Subscribe to Updates
Get the latest creative news from FooBar about art, design and business.
Author: kannadanewsnow57
ಬೆಂಗಳೂರು : ಬೆಂಗಳೂರು ಜಲಮಂಡಳಿ ನೈರ್ಮಲ್ಯೀಕರಣ ಕಾರ್ಮಿಕರಿಗೆ ಅನ್ನಪೂರ್ಣ ಯೋಜನೆಯಡಿ ಸ್ಮಾರ್ಟ್‌ಕಾರ್ಡ್ ವಿತರಣೆ ಮಾಡಲಾಗಿದೆ. ಈ ಮೂಲಕ 700+ ನೈರ್ಮಲ್ಯೀಕರಣ ಕಾರ್ಮಿಕರಿಗೆ ಉಪಹಾರಕ್ಕಾಗಿ ಪ್ರತಿದಿನ ₹50 ರಂತೆ ಮಾಸಿಕ ₹1,500ನಷ್ಟು ಹಣವು ಸ್ಮಾರ್ಟ್‌ಕಾರ್ಡ್ ಮೂಲಕ ನೇರ ವರ್ಗಾವಣೆಯಾಗಲಿದೆ. ಕಾರ್ಮಿಕರ ಕ್ಷೇಮಕ್ಕೆ ಪ್ರಥಮ ಆದ್ಯತೆ ನೀಡಿ ಜಲಮಂಡಳಿ ಸ್ವಚ್ಛತಾ ಕಾರ್ಮಿಕರಿಗೆ ಅನ್ನಪೂರ್ಣ ಯೋಜನೆ ಜಾರಿಗೊಳಿಸಲಾಗಿದೆ. ಬೆಂಗಳೂರು ಜಲಮಂಡಳಿ ನೈರ್ಮಲೀಕರಣ ಕಾರ್ಮಿಕರಿಗೆ ಅನ್ನಪೂರ್ಣ ಯೋಜನೆಯಡಿ ಎಕ್ಸಿಸ್ ಬ್ಯಾಂಕ್‌ನ ಸಹಯೋಗದೊಂದಿಗೆ ಸ್ಮಾರ್ಟ್ ಕಾರ್ಡ್‌ಗಳ ವಿತರಿಸಲಾಗುವುದು. ಈ ಯೋಜನೆಗೆ ಅಂದಾಜು ಮಾಸಿಕ ₹10.50 ಲಕ್ಷ ಮತ್ತು ವಾರ್ಷಿಕ ₹1.26 ಕೋಟಿ ವೆಚ್ಚವಾಗಲಿದ್ದು, ಇದು ದೇಶದಲ್ಲಿಯೇ ಇಂತಹ ತಂತ್ರಜ್ಞಾನ ಆಧಾರಿತ ನೇರ ಹಣ ವರ್ಗಾವಣೆ ಮಾಡುವ ಮೊದಲ ಯೋಜನೆಯಾಗಿದೆ. https://twitter.com/KarnatakaVarthe/status/1962862184373055798
ನವದೆಹಲಿ : ಧಾರ್ಮಿಕ ಕಿರುಕುಳದಿಂದ ತಪ್ಪಿಸಿಕೊಳ್ಳಲು ಡಿಸೆಂಬರ್ 31, 2024 ರವರೆಗೆ ಭಾರತಕ್ಕೆ ಬಂದ ಅಫ್ಘಾನಿಸ್ತಾನ, ಬಾಂಗ್ಲಾದೇಶ ಮತ್ತು ಪಾಕಿಸ್ತಾನದ ಅಲ್ಪಸಂಖ್ಯಾತ ಸಮುದಾಯಗಳ ಸದಸ್ಯರು ಹಿಂದೂಗಳು, ಸಿಖ್ಖರು, ಬೌದ್ಧರು, ಜೈನರು, ಪಾರ್ಸಿಗಳು ಮತ್ತು ಕ್ರಿಶ್ಚಿಯನ್ನರು ಪಾಸ್‌ಪೋರ್ಟ್ ಅಥವಾ ಇತರ ಪ್ರಯಾಣ ದಾಖಲೆಗಳಿಲ್ಲದೆ ದೇಶದಲ್ಲಿ ಉಳಿಯಲು ಅವಕಾಶ ನೀಡಲಾಗುವುದು ಎಂದು ಕೇಂದ್ರ ಗೃಹ ಸಚಿವಾಲಯ ಮಂಗಳವಾರ ಆದೇಶದಲ್ಲಿ ತಿಳಿಸಿದೆ. ಇತ್ತೀಚೆಗೆ ಅಂಗೀಕರಿಸಲಾದ ವಲಸೆ ಮತ್ತು ವಿದೇಶಿಯರ ಕಾಯ್ದೆ, 2025 ಕ್ಕೆ ಸಂಬಂಧಿಸಿದಂತೆ ಸಚಿವಾಲಯ ಹೊರಡಿಸಿದ ಅನೇಕ ಆದೇಶಗಳಲ್ಲಿ ಈ ಆದೇಶವೂ ಒಂದು, ಇದು ಸೋಮವಾರದಿಂದ ಜಾರಿಗೆ ಬಂದಿದೆ. ಕಳೆದ ವರ್ಷ ಜಾರಿಗೆ ಬಂದ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಡಿಸೆಂಬರ್ 31, 2014 ರಂದು ಅಥವಾ ಅದಕ್ಕೂ ಮೊದಲು ಭಾರತಕ್ಕೆ ಪೌರತ್ವ ಪಡೆಯಲು ಅರ್ಹತೆಗಾಗಿ ಮಾತ್ರ ಅನ್ವಯಿಸುವುದರಿಂದ ಈ ಮೂರು ದೇಶಗಳ ಅಲ್ಪಸಂಖ್ಯಾತರಿಗೆ ಇದು ಪರಿಹಾರವಾಗಿದೆ. ಖಂಡಿತವಾಗಿಯೂ, ಇತ್ತೀಚಿನ ವಲಸೆ ಮತ್ತು ವಿದೇಶಿಯರ ಕಾಯ್ದೆಗೆ ಸಂಬಂಧಿಸಿದ ಆದೇಶವು ಡಿಸೆಂಬರ್ 2024 ರವರೆಗೆ ಬಂದವರಿಗೆ…
ಬೆಂಗಳೂರು: ಆಪ್ಟಿಕಲ್ ಫೈಬರ್ ಕೇಬಲ್ ಬಳಸಿ ಡಿಜಿಟಲ್ ಸೇವೆಗಳು ಮತ್ತು ಆರ್ಥಿಕ ಅವಕಾಶಗಳನ್ನು ಗ್ರಾಮೀಣ ಪ್ರದೇಶಗಳಿಗೆ ತಲುಪಿಸುವ ದೂರಸಂಪರ್ಕ ಆಧಾರಿತ ‘ಸಮೃದ್ಧ ಗ್ರಾಮ ಪಂಚಾಯತ್’ ಯೋಜನೆಯನ್ನು ಜಾರಿಗೊಳಿಸಲು ರಾಜ್ಯದಲ್ಲಿ 205 ಗ್ರಾಮ ಪಂಚಾಯತಿಗಳನ್ನು ಆಯ್ಕೆ ಮಾಡಲಾಗಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. ಗ್ರಾಮೀಣ ಪ್ರದೇಶಗಳಲ್ಲಿ ಡಿಜಿಟಲ್ ಪರಿವರ್ತನೆಗೆ ಪ್ರೇರಕ ಶಕ್ತಿಯಾಗಿ ಕಾರ್ಯನಿರ್ವಹಿಸುವ ಮೂಲಕ, ಸಾಮಾಜಿಕ ಮತ್ತು ಆರ್ಥಿಕ ಅಭಿವೃದ್ಧಿಗೆ “ಸಮೃದ್ಧ ಗ್ರಾಮ ಪಂಚಾಯತ್” ಯೋಜನೆಯು ಉತ್ತೇಜನ ನೀಡುತ್ತದೆ. ಗ್ರಾಮಗಳ ಸಾಮಾಜಿಕ, ಆರ್ಥಿಕ ಅಭಿವೃದ್ಧಿಗೆ ಪೂರಕವಾಗಿ ಗ್ರಾಮೀಣ ಸಮುದಾಯಗಳು, ಸಾರ್ವಜನಿಕ ಹಾಗೂ ಖಾಸಗಿ ಸಂಸ್ಥೆಗಳು ಮತ್ತು ಗ್ರಾಮ ಮಟ್ಟದ ಉದ್ಯಮಿಗಳು/ಸಂಸ್ಥೆಗಳಿಗೆ ಹೆಚ್ಚಿನ ವೇಗದ ಬ್ರಾಡ್‌ಬ್ಯಾಂಡ್ (FTTH) ಸಂಪರ್ಕದ ಪ್ರಯೋಜನಗಳ ಬಗ್ಗೆ ಅರಿವು ಮೂಡಿಸಲು ಗ್ರಾಮಗಳಲ್ಲಿ ಫೈಬರ್ ಸಂಪರ್ಕದ ಸಮರ್ಥ ಬಳಕೆಗಾಗಿ ತಾಂತ್ರಿಕ ತಜ್ಞರು, ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಪಂಚಾಯತ್ ರಾಜ್ ಸಂಸ್ಥೆಗಳ ಸದಸ್ಯರನ್ನು ಒಳಗೊಂಡ ಗ್ರಾಮ ಪಂಚಾಯತ್ ಡಿಜಿಟಲ್ ಅಕ್ಸೆಸ್ ಸಮಿತಿ (DAC) ಗಳನ್ನು ರಚಿಸಲಾಗುವುದು ಎಂದು ಮಾಹಿತಿ ನೀಡಿದ್ದಾರೆ. ಗ್ರಾಮ…
ಮೈಸೂರು : ಸೆಪ್ಟೆಂಬರ್ 22 ರಂದು ನಡೆಯಲಿರುವ ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಗೆ ಮೈಸೂರು ಜಿಲ್ಲಾಡಳಿತದಿಂದ ಅಧಿಕೃತವಾಗಿ ಆಹ್ವಾನಿಸಲಾಗಿದೆ. ಸೆಪ್ಟೆಂಬರ್ 22 ರಂದು ನಡೆಯಲಿರುವ ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನಾ ಕಾರ್ಯಕ್ರಮಕ್ಕೆ ಬಾನು ಮುಷ್ತಾಕ್ ಅವರಿಗೆ ಮೈಸೂರು ಜಿಲ್ಲಾಡಳಿತ ಅಧಿಕೃತ ಆಹ್ವಾನ ನೀಡಿದೆ. ಮೈಸೂರು ದಸರಾ ಉದ್ಘಾಟನಾ ಕಾರ್ಯಕ್ರಮಕ್ಕೆ ಮೈಸೂರು ಜಿಲ್ಲಾಧಿಕಾರಿ ಲಕ್ಷ್ಮೀಕಾಂತ್ ರೆಡ್ಡಿ ಅವರು ಹಾಸನದಲ್ಲಿರುವ ಬಾನು ಮುಷ್ತಾಕ್ ಅವರ ಮನೆಗೆ ತೆರಳಿ ಅಧಿಕೃತವಾಗಿ ಆಹ್ವಾನ ನೀಡಿದ್ದಾರೆ.
ಮೈಸೂರು : ಸೆಪ್ಟೆಂಬರ್ 22 ರಂದು ನಡೆಯಲಿರುವ ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಗೆ ಮೈಸೂರು ಜಿಲ್ಲಾಡಳಿತದಿಂದ ಅಧಿಕೃತವಾಗಿ ಆಹ್ವಾನಿಸಲಾಗಿದೆ. ಸೆಪ್ಟೆಂಬರ್ 22 ರಂದು ನಡೆಯಲಿರುವ ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನಾ ಕಾರ್ಯಕ್ರಮಕ್ಕೆ ಬಾನು ಮುಷ್ತಾಕ್ ಅವರಿಗೆ ಮೈಸೂರು ಜಿಲ್ಲಾಡಳಿತ ಅಧಿಕೃತ ಆಹ್ವಾನ ನೀಡಿದೆ. ಮೈಸೂರು ದಸರಾ ಉದ್ಘಾಟನಾ ಕಾರ್ಯಕ್ರಮಕ್ಕೆ ಮೈಸೂರು ಜಿಲ್ಲಾಧಿಕಾರಿ ಲಕ್ಷ್ಮೀಕಾಂತ್ ರೆಡ್ಡಿ ಅವರು ಹಾಸನದಲ್ಲಿರುವ ಬಾನು ಮುಷ್ತಾಕ್ ಅವರ ಮನೆಗೆ ತೆರಳಿ ಅಧಿಕೃತವಾಗಿ ಆಹ್ವಾನ ನೀಡಿದ್ದಾರೆ.
ನವದೆಹಲಿ : ಷೇರುಪೇಟೆಯಲ್ಲಿ ಸೆನ್ಸೆಕ್ಸ್ 410 ಅಂಕ ಏರಿಕೆಯಾಗಿದ್ದು, ನಿಫ್ಟಿ 24,700 ರ ಗಡಿ ದಾಟಿದೆ. ಇಂದು ಸೆನ್ಸೆಕ್ಸ್ 410 ಅಂಕಗಳ ಏರಿಕೆಯಾಗಿದ್ದು,, ನಿಫ್ಟಿ 24,700 ಕ್ಕಿಂತ ಹೆಚ್ಚಾಗಿದೆ, ಟಾಟಾ ಸ್ಟೀಲ್ 6% ಜಿಗಿತ ಕಂಡಿದೆ. ನಿಫ್ಟಿ ಸೂಚ್ಯಂಕವು 100 ಕ್ಕೂ ಹೆಚ್ಚು ಅಂಕಗಳ ಏರಿಕೆಯೊಂದಿಗೆ ವಹಿವಾಟು ನಡೆಸುತ್ತಿದೆ, 50-ಷೇರುಗಳ ಸೂಚ್ಯಂಕವು 24,700 ಅಂಕಗಳತ್ತ ಏರುತ್ತಿದೆ. ಸೆನ್ಸೆಕ್ಸ್ ಸೂಚ್ಯಂಕವು 410 ಪಾಯಿಂಟ್ಗಳ ಏರಿಕೆಯಾಗಿದೆ.
ಮಂಗಳೂರು : ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ ನಡೆದಿದ್ದು, ಅಪ್ರಾಪ್ತ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿರುವ ಘಟನೆ ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ನಡೆದಿದೆ. ಇನ್ ಸ್ಟಾಗ್ರಾಂನಲ್ಲಿ ಬಾಲಕಿಯನ್ನು ಪರಿಚಯ ಮಾಡಿಕೊಂಡ ಓರ್ವ ಆರೋಪಿ ಬಾಲಕಿಯನ್ನು ನಿರ್ಜನ ಪ್ರದೇಶಕ್ಕೆ ಕರೆದುಕೊಂಡು ಹೋಗಿ ಒಬ್ಬನಿಂದ ಅತ್ಯಾಚಾರ ನಡೆಸಲಾಗಿದೆ. ಅತ್ಯಾಚಾರದ ದೃಶ್ಯವನ್ನು ಮತ್ತೊಬ್ಬ ಆರೋಪಿ ವಿಡಿಯೋ ಮಾಡಿದ್ದ. ನಂತರ ಬಾಲಕಿಯನ್ನು ಮತ್ತೋರ್ವ ಆರೋಪಿಯೂ ಅತ್ಯಾಚಾರವೆಸಗಿದ್ದಾನೆ. ಬಳಿಕ ಬಾಲಕಿ ಮೇಲೆ ದುಷ್ಕರ್ಮಿಗಳು ಅತ್ಯಾಚಾರವೆಸಗಿ ವಿಡಿಯೋ ರೆಕಾರ್ಡ್ ಮಾಡಿದ್ದಾರೆ. ಅತ್ಯಾಚಾರದ ವಿಡಿಯೋ ಸ್ನೇಹಿತರಿಗೆ ದುಷ್ಕರ್ಮಿಗಳು ಶೇರ್ ಮಾಡಿದ್ದಾರೆ. ಅತ್ಯಾಚಾರದ ವಿಡಿಯೋವನ್ನು ಆರೋಪಿಗಳ ಸ್ನೇಹಿತರು ವೈರಲ್ ಮಾಡಿದ್ದಾರೆ. ಗ್ಯಾಂಗ್ ರೇಪ್ ಸಂಬಂಧ 8 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಜೂನ್ ನಲ್ಲಿ ಈ ಪ್ರಕರಣ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಬಜ್ಪೆ ಪೊಲೀಸ್ ಠಾಣೆಗೆ ಸಂತ್ರಸ್ತ ಬಾಲಕಿ ದೂರು ನೀಡಿದ್ದಾಳೆ.
ಭಾಗ್ಯಲಕ್ಷ್ಮೀ ಯೋಜನೆಯಡಿ 2006-07ನೇ ಸಾಲಿನಲ್ಲಿ ನೊಂದಣಿಯಾಗಿ 18 ವರ್ಷ ಪೂರ್ಣಗೊಂಡ ಫಲಾನುಭವಿಗಳು 2024-25ನೇ ಸಾಲಿನ ಪರಿಪಕ್ವ ಮೊತ್ತ ಪಡೆಯಲು ಅರ್ಹರಾಗಿರುತ್ತಾರೆ. ಚಿತ್ರದುರ್ಗ ಶಿಶು ಅಭಿವೃದ್ಧಿ ಯೋಜನೆ ವ್ಯಾಪ್ತಿಯ ಅರ್ಹ ಫಲಾನುಭವಿಗಳು ಎಲ್.ಐ.ಸಿ ಭಾಗ್ಯಲಕ್ಷ್ಮೀ ಫಾರಂ ಭರ್ತಿ ಮಾಡಿ, ಫಾರಂನೊಂದಿಗೆ, ಮೂಲ ಬಾಂಡ್, ಮಗುವಿನ ಜನನ ಪ್ರಮಾಣ ಪತ್ರ, ಎಸ್.ಎಸ್.ಎಲ್.ಸಿ ಮಾಕ್ರ್ಸ್ ಕಾರ್ಡ, ಶಾಲಾ ಧೃಡೀಕರಣ, ಮಗುವಿನ ಬ್ಯಾಂಕ್ ಖಾತೆ, ಮಗು,ತಂದೆ ಮತ್ತು ತಾಯಿ ಆಧಾರ್, ಅಪರೇಷನ್ ಕಾರ್ಡ್, ಚುಚ್ಚುಮದ್ದು ಕಾರ್ಡ್, ಅಂಗನವಾಡಿ ಕಾರ್ಯಕರ್ತೆ ಹಾಗೂ ಪೊಷಕರ ದೃಢೀಕರಣ ಲಗತ್ತಿಸಿ ಚಿತ್ರದುರ್ಗ ನಗರದ ಒನಕೇ ಓಬವ್ವ ಕ್ರೀಡಾಂಗಣದ ಹತ್ತಿರದ ಬಾಲ ಭವನ ಆವರಣದ ಕಚೇರಿಯಲ್ಲಿ ನೊಂದಾಯಿಸಿಕೊಳ್ಳುವಂತೆ ಪ್ರಕಟಣೆ ತಿಳಿಸಿದೆ.
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಭಾರತೀಯ ಸೇನೆ ಹಾಗೂ ಇತರೆ ಯೂನಿಫಾರ್ಮ ಸೇವೆಗಳಿಗೆ ಸೇರಬಯಸುವ ಹಿಂದುಳಿದ ವರ್ಗಗಳ ಅರ್ಹ ಅಭ್ಯರ್ಥಿಗಳಿಗೆ 2025-26 ನೇ ಸಾಲಿನಲ್ಲಿ ಆಯ್ಕೆಯ ಪೂರ್ವ ಸಿದ್ದತೆ ಬಗ್ಗೆ ವೃತ್ತಿ ಮಾರ್ಗದರ್ಶನ ಹಾಗೂ ತರಬೇತಿಯನ್ನು ಉಚಿತವಾಗಿ ನೀಡುತ್ತಿದ್ದು, ತರಬೇತಿಗೆ 3ನೇ ಬ್ಯಾಚ್ ಪ್ರಾರಂಭಿಸಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಹಿಂದುಳಿದ ವರ್ಗಗಳ ಪ್ರವರ್ಗ-1, 2(ಎ), 3(ಎ) ಹಾಗೂ 3(ಬಿ)ಗಳ ಅರ್ಹ ಅಭ್ಯರ್ಥಿಗಳು (ಬಾಲಕರಿಗೆ ಮಾತ್ರ) ಅರ್ಜಿ ಸಲ್ಲಿಸಬಹುದಾಗಿದೆ. ಅರ್ಹತೆ ಅಭ್ಯರ್ಥಿಯ ಮತ್ತು ಕುಟುಂಬದ ಒಟ್ಟು ವಾರ್ಷಿಕ ಆದಾಯ ಮಿತಿಯು ಪ್ರವರ್ಗ-1ರ ರೂ.2.50 ಲಕ್ಷ ಹಾಗೂ ಪ್ರವರ್ಗ-2(ಎ), 3(ಎ) ಮತ್ತು 3(ಬಿ)ರ ರೂ.1 ಲಕ್ಷ ಇರಬೇಕು. ಅಭ್ಯರ್ಥಿಯು 10ನೇ ತರಗತಿಯಲ್ಲಿ ಉತ್ತಿರ್ಣವಾಗಿದ್ದು, ಪ್ರತಿ ವಿಷಯದಲ್ಲಿ ಕನಿಷ್ಠ 33 ಅಂಕ ಮತ್ತು ಸರಾಸರಿ ಶೇ.45 ರಷ್ಟು ಅಂಕಗಳನ್ನು ಪಡೆದಿರಬೇಕು. ಗ್ರೇಡಿಂಗ್ ಸಿಸ್ಟಮ್ ಇದ್ದಲ್ಲಿ ಸಮಾನವಾದ ಗ್ರೇಡ್ ಪಡೆದಿರಬೇಕು. ಅಭ್ಯರ್ಥಿಯ ವಯೋಮಿತಿ 17 ರಿಂದ 20 ವರ್ಷದೊಳಗಿರಬೇಕು. ಸೆಪ್ಟಂಬರ್-01 2025ಕ್ಕೆ ಅನ್ವಯಿಸುವಂತೆ ಅಭ್ಯರ್ಥಿಯ ವಯಸ್ಸನ್ನು…
ಅಲಿಗಢ್ : ವರದಕ್ಷಿಣೆ ಕಿರುಕುಳದಿಂದ ಮಹಿಳೆಯೊಬ್ಬರು ಮನೆಯ ಮೇಲಿಂದ ಜಿಗಿದಿದ್ದು, ಈ ವೇಳೆ ಮಹಿಳೆ ಮೇಲೆ ಅತ್ತೆ ಮಾವ ಹಲ್ಲೆ ನಡೆಸಿರುವ ಘಟನೆ ನಡೆದಿದ್ದು, ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಉತ್ತರ ಪ್ರದೇಶದ ಅಲಿಗಢ ಜಿಲ್ಲೆಯಲ್ಲಿ ಎರಡು ಅಂತಸ್ತಿನ ಮನೆಯ ಮೇಲ್ಛಾವಣಿಯಿಂದ ಹಾರಿ ಬಿದ್ದು ಗಾಯಗೊಂಡ ಮಹಿಳೆಯನ್ನು ಆಕೆಯ ಅತ್ತೆ-ಮಾವ ಥಳಿಸುತ್ತಿರುವುದನ್ನು ತೋರಿಸುವ ಆತಂಕಕಾರಿ ವಿಡಿಯೋವೊಂದು ವೈರಲ್ ಆಗಿದೆ. ವರದಿಗಳ ಪ್ರಕಾರ, ಅಲಿಗಢ ಜಿಲ್ಲೆಯ ಇಗ್ಲಾಸ್ ತೆಹಸಿಲ್ ವ್ಯಾಪ್ತಿಯ ದಮ್ಕೌಲಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಗಂಭೀರವಾಗಿ ಗಾಯಗೊಂಡ ಮಹಿಳೆಯನ್ನು ಚಿಕಿತ್ಸೆಗಾಗಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಕ್ಯಾಮೆರಾದಲ್ಲಿ ಸೆರೆಯಾದ ಈ ಘಟನೆಯಲ್ಲಿ, ಒಬ್ಬ ಮಹಿಳೆ ಛಾವಣಿಯ ಅಂಚಿನಲ್ಲಿ ನಿಂತಿರುವುದನ್ನು ತೋರಿಸಲಾಗಿದೆ, ಆಕೆಯ ಅತ್ತೆ-ಮಾವಂದಿರು ಪದೇ ಪದೇ ಅವಳನ್ನು ಕೆಳಗೆ ಹಾರುವಂತೆ ಒತ್ತಾಯಿಸುತ್ತಿದ್ದಾರೆ. ಅರ್ಚನಾ ಎಂದು ಗುರುತಿಸಲಾದ ಮಹಿಳೆ, ವರದಕ್ಷಿಣೆಗಾಗಿ ತನ್ನ ಅತ್ತೆ-ಮಾವಂದಿರಿಂದ ಕಿರುಕುಳ ಅನುಭವಿಸುತ್ತಿದ್ದಳು ಎಂದು ವರದಿಯಾಗಿದೆ, ಅಪ್ರಾಪ್ತ ಮಕ್ಕಳ ಸಮ್ಮುಖದಲ್ಲಿ ಛಾವಣಿಯಿಂದ ಮಹಿಳೆ ಹಾರಿದಳು. ಮಹಿಳೆ ನೆಲಕ್ಕೆ ಬಿದ್ದ…