Author: kannadanewsnow57

ಮೈಸೂರು : ರಾಜ್ಯದಲ್ಲಿ ಭಾರೀ ಸದ್ದು ಮಾಡುತ್ತಿರುವ ಮೈಸೂರು ಅಭಿವೃದ್ಧಿ ಪ್ರಾಧಿಕಾರ (ಮುಡಾ)ದ ನಿವೇಶನ ಹಂಚಿಕೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮದ ಕುರಿತು ಹೈಕೋರ್ಟ್‌ ಸಿಜೆಗೆ ದೂರು ನೀಡಲಾಗಿದೆ. ಮುಡಾ ನಿವೇಶನ ಅಕ್ರಮಕ್ಕೆ ಸಂಬಂಧಿಸಿದಂತೆ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಹೈಕೋರ್ಟ್‌ ಸಿಜೆ ಮತ್ತು ರಾಜ್ಯಪಾಲರಿಗೆ ಬಿಜೆಪಿ ಶಾಸಕ ಟಿ.ಎಸ್.‌ ಶ್ರೀವತ್ಸ ಅವರು ದೂರು ನೀಡಿದ್ದು, ಈ ಸಂಬಂಧ ಅಗತ್ಯ ದಾಖಲೆಗಳನ್ನೂ ಸಲ್ಲಿಸಿದ್ದಾರೆ. ಮುಡಾ ನಿವೇಶನ ಅಕ್ರಮದ ಕುರಿತು ಸಂಪೂರ್ಣ ದಾಖಲೆಗಳಿದ್ದು, ಅವಕಾಶ ನೀಡಿದ್ರೆ ಖುದ್ದು ಹಾಜರಾಗಿ ಪ್ರಕರಣದ ಸಂಪೂರ್ಣ ವಿವರ ನೀಡುವುದಾಗಿ ಮನವಿ ಮಾಡಿದ್ದಾರೆ.

Read More

ಬೆಂಗಳೂರು : ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳ ಕುರಿತು ಸಮೀಕ್ಷೆ ನಡೆಸುವಂತೆ ಜಿಲ್ಲಾಧಿಕಾರಿಗಳ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ಗ್ಯಾರಂಟಿ ಯೋಜನೆಗಳ ಕುರಿತು ಜಾಗೃತಿ ಮೂಡಿಸಲು ಹಾಗೂ ಫಲಾನುಭವಿಗಳಿಂದ ಪ್ರತಿಕ್ರಿಯೆ ಪಡೆಯಲು ಸಮೀಕ್ಷೆ ಕಾರ್ಯವನ್ನು ಚುರುಕುಗೊಳಿಸಬೇಕು. ರಾಜ್ಯದಲ್ಲಿ 84,52,317 ಕುಟುಂಬಗಳ ಸುಮಾರು 5 ಕೋಟಿ ಜನರ ಸಮೀಕ್ಷೆ ನಡೆಸಬೇಕಾಗಿದೆ ಎಂದು ತಿಳಿಸಿದ್ದಾರೆ. ಇನ್ನೂ ರಾಜ್ಯದಲ್ಲಿ 4,37,23,911 ಜನರು ಬಿಪಿಎಲ್ ಕಾರ್ಡ್ ಸೌಲಭ್ಯ ಪಡೆಯುತ್ತಿದ್ದು, ಶೇ.80ರಷ್ಟು ಕುಟುಂಬಗಳು ಬಿಪಿಎಲ್ ಅಡಿಯಲ್ಲಿವೆ. 1.27 ಕೋಟಿ ಬಿಪಿಎಲ್ ಕುಟುಂಬಗಳಿವೆ. ಹೊಸ ಕಾರ್ಡ್‌ಗಳಿಗೆ 2.95 ಲಕ್ಷ ಅರ್ಜಿ ಬಾಕಿಯಿದೆ. ನೀತಿ ಆಯೋಗದ ಪ್ರಕಾರ ರಾಜ್ಯದಲ್ಲಿ ಬಡವರ ಸಂಖ್ಯೆ ಕಡಿಮೆಯಾಗಿದ್ದರೂ, ಬಿಪಿಎಲ್ ಕಾರ್ಡ್ ಪ್ರಮಾಣ ಕಡಿಮೆಯಾಗದಿರಲು ಕಾರಣವೇನು? ತಮಿಳುನಾಡಿನಲ್ಲಿ ಬಿಪಿಎಲ್ ಪ್ರಮಾಣ ಶೇ. 40ರಷ್ಟಿದೆ. ಈ ಕುರಿತು ಪರಿಶೀಲನೆ ನಡೆಸಿ, ಅನರ್ಹರನ್ನು ಕೈಬಿಡುವ ಕಾರ್ಯ ನಡೆಯಬೇಕು. ಇದೇ ರೀತಿ ಮೃತ ಸದಸ್ಯರ ಹೆಸರು ತೆಗೆದು ಹಾಕುವ ಪ್ರಕ್ರಿಯೆ ತ್ವರಿತಗೊಳಿಸಬೇಕು ಎಂದು ಹೇಳಿದ್ದಾರೆ.

Read More

ಬೆಂಗಳೂರು : ಜಮೀನು ಮಾರಾಟದಲ್ಲಿ ವಂಚನೆ ತಡೆಯಲು ಪಹಣಿ-ಆಧಾ‌ರ್ ಜೋಡಣೆ ಕೈಗೊಳ್ಳಲಾಗುತ್ತಿದೆ. ಇದನ್ನು ಶೀಘ್ರವೇ ಪೂರ್ಣಗೊಳಿಸಬೇಕು ಎಂದು ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ವಿಧಾನಸೌಧದಲ್ಲಿ ಸೋಮವಾರ ಜಿಲ್ಲಾಧಿಕಾರಿಗಳು, ಜಿ.ಪಂ ಸಿಇಓಗಳೊಂದಿಗೆ ನಡೆದ ಸಭೆ ವೇಳೆ ಕಂದಾಯ ಇಲಾಖೆಗೆ ಸಂಬಂಧಿಸಿದ ಪ್ರಗತಿ ಪರಿಶೀಲನೆ ನಡೆಸಿದ ಅವರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಒಬ್ಬರು ಮೂರ್ನಾಲ್ಕು ದಶಕಗಳಿಂದ ಜಮೀನು ಸಾಗುವಳಿ ಮಾಡುತ್ತಿದ್ದು, ಅದಕ್ಕೆ ಬೇರೆ ವ್ಯಕ್ತಿಗಳು ಭೂ ಮಂಜೂರಾತಿ ಮಾಡಿಸಿಕೊಳ್ಳುವ ಪ್ರಕರಣಗಳು ಹೆಚ್ಚಾಗುತ್ತಿದ್ದು, ಇಂತಹ ಸ್ಥಳಕ್ಕೆ ಭೇಟಿ ನೀಡಿ, ಮಹಜರು ನಡೆಸಿ, ಭೂಮಂಜೂರಾತಿ ರದ್ದುಪಡಿಸಬೇಕು. ಭೂಮಿಯ ಸ್ವಾಧೀನ ಹೊಂದಿರುವವರಿಗೆ ಮಂಜೂರು ಮಾಡಬೇಕು. ಪೋಡಿ ಮತ್ತು ದುರುಸ್ ಪ್ರಕರಣಗಳು ಬಹಳ ಸಂಖ್ಯೆಯಲ್ಲಿ ಬಾಕಿ ಇರುವುದರಿಂದ, ಅಭಿಯಾನ ಮಾದರಿಯಲ್ಲಿ ಪೂರ್ಣಗೊಳಿಸಬೇಕು ಎಂದು ಹೇಳಿದ್ದಾರೆ. ಭೂ ಸುರಕ್ಷಾ ಕಾರ್ಯಕ್ರಮದಡಿ ಎಲ್ಲ ದಾಖಲೆಗಳನ್ನು ಸ್ಕ್ಯಾನ್ ಮಾಡಿ, ಇಂಡೆಕ್ಸ್ ಮಾಡಿ ಡಿಜಿಟಲೀಕರಣ ಮಾಡಲಾಗಿದೆ. ಈ ವರೆಗೆ 3.28 ಕೋಟಿ ಪುಟಗಳನ್ನು ಸ್ಕ್ಯಾನ್ ಮಾಡಲಾಗಿದೆ. 31 ತಾಲ್ಲೂಕಿನಲ್ಲಿ ಪ್ರಾಯೋಗಿಕವಾಗಿ ಕೈಗೆತ್ತಿಕೊಳ್ಳಲಾಗಿದ್ದು, ಆಗಸ್ಟ್‌ನಲ್ಲಿ ಎಲ್ಲ…

Read More

ಬೆಂಗಳೂರು : LKG, UKG ಮತ್ತು 1ನೇ ತರಗತಿಗೆ ಮಕ್ಕಳ ಶಾಲಾ ಪ್ರವೇಶ ದಾಖಲಾತಿಗೆ ಅರ್ಹ ಗರಿಷ್ಟ ವಯೋಮಾನವನ್ನು ಪರಿಷ್ಕರಿಸುವ ಬಗ್ಗೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಮೇಲೆ ಓದಲಾದ ಕ್ರಮಾಂಕ (1)ರ ಸರ್ಕಾರದ ಆದೇಶದಲ್ಲಿ ಶಿಕ್ಷಣ ಹಕ್ಕು ಕಾಯ್ದೆ-2009 ಮತ್ತು ಕಡ್ಡಾಯ ಶಿಕ್ಷಣ ನಿಯಮಗಳು 2012ರಂತೆ ಶೈಕ್ಷಣಿಕ ವರ್ಷದ ಜೂನ್ ಒಂದನೇ ತಾರೀಖಿಗೆ ಕಡ್ಡಾಯವಾಗಿ 06 ವರ್ಷಗಳು ಪೂರ್ಣಗೊಂಡಿರುವ ಮಗುವನ್ನು ಒಂದನೇ ತರಗತಿಗೆ ದಾಖಲಿಸಲು ವಯೋಮಿತಿಯನ್ನು ನಿಗಧಿಪಡಿಸಲಾಗಿರುತ್ತದೆ. ಮೇಲೆ ಓದಲಾದ ಕ್ರಮಾಂಕ (2)ರಲ್ಲಿ ಸರ್ಕಾರದ ಆದೇಶ ಸಂಖ್ಯೆ:ಇಪಿ 260 ಪಿಜಿಸಿ 2021, ದಿನಾಂಕ:26.07.2022ರ ಆದೇಶದಲ್ಲಿ ಜೂನ್ ಒಂದನೇ ತಾರೀಖಿಗೆ ಕಡ್ಡಾಯವಾಗಿ 06 ವರ್ಷಗಳು ಪೂರ್ಣಗೊಂಡಿರುವ ಮಗುವನ್ನು ಒಂದನೇ ತರಗತಿಗೆ ದಾಖಲಿಸಲು ವಯೋಮಿತಿಯನ್ನು ನಿಗಧಿಪಡಿಸಲಾಗಿರುವುದನ್ನು 2025-26ನೇ ಶೈಕ್ಷಣಿಕ ಸಾಲಿನಿಂದ ಅನ್ವಯವಾಗುವಂತೆ ತಿದ್ದುಪಡಿ ಮಾಡಿ ಆದೇಶಿಸಲಾಗಿರುತ್ತದೆ. ಮೇಲೆ ಓದಲಾದ ಕ್ರಮಾಂಕ (3)ರ ಆಯುಕ್ತರು, ಶಾಲಾ ಶಿಕ್ಷಣ ಇಲಾಖೆ, ಬೆಂಗಳೂರು ಇವರ ಪತ್ರದಲ್ಲಿ LKG, UKG ಮತ್ತು 01ನೇ ತರಗತಿ ಪ್ರವೇಶಕ್ಕೆ ಈಗಾಗಲೇ ದಾಖಲಾತಿಗೆ…

Read More

ಬೆಂಗಳೂರು : ರಾಜ್ಯದ ರೈತರಿಗೆ ಸಿಎಂ ಸಿದ್ದರಾಮಯ್ಯ ಸಿಹಿಸುದ್ದಿ ನೀಡಿದ್ದು, ಗಂಗಾ ಕಲ್ಯಾಣ ಯೋಜನೆಯಡಿ ವಿದ್ಯುತ್ ಸಂಪರ್ಕ ಕಲ್ಪಿಸದೆ ಬಾಕಿ ಉಳಿದಿರುವ ಪಂಪ್ ಸೆಟ್‌ಗಳಿಗೆ ಶೀಘ್ರ ವಿದ್ಯುತ್ ಸಂಪರ್ಕ ಒದಗಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.  ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸೋಮವಾರ ನಡೆದ ಡಿಸಿಗಳು ಮತ್ತು ಸಿಇಒಗಳು ಹಾಗೂ ಉಸ್ತುವಾರಿ ಕಾರ್ಯದರ್ಶಿಗಳ ಸಭೆಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಈ ವರ್ಷ ಮಳೆಯಿಂದ ಮನೆ, ಬೆಳೆ ಹಾನಿ ಆಗಿರುವವರಿಗೆ ಎಸ್.ಡಿ.ಆರ್.ಎಫ್ ಪ್ರಕಾರ ಪರಿಹಾರವನ್ನು ಕೂಡಲೇ ಇತ್ಯರ್ಥ ಮಾಡಬೇಕು.ಗಂಗಾ ಕಲ್ಯಾಣ ಯೋಜನೆಯಡಿ ವಿದ್ಯುತ್ ಸಂಪರ್ಕ ಕಲ್ಪಿಸದೆ ಬಾಕಿ ಉಳಿದಿರುವ ಪಂಪ್ ಸೆಟ್‌ಗಳಿಗೆ ಶೀಘ್ರ ವಿದ್ಯುತ್ ಸಂಪರ್ಕ ಒದಗಿಸಬೇಕು ಎಂದು ಹೇಳಿದ್ದಾರೆ. ಬುಡಕಟ್ಟು ಜನರಿಗೆ ಅರಣ್ಯ ಜಮೀನು ಮಂಜೂರು ಮಾಡಲು 26,126 ಅರ್ಜಿಗಳು ಬಾಕಿ ಇವೆ. ಇವುಗಳನ್ನು ತ್ವರಿತವಾಗಿ ವಿಲೇವಾರಿ ಮಾಡಬೇಕು. ಅವರ ಹಾಡಿಗಳಿಗೆ ಹೋಗಲು ರಸ್ತೆ ಸಂಪರ್ಕ ಇರುವುದಿಲ್ಲ. ಈ ಬಗ್ಗೆ ಸೂಕ್ತ ಸುತ್ತೋಲೆ ಹೊರಡಿಸಿ ಅಗತ್ಯ ಮೂಲಸೌಕರ್ಯ ಒದಗಿಸಿ. ರಾಜ್ಯದಲ್ಲಿ 2225 ಗ್ರಾಮಗಳು…

Read More

ಬೆಂಗಳೂರು : ಚುನಾವಣೆ ನೀತಿ ಸಂಹಿತೆಯಿಂದಾಗಿ ಜೂನ್‌ ತಿಂಗಳ ಗೃಹಲಕ್ಷ್ಮಿ ಹಣ ಸ್ಪಲ್ಪ ತಡವಾಗಿದೆ. ಇಂದು ಅಥವಾ ನಾಳೆ ಬಿಡುಗಡೆಯಾಗಲಿದೆ. ಜುಲೈ ತಿಂಗಳದ್ದು ಇದೇ 15ರೊಳಗೆ ಪಾವತಿಯಾಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ತಿಳಿಸಿದ್ದಾರೆ. ಇನ್ನೂ ಸಾಕಷ್ಟು ಜನ ಬ್ಯಾಂಕ್ ನಲ್ಲಿ ಖಾತೆ (Bank Account) ಹೊಂದಿದ್ದರು ಕೂಡ ಆಧಾರ ಸೀಡಿಂಗ್ (Aadhar seeding) ಮಾಡಿಕೊಂಡಿಲ್ಲ. ಹೀಗಾಗಿ ಅವರಿಗೆ ಹಣ ಬರುತ್ತಿಲ್ಲ. ಗೃಹಲಕ್ಷ್ಮಿ ಯೋಜನೆಯಡಿ ನೋಂದಾಯಿಸಿಕೊಂಡರೂ ಸಹಾಯಧನ ಪಾವತಿಯಾಗದ ಫಲಾನುಭವಿಗಳು ಕೂಡಲೇ ಅರ್ಜಿಯೊಂದಿಗೆ ಇ-ಕೆವೈಸಿ ಸಂಬಂಧಿತ ಸಮಸ್ಯೆಗಳನ್ನು ಬ್ಯಾಂಕ್‌ಗಳಲ್ಲಿ ಪರಿಹರಿಸಿಕೊಳ್ಳಬೇಕು. ಬಳಿಕ ನ್ಯಾಯಬೆಲೆ ಅಂಗಡಿಗಳಿಗೆ ಹೋಗಿ, ಇ-ಕೆವೈಸಿ ಅಪ್‌ಡೇಟ್‌ ಮಾಡಿಸಿ, ದೃಢೀಕರಣ ಪಡೆದು ಅವುಗಳನ್ನು ತಮ್ಮ ಸಮೀಪದ ನ್ಯಾಯಬೆಲೆ ಅಂಗಡಿ ಕೇಂದ್ರಗಳ ಕಾರ್ಯಕರ್ತೆಯರಿಗೆ ಒದಗಿಸಿದರೆ, ಸಹಾಯಧನ ಪಾವತಿಸಲು ಕ್ರಮವಹಿಸಲಾಗುವುದು ಎನ್ನಲಾಗಿದೆ. https://twitter.com/KarnatakaVarthe/status/1810286391693066744?ref_src=twsrc%5Etfw%7Ctwcamp%5Etweetembed%7Ctwterm%5E1810286391693066744%7Ctwgr%5Ebbc6202f3887d6a920fcffd031858c3d08062e53%7Ctwcon%5Es1_c10&ref_url=https%3A%2F%2Fapi-news.dailyhunt.in%2F

Read More

ಬೆಂಗಳೂರು : ಆಗಸ್ಟ್-15ರ ಸ್ವಾತಂತ್ರ್ಯ ದಿನಾಚರಣೆ ಮತ್ತು ನವೆಂಬರ್- 260 ಸಂವಿಧಾನದ ದಿನಾಚರಣೆ ಸಂದರ್ಭದಲ್ಲಿ ಡಾ.ಬಿ.ಆರ್ ಅಂಬೇಡ್ಕ‌ರವರ ಭಾವಚಿತ್ರವನ್ನು ಕಡ್ಡಾಯವಾಗಿ ಇಡಬೇಕು ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಉಲ್ಲೇಖಿತ ಸುತ್ತೋಲೆಯಲ್ಲಿ ಸೂಚಿಸಿರುವಂತೆ, ಜನವರಿ 26ರ ಗಣರಾಜ್ಯೋತ್ಸವ ದಿನದೊಂದಿಗೆ ಆಗಸ್ಟ್-15ರ ಸ್ಥಾತಂತ್ರ್ಯ ದಿನಾಚರಣೆಯಂದು ಕೂಡ ರಾಜ್ಯದ ಎಲ್ಲಾ ಸರ್ಕಾರಿ ಕಛೇರಿಗಳು, ಸರ್ಕಾರಿ ಸ್ವಾಮ್ಯಕ್ಕೆ ಒಳಪಡುವ ಸಂಸ್ಥೆಗಳು ಹಾಗೂ ಶಾಲಾ ಕಾಲೇಜು ಸೇರಿದಂತೆ ಸರ್ಕಾರದ ವತಿಯಿಂದ ನಡೆಯುವ ಎಲ್ಲಾ ಸಮಾರಂಭಗಳಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಭಾವಚಿತ್ರದೊಂದಿಗೆ ಸಂವಿಧಾನದ ಪಿತಾಮಹ, ಭಾರತ ರತ್ನ ಡಾ।।ಬಿ.ಆರ್.ಅಂಬೇಡ್ಕರ್ ರವರ ಭಾವಚಿತ್ರವನ್ನು ಸಹ ಕಡ್ಡಾಯವಾಗಿ ಇಡುವಂತೆ ಸೂಚಿಸಿದೆ. ಮುಂದುವರೆದು, ನವೆಂಬರ್-26ರ ಸಂವಿಧಾನದ ದಿನಾಚರಣೆ ಸಂದರ್ಭದಲ್ಲಿ ಮೇಲ್ಕಂಡ ಎಲ್ಲಾ ಸಂಸ್ಥೆಗಳು, ಶಾಲಾ ಕಾಲೇಜು ಹಾಗೂ ಸರ್ಕಾರಿ ಕಛೇರಿಗಳಲ್ಲಿ ಸಂವಿಧಾನದ ಪಿತಾಮಹ, ಭಾರತ ರತ್ನ ಡಾ।।ಬಿ.ಆರ್.ಅಂಬೇಡ್ಕರ್ ರವರ ಭಾವಚಿತ್ರವನ್ನು ಕಡ್ಡಾಯವಾಗಿ ಇಡುವಂತೆ ಸೂಚಿಸಿದೆ.

Read More

ಬೆಂಗಳೂರು : ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಕೆಲವು ದಿನಗಳಿಂದ ನಿರಂತರವಾಗಿ ಮಳೆಯಾಗುತ್ತಿದ್ದು, ಹವಾಮಾನ ಇಲಾಖೆಯ ರೆಡ್ ಅಲರ್ಟ್ ಮುನ್ಸೂಚನೆಯಂತೆ ಮಳೆಯ ತೀವ್ರತೆ ಹೆಚ್ಚಾಗುವುದರಿಂದ ಮುಂಜಾಗೃತ ಕ್ರಮವಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ದಿನಾಂಕ:09.07.2024 ರಂದು ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ತಾಲೂಕಿನ ಅಂಗನವಾಡಿ ಕೇಂದ್ರಗಳಿಗೆ, ಹಾಗೂ ಪ್ರಾಥಮಿಕ, ಪ್ರೌಢ ಶಾಲೆ, ಪದವಿ ಪೂರ್ವ ಕಾಲೇಜುಗಳ ವಿದ್ಯಾರ್ಥಿಗಳಿಗೆ ರಜೆಯನ್ನು ಘೋಷಿಸಲಾಗಿರುತ್ತದೆ. ಉಳಿದಂತೆ ಎಲ್ಲಾ ಪದವಿ, ಸ್ನಾತಕೊತ್ತರ ಪದವಿ, ಡಿಪ್ಲೋಮ, ಇಂಜಿನಿಯರಿಂಗ್, ಐ.ಟಿ.ಐ ಗಳಿಗೆ ರಜೆ ಘೋಷಿಸಿರುವುದಿಲ್ಲ. ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಸೋಮವಾರ ಬೆಳಗ್ಗೆ ಉಡುಪಿ ನಗರದ ಹಲವು ಪ್ರದೇಶಗಳಲ್ಲಿ ಕೃತಕ ನೆರೆ ಸೃಷ್ಟಿಯಾಗಿದ್ದು, ನೂರಾರು ಮನೆಗಳು ಜಲಾವೃತಗೊಂಡಿವೆ. ಇದರಿಂದ ನಗರದಲ್ಲಿ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಹಲವು ಅಂಗಡಿಗಳಿಗೆ ನೀರು ನುಗ್ಗಿದ ಪರಿಣಾಮ ಸೊತ್ತುಗಳು ಹಾನಿಯಾಗಿ ಲಕ್ಷಾಂತರ ರೂ. ನಷ್ಟ ಉಂಟಾಗಿದೆ. ನೆರೆ ಯಿಂದ ಸಿಲುಕಿರುವ ಮನೆಗಳಿಂದ 30ಕ್ಕೂ ಅಧಿಕ ಮಂದಿಯನ್ನು ಅಗ್ನಿಶಾಮಕ ದಳ, ನಗರಸಭೆ ಸಿಬ್ಬಂದಿ ರಕ್ಷಿಸಿ…

Read More

ನವದೆಹಲಿ: ಸಂದೇಶ್ಖಾಲಿಯಲ್ಲಿ ಮಹಿಳೆಯರ ವಿರುದ್ಧದ ಅಪರಾಧಗಳು ಮತ್ತು ಭೂ ಕಬಳಿಕೆ ಆರೋಪಗಳ ಬಗ್ಗೆ ಸಿಬಿಐ ತನಿಖೆಗೆ ನಿರ್ದೇಶಿಸಿದ ಕಲ್ಕತ್ತಾ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಪಶ್ಚಿಮ ಬಂಗಾಳ ಸರ್ಕಾರ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ ವಜಾಗೊಳಿಸಿದೆ. “ಯಾರನ್ನಾದರೂ ರಕ್ಷಿಸಲು ರಾಜ್ಯವು ಏಕೆ ಆಸಕ್ತಿ ವಹಿಸಬೇಕು?” ಎಂದು ನ್ಯಾಯಮೂರ್ತಿಗಳಾದ ಬಿ.ಆರ್.ಗವಾಯಿ ಮತ್ತು ಕೆ.ವಿ.ವಿಶ್ವನಾಥನ್ ಅವರ ನ್ಯಾಯಪೀಠ ಅಭಿಪ್ರಾಯಪಟ್ಟಿದೆ, ವಿಚಾರಣೆಯ ಕೊನೆಯ ದಿನಾಂಕದಂದು, ಸುಪ್ರೀಂ ಕೋರ್ಟ್ ಈ ನಿರ್ದಿಷ್ಟ ಪ್ರಶ್ನೆಯನ್ನು ಕೇಳಿದ ನಂತರ ಈ ವಿಷಯವನ್ನು ಮುಂದೂಡಬೇಕು ಎಂದು ರಾಜ್ಯದ ಪರ ವಕೀಲರು ಹೇಳಿದರು. ” ಕಲ್ಕತ್ತಾ ಹೈಕೋರ್ಟ್ನ ಏಪ್ರಿಲ್ 10 ರ ಆದೇಶವನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿದ್ದ ಮನವಿಯನ್ನು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸಿತು. ಏಪ್ರಿಲ್ 29 ರಂದು ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಕೆಲವು ಖಾಸಗಿ ವ್ಯಕ್ತಿಗಳ ಹಿತಾಸಕ್ತಿಯನ್ನು ರಕ್ಷಿಸಲು ರಾಜ್ಯವು ಏಕೆ ಅರ್ಜಿದಾರರಾಗಿ ಬರಬೇಕು ಎಂದು ಪಶ್ಚಿಮ ಬಂಗಾಳ ಸರ್ಕಾರವನ್ನು ಕೇಳಿತ್ತು. ಹೈಕೋರ್ಟ್ ಆದೇಶವು ಪೊಲೀಸ್ ಪಡೆ…

Read More

ಹಾವೇರಿ : ರಾಜ್ಯದಲ್ಲಿ ಡೆಂಗ್ಯೂ ಜ್ವರದ ಅಬ್ಬರದ ನಡುವೆ ಇಲಿ ಜ್ವರದ ಆತಂಕ ಎದುರಾಗಿದ್ದು, ಹಾವೇರಿ ಜಿಲ್ಲೆಯಲ್ಲಿ ಇಲಿ ಜ್ವರಕ್ಕೆ ಮೊದಲ ಬಲಿಯಾಗಿದೆ.  ಹಾವೇರಿ ಜಿಲ್ಲೆಯ ಹಾನಗಲ್ಲ ತಾಲೂಕಿನ ಅರಳೇಶ್ವರ  ಗ್ರಾಮದ ಉಮೇಶ್‌ (೭೨) ಇಲಿಜ್ವರದಿಂದ ಮೃತಪಟ್ಟಿದ್ದಾರೆ. ಇಲಿ ಜ್ವರ ದೃಢಪಟ್ಟ ಹಿನ್ನೆಲೆಯಲ್ಲಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಎರಡು ದಿನಗಳ ಹಿಂದೆಯೇ ಮೃತಪಟ್ಟಿದ್ದಾರೆ. ಇನ್ನೂ ಹಾವೇರಿ ತಾಲೂಕಿನಲ್ಲೂ ಬಾಲಕನಿಗೆ ಇಲಿ ಜ್ವರ ದೃಢಪಟ್ಟಿದ್ದು, ಹಾವೇರಿಯ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

Read More