Author: kannadanewsnow57

ಚಿಕ್ಕಬಳ್ಳಾಪುರ : ರಾಜ್ಯದಲ್ಲಿ ದಿನದಿಂದ ದಿನಕ್ಕೆ ಹೃದಯಾಘಾತದ ಪ್ರಕರಣಗಳು ಹೆಚ್ಚಳವಾಗುತ್ತಿದ್ದು, ಇದೀಗ ಪಶ್ಚಿಮ ಬಂಗಾಳದಲ್ಲಿ ಕರ್ತವ್ಯದಲ್ಲಿದ್ದ ಯೋಧರೊಬ್ಬರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಹೃದಯಾಘಾತದಿಂದ ಯೋಧ ಗಂಗಾಧರಪ್ಪ (54) ಸಾವವನ್ನಪ್ಪಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲೂಕಿನ ತೊಂಡೇಬಾವಿ ಗ್ರಾಮದ ಗಂಗಾಧರಪ್ಪ, ಪಶ್ಚಿಮ ಬಂಗಾಳದಲ್ಲಿ ಇಂಡೋ ಟಿಬೇಟಿಯನ್ ಬಾರ್ಡರ್ ಪೋರ್ಸ್ ನಲ್ಲಿ ಹವಾಲ್ದಾರ್ ಆಗಿದ್ದರು. ನಿನ್ನೆ ಬೆಳಗ್ಗೆ ಹೃದಯಾಘಾತದಿಂದ ಯೋಧ ಗಂಗಾಧರಪ್ಪ ಮೃತಪಟ್ಟಿದ್ದಾರೆ. ತೊಂಡೇಬಾವಿ ಗ್ರಾಮಕ್ಕೆ ಐಟಿಬಿಪಿ ಪಡೆ ಪಾರ್ಥಿವ ಶರೀರ ತರುತ್ತಿದ್ದು, ಇಂದು ಸ್ವಗ್ರಾಮದಲ್ಲಿ ಅಂತ್ಯಕ್ರಿಯೆ ನಡೆಯಲಿದೆ.

Read More

ನವದೆಹಲಿ : ಸಾಮಾನ್ಯ ಜನರಿಗೆ ಸಿಹಿಸುದ್ದಿಯೊಂದು ಸಿಕ್ಕಿದ್ದು, ಅಡುಗೆ ಎಣ್ಣೆಗಳ ಬೆಲೆಗಳು ಕಡಿಮೆಯಾಗಲಿವೆ. ಶನಿವಾರ ಮಾರುಕಟ್ಟೆಯಲ್ಲಿ ಸಾಸಿವೆ ಎಣ್ಣೆ ಮತ್ತು ಎಳ್ಳೆಣ್ಣೆಯ ಬೆಲೆಗಳನ್ನು ಕಡಿಮೆ ಮಾಡಲು ಸರ್ಕಾರ ಪ್ರಮುಖ ನಿರ್ಧಾರ ತೆಗೆದುಕೊಂಡಿದೆ. ಇದು ಗ್ರಾಹಕರಿಗೆ ದೊಡ್ಡ ಪರಿಹಾರವಾಗಲಿದೆ. ಆದಾಗ್ಯೂ, ಕಡಲೆಕಾಯಿ ಎಣ್ಣೆ ಮತ್ತು ಎಳ್ಳೆಣ್ಣೆಯ ಬೇಡಿಕೆ ಹೆಚ್ಚಾದ ಕಾರಣ, ಅವುಗಳ ಬೆಲೆಗಳು ಸ್ವಲ್ಪ ಹೆಚ್ಚಾಗಿದೆ. ಚಿಕಾಗೋ ವಿನಿಮಯ ಕೇಂದ್ರ ಮುಚ್ಚಿದಾಗಿನಿಂದ, ಸೋಯಾಬೀನ್ ಎಣ್ಣೆ, ಕಚ್ಚಾ ಪಾಮ್ ಎಣ್ಣೆ, ಪಾಮೋಲಿನ್ ಮತ್ತು ಹತ್ತಿ ಬೀಜದ ಎಣ್ಣೆಯ ಬೆಲೆಗಳು ಸ್ಥಿರವಾಗಿವೆ. ಸೋಮವಾರ ಚಿಕಾಗೋ ವಿನಿಮಯ ಕೇಂದ್ರ ತೆರೆದ ನಂತರವೇ ಮಾರುಕಟ್ಟೆ ಮಾದರಿ ಸ್ಪಷ್ಟವಾಗುತ್ತದೆ ಎಂದು ತಜ್ಞರು ಹೇಳುತ್ತಾರೆ. ಸಾಸಿವೆ ಎಣ್ಣೆ ಬೆಲೆಗಳು ಏಕೆ ಇಳಿದಿವೆ? ಸರ್ಕಾರವು 2025 ರ ಹೊಸ, ಉತ್ತಮ ಗುಣಮಟ್ಟದ ಸಾಸಿವೆ ಬೆಳೆಯನ್ನು ಮಾರಾಟಕ್ಕೆ ಇಟ್ಟಿದೆ. ಈ ನಿರ್ಧಾರವು ಮಾರುಕಟ್ಟೆಯಲ್ಲಿ ಸಾಸಿವೆ ಮತ್ತು ಇತರ ಎಣ್ಣೆಕಾಳುಗಳ ಬೆಲೆಗಳ ಮೇಲೆ ಒತ್ತಡ ಹೇರಿದೆ. ಪರಿಣಾಮವಾಗಿ, ಸಾಸಿವೆ ಎಣ್ಣೆ ಬೆಲೆಗಳು ಇಳಿದಿವೆ. ಇದು ಸಾಮಾನ್ಯ…

Read More

ಮೈಸೂರು: ಮುಖ್ಯಮಂತ್ರಿ ಸ್ಥಾನಕ್ಕೆ ಶೀಘ್ರವೇ ಸಿದ್ದರಾಮಯ್ಯ ರಾಜೀನಾಮೆ ನೀಡಲಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಹೊಸ ಬಾಂಬ್ ಸಿಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಅವರ ರಾಜೀನಾಮೆ ಪಡೆದುಕೊಂಡು ದೆಹಲಿಗೆ ವರ್ಗಾವಣೆ ಮಾಡಲು ಪ್ಲಾನ್ ಮಾಡಿಕೊಳ್ಳಲಾಗಿದೆ. ಸಿದ್ದರಾಮಯ್ಯ ಸ್ಥಾನ ಪಲ್ಲಟ ಆಗುವುದು ನಿಶ್ಚಿತವಾಗಿದೆ ಎಂದರು. ಸಿಎಂ ಸಿದ್ದರಾಮಯ್ಯ ಅವರ ರಾಜೀನಾಮೆ ಪಡೆಯಲು ಭೂಮಿಕೆ ಸಜ್ಜಾಗಿದೆ. ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ ಅವರು ಬೆಂಗಳೂರಿಗೆ ಬಂದು ಶಾಸಕರ ಅಭಿಪ್ರಾಯ ಪಡೆದುಕೊಂಡಿದ್ದಾರೆ. ಎಐಸಿಸಿ ಒಬಿಸಿ ವಿಭಾಗಕ್ಕೆ ಸಿದ್ಧರಾಮಯ್ಯ ಅವರನ್ನು ನೇಮಕ ಮಾಡಲಾಗಿದ್ದು, ಅವರ ರಾಜೀನಾಮೆ ಪಡೆದು ದೆಹಲಿಗೆ ವರ್ಗಾವಣೆ ಮಾಡಲು ಪ್ಲಾನ್ ಮಾಡಲಾಗಿದ್ದು, ಸಿದ್ದರಾಮಯ್ಯ ಸ್ಥಾನ ಪಲ್ಲಟವಾಗುವುದು ನಿಶ್ಚಿತವಾಗಿದೆ ಎಂದು ಹೇಳಿದ್ದಾರೆ.

Read More

ಮೃತಪಟ್ಟ ರೈತರ ಹೆಸರಿನಲ್ಲಿರುವ ಜಮೀನು ಇ-ಪೌತಿ ಮಾಡಿಸಿಕೊಳ್ಳದೇ ಹಾಗೆಯೇ ಬಿಟ್ಟರೇ ಆ ಕುಟುಂಬ ಸರಕಾರದ ಸೌಲಭ್ಯಗಳಿಂದ ವಂಚಿತವಾಗಲಿದೆ. ಹೌದು, ಇ-ಪೌತಿ ಮಾಡಿಸಿಕೊಳ್ಳದೇ ಇದ್ದರೆ ಪಿಎಂ ಕಿಸಾನ್ ಸಮ್ಮಾನ, ಫಸಲ್ ವಿಮಾ ಯೋಜನೆ ಸೇರಿ ಹಲವು ಸರಕಾರಿ ಸೌಲಭ್ಯಗಳು ಕಳೆದುಕೊಳ್ಳಬೇಕಾಗುತ್ತದೆ. ಹೀಗಾಗಿ ಸಂಬಂಧಪಟ್ಟ ಕುಟುಂಬದ ವಾರಸುದಾರರು ಇ-ಪೌತಿ ಆಂದೋಲನದಲ್ಲಿ ಭಾಗವಹಿಸಿ ತಮ್ಮ ಜಮೀನನ್ನು ವರ್ಗಾಯಿಸಿಕೊಳ್ಳಲು ಅವಕಾಶವಿದೆ. ಹೀಗಾಗಿ ರೈತರು ಯಾವುದೇ ಕಾರಣಕ್ಕೂ ಇದನ್ನು ತಪ್ಪಿಸಿಕೊಳ್ಳಬೇಡಿ ಎಂದು ಜಿಲ್ಲಾಧಿಕಾರಿಗಳು ಮನವಿ ಮಾಡಿದ್ದಾರೆ. ರೈತರು ತಮ್ಮ ಜಮೀನುಗಳನ್ನು ಪೌತಿ ಮಾಡಿಸಿಕೊಳ್ಳಲು ಇನ್ಮುಂದೆ ಕಂದಾಯ ಇಲಾಖೆ ಕಚೇರಿವರೆಗೂ ಅಲೆಯಬೇಕಿಲ್ಲ. ಸರಕಾರವೇ ಇ-ಪೌತಿ ಆಂದೋಲನದ ಮೂಲಕ ನಿಮ್ಮ ಮನೆ ಬಾಗಿಲಿಗೆ ಬರಲಿದೆ ಇದರ ಸದುಪಯೋಗಪಡೆಸಿಕೊಳ್ಳುವಂತೆ ಜಿಲ್ಲಾಧಿಕಾರಿ ಪ್ರಶಾಂತ್ಕುಮಾರ್ ಮಿಶ್ರಾ ಅವರು ಮನವಿ ಮಾಡಿದ್ದಾರೆ. ಜಿಲ್ಲೆಯಲ್ಲಿ ಮೃತಪಟ್ಟ ಜಮೀನು ಮಾಲೀಕರ ಹೆಸರಿನಲ್ಲಿರುವ ಪಹಣಿಗಳನ್ನು ವಾರಸುದಾರರ ಹೆಸರಿಗೆ ನೋಂದಣಿ ಮಾಡಿಕೊಡಲು ಈ ಹಿಂದಿನಿಂದಲೂ ಅಭಿಯಾನಗಳು ನಡೆದಿವೆ. ಹೋಬಳಿ, ಗ್ರಾಮ ಮಟ್ಟದಲ್ಲಿ ಅಭಿಯಾನ ನಡೆದಿವೆ. ಆದರೂ ಇನ್ನು ಕೆಲವು ಪ್ರಕರಣ ಬಾಕಿ ಇದ್ದು,…

Read More

ರೈತರು ತಮ್ಮ ಜಮೀನುಗಳನ್ನು ಪೌತಿ ಮಾಡಿಸಿಕೊಳ್ಳಲು ಇನ್ಮುಂದೆ ಕಂದಾಯ ಇಲಾಖೆ ಕಚೇರಿವರೆಗೂ ಅಲೆಯಬೇಕಿಲ್ಲ. ಸರಕಾರವೇ ಇ-ಪೌತಿ ಆಂದೋಲನದ ಮೂಲಕ ನಿಮ್ಮ ಮನೆ ಬಾಗಿಲಿಗೆ ಬರಲಿದೆ ಇದರ ಸದುಪಯೋಗಪಡೆಸಿಕೊಳ್ಳುವಂತೆ ಜಿಲ್ಲಾಧಿಕಾರಿ ಪ್ರಶಾಂತ್ಕುಮಾರ್ ಮಿಶ್ರಾ ಅವರು ಮನವಿ ಮಾಡಿದ್ದಾರೆ. ಜಿಲ್ಲೆಯಲ್ಲಿ ಮೃತಪಟ್ಟ ಜಮೀನು ಮಾಲೀಕರ ಹೆಸರಿನಲ್ಲಿರುವ ಪಹಣಿಗಳನ್ನು ವಾರಸುದಾರರ ಹೆಸರಿಗೆ ನೋಂದಣಿ ಮಾಡಿಕೊಡಲು ಈ ಹಿಂದಿನಿಂದಲೂ ಅಭಿಯಾನಗಳು ನಡೆದಿವೆ. ಹೋಬಳಿ, ಗ್ರಾಮ ಮಟ್ಟದಲ್ಲಿ ಅಭಿಯಾನ ನಡೆದಿವೆ. ಆದರೂ ಇನ್ನು ಕೆಲವು ಪ್ರಕರಣ ಬಾಕಿ ಇದ್ದು, ಕಂದಾಯ ಇಲಾಖೆ ಸಚಿವರ ನಿರ್ದೇಶನದ ಮೇರೆಗೆ ಮನೆ ಬಾಗಿಲಿಗೆ ಕಂದಾಯ ಸೇವೆಗಳ ‘ಇ-ಪೌತಿ’ ಆಂದೋಲನ ಆರಂಭಿಸಲಾಗಿದೆ. ಈ ಯೋಜನೆಯಡಿ ಕಂದಾಯ ನಿರೀಕ್ಷಕರು ಮತ್ತು ಗ್ರಾಮ ಅಭಿವೃದ್ಧಿ ಅಧಿಕಾರಿಗಳು ರೈತರ ಮನೆ ಬಾಗಿಲಿಗೆ ತೆರಳಿ, ವಾರಸುದಾರರಿಗೆ ಮೊಬೈಲ್ ಮೂಲಕ ಪೌತಿ ಖಾತೆಯನ್ನು ನೋಂದಾಯಿಸಲಿದ್ದಾರೆ. ಈ ಪ್ರಕ್ರಿಯೆಯಲ್ಲಿ ಆಧಾರ್ ಸೀಡಿಂಗ್ನ ಮೂಲಕ ಭೂಮಿ ಹಿಡುವಳಿಯ ನಿಖರ ಮಾಹಿತಿಯನ್ನು ಸಂಗ್ರಹಿಸಲಾಗುತ್ತದೆ ಎಂದು ಹೇಳಿದ್ದಾರೆ. ಜಿಲ್ಲೆಯಲ್ಲಿ ಮೃತಪಟ್ಟ 75,000 ಜಮೀನುಗಳ ಮಾಲೀಕರ ಪಹಣಿಗಳನ್ನು ವಾರಸುದಾರರ…

Read More

ತುಮಕೂರು : ತುಮಕೂರಿನ ಲಾಡ್ಜ್ ವೊಂದರಲ್ಲಿ ದಾವಣಗೆರೆಯ ಪಿಎಸ್ ಐ ಡೆತ್ ನೋಟ್ ಬರೆದಿಟ್ಟು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. ದಾವಣಗೆರೆ ಬಡಾವಣೆಯ ಠಾಣೆಯ ಪಿಎಸ್ ಐ ತುಮಕೂರಿನ ದ್ವಾರಕ ಹೋಟೆಲ್ ಲಾಡ್ಜ್ ನಲ್ಲಿ ಡೆತ್ ನೋಟ್ ಬರೆದಿಟ್ಟು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. 58 ವರ್ಷದ ನಾಗರಾಜು ಆತ್ಮಹತ್ಯೆಗೆ ಶರಣಾದ ಪಿಎಸ್ ಐ ಆಗಿದ್ದು, ಜುಲೈ 1 ರಂದು ದ್ವಾರಕ ಹೋಟೆಲ್ ಲಾಡ್ಜ್ ನಲ್ಲಿ ರೂಂ ಬುಕ್ ಮಾಡಿದ್ದರು. ಇಂದು ಲಾಡ್ಜ್ ನಲ್ಲಿ ದುರ್ವಾಸನೆ ಬಂದಿದ್ದು, ಸಿಬ್ಬಂದಿ ನೋಡಿದಾಗ ಪ್ರಕರಣ ಬೆಳಕಿಗೆ ಬಂದಿದೆ.ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.

Read More

ಹಾಸನ : ರಾಜ್ಯದಲ್ಲಿ ದಿನದಿಂದ ದಿನಕ್ಕೆ ಹೃದಯಾಘಾತದ ಪ್ರಕರಣಗಳು ಹೆಚ್ಚಳವಾಗುತ್ತಿದ್ದು,ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಕಡ್ಡಾಯ ಹೃದಯ ತಪಾಸಣೆಗೆ ಚಿಂತನೆ ನಡೆಸಲಾಗಿದೆ ಎಂದು ಸಚಿವ ಕೆ.ಎನ್. ರಾಜಣ್ಣ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಸಣ್ಣ ವಯಸ್ಸಿನವರು ಅಸುನೀಗಿರುವುದು ಬೇಸರದ ಸಂಗತಿ ಹೀಗಾಗಿ ಮಕ್ಕಳಿಂದ ಹಿಡಿದು ವೃದ್ಧರವರೆಗೂ ಕಡ್ಡಾಯ ಹೃದಯ ತಪಾಸಣೆಗೆ ಚಿಂತನೆ ನಡೆಸಲಾಗಿದೆ ಎಂದರು. ಹೃದಯಾಘಾತದಿಂದ ಸಾವುಗಳ ಹೆಚ್ಚಳವಾಗಿದ್ದು, ಈ ಸಾವುಗಳನ್ನು ತಡೆಯುವ ಹಿನ್ನೆಲೆಯಲ್ಲಿ ಕಡ್ಡಾಯ ಹೃದಯ ತಪಾಸಣೆಗೆ ಚಿಂತನೆ ನಡೆಸಲಾಗಿದ್ದು, ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಕ್ರಮಗಳನ್ನು ಕೈಗೊಳ್ಳಲಿದೆ ಎಂದು ತಿಳಿಸಿದ್ದಾರೆ. ಸಚಿವ ದಿನೇಶ್ ಗುಂಡೂರಾವ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಲಾಗಿದ್ದು, ಹೃದಯಾಘಾತದಿಂದಾಗುವ ಸಾವುಗಳನ್ನು ತಪ್ಪಿಸಬೇಕು, ಹೀಗಾಗಿ ರಾಜ್ಯದಲ್ಲಿ ಮಕ್ಕಳಿಂದ ಹಿಡಿದು ಪ್ರತಿಯೋಬ್ಬರಿಗೂ ಹೃದಯ ತಪಾಸಣೆ ಕಡ್ಡಾಯವಾಗಿ ಮಾಡಲು ಚಿಂತನೆ ನಡೆಸಲಾಗಿದೆ. ಹಾಸನ ಜಿಲ್ಲೆಯಲ್ಲಿ ಹೈಸ್ಕೂಲ್ ಮಕ್ಕಳಿಗೂ 15 ದಿನಗಳ ಒಳಗೆ ಹೃದಯ ತಪಾಸಣೆ ನಡೆಸಬೇಕು. ಶಾಲೆಗಳಲ್ಲಿ ಎಲ್ಲಾ ಮಕ್ಕಳಿಗೂ ಹೃದಯ ತಪಾಸಣೆ ಮಾಡಬೇಕು ಎಂದರು.

Read More

ಹಾಸನ : ರಾಜ್ಯದಲ್ಲಿ ದಿನದಿಂದ ದಿನಕ್ಕೆ ಹೃದಯಾಘಾತದ ಪ್ರಕರಣಗಳು ಹೆಚ್ಚಳವಾಗುತ್ತಿದ್ದು,ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಕಡ್ಡಾಯ ಹೃದಯ ತಪಾಸಣೆಗೆ ಚಿಂತನೆ ನಡೆಸಲಾಗಿದೆ ಎಂದು ಸಚಿವ ಕೆ.ಎನ್. ರಾಜಣ್ಣ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಸಣ್ಣ ವಯಸ್ಸಿನವರು ಅಸುನೀಗಿರುವುದು ಬೇಸರದ ಸಂಗತಿ ಹೀಗಾಗಿ ಮಕ್ಕಳಿಂದ ಹಿಡಿದು ವೃದ್ಧರವರೆಗೂ ಕಡ್ಡಾಯ ಹೃದಯ ತಪಾಸಣೆಗೆ ಚಿಂತನೆ ನಡೆಸಲಾಗಿದೆ ಎಂದರು. ಹೃದಯಾಘಾತದಿಂದ ಸಾವುಗಳ ಹೆಚ್ಚಳವಾಗಿದ್ದು, ಈ ಸಾವುಗಳನ್ನು ತಡೆಯುವ ಹಿನ್ನೆಲೆಯಲ್ಲಿ ಕಡ್ಡಾಯ ಹೃದಯ ತಪಾಸಣೆಗೆ ಚಿಂತನೆ ನಡೆಸಲಾಗಿದ್ದು, ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಕ್ರಮಗಳನ್ನು ಕೈಗೊಳ್ಳಲಿದೆ ಎಂದು ತಿಳಿಸಿದ್ದಾರೆ. ಸಚಿವ ದಿನೇಶ್ ಗುಂಡೂರಾವ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಲಾಗಿದ್ದು, ಹೃದಯಾಘಾತದಿಂದಾಗುವ ಸಾವುಗಳನ್ನು ತಪ್ಪಿಸಬೇಕು, ಹೀಗಾಗಿ ರಾಜ್ಯದಲ್ಲಿ ಮಕ್ಕಳಿಂದ ಹಿಡಿದು ಪ್ರತಿಯೋಬ್ಬರಿಗೂ ಹೃದಯ ತಪಾಸಣೆ ಕಡ್ಡಾಯವಾಗಿ ಮಾಡಲು ಚಿಂತನೆ ನಡೆಸಲಾಗಿದೆ.

Read More

ಹುಬ್ಬಳ್ಳಿ : ಆರು ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪದ ಮೇಲೆ ಹುಬ್ಬಳ್ಳಿಯ ಘಂಟಿಕೇರಿ ಪೊಲೀಸ್ ಕಾನ್ಸ್ ಟೇಬಲ್ ವಿರುದ್ಧ ಪೋಕ್ಸೋ ಕೇಸ್ ದಾಖಲಾಗಿದೆ. ಘಂಟಿಕೇರಿ ಪೊಲೀಸ್  ಠಾಣೆಯ ಕಾನ್ಸ್ ಟೇಬಲ್ ಹಜರತ್ ಮಿಟ್ಟೆಖಾನ್ ವಿರುದ್ಧ ಪೋಕ್ಸೋ ಕೇಸ್ ದಾಖಲಿಸಲಾಗಿದೆ. ಹುಬ್ಬಳ್ಳಿಯ ಘಂಟಿಕೇರಿ ಪೊಲೀಸ್ ಠಾಣೆಯಲ್ಲಿ ಕಾನ್ಸ್ ಟೇಬಲ್ ಆಗಿರುವ ಹಜರತ್ ಮಿಟ್ಟೆಖಾನ್ ಆರು ವರ್ಷದ ಬಾಲಕಿಗೆ ಲೈಂಗಿಕ ದೌರ್ಜನ್ಯವೆಸಗಿರುವ ಆರೋಪ ಕೇಳಿ ಬಂದಿದೆ. ದೂರು ಕೊಡಲು ಹೋಗಿದ್ದ ವ್ಯಕ್ತಿ ಪತ್ನಿ ಪರಿಚಯ ಮಾಡಿಕೊಂಡಿದ್ದ ಕಾನ್ಸ್ ಟೇಬಲ್ ಆ ಮಹಿಳೆ ಜೊತೆಗೆ  ಅಕ್ರಮ ಸಂಬಂಧ ಹೊಂದಿದ್ದ, ಆಕೆ ಮಗಳ ಜೊತೆಗೆ ಅಶ್ಲೀಲವಾಗಿ ವರ್ತಿಸಿದ್ದಾನೆ ಹೀಗಾಗಿ ಕಾನ್ಸ್ ಟೇಬಲ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಬಾಲಕಿ ತಂದೆ ಒತ್ತಾಯಿಸಿದ್ದಾರೆ.

Read More

ಚಿಕ್ಕಮಗಳೂರು: ರಾಜ್ಯದಲ್ಲಿ ಹೃದಯಾಘಾತ ಪ್ರಕರಣಗಳು ನಿಲ್ಲುವ ಹಾಗೆ ಕಾಣುತ್ತಿಲ್ಲ, ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಹೃದಯಾಘಾತದಿಂದ ಸಾವನ್ನಪ್ಪುತ್ತಿರುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಚಿಕ್ಕಮಗಳೂರಿನಲ್ಲಿ ಹೃದಯಾಘಾತಕ್ಕೆ ಒಂದೇ ದಿನ ಇಬ್ಬರು ಬಲಿಯಾಗಿದ್ದಾರೆ. ಮೂಡಿಗೆರೆ ತಾಲೂಕಿನಲ್ಲಿ 29 ವರ್ಷದ ಮಹಿಳೆ ಹಾಗೂ 75 ವರ್ಷದ ವೃದ್ಧ ಇಬ್ಬರೂ ಒಂದೇ ದಿನ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಮೂಡಿಗೆರೆ ತಾಲೂಕಿನ ಬೆಳಗೋಡು ಗ್ರಾಮದ ಮೀನಾಕ್ಷಿ (29) ಮೃತ ಮಹಿಳೆ. ಹಾಗೂ ಬಿ.ಹೊಸಳ್ಳಿ ಗ್ರಾಮದ ಸುಮಿತ್ರೇಗೌಡ (75) ಮೃತರು. ಎದೆನೋವು ಕಾಣಿಸಿಕೊಂಡು ಕಾರಿನಲ್ಲಿಯೇ ಮಹಿಳೆ ಮೀನಾಕ್ಷಿ ಸಾವನ್ನಪ್ಪಿದ್ದಾರೆ. ಸುಮಿತ್ರೇಗೌಡ ಹೃದಯಾಘಾತದಿಂದ ಮನೆಯಲ್ಲಿಯೇ ಕುಸಿದು ಬಿದ್ದು ಮೃತಪಟ್ಟಿದ್ದಾರೆ.

Read More