Author: kannadanewsnow57

ಬೆಳಗಾವಿ : ಶಿಕ್ಷಕ ಹುದ್ದೆ ಆಕಾಂಕ್ಷಿಗಳಿಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಸಿಹಿಸುದ್ದಿಯೊಂದನ್ನು ನೀಡಿದ್ದು, ಶೀಘ್ರವೇ 20 ಸಾವಿರ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗುವುದು ಎಂದು ಹೇಳಿದ್ದಾರೆ. ಬೈಲಹೊಂಗಲ ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಮಂಗಳವಾರ ನಡೆದ ನೂತನ ಕೊಠಡಿಗಳ ಉದ್ಘಾಟನೆ ಮತ್ತು 2025-26ನೇ ಸಾಲಿನ ಕ್ರೀಡೆ, ಸಾಂಸ್ಕೃತಿಕ ಹಾಗೂ ಎನ್‌ಎಸ್‌ಎಸ್ ಚಟುವಟಿಕೆಗಳ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು,ಒಳಮೀಸಲಾತಿ ಸಮೀಕ್ಷೆ ವರದಿ ಬಂದ ತಕ್ಷಣ ಶಾಲೆಗಳಿಗೆ ಮತ್ತು ಅನುದಾನಿತ ಶಾಲೆಗಳಿಗೆ, ಕಾಲೇಜುಗಳಿಗೆ ಒಟ್ಟು 20 ಸಾವಿರ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗುವುದು ಎಂದು ಹೇಳಿದ್ದಾರೆ. ರಾಜ್ಯದಲ್ಲಿ ನೀಟ್, ಸಿಇಟಿ, ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಬಡ ವಿದ್ಯಾರ್ಥಿಗಳನ್ನು ತಯಾರು ಮಾಡುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ 25 ಸಾವಿರ ಮಕ್ಕಳಿಗೆ ಉಚಿತ ಕೋಚಿಂಗ್ ನೀಡುತ್ತಿದೆ. ಇದು ದೇಶದಲ್ಲಿಯೇ ಇತಿಹಾಸವಾಗಿದೆ. ಮುಂಬರುವ ದಿನಗಳಲ್ಲಿ ಎಲ್ಲ ವಿದ್ಯಾರ್ಥಿಗಳಿಗೆ ತರಬೇತಿ ನೀಡಲು ಕ್ರಮ ಕೈಕೊಳ್ಳಲಾಗುವದು ಎಂದರು. ಮಕ್ಕಳ ಕಲಿಕೆಗೆ ಅನುಕೂಲ ಮಾಡುವ ನಿಟ್ಟಿನಲ್ಲಿ ಸರ್ಕಾರಿ ಶಾಲೆಗಳಿಗೆ ಉಚಿತ ವಿದ್ಯುತ್ ಪೂರೈಕೆ…

Read More

ಬೆಂಗಳೂರು : ಪರಿವೀಕ್ಷಣಾ ಅವಧಿಯಲ್ಲಿ ತಡೆಹಿಡಿಯಲಾದ ವಾರ್ಷಿಕ ವೇತನ ಬಡ್ತಿಗಳನ್ನು ಬಿಡುಗಡೆಗೊಳಿಸಿ ವೇತನ ನಿಗಧೀಕರಿಸುವ ಕುರಿತು ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಪರಿವೀಕ್ಷಣಾ ಅವಧಿಯನ್ನು ತೃತ್ತಿಕರವಾಗಿ ಪೂರೈಸಿದ ಕೂಡಲೇ ವಾರ್ಷಿಕ ವೇತನ ಬಡ್ತಿ ಮಂಜೂರು ಮಾಡುವುದಕ್ಕೆ ಸಂಬಂಧಿಸಿದಂತೆ, ಗ್ರೂಪ್-ಸಿ ಮತ್ತು ಗ್ರೂಪ್-ಡಿ ಹುದ್ದೆಗಳಿಗೆ ನೇಮಕಾತಿ ಹೊಂದಿರುವ ಸರ್ಕಾರಿ ನೌಕರರು ಪರಿವೀಕ್ಷಣಾವಧಿಯನ್ನು ತೃಪ್ತಿಕರವಾಗಿ ಪೂರೈಸಿರುವ ಘೋಷಣೆ ನಂತರದಲ್ಲಿ ವಾರ್ಷಿಕ ವೇತನ ಬಡ್ತಿ ಬಿಡುಗಡೆಗೆ ಒಳಗೊಂಡಂತೆ ಸಕ್ಷಮ ಪ್ರಾಧಿಕಾರಗಳಿಂದ ವೇತನ ನಿಗಧಿ ಆದೇಶಗಳನ್ನು ಹೊರಡಿಸಲು ಸಾಮಾನ್ಯವಾಗಿ ವಿಳಂಬವಾಗುತ್ತಿದೆ. ಇದರಿಂದ ಅನಗತ್ಯ ತೊಂದರೆಯುಂಟಾಗುತ್ತಿದೆ. ಈ ಸನ್ನಿವೇಶಗಳನ್ನು ಸರಿಪಡಿಸುವ ದೃಷ್ಟಿಯಿಂದ ವೇತನ ನಿಗಧಿ ಆದೇಶಗಳು/ವಾರ್ಷಿಕ ವೇತನ ಬಡ್ತಿ ಬಿಡುಗಡೆಗಳಂತಹ ಪ್ರಕರಣಗಳಲ್ಲಿ ಪರಿವೀಕ್ಷಣಾವಧಿಯನ್ನು ತೃಪ್ತಿಕರವಾಗಿ ಪೂರೈಸಿದ ಘೋಷಣಾ ಆದೇಶ ಹೊರಡಿಸಿದ ದಿನಾಂಕದಿಂದ ಒಂದು ತಿಂಗಳೊಳಗಾಗಿ ಮಂಜೂರು ಮಾಡುವ ಕುರಿತು ಸೂಚನೆ ನೀಡುವಂತೆ ಆಯೋಗವು ಶಿಫಾರಸ್ಸು ಮಾಡಿದೆ. ಈ ಹಿನ್ನೆಲೆಯಲ್ಲಿ ಗ್ರೂಪ್-ಸಿ ಮತ್ತು ಡಿ ವೃಂದದ ಸರ್ಕಾರಿ ನೌಕರರ ಪರಿವೀಕ್ಷಣಾ ಅವಧಿಯನ್ನು ವಿಸ್ತರಿಸಿದ ಸಂದರ್ಭದಲ್ಲಿ, ಸಂಬಂಧಪಟ್ಟ ಸಕ್ಷಮ ಪ್ರಾಧಿಕಾರಗಳು…

Read More

ಬೆಂಗಳೂರು: ಆಸ್ಪತ್ರೆಯ ಹೊರೆಗೆ ನಡೆಯುವ ಎಲ್ಲ ಹಠಾತ್ ಸಾವುಗಳು ಇನ್ಮುಂದೆ ನೋಟಿಫೈಯಾಗಲಿದ್ದು, ಹೃದಯಾಘಾತಗಳ ಬಗ್ಗೆ ಸಂಶೋಧನೆಗೆ ಹೆಚ್ಚಿನ ಅಂಕಿ ಅಂಶಗಳು ದೊರೆಯಲಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.  ಬೆಂಗಳೂರಿನಲ್ಲಿ  ಕೋವಿಡ್ ಅಡ್ಡ ಪರಿಣಾಮಗಳ ಕುರಿತು ತಜ್ಞರ ಸಮಿತಿಯ ವರದಿ ಸ್ವೀಕರಿಸಿದ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ಮಧುಮೇಹ, ರಕ್ತದೊತ್ತಡ, ಒಬೆಸಿಟಿ ಹೆಚ್ಚಾಗಿದೆ. ಸ್ಟೀರಾಯ್ಡ್ ಹೆಚ್ಚಿನ ಬಳಕೆಯೂ ಕೂಡ ಕಾರಣವಾಗಿದೆ. ಕೋವಿಡ್ ಪೂರ್ವದಲ್ಲಿ ಜಯದೇವ ಆಸ್ಪತ್ರೆ ಮೆಡಿಕಲ್ ರೆಕಾರ್ಡ್ಸ್ ಗೆ ಹೊಲಿಕೆ ಮಾಡಿ ಕೂಡಾ ವರದಿ ಸಿದ್ಧಪಡಿಸಲಾಗಿದೆ. ಜಯದೇವ ಆಸ್ಪತ್ರೆಯಲ್ಲಿ 253 ಹೃದ್ರೋಗ ರೋಗಿಗಳ ಮೇಲೆ ಅಧ್ಯಯನ ಮಾಡಲಾಗಿದೆ. ಹೃದಯಾಘಾತಗಳಿಗೆ ಕೋವಿಡ್ ಲಸಿಕೆ ನೇರ ಕಾರಣವಲ್ಲ ಎಂದು ತಿಳಿದುಬಂದಿದೆ. ಎಂಆರ್ ಎನ್ ಎ ಲಸಿಕೆಯಿಂದ ಕೊಂಚ ಸಮಸ್ಯೆ ಎದುರಾಗಿದೆ. ಆದರೆ ಈ ಲಸಿಕೆಯನ್ನು ನಮ್ಮ ದೇಶದಲ್ಲಿ ಯಾರು ಪಡೆದಿಲ್ಲ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದರು. https://twitter.com/KarnatakaVarthe/status/1942511780049346619?ref_src=twsrc%5Etfw%7Ctwcamp%5Etweetembed%7Ctwterm%5E1942511780049346619%7Ctwgr%5Ec232a862b1a45e019e8577077c7e0ba6c33d0c44%7Ctwcon%5Es1_&ref_url=https%3A%2F%2Fkannadadunia.com%2Fgovernment-decides-to-treat-sudden-death-in-the-state-as-a-notified-disease%2F ಮೊಬೈಲ್, ಸಿಸ್ಟಮ್ ಗಳ ಸ್ಕ್ರೀನ್ ಮುಂದೆ ಮಿತಿಮೀರಿದ ಸಮಯ ಕಳೆದಿರುವುದು ಪರಿಣಾಮ…

Read More

ಕೊಪ್ಪಳ: ರಾಜ್ಯಾದ್ಯಂತ ಕರ್ನಾಟಕ ಪಬ್ಲಿಕ್ ಸ್ಕೂಲ್(KPS) ಗಳಲ್ಲಿ ಓದುವ ವಿದ್ಯಾರ್ಥಿಗಳಿಗೆ ಉಚಿತವಾಗಿ ಬಸ್ ವ್ಯವಸ್ಥೆ ಆರಂಭಿಸಲು ರಾಜ್ಯ ಸರ್ಕಾರ ತೀರ್ಮಾನ ಕೈಗೊಂಡಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಎಸ್. ಮಧು ಬಂಗಾರಪ್ಪ ಹೇಳಿದ್ದಾರೆ.  ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಪಿಎಸ್ ಶಾಲೆಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಬಡ ಮಕ್ಕಳು ಓದುತ್ತಿದ್ದಾರೆ. ಎಲ್ಕೆಜಿಯಿಂದ ಪಿಯುಸಿವರೆಗೆ ಶಿಕ್ಷಣ ನೀಡಲಾಗುತ್ತಿದೆ. ಈ ಶಾಲೆಯ ಮಕ್ಕಳಿಗೆ ಅನುಕೂಲ ಕಲ್ಪಿಸಲು ಉಚಿತವಾಗಿ ಬಸ್ ವ್ಯವಸ್ಥೆ ಆರಂಭಿಸಲು ಸರ್ಕಾರ ತೀರ್ಮಾನ ನಿರ್ಧಾರ ಕೈಗೊಂಡಿದೆ. ಯಾವ ಭಾಗದಲ್ಲಿ ಅವಶ್ಯಕತೆ ಇದೆಯೋ ಅಲ್ಲಿ ಉಚಿತ ಬಸ್ ವ್ಯವಸ್ಥೆಗಳನ್ನು ಮೊದಲು ಕಲ್ಪಿಸಲಾಗುವುದು ಎಂದು ತಿಳಿಸಿದ್ದಾರೆ. ಶಿಕ್ಷಣ ಇಲಾಖೆಯಲ್ಲಿ ಸಾಕಷ್ಟು ಕೆಲಸಗಳು ಆಗುತ್ತಿವೆ. ರಾಜ್ಯ ಸರ್ಕಾರ ಮತ್ತು ಅಜೀಮ್ ಪ್ರೇಮಜಿ ಫೌಂಡೇಶನ್ ಸಹಯೋಗದಲ್ಲಿ ಸರ್ಕಾರಿ ಶಾಲಾ ಮಕ್ಕಳಿಗೆ ವಾರದಲ್ಲಿ ಆರು ದಿನ ಮೊಟ್ಟೆ ಮತ್ತು ಬಾಳೆ ಹಣ್ಣುಗಳನ್ನು ವಿತರಣೆ ಮಾಡಲಾಗುತ್ತಿದೆ. ಇದರ ಜೊತೆಗೆ ಮಕ್ಕಳಿಗೆ ಬಿಸಿಊಟ, ಹಾಲು, ಪಠ್ಯ ಪುಸ್ತಕ, ಸಮವಸ್ತ್ರದೊಂದಿಗೆ ಶೂಗಳು ಮತ್ತು…

Read More

ಬೆಂಗಳೂರು : ಖಜಾನೆ-2 ರಲ್ಲಿ ಕೆಜಿಐಡಿ (KGID) ಪಾಲಿಸಿ ಸಂಖ್ಯೆ ಬದಲು ಹೆಚ್ ಆರ್ ಎಂಎಸ್ ಸೃಜಿತ ನೌಕರರ ಐಡಿಯನ್ನು ಬಳಕೆದಾರರ ಲಾಗಿನ್ ಆಗಿ ಬಳಸುವ ಕುರಿತು ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಖಜಾನೆ-2 ಅನುಷ್ಠಾನವಾಗುವ ಮೊದಲು, ಸರ್ಕಾರದ ಇಲಾಖೆಗಳಿಗೆ ನೂತನವಾಗಿ ನೇಮಕಾತಿ ಹೊಂದಿದ ನೌಕರರು ಅವರಿಗೆ ಅನ್ವಯವಾಗುವ ಕೆಜಿಐಡಿ ವಂತಿಗೆಯ ದರದಲ್ಲಿ ವಂತಿಗೆಯ ಮೊದಲ ಕಂತನ್ನು ನಗದಾಗಿ ಪಾವತಿಸಿ, ಪಾಲಿಸಿಗಾಗಿ ಪ್ರಸ್ತಾವನೆಯನ್ನು ಕೆಜಿಐಡಿ ಇಲಾಖೆಗೆ ಸಲ್ಲಿಸಬೇಕಾಗಿರುತ್ತದೆ. ಕರ್ನಾಟಕ ಆರ್ಥಿಕ ಸಂಹಿತೆ ಅನುಚ್ಚೇಧ 88(ಎ) ರಂತೆ, ಕೆಜಿಐಡಿ ಪಾಲಿಸಿಗಾಗಿ ಪ್ರಸ್ತಾವನೆಯನ್ನು ಸಲ್ಲಿಸಿರುವ ಕುರಿತು ಡಿಡಿಓ ರವರು ವೇತನ ಬಿಲ್ಲಿನಲ್ಲಿ ಪ್ರಮಾಣ ಪತ್ರವನ್ನು ದಾಖಲಿಸಿ ನೂತನವಾಗಿ ನೇಮಕಗೊಂಡಿರುವ ನೌಕರರ ಪ್ರಥಮ ವೇತನವನ್ನು ಸೆಳೆಯಬಹುದಾಗಿತ್ತು. ಖಜಾನೆ-2 ಹಾಗೂ ನೂತನ ರಾಷ್ಟ್ರೀಯ ಪಿಂಚಣಿ ಯೋಜನೆ ಜಾರಿಯಾದ ನಂತರ, ಕೆಜಿಐಡಿ ಜೊತೆ, ನೂತನ ರಾಷ್ಟ್ರೀಯ ಪಿಂಚಣಿ ಯೋಜನೆಗೆ ನೋಂದಾವಣೆಯಾಗಿ PRAN ಪಡೆದ ನಂತರ ಪ್ರಥಮ ವೇತನವನ್ನು ಸೆಳೆಯಬೇಕಾಗಿದ್ದು, ಕೆಜಿಐಡಿ ಪಾಲಿಸಿ ಸಂಖ್ಯೆಯನ್ನು, PRAN ಪಡೆಯಲು ನೌಕರರ…

Read More

ಬೆಂಗಳೂರು : 2024-25ನೇ ಸಾಲಿನ ಆಯವ್ಯಯ ಭಾಷಣದ ಕಂಡಿಕೆ-184(3) ರಲ್ಲಿ ಘೋಷಿಸಿರುವಂತೆ 2025-26ನೇ ಸಾಲಿಗೆ “50 ಹೊಸ ಮೌಲಾನಾ ಆಜಾದ್ ಮಾದರಿ ಶಾಲೆಗಳನ್ನು ಪ್ರಾರಂಭಿಸಲು” ಸರ್ಕಾರದ ಮಂಜೂರಾತಿ ನೀಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಮೇಲೆ ಓದಲಾದ ಕ್ರ.ಸಂ.(1) ರ 2024-25ನೇ ಸಾಲಿನ ಆಯವ್ಯಯ ಭಾಷಣದ ಕಂಡಿಕೆ -184(3) ರಲ್ಲಿ ಈ ಕೆಳಕಂಡಂತೆ ಘೋಷಿಸಲಾಗಿರುತ್ತದೆ. 100 ಹೊಸ ಮೌಲಾನಾ ಆಜಾದ್ ಮಾದರಿ ಶಾಲೆಗಳನ್ನು ತೆರೆಯುವುದು ” ಮೇಲೆ ಓದಲಾದ ಕ್ರ.ಸಂ.(2) ರ ಸರ್ಕಾರದ ಆದೇಶದಲ್ಲಿ 2024-25ನೇ ಸಾಲಿನ ಆಯವ್ಯಯ ಭಾಷಣದ ಕಂಡಿಕೆ-184 (3)ರ ಘೋಷಣೆಯಂತೆ, ಮೊದಲ ಹಂತದಲ್ಲಿ 2024-25 ನೇ ಸಾಲಿಗೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ 60 ಸಂಖ್ಯಾಬಲದ 50 ಹೊಸ ಮೌಲಾನಾ ಆಜಾದ್ ಮಾದರಿ ಶಾಲೆಗಳನ್ನು ಪ್ರಾರಂಭಿಸಲು ಮಂಜೂರಾತಿ ನೀಡಿ, ಪ್ರತಿ ಹೊಸ ಮೌಲಾನಾ ಆಜಾದ್ ಮಾದರಿ ಶಾಲೆಗೆ 07 ಹುದ್ದೆಗಳಂತೆ ಒಟ್ಟು 350 ಬೋಧಕ ಹುದ್ದೆಗಳನ್ನು ಸೃಜಿಸಿ ಭರ್ತಿ ಮಾಡಿಕೊಳ್ಳಲು ಅನುಮೋದನೆ ನೀಡಿ ಆದೇಶಿಸಿದೆ. 2025-26ನೇ ಸಾಲಿನಲ್ಲಿ 50…

Read More

ಜನರು ರೀಲ್‌ಗಳನ್ನು ಮಾಡಲು ತಮ್ಮ ಜೀವವನ್ನು ಪಣಕ್ಕಿಡುತ್ತಿದ್ದಾರೆ. ಅಂತಹ ಅನೇಕ ವೀಡಿಯೊಗಳು ಪ್ರತಿದಿನ ಸಾಮಾಜಿಕ ಮಾಧ್ಯಮದಲ್ಲಿ ಹೊರಬರುತ್ತವೆ. ಈಗ ಅಂತಹ ಒಂದು ವೀಡಿಯೊ ಹೊರಬಂದಿದೆ. ಇದನ್ನು ನೋಡಿದ ನಂತರ ಜನರು ಆಕ್ರೋಶ ಹೊರಹಾಕಿದ್ದಾರೆ.  ರಾಜಸ್ಥಾನದ ಭರತ್‌ಪುರ ಜಿಲ್ಲೆಯಿಂದ ಈ ವೀಡಿಯೊ ಹೊರಬಂದಿದೆ. ಪೋಷಕರು ಬರೇಥಾ ಅಣೆಕಟ್ಟನ್ನು ನಡೆದುಕೊಂಡು ಹೋಗಲು ತಲುಪಿದಾಗ ಮತ್ತು ಈ ಸಮಯದಲ್ಲಿ ಅವರು ಅಣೆಕಟ್ಟಿನಲ್ಲಿ ಮಗಳ ಜೀವವನ್ನು ಅಪಾಯಕ್ಕೆ ಸಿಲುಕಿಸಿ ವೀಡಿಯೊ ಮಾಡಲು ಕಬ್ಬಿಣದ ಕೋನದ ಮೇಲೆ ಕೂರಿಸುತ್ತಾರೆ. ವೀಡಿಯೊದಲ್ಲಿ, ಹುಡುಗಿ ಭಯಭೀತಳಾಗಿರುವುದನ್ನು ಮತ್ತು ತಂದೆಯ ಕೈಯನ್ನು ಬಿಡುವುದಿಲ್ಲ ಎಂದು ನೀವು ನೋಡಬಹುದು, ಇದರ ಹೊರತಾಗಿಯೂ ಅವಳನ್ನು ಕೋನದ ಬಳಿಯ ವಿದ್ಯುತ್ ಪೆಟ್ಟಿಗೆಯ ಮೇಲೆ ಕುಳಿತುಕೊಳ್ಳುವಂತೆ ಮಾಡಲಾಗಿದೆ. https://twitter.com/sourabhskhandel/status/1942120140218519694?ref_src=twsrc%5Etfw%7Ctwcamp%5Etweetembed%7Ctwterm%5E1942120140218519694%7Ctwgr%5Ed5f21c357798a4fdc4b2a194e24bf2c91945b974%7Ctwcon%5Es1_c10&ref_url=https%3A%2F%2Fm.dailyhunt.in%2Fnews%2Findia%2Fhindi%2Flatestlyhindi-epaper-dh9be9acbd9792411390454cf890a581ca%2Frajasthanshockeraisilaparavahirilkeliematapitanekhataremedalibacchikijandaimkeengalparbithayarajasthankebharatapurjilekavidiyoaayasamanevideo-newsid-n671584737 ಈ ವೀಡಿಯೊ ಕಾಣಿಸಿಕೊಂಡ ನಂತರ, ಜನರು ಈ ಪೋಷಕರ ಬಗ್ಗೆಯೂ ಆಕ್ರೋಶ ಹೊರಹಾಕಿದ್ದಾರೆ. ಈ ವೀಡಿಯೊವನ್ನು @sourabhskhandel ಎಂಬ ಹ್ಯಾಂಡಲ್‌ನೊಂದಿಗೆ ಸಾಮಾಜಿಕ ಮಾಧ್ಯಮ X ನಲ್ಲಿ ಹಂಚಿಕೊಳ್ಳಲಾಗಿದೆ.

Read More

ನವದೆಹಲಿ : ಭಾರತದ ಅಸ್ಸಾಂ ರಾಜ್ಯದಲ್ಲಿ ಭೂಕಂಪನದ ಅನುಭವವಾಗಿದೆ. ಮಂಗಳವಾರ ಬೆಳಿಗ್ಗೆ ಅಸ್ಸಾಂನ ಕರ್ಬಿ ಆಂಗ್ಲಾಂಗ್ ಜಿಲ್ಲೆಯಲ್ಲಿ 4.1 ತೀವ್ರತೆಯ ಭೂಕಂಪನ ಸಂಭವಿಸಿದೆ. ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ (NCS) ಈ ಮಾಹಿತಿಯನ್ನು ನೀಡಿದೆ. ಇದರಿಂದಾಗಿ ಯಾವುದೇ ಜೀವ ಅಥವಾ ಆಸ್ತಿ ನಷ್ಟದ ಸುದ್ದಿ ಇಲ್ಲ. ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರದ ಪ್ರಕಾರ, ಈ ಭೂಕಂಪವು ಮಂಗಳವಾರ ಬೆಳಿಗ್ಗೆ 9:22 ಕ್ಕೆ ಸಂಭವಿಸಿದೆ, ಇದರ ಆಳ 25 ಕಿಲೋಮೀಟರ್ ಆಗಿತ್ತು. ಭೂಕಂಪದ ಕೇಂದ್ರವು 26.51 ° N ಅಕ್ಷಾಂಶ ಮತ್ತು 93.15 ° E ರೇಖಾಂಶದಲ್ಲಿದೆ. https://twitter.com/NCS_Earthquake/status/1942432985799647661?ref_src=twsrc%5Etfw%7Ctwcamp%5Etweetembed%7Ctwterm%5E1942432985799647661%7Ctwgr%5E4b9ca6abb6e926ef424d6249057c9ed09f4e33cf%7Ctwcon%5Es1_c10&ref_url=https%3A%2F%2Fm.dailyhunt.in%2Fnews%2Findia%2Ftelugu%2Fbigtvlive-epaper-dhb9ba7aee909947d9bf9d1b2f71d12a72%2Fstomachcancereebladgrupuunnavaarikipottakyaansarvachhepramaadamekkuvajaagrattagaundaalsinde-newsid-n671649648

Read More

ನವದೆಹಲಿ : ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರ ತಂದೆ 81 ವರ್ಷ ವಯಸ್ಸಿನಲ್ಲಿ ಜುಲೈ 8 ರಂದು ಮಂಗಳವಾರ ಮಧ್ಯಾಹ್ನ 11:52 ಕ್ಕೆ ಜೋಧಪುರ ಏಮ್ಸ್‌ನಲ್ಲಿ ನಿಧನರಾದರು. ಮಾಹಿತಿಯ ಪ್ರಕಾರ, ರೈಲ್ವೆ ಸಚಿವರ ತಂದೆ ದೌಲತ್ ಲಾಲ್ ವೈಷ್ಣವ್ ಕಳೆದ ಕೆಲವು ದಿನಗಳಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದರು ಮತ್ತು ಜೋಧಪುರದ ಏಮ್ಸ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ವೈದ್ಯಕೀಯ ತಂಡದ ಎಲ್ಲಾ ಪ್ರಯತ್ನಗಳ ಹೊರತಾಗಿಯೂ, ಅವರನ್ನು ಉಳಿಸಲು ಸಾಧ್ಯವಾಗಲಿಲ್ಲ. https://twitter.com/aiims_jodhpur/status/1942473105659646223?ref_src=twsrc%5Etfw%7Ctwcamp%5Etweetembed%7Ctwterm%5E1942473105659646223%7Ctwgr%5E4b9ca6abb6e926ef424d6249057c9ed09f4e33cf%7Ctwcon%5Es1_c10&ref_url=https%3A%2F%2Fm.dailyhunt.in%2Fnews%2Findia%2Ftelugu%2Fbigtvlive-epaper-dhb9ba7aee909947d9bf9d1b2f71d12a72%2Fstomachcancereebladgrupuunnavaarikipottakyaansarvachhepramaadamekkuvajaagrattagaundaalsinde-newsid-n671649648

Read More

ತುಮಕೂರು : ತುಮಕೂರಿನಲ್ಲಿ ದಾವಣಗೆರೆ ಪಿಎಸ್ಐ ನಾಗರಾಜಪ್ಪ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಗನ ವಿಚಾರವಾಗಿ ಮನನೊಂದು ನಾಗರಾಜಪ್ಪ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ತುಮಕೂರು ನಗರ ಪೊಲೀಸರ ತನಿಖೆಯ ವೇಳೆ ಈ ಒಂದು ವಿಚಾರ ಬೆಳಕಿಗೆ ಬಂದಿದೆ. ಪಿಎಸ್ಐ ನಾಗರಾಜಪ್ಪ ಬರೆದಿದ್ದ ಡೆತ್ ನೋಟನ್ನು ಪೊಲೀಸರು ಪಡೆದಿದ್ದರು. ನಾಗರಾಜಯ್ಯ ಸಾವಿನ ಕಾರಣದ ಬಗ್ಗೆ ಪೊಲೀಸರು ತನಿಖೆ ಆರಂಭಿಸಿದ್ದರು. ತುಮಕೂರಿಗೆ ಬರುವ ಮುನ್ನ ಮನೆಯಲ್ಲಿ ಪಿಎಸ್ಐ ನಾಗರಾಜಪ್ಪ ಜಗಳವಾಡಿದ್ದರು. ಇಂಜಿನಿಯರ್ ಮುಗಿಸಿದ್ದ ಮಗ ಮನೆಯಲ್ಲಿ ಇದ್ದಿದ್ದಕ್ಕೆ ನಾಗರಾಜಪ್ಪ ತೀವ್ರ ಬೇಸರಗೊಂಡಿದ್ದರು. ಇದೇ ವಿಚಾರವಾಗಿ ನಾಗರಾಜಪ್ಪ ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ. ದಾವಣಗೆರೆಯಿಂದ ತುಮಕೂರಿಗೆ ಬಂದು ಲಾಡ್ಜ್ ನಲ್ಲಿ ನಾಗರಾಜಪ್ಪ ನೇಣಿಗೆ ಶರಣಾಗಿದ್ದಾರೆ. ಮಗನ ವಿಚಾರವಾಗಿ ಬೇಸರಗೊಂಡು ನಾನು ಆತ್ಮಹತ್ಯೆ ಮಾಡಿ ಕೊಳ್ಳುತ್ತಿದ್ದೇನೆ. ನನ್ನ ಮಗನಿಗೆ ಕೆಲಸ ಸಿಗಲಿ ಎಂಬ ಉದ್ದೇಶಕ್ಕಾಗಿ ಆತ್ಮಹತ್ಯೆಗೆ ಶರಣಾಗಿದ್ದೇನೆ ಎಂದು ಪಿಎಸ್ಐ ನಾಗರಾಜಪ್ಪ ಡೆತ್ ನೋಟ್ ನಲ್ಲಿ ಉಲ್ಲೇಖಿಸಿದ್ದಾರೆ. ಪಿಎಸ್ಐ ಆತ್ಮಹತ್ಯೆ ಕೇಸ್ ಶೀಘ್ರದಲ್ಲೇ ದಾವಣಗೆರೆಗೆ ವರ್ಗಾಯಿಸಲಾಗುತ್ತದೆ ದಾವಣಗೆರೆಯ ಕೆಟಿಜೆ…

Read More