Subscribe to Updates
Get the latest creative news from FooBar about art, design and business.
Author: kannadanewsnow57
ಉತ್ತರಕನ್ನಡ : ರಾಜ್ಯದಲ್ಲಿ ಭಾರಿ ಮಳೆ ಆಗುತ್ತಿದ್ದು ಅವಧಿಗೂ ಮುನ್ನವೇ ಮುಂಗಾರು ಪೂರ್ವ ಮಳೆಯಾಗುತ್ತಿದೆ. ಇದೀಗ ಉತ್ತರ ಕನ್ನಡ ಜಿಲ್ಲೆಯಲ್ಲಿ ವರುಣ ಇಂದು ಉತ್ತರಕನ್ನಡ ಜಿಲ್ಲೆಯಾದ್ಯಂತ ಅಂಗನವಾಡಿಗಳಿಗೆ ರಜೆ ಘೋಷಿಸಲಾಗಿದೆ. ಹೌದು ಉತ್ತರ ಕನ್ನಡ ಜಿಲ್ಲೆಯಲ್ಲಿ ಇಂದು ರೆಡ್ ಅಲರ್ಟ್ ಘೋಷಣೆ ಹಿನ್ನೆಲೆಯಲ್ಲಿ ಇಂದು ಜಿಲ್ಲೆಯ ಎಲ್ಲಾ ಅಂಗನವಾಡಿಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಮೇ.21ರ ಇಂದು ರಜೆ ಘೋಷಿಸಿ ಉತ್ತರ ಕನ್ನಡದ ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯ ಅವರು ಆದೇಶ ಹೊರಡಿಸಿದ್ದಾರೆ. ಜಿಲ್ಲೆಯಲ್ಲಿ ಇಂದು ಮತ್ತು ನಾಳೆ ಮುನ್ನೆಚ್ಚರಿಕೆ ವಹಿಸುವಂತೆ ಜಿಲ್ಲಾಧಿಕಾರಿಗಳು ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಬೆಂಗಳೂರು : ರಾಜ್ಯ ಸರ್ಕಾರ 19 ಮಂದಿ ಡಿವೈಸ್ ಪಿ ಹಾಗೂ 25 ಪೊಲೀಸ್ ಇನ್ಸ್ ಪೆಕ್ಟರ್ ( ಸಿವಿಲ್) ಗಳ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಈ ಕೆಳಕಂಡ ಡಿವೈಎಸ್‌ಪಿ (ಸಿವಿಲ್) ರವರುಗಳನ್ನು ಅವರ ಹೆಸರಿನ ಮುಂದೆ ತೋರಿಸಿರುವ ಸ್ಥಳಕ್ಕೆ ಈ ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾವಣೆಗೊಳಿಸಿ ಆದೇಶಿಸಲಾಗಿದೆ.
ಹೊಸಪೇಟೆ : ಚುನಾವಣೆ ವೇಳೆ ನಾವು ಕೊಟ್ಟಿದ್ದ ಭರವಸೆಗಳಲ್ಲಿ ಐದು ಗ್ಯಾರಂಟಿಗಳ ಜೊತೆಗೆ 242 ಭರವಸೆಗಳನ್ನು ಎರಡು ವರ್ಷಗಳಲ್ಲಿ ಪೂರೈಸಿದ್ದೇವೆ. ಮುಂದಿನ ಮೂರು ವರ್ಷಗಳಲ್ಲಿ ಉಳಿದ ಅಷ್ಟೂ ಭರವಸೆಗಳನ್ನು ಈಡೇರಿಸುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ರಾಜ್ಯ ಸರ್ಕಾರ ಎರಡು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ಆಯೋಜಿಸಿದ್ದ “ಪ್ರಗತಿಯತ್ತ ಕರ್ನಾಟಕ- ಸಮರ್ಪಣೆ ಸಂಕಲ್ಪ” ಸಮಾವೇಶದಲ್ಲಿ 1,11,111 ಮಂದಿಗೆ ಹಕ್ಕುಪತ್ರ ವಿತರಣೆ ಮಾಡಿ, ಉಕ್ಕಿನ ಮಹಿಳೆ ಇಂದಿರಾ ಗಾಂಧಿಯವರ ಪ್ರತಿಮೆಯನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಮೊದಲ ಬಾರಿ ಮುಖ್ಯಮಂತ್ರಿಯಾಗಿ ನಾವು ನೀಡಿದ್ದ 165 ಭರವಸೆಗಳಲ್ಲಿ 158 ಭರವಸೆಗಳನ್ನು ಈಡೇರಿಸಿದ್ದಲ್ಲದೆ, ಪ್ರಣಾಳಿಕೆಯಲ್ಲಿ ಘೋಷಿಸದ ಹೊಸದಾದ 30 ಕಾರ್ಯಕ್ರಮಗಳನ್ನು ರೂಪಿಸಿ ಜಾರಿಗೊಳಿಸಿದ್ದೇವೆ. ಬಿಜೆಪಿ ಏಕೆ ತಾನು ಕೊಟ್ಟಿದ್ದ ಭರವಸೆಗಳನ್ನು ಈಡೇರಿಸದೆ, ಜನರ ಎದುರು ಸುಳ್ಳು ಹೇಳಿಕೊಂಡು ತಿರುಗುತ್ತಿದೆ? ನಮ್ಮ ರಾಜ್ಯ ಸರ್ವ ಜನಾಂಗದ ಶಾಂತಿಯ ತೋಟ. ಸರ್ವರನ್ನೂ ಸಮಾನವಾಗಿ ಗೌರವಿಸುವ ರಾಜ್ಯ. ಸಂವಿಧಾನದ ಅಡಿಯಲ್ಲಿ ಸರ್ವ ಧರ್ಮಗಳನ್ನೂ ಸಮಾನವಾಗಿ ಕಾಣಬೇಕು. ನಾವು…
ಬೆಂಗಳೂರು: 2024-25ನೇ ಸಾಲಿನ ಶಿಕ್ಷಕರ ಸಾಮಾನ್ಯ ವರ್ಗಾವಣೆ ಸಂಬಂಧ ಪೂರ್ವಭಾವಿ ಚಟುವಟಿಕೆಗಳ ಭಾಗವಾಗಿ ಡಿಸೆಂಬರ್ 2024ರ ಅಂತ್ಯಕ್ಕೆ ಶಿಕ್ಷಕರ ಅಂತಿಮ ವೇಯ್ಟೇಡ್ ಅಂಕಗಳನ್ನು ತಂತ್ರಾಂಶದಲ್ಲಿ ಪ್ರಕಟಿಸಲಾಗಿದೆ ಎಂಬುದಾಗಿ ಶಾಲಾ ಶಿಕ್ಷಣ ಇಲಾಖೆ ತಿಳಿಸಿದೆ. ಈ ಕುರಿತಂತೆ ಮಾಹಿತಿ ಬಿಡುಗಡೆ ಮಾಡಿದ್ದು, 2024-25ನೇ ಸಾಲಿನ ಶಿಕ್ಷಕರ ಸಾಮಾನ್ಯ ವರ್ಗಾವಣೆ ಸಂಬಂಧ, ಶಾಲಾ ಶಿಕ್ಷಣ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸರ್ಕಾರಿ ಪ್ರಾಥಮಿಕ / ಪ್ರೌಢಶಾಲಾ ಸಹಶಿಕ್ಷಕರ ಮತ್ತು ಮುಖ್ಯ ಶಿಕ್ಷಕರುಗಳ, ಡಿಸೆಂಬರ್ ತಿಂಗಳವರೆಗೂ ನವೀಕರಿಸಿದ ಶಿಕ್ಷಕರ ಸೇವಾ ವಿವರದ ಆಧಾರದ ಮೇಲೆ ಗಣನೆಗೆ ತೆಗೆದುಕೊಂಡು ಕರಡು ವೇಯ್‌ಡ್ ಅಂಕಗಳನ್ನು, ಇ.ಇ.ಡಿ.ಎಸ್. ತಂತ್ರಾಂಶದಲ್ಲಿನ ಶಿಕ್ಷಕರ ಲಾಗಿನ್‌ನಲ್ಲಿ ಹಾಗೂ ಇಲಾಖಾ ವೆಬ್‌ಸೈಟ್ ನಲ್ಲಿ ಉಲ್ಲೇಖ 3 ರಲ್ಲಿ ಪ್ರಕಟಿಸಿ, ಸೇವಾ ಮಾಹಿತಿಯ ಇಂದೀಕರಣಕ್ಕಾಗಿ ದಿನಾಂಕ : 20-03-2025 ರವರೆಗೆ ಕಾಲಾವಕಾಶವನ್ನು ನೀಡಲಾಗಿತ್ತು ಎಂದು ತಿಳಿಸಿದೆ. ಮುಂದುವರೆದು, ಉಲ್ಲೇಖ 4 ರಲ್ಲಿ ಇಇಡಿಎಸ್‌ನಲ್ಲಿ ಎಲ್ಲಾ ನೌಕರರ ಮಾಹಿತಿಯನ್ನು ಇಂದೀಕರಣ ಮಾಡಲು ದಿನಾಂಕ : 28-03-2025 ರವರೆಗೆ ಮತ್ತೊಮ್ಮೆ ಅವಕಾಶವನ್ನು…
ಬೆಂಗಳೂರು : ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆಯ ಅಬ್ಬರ ಮುಂದುವರೆದಿದ್ದು, ಮಂಗಳವಾರ ಮಳೆಗೆ 6 ಮಂದಿ ಬಲಿಯಾಗಿದ್ದಾರೆ. ಮುಂಗಾರು ಪೂರ್ವ ಮಳೆಗೆ ರಾಯಚೂರು ಜಿಲ್ಲೆಯಲ್ಲಿ ಇಬ್ಬರು, ಧಾರವಾಡ, ಬಳ್ಳಾರಿ ಹಾಗೂ ಕಲಬುರಗಿ ಜಿಲ್ಲೆಯಲ್ಲಿ ತಲಾ ಒಬ್ಬೊಬ್ಬರು ಸಿಡಿಲಿಗೆ ಬಲಿಯಾಗಿದ್ದಾರೆ. ರಾಮನಗರದ ಹೊರವಲಯದಲ್ಲಿ ಬೆಂಗಳೂರಿನ ಬಾಲಕನೊಬ್ಬ ಅರ್ಕಾವತಿ ನದಿಯಲ್ಲಿ ಕೊಚ್ಚಿಹೋಗಿದ್ದಾನೆ. ರಾಮನಗರದ ಹಳ್ಳಿಮಾಳ ಸಮೀಪ ಅರ್ಕಾವತಿ ನದಿ ಪಕ್ಕದಲ್ಲಿರುವ ದರ್ಗಾಗೆ ಬಂದಿದ್ದ ಬೆಂಗಳೂರಿನ ಲಕ್ಕಸಂದ್ರದ ಮೊಹಮ್ಮದ್ ಸೈಫ್ (9) ಎಂಬ ಬಾಲಕ ನೀರಿನಲ್ಲಿ ಆಟವಾಡುವಾಗ ಕಾಲುಜಾರಿ ಬಿದ್ದು ಕೊಚ್ಚಿ ಹೋಗಿದ್ದಾನೆ. ಕಲಬುರಗಿ ಜಿಲ್ಲೆ ಅಫಜಲಪುರ ತಾಲೂಕಿನ ಕರಜಗಿಯಲ್ಲಿ ಹೊಲದಲ್ಲಿ ಕೆಲಸ ಮಾಡುತ್ತಿದ್ದಾಗ ಸಿಡಿಲು ಬಡಿದು ರೈತ ನಬಿಲಾಲ ಚೌಧರಿ (70) ಎಂಬುವರು ಮೃತಪಟ್ಟಿದ್ದಾ. ರಾಯಚೂರು ಜಿಲ್ಲೆ ಅರಕೇರಾ ತಾಲೂಕಿನ ಭೋಗಿ ರಾಮನಗುಡ್ಡ ಗ್ರಾಮದಲ್ಲಿ ಜಮೀನಿನಲ್ಲಿ ಕುರಿ ಮೇಯಿಸುತ್ತಿದ್ದ ಹನುಮಗೌಡ ನಾಯಕ (16) ಎಂಬುವರು ಸಿಡಿಲು ಬಡಿದು ಮೃತಪಟ್ಟಿದ್ದಾರೆ. ದೇವದುರ್ಗ ತಾಲೂಕಿನ ಲಿಂಗದಹಳ್ಳಿಯಲ್ಲಿ ಸಿಡಿಲಿಗೆ ಯಲ್ಲಮ್ಮ (42) ಎಂಬುವರು ಮೃತಪಟ್ಟಿದ್ದಾರೆ. ಧಾರವಾಡ ಜಿಲ್ಲೆಯ ಕುಂದಗೋಳ…
ಬೆಂಗಳೂರು : ರಾಜ್ಯದಲ್ಲಿ ಮಳೆಯ ಆರ್ಭಟ ಮುಂದುವರೆದಿದ್ದು, ರಾಜ್ಯದಲ್ಲಿ ಇನ್ನೂ ಎರಡು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ಕರಾವಳಿಯ ಮೂರು ಜಿಲ್ಲೆಗಳು ಸೇರಿ ಒಟ್ಟು 7 ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.ಮೇ 21, 22ಕ್ಕೆ ಮೂರು ಜಿಲ್ಲೆಗಳಿಗೆ ‘ರೆಡ್ ಅಲರ್ಟ್’, ಚಿಕ್ಕಮಗಳೂರು, ಶಿವಮೊಗ್ಗಕ್ಕೆ ಮುಂದಿನ ಎರಡು ದಿನಕ್ಕೆ ಹಾಗೂ ಹಾಸನ ಮತ್ತು ಕೊಡಗು ಜಿಲ್ಲೆಗಳಿಗೆ ಮುಂದಿನ 24 ಗಂಟೆಗೆ ‘ರೆಡ್ ಅಲರ್ಟ್’ ಎಚ್ಚರಿಕೆ ನೀಡಲಾಗಿದೆ. ತುಮಕೂರು, ರಾಮನಗರ, ಕೋಲಾರ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಬೆಂಗಳೂರುನಗರ, ಬೆಂಗಳೂರು ಗ್ರಾಮಾಂತರ, ಬೀದರ್, ವಿಜಯಪುರ, ಕೊಪ್ಪಳ, ಕಲಬುರಗಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಎಚ್ಚರಿಕೆ ನೀಡಲಾಗಿದೆ. ಬೆಳಗಾವಿ, ಧಾರವಾಡ, ಗದಗ, ಹಾವೇರಿ, ದಾವಣಗೆರೆ, ಮೈಸೂರು ಜಿಲ್ಲೆಗಳಿಗೆ ಮುಂದಿನ ಎರಡು ದಿನಕ್ಕೆ ‘ಆರೆಂಜ್ ಅಲರ್ಟ್’ ನೀಡಲಾಗಿದೆ.
ಬೆಂಗಳೂರು: ಆಸ್ತಿ ವಿವರಗಳ ವಹಿಯಲ್ಲಿ ಮಾಲೀಕನ ಹೆಸರು, ಸೇರ್ಪಡೆ, ಬದಲಾವಣೆ ಶುಲ್ಕವನ್ನು ನಮೂನೆ 9 ಮತ್ತು 11-ಎ ವಿತರಿಸಿದ ಒಂದು ವರ್ಷದಲ್ಲಿ ಗರಿಷ್ಠ ನಾಲ್ಕು ಕಂತುಗಳಲ್ಲಿ ಗ್ರಾಮ ಪಂಚಾಯ್ತಿ ಸಂಗ್ರಹಿಸಲು ಅವಕಾಶ ನೀಡಿ ಸರ್ಕಾರ ಆದೇಶಿಸಿದೆ. ಈ ಕುರಿತು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸರ್ಕಾರದ ಉಪ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದು, ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿನ ಆಸ್ತಿಗಳಿಗೆ ಕರ್ನಾಟಕ ಭೂ ಕಂದಾಯ ಅಧಿನಿಯಮ, 1964 ರ ಪುಕರಣ 94-(ಸಿ), 94-(ಸಿಸಿ), 94-(ಡಿ) ರಡಿಯಲ್ಲಿ ನಿವೇಶನ ಮತ್ತು ಮನೆ ನೀಡುವ ಆಸ್ತಿಗಳಿಗೆ ಇ-ಸ್ವತ್ತು ತಂತ್ರಾಂಶದ ಮೂಲಕ ನಮೂನೆ-9 ಮತ್ತು 11-ಎ ನೀಡಲು ಕೈಗೊಳ್ಳಬೇಕಾದ ಪುಕ್ರಿಯೆಗಳ ಬಗ್ಗೆ ಸರ್ಕಾರದಿಂದ ಆದೇಶ ಹೊರಡಿಸಲಾಗಿರುತ್ತದೆ ಎಂದಿದ್ದಾರೆ. ಕರ್ನಾಟಕ ಭೂ ಕಂದಾಯ ಅಧಿನಿಯಮ, 1964 ರ ಪುಕರಣ 94-(ಡಿ) ರಡಿಯಲ್ಲಿ ಕಂದಾಯ ಇಲಾಖೆಯಿಂದ ವಿತರಣೆ ಮಾಡಲಾದ ಹಕ್ಕುಪತ್ರಗಳಿಗೆ ಸಂಬಂಧಿಸಿದಂತೆ ಗ್ರಾಮ ಪಂಚಾಯಿತಿಗಳಲ್ಲಿ ಉಂಟಾದ ಗೊಂದಲಗಳಿಗೆ ಸಂಬಂಧಿಸಿದಂತೆ ಸೂಚನೆಗಳನ್ನು ನೀಡಲಾಗಿರುತ್ತದೆ ಎಂದು ತಿಳಿಸಿದ್ದಾರೆ. ದಿನಾಂಕ: 17.05.2025 ರಂದು ಮಾನ್ಯ…
ಬೆಂಗಳೂರು: ರಾಜ್ಯದ ಎಲ್ಲ ಸರ್ಕಾರಿ ಮತ್ತು ಅನುದಾನಿತ ಪದವಿ, ಕಾನೂನು ಹಾಗೂ ಚಿತ್ರಕಲಾ ಕಾಲೇಜುಗಳಲ್ಲಿನ 2025-26ನೇ ಸಾಲಿನ ಪ್ರವೇಶ ಕೋರ್ಸುಗಳ ಶುಲ್ಕವನ್ನು ಶೇ.5 ಹೆಚ್ಚಳ ಮಾಡಿ ಕಾಲೇಜು ಶಿಕ್ಷಣ ಇಲಾಖೆ ಆದೇಶಿಸಿದೆ. ಹೌದು, ಕಾಲೇಜು ಶಿಕ್ಷಣ ಇಲಾಖೆಯು ಸರ್ಕಾರಿ, ಅನುದಾನಿತ ಪದವಿ ಕಾಲೇಜು ಶುಲ್ಕ ಶೇ.5 ಹೆಚ್ಚಳ ಮಾಡಿದ್ದು, ಇದರಿಂದ ಬಿಎ, ಬಿಎಸ್ಸಿ, ಬಿಕಾಂ, ಬಿಸಿಎ, ಬಿಬಿಎಂ, ಕಾನೂನು, ಚಿತ್ರಕಲೆ ಸೇರಿದಂತೆ ಎಲ್ಲ ರೀತಿ ಪದವಿ ಕೋರ್ಸುಗಳ ಶುಲ್ಕ ಶೇ.5ರಷ್ಟು ಹೆಚ್ಚಾಗಲಿದೆ. ಇನ್ನೂ ವಿಶ್ವವಿದ್ಯಾಲಯಗಳಿಗೆ ಸಂಬಂಧಿಸಿದ ಶುಲ್ಕವನ್ನು ಪ್ರತ್ಯೇಕವಾಗಿ ಪಡೆಯಲು ಅವಕಾಶ ನೀಡಲಾಗಿದೆ. ಅರ್ಜಿ ಶುಲ್ಕ, ಪ್ರವೇಶ ಶುಲ್ಕ, ಬೋಧನಾ ಶುಲ್ಕ ಹೀಗೆ 22 ರೀತಿಯ ಶುಲ್ಕವನ್ನು ವಿದ್ಯಾರ್ಥಿಗಳು ಪಾವತಿಸಬೇಕಾಗಿದೆ. ಸರ್ಕಾರಿ ಹಾಗೂ ಅನುದಾನಿತ ಕಾಲೇಜುಗಳಲ್ಲಿ ಪ್ರತಿ ವರ್ಷ ಶೇ.5ರಷ್ಟು ಶುಲ್ಕ ಹೆಚ್ಚಿಸಲು ನಿಯಮ ರೂಪಿಸಲಾಗಿದೆ.
ಮೈಸೂರು : ಇನ್ಮುಂದೆ ಚುನಾವಣೆಗೆ ಸ್ಪರ್ಧಿಸಲ್ಲ. ಸಹಕಾರಿ ಕ್ಷೇತ್ರ ಹಾಗೂ ಸಕ್ರಿಯ ರಾಜಕಾರಣದಲ್ಲಿರುವೆ ಎಂದು ಸಚಿವ ಕೆ.ಎನ್. ರಾಜಣ್ಣ ಹೇಳಿದ್ದಾರೆ.
ಬೆಂಗಳೂರು : ಬೆಂಗಳೂರಿನಲ್ಲಿ ಮಳೆಯ ಅಬ್ಬರ ಮುಂದುವರೆದಿದ್ದು, ಹಲವು ರಸ್ತೆಗಳು ಜಲಾವೃತಗೊಂಡಿದ್ದು, ಸಂಚಾರ ಅಸ್ತವ್ಯಸ್ತವಾಗಿದೆ. ಈ ಹಿನ್ನೆಲೆ ಪೊಲೀಸರು ಬದಲಿ ಮಾರ್ಗ ಬಳಸುವಂತೆ ಮನವಿ ಮಾಡಿದ್ದಾರೆ. ಮಡಿವಾಳ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಳೆ ಬೀಳುತ್ತಿರುವುದರಿಂದ ರೂಪೇನ ಅಗ್ರಹಾರದ ಬಳಿ ವಾಟರ್ ಲಾಗಿಂಗ್ ಆಗಿದ್ದು ಹೊಸೂರು ಮುಖ್ಯ ರಸ್ತೆ ಮೂಲಕ ನಗರದ ಒಳ ಭಾಗಕ್ಕೆ ಬರುವ ಸಂಚಾರ ನಿಧಾನಗತಿಯಲ್ಲಿ ಸಾಗುತ್ತಿದೆ. ಆದ್ದರಿಂದ ವಾಹನ ಸವಾರರು ಬದಲಿ ರಸ್ತೆಗಳನ್ನು ಬಳಸುವುದು ಮತ್ತು ಸಹಕರಿಸುವುದು. ಮಡಿವಾಳ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ಅಯ್ಯಪ್ಪ ಅಂಡರ್ ಪಾಸ್ ನಲ್ಲಿ ಮಳೆ ಬಂದಿದ್ದರಿಂದ ವಾಟರ್ ಲಾಗಿಂಗ್ ಆಗಿದ್ದು, ಹೊಸೂರು ಮುಖ್ಯರಸ್ತೆಯಲ್ಲಿ ನಗರದಿಂದ ಹೊರಭಾಗಕ್ಕೆ ಹೋಗುವ ಮತ್ತು ನಗರದ ಒಳಭಾಗಕ್ಕೆ ಬರುವ ಸಂಚಾರ ನಿಧಾನಗತಿಯಲ್ಲಿ ಸಾಗುತ್ತಿದ್ದು ವಾಹನ ಸವಾರರು ಬದಲಿ ರಸ್ತೆ ಬಳಸುವುದು. ಅಧಿಕ ಮಳೆ ಬಂದು ರಸ್ತೆಯಲ್ಲಿ ನೀರು ನಿಂತ ಸಂದರ್ಭಲ್ಲಿ ಅಗತ್ಯವಾಗಿ ತೆಗೆದುಕೊಳ್ಳಬೇಕಾದ ಕ್ರಮಗಳು 1)ಹೊಸೂರು ಮುಖ್ಯರಸ್ತೆ:- ಮಡಿವಾಳ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ರೂಪೇನ…