Author: kannadanewsnow57

ಬಳ್ಳಾರಿ : ರಾಜ್ಯದಲ್ಲಿ ಐಪಿ ಸೆಟ್ ಆರ್.ಆರ್ ನಂಬರ್‍ಗೆ ಆಧಾರ್ ಸಂಖ್ಯೆ ಲಿಂಕ್ ಮಾಡುತ್ತಿರುವುದು ದಾಖಲಾತಿಗಾಗಿ ಮಾತ್ರವೇ ಹೊರತು ಬೇರೆ ಉದ್ದೇಶವಿಲ್ಲ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಅವರು ಹೇಳಿದರು. ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಗುರುವಾರ ಇಂಧನ ಇಲಾಖೆಗೆ ಸಂಬಂಧಿಸಿದಂತೆ ಜಿಲ್ಲೆಯ ಜನಪ್ರತಿನಿಧಿಗಳು ಮತ್ತು ಇಲಾಖೆ ಅಧಿಕಾರಿಗಳೊಂದಿಗಿನ ಸಭೆ ಬಳಿಕ ಸುದ್ದಿಗೋಷ್ಠಿಯನ್ನುದ್ದೇಶಿಸಿ ಅವರು ಮಾತನಾಡಿದರು. ಐಪಿ ಸೆಟ್‍ಗಳ ಸಂಖ್ಯೆ ತಿಳಿದುಕೊಂಡು ಸಮರ್ಪಕ ವಿದ್ಯುತ್ ಪೂರೈಕೆಗೆ ಅನುಕೂಲವಾಗುವಂತೆ ಐಪಿ ಸೆಟ್‍ಗಳ ಆರ್.ಆರ್.ನಂಬರ್ ಗೆ ಆಧಾರ್ ಸಂಖ್ಯೆ ಜೋಡಿಸಲಾಗುತ್ತಿದೆ ಎಂದು ಸ್ಪಷ್ಟಪಡಿಸಿದರು. “ರಾಜ್ಯದಲ್ಲಿ 10 ಎಚ್.ಪಿ.ವರೆಗಿನ ಕೃಷಿ ಪಂಪ್ ಸೆಟ್‍ಗಳಿಗೆ ಈಗಾಗಲೇ ಉಚಿತವಾಗಿ ವಿದ್ಯುತ್ ಪೂರೈಸಲಾಗುತ್ತಿದೆ. ಆದರೆ, ಅವುಗಳಿಗೆ ಎಷ್ಟು ವಿದ್ಯುತ್ ಬೇಕು ಎಂಬ ಬಗ್ಗೆ ಸ್ಪಷ್ಟತೆ ಇಲ್ಲದೆ ಗೊಂದಲ ಉಂಟಾಗುತ್ತಿದೆ. ಅಕ್ರಮ ಪಂಪ್ ಸೆಟ್‍ಗಳಿಂದಾಗಿ ಸಕ್ರಮ ಪಂಪ್‍ಸೆಟ್‍ಗಳಿಗೂ ವಿದ್ಯುತ್ ಸಮಸ್ಯೆಯಾಗುತ್ತಿದೆ. ಐಪಿ ಸೆಟ್‍ಗಳ ಆರ್.ಆರ್ ನಂಬರ್‍ಗಳಿಗೆ ಆಧಾರ್ ಜೋಡಣೆ ಮಾಡಿದರೆ ಎಷ್ಟು ಪಂಪ್ ಸೆಟ್‍ಗಳಿವೆ ಮತ್ತು ಅವುಗಳಿಗೆ ಎಷ್ಟು ವಿದ್ಯುತ್ ಬೇಕು…

Read More

ಶಿವಮೊಗ್ಗ : ಶಿಕ್ಷಕ ಅಭ್ಯರ್ಥಿಗಳಿಗೆ ರಾಜ್ಯ ಸರ್ಕಾರ ಸಿಹಿಸುದ್ದಿಯೊಂದು ನೀಡಿದ್ದು, ಹಂತ ಹಂತವಾಗಿ ಶಿಕ್ಷಕರ ನೇಮಕಾತಿ ಮಾಡಲಾಗುವುದು. ಈ ವರ್ಷ ಸುಮಾರು 10 ಸಾವಿರ ಸರ್ಕಾರಿ ಶಿಕ್ಷಕರ ನೇಮಕ ಮಾಡಲಾಗುವುದು. ಅನುದಾನಿತ ಶಾಲೆಗಳಿಗೂ 2020 ರಿಂದ ಮಂಜೂರಾತಿ ನೀಡಲು ಮತ್ತು ಅವರ ಅಭಿವೃದ್ದಿಗಾಗಿ ಪ್ರಯತ್ನಿಸಲಾಗುವುದು ಎಂದು ಸಚಿವ ಮಧು ಬಂಗಾರಪ್ಪ ತಿಳಿಸಿದರು. ಶಾಲಾ ಶಿಕ್ಷಣ ಇಲಾಖೆ ವತಿಯಿಂದ ಗುರುವಾರ ನಗರದ ಅಂಬೇಡ್ಕರ್ ಭವನದಲ್ಲಿ 2022-23 ನೇ ಸಾಲಿನಲ್ಲಿ ಎಸ್ ಎಸ್‍ಎಲ್‍ಸಿಯಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಲ್ಯಾಪ್‍ಟಾಪ್ ವಿತರಣೆ ಹಾಗೂ 2023-24 ನೇ ಸಾಲಿನಲ್ಲಿ ಎಸ್ ಎಸ್ ಎಲ್‍ಸಿಯಲ್ಲಿ ಶೇ.100 ಫಲಿತಾಂಶ ಪಡೆದ ಶಾಲೆಗಳಿಗೆ ಏರ್ಪಡಿಸಲಾಗಿದ್ದ ಅಭಿನಂದನಾ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಕಾರ್ಯಕ್ರಮದಲ್ಲಿ 2022-23 ನೇ ಸಾಲಿನಲ್ಲಿ ಎಸ್‍ಎಸ್‍ಎಲ್‍ಸಿಯಲ್ಲಿ ಅತಿ ಹೆಚ್ಚು ಅಂಕ ಪಡೆದ ಜಿಲ್ಲೆಯ 3 ಮತ್ತು ತಾಲ್ಲೂಕುಗಳಿಂದ ತಲಾ 3 ವಿದ್ಯಾರ್ಥಿಗಳಿಗೆ ಉಚಿತವಾಗಿ ಲ್ಯಾಪ್ ಟಾಪ್ ವಿತರಣೆ ಮಾಡಲಾಯಿತು ಹಾಗೂ 2023-24 ನೇ ಸಾಲಿನಲ್ಲಿ ಎಸ್‍ಎಸ್…

Read More

ಬೆಂಗಳೂರು : ರಾಜ್ಯ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ವತಿಯಿಂದ ಜುಲೈ, 13 ರಂದು ರಾಜ್ಯದ ಜಿಲ್ಲೆಯ ವಿವಿಧ ಹಂತದ ಎಲ್ಲಾ ನ್ಯಾಯಾಲಯಗಳಲ್ಲಿ ‘ರಾಷ್ಟ್ರೀಯ ಲೋಕ್ ಅದಾಲತ್’ ನಡೆಯಲಿದೆ. ಸಾರ್ವಜನಿಕರು ತಮ್ಮ ವ್ಯಾಜ್ಯ ಪೂರ್ವ ಮತ್ತು ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳಿಗೆ ತಕ್ಷಣ ಪರಿಹಾರ ಪಡೆದುಕೊಳ್ಳಲು ರಾಷ್ಟ್ರೀಯ ಲೋಕ ಅದಾಲತ್ ಸುವರ್ಣ ಅವಕಾಶವಾಗಿದೆ. ವ್ಯಾಜ್ಯ ಪೂರ್ವ ಪ್ರಕರಣಗಳು ಚೆಕ್ ಅಮಾನ್ಯದ ಪ್ರಕರಣಗಳು, ಬ್ಯಾಂಕ್ ವಸೂಲಾತಿ ಪ್ರಕರಣಗಳು, ಉದ್ಯೋಗದಲ್ಲಿ ಪುನರ್ ಸ್ಥಾಪಿಸಲ್ಪಡುವ ಪ್ರಕರಣಗಳು, ವಿದ್ಯುತ್ ಹಾಗೂ ನೀರಿನ ಶುಲ್ಕಗಳು, ಇತರೆ ಪ್ರಕರಣಗಳು (ರಾಜೀಯಾಗಬಲ್ಲ ಅಪರಾಧಿಕ ಪ್ರಕರಣಗಳು, ವೈವಾಹಿಕ ಪ್ರಕರಣಗಳು ಮತ್ತು ಇತರೆ ಸಿವಿಲ್ ಪ್ರಕರಣಗಳು ಮತ್ತಿತರ), ಕರ್ನಾಟಕ ರಿಯಲ್ ಎಸ್ಟೇಟ್ ಪ್ರಾಧಿಕಾರಕ್ಕೆ ಸಂಬಂಧಪಟ್ಟ ಪ್ರಕರಣಗಳು, ಜಿಲ್ಲಾ ಗ್ರಾಹಕರ ವೇದಿಕೆಯಲ್ಲಿನ ಪ್ರಕರಣಗಳು, ಸಾಲ ವಸೂಲಾತಿ ನ್ಯಾಯಾಧೀಕರಣದ ಪ್ರಕರಣಗಳು, ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗ, ಖಾಯಂ ಜನತಾ ನ್ಯಾಯಾಲಯದಲ್ಲಿನ ಪ್ರಕರಣಗಳು. ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳು ರಾಜಿಯಾಗಬಲ್ಲ ಅಪರಾಧಿಕ ಪ್ರಕರಣಗಳು, ಚೆಕ್ ಅಮಾನ್ಯದ ಪ್ರಕರಣಗಳು,…

Read More

ಬೆಂಗಳೂರು : ರಾಜ್ಯಾದ್ಯಂತ ಡೆಂಗ್ಯೂ ಜ್ವರ ಪ್ರಕರಣಗಳು ಹೆಚ್ವಳವಾಗಿದ್ದು. ಈ ಹಿನ್ನಲೆಯಲ್ಲಿ ಆರೋಗ್ಯ ಇಲಾಖೆ ಸುತ್ತೊಲೆ ಹೊರಡಿಸಿದ್ದು,  ಎನ್ ವಿ ಬಿ ಡಿಸಿ ಪಿ : ಡೆಂಗಿ ಜ್ವರ ಮುಂಜಾಗ್ರತೆ ಹಾಗೂ ನಿಯಂತ್ರಣ, ಹೆಚ್ಚುವರಿ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಲು ಸೂಚನೆ ನೀಡಿದೆ. ಪ್ರಸ್ತುತ ರಾಜ್ಯದ ಡೆಂಗಿ ಜ್ವರ ಪರಿಸ್ಥಿತಿ ಹಾಗೂ ಮಳೆಗಾಲದ ಹಿನ್ನೆಲೆಯಲ್ಲಿ, ಡೆಂಗಿ ಜ್ವರ ಪ್ರಕರಣಗಳ ಚಿಕಿತ್ಸೆ ಹಾಗೂ ಸಮರ್ಪಕ ನಿರ್ವಹಣೆಯು ಪ್ರಮುಖವಾಗಿದ್ದು, ಫಲಿತಾಂಶ ಆಧಾರಿತವಾಗಿರುವುದು ಅಗತ್ಯವಾಗಿದೆ. ಅದರಂತೆ, ಸಂಬಂಧಪಟ್ಟವರು ಈ ಕೆಳಕಂಡ ಹೆಚ್ಚುವರಿ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಲು ಸೂಚಿಸಿದೆ. 1. ರಾಜ್ಯದ ದೈನಂದಿನ ಡೆಂಗಿ ಜ್ವರ ಪರಿಸ್ಥಿತಿಯ ಸೂಕ್ಷ್ಮ ಮೇಲ್ವಿಚಾರಣೆ ಹಾಗೂ ಉಸ್ತುವಾರಿಗಾಗಿ, ಎನ್ ವಿ ಬಿ ಡಿಸಿ ಪಿ ವಿಭಾಗದಿಂದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ನಿರ್ದೇಶನಾಲಯ, ಆರೋಗ್ಯಸೌಧ, ಬೆಂಗಳೂರು, ಇಲ್ಲಿ’ಡೆಂಗಿ ವಾರ್ ರೂಮ್ ‘ಅನ್ನು ಸಕ್ರಿಯಗೊಳಿಸುವುದು. 2. ಎಲ್ಲಾ ಜಿಲ್ಲೆಗಳು / ಬಿಬಿಎಂಪಿ ವ್ಯಾಪ್ತಿಯ ಡೆಂಗಿ ಜ್ವರ ಪರಿಸ್ಥಿತಿಯ ಮೇಲ್ವಿಚಾರಣೆ ಹಾಗೂ ದತ್ತಾಂಶ/ಮಾಹಿತಿ ಸಂಗ್ರಹಣೆಗಾಗಿ…

Read More

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್ ಎನ್ನುವಂತೆ ವಿಮಾ ಮೌಲ್ಯಮಾಪನ ವರದಿ ಆಧಾರದ ಮೇಲೆ ಜೀವ ವಿಮಾ ಪಾಲಿಸಿಗಳ ಸ್ಥಿರಪಡಿಸಿದ ಮೊತ್ತದ ಮೇಲೆ ಬೋನಸ್ ನೀಡಲು ರಾಜ್ಯ ಸರ್ಕಾರ ಮಂಜೂರಾತಿ ನೀಡಿದೆ. ಈ ಕುರಿತಂತೆ ಆರ್ಥಿಕ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನೇತ್ರಪ್ರಭಾ ಎಂ ಧಾಯಪುಲೆ ಅವರು ನಡಾವಳಿಗಳನ್ನು ಹೊರಡಿಸಿದ್ದು, ಅದರಲ್ಲಿ ನಿರ್ದೇಶಕರು, ಕರ್ನಾಟಕ ಸರ್ಕಾರಿ ವಿಮಾ ಇಲಾಖೆ, ಇವರು ಮೇಲೆ ಓದಲಾದ ಪತ್ರದಲ್ಲಿ ಕರ್ನಾಟಕ ಸರ್ಕಾರಿ ವಿಮಾ ಇಲಾಖೆಯಲ್ಲಿ ನಿರ್ವಹಿಸಲಾಗುತ್ತಿರುವ ಕಡ್ಡಾಯ ಜೀವ ವಿಮಾ ಯೋಜನೆಗೆ ಸಂಬಂಧಿಸಿದಂತೆ ಕರ್ನಾಟಕ ಸರ್ಕಾರಿ ನೌಕರರ (ಕಡ್ಡಾಯ ಜೀವ ವಿಮಾ ನಿಯಮಗಳು, 1958ರ ನಿಯಮ-22ರನ್ವಯ ವಿಮಾ ಮೌಲ್ಯಮಾಪನವನ್ನು ದೈವಾರ್ಷಿಕವಾಗಿ ಮಾಡಿಸಬೇಕಾಗಿದ್ದು, ಅದರನ್ವಯ 2018-2020ನೇ ದೈವಾರ್ಷಿಕ ಅವಧಿಯಲ್ಲಿ ಚಾಲ್ತಿಯಲ್ಲಿದ್ದ ವಿಮಾ ಪಾಲಿಸಿಗಳ ಮೌಲ್ಯಮಾಪನವನ್ನು ನಡೆಸಿ, ಅಧಿಲಾಭಾಂಶವನ್ನು ಘೋಷಿಸಲು ಅನುವಾಗುವಂತೆ ಮೌಲ್ಯಮಾಪನ ಕಾರ್ಯ ಕೈಗೊಳ್ಳಲು ವಿಮಾ ಗಣಕಕಾರರನ್ನು ನೇಮಿಸಲಾಗಿತ್ತೆಂದು ಮತ್ತು ವಿಮಾ ಗಣಕಕಾರರು 2018-2020ನೇ ಅವಧಿಗೆ ಸಂಬಂಧಿಸಿದಂತೆ ಮೌಲ್ಯಮಾಪನ ಕಾರ್ಯವನ್ನು ಪೂರ್ಣಗೊಳಿಸಿ ಮೌಲ್ಯಮಾಪನ ವರದಿಯನ್ನು ಸಲ್ಲಿಸಿದ್ದಾರೆಂದು…

Read More

ಬೆಂಗಳೂರು: ಕೋವಿಡ್ -19 ಸಾಂಕ್ರಾಮಿಕ ರೋಗವು ಕರ್ನಾಟಕದ ಆರೋಗ್ಯ ಮೂಲಸೌಕರ್ಯವನ್ನು ಹಾನಿಗೊಳಿಸಿದ್ದು, ಕೆಲವು ಅಡ್ಡಪರಿಣಾಮಗಳಿಗೆ ಕಾರಣವಾಯಿತು, ಅವುಗಳಲ್ಲಿ ಪ್ರಮುಖವಾದುದು ಬಾಲ್ಯ ವಿವಾಹಗಳ ಸಂಖ್ಯೆಯಲ್ಲಿನ ಹೆಚ್ಚಳ. ಕಳೆದ ಮೂರು ವರ್ಷಗಳಲ್ಲಿ ದೇಶಾದ್ಯಂತ ಸಾವಿರಾರು ಬಾಲ್ಯವಿವಾಹಗಳು ನಡೆದಿದ್ದು, ಅತಿ ಹೆಚ್ಚು ಬಾಲ್ಯವಿವಾಹಗಳು ನಡೆದ ರಾಜ್ಯಗಳ ಪಟ್ಟಿಯಲ್ಲಿ ತಮಿಳುನಾಡು ಮೊದಲ ಸ್ಥಾನದಲ್ಲಿದ್ದರೆ, ಕರ್ನಾಟಕ ಎರಡನೇ ಸ್ಥಾನದಲ್ಲಿದೆ ಎಂದು ಕೇಂದ್ರ ಸರ್ಕಾರ ಸುಪ್ರೀಂಕೋರ್ಟ್‌ ಗೆ ನೀಡಿರುವ ಮಾಹಿತಿಯಲ್ಲಿ ಬಹಿರಂಗಗೊಂಡಿದೆ. ಸುಪ್ರೀಂಕೋರ್ಟ್‌ ಗೆ ಕೇಂದ್ರ ಸರ್ಕಾರ ನೀಡಿರುವ ಮಾಹಿತಿ ಪ್ರಕಾರ ತಮಿಳುನಾಡಿನಲ್ಲಿ ಒಟ್ಟು 8,966 ಬಾಲ್ಯವಿವಾಹಗಳು ಆಗುವ ಮೂಲಕ ಮೊದಲ ಸ್ಥಾನದಲ್ಲಿದ್ದರೆ, ಕರ್ನಾಟಕದಲ್ಲಿ 8,348 ಎರಡನೇ ಸ್ಥಾನದಲ್ಲಿದೆ. ಪಶ್ಚಿಮ ಬಂಗಾಳದಲ್ಲಿ 8,324,, ತೆಲಂಗಾಣದಲ್ಲಿ 4,440, ಆಂಧ್ರಪ್ರದೇಶದಲ್ಲಿ 3,416 ಬಾಲ್ಯವಿವಾಹಗಳು ನಡೆದಿವೆ ಎಂದು ಮಾಹಿತಿ ನೀಡಿದೆ.

Read More

ಬೆಂಗಳೂರು: 2024-25ನೇ ಸಾಲಿನಲ್ಲಿ ಪ್ರತಿಭಾವಂತ ಮಾಧ್ಯಮಿಕ, ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ವಾರ್ಷಿಕ ರೂ.10,000 ದಂತೆ ಪ್ರೋತ್ಸಾಹಿತ ಕ್ರೀಢಾ ವಿದ್ಯಾರ್ಥಿ ವೇತನ ನೀಡಲು ಆನ್ ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ಕುರಿತಂತೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಆಯುಕ್ತರು ಸುತ್ತೋಲೆ ಹೊರಡಿಸಿದ್ದು,ರಾಜ್ಯ ಸರ್ಕಾರದ ಕ್ರೀಡಾ ವಿದ್ಯಾರ್ಥಿ ವೇತನ ಯೋಜನೆಯಡಿ ಪ್ರತಿಭಾವಂತ ಕ್ರೀಡಾಪಟುಗಳನ್ನು ಪ್ರೋತ್ಸಾಹಿಸುವ ಸಲುವಾಗಿ ಮಾಧ್ಯಮಿಕ/ಪ್ರೌಢಶಾಲಾ ವಿದ್ಯಾರ್ಥಿ ಕ್ರೀಡಾಪಟು (6 ರಿಂದ 10ನೇ ತರಗತಿ) ಗಳಿಗೆ ವಾರ್ಷಿಕ ರೂ. 10,000/- ನೀಡುವ ಸಂಬಂಧ 2024-25ನೇ ಸಾಲಿನ ವಿದ್ಯಾರ್ಥಿ ವೇತನಕ್ಕಾಗಿ ಅರ್ಹ ಕ್ರೀಡಾಪಟುಗಳಿಂದ ಉಲ್ಲೇಖಿತ ಸುತ್ತೋಲೆಯಲ್ಲಿ ಕಛೇರಿಯ ಅಧಿಕೃತ ಜಾಲತಾಣ: https://sevasindhuservices.karnataka.gov.in ಮೂಲಕ ಆನ್‌ಲೈನ್‌ನಲ್ಲಿ ದಿನಾಂಕ:01-06-2024 ರಿಂದ 30-06-2024ರವರೆಗೆ ರವರೆಗೆ ಸಲ್ಲಸಲು ತಿಳಿಸಲಾಗಿತ್ತು. ಸದರಿ ದಿನಾಂಕವನ್ನು 20-07-2024ರವರೆಗೆ ಮುಂದುವರೆಸಿ ಆದೇಶಿಸಿದ. ಈ ಬಗ್ಗ ಜಿಲ್ಲೆಗಳಲ್ಲಿ ಅಗತ್ಯ ಕ್ರಮ ಕೈಗೊಂಡು ಹೆಚ್ಚಿನ ಸಂಖ್ಯೆಯಲ್ಲಿ ಕ್ರೀಡಾಪಟುಗಳು ಅರ್ಜಿ ಸಲ್ಲಿಸಲು ವ್ಯಾಪಕ ಪ್ರಚಾರ ನೀಡಲು ಸೂಚಿಸಿದ್ದಾರೆ.

Read More

ಬೆಳಗಾವಿ : ರಾಜ್ಯದಲ್ಲಿ ಡೆಂಗ್ಯೂ ಅಬ್ಬರ ಮುಂದುವರೆದಿದ್ದು,  ಬೆಳಗಾವಿ ಜಿಲ್ಲೆಯಲ್ಲಿ ಡೆಂಗ್ಯೂ ಜ್ವರಕ್ಕೆ 11 ವರ್ಷದ ಬಾಲಕಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇ‍ಶ್ವರದ 11 ವರ್ಷದ ಶ್ರೇಯಾ ಕೃಷ್ಣಾ ದೇವದಾತೆ ಎಂಬ ಬಾಲಕಿ ಡೆಂಗ್ಯೂ ಜ್ವರದಿಂದ ಸಾವನ್ನಪ್ಪಿದ್ದಾಳೆ. ತೀವ್ರ ಜ್ವರದಿಂದ ಬಳಲುತ್ತಿದ್ದ ಶ್ರೇಯಾಳನ್ನು ಬಿಮ್ಸ್‌ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ ಎಂದು ಡಿಹೆಚ್‌ ಒ ಮಹೇಶ್‌ ಕೋಣಿ ಮಾಹಿತಿ ನೀಡಿದ್ದಾರೆ.

Read More

ನವದೆಹಲಿ : ಕೇಂದ್ರ ಸರ್ಕಾರವು ದೇಶದ ಹೆಣ್ಣುಮಕ್ಕಳ ಶಿಕ್ಷಣ, ಸೌಲಭ್ಯಕ್ಕಾಗಿ ಹಲವು ಯೋಜನೆಗಳನ್ನು ಜಾರಿಗೆ ತಂದಿದೆ. ಇದೀಗ ಹೆಣ್ಣು ಮಗುವಿಗೆ 27,00,000 ಲಕ್ಷ ರೂ.ಗಳನ್ನು ನೀಡುವ ಅದ್ಭುತ ಯೋಜನೆಯನ್ನು ಕೇಂದ್ರ ಸರ್ಕಾರ ಹೊಂದಿದೆ. ಅರ್ಜಿ ಸಲ್ಲಿಸುವುದು ಹೇಗೆ? ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಈ ಅಂಚೆ ಕಚೇರಿ ಯೋಜನೆಗಳಿಂದ ಮಕ್ಕಳಿಂದ ಹಿಡಿದು ವಯಸ್ಕರವರೆಗೆ ಎಲ್ಲರೂ ಪ್ರಯೋಜನ ಪಡೆಯುತ್ತಿದ್ದಾರೆ. ಈ ಯೋಜನೆಯನ್ನು ಪ್ರಧಾನಿ ನರೇಂದ್ರ ಮೋದಿ ಅವರು 2015 ರಲ್ಲಿ ಪ್ರಾರಂಭಿಸಿದರು ಮತ್ತು ಪ್ರಸ್ತುತ 8.2% ಬಡ್ಡಿದರವನ್ನು ಪಾವತಿಸುತ್ತಿದ್ದಾರೆ. ಈ ಯೋಜನೆಯಲ್ಲಿ, ಕನಿಷ್ಠ ರೂ. 1000 ರಿಂದ ಗರಿಷ್ಠ ರೂ. ನೀವು 150,000 ರೂ.ವರೆಗೆ ಹೂಡಿಕೆ ಮಾಡಬಹುದು. ಯೋಜನೆಯ ಸೆಕ್ಷನ್ 80 ಸಿ ಅಡಿಯಲ್ಲಿ ಆದಾಯ ತೆರಿಗೆ ರಿಯಾಯಿತಿಯನ್ನು ನೀಡಲಾಗುತ್ತದೆ. 10 ವರ್ಷಕ್ಕಿಂತ ಕಡಿಮೆ ವಯಸ್ಸಿನ ಹೆಣ್ಣುಮಕ್ಕಳಿಗೆ ಪೋಷಕರು ಈ ಯೋಜನೆಯಲ್ಲಿ ಹೂಡಿಕೆ ಮಾಡಬಹುದು. ಉಳಿತಾಯ ಯೋಜನೆಯಲ್ಲಿ ಹೂಡಿಕೆ ಮಾಡಲು ಅಗತ್ಯವಿರುವ ದಾಖಲೆಗಳು: 1) ಆಧಾರ್ ಕಾರ್ಡ್ 2) ಪ್ಯಾನ್ ಕಾರ್ಡ್ 3)…

Read More

ಬೆಂಗಳೂರು : ಇಂದು ರಾಜ್ಯದ ಹಲವಡೆ ಬೆಳ್ಳಂಬೆಳಗ್ಗೆ ಲೋಕಾಯಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ಬೆಂಗಳೂರಿನಲ್ಲಿ ಬಿಬಿಎಂಪಿ ಅಧಿಕಾರಿ ಬಸವರಾಜ ನಿವಾಸದಲ್ಲಿ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಲಕ್ಷಾಂತರ ರೂ. ಹಣ, ಚಿನ್ನಭರಣ ಹಾಗೂ ಹುಲಿ ಉಗುರುಗಳು ಪತ್ತೆಯಾಗಿವೆ. ಇಂದು ರಾಜ್ಯದ ಹಲವಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ಹಲವು ಅಧಿಕಾರಿಗಳ ಮನೆಗಳಲ್ಲಿ ದಾಖಲೆಗಳ ಪರಿಶೀಲನೆ ನಡೆಯುತ್ತಿದೆ. ಬೆಂಗಳೂರಿನ ಬಿಬಿಎಂಪಿ ಅಧಿಕಾರಿಯಾಗಿರುವವ ಬಸವರಾಜ ಮಾಗಿ ನಿವಾಸದಲ್ಲೂ ದಾಖಲೆಗಳ ಪರಿಶೀಲನೆ ನಡೆಸಲಾಗಿದ್ದು, ಕಂತೆ ಕಂತೆ ಹಣ, ಭಾರಿ ಚಿನ್ನಾಭರಣಗಳು, 2 ಹುಲಿ ಉಗುರು ಪತ್ತೆಯಾಗಿದೆ. ಜೊತೆಗೆ ತಲ್ವಾರ್, ಡ್ರ್ಯಾಗರ್ ಕೂಡ ಪತ್ತೆಯಾಗಿದೆ.ಅಲ್ಲದೇ 12.50 ಲಕ್ಷದ ಕ್ಯಾಸಿನೋ ಕಾಯಿನ್ಸ್ ಗಳು ಕೂಡ ಪತ್ತೆಯಾಗಿದೆ.

Read More