರೆ. ಈ ಹಿನ್ನಲೆಯಲ್ಲಿ, ಆರೋಪಗಳ ಬಗ್ಗೆ ವಿಚಾರಣೆಯನ್ನು ನಡೆಸಲು Commission of Inquiry Act, 1952ರ ನಿಯಮ…

Read More

ಬೆಂಗಳೂರು : ರಾಜ್ಯದಲ್ಲಿ ಮಳೆಯ ಆರ್ಭಟ ಮುಂದುವರೆದಿದ್ದು, ಇಂದಿನಿಂದ ಎರಡು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಐದು ಜಿಲ್ಲೆಗಳಿಗೆ ರೆಡ್‌ ಅಲರ್ಟ್‌ ಘೋಷಣೆ ನೀಡಿದೆ. ಇಂದು ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ರೆಡ್‌ ಅಲರ್ಟ್‌ ಘೋಷಿಸಲಾಗಿದೆ. ಬೆಳಗಾವಿ, ಹಾಸನ, ಕೊಡಗು, ಬಾಗಲಕೋಎ, ಬೀದರ್‌, ಹಾವೇರಿ, ಕಲಬುರಗಿ, ವಿಜಯಪುರ, ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ, ಮೈಸೂರು, ತುಮಕೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ. ನಾಳೆ ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲಿ 15 ರಿಂದ 20 ಸೆಂ.ಮೀ.ಮಳೆಯಾಗುವ ಸಾಧ್ಯತೆ ಇದೆ. ಬೆಳಗಾವಿ, ಧಾರವಾಡ. ಹಾಸನ, ಬೀದರ್‌, ರಾಯಚೂರು, ಹಾವೇರಿ ಜಿಲ್ಲೆಗಳಲ್ಲೂ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್‌ ಎಚ್ಚರಿಕೆ ನೀಡಲಾಗಿದೆ.

Read More

ಬೆಂಗಳೂರು : ಕರ್ನಾಟಕ ಶಾಲಾ ಪರೀಕ್ಷೆ ಮತ್ತು ನಿರ್ಣಯ ಮಂಡಳಿಯು ಎಸ್‌ ಎಸ್‌ ಎಲ್‌ ಸಿ ಪರೀಕ್ಷೆ-2 ರಲ್ಲಿ ಅನುತ್ತೀರ್ಣರಾಗಿರುವ ಎಲ್ಲಾ ವಿದ್ಯಾರ್ಥಿಗಳನ್ನು ಪರೀಕ್ಷೆ-3 ಕ್ಕೆ ನೋಂದಾಯಿಸಲು ಜುಲೈ 17ಕೊನೆಯ ದಿನವಾಗಿದೆ. ಎಸ್ ಎಸ್ ಎಲ್ ಸಿ ಪರೀಕ್ಷೆ- ಪ್ರಕಟವಾದ ಬೆನ್ನಲ್ಲೇ, ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯಿಂದ ಎಸ್ ಎಸ್ ಎಲ್ ಸಿ ಪರೀಕ್ಷೆ-3ಕ್ಕೆ ನೋಂದಾಯಿಸಿಕೊಳ್ಳುವ ಬಗ್ಗೆ ಮಾಹಿತಿಯನ್ನು ಬಿಡುಗಡೆ ಮಾಡಲಾಗಿದೆ. ಅದರಂತೆ ದಿನಾಂಕ 10-07-2024ರಿಂದ 17-07-2024ರವರೆಗೆ ಅವಕಾಶ ನೀಡಲಾಗಿದೆ ಅಂತ ತಿಳಿಸಿದೆ. ಇನ್ನೂ ಎಸ್ ಎಸ್ ಎಲ್ ಸಿ ಪರೀಕ್ಷೆ-3ರ ಪರೀಕ್ಷೆಗಳು ದಿನಾಂಕ 02-08-2024ರಿಂದ 09-08-2024ರವರೆಗೆ ನಡೆಸಲಾಗುತ್ತದೆ ಅಂತ ಮಾಹಿತಿ ನೀಡಿದೆ. SSLC ಪರೀಕ್ಷೆ-3ಕ್ಕೆ ಸಂಬಂಧಿಸಿದಂತೆ ಸ್ಕ್ಯಾನ್ ಪ್ರತಿ, ಮರುಎಣಿಕೆಗೆ ಮತ್ತು ಮರು ಮೌಲ್ಯ ಮಾಪನಕ್ಕೆ ಮಂಡಳಿಯಿಂದ ಮಹತ್ವದ ಮಾಹಿತಿ ಉತ್ತರ ಪತ್ರಿಕೆಗಳ ಸ್ಕ್ಯಾನ್ ಪ್ರತಿಯನ್ನು ಪಡೆಯಲು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. 16-07-2024ರವರೆಗೆ ಡೆಬಿಟ್, ಕ್ರೆಡಿಟ್ ಕಾರ್ಡ್, ಆನ್ ಲೈನ್…

Read More

ಬೆಂಗಳೂರು : ವೇತನ ಹೆಚ್ಚಳದ ನಿರೀಕ್ಷೆಯಲ್ಲಿರುವ ರಾಜ್ಯ ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರವು ಇಂದು ಸಿಹಿಸುದ್ದಿ ನೀಡುವ ಸಾಧ್ಯತೆ ಇದೆ. ರಾಜ್ಯ ಸರಕಾರಿ ನೌಕರರಿಗೆ 7ನೇ ರಾಜ್ಯ ವೇತನ ಆಯೋಗದ ಅಂತಿಮ ವರದಿಯ ಶಿಫಾರಸುಗಳ ಜಾರಿ ಸಂಬಂಧ ಜು.15 ರ ಇಂದು ರಾಜ್ಯ ಸಚಿವ ಸಂಪುಟ ಸಭೆ ನಿರ್ಣಯ ಕೈಗೊಳ್ಳುವ ನಿರೀಕ್ಷೆಯಿದೆ. ಇಂದು ಸಂಜೆ ಸಿಎಂ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಸಚಿವ ಸಂಪುಟ ಸಭೆ ನಿಗದಿಯಾಗಿದ್ದು, ಸಂಪುಟ ಕಾರ್ಯಸೂಚಿಯಲ್ಲಿ 7ನೇ ರಾಜ್ಯ ವೇತನ ಆಯೋಗದ ಅಂತಿಮ ವರದಿಯ ಶಿಫಾರಸುಗಳ ಜಾರಿ ವಿಷಯ ಸೇರ್ಪಡೆಯಾಗಿದೆ. ಬೇಡಿಕೆಗಾಗಿ ಮಾಸಾಂತ್ಯದಲ್ಲಿ ಅನಿರ್ದಿಷ್ಟಾವಧಿ ಮುಷ್ಕರ ಆರಂಭಿಸುವ ಎಚ್ಚರಿಕೆಯನ್ನು ನೌಕರ ಸಂಘಟನೆಗಳು ನೀಡಿದ್ದವು. ಈ ಹಿನ್ನೆಲೆಯಲ್ಲಿ ಇಂದು ನಡೆಯುವ ಸಂಪುಟ ಸಭೆಯಲ್ಲಿ ಈ ವಿಚಾರದಲ್ಲಿ ನಿರ್ಧಾರ ಹೊರಬೀಳುವ ಸಾಧ್ಯತೆ ಇದೆ ಎನ್ನಲಾಗಿದೆ. 7ನೇ ವೇತನ ಆಯೋಗವು ಶೇ.27.5 ವೇತನ ಪರಿಷ್ಕರಣೆಗೆ ಶಿಫಾರಸು ಮಾಡಿತ್ತು. ಮಾರ್ಚ್ 2023 ರಿಂದಲೇ ಶೇ.17 ಮಧ್ಯಂತರ ಪರಿಹಾರ ನೀಡಲಾಗಿದ್ದು, ಇನ್ನು ಗರಿಷ್ಠ ಶೇ.10.5 ವೇತನ…

Read More

ಬೆಂಗಳೂರು : ರಾಜ್ಯದ ಶಾಲಾ ಮಕ್ಕಳಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, 1-10ನೇ ತರಗತಿ ವಿದ್ಯಾರ್ಥಿಗಳಿಗೆ ವಾರವೀಡಿ ಮೊಟ್ಟೆ ವಿತರಿಸಲು ನಿರ್ಧರಿಸಲಾಗಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ಮಕ್ಕಳಲ್ಲಿ ಅಪೌಷ್ಠಿಕತೆ ನಿವಾರಣೆಗೆ ರಜಾ ದಿನ ಹೊರತುಪಡಿಸಿ, ಪ್ರಸ್ತುತ ಮಕ್ಕಳಿಗೆ ವಾರಕ್ಕೆ 2 ದಿನ ಮೊಟ್ಟೆ ನೀಡಲಾಗುತ್ತಿದೆ.ವಾರದ 6 ದಿನವೂ ಮೊಟ್ಟೆ ವಿತರಣೆಗೆ ನಿರ್ಧರಿಸಲಾಗಿದೆ. ಇನ್ನೊಂದು ತಿಂಗಳಲ್ಲಿ ಅದು ಕಾರ್ಯರೂಪಕ್ಕೆ ಬರಲಿದೆ. 6 ದಿನ ನೀಡುವುದರಿಂದ ವಾರ್ಷಿಕ 1,400 ಕೋಟಿ ರು. ವೆಚ್ಚವಾಗಲಿದೆ. ಸರ್ಕಾರಿ ಶಾಲೆಯ ಶಿಕ್ಷಣದ ಗುಣಮಟ್ಟವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಹಂತ, ಹಂತವಾಗಿ ಶಿಕ್ಷಕರನ್ನು ನೇಮಕ ಮಾಡಲು ಸರ್ಕಾರ ನಿರ್ಧರಿಸಿದೆ ಎಂದು ತಿಳಿಸಿದ್ದಾರೆ. ಈ ಮೊದಲು ಎಂಟನೇ ತರಗತಿವರೆಗಿನ ವಿದ್ಯಾರ್ಥಿಗಳಿಗೆ ಮಾತ್ರ ವಾರಕ್ಕೊಮ್ಮೆ ಮೊಟ್ಟೆ ವಿತರಣೆ ಮಾಡಲಾಗುತ್ತಿತ್ತು. ನಮ್ಮ ಸರ್ಕಾರ ಅದನ್ನು 10ನೇ ತರಗತಿಯವರೆಗೆ ವಿಸ್ತರಿಸಿದೆ. ವಾರದಲ್ಲಿ ಒಂದು ದಿನದ ಬದಲು ಎರಡು ದಿನಕ್ಕೆ ಹೆಚ್ಚಿಸಲಾಗಿತ್ತು. ಇನ್ನು ವಾರವಿಡೀ ವಿತರಿಸಲಾಗುವುದು ಎಂದು ತಿಳಿಸಿದ್ದಾರೆ.

Read More

ಸ್ಪೇನ್ ಯುರೋ ಚಾಂಪಿಯನ್‌ಶಿಪ್‌ ಫ‌ುಟ್‌ಬಾಲ್‌ ಪ್ರಶಸ್ತಿಯನ್ನು ಅದ್ಭುತ ಪ್ರದರ್ಶನದೊಂದಿಗೆ ಗೆದ್ದುಕೊಂಡಿದೆ. ಜುಲೈ 14 ರಂದು ಬರ್ಲಿನ್ ನಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಸ್ಪೇನ್ 2-1 ಗೋಲುಗಳಿಂದ ಇಂಗ್ಲೆಂಡ್ ತಂಡವನ್ನು ಸೋಲಿಸಿತು. ಸ್ಪೇನ್ ದಾಖಲೆಯ ನಾಲ್ಕನೇ ಬಾರಿಗೆ ಯೂರೋ ಕಪ್ ಗೆದ್ದಿದೆ. ಅದೇ ಸಮಯದಲ್ಲಿ, ಇಂಗ್ಲೆಂಡ್ ಮತ್ತೆ ನಿರಾಶೆಗೊಂಡಿತು. ಸ್ಪೇನ್ ಈ ಹಿಂದೆ 1964, 2008 ಮತ್ತು 2012ರಲ್ಲಿ ಯುರೋಪಿಯನ್ ಚಾಂಪಿಯನ್ ಶಿಪ್ ಗೆದ್ದಿತ್ತು. ಸ್ಪೇನ್ ಯೂರೋ ಕಪ್ ನ ಅತ್ಯಂತ ಯಶಸ್ವಿ ತಂಡವಾಗಿದೆ. ಜರ್ಮನಿ ಮೂರು ಪ್ರಶಸ್ತಿಗಳೊಂದಿಗೆ ಎರಡನೇ ಸ್ಥಾನದಲ್ಲಿದೆ. ಇಂಗ್ಲೆಂಡ್ ಬಗ್ಗೆ ಮಾತನಾಡುವುದಾದರೆ, ಅವರು ಸತತ ಎರಡನೇ ಬಾರಿಗೆ ಫೈನಲ್ ತಲುಪಿದರು. ಇದಕ್ಕೂ ಮೊದಲು 2020 ರ ಋತುವಿನಲ್ಲಿ, ಇಟಲಿ ಪ್ರಶಸ್ತಿ ಪಂದ್ಯದಲ್ಲಿ ಅವರನ್ನು ಸೋಲಿಸಿತು. ಈ ಚಾಂಪಿಯನ್ಶಿಪ್ನ 66 ವರ್ಷಗಳ ಇತಿಹಾಸದಲ್ಲಿ ಇಂಗ್ಲೆಂಡ್ ಒಮ್ಮೆಯೂ ಚಾಂಪಿಯನ್ ಆಗಲು ಸಾಧ್ಯವಾಗಿಲ್ಲ. ಅಂತಿಮ ಪಂದ್ಯದ ಮೊದಲಾರ್ಧದಲ್ಲಿ ಎರಡೂ ತಂಡಗಳಿಂದ ಯಾವುದೇ ಗೋಲು ದಾಖಲಾಗಲಿಲ್ಲ. ಆದಾಗ್ಯೂ, ಈ ಸಮಯದಲ್ಲಿ ಸ್ಪ್ಯಾನಿಷ್ ತಂಡವು 66…

Read More

ಶಿವಮೊಗ್ಗ : ರಾಜ್ಯದಲ್ಲಿ ಶೀಘ್ರವೇ 3,000 ಕೆಪಿಎಸ್ ಶಾಲೆಗಳನ್ನು ಕೂಡಾ ತೆರೆಯಲು ಉದ್ದೇಶಿಸಲಾಗಿದೆ ಎಂದು ಶಿಕ್ಷಣ ಸಿಚವ ಮಧು ಬಂಗಾರಪ್ಪ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂದಿನ ಎರಡು ವರ್ಷಗಳಲ್ಲಿ ಎಲ್ಲಾ ಆಧುನಿಕ ಸೌಲಭ್ಯಗಳೊಂದಿಗೆ 3,000 ಕೆಪಿಎಸ್ ಶಾಲೆಗಳನ್ನು ಕೂಡಾ ತೆರೆಯಲು ಉದ್ದೇಶಿಸಲಾಗಿದೆ.ಸರ್ಕಾರಿ ಶಾಲೆಯ ಮಕ್ಕಳಿಗೆ ಪೌಷ್ಟಿಕ ಆಹಾರವನ್ನು ನೀಡುವ ಸಲುವಾಗಿ ಅಜೀಂ ಪ್ರೇಂಜಿ ಫೌಂಡೇಶನ್ ನೆರವಿನೊಂದಿಗೆ ಶೀಘ್ರದಲ್ಲೇ ವಾರದಲ್ಲಿ ಆರು ದಿನ ಮೊಟ್ಟೆ ನೀಡಲಾಗುವುದು ಎಂದು ತಿಳಿಸಿದ್ದಾರೆ. ಪ್ರಸ್ತುತ ಮಕ್ಕಳಿಗೆ ವಾರಕ್ಕೆ 2 ದಿನ ಮೊಟ್ಟೆ ನೀಡಲಾಗುತ್ತಿದೆ. 6 ದಿನ ನೀಡುವುದರಿಂದ ವಾರ್ಷಿಕ 1,400 ಕೋಟಿ ರು. ವೆಚ್ಚವಾಗಲಿದೆ ಎಂದರು . ಸರ್ಕಾರಿ ಶಾಲೆಯ ಶಿಕ್ಷಣದ ಗುಣಮಟ್ಟವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಹಂತ, ಹಂತವಾಗಿ ಶಿಕ್ಷಕರನ್ನು ನೇಮಕ ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿದೆ ಎಂದು ಹೇಳಿದ್ದಾರೆ.

Read More

ಬೆಂಗಳೂರು : ಸರ್ಕಾರಿ ನೌಕರನು ಸೇವೆಯಲ್ಲಿ ಎಸಗುವ ಅಪರಾಧಗಳ ಕುರಿತು ವಿಚಾರಣೆ ನಡೆಸಿ, ಸಾಬೀತಾದ ಪ್ರಕರಣಗಳಲ್ಲಿ ಆರೋಪಿ ನೌಕರನಿಗೆ ವಿಧಿಸಬಹುದಾದಂತಹ ದಂಡನೆಗಳ ಬಗ್ಗೆ ಕರ್ನಾಟಕ ಸಿವಿಲ್ ಸೇವಾ ನಿಯಮದಲ್ಲಿ ನಿರ್ದಿಷ್ಟಪಡಿಸಲಾಗಿದೆ. ಆದರೆ, ಸದರಿ ನಿಯಮದಲ್ಲಿ ಯಾವ ಆರೋಪಕ್ಕೆ ಯಾವ ಶಿಕ್ಷೆಯನ್ನು ವಿಧಿಸಬಹುದು ಎಂಬುದನ್ನು ನಿಗದಿಪಡಿಸಿರುವುದಿಲ್ಲ. ಇದರಿಂದಾಗಿ ಕೆಲವು ಸಂದರ್ಭಗಳಲ್ಲಿ ಆರೋಪದ ತೀವ್ರತೆಗಿಂತ ವಿಧಿಸಲಾದ ದಂಡನೆಗಳು ಕಡಿಮೆ ಅಥವಾ ಹೆಚ್ಚಿನದಾಗುವ/ಹೊಂದಿದ ಆರೋಪಗಳ ಶಿಸ್ತು ಪ್ರಾಧಿಕಾರಿಗಳು, ಹೋಲಿಸಬಹುದಾದಂತಹ ತೀವ್ರತೆಯನ್ನು ಹೊಂದಿದ ಆರೋಪಗಳ ಪ್ರಕರಣಗಳಲ್ಲಿ ಬೇರೆ ಬೇರೆ ದಂಡನೆಗಳನ್ನು ವಿಧಿಸುವ ಸಾಧ್ಯತೆಯೂ ಇರುತ್ತದೆ. ಆದುದರಿಂದ, ಸರ್ಕಾರವು ಇದನ್ನು ಕೂಲಂಕುಷವಾಗಿ ಪರಿಶೀಲಿಸಿ ಸಾಬೀತಾದಂತಹ ಆರೋಪಗಳಿಗನುಗುಣವಾಗಿ ವಿಧಿಸಬಹುದಾದ ದಂಡನೆಗಳ ಉದಾಹರಣೆಗಳನ್ನು ಈ ಕೆಳಗೆ ನೀಡಲಾಗಿದೆ.

Read More