Subscribe to Updates
Get the latest creative news from FooBar about art, design and business.
Author: kannadanewsnow57
ಬೆಂಗಳೂರು: ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ ನಡೆದಿದ್ದು, ಪೂಜೆ ಮತ್ತು ದೀಕ್ಷೆಯ ನೆಪದಲ್ಲಿ ಬ್ಯೂಟಿಷಿಯನ್ ಒಬ್ಬರ ಮೇಲೆ ಜ್ಯೋತಿಷಿಯೊಬ್ಬ ನಿರಂತರವಾಗಿ ಅತ್ಯಾಚಾರ ಎಸಗಿರುವ ಘನಘೋರ ಘಟನೆಯೊಂದು ಸಿ.ಕೆ. ಅಚ್ಚುಕಟ್ಟು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬೆಳಕಿಗೆ ಬಂದಿದೆ. ಘಟನೆಯ ಹಿನ್ನೆಲೆ: ರಾಜಾಜಿನಗರದಲ್ಲಿ ಬ್ಯೂಟಿಷಿಯನ್ ಟ್ರೈನಿಂಗ್ ಸೆಂಟರ್ ನಡೆಸುತ್ತಿದ್ದ ಮಹಿಳೆಗೆ, ಆರೋಪಿ ಮೋಹನ್ ಕುಮಾರ್ ಎಂಬಾತ ತನ್ನ ಸಹೋದರಿಯ ಅಡ್ಮಿಷನ್ ನೆಪದಲ್ಲಿ ಪರಿಚಯವಾಗಿದ್ದನು. ಮಹಿಳೆಯ ಆರ್ಥಿಕ ಅಭಿವೃದ್ಧಿಗಾಗಿ ಪೂಜೆ ಮಾಡಿಸಬೇಕು ಎಂದು ನಂಬಿಸಿದ್ದ ಈತ, ಆಕೆಯನ್ನು ನಂಬಿಸಿ ವಂಚಿಸಿದ್ದಾನೆ. ಜೂನ್ 30, 2025 ರಂದು ರಾಮನಗರದ ಪಿರಮಿಡ್ ವ್ಯಾಲಿಗೆ ಕರೆದೊಯ್ದು ನಿರ್ಜನ ಪ್ರದೇಶದಲ್ಲಿ ಅತ್ಯಾಚಾರಕ್ಕೆ ಯತ್ನಿಸಿದ್ದನು. ನಂತರ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಪೂಜೆಗೆಂದು ಕರೆದೊಯ್ದು, ವಾಪಸ್ಸಾಗುವಾಗ ಕಾರಿನಲ್ಲಿಯೇ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಫೆಬ್ರವರಿ 10ರಂದು ದೀಕ್ಷೆ ನೀಡುವ ನೆಪದಲ್ಲಿ ಮಹಿಳೆಯ ಮನೆಗೆ ಬಂದಿದ್ದ ಆರೋಪಿ, ಪತಿ ಮತ್ತು ಮಗನನ್ನು ಮನೆಯಿಂದ ಹೊರಗೆ ಕಳುಹಿಸಿ ಮಹಿಳೆಯ ಮೇಲೆ ದೌರ್ಜನ್ಯ ನಡೆಸಿದ್ದಾನೆ. ವಾಮಾಚಾರದ ಭೀತಿ ಮತ್ತು ಬೆದರಿಕೆ:…
ನವದೆಹಲಿ: ದೆಹಲಿಯ ವಿವೇಕ್ ವಿಹಾರ್ ಪ್ರದೇಶದ ವಸತಿ ಸಂಕೀರ್ಣವೊಂದರಲ್ಲಿ ಶನಿವಾರ ತಡರಾತ್ರಿ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ ಕನಿಷ್ಠ ಒಂಬತ್ತು ಜನರು ಸಾವನ್ನಪ್ಪಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ವಿವೇಕ್ ವಿಹಾರ್ ಫೇಸ್-1 ರಲ್ಲಿರುವ ವಸತಿ ಕಟ್ಟಡದ ಎರಡನೇ, ಮೂರನೇ ಮತ್ತು ನಾಲ್ಕನೇ ಮಹಡಿಗಳಿಗೆ ಬೆಂಕಿ ವ್ಯಾಪಿಸಿದೆ.ಭಾನುವಾರ ಮುಂಜಾನೆ ಸುಮಾರು 3:47 ಗಂಟೆಗೆ ಅಗ್ನಿಶಾಮಕ ದಳಕ್ಕೆ ಬೆಂಕಿ ಕಾಣಿಸಿಕೊಂಡ ಬಗ್ಗೆ ಮಾಹಿತಿ ಲಭಿಸಿದೆ. ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳೀಯ ಪೊಲೀಸರು, ಅಗ್ನಿಶಾಮಕ ದಳ ಮತ್ತು ವಿಪತ್ತು ನಿರ್ವಹಣಾ ತಂಡಗಳು ಸ್ಥಳಕ್ಕೆ ಧಾವಿಸಿವೆ. ಬೆಂಕಿ ಕಾಣಿಸಿಕೊಂಡಾಗ ಕಟ್ಟಡದೊಳಗೆ ಸಿಲುಕಿಕೊಂಡಿದ್ದ ಹತ್ತಕ್ಕೂ ಹೆಚ್ಚು ಜನರನ್ನು ಯಶಸ್ವಿಯಾಗಿ ರಕ್ಷಿಸಲಾಗಿದೆ. ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಬೆಂಕಿ ನಂದಿಸುವ ಮತ್ತು ರಕ್ಷಣಾ ಕಾರ್ಯಾಚರಣೆ ತೀವ್ರಗತಿಯಲ್ಲಿ ಸಾಗಿದೆ. ಬೆಂಕಿ ಅವಘಡಕ್ಕೆ ನಿಖರವಾದ ಕಾರಣ ಇನ್ನೂ ತಿಳಿದುಬಂದಿಲ್ಲ. https://twitter.com/ANI/status/2050771059306283452?s=20
ಬೆಂಗಳೂರು: ಸ್ಯಾಂಡಲ್ವುಡ್ ನಟ ಚೇತನ್ ಅಹಿಂಸಾ ನೀಡಿದ ದೂರಿನನ್ವಯ ಹಿರಿಯ ಚಲನಚಿತ್ರ ನಿರ್ಮಾಪಕ ಸಾ.ರಾ. ಗೋವಿಂದು ಮತ್ತು ಇತರರ ವಿರುದ್ಧ ಬೆಂಗಳೂರಿನ ಶೇಷಾದ್ರಿಪುರಂ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ (FIR) ದಾಖಲಾಗಿದೆ. ಪ್ರಕರಣದ ಹಿನ್ನೆಲೆ ಏನು? ಇತ್ತೀಚೆಗೆ ನಟ ಚೇತನ್ ಅಹಿಂಸಾ ಅವರು ಡಾ. ರಾಜ್ಕುಮಾರ್ ಅವರ ಸಮಾಧಿ ಜಾಗದ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಒಂದನ್ನು ಹಂಚಿಕೊಂಡಿದ್ದರು. ಈ ಪೋಸ್ಟ್ ಕನ್ನಡಿಗರ ಮತ್ತು ರಾಜ್ ಅಭಿಮಾನಿಗಳ ಆಕ್ರೋಶಕ್ಕೆ ಕಾರಣವಾಗಿತ್ತು. ಈ ವಿಷಯಕ್ಕೆ ಸಂಬಂಧಿಸಿದಂತೆ ಕಳೆದ ಶನಿವಾರ ಸಾ.ರಾ. ಗೋವಿಂದು ನೇತೃತ್ವದ ತಂಡವು ಚೇತನ್ ಅವರ ಮನೆಗೆ ತೆರಳಿ ಪ್ರತಿಭಟಿಸಿತ್ತು. ದೂರಿನಲ್ಲಿ ಏನಿದೆ? ತಮ್ಮ ಮನೆಗೆ ನುಗ್ಗಿದ ಸಾ.ರಾ. ಗೋವಿಂದು, ಶಿವರಾಮೇಗೌಡ, ಶಿವಕುಮಾರ್ ನಾಯ್ಕ್ ಹಾಗೂ ಬೆಂಬಲಿಗರು ಗಲಾಟೆ ಮಾಡಿದ್ದಾರೆ ಎಂದು ಚೇತನ್ ದೂರಿನಲ್ಲಿ ಉಲ್ಲೇಖಿಸಿದ್ದಾರೆ.ಅವಾಚ್ಯ ಶಬ್ದಗಳಿಂದ ನಿಂದಿಸಿ ಪ್ರಾಣ ಬೆದರಿಕೆ ಹಾಕಲಾಗಿದೆ. ಸಾ.ರಾ. ಗೋವಿಂದು ಅವರು ದುರಹಂಕಾರ ಮತ್ತು ಗೂಂಡಾಗಿರಿಯಿಂದ ವರ್ತಿಸುತ್ತಿದ್ದಾರೆ ಎಂದು ಚೇತನ್ ಆರೋಪಿಸಿದ್ದಾರೆ. ಚೇತನ್ ಅಹಿಂಸಾ ಪ್ರತಿಕ್ರಿಯೆ: “ಸಾ.ರಾ.…
ನವದೆಹಲಿ: ದೆಹಲಿಯ ಶಾಹದರಾ ಪ್ರದೇಶದ ವಿವೇಕ್ ವಿಹಾರ್ನಲ್ಲಿ ಶನಿವಾರ ತಡರಾತ್ರಿ ಭೀಕರ ಅಗ್ನಿ ಅವಘಡ ಸಂಭವಿಸಿದೆ. ಇಲ್ಲಿನ ನಾಲ್ಕು ಅಂತಸ್ತಿನ ಕಟ್ಟಡವೊಂದರಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದ್ದು, ದುರಂತದಲ್ಲಿ ಈವರೆಗೆ ಕನಿಷ್ಠ 3 ರಿಂದ 4 ಮೃತದೇಹಗಳನ್ನು ಹೊರತೆಗೆಯಲಾಗಿದೆ. ಬೆಂಕಿಯ ಕೆನ್ನಾಲಿಗೆಗೆ ಇಡೀ ಕಟ್ಟಡ ಆವೃತವಾಗುತ್ತಿದ್ದಂತೆ ಸ್ಥಳೀಯರು ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದಾರೆ. ತಕ್ಷಣವೇ ಕಾರ್ಯಪ್ರವೃತ್ತರಾದ ಅಗ್ನಿಶಾಮಕ ಸಿಬ್ಬಂದಿ, ಹಲವಾರು ಅಗ್ನಿಶಾಮಕ ವಾಹನಗಳೊಂದಿಗೆ (Fire Tenders) ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ. ಕಟ್ಟಡದೊಳಗೆ ಇನ್ನೂ ಕೆಲವರು ಸಿಲುಕಿರುವ ಶಂಕೆ ವ್ಯಕ್ತವಾಗಿದ್ದು, ರಕ್ಷಣಾ ಕಾರ್ಯಾಚರಣೆ ಚುರುಕಿನಿಂದ ಸಾಗಿದೆ. ಬೆಂಕಿ ಕಾಣಿಸಿಕೊಳ್ಳಲು ನಿಖರವಾದ ಕಾರಣ ಇನ್ನೂ ತಿಳಿದುಬಂದಿಲ್ಲ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ. https://twitter.com/ANI/status/2050771059306283452?s=20
ಲಕ್ನೋ: ಎಸ್‌ಸಿ/ಎಸ್‌ಟಿ (ದೌರ್ಜನ್ಯ ತಡೆ) ಕಾಯ್ದೆಯ ದುರುಪಯೋಗದ ಕುರಿತು ಅಲಹಾಬಾದ್ ಹೈಕೋರ್ಟ್ ಅತ್ಯಂತ ಮಹತ್ವದ ತೀರ್ಪನ್ನು ನೀಡಿದೆ. ಕೇವಲ ಒಬ್ಬ ವ್ಯಕ್ತಿಯನ್ನು ಅವರ ಜಾತಿಯ ಹೆಸರಿನಿಂದ ಸಂಬೋಧಿಸಿದ ತಕ್ಷಣವೇ ಅದು ಈ ಕಾಯ್ದೆಯಡಿ ಅಪರಾಧವಾಗುವುದಿಲ್ಲ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ. ನ್ಯಾಯಾಲಯದ ಪ್ರಮುಖ ಅವಲೋಕನಗಳು: ನ್ಯಾಯಮೂರ್ತಿ ಮದನ್ ಪಾಲ್ ಸಿಂಗ್ ಅವರ ಏಕಸದಸ್ಯ ಪೀಠವು ಈ ಪ್ರಕರಣದ ವಿಚಾರಣೆ ನಡೆಸಿ ಕೆಳಗಿನ ಅಂಶಗಳನ್ನು ಒತ್ತಿ ಹೇಳಿದೆ. ಸಂತ್ರಸ್ತನನ್ನು ಜಾತಿಯ ಹೆಸರಿನಲ್ಲಿ ಅವಮಾನಿಸುವ, ಬೆದರಿಸುವ ಅಥವಾ ಸಾರ್ವಜನಿಕವಾಗಿ ಕೀಳಾಗಿ ಕಾಣುವ ಸ್ಪಷ್ಟವಾದ ‘ದುರುದ್ದೇಶ’ ಇದ್ದಾಗ ಮಾತ್ರ ಅದನ್ನು ಅಟ್ರಾಸಿಟಿ ಕಾಯ್ದೆಯಡಿ ಅಪರಾಧವೆಂದು ಪರಿಗಣಿಸಬಹುದು. ವೈಯಕ್ತಿಕ ಜಗಳಗಳಿಗೆ ಅನ್ವಯಿಸದು: ವೈಯಕ್ತಿಕ ಜಗಳ ಅಥವಾ ಹಲ್ಲೆಯ ಸಂದರ್ಭದಲ್ಲಿ ಆಕಸ್ಮಿಕವಾಗಿ ಜಾತಿಯ ಪ್ರಸ್ತಾಪ ಬಂದ ತಕ್ಷಣವೇ ಅದನ್ನು ದೌರ್ಜನ್ಯ ಕಾಯ್ದೆಯಡಿ ತರುವುದು ಕಾನೂನಿನ ದುರುಪಯೋಗವಾಗುತ್ತದೆ. ಸಾರ್ವಜನಿಕ ಸ್ಥಳದ ನಿಯಮ: ಆರೋಪಿಯು ಸಂತ್ರಸ್ತನ ಸಾಮಾಜಿಕ ವರ್ಗವನ್ನು ಗುರಿಯಾಗಿಸಿಕೊಂಡು ಸಾರ್ವಜನಿಕವಾಗಿ ಅವಮಾನಿಸುವ ಉದ್ದೇಶ ಹೊಂದಿರಬೇಕು. ಪ್ರಕರಣದ ಹಿನ್ನೆಲೆ: 2019ರಲ್ಲಿ ಅಮೇಯ್ ಪಾಂಡೆ…
ಇಂದಿನ ಡಿಜಿಟಲ್ ಯುಗದಲ್ಲಿ ಯುಪಿಐ (UPI) ವಹಿವಾಟುಗಳು ಹೆಚ್ಚಾಗಿದ್ದರೂ, ವ್ಯಾಪಾರ ಮತ್ತು ವೈಯಕ್ತಿಕ ಹಣಕಾಸು ವ್ಯವಹಾರಗಳಲ್ಲಿ ‘ಚೆಕ್’ (Cheque) ಇಂದಿಗೂ ಅತ್ಯಂತ ವಿಶ್ವಾಸಾರ್ಹ ಸಾಧನವಾಗಿದೆ. ಆದರೆ, ಸಹಿ ಮಾಡಿ ಬೇರೆಯವರಿಗೆ ಚೆಕ್ ನೀಡುವಾಗ ಸರಿಯಾದ ಮುನ್ನೆಚ್ಚರಿಕೆ ವಹಿಸದಿದ್ದರೆ, ಅದು ಕೇವಲ ಆರ್ಥಿಕ ನಷ್ಟ ಮಾತ್ರವಲ್ಲದೆ ನಿಮ್ಮನ್ನು ಜೈಲಿಗೂ ಕಳುಹಿಸಬಹುದು. ನೆಗೋಷಿಯೇಬಲ್ ಇನ್ಸ್ಟ್ರುಮೆಂಟ್ಸ್ ಆಕ್ಟ್‌ನ ಸೆಕ್ಷನ್ 138 (Section 138) ಅಡಿಯಲ್ಲಿ ಚೆಕ್ ಬೌನ್ಸ್ ಆಗುವುದು ಗಂಭೀರ ಅಪರಾಧವಾಗಿದೆ. ಈ ಬಗ್ಗೆ ನೀವು ತಿಳಿದುಕೊಳ್ಳಬೇಕಾದ ಪ್ರಮುಖ ಅಂಶಗಳು ಇಲ್ಲಿವೆ: ಸೆಕ್ಷನ್ 138 ಎಂದರೇನು? ಬ್ಯಾಂಕಿಂಗ್ ವ್ಯವಹಾರಗಳಲ್ಲಿ ಸಾರ್ವಜನಿಕರ ವಿಶ್ವಾಸವನ್ನು ಉಳಿಸಲು ಈ ಕಟ್ಟುನಿಟ್ಟಿನ ನಿಯಮವನ್ನು ತರಲಾಗಿದೆ. ವ್ಯಕ್ತಿಯೊಬ್ಬ ತನ್ನ ಹಣಕಾಸಿನ ಜವಾಬ್ದಾರಿಯನ್ನು ತೀರಿಸಲು ನೀಡಿದ ಚೆಕ್ ಬ್ಯಾಂಕಿನಲ್ಲಿ ತಿರಸ್ಕೃತಗೊಂಡರೆ ಅದನ್ನು ಅಪರಾಧ ಎಂದು ಪರಿಗಣಿಸಲಾಗುತ್ತದೆ. ಚೆಕ್ ಬೌನ್ಸ್ ಆಗಲು ಪ್ರಮುಖ ಕಾರಣಗಳು: ಖಾತೆಯಲ್ಲಿ ಸಾಕಷ್ಟು ಹಣವಿಲ್ಲದಿರುವುದು (Insufficient Funds). ಚೆಕ್ ಕ್ಲಿಯರ್ ಆಗುವ ಮೊದಲೇ ಬ್ಯಾಂಕ್ ಖಾತೆಯನ್ನು ಮುಚ್ಚುವುದು. ಸಹಿ ತಾಳೆಯಾಗದಿರುವುದು ಅಥವಾ…
ಬೆಂಗಳೂರು: ಹಣ್ಣುಗಳ ರಾಜ ಮಾವಿನ ಹಣ್ಣಿನ ಸೀಸನ್ ಆರಂಭವಾಗಿದೆ. ಮಾರುಕಟ್ಟೆಯಲ್ಲಿ ತರಹೇವಾರಿ ಮಾವಿನ ಹಣ್ಣುಗಳು ಲಭ್ಯವಿವೆ. ಆದರೆ, ಮಾವಿನ ಹಣ್ಣಿನ ಮೇಲಿರುವ ಮೋಹದಿಂದ ನೀವು ಮಾರುಕಟ್ಟೆಗೆ ಹೋದಾಗ ಸ್ವಲ್ಪ ಎಚ್ಚರ ತಪ್ಪಿದರೂ ಅಪಾಯ ಕಟ್ಟಿಟ್ಟ ಬುತ್ತಿ. ಹಣ್ಣುಗಳನ್ನು ಬೇಗ ಹಣ್ಣಾಗಿಸಲು ವ್ಯಾಪಾರಿಗಳು ಬಳಸುತ್ತಿರುವ ಅಪಾಯಕಾರಿ ರಾಸಾಯನಿಕಗಳು ನಿಮ್ಮ ಹೊಟ್ಟೆಯನ್ನು ಸೇರುತ್ತಿವೆ. ಕ್ಯಾಲ್ಸಿಯಂ ಕಾರ್ಬೈಡ್ ಎಂಬ ‘ನಿಧಾನ ವಿಷ’ ಹೆಚ್ಚಿನ ಲಾಭದ ಆಸೆಗೆ ಬಿದ್ದ ಕೆಲವು ವ್ಯಾಪಾರಿಗಳು ಹಣ್ಣುಗಳನ್ನು ನೈಸರ್ಗಿಕವಾಗಿ ಹಣ್ಣಾಗಲು ಬಿಡದೆ, ಕ್ಯಾಲ್ಸಿಯಂ ಕಾರ್ಬೈಡ್ (Calcium Carbide) ಎಂಬ ರಾಸಾಯನಿಕವನ್ನು ಬಳಸುತ್ತಿದ್ದಾರೆ. ಇದನ್ನು ಸಾಮಾನ್ಯ ಭಾಷೆಯಲ್ಲಿ ‘ಮಸಾಲೆ’ ಎನ್ನಲಾಗುತ್ತದೆ.ಇದರಲ್ಲಿ ಆರ್ಸೆನಿಕ್ ಮತ್ತು ಫಾಸ್ಫರಸ್ ಅಂಶಗಳಿದ್ದು, ಇದು ಮಾನವನ ಆರೋಗ್ಯಕ್ಕೆ ತೀವ್ರ ಹಾನಿಕಾರಕ. ಈ ಹಣ್ಣುಗಳನ್ನು ಸೇವಿಸುವುದರಿಂದ ತಲೆತಿರುಗುವಿಕೆ, ವಾಂತಿ, ಅತಿಸಾರ ಮತ್ತು ದೀರ್ಘಕಾಲದ ಬಳಕೆಯಿಂದ ಕ್ಯಾನ್ಸರ್‌ನಂತಹ ಭೀಕರ ಕಾಯಿಲೆಗಳು ಬರುವ ಸಾಧ್ಯತೆ ಇರುತ್ತದೆ. ಕೃತಕವಾಗಿ ಹಣ್ಣಾಗಿಸಿದ ಮಾವಿನ ಹಣ್ಣನ್ನು ಗುರುತಿಸುವುದು ಹೇಗೆ? ಮಾರುಕಟ್ಟೆಯಲ್ಲಿ ಹಣ್ಣುಗಳನ್ನು ಖರೀದಿಸುವಾಗ ಈ ಕೆಳಗಿನ ವ್ಯತ್ಯಾಸಗಳನ್ನು ಗಮನಿಸಿ:…
ಬೆಂಗಳೂರು: ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಬೋಧನಾ ಗುಣಮಟ್ಟವನ್ನು ಹೆಚ್ಚಿಸಲು ಮತ್ತು ಮಕ್ಕಳನ್ನು ಹೆಚ್ಚಿನ ಸಂಖ್ಯೆಯಲ್ಲಿ ಆಕರ್ಷಿಸಲು ರಾಜ್ಯ ಸರ್ಕಾರವು ‘8 ಗ್ಯಾರಂಟಿ’ಗಳನ್ನೊಳಗೊಂಡ ವಿಶೇಷ ಯೋಜನೆಯನ್ನು ಜಾರಿಗೆ ತರಲು ನಿರ್ಧರಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರ ನೇತೃತ್ವದಲ್ಲಿ ಈ ಸುಧಾರಣಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಶಾಲಾ ಶಿಕ್ಷಣದಲ್ಲಿ ದೀರ್ಘಕಾಲದಿಂದ ಇರುವ ಶಿಕ್ಷಕರ ಕೊರತೆ, ಮೂಲಸೌಕರ್ಯಗಳ ಅಭಾವ ಮತ್ತು ಹಳೆಯ ಬೋಧನಾ ವಿಧಾನಗಳಂತಹ ಸಮಸ್ಯೆಗಳನ್ನು ನೀಗಿಸಿ, ಖಾಸಗಿ ಶಾಲೆಗಳೊಂದಿಗೆ ಪೈಪೋಟಿ ನಡೆಸುವಂತೆ ಸರ್ಕಾರಿ ಶಾಲೆಗಳನ್ನು ಸಜ್ಜುಗೊಳಿಸುವುದು ಈ ಯೋಜನೆಯ ಮುಖ್ಯ ಉದ್ದೇಶವಾಗಿದೆ. ಶಿಕ್ಷಣಕ್ಕೆ ‘ಅಷ್ಟ ಗ್ಯಾರಂಟಿ’ಗಳು: ಗ್ಯಾರಂಟಿ 1- ಶಿಕ್ಷಕರ ಕೊರತೆ ಇನ್ನಿಲ್ಲ :5ನೇ ತರಗತಿವರೆಗೆ ತರಗತಿಗೊಬ್ಬರು ಹಾಗೂ 6ನೇ ತರಗತಿಯಿಂದ ವಿಷಯಕ್ಕೊಬ್ಬರಂತೆ ಶಿಕ್ಷಕರ ನೇಮಕ ಗ್ಯಾರಂಟಿ 2-ಪೋಷಕರು ಬಯಸುವ ಮಾಧ್ಯಮ : ಎಲ್ಲಾ ಶಾಲೆಗಳಲ್ಲೂ ಕನ್ನಡದ ಜೊತೆಗೆ ಇಂಗ್ಲಿಷ್ ಮಾಧ್ಯಮ ಲಭ್ಯ. ಇಂಗ್ಲಿಷ್ ಬೋಧನೆಗಾಗಿ ಶಿಕ್ಷಕರಿಗೆ ವಿಶೇಷ ತರಬೇತಿ ಗ್ಯಾರಂಟಿ 3-ಉಚಿತ ಸಾರಿಗೆ ಸೌಲಭ್ಯ :ಕೆಪಿಎಸ್ ವಿದ್ಯಾರ್ಥಿಗಳಿಗೆ ಉಚಿತ…
ಬೆಂಗಳೂರು: ಕಳೆದ ಮೂರ್ನಾಲ್ಕು ದಿನಗಳಿಂದ ರಾಜ್ಯದಲ್ಲಿ ಆರ್ಭಟಿಸುತ್ತಿರುವ ಪೂರ್ವ ಮುಂಗಾರು ಮಳೆ ಚೇತರಿಸಿಕೊಂಡಿದ್ದು, ಇನ್ನೂ ಒಂದು ವಾರ ಕಾಲ ಮುಂದುವರಿಯುವ ಮುನ್ಸೂಚನೆ ಇದೆ. ಹವಾಮಾನ ಇಲಾಖೆಯ ವರದಿಯ ಪ್ರಕಾರ, ರಾಜ್ಯದ ಒಣಹವೆ ಮುಂದುವರಿಯಲಿದ್ದು, ಹಗಲಿನ ವೇಳೆ ಬಿಸಿಲನ ತೀವ್ರತೆ ಹೆಚ್ಚಾಗಲಿದೆ. ಆದರೆ, ಸಂಜೆ ಅಥವಾ ರಾತ್ರಿ ವೇಳೆಗೆ ಹಲವೆಡೆ ಮಳೆಯಾಗುವ ಸಾಧ್ಯತೆಗಳಿವೆ. ಮೇ 8ರವರೆಗೂ ರಾಜ್ಯದ ದಕ್ಷಿಣ ಒಳನಾಡು, ಉತ್ತರ ಒಳನಾಡು, ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಗುಡುಗು, ಸಿಡಿಲು ಮತ್ತು ಗಾಳಿ ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ರಾಜಧಾನಿ ಬೆಂಗಳೂರಿನಲ್ಲಿ ಕಳೆದ ಮೂರು ದಿನಗಳಿಂದ ಮಳೆಯಾಗುತ್ತಿದ್ದು, ಮುಂದಿನ ಎರಡು ದಿನ ಮಳೆ ಪ್ರಮಾಣ ತುಸು ಕಡಿಮೆಯಾಗಲಿದೆ. ನಂತರ ಮತ್ತೆ ಮಳೆ ಚುರುಕಾಗುವ ನಿರೀಕ್ಷೆಯಿದೆ.ಮಳೆ ಬಿದ್ದ ಕಡೆಗಳಲ್ಲಿ ಕೃಷಿ ಚಟುವಟಿಕೆಗಳು ಬಿರುಸುಗೊಂಡಿದ್ದು, ವಾತಾವರಣವು ಸ್ವಲ್ಪ ಮಟ್ಟಿಗೆ ತಂಪಾಗಿದೆ. ಕಲಬುರಗಿಯಲ್ಲಿ ದಾಖಲೆಯ ತಾಪಮಾನ: 45.4 ಡಿಗ್ರಿ ಸೆಲ್ಸಿಯಸ್ ದಾಖಲು ರಾಜ್ಯದ ಕಲ್ಯಾಣ ಕರ್ನಾಟಕ ಭಾಗದಲ್ಲಿ ಬಿಸಿಲ ತಾಪ ತೀವ್ರವಾಗಿದ್ದು, ಜನರ ಜೀವನ…
ಸಿಗರೇಟು ಮತ್ತು ಇತರ ತಂಬಾಕು ಉತ್ಪನ್ನಗಳ (ಜಾಹಿರಾತು ನಿಷೇಧ ಮತ್ತು ವ್ಯಾಪಾರ ಮತ್ತು ವಾಣಿಜ್ಯ ಉತ್ಪಾದನೆ, ಸರಬರಾಜು ಮತ್ತು ವಿತರಣೆಯ ವಿನಿಯಮನ) (ಕರ್ನಾಟಕ ತಿದ್ದುಪಡಿ) ಅಧಿನಿಯಮ, 2024 ರಲ್ಲಿ 21 ರ ಅಡಿ ಕಲಂ 4 ರಲ್ಲಿ ಸಾರ್ವಜನಿಕ ಸ್ಥಳದಲ್ಲಿ ತಂಬಾಕು ಉತ್ಪನ್ನಗಳ ಬಳಕೆಯ ನಿಷೇಧಿಸಲಾಗಿದೆ. ಯಾರೇ ವ್ಯಕ್ತಿಯು ಸಾರ್ವಜನಿಕ ಸ್ಥಳದಲ್ಲಿ ತಂಬಾಕು ಉತ್ಪನ್ನವನ್ನು ಬಳಸತಕ್ಕದ್ದಲ್ಲ. ಬಳಿಸಿದ್ದಲ್ಲಿ ಎರಡು ನೂರು ರೂಪಾಯಿಗಳವರೆಗೆ ಇದ್ದ ದಂಡ (ಜುಲ್ಮಾನೆಯ)ದ ಬದಲಾಗಿ ಒಂದು ಸಾವಿರ ರೂಪಾಯಿಗಳವರೆಗೆ ದಂಡ (ಜುಲ್ಮಾನೆ) ವನ್ನು ವಿಧಿಸಲಾಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗುಂಜನ್ ಆರ್ಯ ಅವರು ತಿಳಿಸಿದ್ದಾರೆ. ಈ ಕುರಿತು ಪ್ರಕಟಣೆ ನೀಡಿರುವ ಅವರು, 21 ಎ ರ ಆಡಿ ಕಲಂ 4ಎ (ಹುಕ್ಕಾ ಬಾರ್ ನಡೆಸುವುದಕ್ಕಾಗಿ ದಂಡನೆ) ಪ್ರರಕಣದ ಉಪಬಂಧಗಳನ್ನು ಉಲ್ಲಂಘಿಸುವ ಯಾರೇ ವ್ಯಪ್ತಿಯು, ಒಂದು ವರ್ಷಕ್ಕೆ ಕಡಿಮೆಯಿಲ್ಲದ ಆದರೆ ಮೂರು ವರ್ಷಗಳಿಗೆ ವಿಸ್ತರಿಸಬಹುದಾದ ಅವಧಿಗೆ ಕಾರಗೃಹ ವಾಸ ಮತ್ತು 50 ಸಾವಿರ ರೂಪಾಯಿಗಳಿಗಿಂತ ಕಡಿಮೆಯಿಲ್ಲದ ಆದರೆ 01…













