Author: kannadanewsnow57

ನವದೆಹಲಿ : ಜುಲೈ 23, 2024 ರಂದು ಎರಡು ಪ್ರಮುಖ ಕ್ಷುದ್ರಗ್ರಹಗಳು ಭೂಮಿಯ ಹತ್ತಿರದಲ್ಲಿ ಹಾದುಹೋಗಲಿವೆ ಎಂದು ನಾಸಾ ಕ್ಷುದ್ರಗ್ರಹಗಳ ಎಚ್ಚರಿಕೆ ನೀಡಿದೆ. (2024 ಎಲ್ವೈ 2) ಮತ್ತು (2024 ಎನ್ಎಚ್) ಎಂದು ಕರೆಯಲ್ಪಡುವ ಈ ಆಕಾಶಕಾಯಗಳನ್ನು ಕ್ರಮವಾಗಿ ಕಟ್ಟಡ-ಗಾತ್ರ ಮತ್ತು ವಿಮಾನ ಗಾತ್ರದ ಕ್ಷುದ್ರಗ್ರಹಗಳಾಗಿ ವರ್ಗೀಕರಿಸಲಾಗಿದೆ. ಕಟ್ಟಡ ಗಾತ್ರದ ಕ್ಷುದ್ರಗ್ರಹ (2024 LY2)- ಅಂದಾಜು ಗಾತ್ರ: 290 ಅಡಿ (88 ಮೀಟರ್)- ಭೂಮಿಗೆ ಹತ್ತಿರ: 2,850,000 ಮೈಲಿಗಳು (4,587,454 ಕಿಲೋಮೀಟರ್) ಕ್ಷುದ್ರಗ್ರಹ (2024 ಎಲ್ವೈ 2), ಗಾತ್ರದಲ್ಲಿ ದೊಡ್ಡ ಕಟ್ಟಡಕ್ಕೆ ಹೋಲಿಸಬಹುದು, ಇದು ಸರಿಸುಮಾರು 290 ಅಡಿ ವ್ಯಾಸವನ್ನು ಹೊಂದಿದೆ. ಇದು 2,850,000 ಮೈಲಿ ದೂರದಲ್ಲಿ ಭೂಮಿಗೆ ಹತ್ತಿರವಾಗಲಿದೆ, ಇದು ಭೂಮಿ ಮತ್ತು ಚಂದ್ರನ ನಡುವಿನ ಸರಾಸರಿ ದೂರಕ್ಕಿಂತ ಸುಮಾರು 12 ಪಟ್ಟು ಹೆಚ್ಚು. ಇದು ದೂರವೆಂದು ತೋರಿದರೂ, ಖಗೋಳಶಾಸ್ತ್ರದ ಪರಿಭಾಷೆಯಲ್ಲಿ ಇದನ್ನು ನಿಕಟ ಪಾಸ್ ಎಂದು ಪರಿಗಣಿಸಲಾಗಿದೆ. ಇದು ನಮ್ಮ ಗ್ರಹಕ್ಕೆ ಯಾವುದೇ ಅಪಾಯವನ್ನುಂಟು ಮಾಡುವುದಿಲ್ಲ ಎಂದು ಖಚಿತಪಡಿಸಿಕೊಳ್ಳಲು…

Read More

ಬೆಂಗಳೂರು : ಮಳೆಗಾಲ ಅಂತ ಬಿಸಿನೀರಿಗಾಗಿ ಗೀಸರ್‌ ಬಳಸುವವರೇ ಎಚ್ಚರ, ಸ್ವಲ್ಪ ಯಾಮಾರಿದ್ರೂ ನಿಮ್ಮ ಜೀವವನ್ನೇ ಕಳೆಯುತ್ತದೆ ಗೀಸರ್.‌ ಇದೇ ರೀತಿ ಬೆಂಗಳೂರಿನಲ್ಲಿ ಬೆಂಗಳೂರಿನಲ್ಲಿ ಘೋರ ದುರಂತ ಒಂದು ಸಂಭವಿಸಿದ್ದು, ಮನೆಯಲ್ಲಿದ್ದ ಗೀಸರ್ ನಿಂದ ವಿಷಾನಿಲ ಸೋರಿಕೆಯಾಗಿ ತಾಯಿ ಹಾಗೂ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಮಾಗಡಿಯಲ್ಲಿ ನಡೆದಿದೆ. ಹೌದು ಗೀಸರ್ ಯಿಂದ ವಿಷಾನಿಲ ಸೊರಿಕೆಯಾಗಿ ತಾಯಿ ಮಗ ಸಾವನ್ನಾಪ್ಪಿದ್ದರೆ. ಶೋಭಾ (40) ಪುತ್ರ ಗಿರೀಶ್ (16) ಮೃತಪಟ್ಟ ದುರ್ದೈವಿಗಳು ಎಂದು ತಿಳಿದುಬಂದಿದೆ.ಗೀಸರ್ ಆನ್ ಮಾಡಿ ಮನೆ ಸದಸ್ಯರು ಮರೆತು ಹೋಗಿದ್ದರು ಎಂದು ಹೇಳಲಾಗುತ್ತಿದೆ. ಈ ವೇಳೆ ಬಾಗಿಲು ಕಿಟಕಿ ಮುಚ್ಚಿದ್ದರಿಂದ ತಾಯಿ ಮಗ ಉಸಿರುಗಟ್ಟಿ ಸಾವನಪ್ಪಿದ್ದಾರೆ ಎಂದು ತಿಳಿದುಬಂದಿದೆ ಮಾಗಡಿ ತಾಲೂಕು ಆಸ್ಪತ್ರೆಗೆ ತಾಯಿ ಹಾಗೂ ಮಗನ ಮೃತದೇಹವನ್ನು ಮಾಡಲಾಗಿದೆ ಮಾಗಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಒಂದು ಘಟನೆ ಸಂಭವಿಸಿದೆ. ಗೀಸರ್ ಸುರಕ್ಷತಾ ಸಲಹೆಗಳು ಗೀಸರ್ ಅನ್ನು ಸರಿಯಾದ ತಾಪಮಾನದಲ್ಲಿ ಹೊಂದಸಬೇಕು ಗೀಸರ್ ಅನ್ನು ಬಳಸುವಾಗ ಸರಿಯಾದ ತಾಪಮಾನವನ್ನು…

Read More

ಬಳ್ಳಾರಿ : ಕಂಪ್ಲಿ ಪುರಸಭೆ ವ್ಯಾಪ್ತಿಯಲ್ಲಿ ಬರುವ ವಸತಿ ರಹಿತ ತೃತೀಯ ಲಿಂಗಿ ಫಲಾನುಭವಿಗಳಿಗೆ ದೇವರಾಜ ಅರಸು ವಸತಿ ಯೋಜನೆ ಅಡಿ ವಸತಿ ಸೌಲಭ್ಯ ಒದಗಿಸಲು ಅರ್ಜಿ ಆಹ್ವಾನಿಸಲಾಗಿದೆ ಎಂದು ಕಂಪ್ಲಿ ಪುರಸಭೆಯ ಮುಖ್ಯಾಧಿಕಾರಿ ತಿಳಿಸಿದ್ದಾರೆ. ಆಸಕ್ತ ಅರ್ಹ ತೃತೀಯ ಲಿಂಗಿ ಫಲಾನುಭವಿಗಳು ಅರ್ಜಿ ಸಲ್ಲಿಸಲು ಆ.08 ಕೊನೆಯ ದಿನವಾಗಿರುತ್ತದೆ. ದಾಖಲೆಗಳು: ಅರ್ಜಿದಾರರ ಆಧಾರ್ ಕಾರ್ಡ್, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಚುನಾವಣಾ ಗುರುತಿನ ಚೀಟಿ, ಪಡಿತರ ಚೀಟಿ, ನಿವೇಶನದ ಖಾತೆಯ ನಕಲು ಪ್ರತಿ, ಬ್ಯಾಂಕ್ ಪಾಸ್ ಪುಸ್ತಕ ನಕಲು ಪ್ರತಿಯೊಂದಿಗೆ ಪಾಸ್‍ಪೋರ್ಟ್ ಅಳತೆಯ ಫೋಟೋ ಒದಗಿಸಬೇಕು. ತೃತೀಯ ಲಿಂಗಿ ಅರ್ಜಿದಾರರು ಮಾತ್ರ ಅರ್ಹರಾಗಿದ್ದು, ಅವರ ಕುಟುಂಬವು ಆರ್ಥಿಕ ಮತ್ತು ಸಾಮಾಜಿಕವಾಗಿ ಹಿಂದುಳಿದ, ಬಡತನ ರೇಖೆಗಿಂತ ಕಡಿಮೆ ಇರಬೇಕು. ಅರ್ಜಿದಾರರು ವಸತಿ ರಹಿತ, ಶೂನ್ಯ ಕೋಣೆ, ಒಂದು ಕೋಣೆ, ಎರಡು ಕೋಣೆಯೊಂದಿಗೆ ಕಚ್ಚಾ ಗೋಡೆ ಹಾಗೂ ಕಚ್ಚಾ ಛಾವಣಿ ಹೊಂದಿದವರು ಸಹ ಅರ್ಜಿ ಸಲ್ಲಿಸಬಹುದು. ಅರ್ಜಿದಾರರು ಅಥವಾ ಕುಟುಂಬದ ಸದಸ್ಯರ…

Read More

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ಭರ್ಜರಿ ಸಿಹಿಸುದ್ದಿ,ರಾಜ್ಯ ಸರ್ಕಾರವು 7ನೇ ವೇತನ ಆಯೋಗದ ಶಿಫಾರಸ್ಸುಗಳನ್ನು ಅನುಷ್ಠಾನಗೊಳಿಸುವಂತೆ ಅಧಿಕೃತವಾಗಿ ಆದೇಶ ಹೊರಡಿಸಿದೆ. ಸಿಎಂ ಸಿದ್ಧರಾಮಯ್ಯ ಅವರು ರಾಜ್ಯ ಸಚಿವ ಸಂಪುಟದಲ್ಲಿ ಒಪ್ಪಿಗೆ ಸೂಚಿಸಿದ ನಂತ್ರ, ಸದನದಲ್ಲೂ 7ನೇ ವೇತನ ಆಯೋಗದ ಶಿಫಾರಸ್ಸುಗಳನ್ನು ರಾಜ್ಯ ಸರ್ಕಾರಿ ನೌಕರರಿಗೆ ಜಾರಿಗೊಳಿಸಲಾಗುವುದು ಅಂತ ಸ್ಪಷ್ಟ ಪಡಿಸಿದ್ದ ಬೆನ್ನಲ್ಲೇ, ಈ ಆದೇಶ ಮಾಡಲಾಗಿದೆ. ಈ ಕುರಿತಂತೆ ಆರ್ಥಿಕ ಇಲಾಖೆಯಿಂದ ರಾಜ್ಯ ಸರ್ಕಾರಿ ನೌಕರರಿಗೆ 7ನೇ ವೇತನ ಆಯೋಗದ ಶಿಫಾರಸ್ಸಿನಂತೆ ದಿನಾಂಕ 01-07-2022ರಿಂದಲೇ ವೇತನ ಜಾರಿಗೊಳಿಸಿ ಶಿಫಾರಸ್ಸುಗಳನ್ನು ಅನುಷ್ಠಾನಗೊಳಿಸುವಂತೆ ಆದೇಶ ಹೊರಡಿಸಲಾಗಿದೆ. ಈ ಮೂಲಕ ರಾಜ್ಯ ಸರ್ಕಾರಿ ನೌಕರರಿಗೆ ಸಿಹಿಸುದ್ದಿಯನ್ನು ನೀಡಲಾಗಿದೆ. ರಾಜ್ಯ ಆರ್ಥಿಕ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಹೊರಡಿಸಿರುವಂತ ಆದೇಶದಲ್ಲಿ, ದಿನಾಂಕ: 19.11.2022ರ ಆದೇಶದಲ್ಲಿ ರಚಿಸಲಾಗಿದ್ದ 7ನೇ ರಾಜ್ಯ ವೇತನ ಆಯೋಗವು ರಾಜ್ಯ ಸರ್ಕಾರಿ ನೌಕರರ ವೇತನ ಮತ್ತು ಭತ್ಯೆಗಳು ಹಾಗೂ ಪಿಂಚಣಿ ಪರಿಷ್ಕರಣೆ ಕುರಿತಂತೆ ತನ್ನ ವರದಿಯ ಸಂಪುಟ-1 ನ್ನು ಸಲ್ಲಿಸಿರುತ್ತದೆ. 7ನೇ ರಾಜ್ಯ ವೇತನ ಆಯೋಗದ ಸಂಪುಟ-…

Read More

ನವದೆಹಲಿ : ದೇಶದಲ್ಲಿ ಕುರುಕುಲು ತಿಂಡಿ ಸೇವನೆಯಿಂದ ಒಟ್ಟು ೫೪ ರಷ್ಟು ಮಂದಿ ಅನಾರೋಗ್ಯದಿಂದ ನರಳುತ್ತಿದ್ದಾರೆ ಎಂದು ಆರ್ಥಿಕ ಸಮೀಕ್ಷಾ ವರದಿಯಲ್ಲಿ ತಿಳಿದುಬಂದಿದೆ. ಬಜೆಟ್ ಅಧಿವೇಶನದ ಮೊದಲ ದಿನವಾದ ಸೋಮವಾರ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸಂಸತ್ತಿನ ಉಭಯ ಸದನಗಳಲ್ಲಿ ಮಂಡಿಸಿದ ಭಾರತದ ಆರ್ಥಿಕ ಸಮೀಕ್ಷೆ 2023-24, ಭಾರತದ ಯುವ ಜನಸಂಖ್ಯೆಯ ಆರೋಗ್ಯದ ಗುಣಮಟ್ಟವನ್ನು ಸುಧಾರಿಸುವುದು ನಿರ್ಣಾಯಕವಾಗಿದೆ ಎಂದು ಗಮನಸೆಳೆದಿದೆ. ಈ ವರ್ಷದ ಏಪ್ರಿಲ್ನಲ್ಲಿ ಪ್ರಕಟವಾದ ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿಯ (ಐಸಿಎಂಆರ್) ಇತ್ತೀಚಿನ ಆಹಾರ ಮಾರ್ಗಸೂಚಿಗಳನ್ನು ಉಲ್ಲೇಖಿಸಿ, ಭಾರತದಲ್ಲಿ ಒಟ್ಟು ರೋಗದ ಹೊರೆಯ 56.4% ಅನಾರೋಗ್ಯಕರ ಆಹಾರದಿಂದಾಗಿ ಎಂಬ ಅಂಶವನ್ನು ಅದು ಉಲ್ಲೇಖಿಸುತ್ತದೆ. ಸಕ್ಕರೆ ಮತ್ತು ಕೊಬ್ಬು ತುಂಬಿದ ಹೆಚ್ಚು ಸಂಸ್ಕರಿಸಿದ ಆಹಾರಗಳ ಸೇವನೆಯಲ್ಲಿನ ಏರಿಕೆ, ಕಡಿಮೆ ದೈಹಿಕ ಚಟುವಟಿಕೆ ಮತ್ತು ವೈವಿಧ್ಯಮಯ ಆಹಾರಗಳಿಗೆ ಸೀಮಿತ ಪ್ರವೇಶವು ಸೂಕ್ಷ್ಮ ಪೋಷಕಾಂಶಗಳ ಕೊರತೆ ಮತ್ತು ಅಧಿಕ ತೂಕ / ಬೊಜ್ಜು ಸಮಸ್ಯೆಗಳನ್ನು ಹೆಚ್ಚಿಸುತ್ತದೆ ಎಂದು ಐಸಿಎಂಆರ್ ವರದಿ ಗಮನಿಸಿದೆ.…

Read More

ಬೆಂಗಳೂರು : ರಾಜ್ಯಾದ್ಯಂತ ರಸ್ತೆ ಅಪಘಾತಗಳನ್ನು ತಡೆಗಟ್ಟಲು ರಾಜ್ಯದ ಪೊಲೀಸರು ಮಹತ್ವದ ಕ್ರಮ ಕೈಗೊಂಡಿದ್ದು, ಮುಖ್ಯವಾಗಿ ಅಪಘಾತಕ್ಕೆ ಕಾರಣವಾಗಿರುವ ಪ್ರಖರ ಬೆಳಕು ಹೊರಹಾಕುವ (ಹೈ ಬೀಮ್ ಲೈಟ್) ಮತ್ತು ಕಣ್ಣು ಕುಕ್ಕುವ ಎಲ್​ಇಡಿ ಲೈಟ್​ ಅಳವಡಿಸಿರುವ ವಾಹನಗಳ ವಿರುದ್ಧ ಪ್ರಕರಣಗಳನ್ನು ದಾಖಲಿಸಲು ರಾಜ್ಯಾದ್ಯಂತ ವಿಶೇಷ ಕಾರ್ಯಚರಣೆ ನಡೆಸಲಾಗಿದೆ. ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ, ಎಲ್ಲಾ ಘಟಕಗಳಲ್ಲಿ ಸಂಭವಿಸುವ ರಸ್ತೆ ಅಪಘಾತಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಈಗಾಗಲೇ ಹೆಚ್ಚು ಪ್ರಖರ ಬೆಳಕು ಹೊರಹಾಕುವ ಮತ್ತು ಕಣ್ಣು ಕುಕ್ಕುವ ಎಲ್‌ಇಡಿ ದೀಪಗಳನ್ನು ಅಳವಡಿಸಿರುವ ವಾಹನಗಳ ವಿರುದ್ಧ ಪ್ರಕರಣಗಳನ್ನು ದಾಖಲಿಸಲು ವಿಶೇಷ ಕಾರ್ಯಾಚರಣೆ ನಡೆಸುವಂತೆ ಸೂಚಿಸಲಾಗಿ, ಈ ಕುರಿತು ಸದರಿ ಕಾರ್ಯಾಚರಣೆಗೆ ಆಸಕ್ತಿ ತೋರಿಸಿರುವ ಘಟಕಗಳಾದ ಬೆಂಗಳೂರು ನಗರ, ಮಂಗಳೂರು ನಗರ, ಹುಬ್ಬಳ್ಳಿ-ಧಾರವಾಡ ನಗರ, ಮೈಸೂರು ನಗರ, ಚಾಮರಾಜನಗರ, ಉತ್ತರ ಕನ್ನಡ ಜಿಲ್ಲೆ, ರಾಯಚೂರು, ಬಳ್ಳಾರಿ ಹಾಗೂ ವಿಜಯನಗರ ಜಿಲ್ಲೆಗಳಲ್ಲಿ ಹೆಚ್ಚು ಪ್ರಕರಣಗಳನ್ನು ದಾಖಲು ಮಾಡಿರುವುದನ್ನು ಶ್ಲಾಘಿಸಲಾಗಿದೆ. (ಪುತಿ ಲಗತ್ತಿಸಿದೆ). ಇದೇ ರೀತಿ, ವಿರುದ್ಧ ದಿಕ್ಕಿನಲ್ಲಿ ವಾಹನ ಚಾಲನೆ…

Read More

ಬೆಂಗಳೂರು : ರಾಜ್ಯ ಸರ್ಕಾರವು ಬಡಜನತೆಗೆ ಮತ್ತೊಂದು ಸಿಹಿಸುದ್ದಿ ನೀಡಿದ್ದು, ರಾಜ್ಯಾದ್ಯಂತ ಮತ್ತೆ 252 ಹೊಸ ‘ನಮ್ಮ ಕ್ಲಿನಿಕ್’ಗಳನ್ನು ಆರಂಭಿಸಲು ನಿರ್ಧರಿಸಲಾಗಿದೆ. ಈ ಕುರಿತು ಮಾಹಿತಿ ನೀಡಿರುವ ಸಚಿವ ದಿನೇಶ್‌ ಗುಂಡೂರಾವ್‌, ಜನಸಾಮಾನ್ಯರಿಗೆ ಸಕಾಲದಲ್ಲಿ ಆರೋಗ್ಯ ಸೇವೆಗಳನ್ನು ಒದಗಿಸುವಲ್ಲಿ ‘ನಮ್ಮ ಕ್ಲಿನಿಕ್’ ಗಳ ಪಾತ್ರ ಮಹತ್ವದ್ದಾಗಿದೆ. ರಾಜ್ಯಾದ್ಯಂತ ಒಟ್ಟು 503 ನಮ್ಮ ಕ್ಲಿನಿಕ್ ಗಳು ಈಗಾಗಲೇ ಜನರಿಗೆ ಆರೋಗ್ಯ ಸೇವೆಗಳನ್ನು ಒದಗಿಸುತ್ತಿವೆ ಎಂದು ತಿಳಿಸಿದ್ದಾರೆ. ಬಡಜನತೆಗೆ ನೇರವಾಗಿ ತಲುಪುವ ಈ ‘ನಮ್ಮ ಕ್ಲಿನಿಕ್’ಗಳ ಸಂಖ್ಯೆಯನ್ನು ಹೆಚ್ಚಿಸಲು ನಮ್ಮ ಸರ್ಕಾರವು ನಿರ್ಧರಿಸಿದ್ದು ಈಗಿರುವ ಕ್ಲಿನಿಕ್ ಗಳ ಜೊತೆಗೆ ಇನ್ನೂ 252 ಹೊಸ ‘ನಮ್ಮ ಕ್ಲಿನಿಕ್’ಗಳನ್ನು ಆರಂಭಿಸಲಿದ್ದೇವೆ. ಇದಕ್ಕಾಗಿ ಈಗಾಗಲೇ ಜಾಗ ಮತ್ತಿತರೇ ಸೌಲಭ್ಯ ಗುರುತಿಸುವ ಕಾರ್ಯ ಭರದಿಂದ ಸಾಗಿದೆ. ಇದಲ್ಲದೇ ನಮ್ಮ ಕ್ಲಿನಿಕ್’ಗಳಲ್ಲಿ ಕಾರ್ಯನಿರ್ವಹಿಸುವ ವೈದ್ಯರ ವೇತನವನ್ನೂ ಹೆಚ್ಚಿಸಲು ಸರ್ಕಾರ ನಿರ್ಧರಿಸಿದೆ ಹಾಗು ಜನತೆಗೆ ಅನುಕೂಲವಾಗುವಂತೆ ನಮ್ಮ ಕ್ಲಿನಿಕ್’ಗಳ ಕಾರ್ಯನಿರ್ವಹಣಾ ಸಮಯದಲ್ಲೂ ಬದಲಾವಣೆ ಮಾಡುವ ಚಿಂತನೆ ನಡೆಸಿದ್ದೇವೆ ಎಂದು ಹೇಳಿದ್ದಾರೆ.

Read More

ನವದೆಹಲಿ :  ಪ್ರಧಾನಿ ನರೇಂದ್ರ ಮೋದಿ ಅವರು ಮೂರನೇ ಬಾರಿಗೆ ಅಧಿಕಾರ ವಹಿಸಿಕೊಂಡ ನಂತರ ಸರ್ಕಾರ ತನ್ನ ಮೊದಲ ಪೂರ್ಣ ಬಜೆಟ್ ಅನ್ನು ಮಂಡಿಸಲಿದೆ. ಮತ್ತೊಂದೆಡೆ, ವಿರೋಧ ಪಕ್ಷಗಳು ಉದ್ಯೋಗಗಳು ಮತ್ತು ಹಣದುಬ್ಬರದ ವಿಷಯದ ಬಗ್ಗೆ ಕೇಂದ್ರ ಸರ್ಕಾರದ ಮೇಲೆ ಕಠಿಣ ಪ್ರಶ್ನೆಗಳನ್ನು ಎತ್ತಿವೆ. ಬಜೆಟ್ ಪೂರ್ವ ಆರ್ಥಿಕ ಸಮೀಕ್ಷೆಯು 2026ರ ಹಣಕಾಸು ವರ್ಷದಲ್ಲಿ ಶೇ.6.5-7ರಷ್ಟು ಬೆಳವಣಿಗೆಯನ್ನು ಅಂದಾಜಿಸಿದೆ. ಬಜೆಟ್ ಗೆ ಸಂಬಂಧಿಸಿದ 10 ಪ್ರಮುಖ ವಿಷಯಗಳು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು 2024-25ನೇ ಸಾಲಿನ ಸತತ ಏಳನೇ ಬಜೆಟ್ ಅನ್ನು ಇಂದು ಮಂಡಿಸಲಿದ್ದಾರೆ. ಈ ಬಜೆಟ್ ಮೂಲಕ ಅವರು ಮಾಜಿ ಪ್ರಧಾನಿ ಮೊರಾರ್ಜಿ ದೇಸಾಯಿ ಅವರ ದಾಖಲೆಯನ್ನು ಮುರಿಯಲಿದ್ದಾರೆ. ತಜ್ಞರ ಪ್ರಕಾರ, ಸಾಮಾನ್ಯ ಜನರ ಆರ್ಥಿಕ ಸಮೃದ್ಧಿಯ ಬಗ್ಗೆ ಸರ್ಕಾರ ಈ ಬಾರಿ ಕೆಲವು ದೊಡ್ಡ ಘೋಷಣೆಗಳನ್ನು ಮಾಡಬಹುದು. ಹಣಕಾಸು ಸಚಿವರು ಪೂರ್ಣ ಬಜೆಟ್ನಲ್ಲಿ ಹೊಸ ಉತ್ಪಾದನಾ ಸೌಲಭ್ಯಗಳಿಗೆ ತೆರಿಗೆ ಪ್ರೋತ್ಸಾಹವನ್ನು ನೀಡುವ ನಿರೀಕ್ಷೆಯಿದೆ ಮತ್ತು ಉದ್ಯೋಗಗಳನ್ನು…

Read More

ಬೆಂಗಳೂರು :50 ವರ್ಷ ಮೇಲ್ಪಟ್ಟ ಶಿಕ್ಷಕರ ವರ್ಗಾವಣೆ ಮಾಡುವಂತಿಲ್ಲ ಎಂದು ಕರ್ನಾಟಕ ಹೈಕೋರ್ಟ್‌ ಕರ್ನಾಟಕ ರಾಜ್ಯ ಆಡಳಿತ ನ್ಯಾಯಮಂಡಳಿ (ಕೆಎಸ್ಎಟಿ) ಆದೇಶವನ್ನು ಎತ್ತಿ ಹಿಡಿದಿದೆ. ಉಮಾದೇವಿ ಹುಂಡೇಕರ್ (55) ಮತ್ತು ಪ್ರಭಾವತಿ ರೋನಾಡ್ (58) ಅವರ ವರ್ಗಾವಣೆ ಆದೇಶವನ್ನು ರದ್ದುಗೊಳಿಸಿ ಕರ್ನಾಟಕ ರಾಜ್ಯ ಆಡಳಿತ ನ್ಯಾಯಮಂಡಳಿ (ಕೆಎಸ್ಎಟಿ) ಹೊರಡಿಸಿದ ಆದೇಶವನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದ ಮುಖ್ಯ ನ್ಯಾಯಮೂರ್ತಿ ಎನ್.ವಿ.ಅಂಜಾರಿಯಾ ಮತ್ತು ನ್ಯಾಯಮೂರ್ತಿ ಎಸ್.ಜಿ.ಪಂಡಿತ್ ಅವರ ವಿಭಾಗೀಯ ಪೀಠ ಈ ಅಭಿಪ್ರಾಯ ವ್ಯಕ್ತಪಡಿಸಿದೆ. ಕರ್ನಾಟಕ ರಾಜ್ಯ ನಾಗರಿಕ ಸೇವೆಗಳ (ಶಿಕ್ಷಕರ ವರ್ಗಾವಣೆ ನಿಯಂತ್ರಣ ಕಾಯ್ದೆ), 2020 ರ ಸೆಕ್ಷನ್ 10 (1) (6) ರ ಪ್ರಯೋಜನಕ್ಕೆ ಅರ್ಹರಾಗಿರುವ ಮಹಿಳಾ ಶಿಕ್ಷಕರಾಗಿರುವ ಅರ್ಜಿದಾರರು (ನ್ಯಾಯಾಧಿಕರಣದ ಮುಂದೆ ಶಿಕ್ಷಕರು) 50 ವರ್ಷ ವಯಸ್ಸನ್ನು ದಾಟಿದ್ದಾರೆ ಮತ್ತು ಪ್ರಯೋಜನ ಪಡೆಯಲು ಅರ್ಹರಾಗಿದ್ದಾರೆ ಎಂದು ನ್ಯಾಯಪೀಠ ಹೇಳಿದೆ. ಅವುಗಳನ್ನು ಹೆಚ್ಚುವರಿ ಎಂದು ಘೋಷಿಸಲು ಸಾಧ್ಯವಿಲ್ಲ ಮತ್ತು ವರ್ಗಾವಣೆಯ ಆದೇಶವನ್ನು ಹೊರಡಿಸಲು ಸಾಧ್ಯವಿಲ್ಲ” ಎಂದು ಅವರು…

Read More

ಬೆಂಗಳೂರು : ನೀಟ್‌ ಪರೀಕ್ಷೆ, ಕೇಂದ್ರದ ಲೋಕಸಬೇ ಹಾಗೂ ವಿಧಾನಸಭೆ ಕ್ಷೇತ್ರಗಳ ಪುನರ್‌ ವಿಂಗಡಣೆ ಹಾಗೂ ಒಂದು ದೇಶ ಒಂದು ಚುನಾವಣೆ ಪ್ರಸ್ತಾವನೆಗಳನ್ನು ವಿರೋಧಿಸಿ ವಿಧಾನಮಂಡಲದಲ್ಲಿ ನಿರ್ಣಯ ಮಂಡಿಸಲು ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ. ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ನೀಟ್‌ ಪರೀಕ್ಷೆ, ಒನ್‌ ನೇಷನ್‌ ಒನ್‌ ಎಲೆಕ್ಷನ್‌, ಲೋಕಸಬೇ ಹಾಗೂ ವಿಧಾನಸಭೆ ಕ್ಷೇತ್ರಗಳ ಪುನರ್‌ ವಿಂಗಡಣೆಯಂತಹ ನೀತಿಗಳ ಬಗ್ಗೆ ನಿರ್ಣಯ ಕೈಗೊಳ್ಳಲಾಗಿದೆ. ಕೇಂದ್ರದ ಈ ಮೂರು ನೀತಿಗಳ ವಿರುದ್ಧ ನಿರ್ಣಯ ಮಂಡನೆ ಒಂದು ದೇಶ ಒಂದು ಚುನಾಣೆ ಪ್ರಜಾಪ್ರಭುತ್ವದ ವಿಕೇಂದ್ರೀಕರಣಕ್ಕೆ ವಿರುದ್ಧ. ಹೀಗಾಗಿ ಅದನ್ನು ಮಾಡಬಾರದು. ನೀಟ್‌ ರದ್ದುಪಡಿಸಬೇಕು. ಹಿಂದೆ ಇದ್ದಂತ ಸ್ಪರ್ಧಾತ್ಮಕ ಪರೀಕ್ಷೆ ನಡೆಸಿ ಸೀಟು ಹಂಚಿಕೆಗೆ ಅವಕಾಶ ಕೊಡಬೇಕು. 2026 ರಲ್ಲಿ ವಿಧಾನಸಭೆ, ಲೋಕಸಭೆ ಕ್ಷೇತ್ರಗಳ ಮರು ವಿಂಗಡಣೆ ಬೇಡ, ಇದರಿಂದ ಶಾಸಕರ ಸಂಖ್ಯೆ ಕುಸಿಯುತ್ತದೆ ಎಂಬ ನಿರ್ಣಯ ಕೈಗೊಳ್ಳಲಾಗಿದೆ.

Read More