Author: kannadanewsnow57

ನವದೆಹಲಿ: ದೆಹಲಿ ಮದ್ಯ ನೀತಿ ಪ್ರಕರಣಕ್ಕೆ ಸಂಬಂಧಿಸಿದ ಮನಿ ಲಾಂಡರಿಂಗ್ ತನಿಖೆಯಲ್ಲಿ ಜಾರಿ ನಿರ್ದೇಶನಾಲಯ (ಇಡಿ) ತನ್ನ ಬಂಧನದ ಕಾನೂನುಬದ್ಧತೆಯನ್ನು ಪ್ರಶ್ನಿಸಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸಲ್ಲಿಸಿದ ಮನವಿಯ ಬಗ್ಗೆ ಸುಪ್ರೀಂ ಕೋರ್ಟ್ ಶುಕ್ರವಾರ ತೀರ್ಪು ನೀಡಲು ಸಜ್ಜಾಗಿದೆ. ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ ಪ್ರತಿನಿಧಿಸುವ ಕೇಜ್ರಿವಾಲ್ ಅವರ ಮನವಿಯ ಮೇಲಿನ ತೀರ್ಪನ್ನು ಸುಪ್ರೀಂ ಕೋರ್ಟ್ ಮೇ 17 ರಂದು ಕಾಯ್ದಿರಿಸಿದೆ. ಫೆಡರಲ್ ಏಜೆನ್ಸಿ ಕಳುಹಿಸಿದ ಎಲ್ಲಾ ಒಂಬತ್ತು ಸಮನ್ಸ್ಗಳನ್ನು ತಪ್ಪಿಸಿಕೊಂಡ ನಂತರ ಆಮ್ ಆದ್ಮಿ ಪಕ್ಷದ (ಎಎಪಿ) ರಾಷ್ಟ್ರೀಯ ಸಂಚಾಲಕನನ್ನು ಮಾರ್ಚ್ 21 ರಂದು ಇಡಿ ಬಂಧಿಸಿತ್ತು. ಸಾರ್ವತ್ರಿಕ ಚುನಾವಣೆ ಘೋಷಣೆಯಾದ ನಂತರ (ಮಾರ್ಚ್ 18) ತನ್ನ ಬಂಧನವು “ಬಾಹ್ಯ ಪರಿಗಣನೆಗಳಿಂದ ಪ್ರೇರಿತವಾಗಿದೆ” ಎಂದು ಕೇಜ್ರಿವಾಲ್ ಸುಪ್ರೀಂ ಕೋರ್ಟ್ಗೆ ಸಲ್ಲಿಸಿದ ಮನವಿಯಲ್ಲಿ ವಾದಿಸಿದ್ದಾರೆ. ಈ ಪ್ರಕರಣದಲ್ಲಿ ತನ್ನ ಬಂಧನವನ್ನು ಎತ್ತಿಹಿಡಿದ ದೆಹಲಿ ಹೈಕೋರ್ಟ್ನ ಏಪ್ರಿಲ್ 9 ರ ಆದೇಶದ ವಿರುದ್ಧ ದೆಹಲಿ ಮುಖ್ಯಮಂತ್ರಿ ಸುಪ್ರೀಂ ಕೋರ್ಟ್ ಅನ್ನು…

Read More

ಬೆಂಗಳೂರು : ಮೈಸೂರು ಅಭಿವೃದ್ಧಿ ಪ್ರಾಧಿಕಾರದಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ ರಾಜ್ಯ ಕಾಂಗ್ರೆಸ್‌ ಸರ್ಕಾರದ ವಿರುದ್ದ ಇಂದು ಬಿಜೆಪಿ ಪ್ರತಿಭಟನೆ ಹಮ್ಮಿಕೊಂಡಿದ್ದು, ಕೆಂಗೇರಿಯಲ್ಲೇ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಸೇರಿದಂತೆ ಹಲವು ಬಿಜೆಪಿ ನಾಯಕರು,ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. https://twitter.com/BJP4Karnataka/status/1811624673840406780?ref_src=twsrc%5Etfw%7Ctwcamp%5Etweetembed%7Ctwterm%5E1811624673840406780%7Ctwgr%5E6cadeb53e8597e6a1f632e1ebd5d4ff6e3357dbb%7Ctwcon%5Es1_&ref_url=https%3A%2F%2Fkannadadunia.com%2Flive-news%2Fbreaking-bjp-protests-against-state-government-b-y-vijayendra-and-many-others-are-in-police-custody%2F ಮೈಸೂರು ಮುಡಾ ಹಗರಣದ ಪ್ರಕರಣ ಹಾಗೂ ರಾಜ್ಯದ ಜನವಿರೋಧಿ ಭ್ರಷ್ಟ ಕಾಂಗ್ರೆಸ್ ಸರ್ಕಾರದ ದುರಾಡಳಿತವನ್ನು ಖಂಡಿಸಿ ಜುಲೈ 12ರ ಶುಕ್ರವಾರ ಮೈಸೂರಿನಲ್ಲಿ ಪ್ರತಿಭಟನೆ ನಡೆಸುವುದಾಗಿ ಬಿಜೆಪಿ ನಿನ್ನೆಯೇ ಹೇಳಿತ್ತು. ಆದರೆ ಇಂದು ಮೈಸೂರಿಗೆ ಹೋಗುತ್ತಿದ್ದ ವೇಳೆಯೇ ಕೆಂಗೇರಿಯಲ್ಲಿ ಬಿ.ವೈ. ವಿಜಯೇಂದ್ರ ಸೇರಿದಂತೆ ಹಲವು ನಾಯಕರು, ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಮೈಸೂರಿನಲ್ಲಿ ಇಂದು ಬಿಜೆಪಿ ಬೃಹತ್‌ ಪ್ರತಿಭಟನೆ ಹಮ್ಮಿಕೊಂಡಿದ್ದು, ಈ ಹಿನ್ನೆಲೆಯಲ್ಲಿ ಪ್ರತಿಭಟನೆಗೆ ಹೋಗತುತಿದ್ದ ಬಿಜೆಪಿ ಕಾರ್ಯಕರ್ತರ ಬಸ್‌ ತಡೆದ ಪೊಲೀಸರು ಅವರನ್ನೂ ವಶಕ್ಕೆ ಪಡೆದುಕೊಂಡಿದೆ.

Read More

ಬೆಂಗಳೂರು : 545 ಪಿಎಸ್‌ ಐ ನೇಮಕಾತಿ ಪಟ್ಟಿ ವಿಚಾರವಾಗಿ ಇಂದು ಗೃಹ ಸಚಿವ ಡಾ.ಜಿ ಪರಮೇಶ್ವರ್‌ ಅವರನ್ನು ಭೇಟಿಗೆ ಬಂದಿದ್ದ ಆಕಾಂಕ್ಷಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬೆಂಗಳೂರಿನ ಗೃಹ ಸಚಿವ ಪರಮೇ‍ಶ್ವರ್‌ ನಿವಾಸದಲ್ಲಿ ಹೈಡ್ರಾಮಾ ನಡೆದಿದ್ದು, ಅನುಮತಿ ಪಡೆಯದೇ ಗೃಹ ಸಚಿವರ ಮನೆಗೆ ಬಂದಿದ್ದ ಪಿಎಸ್‌ ಐ ಆಕಾಂಕ್ಷಿಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. 545 ಪಿಎಸ್‌ ಐ ನೇಮಕಾತಿ ಪಟ್ಟಿ ವಿಚಾರವಾಗಿ ಮಾತನಾಡಲು ಬಂದಿದ್ದ ಇಬ್ಬರು ಪಿಎಸ್‌ ಐ ಆಕಾಂಕ್ಷಿಗಳು ಪೊಲೀಸರೊಂದಿಗೆ ವಾಗ್ವಾದ ನಡೆಸಿದ್ದು, ಈ ವೇಳೆ ಅವರನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ.

Read More

ಬಳ್ಳಾರಿ : ಉದ್ಯೋಗಾಕಾಂಕ್ಷಿಗಳಿಗೆ ಇಂಧನ ಸಚಿವ ಕೆ.ಜೆ.ಜಾರ್ಜ್ ಭರ್ಜರಿ ಸಿಹಿಸುದ್ದಿ ನೀಡಿದ್ದು, ರಾಜ್ಯದಲ್ಲಿ 2000 ಲೈನ್‍ಮೆನ್‍ಗಳ ನೇಮಕಕ್ಕೆ ಇನ್ನು 15 ದಿನಗಳಲ್ಲಿ ಅಧಿಸೂಚನೆ ಹೊರಡಿಸಲಾಗುತ್ತದೆ ಎಂದು ತಿಳಿಸಿದ್ದಾರೆ. ಈ ಕುರಿತು ಮಾಹಿತಿ ನೀಡಿರುವ ಅವರು, ರಾಜ್ಯದಲ್ಲಿ 2000 ಲೈನ್‍ಮೆನ್‍ಗಳ ನೇಮಕಕ್ಕೆ ಇನ್ನು 15 ದಿನಗಳಲ್ಲಿ ಅಧಿಸೂಚನೆ ಹೊರಡಿಸಲಾಗುತ್ತದೆ. ಸಾಮಾನ್ಯವಾಗಿ ಲೈನ್‍ಮೆನ್‍ಗಳ ನೇಮಕ ವೇಳೆ ಒಂದು ಜಿಲ್ಲೆಯವರು ಇನ್ನೊಂದು ಜಿಲ್ಲೆಯಲ್ಲಿ ಅರ್ಜಿ ಸಲ್ಲಿಸಿ ನೇಮಕಗೊಳ್ಳುತ್ತಾರೆ. ಬಳಿಕ ತಮ್ಮ ಜಿಲ್ಲೆಗೆ ವರ್ಗಾವಣೆ ಮಾಡಿಸಿಕೊಳ್ಳುತ್ತಾರೆ. ಇದರಿಂದ ಕೆಲವು ಜಿಲ್ಲೆಗಳಲ್ಲಿ ಅದರಲ್ಲೂ ಮುಖ್ಯವಾಗಿ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಲೈನ್‍ಮೆನ್‍ಗಳ ಕೊರತೆಯಾಗುತ್ತದೆ. ಈ ಹಿನ್ನೆಲೆಯಲ್ಲಿ 2000 ಲೈನ್‍ಮೆನ್‍ಗಳನ್ನು ನೇಮಕ ಮಾಡಿಕೊಳ್ಳುವ ಸಂದರ್ಭದಲ್ಲಿ ಆಯಾ ಜಿಲ್ಲೆಯವರಿಗೆ ಅವಕಾಶ ಮಾಡಿಕೊಡುವ ಉದ್ದೇಶದಿಂದ ರಾಜ್ಯಾದ್ಯಂತ ಏಕಕಾಲದಲ್ಲಿ ನೇಮಕ ಪ್ರಕ್ರಿಯೆ ನಡೆಸಲಾಗುವುದು ಎಂದರು. ವಿದ್ಯುತ್ ಪೂರೈಕೆ ಕುರಿತ ಸಮಸ್ಯೆಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ಎಲ್ಲಾ ಎಸ್ಕಾಂ ವ್ಯವಸ್ಥಾಪಕ ನಿರ್ದೇಶಕರು, ಆಯಾ ಜಿಲ್ಲೆಯ ಎಸ್ಕಾಂ ಮುಖ್ಯ ಎಂಜಿನಿಯರ್‍ಗಳನ್ನು ಒಳಗೊಂಡಂತೆ ಜಿಲ್ಲೆಯ ಜನಪ್ರತಿನಿಧಿಗಳೊಂದಿಗೆ ನಿರಂತರವಾಗಿ ಸಭೆ ನಡೆಸಬೇಕು…

Read More

ಬೆಂಗಳೂರು: ಕನ್ನಡದ ಕಿರುತೆರೆಯಲ್ಲಿ ನಿರೂಪಕಿಯಾಗಿ ಜನಪ್ರಿಯವಾಗಿದ್ದಂತ ಅಪರ್ಣಾ ಅವರು ಇನ್ನಿಲ್ಲವಾಗಿದ್ದಾರೆ. ಕ್ಯಾನ್ಸರ್ ನಿಂದ ಬಳಲುತ್ತಿದ್ದಂತ ಖ್ಯಾತ ನಿರೂಪಕಿ ಅಪರ್ಣಾ ಅವರು ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ. ಇಂದು ಬೆಳಗ್ಗೆ 7:30 ಗಂಟೆ ಕರೆದುಕೊಂಡು ಬರುತ್ತೇನೆ, ಮನೆ ಬಳಿ 11:30 ರವರೆಗೂ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುತ್ತದೆ. 1 ಗಂಟೆಗೆ ಬನಶಂಕರಿಯ ವಿದ್ಯುತ್ ಚಿತಾಗಾರದಲ್ಲಿ ಸ್ಮಾರ್ತ ಬ್ಯಾಹ್ಮಣ ಸಂಪ್ರದಾಯದಂತೆ ಅಂತಿಮ ವಿಧಿವಿಧಾನ ನೆರವೇರಿಸಲಾಗುತ್ತದೆ. ಬನಶಂಕರಿ ಎರಡನೇ ಹಂತದಲ್ಲಿರೋ ಮನೆಯಲ್ಲಿ ಸಾರ್ವಜನಿಕರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುತ್ತದೆ ಎಂದು ಅಪರ್ಣಾ ಪತಿ ತಿಳಿಸಿದ್ದಾರೆ. ಹೀಗಿದೆ ಅಪರ್ಣಾ ಬದುಕಿನ ಜರ್ನಿಯ ಹಿನ್ನೋಟ ಇಂದು ಕ್ಯಾನ್ಸರ್ ನಿಂದ ನಿಧನರಾಗಿರುವಂತ ಕನ್ನಡದ ಖ್ಯಾತ ನಿರೂಪಕಿ ಅಪರ್ಣಾ ಅವರು, 1989ರಲ್ಲಿ ನಿರೂಪಕಿಯಾಗಿ ಟಿವಿ ಮಾಧ್ಯಮಕ್ಕೆ ಸೇರಿದರು. ಅದಕ್ಕೂ ಮುನ್ನಾ 1984ರಲ್ಲಿ ತೆರೆಕಂಡಂತ ಖ್ಯಾತ ನಿರ್ದೇಶಕ ಪುಟ್ಟಣ್ಣ ಕಣಗಾಲ್ ನಿರ್ದೇಶನದ ಮಸಣದ ಹೂ ಚಿತ್ರದಲ್ಲಿಯೂ ಕಾಣಿಸಿಕೊಂಡು, ಸಿನಿ ರಂಗದ ಜರ್ನಿ ಆರಂಭಗೊಂಡಿತ್ತು. ಮಸಣದ ಹೂ ಬಳಿಕ ಇನ್ಸ್ ಪೆಕ್ಟರ್ ವಿಕ್ರಮ್ ಸೇರಿದಂತೆ ಹಲವು…

Read More

ಬೆಂಗಳೂರು : ವಾಲ್ಮೀಕಿ ಅಭಿವೃದ್ಧಿ ನಿಗಮದದ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಬಿ.ನಾಗೇಂದ್ರರನ್ನು ಇಡಿ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದು, ವಾಲ್ಮೀಕಿ ಹಗರಣದ ಬಗ್ಗೆ ನನಗೇನೂ ಗೊತ್ತಿಲ್ಲ ಎಂದು ಹೇಳಿದ್ದಾರೆ. ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದ ಕೋಟ್ಯಾಂತರ ಅಕ್ರಮ ಹಣ ವರ್ಗಾವಣೆ ಪ್ರಕರಣಕೆಕ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ. ಈ ವೇಳೆ ಅವರು ಮಾಧ್ಯಮಗಳಿಗೆ ವಾಲ್ಮೀಕಿ ಹಗರಣದ ಬಗ್ಗೆ ನನಗೇನು ಗೊತ್ತಿಲ್ಲ. ಮನೆಯಲ್ಲಿ ಇಡಿ ಅಧಿಕಾರಿಗಳು ವಿಚಾರಣೆ ಮಾಡಿದ್ರು ಇಂದು ಇಲ್ಲಿಗೆ ಕರೆದುಕೊಂಡು ಬಂದಿದ್ದಾರೆ ಎಂದು ತಿಳಿಸಿದ್ದಾರೆ. ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದ ಕೋಟ್ಯಾಂತರ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಬಿ ನಾಗೇಂದ್ರ  ಅವರನ್ನು ಇಡಿ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದು, ಹೆಚ್ಚಿನ ವಿಚಾರಣೆ ನಡೆಸಲಿದ್ದಾರೆ. ವಾಲ್ಮೀಕಿ ಅಭಿವೃದ್ಧಿ ನಿಗಮದ ಅವ್ಯವಹಾರ ಪ್ರಕರಣ ಸಂಬಂಧ ಇಡಿ ಅಧಿಕಾರಿಗಳು ಮಾಜಿ ಸಚಿವ ಬಿ.ನಾಗೇಂದ್ರ ಅವರ ನಿವಾಸ, ಆಪ್ತರ ಮನೆಗಳ ಮೇಲೆ ನಿನ್ನೆ ದಾಳಿ ನಡೆಸಿದ್ದಾರೆ. ನಾಗೇಂದ್ರ…

Read More

ರಾಯಚೂರು : ಹಟ್ಟಿ ಚಿನ್ನದ ಗಣಿಯಲ್ಲಿ ಘೋರ ದುರಂತವೊಂದು ಸಂಭವಿಸಿದ್ದು,  ಮಣ್ಣು ಕುಸಿದು  ಓರ್ವ ಕಾರ್ಮಿಕ ಸಾವನ್ನಪ್ಪಿರುವ ಘಟನೆ ನಡೆದಿದೆ.  ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನ ಹಟ್ಟಿ ಪಟ್ಟಣದ ಚಿನ್ನದ ಗಣಿಯಲ್ಲಿ ಮಣ್ಣು ಕುಸಿದ ಪರಿಣಾಮ ಓರ್ವ ಕಾರ್ಮಿಕ ಸಾವನ್ನಪ್ಪಿದ್ದು, ಕಾರ್ಮಿಕನನ್ನು ಮೌನೇಶ್‌ ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಮೂವರು ಕಾರ್ಮಿಕರು ಗಂಭೀರವಾಗಿ ಗಾಯಗೊಂಡಿದ್ದು, ಗಾಯಗೊಂಡ ಕಾರ್ಮಿಕರನ್ನು ಬೆಂಗಳೂರಿನ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

Read More

ಬೆಂಗಳೂರು : ವಾಲ್ಮೀಕಿ ಅಭಿವೃದ್ಧಿ ನಿಗಮದದ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಬಿ.ನಾಗೇಂದ್ರರನ್ನು ಇಡಿ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ.  ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದ ಕೋಟ್ಯಾಂತರ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಬಿ ನಾಗೇಂದ್ರ  ಅವರನ್ನು ಇಡಿ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದು, ಹೆಚ್ಚಿನ ವಿಚಾರಣೆ ನಡೆಸಲಿದ್ದಾರೆ. ವಾಲ್ಮೀಕಿ ಅಭಿವೃದ್ಧಿ ನಿಗಮದ ಅವ್ಯವಹಾರ ಪ್ರಕರಣ ಸಂಬಂಧ ಇಡಿ ಅಧಿಕಾರಿಗಳು ಮಾಜಿ ಸಚಿವ ಬಿ.ನಾಗೇಂದ್ರ ಅವರ ನಿವಾಸ, ಆಪ್ತರ ಮನೆಗಳ ಮೇಲೆ ನಿನ್ನೆ ದಾಳಿ ನಡೆಸಿದ್ದಾರೆ. ನಾಗೇಂದ್ರ ಅವರ ಮನೆಯಲ್ಲಿ ಆಸ್ತಿ ಪತ್ರಗಳು ದೊರೆತಿದ್ದು, ಅವುಗಳನ್ನು ಹಗರಣದಲ್ಲಿ ಬಂದ ಹಣದಿಂದಲೇ ಖರೀದಿಸಲಾಗಿದ್ಯಾ ಅನ್ನೋ ಬಗ್ಗೆ ತನಿಖೆಯನ್ನು ಇಡಿ ಅಧಿಕಾರಿಗಳು ನಡೆಸುತ್ತಿದ್ದಾರೆ. ಇದರ ನಡುವೆ ಮಾಜಿ ಸಚಿವ ಬಿ.ನಾಗೇಂದ್ರ ಅವರ ಪಿಎ ಹರೀಶ್ ಅವರ ವೀಡಿಯೋ ಆಧಾರಿತ ಹೇಳಿಕೆಯನ್ನು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ದಾಖಲಿಸಿಕೊಂಡಿದ್ದಾರೆ. ಪಿಎ ಹರೀಶ್ ನೀಡಿದಂತ ಹೇಳಿಕೆಯ ಆಧಾರದ ಮೇಲೆ ಮಾಜಿ ಸಚಿವ ಬಿ.ನಾಗೇಂದ್ರ…

Read More

ಕೊಚ್ಚಿ: ಕಾನೂನುಬದ್ಧವಾಗಿ ಮದುವೆಯಾಗದ ಮಹಿಳೆಯ ಸಂಗಾತಿಯನ್ನು ಐಪಿಸಿಯ ಸೆಕ್ಷನ್ 498 ಎ ಅಡಿಯಲ್ಲಿ ಕ್ರೌರ್ಯದ ಅಪರಾಧಕ್ಕಾಗಿ ವಿಚಾರಣೆಗೆ ಒಳಪಡಿಸಲಾಗುವುದಿಲ್ಲ ಎಂದು ಕೇರಳ ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ದೂರುದಾರ ಮಹಿಳೆಯ ಲಿವ್-ಇನ್ ಪಾಲುದಾರರಾಗಿದ್ದ ಅರ್ಜಿದಾರರ ವಿರುದ್ಧದ ವಿಚಾರಣೆಯನ್ನು ರದ್ದುಗೊಳಿಸಿದ ನಂತರ ನ್ಯಾಯಾಲಯ ಗುರುವಾರ ಈ ಆದೇಶವನ್ನು ಹೊರಡಿಸಿದೆ. “ಐಪಿಸಿಯ ಸೆಕ್ಷನ್ 498 (ಎ) ಅಡಿಯಲ್ಲಿ ಶಿಕ್ಷಾರ್ಹ ಅಪರಾಧಕ್ಕೆ ಅತ್ಯಂತ ಅಗತ್ಯವಾದ ವಿಷಯವೆಂದರೆ ಮಹಿಳೆಯ ಪತಿ ಅಥವಾ ಗಂಡನ ಸಂಬಂಧಿಕರು ಕ್ರೌರ್ಯ ಎಸಗಿದ್ದಾರೆ. ‘ಗಂಡ ಎಂಬ ಪದದ ಅರ್ಥ ವಿವಾಹಿತ ಪುರುಷ, ಆತ ಮಹಿಳೆಯನ್ನು ಮದುವೆಯಾಗಿದ್ದಾಳೆ. ಮದುವೆಯಿಂದ ಮಾತ್ರ ಒಬ್ಬ ವ್ಯಕ್ತಿಯು ಮಹಿಳೆಯ ಗಂಡನ ಸ್ಥಾನಮಾನವನ್ನು ಪಡೆಯುತ್ತಾನೆ. ಮದುವೆ ಎಂದರೆ ಕಾನೂನಿನ ದೃಷ್ಟಿಯಲ್ಲಿ ಮದುವೆ. ಕಾನೂನುಬದ್ಧ ವಿವಾಹವಿಲ್ಲದೆ ಪುರುಷನು ಮಹಿಳೆಯ ಸಂಗಾತಿಯಾದರೆ, ಐಪಿಸಿಯ ಸೆಕ್ಷನ್ 498 (ಎ) ಅಡಿಯಲ್ಲಿ ಅವನನ್ನು ‘ಪತಿ’ ಎಂದು ಕರೆಯಲಾಗುವುದಿಲ್ಲ ಎಂದು ಹೇಳಿದೆ. ಅರ್ಜಿದಾರರು ಹೇಳಿದ್ದೇನು? ಲಿವ್-ಇನ್ ಸಂಬಂಧದಲ್ಲಿದ್ದಾಗ ಅರ್ಜಿದಾರರು ಮಾರ್ಚ್ 2023 ರಿಂದ ಆಗಸ್ಟ್ 2023 ರವರೆಗೆ ಮಹಿಳೆಗೆ ಮಾನಸಿಕವಾಗಿ…

Read More

ಬೆಂಗಳೂರು : ಬೆಂಗಳೂರಿನಲ್ಲಿ ಕಾಡಾನೆ ದಾಳಿಗೆ ಫಾರೆಸ್ಟ್‌  ವಾಚರ್‌ ಚಿಕ್ಕಮಾದಯ್ಯ ಎಂಬುವರು ಸಾವನ್ನಪ್ಪಿರುವ ಘಟನೆ ನಡೆದಿದೆ.  ಬೆಂಗಳೂರು ನಗರ ಜಿಲ್ಲೆಯ ಆನೇಕಲ್‌ ತಾಲೂಕಿನ ಬನ್ನೇರುಘಟ್ಟದಲ್ಲಿ ಕಾಡಾನೆ  ದಾಳಿಗೆ ಫಾರೆಸ್ಟ್‌ ವಾಚರ್‌ ಚಿಕ್ಕಮಾದಯ್ಯ ಸಾವನ್ನಪ್ಪಿದ್ದಾರೆ. ಕಳೆದ 20 ವರ್ಷಗಳಿಂದ ಫಾರೆಸ್ಟ್‌ ವಾಚರ್‌ ಆಗಿ ಚಿಕ್ಕಮಾದಯ್ಯ ಕೆಲಸ ಮಾಡುತ್ತಿದ್ದರು. ತಡರಾತ್ರಿ ೧೨.೩೦ ರ ಸುಮಾರಿಗೆ  ಕಾಡಾನೆ ದಾಳಿಗೆ ಬಲಿಯಾಗಿದ್ದಾರೆ.  ಸಾಕಾನೆಗಳ ಗುಂಪಿನ ಜೊತೆಗೆ ಸೇರಿಕೊಂಡಿದ್ದ ಕಾಡನೆ, ನೈಟ್‌ ಬೀಟ್‌ ನಲ್ಲಿದ್ದ ಚಿಕ್ಕಮಾದಯ್ಯ ಮೇಲೆ ಏಕಾಏಕಿ ದಾಳಿ ಮಾಡಿದ್ದು, ಚಿಕ್ಕಮಾದಯ್ಯ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ  ಎಂದು ವರದಿಯಾಗಿದೆ.

Read More