Author: kannadanewsnow57

ಯೂರೋ 2024 ರ ಸೆಮಿಫೈನಲ್ನಲ್ಲಿ ನೆದರ್ಲ್ಯಾಂಡ್ಸ್ ವಿರುದ್ಧ 2-1 ಗೋಲುಗಳ ಜಯದೊಂದಿಗೆ ಇಂಗ್ಲೆಂಡ್ ಫೈನಲ್ಗೆ ಪ್ರವೇಶಿಸಿದೆ. ಪ್ರಶಸ್ತಿ ಸುತ್ತಿನ ಪಂದ್ಯದಲ್ಲಿ ಅವರು ಮೂರು ಬಾರಿಯ ಚಾಂಪಿಯನ್ ಸ್ಪೇನ್ ತಂಡವನ್ನು ಎದುರಿಸಲಿದ್ದಾರೆ. ಫ್ರಾನ್ಸ್ ತಂಡವನ್ನು ಸೋಲಿಸಿ ಸ್ಪೇನ್ ಫೈನಲ್ ಪ್ರವೇಶಿಸಿತು. ಕ್ಸೇವಿ ಸಿಮನ್ಸ್ ಅವರ ಆರಂಭಿಕ ಗೋಲಿನ ಸಹಾಯದಿಂದ ನೆದರ್ಲ್ಯಾಂಡ್ಸ್ ಸೆಮಿಫೈನಲ್ನಲ್ಲಿ ಮುನ್ನಡೆ ಸಾಧಿಸಿದ್ದರಿಂದ ದಿನದ ಆರಂಭವು ಇಂಗ್ಲೆಂಡ್ಗೆ ಉತ್ತಮವಾಗಿರಲಿಲ್ಲ. ಆದಾಗ್ಯೂ, ಪಂದ್ಯವನ್ನು 2-1 ರಿಂದ ಗೆಲ್ಲುವ ಮೂಲಕ, ಅವರು ಅದ್ಭುತ ರೀತಿಯಲ್ಲಿ ದಿನವನ್ನು ಕೊನೆಗೊಳಿಸಿದರು. ಇಂಗ್ಲೆಂಡ್ ಸತತ ಎರಡನೇ ಆವೃತ್ತಿಯಲ್ಲಿ ಫೈನಲ್ ತಲುಪಿದೆ. ಅವರು ಕೊನೆಯ ಬಾರಿಗೆ 2021 ರಲ್ಲಿ ಇಟಲಿ ವಿರುದ್ಧದ ಪ್ರಶಸ್ತಿ ಪಂದ್ಯದಲ್ಲಿ ಸೋತರು. ಮಂಗಳವಾರ ಫ್ರಾನ್ಸ್ ತಂಡವನ್ನು 2-1 ಗೋಲುಗಳಿಂದ ಸೋಲಿಸಿದ ಸ್ಪೇನ್ ಫೈನಲ್ ಗೆ ತಯಾರಿ ನಡೆಸಲು ಹೆಚ್ಚುವರಿ 24 ಗಂಟೆಗಳ ಕಾಲಾವಕಾಶವನ್ನು ಪಡೆಯಲಿದೆ. ಜುಲೈ 14 ರಂದು ಇಂಗ್ಲೆಂಡ್ ಮತ್ತು ಸ್ಪೇನ್ ನಡುವಿನ ಯೂರೋ 2024 ಪ್ರಶಸ್ತಿ ಪಂದ್ಯ ನಡೆಯಲಿದೆ.

Read More

ಬೆಂಗಳೂರು : ಅಕ್ರಮ ಜಮೀನು ಮಾರಾಟಕ್ಕೆ ರಾಜ್ಯ ಸರ್ಕಾರ ಮಹತ್ವದ ಕ್ರಮ ಕೈಗೊಂಡಿದ್ದು, ಆರ್‌ ಟಿಸಿಗಳನ್ನು ಆಧಾರ್‌ ಗೆ ಲಿಂಕ್‌ ಮಾಡುವಂತೆ ಕಂದಾಯ ಸಚಿವ ಕೃಷ್ಣಬೈರೇಗೌಡ ಸೂಚಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಾದ್ಯಂತ ಸುಮಾರು 4 ಕೋಟಿ ಆರ್‌ಟಿಸಿ ಮಾಲೀಕರಿದ್ದಾರೆ. ಈ ಪೈಕಿ 1.92 ಕೋಟಿ ಆರ್‌ಟಿಸಿದಾರರನ್ನು ಸಂಪರ್ಕಿಸಿ ಆ ಪೈಕಿ 1.20 ಕೋಟಿ ಆರ್‌ಟಿಸಿಗಳ್ನು ಒಟಿಪಿ (One Time Password) ಮೂಲಕ ಇಕೆವೈಸಿ ಮಾಡಲಾಗಿದೆ. ಇನ್ನೂ ಮೈಸೂರು ವಿಭಾಗದಲ್ಲಿ 1.37 ಕೋಟಿ ಆರ್‌ಟಿಸಿ ಮಾಲೀಕರಿದ್ದು ಈ ಪೈಕಿ 36 ಲಕ್ಷ ಆರ್‌ಟಿಸಿಗಳನ್ನು ಮಾತ್ರ ಆಧಾರ್‌ ಜೊತೆಗೆ ಜೋಡಿಸಲಾಗಿದೆ. ಅಂದರೆ ಶೇ. 35 ರಷ್ಟು ಕೆಲಸ ಮಾತ್ರ ಆಗಿದ್ದು, ಇದು ಸಾಲದು. ಇದೇ ಜುಲೈ ತಿಂಗಳ ಒಳಗಾಗಿ ಆಧಾರ್‌ ಸೀಡಿಂಗ್‌ ವಿಚಾರದಲ್ಲಿ ಶೇ. 90 ರಷ್ಟು ಪ್ರಗತಿ ಸಾಧಿಸಬೇಕು” ಎಂದು ಅಧಿಕಾರಿಗಳಿಗೆ ತಾಕೀತು ಮಾಡಲಾಗಿದೆ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ತಿಳಿಸಿದರು. ಆರ್‌ಟಿಸಿಗಳನ್ನು ಆಧಾರ್‌ಗೆ ಲಿಂಕ್‌ ಮಾಡುವ ಮೂಲಕ ಯಾರದ್ದೋ…

Read More

ಅಲಹಾಬಾದ್: ಅಕ್ರಮ ಮತಾಂತರ ಪ್ರಕರಣದ ಆರೋಪಿಗೆ ಜಾಮೀನು ನಿರಾಕರಿಸಿದ ಅಲಹಾಬಾದ್ ಹೈಕೋರ್ಟ್, ಆತ್ಮಸಾಕ್ಷಿ ಮತ್ತು ಧಾರ್ಮಿಕ ಸ್ವಾತಂತ್ರ್ಯದ ಹಕ್ಕನ್ನು ಮತಾಂತರದ ಹಕ್ಕು ಎಂದು ಪರಿಗಣಿಸಲಾಗುವುದಿಲ್ಲ ಎಂದು ಅಭಿಪ್ರಾಯಪಟ್ಟಿದೆ. ಭಾರತದ ಸಂವಿಧಾನವು ನಾಗರಿಕರಿಗೆ ತಮ್ಮ ಧರ್ಮವನ್ನು ಪ್ರತಿಪಾದಿಸುವ, ಆಚರಿಸುವ ಮತ್ತು ಪ್ರಚಾರ ಮಾಡುವ ಹಕ್ಕನ್ನು ಅನುಮತಿಸುತ್ತದೆ, ಆದರೆ ಮತಾಂತರವನ್ನು ಅನುಮತಿಸುವುದಿಲ್ಲ ಎಂದು ನ್ಯಾಯಮೂರ್ತಿ ರೋಹಿತ್ ರಂಜನ್ ಅಗರ್ವಾಲ್ ಅಭಿಪ್ರಾಯಪಟ್ಟರು. ಸಂವಿಧಾನವು ಪ್ರತಿಯೊಬ್ಬ ವ್ಯಕ್ತಿಗೆ ತನ್ನ ಧರ್ಮವನ್ನು ಪ್ರತಿಪಾದಿಸುವ, ಆಚರಿಸುವ ಮತ್ತು ಪ್ರಚಾರ ಮಾಡುವ ಮೂಲಭೂತ ಹಕ್ಕನ್ನು ನೀಡುತ್ತದೆ. ಆದಾಗ್ಯೂ, ಆತ್ಮಸಾಕ್ಷಿ ಮತ್ತು ಧರ್ಮದ ಸ್ವಾತಂತ್ರ್ಯದ ವೈಯಕ್ತಿಕ ಹಕ್ಕನ್ನು ಮತಾಂತರದ ಸಾಮೂಹಿಕ ಹಕ್ಕನ್ನು ವ್ಯಾಖ್ಯಾನಿಸಲು ವಿಸ್ತರಿಸಲಾಗುವುದಿಲ್ಲ; ಧಾರ್ಮಿಕ ಸ್ವಾತಂತ್ರ್ಯದ ಹಕ್ಕು ಮತಾಂತರಗೊಳ್ಳುವ ವ್ಯಕ್ತಿಗೆ ಮತ್ತು ಮತಾಂತರಗೊಳ್ಳಲು ಬಯಸುವ ವ್ಯಕ್ತಿಗೆ ಸಮಾನವಾಗಿ ಸೇರಿದೆ” ಎಂದು ನ್ಯಾಯಾಲಯ ಹೇಳಿದೆ. ಮತಾಂತರ ಪ್ರಕ್ರಿಯೆಯನ್ನು ನಡೆಸಲು ಅನುಮತಿಸಿದರೆ, ಈ ದೇಶದ ಬಹುಸಂಖ್ಯಾತ ಜನಸಂಖ್ಯೆ ಒಂದು ದಿನ ಅಲ್ಪಸಂಖ್ಯಾತರಾಗುತ್ತಾರೆ, ಮತ್ತು ಮತಾಂತರ ನಡೆಯುತ್ತಿರುವ ಮತ್ತು ಭಾರತದ ನಾಗರಿಕರ ಧರ್ಮವನ್ನು ಬದಲಾಯಿಸುವ ಸ್ಥಳದಲ್ಲಿ…

Read More

ಬೆಂಗಳೂರು : ರಾಜ್ಯಾದ್ಯಂತ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ಭ್ರಷ್ಟ ಅಧಿಕಾರಿಗಳಿಗೆ ಶಾಕ್‌ ನೀಡಿದ್ದು, ರಾಜ್ಯಾದ್ಯಂತ 56 ಕಡೆ ದಾಳಿ ನಡೆಸಿದೆ.  ಬೆಂಗಳೂರು ಸೇರಿದಂತೆ ರಾಜ್ಯದ 56 ಕಡೆಗಳಲ್ಲಿ ವಿವಿಧ ಅಧಿಕಾರಿಗಳ ಮನೆಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ಏಕಕಾಲಕ್ಕೆ ದಾಳಿ ನಡೆಸಿದ್ದು, ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ. 11 ಸರ್ಕಾರಿ ಅಧಿಕಾರಿಗಳ ಮನೆಗಳ ಮೇಲೆ ದಾಳಿ ನಡೆಸಿರುವ ಲೋಕಾಯುಕ್ತ ಅಧಿಕಾರಿಗಳು ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ. ಕೋಲಾರದ ತಹಶೀಲ್ದಾರ್‌ ವಿಜಣ್ಣ, ಹಾಸನದಲ್ಲಿ ಗ್ರೇಡ್‌-1 ಕಾರ್ಯದರ್ಶಿ ಜಗದೀಶ್‌, ದಾವಣಗೆರೆಇಇ ಡಿ.ಹೆಚ್‌ ಉಮೇಶ್.‌ ಎಎಇಇ ಪ್ರಭಾಕರ್ ಮನೆಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ.

Read More

ಬೆಂಗಳೂರು : ರಾಜ್ಯಾದ್ಯಂತ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ಭ್ರಷ್ಟ ಅಧಿಕಾರಿಗಳಿಗೆ ಶಾಕ್‌ ನೀಡಿದ್ದು, ರಾಜ್ಯಾದ್ಯಂತ ೫೬ ಕಡೆ ದಾಳಿ ನಡೆಸಿದೆ.  ಬೆಂಗಳೂರು ಸೇರಿದಂತೆ ರಾಜ್ಯದ 56 ಕಡೆಗಳಲ್ಲಿ ವಿವಿಧ ಅಧಿಕಾರಿಗಳ ಮನೆಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ಏಕಕಾಲಕ್ಕೆ ದಾಳಿ ನಡೆಸಿದ್ದು, ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ. 11 ಸರ್ಕಾರಿ ಅಧಿಕಾರಿಗಳ ಮನೆಗಳ ಮೇಲೆ ದಾಳಿ ನಡೆಸಿರುವ ಲೋಕಾಯುಕ್ತ ಅಧಿಕಾರಿಗಳು ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Read More

ನವದೆಹಲಿ : ಕೇಂದ್ರ ಸರ್ಕಾರವು ಅಗತ್ಯವಿರುವವರು, ಬಡ ವರ್ಗಗಳು ಮತ್ತು ಆರ್ಥಿಕವಾಗಿ ದುರ್ಬಲ ಜನರಿಗೆ ವಿವಿಧ ಪ್ರಯೋಜನಕಾರಿ ಮತ್ತು ಕಲ್ಯಾಣ ಯೋಜನೆಗಳನ್ನು ನಡೆಸುತ್ತದೆ. ಇವುಗಳಲ್ಲಿ ಒಂದು ಆಯುಷ್ಮಾನ್ ಭಾರತ್ ಯೋಜನೆ, ಇದು ಆರೋಗ್ಯ ಯೋಜನೆಯಾಗಿದೆ. ಈ ಯೋಜನೆಯಡಿ, ಅರ್ಹ ಜನರಿಗೆ ಉಚಿತ ಚಿಕಿತ್ಸಾ ಸೌಲಭ್ಯವನ್ನು ಒದಗಿಸಲಾಗುತ್ತದೆ. ಇಲ್ಲಿಯವರೆಗೆ ಅನೇಕ ಜನರು ಈ ಯೋಜನೆಗೆ ಸೇರುವ ಮೂಲಕ ಪ್ರಯೋಜನ ಪಡೆದಿದ್ದಾರೆ ಮತ್ತು ಸಹ ನಡೆಯುತ್ತಿದೆ. ನೀವು ಇನ್ನೂ ಈ ಯೋಜನೆಯಲ್ಲಿ ಅರ್ಜಿ ಸಲ್ಲಿಸದಿದ್ದರೆ, ನೀವು ಅರ್ಹರಾಗಿದ್ದರೆ ಅದನ್ನು ಮಾಡಬಹುದು. ಅದೇ ಸಮಯದಲ್ಲಿ, ಅನೇಕ ಜನರು ಆಯುಷ್ಮಾನ್ ಕಾರ್ಡ್ಗೆ ಅರ್ಜಿ ಸಲ್ಲಿಸುತ್ತಾರೆ, ಆದರೆ ತಮ್ಮ ಹೆಸರು ಆಯುಷ್ಮಾನ್ ಕಾರ್ಡ್ ಪಟ್ಟಿಯಲ್ಲಿ ಬಂದಿದೆಯೇ ಅಥವಾ ಇಲ್ಲವೇ ಎಂದು ಪರಿಶೀಲಿಸಲು ಮರೆಯುತ್ತಾರೆ. ಅನೇಕ ಜನರಿಗೆ ಅದರ ಪ್ರಕ್ರಿಯೆಯ ಬಗ್ಗೆ ತಿಳಿದಿಲ್ಲ, ಇದರಿಂದಾಗಿ ಅವರು ಅದನ್ನು ಪರಿಶೀಲಿಸಲು ಸಾಧ್ಯವಾಗುವುದಿಲ್ಲ. ಆದ್ದರಿಂದ ನೀವು ಹೇಗೆ ಪರಿಶೀಲಿಸಬಹುದು ಎಂದು ತಿಳಿಯೋಣ ನೀವು ಆಯುಷ್ಮಾನ್ ಭಾರತ್ ಯೋಜನೆಗೆ ಸೇರಿದರೆ, ನಿಮ್ಮ ಆಯುಷ್ಮಾನ್ ಕಾರ್ಡ್…

Read More

ನವದೆಹಲಿ: ರಾಷ್ಟ್ರೀಯ ಪಿಂಚಣಿ ವ್ಯವಸ್ಥೆ (ಎನ್ಪಿಎಸ್) ಅಡಿಯಲ್ಲಿ ಬರುವ ಕೇಂದ್ರ ಸರ್ಕಾರಿ ನೌಕರರು ಶೀಘ್ರದಲ್ಲೇ ತಮ್ಮ ಕೊನೆಯ ವೇತನದ 50 ಪ್ರತಿಶತವನ್ನು ಪಿಂಚಣಿಯಾಗಿ ಪಡೆಯಬಹುದು ಎಂದು ವರದಿಯಾಗಿದೆ. ಈ ಉಪಕ್ರಮವನ್ನು ಅನ್ವೇಷಿಸಲು ಹಣಕಾಸು ಕಾರ್ಯದರ್ಶಿ ಟಿವಿ ಸೋಮನಾಥನ್ ನೇತೃತ್ವದ ಸಮಿತಿಯನ್ನು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಘೋಷಿಸಿದ ನಂತರ ಈ ಬೆಳವಣಿಗೆ ನಡೆದಿದೆ. ವೇತನ ಆಯೋಗದ ಶಿಫಾರಸುಗಳಿಗೆ ಅನುಗುಣವಾಗಿ ಆಜೀವ ಪಿಂಚಣಿಯಾಗಿ ಪಡೆದ ಕೊನೆಯ ವೇತನದ ಅರ್ಧದಷ್ಟು ನಿರ್ದಿಷ್ಟ ಪ್ರಯೋಜನವನ್ನು ಖಾತರಿಪಡಿಸುವ ಹಳೆಯ ಪಿಂಚಣಿ ಯೋಜನೆಗೆ (ಒಪಿಎಸ್) ಮರಳುವುದನ್ನು ಸರ್ಕಾರ ತಳ್ಳಿಹಾಕಿದೆ ಎಂದು ವರದಿ ತಿಳಿಸಿದೆ. ಎನ್ಪಿಎಸ್ ಒಂದು ವ್ಯಾಖ್ಯಾನಿತ ಕೊಡುಗೆ ಯೋಜನೆಯಾಗಿದ್ದು, ಇದರಲ್ಲಿ ನೌಕರರು ತಮ್ಮ ಮೂಲ ವೇತನದ ಶೇಕಡಾ 10 ರಷ್ಟು ಕೊಡುಗೆ ನೀಡುತ್ತಾರೆ ಮತ್ತು ಈ ಕೊಡುಗೆಯನ್ನು ಸರ್ಕಾರದಿಂದ 14 ಪ್ರತಿಶತದೊಂದಿಗೆ ಹೊಂದಿಸಲಾಗುತ್ತದೆ. ಸೋಮನಾಥನ್ ಸಮಿತಿಯು ಜಾಗತಿಕ ಅಭ್ಯಾಸಗಳನ್ನು ಪರಿಶೀಲಿಸಿತು ಮತ್ತು ಆಂಧ್ರಪ್ರದೇಶದಂತಹ ರಾಜ್ಯ ಸರ್ಕಾರಗಳು ತಂದ ಬದಲಾವಣೆಗಳಲ್ಲಿನ ಫಲಿತಾಂಶಗಳನ್ನು ಅಧ್ಯಯನ ಮಾಡಿದೆ ಎಂದು ವರದಿ ಹೇಳಿದೆ.…

Read More

ಕೊಪ್ಪಳ : ಶೀಘ್ರದಲ್ಲಿ ಹತ್ತು ಸಾವಿರ ಶಿಕ್ಷಕರ ನೇಮಕಕ್ಕೆ ಮುಖ್ಯಮಂತ್ರಿಗೆ ಪ್ರಸ್ತಾವ ಸಲ್ಲಿಸಲಾಗಿದೆ. ಶಾಲಾ-ಕಾಲೇಜುಗಳ ನಿರ್ಮಾಣವಲ್ಲದೆ ಶಿಕ್ಷಕರ ನೇಮಕಕ್ಕೂ ಆದ್ಯತೆ ನೀಡಲಾಗುತ್ತಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಎಸ್. ಮಧು ಬಂಗಾರಪ್ಪ ಹೇಳಿದರು. ಕೊಪ್ಪಳದ ಕುಕನೂರ್ ತಾಲೂಕಿನಲ್ಲಿ ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ನಾನು ಶಿಕ್ಷಣ ಇಲಾಖೆ ಸಚಿವನಾದ ವೇಳೆ 53 ಸಾವಿರ ಶಿಕ್ಷಕರ ಕೊರತೆಯಿತ್ತು. ನಮ್ಮ ಸರಕಾರ ಅಧಿಕಾರಕ್ಕೆ ಬಂದ ಹತ್ತು ತಿಂಗಳೊಳಗೆ 12,000 ಶಿಕ್ಷಕರ ನೇಮಕಾತಿ ಮಾಡಿದೆ. ಈಗ ಹತ್ತು ಸಾವಿರ ಶಿಕ್ಷಕರ ನೇಮಕಕ್ಕೆ ಮುಖ್ಯಮಂತ್ರಿಗೆ ಪ್ರಸ್ತಾವ ಸಲ್ಲಿಸಲಾಗಿದೆ ಎಂದು ಅವರು ತಿಳಿಸಿದರು. ಇಂದು ಅವರು, ಕುಕನೂರು ತಾಲೂಕಿನ ಕೋಮಲಾಪೂರ ಗ್ರಾಮದಲ್ಲಿ ಕೆಕೆಆರ್ಡಿಬಿ ಯೋಜನೆಯಡಿ ನಿರ್ಮಿಸಲಾದ ಪ್ರೌಢಶಾಲೆ ಉದ್ಘಾಟನೆ ಕಾರ್ಯಕ್ರಮಕ್ಕೆ ಆಗಮಿಸಿದ್ದ ವೇಳೆ ಮಾತನಾಡಿ, ಬಿಜೆಪಿ ತನ್ನ ಆಡಳಿತಾವಧಿಯಲ್ಲಿ 4,900 ಕಾಯಂ ಶಿಕ್ಷಕರನ್ನು ಮಾತ್ರ ನೇಮಿಸಿಕೊಂಡಿದೆ ಎಂದರು. ಕಳೆದ ಸಾಲಿನ ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆಯಲ್ಲಿ ಪಾರದರ್ಶಕತೆ ಕಾಪಾಡಿಕೊಳ್ಳಲಾಗಿದೆ. ಹೀಗಾಗಿ ಫಲಿತಾಂಶ ಕುಸಿದಿದೆ. ಮಕ್ಕಳ ಶಿಕ್ಷಣ ಸುಧಾರಿಸಲು ಇಂತಹ ಕ್ರಮ…

Read More

ತುಮಕೂರು : ಕರ್ನಾಟಕದಲ್ಲಿ ಇತ್ತೀಚಿನ ದಿನಗಳಲ್ಲು ಸೈಬರ್‌ ಅಪರಾಧ ಪ್ರಕರಣಗಳು ಹೆಚ್ಚಳವಾಗುತ್ತಿದ್ದು, ರಾಜ್ಯದಲ್ಲಿ ವರ್ಷಕ್ಕೆ 25 ಸಾವಿರಕ್ಕೂ ಹೆಚ್ಚು ಸೈಬರ್ ಅಪರಾಧ ಪ್ರಕರಣಗಳು ದಾಖಲಾಗುತ್ತಿವೆ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್‌ ಮಾಹಿತಿ ನೀಡಿದ್ದಾರೆ. ತುಮಕೂರಿನ ಪೊಲೀಸ್‌ ಟಾಣೆಯ ನೂತನ ಕಟ್ಟಡ, ಪೊಲೀಸ್‌ ಸಮುಚ್ಛಯಕ್ಕೆ ಶಿಲಾನ್ಯಾಸ ನೆರವೇರಿಸಿ ಮಾತನಾಡಿದ ಅವರು, ರಾಜ್ಯದಲ್ಲಿ ವರ್ಷಕ್ಕೆ 25 ಸಾವಿರಕ್ಕೂ ಹೆಚ್ಚು ಸೈಬರ್ ಅಪರಾಧ ಪ್ರಕರಣಗಳು ದಾಖಲಾಗುತ್ತಿವೆ, ಪ್ರಜ್ಞಾವಂತರೇ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗುತ್ತಿದ್ದಾರೆ. ಆಧುನಿಕ ಜಗತ್ತಿನಲ್ಲಿ ಜನರು ಹೆಚ್ಚು ಪ್ರಜ್ಞಾವಂತರಾಗಿದ್ದರೂ ಸಹ ಕೊಲೆ, ಅಪರಾಧಗಳು ನಡೆಯುತ್ತಲೇ ಇವೆ ಎಂದು ಆತಂಕ ವ್ಯಕ್ತಪಡಿಸಿದರು. ಹಣಕಾಸು ವ್ಯವಹಾರಗಳು ಡಿಜಿಟಲೀಕರಣದ ಮೂಲಕ ನಡೆಯುತ್ತಿದ್ದರೂ ರಾಜ್ಯದಲ್ಲಿ ಸೈಬರ್ ಅಪರಾಧಗಳ ಸಂಖ್ಯೆ ದಿನೇದಿನೆ ಹೆಚ್ಚುತ್ತಿವೆ ಎಂದರು. ರಾಜ್ಯವನ್ನು ಸರ್ವಜನಾಂಗದ ಶಾಂತಿಯ ತೋಟವನ್ನಾಗಿಸಲು ಪೊಲೀಸ್ ಇಲಾಖೆ ನಿರಂತರವಾಗಿ ಶ್ರಮಿಸುತ್ತಿದೆ. ಸಾರ್ವಜನಿಕರಿಗೆ ನ್ಯಾಯ ದೊರಕಿಸಿಕೊಡುವ ನಿಟ್ಟಿನಲ್ಲಿ ಕರ್ನಾಟಕ ಪೊಲೀಸ್ ದೇಶದಲ್ಲೇ ಮುಂಚೂಣಿಯಲ್ಲಿದೆ. ಇಲಾಖೆಯ ಸಿಬ್ಬಂದಿ ಮತ್ತು ಅವರ ಕುಟುಂಬಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ನಗರದ ಚಿಲುಮೆ ಸಮುದಾಯ…

Read More

ಬೀದರ್‌ : ಎಸ್‌ ಎಸ್‌ ಎಲ್‌ ಸಿ ಪರೀಕ್ಷೆ-2 ಫಲಿತಾಂಶ ನಿನ್ನೆ ಪ್ರಕಟಗೊಂಡಿದ್ದು, ಪರೀಕ್ಷೆಯಲ್ಲಿ ಫೇಲ್‌ ಆಗಿದ್ದಕ್ಕೆ ಮನನೊಂದು ವಿದ್ಯಾರ್ಥಿನಿಯೊಬ್ಬಳು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಬೀದರ್‌ ಜಿಲ್ಲೆಯ ಚಿಟಗುಪ್ಪ ತಾಲೂಕಿನ ವಳಕಿಂಡಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಎಸ್‌ ಎಸ್‌ ಎಲ್‌ ಸಿ ಪರೀಕ್ಷೆಯಲ್ಲಿ ಫೇಲ ಆದ ಹಿನ್ನೆಲೆಯಲ್ಲಿ ಮನನೊಂದು ವಳಕಿಂಡಿ ಗ್ರಾಮದ ಪ್ರಕೃತಿ ಅಶೋಕ್‌ ಮಾನಕಾರ (16) ವಿದ್ಯಾರ್ಥಿನಿ ಮನೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

Read More