Subscribe to Updates
Get the latest creative news from FooBar about art, design and business.
Author: kannadanewsnow57
ಬೆಂಗಳೂರು : 2025ರ ದ್ವಿತೀಯ ಪಿಯುಸಿ ಪರೀಕ್ಷೆ-2ರ ಮೌಲ್ಯಮಾಪನಗೊಂಡ ಉತ್ತರ ಪತ್ರಿಕೆಗಳ ಸ್ಕ್ಯಾನ್ಸ್ ಪ್ರತಿ ಪಡೆಯಲು ಹಾಗೂ ಮರುಮೌಲ್ಯಮಾಪನ ಮತ್ತು ಮರುಎಣಿಕೆಗಾಗಿ ಅರ್ಜಿ ಸಲ್ಲಿಕೆಗೆ ಅವಕಾಶ ನೀಡಲಾಗಿದೆ. ಕರ್ನಾಟಕ ಶ್ರೀ ಯೂನಿವರ್ಸಿಟಿ ಕೋರ್ಸ್ ಸ್ಟೇಟ್ ಲೆವೆಲ್ ಪರೀಕ್ಷಾ ನಿಯಮಾವಳಿ 1997ರ ನಿಯಮ 29(1) ಹಾಗೂ 30(1)ರ ಪ್ರಕಾರ 2025 ರ ದ್ವಿತೀಯ ಪಿಯುಸಿ ಪರೀಕ್ಷೆ-2 ರ ಉತ್ತರ ಪತ್ರಿಕೆಗಳ ಸ್ಕ್ಯಾನ್ ಪ್ರತಿ ಪಡೆಯಲು, ಮರುಎಣಿಕೆ ಹಾಗೂ ಮರುಮೌಲ್ಯಮಾಪನಕ್ಕಾಗಿ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಅವಕಾಶವಿರುತ್ತದೆ. ಸದರಿ ಕಾರಣಕ್ಕಾಗಿ ಮಾರ್ಚ್-2025 ರ ಪರೀಕ್ಷೆ-1 ಕ್ಕೆ ಹಾಜರಾದ ವಿದ್ಯಾರ್ಥಿಗಳು ಮಾತ್ರ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡಲಾಗಿದೆ. ವಿದ್ಯಾರ್ಥಿಗಳಿಗೆ ವಿಶೇಷ ಸೂಚನೆಗಳು:- ವಿದ್ಯಾರ್ಥಿಗಳು ಉತ್ತರ ಪತ್ರಿಕೆಯ ಸ್ಕ್ಯಾನ್ ಪ್ರತಿಗಳಿಗೆ ಅರ್ಜಿ ಸಲ್ಲಿಸಿ ಸ್ಕ್ಯಾನ್ಸ್ ಪ್ರತಿ ಪಡೆದ ವಿಷಯಗಳಿಗೆ ಮಾತ್ರ ಮರುಮೌಲ್ಯಮಾಪನ /ಮರುಎಣಿಕೆಗಾಗಿ ಅರ್ಜಿ ಸಲ್ಲಿಸಲು ಅವಕಾಶವಿರುತ್ತದೆ. ಮರು ಮೌಲ್ಯಮಾಪನಕ್ಕಾಗಿ ಅರ್ಜಿ ಸಲ್ಲಿಸಿರುವ ವಿಷಯಗಳಿಗೆ ಪ್ರತ್ಯೇಕವಾಗಿ ಮರುಎಣಿಕೆಗೆ ಅರ್ಜಿ ಸಲ್ಲಿಸುವ ಅವಶ್ಯಕತೆ ಇರುವುದಿಲ್ಲ. 3.ಆನ್‌ಲೈನ್‌ನಲ್ಲಿ ಮಾತ್ರ ಅರ್ಜಿ…
ಬಳ್ಳಾರಿ : ರಾಜ್ಯ ಸರ್ಕಾರವು 2 ವ಼ರ್ಷ ಪೂರೈಸಿದ ಹಿನ್ನೆಲೆಯಲ್ಲಿ ಇದೇ ಮೇ 20 ರಂದು ವಿಜಯನಗರ ಜಿಲ್ಲೆಯ ಹೊಸಪೇಟೆಯ ಜಿಲ್ಲಾ ಕ್ರೀಡಾಂಗಣದಲ್ಲಿ ಸಮರ್ಪಣಾ ಸಂಕಲ್ಪ ಸಮಾವೇಶ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು. ಕಾರ್ಯಕ್ರಮ ಆಯೋಜನೆ ಕುರಿತಂತೆ, ಶುಕ್ರವಾರ ಹೊಸಪೇಟೆಯ ಜಿಲ್ಲಾ ಕ್ರೀಡಾಂಗಣಕ್ಕೆ ಆಗಮಿಸಿ ಸ್ಥಳ ಪರಿಶೀಲನೆ ನಡೆಸಿ ಬಳಿಕ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು.2023 ರ ಮೇ 20 ರಂದು ರಾಜ್ಯ ಸರ್ಕಾರವು ಅಸ್ತಿತ್ವಕ್ಕೆ ಬಂದು ಈಗ ಎರಡು ವರ್ಷ ಪೂರೈಸುತ್ತಿದೆ. ಅಂದೇ ಕ್ಯಾಬಿನೆಟ್ ಸಭೆಯಲ್ಲಿ ಪಂಚ ಗ್ಯಾರಂಟಿ ಜಾರಿಗೆ ಕುರಿತಂತೆ ಚರ್ಚಿಸಲಾಗಿತ್ತು. ಪ್ರಥಮವಾಗಿ ಶಕ್ತಿ ಯೋಜನೆ, ಅನ್ನಭಾಗ್ಯ, ಗೃಹಜ್ಯೋತಿ, ಗೃಹಲಕ್ಷಿö್ಮ ಮತ್ತು ಯುವನಿಧಿ ಸೇರಿದಂತೆ ಹಂತ-ಹAತವಾಗಿ ಜಾರಿಗೆ ತಂದು ನುಡಿದಂತೆ ನಡೆದಿದ್ದೇವೆ ಎಂದು ಅವರು ಹೇಳಿದರು. ಕಳೆದ ವಿಧಾನಸಭೆ ಚುನಾವಣೆ ಮತ್ತು ಉಪಚುನಾವಣೆಯಲ್ಲಿ ಬಹುಮತದಿಂದ ಆರಿಸಿ ಗೆಲ್ಲಿಸಿದಂತಹ ಪ್ರಜಾಪ್ರಭುತ್ವದ ಮತದಾರರಿಗೆ ನಮ್ಮ ಸರ್ಕಾರವು ಚುನಾವಣೆ ಪ್ರಣಾಳಿಕೆಯಲ್ಲಿ ಘೋಷಿಸಿದಂತೆ, ಕೊಟ್ಟ ಮಾತಿನಂತೆ…
ಬಳ್ಳಾರಿ : ರಾಜ್ಯ ಸರ್ಕಾರವು 2 ವ಼ರ್ಷ ಪೂರೈಸಿದ ಹಿನ್ನೆಲೆಯಲ್ಲಿ ಇದೇ ಮೇ 20 ರಂದು ವಿಜಯನಗರ ಜಿಲ್ಲೆಯ ಹೊಸಪೇಟೆಯ ಜಿಲ್ಲಾ ಕ್ರೀಡಾಂಗಣದಲ್ಲಿ ಸಮರ್ಪಣಾ ಸಂಕಲ್ಪ ಸಮಾವೇಶ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು. ಕಾರ್ಯಕ್ರಮ ಆಯೋಜನೆ ಕುರಿತಂತೆ, ಶುಕ್ರವಾರ ಹೊಸಪೇಟೆಯ ಜಿಲ್ಲಾ ಕ್ರೀಡಾಂಗಣಕ್ಕೆ ಆಗಮಿಸಿ ಸ್ಥಳ ಪರಿಶೀಲನೆ ನಡೆಸಿ ಬಳಿಕ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು.2023 ರ ಮೇ 20 ರಂದು ರಾಜ್ಯ ಸರ್ಕಾರವು ಅಸ್ತಿತ್ವಕ್ಕೆ ಬಂದು ಈಗ ಎರಡು ವರ್ಷ ಪೂರೈಸುತ್ತಿದೆ. ಅಂದೇ ಕ್ಯಾಬಿನೆಟ್ ಸಭೆಯಲ್ಲಿ ಪಂಚ ಗ್ಯಾರಂಟಿ ಜಾರಿಗೆ ಕುರಿತಂತೆ ಚರ್ಚಿಸಲಾಗಿತ್ತು. ಪ್ರಥಮವಾಗಿ ಶಕ್ತಿ ಯೋಜನೆ, ಅನ್ನಭಾಗ್ಯ, ಗೃಹಜ್ಯೋತಿ, ಗೃಹಲಕ್ಷಿಮತ್ತು ಯುವನಿಧಿ ಸೇರಿದಂತೆ ಹಂತ-ಹAತವಾಗಿ ಜಾರಿಗೆ ತಂದು ನುಡಿದಂತೆ ನಡೆದಿದ್ದೇವೆ ಎಂದು ಅವರು ಹೇಳಿದರು. ಕಳೆದ ವಿಧಾನಸಭೆ ಚುನಾವಣೆ ಮತ್ತು ಉಪಚುನಾವಣೆಯಲ್ಲಿ ಬಹುಮತದಿಂದ ಆರಿಸಿ ಗೆಲ್ಲಿಸಿದಂತಹ ಪ್ರಜಾಪ್ರಭುತ್ವದ ಮತದಾರರಿಗೆ ನಮ್ಮ ಸರ್ಕಾರವು ಚುನಾವಣೆ ಪ್ರಣಾಳಿಕೆಯಲ್ಲಿ ಘೋಷಿಸಿದಂತೆ, ಕೊಟ್ಟ ಮಾತಿನಂತೆ ಪಂಚ…
ಕಲಬುರಗಿ : ಪರಿಶಿಷ್ಟ ಜಾತಿಗಳ ಸಮೀಕ್ಷೆ ಕಾರ್ಯ ನಡೆಸುತ್ತಿದ್ದ ಶಿಕ್ಷಕರೊಬ್ಬರು ಹೃದಯಾಘಾತದಿಂದ ಮೃತಪಟ್ಟ ಘಟನೆ ಚಿಂಚೋಳಿ ತಾಲೂಕಿನ ಚತ್ರಸಾಲ ಗ್ರಾಮದಲ್ಲಿ ಗುರುವಾರ ನಡೆದಿದೆ. ಶಿಕ್ಷಕ ನಾಗಶೆಟ್ಟಿ ಅಮೃತಪ್ಪ ಬಾಸಪಳ್ಳಿ(50) ಮೃತಪಟ್ಟವರು. ಗುರುವಾರ ಸಮೀಕ್ಷೆಗಾಗಿ ಚತ್ರಸಾಲ ಗ್ರಾಮದಲ್ಲಿ ಮನೆಗಳಿಗೆ ಭೇಟಿ ನೀಡಿದ ವೇಳೆ ಬೆಳಗ್ಗೆ 11.30 ಕ್ಕೆ ಘಟನೆ ನಡೆದಿದೆ. ತಕ್ಷಣವೇ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗುತ್ತಿತ್ತು. ಆದರೆ ಮಾರ್ಗಮಧ್ಯೆಯೇ ಮೃತಪಟ್ಟಿದ್ದಾರೆ. ನಾಗಶೆಟ್ಟಿ ಅವರು ಬುರಗಪಳ್ಳಿ ಗ್ರಾಮದವರು. 1998 ರಲ್ಲಿ ಶಿಕ್ಷಕರಾಗಿ ನೇಮಕಗೊಂಡಿದ್ದರು. ಮೃತರಿಗೆ ಪತ್ನಿ ಹಾಗೂ ಮೂವರು ಪುತ್ರರು ಇದ್ದಾರೆ. ಅಂತ್ಯಕ್ರಿಯೆ ಶುಕ್ರವಾರ ಸ್ವಗ್ರಾಮದಲ್ಲಿ ನೆರವೇರಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಬೆಂಗಳೂರು: ಪದವಿ ಪೂರ್ವ ಶಿಕ್ಷಣ ಇಲಾಖೆ 2025-26ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿಯನ್ನು ಬುಧವಾರ ಬಿಡುಗಡೆ ಮಾಡಿದ್ದು, ಜೂನ್ 2ರಿಂದಲೇ ಪ್ರಥಮ ಮತ್ತು ದ್ವಿತೀಯ ಪಿಯುಸಿ ತರಗತಿಗಳು ಆರಂಭವಾಗಲಿವೆ. ಪ್ರಥಮ ಹಾಗೂ ದ್ವಿತೀಯ ಪಿಯು ಶೈಕ್ಷಣಿಕ ವೇಳಾಪಟ್ಟಿ ಬಿಡುಗಡೆ ಮಾಡಿ ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ನಿರ್ದೇಶಕರು ಆದೇಶಿಸಿದ್ದಾರೆ. ವೇಳಾಪಟ್ಟಿ ಪ್ರಕಾರ, ಜೂನ್ 2ರಂದು ಪ್ರಥಮ ಹಾಗೂ ದ್ವಿತೀಯ ಪಿಯು ತರಗತಿಗಳು ಆರಂಭವಾಗಲಿದೆ. ಇದರ ಮೊದಲ ಅವಧಿ ಜೂನ್ 2ರಿಂದ ಆರಂಭವಾಗಿ ಸೆ. 21ರವರೆಗೆ ಹಾಗೂ ಎರಡನೇ ಅವಧಿ ಅ.8 ರಿಂದ 2026ರ ಮಾರ್ಚ್ 31ರವರೆಗೆ ಇರಲಿದ್ದು, ಸೆ. 22ರಿಂದ ಅ. 7ರವರೆಗೆ ಮಧ್ಯಂತರ ರಜೆ ಘೋಷಿಸಲಾಗಿದೆ.
ಬೆಂಗಳೂರು: ಮೇ.17, 23ರಂದು ಬೆಂಗಳೂರಲ್ಲಿ ಐಪಿಎಲ್ ಪಂದ್ಯಾವಳಿ ನಿಗದಿಯಾಗಿದೆ. ಈ ಪಂದ್ಯಾವಳಿ ವೀಕ್ಷಣೆಗೆ ತೆರಳುವಂತ ವೀಕ್ಷಕರ ಅನುಕೂಲಕ್ಕಾಗಿ ನಮ್ಮ ಮೆಟ್ರೋ ಮಧ್ಯರಾತ್ರಿಯವರೆಗೆ ವಿಸ್ತರಣೆ ಮಾಡಲಾಗಿದೆ. ಬೆಂಗಳೂರಿನಲ್ಲಿ ನಡೆಯುವ ಐಪಿಎಲ್ 2025 ಪಂದ್ಯಗಳಿಗೆ ಮೆಟ್ರೋ ಸೇವೆ ವಿಸ್ತರಣೆ TATA IPL T-20 ಕ್ರಿಕೆಟ್ ಪಂದ್ಯಗಳು ದಿನಾಂಕ 17 ಮತ್ತು 23ನೇ ಮೇ, 2025 ರಂದು ಬೆಂಗಳೂರಿನಲ್ಲಿ ನಡೆಯಲಿದ್ದು, ಸದರಿ ದಿನಗಳಲ್ಲಿ ನಮ್ಮ ಮೆಟ್ರೋ ಎಲ್ಲಾ ನಾಲ್ಕು ಟರ್ಮಿನಲ್ ಅಂದರೆ ವೈಟ್‌ಫೀಲ್ಡ್ (ಕಾಡುಗೋಡಿ), ಚಲ್ಲಘಟ್ಟ, ರೇಷ್ಮೆ ಸಂಸ್ಥೆ ಮತ್ತು ಮಾದವರ ಮೆಟ್ರೋ ನಿಲ್ದಾಣಗಳಿಂದ ಕೊನೆಯ ಮೆಟ್ರೋ ರೈಲು ಸೇವೆಯನ್ನು ಮಧ್ಯರಾತ್ರಿ 01.00ರ ವರೆಗೆ ವಿಸ್ತರಿಸಿದೆ. ನಾಡಪ್ರಭು ಕೆಂಪೇಗೌಡ ನಿಲ್ದಾಣ ಮೆಜೆಸ್ಟಿಕ್‌ನಿಂದ ಎಲ್ಲಾ ನಾಲ್ಕು ದಿಕ್ಕುಗಳ ಕಡೆಗೆ ಕೊನೆಯ ರೈಲು ಮಧ್ಯರಾತ್ರಿ 01.35 ಕ್ಕೆ ಹೊರಡಲಿದೆ. ಪ್ರಯಾಣಿಕರು ಈ ಸೌಲಭ್ಯವನ್ನು ಬಳಸಿಕೊಳ್ಳಲು ಕೋರಿದೆ. https://twitter.com/officialbmrcl/status/1923013575339085964
ಚಿತ್ರದುರ್ಗ : ರಾಜ್ಯದಲ್ಲಿ ಮತ್ತೊಂದು ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲೂಕಿನ ಚಿತ್ರಹಳ್ಳಿ ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರು ಮತ್ತು ಟ್ರ್ಯಾಕ್ಟರ್ ಮಧ್ಯೆ ಡಿಕ್ಕಿಯಾಗಿ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರನ್ನು ಹೊಳಲ್ಕರೆ ಮೂಲದವರು ಎಂದು ಗುರುತಿಸಲಾಗಿದ್ದು, ಈ ಪೈಕಿ ಪುಟಾಣಿ ಕಂದಮ್ಮ ಸೇರಿ ಇಬ್ಬರು ಮಕ್ಕಳು ಕೂಡ ಮೃತಪಟ್ಟಿವೆ.ಒಬ್ಬರ ಸ್ಥಿತಿ ಗಂಭೀರವಾಗಿದ್ದು, ಕೂಡಲೇ ಹೊಳಲ್ಕೆರೆ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸಲಾಗಿದೆ. ಅರೇಹಳ್ಳಿಯ ಉದ್ಯಮಿ ಯಶವಂತ್ ಅವರ ಪತ್ನಿ ಕಾವ್ಯಾ (30), ಅತ್ತೆ ಗಂಗಮ್ಮ (50) ಹಾಗೂ ಪುತ್ರಿಯರಾದ ಹನ್ಸಿಕಾ (4), ಮನಸ್ವಿ (2) ಮೃತ ದುರ್ದೈವಿಗಳು. ಯಶವಂತ್ ಹಾಗೂ ಕುಟುಂಬ ಸದಸ್ಯರು ಕಾರಿನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಕಾರು-ಟ್ರ್ಯಾಕ್ಟರ್ ನಡುವೆ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ. ಚಿತ್ರಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ. ಸ್ಥಳಕ್ಕೆ ಎಸ್ಪಿ ರಂಜಿತ್ ಕುಮಾರ್ ಬಂಡಾರು, ಡಿವೈಎಸ್ಪಿ ದಿನಕರ್ ಭೇಟಿ ನೀಡಿ ಪರಿಶೀಲಿಸಿದ್ದಾರೆ.
ನವದೆಹಲಿ : ದೋಹಾ ಡೈಮಂಡ್ ಲೀಗ್‌ನಲ್ಲಿ ಶುಕ್ರವಾರ ಭಾರತದ ನೀರಜ್ ಚೋಪ್ರಾ ತಮ್ಮ ವೃತ್ತಿಜೀವನದಲ್ಲಿ ಮೊದಲ ಬಾರಿಗೆ 90 ಮೀಟರ್ ಗಡಿ ದಾಟಿದರು. ಪುರುಷರ ಜಾವೆಲಿನ್ ಥ್ರೋ ಫೈನಲ್‌ನಲ್ಲಿ ತಮ್ಮ ಮೂರನೇ ಪ್ರಯತ್ನದಲ್ಲಿ, 27 ವರ್ಷದ ನೀರಜ್ ಚೋಪ್ರಾ 90.23 ಮೀಟರ್ ದೂರ ಎಸೆದರು. ಆದಾಗ್ಯೂ, ನೀರಜ್ ಚೋಪ್ರಾ ಅವರ 90.23 ಮೀಟರ್ ಎಸೆತವು ಸಾಕಾಗಲಿಲ್ಲ, ಏಕೆಂದರೆ ಜರ್ಮನಿಯ ಜೂಲಿಯನ್ ವೆಬರ್ ತಮ್ಮ ಅಂತಿಮ ಪ್ರಯತ್ನದಲ್ಲಿ 91.06 ಮೀಟರ್ ದೂರ ಎಸೆದರು. ಕೊನೆಯಲ್ಲಿ, ಪುರುಷರ ಜಾವೆಲಿನ್ ಥ್ರೋ ಸ್ಪರ್ಧೆಯಲ್ಲಿ ನೀರಜ್ ಚೋಪ್ರಾ ಎರಡನೇ ಸ್ಥಾನ ಪಡೆದರು.ಗ್ರೆನಡಾದ ಆಂಡರ್ಸನ್ ಪೀಟರ್ಸ್ ಮೂರನೇ ಸ್ಥಾನ ಪಡೆದರು, ಆದರೆ ಭಾರತದ ಕಿಶೋರ್ ಜೆನಾ ಎಂಟನೇ ಸ್ಥಾನದಲ್ಲಿ ಕೊನೆಗೊಂಡರು. https://twitter.com/nnis_sports/status/1923430292213432463?ref_src=twsrc%5Etfw%7Ctwcamp%5Etweetembed%7Ctwterm%5E1923430292213432463%7Ctwgr%5E4cae0a8a20593d47e22391876516ff22dd48fcbd%7Ctwcon%5Es1_c10&ref_url=https%3A%2F%2Fm.dailyhunt.in%2Fnews%2Findia%2Fenglish%2Fhindustantimes-epaper-dh6a1e8229c99f4403a520ea1f381dcb4f%2Fneerajchoprascales90mmarkforthefirsttimeinhiscareerfinishes2ndindohadiamondleague-newsid-n664619097 ಜಾವೆಲಿನ್ ಥ್ರೋ ಸ್ಪರ್ಧೆಯಲ್ಲಿ ಜೂಲಿಯನ್ ವೆಬರ್ 90 ಮೀಟರ್ ದೂರ ದಾಟಿದ್ದು ಇದೇ ಮೊದಲು ಎಂದು ಹೇಳಲೇಬೇಕು. ಇದಕ್ಕೂ ಮೊದಲು, ನೀರಜ್ ಚೋಪ್ರಾ ಈ ಸ್ಪರ್ಧೆಯನ್ನು 88.44 ಮೀಟರ್ ದೂರದಿಂದ ಪ್ರಾರಂಭಿಸಿದರು. ಅವರ ಎರಡನೇ ಪ್ರಯತ್ನವನ್ನು…
ಗೃಹಜ್ಯೋತಿ ಯೋಜನೆಯಡಿ ರಾಜ್ಯದಲ್ಲಿನ ಪ್ರತಿ ಮನೆಗೆ ತಿಂಗಳಿಗೆ ಗರಿಷ್ಠ 200 ಯೂನಿಟ್‌ಗಳವರೆಗೆ ಬಳಕೆಯ ಮಿತಿಯಲ್ಲಿ ಪ್ರತಿ ಗೃಹಬಳಕೆ ಗ್ರಾಹಕರ ಮಾಸಿಕ ಸರಾಸರಿ ಬಳಕೆಯ(ಆರ್ಥಿಕ ವರ್ಷ 2022-23 ರ ಬಳಕೆಯ ಆಧಾರದನ್ವಯ) ಯೂನಿಟ್‌ಗಳ ಮೇಲೆ ಶೇ.10 ರಷ್ಟು ಹೆಚ್ಚಿನ ಬಳಕೆಯ ಮಿತಿಗೆ ಅನುಮತಿಸಿ, ಅದಕ್ಕನುಗುಣವಾಗಿ ವಿದ್ಯುತ್ ಬಿಲ್ಲಿನ ಮೊತ್ತವನ್ನು ಉಚಿತವಾಗಿ ಒದಗಿಸಲು ಹಾಗೂ 200 ಯೂನಿಟ್‌ಗಳ ಬಳಕೆ ಮೀರಿದ ಗ್ರಾಹಕರು ಪೂರ್ಣ ವಿದ್ಯುತ್ ಬಿಲ್ಲನ್ನು ಪಾವತಿಸಲು ಸರ್ಕಾರ ಆದೇಶಿಸಿದೆ. ಈ ಯೋಜನೆಯಡಿ ಗ್ರಾಹಕರು https://sevasindhugs.Karnataka.gov.in/ ನಲ್ಲಿ ನೋಂದಾಯಿಸಿಕೊಳ್ಳಬೇಕು. 200 ಯೂನಿಟ್‌ಗಳ ಬಳಕೆಯನ್ನು ಮೀರಿದ ಗ್ರಾಹಕರು ಸಂಪೂರ್ಣ ವಿದ್ಯುತ್ ಬಿಲ್ಲನ್ನು ಪಾವತಿಸಬೇಕು. ಗ್ರಾಹಕರು ಮಂಜೂರಾದ ಲೋಡ್‌ಗಿಂತ ಅಧಿಕ ವಿದ್ಯುತ್ ಬಳಕೆ ಮಾಡಿದಲ್ಲಿ ಜೆಸ್ಕಾಂನಿAದ ನಿಯಮಾನುಸಾರ ದಂಡ ವಿಧಿಸಲಾಗುವುದು. ಆದ್ದರಿಂದ ಗ್ರಾಹಕರು ಹೆಚ್ಚಿನ ಲೋಡ್ ಅನ್ನು ಸಕ್ರಮಗೊಳಿಸಲು ಸಂಬAಧಪಟ್ಟ ಜೆಸ್ಕಾಂ ಉಪ ವಿಭಾಗ ಕಚೇರಿಗಳಲ್ಲಿ ನೋಂದಾಯಿಸಿಕೊಳ್ಳಬೇಕೆAದು ಜೆಸ್ಕಾಂ ಕೊಪ್ಪಳ ಕಾರ್ಯ ಮತ್ತು ಪಾಲನಾ ವಿಭಾಗದ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆಂಗಳೂರು: ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಮೇ 21ರ ವರೆಗೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿಯ 3 ಜಿಲ್ಲೆಗಳು, ಉತ್ತರ ಒಳ ನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರ್ಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ದಕ್ಷಿಣ ಒಳ ನಾಡಿನ, ಬಳ್ಳಾರಿ, ಬೆಂಗಳೂರು ನಗರ ಮತ್ತು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಚಿತ್ರದುರ್ಗ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತಮಕೂರು, ವಿಜಯನಗರ ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಎಚ್ಚರಿಕೆ ನೀಡಲಾಗಿದೆ. ಇಂದು ಭಾರಿ ಮಳೆ ಸಾಧ್ಯತೆ ಇದ್ದು,ತುಮಕೂರು, ಮಂಡ್ಯ, ಚಿಕ್ಕಬಳ್ಳಾಪುರ,ಹಾಸನ, ದಾವಣಗೆರೆ, ಕೋಲಾರ, ಬಾಗಲಕೋಟೆ, ಬಳ್ಳಾರಿ, ಧಾರವಾಡ, ವಿಜಯಪುರ, ಹಾವೇರಿ, ಗದಗ, ವಿಜಯನಗರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಉತ್ತರ ಒಳನಾಡಿನ ಮಧ್ಯ ಭಾಗದಲ್ಲಿ ಟ್ರಫ್ ಇರುವ ಹಿನ್ನೆಲೆಯಲ್ಲಿ ಶನಿವಾರ ಕೂಡ ಭಾರಿ ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆ ಮನ್ಸೂಚನೆ…