Author: kannadanewsnow57

ಬೆಂಗಳೂರು : ಕೌನ್ಸಿಲ್ ಫಾರ್ ದಿ ಇಂಡಿಯನ್ ಸ್ಕೂಲ್ ಸರ್ಟಿಫಿಕೇಟ್ ಎಕ್ಸಾಮಿನೇಷನ್ಸ್ (ಸಿಐಎಸ್ಸಿಇ) ಮಂಗಳವಾರ ತನ್ನ ಸದಸ್ಯ ಶಾಲೆಗಳಿಗೆ ಕರ್ನಾಟಕದಲ್ಲಿ ಕನ್ನಡವನ್ನು ಪ್ರಥಮ ಅಥವಾ ದ್ವಿತೀಯ ಭಾಷೆಯಾಗಿ ಕಲಿಸುವಂತೆ ತನ್ನ ಸದಸ್ಯ ಶಾಲೆಗಳಿಗೆ ನಿರ್ದೇಶನ ನೀಡಿದೆ. ಕನ್ನಡ ಭಾಷಾ ಕಲಿಕಾ ಕಾಯ್ದೆ 2015ರ ಅಡಿಯಲ್ಲಿ ಅಧಿಸೂಚಿತವಾಗಿರುವ ಕರ್ನಾಟಕ ಶಿಕ್ಷಣ ಸಂಸ್ಥೆಗಳ (ನೋ ಅಬ್ಜೆಕ್ಷನ್ ಸರ್ಟಿಫಿಕೇಟ್ ಮತ್ತು ಕಂಟ್ರೋಲ್) ನಿಯಮಗಳಲ್ಲಿ, ಐಸಿಎಸ್ಇ ಮತ್ತು ಸಿಬಿಎಸ್ಇ ಶಾಲೆಗಳಲ್ಲಿ ಕನ್ನಡವನ್ನು ಪ್ರಥಮ ಅಥವಾ ದ್ವಿತೀಯ ಭಾಷೆಯಾಗಿ ಕಲಿಸುವುದನ್ನು ರಾಜ್ಯ ಸರ್ಕಾರ ಕಡ್ಡಾಯಗೊಳಿಸಿದೆ. ಅನೇಕ ಶಾಲೆಗಳು ಈ ನಿಯಮವನ್ನು ವಿರೋಧಿಸುತ್ತಿದ್ದರೂ, ಸಿಐಎಸ್ಸಿಇ ಮುಖ್ಯ ಕಾರ್ಯನಿರ್ವಾಹಕ ಮತ್ತು ಕಾರ್ಯದರ್ಶಿ ಜೋಸೆಫ್ ಎಮ್ಯಾನುಯೆಲ್ ಮತ್ತು ಸಿಐಎಸ್ಸಿಇ ಅಧ್ಯಕ್ಷ ಜಿ.ಇಮ್ಯಾನ್ಯುಯೆಲ್ ಅವರು ಮಂಗಳವಾರ ಸಿಐಎಸ್ಸಿಇ ಶಾಲೆಗಳ ಪ್ರಾಂಶುಪಾಲರ ಸಭೆಯಲ್ಲಿ ಶಾಲೆಗಳು ರಾಜ್ಯದ ಬೋಧನಾ ನೀತಿಗಳನ್ನು ಅನುಸರಿಸಬೇಕಾಗುತ್ತದೆ ಎಂದು ಹೇಳಿದರು. ಎಲ್ಲಾ ಶಾಲೆಗಳು ಕನ್ನಡವನ್ನು ಪ್ರಥಮ ಅಥವಾ ದ್ವಿತೀಯ ಭಾಷೆಯಾಗಿ ಕಲಿಸಬೇಕು ಎಂದು ಕರ್ನಾಟಕ ಸರ್ಕಾರ ಆದೇಶಿಸಿದ್ದರೆ, ಅದನ್ನು ಸಿಐಎಸ್ಸಿಇ ಶಾಲೆಗಳು ಅನುಸರಿಸಬೇಕು”…

Read More

ಬೆಂಗಳೂರು : ಗೋಮಾಳ ಸೇರಿದಂತೆ ಎಲ್ಲಾ ಮಾದರಿ ಸರ್ಕಾರಿ ಜಾಗಗಳನ್ನು ಈ ವರ್ಷಾಂತ್ಯಕ್ಕೆ ಸರ್ವೆ ಮಾಡಿ, ಒತ್ತುವರಿ ತೆರವುಗೊಳಿಸಬೇಕು ಎಂದು ಸಿಎಂ ಸಿದ್ದರಾಮಯ್ಯ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಎಲ್ಲಾ ಜಿಲ್ಲಾಧಿಕಾರಿಗಳು, ಜಿಪಂ ಮುಖ್ಯಕಾರ್ಯನಿರ್ವಹಣಾಧಿಕಾರಿ ಗಳು, ಜಿಲ್ಲಾ ಪೊಲೀಸ್ ವರಿಷ್ಠಾಧಿ ಕಾರಿಗಳು, ಇಲಾಖಾ ಕಾರ್ಯದರ್ಶಿಗಳು ಮತ್ತು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳ ಸಭೆಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ರಾಜ್ಯದಲ್ಲಿ ಈಗಾಗಲೇ ಶೇ.75ರಷ್ಟು ಸರ್ಕಾ ರಿ ಜಾಗಗಳ ಸರ್ವೆ ಕಾರ್ಯ ಪೂರ್ಣಗೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಉಳಿದ ಶೇ.25ರಷ್ಟು ಜಾಗಗಳ ಸರ್ವೆ ಕಾರ್ಯವನ್ನು ಈ ವರ್ಷಾಂತ್ಯದೊಳಗೆ ಪೂರ್ಣಗೊಳಿಸಿ ರಾಜ್ಯದಲ್ಲಿ ಒಟ್ಟಾರೆ ಎಷ್ಟು ಸರ್ಕಾರಿ ಜಾಗವಿದೆ ಎಂಬ ಲ್ಯಾಂಡ್ ಬ್ಯಾಂಕ್ ಮಾಡಿ ಸಲ್ಲಿಸಬೇಕು. ಪ್ರತೀ ತಾಲ್ಲೂಕಿನ ತಹಶೀಲ್ದಾರರ ಕಚೇರಿ ಯಲ್ಲೂ ತಮ್ಮ ತಾಲ್ಲೂಕಿನಲ್ಲಿರುವ ಸರ್ಕಾರಿ ಜಾಗ ಎಷ್ಟು ಎಂಬ ಮಾಹಿತಿಯನ್ನು ಪ್ರಕಟಿ ಸಬೇಕು ಎಂದು ಸೂಚಿಸಲಾಗಿದೆ. ರಾಜ್ಯದಲ್ಲಿ ಪ್ರಸ್ತುತ ಮುಂಗಾರು ಹಂಗಾಮಿನಲ್ಲಿ 82.48 ಲಕ್ಷ ಹೆಕ್ಟೆರ್‌ ಬಿತ್ತನೆ ಗುರಿ ಇದ್ದು, ಇದುವರೆಗೆ 50.91 ಲಕ್ಷ ಹೆಕ್ಟೇರ್‌…

Read More

ನವದೆಹಲಿ : ಪಂಚ ಗ್ಯಾರಂಟಿ ಯೋಜನೆಗಳಿಗೆ ಎಸ್‌ ಸಿ, ಎಸ್‌ ಟಿ ನಿಧಿಯನ್ನು ಮರು ಹಂಚಿಕೆ ಮಾಡುತ್ತಿದೆ ಎಂಬ ಆರೋಪದ ಕುರಿತು ರಾಷ್ಟ್ರೀಯ ಪರಿಶಿಷ್ಟ ಜಾತಿಗಳ ಆಯೋಗವು ಕರ್ನಾಟಕ ರಾಜ್ಯಕ್ಕೆ ನೋಟಿಸ್‌ ನೀಡಿ ವರದಿ ನೀಡಿದೆ. ಮಾಧ್ಯಮ ವರದಿಯ ನಂತರ, ಕರ್ನಾಟಕದಲ್ಲಿ ಪರಿಶಿಷ್ಟ ಜಾತಿ ಉಪ ಯೋಜನೆ (ಎಸ್ಸಿಎಸ್ಪಿ) ಮತ್ತು ಬುಡಕಟ್ಟು ಉಪ ಯೋಜನೆ (ಟಿಎಸ್ಪಿ) ನಿಧಿಯನ್ನು ಗ್ಯಾರಂಟಿ ಯೋಜನೆಗಳಿಗೆ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಎನ್ಸಿಎಸ್ಸಿ ಸ್ವಯಂಪ್ರೇರಿತವಾಗಿ ಗಮನ ಹರಿಸಿದೆ. ಕರ್ನಾಟಕದ ಮುಖ್ಯ ಕಾರ್ಯದರ್ಶಿಗೆ ಬರೆದ ಅಧಿಕೃತ ಸಂವಹನದಲ್ಲಿ, ಐದು ಗ್ಯಾರಂಟಿ ಯೋಜನೆಗಳು ಎಂದು ಕರೆಯಲ್ಪಡುವ ವಿವಿಧ ಕಲ್ಯಾಣ ಯೋಜನೆಗಳನ್ನು ಜಾರಿಗೆ ತರಲು ಮೂಲತಃ ಎಸ್ಸಿಎಸ್ಪಿ ಮತ್ತು ಟಿಎಸ್ಪಿ ಅಡಿಯಲ್ಲಿ ನಿಗದಿಪಡಿಸಿದ 14,730 ಕೋಟಿ ರೂ.ಗಳನ್ನು ಮರುಹಂಚಿಕೆ ಮಾಡಲು ಕರ್ನಾಟಕ ಸರ್ಕಾರ ನಿರ್ಧರಿಸಿದೆ ಎಂದು ಎನ್ಸಿಎಸ್ಸಿ ಎತ್ತಿ ತೋರಿಸಿದೆ. ಎಸ್ಸಿ / ಎಸ್ಟಿ ಸಮುದಾಯಗಳ ಸಾಮಾಜಿಕ ಮತ್ತು ಆರ್ಥಿಕ ಕಲ್ಯಾಣವನ್ನು ಉತ್ತೇಜಿಸುವಲ್ಲಿ ಈ ನಿಧಿಗಳ ಮಹತ್ವವನ್ನು ಆಯೋಗವು ಒತ್ತಿಹೇಳಿದೆ. ಕರ್ನಾಟಕ…

Read More

ಬೆಂಗಳೂರು: ಇಂದು ಬೆಳಗ್ಗೆ 11.30ಕ್ಕೆ ಕೆಲ ದಿನಗಳ ಹಿಂದೆ ನಡೆದಿದ್ದಂತ ಎಸ್ ಎಸ್ ಎಲ್ ಸಿ ಪರೀಕ್ಷೆ-2ರ ( SSLC Exam 2 ) ಫಲಿತಾಂಶ ಪ್ರಕಟವಾಗಲಿದೆ. ಪತ್ರಿಕಾ ಪ್ರಕಟಣೆಯಲ್ಲಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ಅಧ್ಯಕ್ಷರು ಮಾಹಿತಿ ನೀಡಿದ್ದಾರೆ. 2024ರ ಎಸ್ ಎಸ್ ಎಲ್ ಸಿ ಪರೀಕ್ಷೆ-2ರ ಫಲಿತಾಂಶವನ್ನು ದಿನಾಂಕ 10-07-2024ರ ಬೆಳಿಗ್ಗೆ 11.30ಕ್ಕೆ NICಯ ಜಾಲತಾಣ https://karresults.nic.in ನಲ್ಲಿ ಪ್ರಕಟಿಸಲಾಗುತ್ತದೆ ಅಂತ ತಿಳಿಸಿದ್ದಾರೆ. ಅಂದಹಾಗೇ ದಿನಾಂಕ 14-06-2024ರಿಂದ 22-06-2024ರವರೆಗೆ 2024ರ ಎಸ್ ಎಸ್ ಎಲ್ ಸಿ ಪರೀಕ್ಷೆ -2 ಅನ್ನು ನಡೆಸಲಾಯಿತು. 2024ರ ಎಸ್.ಎಸ್.ಎಲ್.ಸಿ. ಪರೀಕ್ಷೆ-2ರ ವಿಜ್ಞಾನ, ದ್ವಿತೀಯ ಭಾಷೆ ಇಂಗ್ಲಿಷ್ ಮತ್ತು ದ್ವಿತೀಯ ಭಾಷೆ ಕನ್ನಡ ವಿಷಯದ ಕೀ ಉತ್ತರಗಳನ್ನು ದಿನಾಂಕ:21.06.2024 ರಂದು ಮಂಡಲಿಯ ಜಾಲತಾಣದಲ್ಲಿ http://kseeb.karnataka.gov.inನಲ್ಲಿ ಪ್ರಕಟಿಸಲಾಗಿದೆ. ಈ ರೀತಿ ರಿಸಲ್ಟ್‌ ಚೆಕ್‌ ಮಾಡಿಕೊಳ್ಳಿ ಕರ್ನಾಟಕ ಪರೀಕ್ಷ ಮಂಡಳಿಯ ಅಧಿಕೃತ ವೆಬ್‌ಸೈಟ್‌ kseab.karnataka.gov.in ಓಪನ್‌ ಮಾಡಿ ವೆಬ್‌ಸೈಟ್‌ ಮುಖಪುಟದಲ್ಲಿ ಕರ್ನಾಟಕ ಎಸ್‌ಎಸ್‌ಎಲ್‌ಸಿ ಪೂರಕ…

Read More

ಬೆಂಗಳೂರು : ಅನರ್ಹ ಬಿಪಿಎಲ್‌ ಕಾರ್ಡ್‌ಗಳನ್ನು ಕೈಬಿಟ್ಟು ಅರ್ಹ ಫಲಾನುಭವಿಗಳಿಗೆ ಬಿಪಿಎಲ್‌ ಕಾರ್ಡ್‌ಗಳನ್ನು ಒದಗಿಸಲು ತ್ವರಿತವಾಗಿ ಕ್ರಮ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಕೂಡಲೇ ಸಮಗ್ರ ಪರಿಶೀಲನೆ ನಡೆಸಿ ಅನರ್ಹ ಬಿಪಿಎಲ್‌ ಕಾರ್ಡ್‌ ಕೈಬಿಡಲು ಕ್ರಮ ಕೈಗೊಳ್ಳಬೇಕು. ಹಾಗೆಯೇ ಬಿಪಿಎಲ್‌ ಕುಟುಂಬಗಳಲ್ಲಿನ ಮೃತ ಸದಸ್ಯರ ಹೆಸರು ತೆಗೆದು ಹಾಕುವ ಪ್ರಕ್ರಿಯೆಯನ್ನು ತ್ವರಿತವಾಗಿ ಕೈಗೊಳ್ಳಬೇಕು. ಜನರನ್ನು ಅನಗತ್ಯವಾಗಿ ಅಲೆದಾಡಿಸಬಾರದು. ಅವರ ಸಮಸ್ಯೆ, ದೂರುಗಳನ್ನು ಆಲಿಸಿ ಅಗತ್ಯ ಪರಿಹಾರ ಒದಗಿಸಬೇಕು ಎಂದು ಸೂಚಿಸಿದ್ದಾರೆ.

Read More

ನವದೆಹಲಿ : ಜುಲೈ 23ರಂದು ಕೇಂದ್ರದ ನರೇಂದ್ರ ಮೋದಿ ಸರ್ಕಾರದ 3.O ಬಜೆಟ್ ಅನ್ನು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಮಂಡಿಸಲಿದ್ದು, ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಆಯು ಷ್ಮಾನ್ ಭಾರತ್ ಆರೋಗ್ಯ ವಿಮಾ ಯೋಜನೆ ಯಡಿ ಸದ್ಯ ಇರುವ 5 ಲಕ್ಷ ರು. ವಿಮೆ ಮೊತ್ತವನ್ನು 10 ಲಕ್ಷ ರೂ.ಗೆ ಹೆಚ್ಚಳ ಮಾಡಲು ಚಿಂತನೆ ನಡೆಸಿದೆ. ಜು.23ರಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾ ರಾಮನ್ ಅವರು ಮಂಡಿಸುವ ಬಜೆಟ್‌ನಲ್ಲಿ ಈ ಕುರಿತು ಅಧಿಕೃತ ಘೋಷಣೆ ಹೊರಬೀಳ ಲಿದೆ ಎನ್ನಲಾಗಿದೆ. ಸದ್ಯ 16ರಿಂದ 59 ವರ್ಷ ದೊಳಗಿನವರು ಈ ಯೋಜನೆಯಡಿ ವಾರ್ಷಿಕ 5 ಲಕ್ಷ ರು. ಆರೋಗ್ಯ ವಿಮೆಗೆ (ಪ್ರತಿ ಕುಟುಂಬಕ್ಕೆ) ಅರ್ಹರಾಗಿದ್ದಾರೆ. ಈ ಯೋಜನೆಯ ಮೊತ್ತವನ್ನು 5 ಲಕ್ಷ ರೂಪಾಯಿಂದ 10 ಲಕ್ಷ ರೂಪಾಯಿಗೆ ಏರಿಕೆ ಮಾಡುವ ಸಂಬಂಧ ಕೇಂದ್ರವು ಚಿಂತನೆ ಮಾಡಿದೆ ಎಂದು ವರದಿಯಾಗಿದೆ. ಸದ್ಯ ಬಡವರಿಗೆ ಆಯುಷ್ಮಾನ್‌ ಭಾರತ್‌ ಯೋಜನೆ ಅಡಿ 5 ಲಕ್ಷ ರೂಪಾಯಿವರೆಗೆ…

Read More

ವಿಜಯಪುರ : ವಿಜಯಪುರ ಜಿಲ್ಲೆಯಲ್ಲಿ ಮತ್ತೆ ಭೂಕಂಪನದ ಅನುಭವವಾಗಿದ್ದು, ಸ್ಪೋಟದಂತ ಶಬ್ದ ಕೇಳಿಬಂದು ಭೂಮಿ ನಡುಗುವ ಅನುಭವವಾಗಿದೆ. ವಿಜಯಪುರ ಜಿಲ್ಲೆಯ ಇಂಡಿಪಟ್ಟಣದ ಸುತ್ತಮುತ್ತಲಿನ ಗ್ರಾಮಗಳಲ್ಲಿ ಭೂಕಂಪನದ ಅನುಭವವಾಗಿದ್ದು, ಜನರು ಭಯಭೀತರಾಗಿ ಮನೆಗಳಿಂದ ಹೊರಗೆ ಓಡಿ ಬಂದಿದ್ದಾರೆ. ಇಂದು ಬೆಳಗ್ಗೆ 10.53 ರ ಸುಮಾರಿಗೆ ಇಂಡಿ, ತಡವಲಗಾ, ಇಂಗಳಗಿ, ಹಂಗಳಗಿ, ನಿಂಬಾಳ, ಹೊರ್ತಿ ಗ್ರಾಮದ ಸುತ್ತಮುತ್ತ ಭೂಮಿ ಕಂಪಿಸಿದ ಅನುಭವವಾಗಿದೆ. ಮೊದಲು ಸ್ಪೋಟದಂತಹ ಶಬ್ದ ಕೇಳಿಬಂದಿದ್ದು, ಬಳಿಕ ಭೂಮಿ ನಡುಗಿದ ಅನುಭವವಾಗಿದೆ ಎಂದು ವರದಿಯಾಗಿದೆ.

Read More

ರಾಮನಗರ : ಸಹಕಾರ ಸಂಘದ ಚುನಾವಣೆ ಮುಂದೂಡಿದ ಹಿನ್ನೆಲೆಯಲ್ಲಿ ರಾಮನಗರದಲ್ಲಿ ನಿಖಿಲ್ ಕುಮಾರಸ್ವಾಮಿ ನೇತೃತ್ವದಲ್ಲಿ ಜೆಡಿಎಸ್ ಕಾರ್ಯಕರ್ತರು ಬೃಹತ್ ಪ್ರತಿಭಟನೆ ನಡೆಸಿದ್ದು, ಪೊಲೀಸರು ಲಾಠಿ ಚಾರ್ಜ್ ನಡೆಸಿದ್ದಾರೆ. ಸಹಕಾರ ಸಂಘದ ಚುನಾವಣೆ ಮುಂದೂಡಿದ ಹಿನ್ನೆಲೆ ಚುನಾವಣೆಗೆ ಪಟ್ಟು ಹಿಡಿದು ರಾಮನಗರದ ಕಂದಾಯ ಭವನದ ಬಳಿ ನಿಖಿಲ್ ಕುಮಾರಸ್ವಾಮಿ ನೇತೃತ್ವದಲ್ಲಿ ಜೆಡಿಎಸ್‌ ಕಾರ್ಯಕರ್ತರು ಬೃಹತ್ ಪ್ರತಿಭಟನೆ ನಡೆಸಿದ್ದಾರೆ. ಈ ವೇಳೆ ಪ್ರತಿಭಟನೆ ವಿಕೋಪಕ್ಕೆ ತಿರುಗುತ್ತಿದ್ದಂತೆ ಪೊಲೀಸರು ಲಘು ಲಾಠಿ ಚಾರ್ಜ್‌ ನಡೆಸಿದ್ದಾರೆ. ರಾಮನಗರದ ಕಂದಾಯ ಭವನದ ಬಳಿ ಇಂದು ಭಾರಿ ಹೈಡ್ರಾಮಾ ನಡೆದಿದ್ದು, ಪ್ರತಿಭಟನಾಕಾರರು ಹಾಗೂ ಪೊಲೀಸರ ನಡುವೆ ಮಾತಿನ ಚಕಮಕಿ ನಡೆದಿದೆ. ಪೊಲೀಸರು ನಿಖಿಲ್ ಕುಮಾರ್ ಸೇರಿದಂತೆ ಹಲವು ಜೆಡಿಎಸ್‌ ನಾಯಕರು, ಕಾರ್ಯಕರ್ತರನ್ನು ತಮ್ಮ ವಶಕ್ಕೆ ಪಡೆದುಕೊಂಡಿದ್ದಾರೆ.

Read More

ಬೆಂಗಳೂರು : ಮಕ್ಕಳನ್ನು ಶಾಲಾ ವಾಹನಗಳಲ್ಲಿ ಶಾಲೆಗೇ ಕಳುಹಿಸುವ ಪೋಷಕರೇ ಎಚ್ಚರ, ಬೆಂಗಳೂರಿನಲ್ಲಿ ಸಂಚಾರಿ ಪೊಲೀಸರು ಇಂದು ಮದ್ಯ ಸೇವಿಸಿ ಶಾಲಾ ವಾಹನ ಚಲಾಯಿಸುತ್ತಿದ್ದ 23 ವಾಹನಗಳ ಚಾಲಕರ ವಿರುದ್ಧ ದೂರು ದಾಖಲಿಸಿದ್ದಾರೆ. ಬೆಂಗಳೂರಿನಲ್ಲಿ ಇಂದು ಕಾರ್ಯಾಚರಣೆ ನಡೆಸಿರುವ ಸಂಚಾರಿ ಪೊಲೀಸರು ಬರೋಬ್ಬರಿ 23 ಶಾಲಾ ವಾಹನಗಳ ಚಾಲಕರ ವಿರುದ್ಧ 185 ಐಎಂವಿ ಕಾಯ್ದೆಯಡಿ ಪ್ರಕರಣ ದಾಖಲಿಸಿ ವಶಕ್ಕೆ ಪಡೆದುಕೊಂಡಿದ್ದಾರೆ. ಒಟ್ಟು 3016 ವಾಹನಗಳ ತಪಾಸಣೆ ನಡೆಸಲಾಗಿದ್ದು, ಈ ವೇಳೆ ಇನ್ನೂ ಫಿಟ್ನೆಸ್‌ ಸರ್ಟಿಫಿಕೇಟ್‌ ಇಲ್ಲದ ೧೧ ವಾಹನಗಳ ವಿರುದ್ಧವೂ ದೂರು ದಾಖಲಾಗಿದೆ. ಸದ್ಯ ಸಂಚಾರಿ ಪೊಲೀಸರು ಈ ವಾಹನಗಳ ಚಾಲಕರ ವಿರುದ್ಧ ದೂರು ದಾಖಲಿಸಿದ್ದು, ಚಾಲಕರ ಲೈಸೆನ್ಸ್‌ ಸಸ್ಪೆಂಡ್‌ ಮಾಡುವಂತೆ ಆರ್‌ ಟಿಒಗೆ ಸೂಚನೆ ನೀಡಿದ್ದಾರೆ.

Read More

ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಕಥುವಾದಲ್ಲಿ ನಿನ್ನೆ ನಡೆದ ಭಯೋತ್ಪಾದಕ ದಾಳಿಯಲ್ಲಿ ಐವರು ಸೈನಿಕರು ಸಾವನ್ನಪ್ಪಿದ್ದು, ಅವರ ಕುಟುಂಬಗಳಿಗೆ ರಕ್ಷಣಾ ಕಾರ್ಯದರ್ಶಿ ಗಿರಿಧರ್ ಅರಮಾನೆ ಸಂತಾಪ ಸೂಚಿಸಿದ್ದಾರೆ. ದಾಳಿಯ ನಂತರ ಬಲವಾದ ಸಂದೇಶವನ್ನು ಕಳುಹಿಸಿದ ರಕ್ಷಣಾ ಕಾರ್ಯದರ್ಶಿ, “ಕಥುವಾದ ಬದ್ನೋಟಾದಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ ಐವರು ಧೈರ್ಯಶಾಲಿಗಳನ್ನು ಕಳೆದುಕೊಂಡಿರುವುದಕ್ಕೆ ನಾನು ತೀವ್ರ ದುಃಖವನ್ನು ವ್ಯಕ್ತಪಡಿಸುತ್ತೇನೆ ಮತ್ತು ದುಃಖಿತ ಕುಟುಂಬಗಳಿಗೆ ಆಳವಾದ ಸಂತಾಪವನ್ನು ವ್ಯಕ್ತಪಡಿಸುತ್ತೇನೆ. ರಾಷ್ಟ್ರಕ್ಕೆ ಅವರ ನಿಸ್ವಾರ್ಥ ಸೇವೆಯನ್ನು ಯಾವಾಗಲೂ ನೆನಪಿಸಿಕೊಳ್ಳಲಾಗುತ್ತದೆ ಮತ್ತು ಅವರ ತ್ಯಾಗವು ವ್ಯರ್ಥವಾಗುವುದಿಲ್ಲ ಮತ್ತು ಭಾರತವು ದಾಳಿಯ ಹಿಂದಿನ ದುಷ್ಟ ಶಕ್ತಿಗಳನ್ನು ಸೋಲಿಸುತ್ತದೆ” ಎಂದು ಹೇಳಿದರು. ಈ ಹೇಳಿಕೆಗಳನ್ನು ರಕ್ಷಣಾ ಸಚಿವಾಲಯವು ಎಕ್ಸ್ ನಲ್ಲಿ ಪೋಸ್ಟ್ ನಲ್ಲಿ ಹಂಚಿಕೊಂಡಿದೆ. ಕಥುವಾದ ದೂರದ ಮಚೆಡಿ ಪ್ರದೇಶದಲ್ಲಿ ಗಸ್ತು ತಂಡದ ಮೇಲೆ ಭಯೋತ್ಪಾದಕರು ನಿನ್ನೆ ನಡೆಸಿದ ದಾಳಿಯಲ್ಲಿ ಜೂನಿಯರ್ ಕಮಿಷನ್ಡ್ ಅಧಿಕಾರಿ ಸೇರಿದಂತೆ ಐವರು ಸೇನಾ ಸಿಬ್ಬಂದಿ ಸಾವನ್ನಪ್ಪಿದ್ದಾರೆ ಮತ್ತು ಅನೇಕರು ಗಾಯಗೊಂಡಿದ್ದಾರೆ. ನಿನ್ನೆ ಮಧ್ಯಾಹ್ನ ಗ್ರೆನೇಡ್ ಮತ್ತು ಗುಂಡಿನ…

Read More