Author: kannadanewsnow57

ವಾಷಿಂಗ್ಟನ್‌ : ಪೆನ್ಸಿಲ್ವೇನಿಯಾದ ಬಟ್ಲರ್ನಲ್ಲಿ ಶನಿವಾರ ಸಂಜೆ ನಡೆದ ರ್ಯಾಲಿಯಲ್ಲಿ ಗುಂಡಿನ ದಾಳಿ ನಡೆದಿದ್ದು, ಈ ವೇಳೆ ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಕಿವಿ ಮತ್ತು ಮುಖದ ಮೇಲೆ ರಕ್ತ ಬಂದಿದ್ದು, ಕೂಡಲೇ ಅವರನ್ನು ವೇದಿಕೆಯಿಂದ ಸ್ಥಳಾಂತರಿಸಲಾಯಿತು. ಅಂತರರಾಷ್ಟ್ರೀಯ ಮಾಧ್ಯಮ ವರದಿಗಳ ಪ್ರಕಾರ, ಆರಂಭಿಕ ದೊಡ್ಡ ಸ್ಫೋಟದ ನಂತರ ಟ್ರಂಪ್ ಗಾಯಗೊಂಡಂತೆ ನೆಲಕ್ಕೆ ಬಿದ್ದರು. ಭದ್ರತಾ ಸಿಬ್ಬಂದಿ ಮಾಜಿ ಅಧ್ಯಕ್ಷರನ್ನು ತ್ವರಿತವಾಗಿ ರಕ್ಷಿಸಿ ವೇದಿಕೆಯಿಂದ ಹೊರಗೆ ಕರೆದೊಯ್ಯುತ್ತಿದ್ದಂತೆ ಅನೇಕ ಪ್ರೇಕ್ಷಕರಿಂದ ಕಿರುಚಾಟಗಳು ಭುಗಿಲೆದ್ದವು. ಟ್ರಂಪ್ ಜನಸಮೂಹದ ಕಡೆಗೆ ಕೂಗುತ್ತಿರುವಂತೆ ತೋರಿತು ಮತ್ತು ಅವರು ಆತುರದಿಂದ ಹೊರಟಾಗ ತಮ್ಮ ಮುಷ್ಟಿಯನ್ನು ಪಂಪ್ ಮಾಡುತ್ತಿರುವುದು ಕಂಡುಬಂದಿದೆ. ಟ್ರಂಪ್ ಸುರಕ್ಷಿತವಾಗಿದ್ದಾರೆ ಮತ್ತು ಘಟನೆಯ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಸೀಕ್ರೆಟ್ ಸರ್ವಿಸ್ ಹೇಳಿಕೆಯಲ್ಲಿ ತಿಳಿಸಿದೆ. https://twitter.com/i/status/1812256998588662068 “ಜುಲೈ 13 ರ ಸಂಜೆ ಪೆನ್ಸಿಲ್ವೇನಿಯಾದಲ್ಲಿ ಟ್ರಂಪ್ ರ್ಯಾಲಿಯಲ್ಲಿ ಒಂದು ಘಟನೆ ಸಂಭವಿಸಿದೆ. ಸೀಕ್ರೆಟ್ ಸರ್ವಿಸ್ ರಕ್ಷಣಾತ್ಮಕ ಕ್ರಮಗಳನ್ನು ಜಾರಿಗೆ ತಂದಿದೆ ಮತ್ತು ಮಾಜಿ ಅಧ್ಯಕ್ಷರು…

Read More

ಮುಂಬೈ : ಕಳೆದ ಮೂರ್ನಾಲ್ಕು ವರ್ಷಗಳಲ್ಲಿ ದೇಶದಲ್ಲಿ ಎಂಟು ಕೋಟಿ ಹೊಸ ಉದ್ಯೋಗಗಳು ಲಭ್ಯವಾಗಿವೆ ಎಂದು ಆರ್ಬಿಐ ವರದಿ ತಿಳಿಸಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ಮುಂಬೈನ ಗೋರೆಗಾಂವ್ ಉಪನಗರದಲ್ಲಿ ನಡೆದ ಕಾರ್ಯಕ್ರಮದಲ್ಲಿ ರಸ್ತೆ, ರೈಲ್ವೆ ಮತ್ತು ಬಂದರು ಕ್ಷೇತ್ರಗಳಲ್ಲಿ 29,000 ಕೋಟಿ ರೂ.ಗಳ ಯೋಜನೆಗಳಿಗೆ ಚಾಲನೆ ಮತ್ತು ಶಂಕುಸ್ಥಾಪನೆ ನೆರವೇರಿಸಿದ ನಂತರ ಮಾತನಾಡಿದ ಪ್ರಧಾನಿ ಮೋದಿ, ಆರ್ಬಿಐ ಇತ್ತೀಚೆಗೆ ಉದ್ಯೋಗದ ಬಗ್ಗೆ ವಿವರವಾದ ವರದಿಯನ್ನು ಪ್ರಕಟಿಸಿದೆ. ವರದಿಯ ಪ್ರಕಾರ, ಕಳೆದ ಮೂರು-ನಾಲ್ಕು ವರ್ಷಗಳಲ್ಲಿ ಸುಮಾರು ಎಂಟು ಕೋಟಿ ಹೊಸ ಉದ್ಯೋಗಗಳು ಸೃಷ್ಟಿಯಾಗಿವೆ. ಈ ಅಂಕಿಅಂಶವು ಉದ್ಯೋಗಗಳ ಬಗ್ಗೆ ಸುಳ್ಳು ನಿರೂಪಣೆಯನ್ನು ಹರಡುವವರನ್ನು ಮೌನಗೊಳಿಸಿದೆ” ಎಂದು ಮೋದಿ ಹೇಳಿದರು. ದೇಶದಲ್ಲಿ ಕೌಶಲ್ಯ ಅಭಿವೃದ್ಧಿ ಮತ್ತು ಉದ್ಯೋಗದ ಅಗತ್ಯವಿದೆ ಮತ್ತು ನಮ್ಮ ಸರ್ಕಾರ ಈ ದಿಕ್ಕಿನಲ್ಲಿ ಕಾರ್ಯನಿರ್ವಹಿಸುತ್ತಿದೆ. ಮುಂಬೈ ಮತ್ತು ಸುತ್ತಮುತ್ತಲಿನ ಮುಂಬರುವ ಮೂಲಸೌಕರ್ಯ ಯೋಜನೆಗಳು ಹತ್ತಿರದ ಪ್ರದೇಶಗಳೊಂದಿಗೆ ನಗರದ ಸಂಪರ್ಕವನ್ನು ಹೆಚ್ಚಿಸುತ್ತವೆ ಎಂದು ಅವರು ಹೇಳಿದರು. ಸಣ್ಣ ಮತ್ತು ದೊಡ್ಡ ಹೂಡಿಕೆದಾರರು…

Read More

ಮುಂಬೈ : ಬಾಲಿವುಡ್ ನಟ ಅನಂತ್ ಅಂಬಾನಿ-ರಾಧಿಕಾ ಪಂಡಿತ್ ಅವರ ವಿವಾಹ ಸಮಾರಂಭಕ್ಕೆ ಪ್ರಧಾನಿ ನರೇಂದ್ರ ಮೋದಿ ಭರ್ಜರಿ ಪ್ರವೇಶ ನೀಡಿದ್ದಾರೆ. ಮುಂಬೈನ ಬಿಕೆಸಿಯ ಜಿಯೋ ಕನ್ವೆನ್ಷನ್ ಸೆಂಟರ್ನಲ್ಲಿ ನಡೆದ ವಿವಾಹ ಸಮಾರಂಭದಲ್ಲಿ ಅವರು ಪ್ರವೇಶಿಸಿದ ವೀಡಿಯೊ ವೈರಲ್ ಆದ ನಂತರ, ಶುಭ ಆಶೀರ್ವಾದ ಸಮಾರಂಭದಲ್ಲಿ ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ಪ್ರಧಾನಿಯವರ ಪಾದಗಳನ್ನು ಮುಟ್ಟಿ ನಮಸ್ಕರಿಸುತ್ತಿದ್ದಂತೆ ಪ್ರಧಾನಿ ದಂಪತಿಗಳನ್ನು ಆಶೀರ್ವದಿಸುತ್ತಿರುವುದನ್ನು ಮತ್ತೊಂದು ವೀಡಿಯೊ ಅನಾವರಣಗೊಂಡಿದೆ. ಹಿನ್ನಲೆಯಲ್ಲಿ ನುಡಿಸಲಾಗುವ ಸುಮಧುರ ಮತ್ತು ಭಕ್ತಿಗೀತೆಗಳು ಆ ಕ್ಷಣದ ಸೊಬಗು ಮತ್ತು ಮೋಡಿಯನ್ನು ಹೆಚ್ಚಿಸಿದವು. ದ್ವಾರಕಾ ಪೀಠದ ಶಂಕರಾಚಾರ್ಯ ಸ್ವಾಮಿ ಸದಾನಂದ ಸರಸ್ವತಿ ಮತ್ತು ಜ್ಯೋತಿರ್ಮಠದ ಶಂಕರಾಚಾರ್ಯ ಸ್ವಾಮಿ ಅವಿಮುಕ್ತೇಶ್ವರಾನಂದ ಅವರಿಗೆ ಗೌರವ ಸಲ್ಲಿಸಲು ಪ್ರಧಾನಿ ಮೋದಿ ಆಗಮಿಸಿದ್ದರು. ರಾಧಿಕಾ ಮರ್ಚೆಂಟ್ ಮತ್ತು ಅನಂತ್ ಅಂಬಾನಿ ವೇದಿಕೆಯಲ್ಲಿ ಪ್ರಧಾನಿ ಮೋದಿಯವರ ಆಶೀರ್ವಾದ ಕೋರಿದ ವೀಡಿಯೊ https://twitter.com/i/status/1812153293818179719 ನೀತಾ ಅಂಬಾನಿ ಮತ್ತು ಮುಖೇಶ್ ಅಂಬಾನಿ ಅವರು ದ್ವಾರಕಾ ಪೀಠದ ಶಂಕರಾಚಾರ್ಯ ಸ್ವಾಮಿ ಸದಾನಂದ ಸರಸ್ವತಿ…

Read More

ಬೆಂಗಳೂರು : ಈ ವರ್ಷ ಬಜೆಟ್‌ನಲ್ಲಿ ಅಭಿವೃದ್ಧಿಗಾಗಿ 1.60 ಲಕ್ಷ ಕೋಟಿ ಅನುದಾನವನ್ನು ಒದಗಿಸಿದ್ದು, ಇದರಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭಿವೃದ್ಧಿಗೆ 39,121 ಕೋಟಿ ಹಣವನ್ನು ಒದಗಿಸಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಸಮಾಜ ಕಲ್ಯಾಣ ಇಲಾಖೆ ಮತ್ತು ಡಾ. ಬಾಬು ಜಗಜೀವನ ರಾಮ್ ಸಂಶೋಧನಾ ಸಂಸ್ಥೆ ವತಿಯಿಂದ ಬೆಂಗಳೂರಿನ ಮಾಗಡಿ ರಸ್ತೆಯಲ್ಲಿರುವ ನಿರಾಶ್ರಿತರ ಪರಿಹಾರ ಕೇಂದ್ರದಲ್ಲಿ ಆಯೋಜಿಸಿದ್ದ ಹಸಿರು ಕ್ರಾಂತಿಯ ಹರಿಕಾರ, ರಾಷ್ಟ್ರ ನಾಯಕ, ಭಾರತದ ಮಾಜಿ ಉಪ ಪ್ರಧಾನಿ ಡಾ. ಬಾಬು ಜಗಜೀವನ ರಾಮ್ ಭವನವನ್ನು ಉದ್ಘಾಟಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದವರ ಅಭಿವೃದ್ಧಿಗಾಗಿ, ಅವರಿಗೆ ಆರ್ಥಿಕವಾಗಿ ಮತ್ತು ಸಾಮಾಜಿಕವಾಗಿ ಶಕ್ತಿ ತುಂಬಲು, ಅವರ ಜನಸಂಖ್ಯೆಗೆ ಅನುಗುಣವಾಗಿ ಅಭಿವೃದ್ಧಿ ಅನುದಾನವನ್ನು ಖರ್ಚು ಮಾಡಲು ನಾವು ಹಿಂದಿನ ಬಾರಿ ಅಧಿಕಾರದಲ್ಲಿದ್ದಾಗ ಕಾಯ್ದೆ ರೂಪಿಸಿದ್ದೆವು. 2011ರ ಜನಗಣತಿ ಪ್ರಕಾರ ರಾಜ್ಯದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಒಟ್ಟು ಜನಸಂಖ್ಯೆ ಶೇ.24.01 ರಷ್ಟಿದೆ.…

Read More

ಧಾರವಾಡ : ರಾಜ್ಯದಲ್ಲಿರುವುದು 100 ಪರ್ಸೆಂಟ್‌ ಭ್ರಷ್ಟ ಸರ್ಕಾರ, ಕರ್ನಾಟಕದಿಂದ ತೆಲಂಗಾಣಕ್ಕೆ 1000 ಕೋಟಿ ರೂ. ಸಂಗ್ರಹಿಸಿ ಕೊಡಲಾಗಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಆರೋಪಿಸಿದ್ದಾರೆ. ಕಳೆದೊಂದು ವರ್ಷದಿಂದ ಕಾಂಗ್ರೆಸ್‌ ಸರ್ಕಾರದಲ್ಲಿ ಭಾರೀ ಭ್ರಷ್ಟಾಚಾರ ನಡೆದಿದೆ. ಸರಿ ಸುಮಾರು 1000 ಕೋಟಿ ರೂ. ಸಂಗ್ರಹಿಸಿ ತೆಲಂಗಾಣಕ್ಕೆ ಕೊಡಲಾಗಿದೆ.ಇದು ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್‌ ಗೆ ಗೊತ್ತಿದ್ದೇ ಆದ ಹಗರಣ ಎಂದು ಹೇಳಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಹಿಂದ ನಾಯಕ ಎನ್ನುತ್ತಲೇ ಎಸ್‌ ಸಿ-ಎಸ್‌ ಟಿ ಸಮುದಾಯದ ಹಣವನ್ನು ಗ್ಯಾರಂಟಿ ಯೋಜನೆಗಳಿಗೆ ಬಳಸಿಕೊಂಡಿದ್ದಾರೆ. ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ನೇರವಾಗಿ ಭಾಗಿಯಾಗಿದ್ದು, ಅವರು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದ್ದಾರೆ. ರಾಜ್ಯ ಕಾಂಗ್ರೆಸ್ ಸರ್ಕಾರ ತನ್ನ ಆಡಳಿತದಲ್ಲಿ ಭ್ರಷ್ಟಾಚಾರದ ಮೇಲೆ ಭ್ರಷ್ಟಾಚಾರ ನಡೆಸಿದೆ. ವಾಲ್ಮೀಕಿ ನಿಗಮದಲ್ಲಿ ಹಗರಣ, ಮುಡಾದಲ್ಲಿ ಅಕ್ರಮ ನಡೆದಿದೆ. ಸಾವಿರಾರು ಕೋಟಿ ಸಂಗ್ರಹ ಮಾಡಿ ಆಗಾಗ ತೆಂಗಾಣಕ್ಕೆ ಕೊಟ್ಟಿದ್ದಾರೆ. ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣವನ್ನು ನೂರಾರು ಜನರಿಗೆ…

Read More

ಬೆಂಗಳೂರು : ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ (ಕೆಸೆಟ್) – 2024 ವೇಳಾಪಟ್ಟಿ ಪ್ರಕಟವಾಗಿದ್ದು, ಕರ್ನಾಟಕ ಸರ್ಕಾರದ ನಿರ್ದೇಶನದಂತೆ, ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ-2024 (ಕೆಸೆಟ್- 2024) ಅನ್ನು 24ನೇ ನವೆಂಬರ್ 2024 (ಭಾನುವಾರ) ರಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ನಡೆಸಲು ಯೋಜಿಸಲಾಗಿದ್ದು, ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಕರೆಯಲಾಗಿದೆ. ಕೆಸೆಟ್-2024 ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿ ಈ ಕೆಳಗಿನಂತಿದೆ. ಅಧಿಸೂಚನೆ ಹೊರಡಿಸಲಾಗುವ ದಿನಾಂಕ 13.07.2024 2) ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಕೆ ಪ್ರಾರಂಭದ ದಿನಾಂಕ : 22.07.2024 3) ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಕೆಯ ಕೊನೆಯ ದಿನಾಂಕ 22.08.2024 : 4) ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ 26.08.2024 5) ಪರೀಕ್ಷಾ ದಿನಾಂಕ : 24.11.2024 ಅಭ್ಯರ್ಥಿಗಳು ಕೆಸೆಟ್-2024ಕ್ಕೆ “Online” ಮೂಲಕ ಮಾತ್ರ ಅರ್ಜಿ ಸಲ್ಲಿಸಬಹುದು. ಯಾವುದೇ ಇತರ ನಮೂನೆಯಲ್ಲಿ ಅರ್ಜಿಯನ್ನು ಸ್ವೀಕರಿಸಲಾಗುವುದಿಲ್ಲ. KEA ವೆಬ್ ಸೈಟ್ http://kea.kar.nic.in ಅನ್ನು ಪ್ರವೇಶಿಸುವ ಮೂಲಕ ಆನ್‌ಲೈನ್…

Read More

ಬೆಂಗಳೂರು: ಶೀಘ್ರವೇ ಸಿಇಟಿ ಅರ್ಜಿ ತುಂಬುವ ವಿಧಾನ ತಿಳಿಸಲು ಆಪ್ ಬಿಡುಗಡೆ ಮಾಡಲಾಗುತ್ತದೆ. ಅಲ್ಲದೇ ಕಂಪ್ಯೂಟರ್ ಆಧಾರಿತ ಸಿಇಟಿ ಪರಿಶೀಲನೆ ನಡೆಸಲಾಗುತ್ತದೆ ಅಂತ ಕೆಇಎ ಅಧ್ಯಕ್ಷರು ಆದ ಉನ್ನತ ಶಿಕ್ಷಣ ಸಚಿವ ಡಾ. ಎಂ ಸಿ ಸುಧಾಕರ ಶನಿವಾರ ಹೇಳಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಕಂಪ್ಯೂಟರ್ ಆಧಾರಿತ ಪರೀಕ್ಷಾ ವ್ಯವಸ್ಥೆಯ ಮೂಲಸೌಕರ್ಯಕ್ಕಾಗಿ ಸರ್ಕಾರ ಹೆಚ್ಚು ವೆಚ್ಚ ಮಾಡಬೇಕಾಗುತ್ತದೆ. ಈ ಸಂಪನ್ಮೂಲದ ಸದುಪಯೋಗ ಪೂರ್ಣ ಪ್ರಮಾಣದಲ್ಲಿ ಆಗುತ್ತದೆಯೇ ಎಂಬ ಬಗ್ಗೆಯೂ ಆಲೋಚಿಸಬೇಕಾಗುತ್ತದೆ ಎಂದು ಒತ್ತಿ ಹೇಳಿದರು. ಮಹಾರಾಷ್ಟ್ರದಲ್ಲಿ ಕಂಪ್ಯೂಟರ್ ಆಧಾರಿತವಾಗಿ ಸಿಇಟಿ ನಡೆಸಿದ್ದ ಸಂಸ್ಥೆಯ ಪ್ರಾತ್ಯಕ್ಷಿಕೆಯನ್ನು ವೀಕ್ಷಿಸಲಾಗಿದೆ ಎಂದೂ ಸುಧಾಕರ ಹೇಳಿದರು. ಸಿಇಟಿ ಅರ್ಜಿ ತುಂಬುವ ಹಂತದಲ್ಲಿ, ಮುಖ್ಯವಾಗಿ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಇನ್ನೂ ಸಾಕಷ್ಟು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಆ ವಿದ್ಯಾರ್ಥಿಗಳು ಬಹುತೇಕ ಸೈಬರ್ ಸೆಂಟರುಗಳಿಗೆ ಹೋಗಿ ಅರ್ಜಿ ತುಂಬುತ್ತಿದ್ದು, ಗ್ರಾಮೀಣ ವಿದ್ಯಾರ್ಹತೆ, ಮೀಸಲಾತಿ ಮತ್ತಿತರ ಮಾಹಿತಿಗಳನ್ನು ನೀಡುವಾಗ ಹೆಚ್ಚಿನ ಪ್ರಮಾಣದಲ್ಲಿ ತಪ್ಪುಗಳನ್ನು ಎಸಗುತ್ತಿದ್ದಾರೆ ಎಂದರು. ಸಿಇಟಿ ಅರ್ಜಿ ತುಂಬುವ ವಿಧಾನದ ಬಗ್ಗೆ…

Read More

ಬೆಂಗಳೂರು : ರಾಜ್ಯದಲ್ಲಿ ಮಳೆಯ ಆರ್ಭಟ ತೀವ್ರಗೊಂಡಿದ್ದು, ಇಂದು, ನಾಳೆ ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದು ಮತ್ತು ನಾಳೆ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಹವಾಮಾನ ಇಲಾಖೆಯು ರೆಡ್‌ ಅಲರ್ಟ್‌ ಎಚ್ಚರಿಕೆ ನೀಡಿದೆ. ಮುಂದಿನ 24 ಗಂಟೆಯಲ್ಲಿ ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲಿ 15 ರಿಂದ 20 ಸೆಂ.ಮೀ.ಮಳೆಯಾಗುವ ಸಾಧ್ಯತೆ ಇದೆ. ಬೆಳಗಾವಿ, ಧಾರವಾಡ. ಹಾಸನ, ಬೀದರ್‌, ರಾಯಚೂರು, ಹಾವೇರಿ ಜಿಲ್ಲೆಗಳಲ್ಲೂ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್‌ ಎಚ್ಚರಿಕೆ ನೀಡಲಾಗಿದೆ.

Read More

ಮಂಗಳೂರು : ರಾಜ್ಯದಲ್ಲಿ ಇನ್ಮುಂದೆ ಅಂಗನವಾಡಿ ಕೇಂದ್ರಗಳು ಸರ್ಕಾರಿ ಮೊಂಟೆಸರಿ ಆಗಿ ಪರಿವರ್ತನೆ ಆಗಲಿವೆ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ತಿಳಿಸಿದ್ದಾರೆ. ಶನಿವಾರ ಮಂಗಳೂರು ನಗರದ ಉರ್ವಸ್ಟೋರ್ ಬಳಿಯಿರುವ ಕರಾವಳಿ ಲೇಖಕಿಯರ ಮತ್ತು ವಾಚಕಿಯರ ಸಂಘದ ನವೀಕೃತ ಕಟ್ಟಡ ‘ಸಾಹಿತ್ಯ ಸದನ’ ವನ್ನು ಉದ್ಘಾಟಿಸಿ ಮಾತನಾಡಿದ ಸಚಿವರು, ರಾಜ್ಯದ ಎಲ್ಲಾ ಅಂಗನವಾಡಿ ಕೇಂದ್ರಗಳನ್ನು ಉನ್ನತೀಕರಿಸಲಾಗುವುದು. ಅಂಗನವಾಡಿ ಎನ್ನುವುದು 50 ವರ್ಷದ ಹಿಂದಿನ ಹೆಸರು. ಅವುಗಳನ್ನು ಇನ್ನು ಮುಂದೆ ಗೌರ್ನಮೆಂಟ್ ಮೊಂಟೆಸರಿ ಎಂದು ಕರೆಯಲಾಗುವುದು ಎಂದು ಸಚಿವರು ತಿಳಿಸಿದರು. ರಾಜ್ಯದ ಪ್ರತಿ ಮಕ್ಕಳಿಗೂ ಗುಣಮಟ್ಟದ ಶಿಕ್ಷಣ ನೀಡಬೇಕೆಂಬುದು ಸರ್ಕಾರದ ಆಶಯವಾಗಿದೆ. ಮನೆಗೆಲಸ ಮಾಡುವ ಪೋಷಕರ ಜತೆಗೆ ಐಎಎಸ್ ಅಧಿಕಾರಿಗಳಿಗೂ ತಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಬೇಕೆಂಬ ಆಕಾಂಕ್ಷೆ ಇರುತ್ತದೆ. ಹಾಗಾಗಿ, ಎಲ್ಲಾ ಮಕ್ಕಳಿಗೂ ಗುಣಮಟ್ಟದ ಶಿಕ್ಷಣದ ಜೊತೆಗೆ ಪೌಷ್ಠಿಕ ಆಹಾರ ನೀಡುವುದರೊಂದಿಗೆ ಅಂಗನವಾಡಿಗಳನ್ನು ಗೌರ್ನಮೆಂಟ್ ಮೊಂಟೆಸರಿಗಳಾಗಿ ಪರಿವರ್ತಿಸಲಾಗುವುದು ಎಂದರು. ಅಂಗನವಾಡಿ ಕೇಂದ್ರಗಳಲ್ಲೇ ಎಲ್‌ಕೆಜಿ, ಯುಕೆಜಿ ಆರಂಭಿಸಲಾಗುವುದು ಎಂದು ಹೇಳಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್…

Read More

ಮಂಗಳೂರು : ಮಹಿಳೆಯನ್ನು ಆರ್ಥಿಕವಾಗಿ ಸಶಕ್ತಗೊಳಿಸಲು ಸರ್ಕಾರ ಜಾರಿಗೆ ತಂದಿರುವ ಗೃಹಲಕ್ಷ್ಮಿ ಯೋಜನೆಯನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ: ಯೋಜನೆಯನ್ನು ರಾಜಕೀಯ ದುರುದ್ದೇಶಕ್ಕೆ ಬಳಸಿಕೊಳ್ಳುವುದಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಆರ್. ಹೆಬ್ಬಾಳ್ಕರ್ ಹೇಳಿದ್ದಾರೆ. ಶನಿವಾರ ಮಂಗಳೂರು ನಗರದ ಉರ್ವಸ್ಟೋರ್ ಬಳಿಯಿರುವ ಕರಾವಳಿ ಲೇಖಕಿಯರ ಮತ್ತು ವಾಚಕಿಯರ ಸಂಘದ ನವೀಕೃತ ಕಟ್ಟಡ ‘ಸಾಹಿತ್ಯ ಸದನ’ ವನ್ನು ಉದ್ಘಾಟಿಸಿ ಮಾತನಾಡಿದ ಸಚಿವರು, ರಾಜ್ಯ ಸರ್ಕಾರ ಅಸ್ತಿತ್ವಕ್ಕೆ ಬಂದ ಮೇಲೆ ಮಹಿಳೆಯರ ಆರ್ಥಿಕ ಸಬಲೀಕರಣಕ್ಕೆ ಒತ್ತು ನೀಡಿದೆ. ಹಾಗಾಗಿ ಗೃಹಲಕ್ಷ್ಮಿ ಸೇರಿದಂತೆ ಎಲ್ಲ ಗ್ಯಾರಂಟಿ ಯೋಜನೆಗಳು ನಿತ್ಯ ನಿರಂತರವಾಗಿ ಮುಂದುವರೆಯಲಿವೆ ಎಂದರು. ಅಂಗನವಾಡಿ ಹೆಸರು ಬದಲಾವಣೆ ರಾಜ್ಯದ ಎಲ್ಲಾ ಅಂಗನವಾಡಿ ಕೇಂದ್ರಗಳನ್ನು ಉನ್ನತೀಕರಿಸಲಾಗುವುದು. ಅಂಗನವಾಡಿ ಎನ್ನುವುದು 50 ವರ್ಷದ ಹಿಂದಿನ ಹೆಸರು. ಅವುಗಳನ್ನು ಇನ್ನು ಮುಂದೆ ಗೌರ್ನಮೆಂಟ್ ಮೊಂಟೆಸರಿ ಎಂದು ಕರೆಯಲಾಗುವುದು ಎಂದು ಸಚಿವರು ತಿಳಿಸಿದರು. ಪ್ರತಿ ಮಕ್ಕಳಿಗೂ ಗುಣಮಟ್ಟದ ಶಿಕ್ಷಣ ರಾಜ್ಯದ ಪ್ರತಿ ಮಕ್ಕಳಿಗೂ ಗುಣಮಟ್ಟದ ಶಿಕ್ಷಣ ನೀಡಬೇಕೆಂಬುದು ಸರ್ಕಾರದ…

Read More