Author: kannadanewsnow57

ಬೆಂಗಳೂರು : ಕೇಂದ್ರ ಸಚಿವ ಸಂಪುಟ ಒಪ್ಪಿಗೆ ನೀಡಿರುವ ‘‘ಒಂದು ದೇಶ ಒಂದು ಚುನಾವಣೆ’’ ಯ ಪ್ರಸ್ತಾವ ಒಕ್ಕೂಟ ವ್ಯವಸ್ಥೆಗೆ ವಿರುದ್ಧವಾದುದು ಮಾತ್ರವಲ್ಲ ‘‘ಅನುಷ್ಠಾನಗೊಳಿಸಲು ಕೂಡಾ ಅಸಾಧ್ಯವಾದುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಈ ಕುರಿತು ಟ್ವಿಟ್ ಮಾಡಿರುವ ಸಿಎಂ ಸಿದ್ದರಾಮಯ್ಯ, ಇಂತಹದ್ದೊಂದು ಮಹತ್ವದ ಪ್ರಸ್ತಾವದ ಬಗ್ಗೆ ವಿರೋಧ ಪಕ್ಷಗಳ ಜೊತೆ ಸಮಾಲೋಚನೆಯನ್ನೂ ಮಾಡದೆ ತರಾತುರಿಯಲ್ಲಿ ಅನುಷ್ಠಾನಕ್ಕೆ ತರಲು ಹೊರಟಿರುವುದು ನರೇಂದ್ರ ಮೋದಿ ಸರ್ಕಾರದ ದುಷ್ಠ ಉದ್ದೇಶವನ್ನು ಅನಾವರಣಗೊಳಿಸಿದೆ ಎಂದು ಹೇಳಿದ್ದಾರೆ. ಒಂದು ಸರ್ಕಾರದ ಆದ್ಯತೆಗಳು ಏನಿರಬೇಕೆಂಬ ಸಾಮಾನ್ಯ ಜ್ಞಾನವೂ ಕೇಂದ್ರ ಸರ್ಕಾರಕ್ಕಾಗಲಿ, ಪ್ರಧಾನಮಂತ್ರಿಯವರಿಗಾಗಲಿ ಇದ್ದ ಹಾಗೆ ಕಾಣುವುದಿಲ್ಲ. ದೇಶಾದ್ಯಂತ ನಿರುದ್ಯೋಗ ತಾಂಡವವಾಡುತ್ತಿದೆ, ಹಣದುಬ್ಬರದಿಂದ ದೇಶದ ಆರ್ಥಿಕತೆ ತತ್ತರಿಸುತ್ತಿದೆ. ಅಗತ್ಯವಸ್ತುಗಳ ಬೆಲೆ ಏರಿಕೆಯಿಂದ ಜನ ಬವಣೆಪಡುತ್ತಿದ್ದಾರೆ. ದೇಶಾದ್ಯಂತ ಕಾನೂನು ಸುವ್ಯವಸ್ಥೆ ಮೇಲಿನ ನಿಯಂತ್ರಣ ತಪ್ಪಿಹೋಗಿದ್ದು, ದಲಿತರು ಮತ್ತು ಮಹಿಳೆಯರ ಮೇಲೆ ದೌರ್ಜನ್ಯಗಳು ಮಿತಿಮೀರಿ ಹೋಗುತ್ತಿದೆ. ಈ ಬಗ್ಗೆ ಯೋಚನೆ ಮಾಡಲು ಕೂಡಾ ಪುರುಸೊತ್ತಿಲ್ಲದ ಪ್ರಧಾನ ಮಂತ್ರಿಗಳು ‘‘ಒಂದು ದೇಶ ಒಂದು ಚುನಾವಣೆ’’…

Read More

ಬೆಂಗಳೂರು : ಮೈಸೂರು ಜಿಲ್ಲೆಯ ಇಮ್ಮಾವು ಗ್ರಾಮದಲ್ಲಿ ಚಿತ್ರನಗರಿ ನಿರ್ಮಾಣ ಮಾಡಲಾಗುವುದು. ಇಂದಿನ ಚಿತ್ರರಂಗಕ್ಕೆ ಅಗತ್ಯವಿರುವ ತಂತ್ರಜ್ಞಾನಗಳನ್ನೊಳಗೊಂಡ ಅತ್ಯಾಧುನಿಕ ಮಾದರಿಯ ಚಿತ್ರನಗರಿ ನಿರ್ಮಾಣ ಮಾಡಬೇಕು. ಚಿತ್ರನಗರಿಯಲ್ಲಿ ಥಿಯೇಟರ್‌, ಸ್ಟುಡಿಯೋ, ಮಲ್ಟಿಪ್ಲೆಕ್ಸ್‌, ಥೀಮ್‌ ಪಾರ್ಕ್‌, ಹೋಟೆಲ್‌ಗಳನ್ನೂ ನಿರ್ಮಿಸಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಮೈಸೂರು ಜಿಲ್ಲೆಯ ಇಮ್ಮಾವು ಗ್ರಾಮದಲ್ಲಿ ಚಿತ್ರನಗರಿ ನಿರ್ಮಿಸುವ ಕುರಿತು ಹಿರಿಯ ಅಧಿಕಾರಿಗಳ ಸಭೆ ನಡೆಸಿ, ಕೆಲವು ಸೂಚನೆಗಳನ್ನು ನೀಡಿದ್ದಾರೆ. ಈಗಾಗಲೇ ಗುರುತಿಸಲಾಗಿರುವ 11೦ ಎಕರೆ ಕೆಐಎಡಿಬಿ ಭೂಮಿ ಹಸ್ತಾಂತರಿಸಿ ಆದೇಶ ಹೊರಡಿಸಬೇಕು. ಇದರೊಂದಿಗೆ ಹೆಚ್ಚುವರಿಯಾಗಿ ಎರಡನೇ ಹಂತದ ವಿಸ್ತರಣೆಗೆ 50 ಎಕರೆ ಭೂಮಿ ಗುರುತಿಸಬೇಕು. ಮೊದಲ ಹಂತದ ಯೋಜನೆಯನ್ನು ಕೂಡಲೇ ಪ್ರಾರಂಭಿಸಬೇಕು. 2015-16 ರಲ್ಲಿ ಆಯವ್ಯಯ ಘೋಷಣೆ ಮಾಡಲಾಗಿತ್ತು. ಆದರೆ ಇನ್ನೂ ಕಾರ್ಯರೂಪಕ್ಕೆ ಬಂದಿಲ್ಲ. ಇದನ್ನು ಪಿಪಿಪಿ ಮಾದರಿಯಲ್ಲಿ ಅನುಷ್ಠಾನಗೊಳಿಸಲು ಟ್ರಾನ್ಸಾಕ್ಷನ್‌ ಅಡ್ವೈಸರ್‌ ನೇಮಕ ಮಾಡಲು ಟೆಂಡರ್‌ ಕರೆಯಬೇಕು ಎಂದು ಹೇಳಿದ್ದಾರೆ. ಭೂಮಿಯನ್ನು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಗೆ ಹಸ್ತಾಂತರ ಮಾಡಿದ ನಂತರ ಪಿಪಿಪಿ ಮಾದರಿಯಲ್ಲಿ ಎಕ್ಸ್‌ಪ್ರೆಷನ್‌…

Read More

ಮಲಪ್ಪುರಂ: ಮಲಪ್ಪುರಂ ಜಿಲ್ಲೆಯಲ್ಲಿ ಬುಧವಾರ ಎಂಪಾಕ್ಸ್ ಪ್ರಕರಣ ದೃಢಪಟ್ಟಿದೆ. ಎಡವಣ್ಣಾದಲ್ಲಿನ ಒಥಾಯ್‌ನ ವ್ಯಕ್ತಿಯನ್ನು ಮಂಜೇರಿ ಮೆಡಿಕಲ್ ಕಾಲೇಜ್ ಆಸ್ಪತ್ರೆಗೆ ಎಂಪಾಕ್ಸ್ ಸೂಚಿಸುವ ಲಕ್ಷಣಗಳೊಂದಿಗೆ ದಾಖಲಿಸಲಾಗಿದ್ದು, ಆರೋಗ್ಯ ಅಧಿಕಾರಿಗಳು ತಕ್ಷಣ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ. ಇತ್ತೀಚೆಗೆ ಯುಎಇಯಿಂದ ಹಿಂದಿರುಗಿದ ರೋಗಿಯು ಕಳೆದ ಸೋಮವಾರ ಆಸ್ಪತ್ರೆಗೆ ಬಂದರು. ಜ್ವರದ ಜೊತೆಯಲ್ಲಿ ಚಿಕನ್ಪಾಕ್ಸ್ ಅನ್ನು ಹೋಲುವ ತೋಳಿನ ಮೇಲೆ ದದ್ದುಗಾಗಿ ಅವರು ಚರ್ಮರೋಗ ವೈದ್ಯರೊಂದಿಗೆ ಸಮಾಲೋಚಿಸಿದರು. ಸೋಂಕಿತ ವ್ಯಕ್ತಿಯ ಪ್ರಯಾಣದ ಇತಿಹಾಸ ಮತ್ತು ರೋಗಲಕ್ಷಣಗಳ ಪ್ರಸ್ತುತಿಯಿಂದಾಗಿ, ವೈದ್ಯರು ದ್ರವ ಮಾದರಿಯನ್ನು ಕೋಝಿಕ್ಕೋಡ್ ವೈದ್ಯಕೀಯ ಕಾಲೇಜು ಪ್ರಯೋಗಾಲಯಕ್ಕೆ ಪರೀಕ್ಷೆಗೆ ಕಳುಹಿಸಲು ನಿರ್ಧರಿಸಿದರು.

Read More

ನವದೆಹಲಿ : ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ಅಶ್ವಿನಿ ವೈಷ್ಣವ್ ಅವರು ವೀನಸ್ ಆರ್ಬಿಟರ್ ಮಿಷನ್, ಗಗನ್‌ಯಾನ್ ಮತ್ತು ಚಂದ್ರಯಾನ-4 ಮಿಷನ್‌ಗಳ ವಿಸ್ತರಣೆಗೆ 2,104 ಕೋಟಿ ರೂ.ಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ. ಚಂದ್ರಯಾನ-4 ಚಂದ್ರನಿಂದ ಭೂಮಿಗೆ ಮಣ್ಣು ಮತ್ತು ಕಲ್ಲುಗಳನ್ನು ತರಲಿದೆ ಎಂದು ಸ್ಪಷ್ಟಪಡಿಸಿದರು. ಕಡಿಮೆ ಭೂಮಿಯ ಕಕ್ಷೆಯಲ್ಲಿ 30 ಟನ್ ಪೇಲೋಡ್‌ಗಳನ್ನು ಇರಿಸಲು ಮುಂದಿನ ಪೀಳಿಗೆಯ ಉಡಾವಣಾ ವಾಹನವನ್ನು ಪ್ರಾರಂಭಿಸಲು ಕ್ಯಾಬಿನೆಟ್ ಅನುಮೋದನೆ ನೀಡಿದೆ ಎಂದು ಅವರು ಬಹಿರಂಗಪಡಿಸಿದರು. ಚಂದ್ರಯಾನ 4ಕ್ಕೆ ಅನುಮೋದನೆ ನೀಡಲು ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ಬುಧವಾರ ನಡೆದ ಕೇಂದ್ರ ಸಚಿವ ಸಂಪುಟ ಸಭೆ ಕೈಗೊಂಡ ನಿರ್ಧಾರವನ್ನು ಸಚಿವ ಅಶ್ವಿನಿ ವೈಷ್ಣವ್ ಮಾಧ್ಯಮಗಳಿಗೆ ವಿವರಿಸಿದರು. ದೇಶದಲ್ಲಿ ಏಕಕಾಲಕ್ಕೆ ಚುನಾವಣೆ ನಡೆಸುವ ಪ್ರಸ್ತಾವನೆಗೆ ಸಂಬಂಧಿಸಿದಂತೆ ಕೇಂದ್ರ ಸಚಿವ ಸಂಪುಟವೂ ಜಮಿಲಿ ಚುನಾವಣೆಗೆ ಅನುಮೋದನೆ ನೀಡಿದೆ ಎಂದು ಸಚಿವರು ತಿಳಿಸಿದರು. ಎನ್‌ಪಿಕೆ ರಸಗೊಬ್ಬರಗಳಿಗೆ ರೂ.24,475 ಕೋಟಿ ಸಬ್ಸಿಡಿ ಮಂಜೂರು ಮಾಡಲು ಸಚಿವ ಸಂಪುಟ…

Read More

ಮಲಪ್ಪುರಂ: ಮಲಪ್ಪುರಂ ಜಿಲ್ಲೆಯಲ್ಲಿ ಬುಧವಾರ ಎಂಪಾಕ್ಸ್ ಪ್ರಕರಣ ದೃಢಪಟ್ಟಿದೆ. ಎಡವಣ್ಣಾದಲ್ಲಿನ ಒಥಾಯ್‌ನ ವ್ಯಕ್ತಿಯನ್ನು ಮಂಜೇರಿ ಮೆಡಿಕಲ್ ಕಾಲೇಜ್ ಆಸ್ಪತ್ರೆಗೆ ಎಂಪಾಕ್ಸ್ ಸೂಚಿಸುವ ಲಕ್ಷಣಗಳೊಂದಿಗೆ ದಾಖಲಿಸಲಾಗಿದ್ದು, ಆರೋಗ್ಯ ಅಧಿಕಾರಿಗಳು ತಕ್ಷಣ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ. ಇತ್ತೀಚೆಗೆ ಯುಎಇಯಿಂದ ಹಿಂದಿರುಗಿದ ರೋಗಿಯು ಕಳೆದ ಸೋಮವಾರ ಆಸ್ಪತ್ರೆಗೆ ಬಂದರು. ಜ್ವರದ ಜೊತೆಯಲ್ಲಿ ಚಿಕನ್ಪಾಕ್ಸ್ ಅನ್ನು ಹೋಲುವ ತೋಳಿನ ಮೇಲೆ ದದ್ದುಗಾಗಿ ಅವರು ಚರ್ಮರೋಗ ವೈದ್ಯರೊಂದಿಗೆ ಸಮಾಲೋಚಿಸಿದರು. ಅವರ ಪ್ರಯಾಣದ ಇತಿಹಾಸ ಮತ್ತು ರೋಗಲಕ್ಷಣಗಳ ಪ್ರಸ್ತುತಿಯಿಂದಾಗಿ, ವೈದ್ಯರು ದ್ರವ ಮಾದರಿಯನ್ನು ಕೋಝಿಕ್ಕೋಡ್ ವೈದ್ಯಕೀಯ ಕಾಲೇಜು ಪ್ರಯೋಗಾಲಯಕ್ಕೆ ಪರೀಕ್ಷೆಗೆ ಕಳುಹಿಸಲು ನಿರ್ಧರಿಸಿದರು.

Read More

ಬೆಂಗಳೂರು : ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ (KARTET-2024) ಪ್ರಮಾಣ ಪತ್ರ ಬಿಡುಗಡೆಯಾಗಿದ್ದು, ಅರ್ಹ ಅಭ್ಯರ್ಥಿಗಳು ಅಧಿಕೃತ ವೆಬ್ ಸೈಟ್ https://schooleducation.karnataka.gov.in ಮೂಲಕ ಪ್ರಮಾಣ ಪತ್ರವನ್ನು ಡೌನ್ಲೋಡ್ ಮಾಡಿಕೊಳ್ಳಬಹುದು. 2024ರ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ(KARTET-2024) ಯ ಫಲಿತಾಂಶವನ್ನು ದಿನಾಂಕ:09/08/2024 ರಂದು ಪ್ರಕಟಿಸಲಾಗಿದೆ. ಈ ಪರೀಕ್ಷೆಯಲ್ಲಿ ಅರ್ಹತೆ ಪಡೆದಿರುವ ಅಭ್ಯರ್ಥಿಗಳಿಗೆ QR Code ಹೊಂದಿರುವ ಗಣಕೀಕೃತ ಪ್ರಮಾಣ ಪತ್ರವನ್ನು ಇಲಾಖಾ ವೆಬ್‌ಸೈಟ್ https://schooleducation.karnataka.gov.in/ . ಡೌನ್‌ಲೋಡ್ ಮಾಡಿಕೊಳ್ಳಬಹುದಾಗಿದೆ.

Read More

ಶಾಲಾ ಶಿಕ್ಷಣ ಇಲಾಖೆ ಕೊಪ್ಪಳ ಹಾಗೂ ಗಂಗಾವತಿ ಸಮುದಾಯ ರೇಡಿಯೋ ಗ್ರಾಮೀಣ ಭಾರತಿ 90.4 ಎಫ್‌ಎಮ್‌ನ ಸಹಯೋಗದಲ್ಲಿ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳ ಪರೀಕ್ಷಾ ಫಲಿತಾಂಶವನ್ನು ಉತ್ತಮಪಡಿಸುವ ಉದ್ದೇಶದಿಂದ ರೇಡಿಯೋ ಪಾಠಗಳ ಪ್ರಸಾರ ಕಾರ್ಯಕ್ರಮವು ಸೆಪ್ಟೆಂಬರ್ 18ರಿಂದ ಆರಂಭವಾಗಿದೆ ಎಂದು ಗಂಗಾವತಿ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ವೆಂಕಟೇಶ ರಾಮಚಂದ್ರಪ್ಪ ಅವರು ತಿಳಿಸಿದ್ದಾರೆ. ಸೆಪ್ಟೆಂಬರ್ 18 ರಿಂದ ಪ್ರತಿದಿನ ಮಧ್ಯಾಹ್ನ 3:30 ರಿಂದ 4:30 ರವರೆಗೆ ಗಂಗಾವತಿಯ 90.4 ಎಫ್‌ಎಂ ಗ್ರಾಮೀಣ ಭಾರತಿ ರೇಡಿಯೋದಲ್ಲಿ ಎಸ್ ಎಸ್ ಎಲ್ ಸಿ ಪಾಠಗಳು ಪ್ರಸಾರವಾಗಲಿವೆ. ವಿದ್ಯಾರ್ಥಿಗಳು ರೇಡಿಯೋ ಕೇಳಲು 90.4 ಎಂಹೆಚ್‌ಜೆಡ್ ಟ್ಯೂನ್ ಮಾಡಿಕೊಳ್ಳಿ. ರೇಡಿಯೋ ಪಾಠಗಳ ಪ್ರಸಾರದ ಅವಧಿಯಲ್ಲಿ ವಿಷಯ ಶಿಕ್ಷಕರು ಕಡ್ಡಾಯವಾಗಿ ಶಾಲೆಯಲ್ಲಿ ಮಕ್ಕಳಿಗೆ ಪಾಠಗಳನ್ನು ಕೇಳಿಸಲು ಮತ್ತು ಮಕ್ಕಳು ಸಂದೇಹಗಳನ್ನು ಸಂಪನ್ಮೂಲ ಶಿಕ್ಷಕರಲ್ಲಿ ಫೋನ್ ಇನ್ ಮೂಲಕ ಕೇಳಿ ಪರಿಹರಿಸಿಕೊಳ್ಳಲು ಸಹಕರಿಸಬೇಕು. ರೇಡಿಯೋ ಪಾಠಗಳಲ್ಲಿ ಗಂಗಾವತಿಯ ಸಂಪನ್ಮೂಲ ಶಿಕ್ಷಕರುಗಳು ಭಾಗವಹಿಸಲಿದ್ದು, ಗಂಗಾವತಿ ಮತ್ತು ಜಿಲ್ಲೆಯ ಎಲ್ಲಾ ಎಸ್ ಎಸ್ ಎಲ್…

Read More

ಬೆಂಗಳೂರು : ಭೂಸಾರ ಹಾಗೂ ಇ ಸ್ಯಾಪ್ ಆ್ಯಪ್ ಗಳು ಕೃಷಿ ಉತ್ಪಾದನೆ ಹೆಚ್ಚಿಸುವಲ್ಲಿ ಪರಿಣಕಾರಿಯಾಗಿ ನೆರವಾಗಲಿವೆ .ಇದೇ ರೀತಿ ರೈತರಿಗೆ ಇನ್ನಷ್ಟು ವೈಜ್ಞಾನಿಕ ಹಾಗೂ ತಾಂತ್ರಿಕ ನೆರವು ನೀಡಲು ರಾಜ್ಯ ಸರ್ಕಾರ ಹೆಚ್ಚಿನ ಆದ್ಯತೆ ನೀಡುತ್ತಿದೆ ಎಂದು ಕೃಷಿ ಸಚಿವರಾದ ಎನ್ ಚಲುವರಾಯಸ್ವಾಮಿ ತಿಳಿಸಿದರು. ತಮ್ಮ ಕಚೇರಿಯಲ್ಲಿಂದು ಇಂಡಿಯನ್ ಸ್ಟಾರ್ಟಫ್ ಟೂರ್ 2024 ಅಂಗವಾಗಿ ದೇಶದ ವಿವಿಧೆಡೆಯಿಂದ ಆಗಮಿಸಿದ ಛಾತ್ರ ಸಂಸದ್ ನ ಯುವ ನವೋದ್ಯಮಿಗಳನ್ನು ಭೇಟಿಯಾಗಿ ಚರ್ಚೆ ನಡೆಸಿದ ಅವರು ಕೃಷಿ ಅಭ್ಯುದಯಕ್ಕೆ ಸರ್ಕಾರ ಹತ್ತಾರು ಪ್ರಮುಖ ಯೋಜನೆಗಳನ್ನು ರೂಪಿಸಿ ಜಾರಿಗೊಳಿಸುತ್ತಿದೆ ಎಂದರು. ರಾಜ್ಯದಲ್ಲಿ ಬಹುತೇಕ ಮಳೆಯಾಶ್ರಿತ ಜಮೀನು ಹೊಂದಿದ್ದು ಬರ ಹಾಗೂ ಅತೀವೃಷ್ಠಿ ನಮ್ಮ ಮುಂದಿರುವ ಬಹುದೊಡ್ಡ ಸವಾಲಾಗಿದೆ ಅದನ್ನು ಸಮರ್ಥವಾಗಿ ನಿಭಾಯಿಸಲು ಸರ್ಕಾರವೂ ಶ್ರಮಿಸುತ್ತಿದೆ ಎಂದರು. ಕೃಷಿ ಯಾಂತ್ರೀಕರಣ, ಮೌಲ್ಯ ವರ್ಧನೆ, ಉತ್ಪಾದನೆ ಹೆಚ್ಚಳ ನಮ್ಮ ಆದ್ಯತೆ. ಮಾರುಕಟ್ಟೆ ಸರಪಣಿ ಬಲ ಪಡಿಸಲೂ ಸಹ ನಮ್ಮ ಸರ್ಕಾರ ಗಮನ ಹರಿಸಿದೆ ಎಂದು ಚಲುವರಾಯಸ್ವಾಮಿ ಹೇಳಿದರು. ಛಾತ್ರ…

Read More

ನವದೆಹಲಿ : ಮಾಜಿ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ನೇತೃತ್ವದ ಉನ್ನತ ಮಟ್ಟದ ಸಮಿತಿಯ ಒಂದು ರಾಷ್ಟ್ರ, ಒಂದು ಚುನಾವಣೆ ವರದಿಗೆ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಲೋಕಸಭೆ ಮತ್ತು ವಿಧಾನಸಭೆ ಚುನಾವಣೆಗಳನ್ನು ಏಕಕಾಲದಲ್ಲಿ ನಡೆಸಲು ಪ್ರಸ್ತಾಪಿಸಲಾಗಿದೆ. ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ ರಚಿಸಲಾದ ಸಮಿತಿಯು ಇತರ ದೇಶಗಳ ಚುನಾವಣಾ ಪ್ರಕ್ರಿಯೆಗಳನ್ನು ಅಧ್ಯಯನ ಮಾಡಿದೆ. ಅಲ್ಲದೆ, 39 ರಾಜಕೀಯ ಪಕ್ಷಗಳು, ಅರ್ಥಶಾಸ್ತ್ರಜ್ಞರು ಮತ್ತು ಭಾರತದ ಚುನಾವಣಾ ಆಯೋಗವನ್ನು ಸಹ ಸಮಾಲೋಚಿಸಲಾಗಿದೆ. ಈ ನಿಟ್ಟಿನಲ್ಲಿ ಸುಮಾರು 18,000 ಪುಟಗಳ ವರದಿಯನ್ನು ಮಂಡಿಸಲಾಗಿದೆ. ಈ ಪ್ರಸ್ತಾವನೆಯನ್ನು ಮೋದಿ ಸರ್ಕಾರವು ದೀರ್ಘಕಾಲದಿಂದ ಬೆಂಬಲಿಸುತ್ತಿದೆ. ಸಮಿತಿಯ ಶಿಫಾರಸುಗಳು ಮತ್ತು ಅದು ಹೇಗೆ ಕೆಲಸ ಮಾಡುತ್ತದೆ ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ನೇತೃತ್ವದ ಉನ್ನತ ಮಟ್ಟದ ಸಮಿತಿಯು ಮೊದಲ ಹಂತವಾಗಿ ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಿಗೆ ಏಕಕಾಲದಲ್ಲಿ ಚುನಾವಣೆ ನಡೆಸಿ ನಂತರ 100 ದಿನಗಳಲ್ಲಿ ಏಕಕಾಲದಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸುವಂತೆ ಶಿಫಾರಸು…

Read More

ಬೆಂಗಳೂರು : ರಾಜ್ಯ ಸರ್ಕಾರವು ಮಹಿಳೆಯರಿಗೆ ಸಿಹಿಸುದ್ದಿ ನೀಡಿದ್ದು, ಉಚಿತ ಹೊಲಿಗೆ ಯಂತ್ರ ಸೇರಿದಂತೆ ವಿವಿಧ ಯೋಜನೆಗಳಡಿ ಸಹಾಯಧ ಪಡೆಯಲು ಅರ್ಜಿ ಸಲ್ಲಿಕೆ ಅವಧಿಯನ್ನು ಸೆ.30 ರವರೆಗೆ ವಿಸ್ತರಿಸಲಾಗಿದೆ. ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮ ವತಿಯಿಂದ 2024-25ನೇ ಸಾಲಿನ ಉದ್ಯೋಗಿನಿ ಯೋಜನೆ, ಚೇತನ ಯೋಜನೆ, ಲಿಂಗತ್ವ ಅಲ್ಪಸಂಖ್ಯಾತರ ಪುನರ್ವಸತಿ ಯೋಜನೆ, ಧನಶ್ರೀ ಯೋಜನೆ ಮತ್ತು ಮಾಜಿ ದೇವದಾಸಿ ಮಹಿಳೆಯರ ಪುನರ್ವಸತಿ ಯೋಜನೆಗಳ ಸೌಲಭ್ಯ ಪಡೆಯಲು ಅರ್ಹರಿಂದ ಸೇವಾಸಿಂಧು ಪೋರ್ಟಲ್‍ ನಲ್ಲಿ ಆನ್‍ ಲೈನ್‍ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸುವ ಅವಧಿಯನ್ನು ಸೆಪ್ಟೆಂಬರ್ 30, 2024ರ ವರಗೆ ವಿಸ್ತರಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ವ್ಯವಸ್ಥಾಪಕ ನಿರ್ದೇಶಕರು, ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮ, 6ನೇ ಮಹಡಿ, ಜಯನಗರ ವಾಣಿಜ್ಯ ಸಂಕೀರ್ಣ, 4ನೇ ಬ್ಲಾಕ್‍, ಜಯನಗರ, ಬೆಂಗಳೂರು-11 ಅಥವಾ ದೂರವಾಣಿ ಸಂಖ್ಯೆ : 080-26632792, 26542307 ಗೆ ಸಂಪರ್ಕಿಸಬಹುದು ಎಂದು ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More