Author: kannadanewsnow57

ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರವು ಗುಡುಗು ಮತ್ತು ಸಿಡಿಲು ಬಡಿತದಿಂದ ಉಂಟಾಗುವ ಪ್ರತಿಕೂಲ ಪರಿಣಾಮಗಳನ್ನು ತಗ್ಗಿಸಲು ಸಲಹೆ ಸೂಚನೆಗಳನ್ನು ನೀಡಲಾಗಿದ್ದು, ಕರ್ನಾಟಕದ ಹಲವು ಭಾಗಗಳಲ್ಲಿ ಗುಡುಗು-ಸಿಡಿಲು ಸಾಮಾನ್ಯವಾಗಿ ಮುಂಗಾರು ಪೂರ್ವದಲ್ಲಿ ಹಾಗೂ ಮುಂಗಾರಿನಲ್ಲಿ ಕಾಣಿಸಿಕೊಳ್ಳುತ್ತದೆ. ಸಿಡಿಲು ಸಾಮಾನ್ಯವಾಗಿ ಮಧ್ಯಾಹ್ನ ಅಥವಾ ಸಂಜೆ ಸಂಭವಿಸುವ ಸಾಧ್ಯತೆ ಹೆಚ್ಚಾಗಿರುತ್ತದೆ. ಸಾರ್ವಜನಿಕರು ಗುಡುಗು-ಸಿಡಿಲಿನಿಂದಾಗುವ ಅಪಾಯಗಳನ್ನು ತಗ್ಗಿಸಲು ಈ ಕೆಳಕಂಡ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಡಳಿತದಿಂದ ಸಲಹೆ ಸೂಚನೆಗಳನ್ನು ನೀಡಿದೆ. ಗುಡುಗು ಮತ್ತು ಸಿಡಿಲು ಸಂದರ್ಭದಲ್ಲಿ ಸಾರ್ವಜನಿಕರು ಪಾಲಿಸಬೇಕಾದ ಸಲಹೆ ಸೂಚನೆಗಳು: ಹೊರಗೆ ಹೋಗುವ ಅನಿವಾರ್ಯವಿದ್ದಲ್ಲಿ ಹವಾಮಾನ ಮುನ್ಸೂಚನೆ ಹಾಗೂ Common Alerting Protocol (CAP) ಮುಖಾಂತರ ಬರುವ Alerts / ಸಂದೇಶಗಳನ್ನು ಮೊಬೈಲ್ ನಲ್ಲಿ ಗಮನಿಸುವುದು. ಪ್ರತಿಕೂಲ ಹವಾಮಾನದ ಸಮಯದಲ್ಲಿ ವಿಶೇಷವಾಗಿ ಕೃಷಿ ಕ್ಷೇತ್ರದಲ್ಲಿ ಕೆಲಸ ಮಾಡಲು, ಜಾನುವಾರುಗಳನ್ನು ಮೇಯಿಸಲು, ಮೀನುಗಾರಿಕೆ ಮತ್ತು ದೋಣಿಗಳನ್ನು ಓಡಿಸಲು ಅಥವಾ ಸಾಮಾನ್ಯ ಪ್ರಯಾಣಕ್ಕಾಗಿ ಮನೆಯಿಂದ ಹೊರಗೆ ಹೋಗದಿರುವುದು. ಗುಡುಗು-ಸಿಡಿಲಿನ ಸಂದರ್ಭದಲ್ಲಿ ಲೋಹದ ತಗಡನ್ನು ಹೊದಿಸಿರುವ ಮನೆಗಳು ಸುರಕ್ಷಿತವಲ್ಲ, ಸುರಕ್ಷಿತವಾದ ಕಟ್ಟಡಗಳಲ್ಲಿ…

Read More

ನವದೆಹಲಿ : ರಕ್ಷಣಾ ಪಡೆಗಳ ಮುಖ್ಯಸ್ಥ (ಸಿಡಿಎಸ್) ಜನರಲ್ ಅನಿಲ್ ಚೌಹಾಣ್ ಮತ್ತು ಭೂಸೇನೆ, ವಾಯುಪಡೆ ಮತ್ತು ನೌಕಾಪಡೆಯ ಮುಖ್ಯಸ್ಥರು ಬುಧವಾರ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿಯಾದರು. ಈ ಮಹತ್ವದ ಸಭೆಯಲ್ಲಿ, ಭಾರತ ನಡೆಸಿದ ‘ಆಪರೇಷನ್ ಸಿಂಧೂರ್’ ಬಗ್ಗೆ ಅವರಿಗೆ ವಿವರವಾದ ಮಾಹಿತಿಯನ್ನು ನೀಡಲಾಯಿತು. ಏಪ್ರಿಲ್ 22 ರಂದು ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಗೆ ಪ್ರತಿಯಾಗಿ ಭಾರತವು ಮೇ 6 ಮತ್ತು 7 ರ ಮಧ್ಯರಾತ್ರಿ ‘ಆಪರೇಷನ್ ಸಿಂಧೂರ್’ ಅಡಿಯಲ್ಲಿ ಪಾಕಿಸ್ತಾನದಲ್ಲಿರುವ ಭಯೋತ್ಪಾದಕ ಶಿಬಿರಗಳ ಮೇಲೆ ನಿಖರ ದಾಳಿ ನಡೆಸಿತು. ‘ಆಪರೇಷನ್ ಸಿಂಧೂರ್’: ಭಯೋತ್ಪಾದನೆಯ ವಿರುದ್ಧ ನಿಖರವಾದ ದಾಳಿ ‘ಆಪರೇಷನ್ ಸಿಂಧೂರ್’ ಭಾರತದ ನಿಖರವಾದ ಮಿಲಿಟರಿ ಕಾರ್ಯಾಚರಣೆಯಾಗಿದ್ದು, ಇದನ್ನು ಮೇ 6 ಮತ್ತು 7 ರ ರಾತ್ರಿ ಪಾಕಿಸ್ತಾನದಲ್ಲಿರುವ ಭಯೋತ್ಪಾದಕ ನೆಲೆಗಳನ್ನು ಗುರಿಯಾಗಿಸಿಕೊಂಡು ನಡೆಸಲಾಯಿತು. ಏಪ್ರಿಲ್ 22 ರಂದು ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭೀಕರ ಭಯೋತ್ಪಾದಕ ದಾಳಿಗೆ ಪ್ರತಿಕ್ರಿಯೆಯಾಗಿ ಈ ಕಾರ್ಯಾಚರಣೆಯನ್ನು ನಡೆಸಲಾಯಿತು, ಇದರಲ್ಲಿ 26 ಅಮಾಯಕ…

Read More

ನವದೆಹಲಿ : ಸಿಬಿಎಸ್‌ಇ ಫಲಿತಾಂಶ 2025 ಬಿಡುಗಡೆ ಮಾಡಿದ ನಂತರ, ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಮಂಡಳಿಯು ಒಂದು ದೊಡ್ಡ ನಿರ್ಧಾರವನ್ನು ತೆಗೆದುಕೊಂಡಿದೆ. ಪರೀಕ್ಷೆಯ ನಂತರದ ಒತ್ತಡವನ್ನು ಕಡಿಮೆ ಮಾಡಲು ಮಂಡಳಿಯು ಟೆಲಿ-ಕೌನ್ಸೆಲಿಂಗ್ ಸೌಲಭ್ಯವನ್ನು ಪ್ರಾರಂಭಿಸಿದೆ. ಈ ನಿರ್ಧಾರವು ಫಲಿತಾಂಶಗಳ ನಂತರ ಮಾನಸಿಕ ಒತ್ತಡವನ್ನು ಅನುಭವಿಸುವ ಲಕ್ಷಾಂತರ ವಿದ್ಯಾರ್ಥಿಗಳ ಒತ್ತಡವನ್ನು ಕಡಿಮೆ ಮಾಡುತ್ತದೆ. ಈ ಸೌಲಭ್ಯವು ದೇಶಾದ್ಯಂತ ವಿದ್ಯಾರ್ಥಿಗಳಿಗೆ ಉಚಿತವಾಗಿ ಲಭ್ಯವಿದೆ, ಇದರಿಂದ ಅವರು ತಜ್ಞರೊಂದಿಗೆ ಮಾತನಾಡುವ ಮೂಲಕ ತಮ್ಮ ಸಮಸ್ಯೆಗಳಿಗೆ ಪರಿಹಾರಗಳನ್ನು ಪಡೆಯಬಹುದು. ನೀವು ಅದರ ಬಗ್ಗೆ ಇಲ್ಲಿ ವಿವರವಾಗಿ ತಿಳಿದುಕೊಳ್ಳಬಹುದು. ವಿದ್ಯಾರ್ಥಿಗಳಿಗಾಗಿ CBSE ಟೆಲಿ ಕೌನ್ಸೆಲಿಂಗ್ ಸೇವೆ (CBSE ಟೆಲಿ ಕೌನ್ಸೆಲಿಂಗ್) ಫಲಿತಾಂಶದ ನಂತರ ವಿದ್ಯಾರ್ಥಿಗಳ ಮಾನಸಿಕ ಒತ್ತಡವನ್ನು ಕಡಿಮೆ ಮಾಡಲು CBSE ಮೇ 13 ರಿಂದ ಮೇ 28, 2025 ರವರೆಗೆ ಟೆಲಿ-ಕೌನ್ಸೆಲಿಂಗ್ (CBSE ಟೆಲಿ ಕೌನ್ಸೆಲಿಂಗ್) ಸೌಲಭ್ಯವನ್ನು ಪ್ರಾರಂಭಿಸಿದೆ. ವಿದ್ಯಾರ್ಥಿಗಳು ಬೆಳಿಗ್ಗೆ 8 ರಿಂದ ರಾತ್ರಿ 10 ರವರೆಗೆ ಟೋಲ್-ಫ್ರೀ ಸಂಖ್ಯೆ 1800-11-8004 ಗೆ ಕರೆ ಮಾಡಬಹುದು. ಈ…

Read More

ನವದೆಹಲಿ  : ಭಾರತೀಯ ಸೇನೆಯ ಏರ್ ಸ್ಟ್ರೈಕ್ ನಲ್ಲಿ ಪಾಕಿಸ್ತಾನದಲ್ಲಿ ಇಬ್ಬರು ಡ್ರೋನ್ ಅಪರೇಟರ್ ಗಳು ಬಲಿಯಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಟರ್ಕಿಯು ಪಾಕಿಸ್ತಾನಕ್ಕೆ 350 ಕ್ಕೂ ಹೆಚ್ಚು ಡ್ರೋನ್ ಗಳನ್ನು ನೀಡಿತ್ತು, ಡ್ರೋನ್ ಗಳು ಮಾತ್ರವಲ್ಲದೆ ಸೇನೆಯನ್ನೂ ಕಳಿಸಿದ್ದರು. ಜೊತೆಗೆ ಪಾಕಿಸ್ತಾನಕ್ಕೆ ಟಿಆರ್ ಟಿ ಪಡೆಯನ್ನು ಕಳಿಸಿ ಭಾರತದ ಮೇಲೆ ದಾಳಿಗೆ ಪಾಕಿಸ್ತಾನಕ್ಕೆ ಟರ್ಕಿ ಸಹಯಾ ಮಾಡಿತ್ತು. ಭಾರತದ ಏರ್ ಸ್ಟ್ರೈಕ್ ನಲ್ಲಿ ಪಾಕ್ ಪರವಾಗಿ ಬಂದಿದ್ದ ಇಬ್ಬರು ಡ್ರೋನ್ ಅಪರೇಟರ್ ಗಳು ಹತ್ಯೆಯಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

Read More

ನವದೆಹಲಿ : ಚೀನಾದ ಮುಖವಾಣಿ ಗ್ಲೋಬಲ್ ಟೈಮ್ಸ್ ನ ಎಕ್ಸ್ ಖಾತೆ ನಿಷೇಧದ ಬೆನ್ನಲ್ಲೇ, ಟರ್ಕಿಶ್ ಪ್ರಸಾರಕ ‘ಟಿಆರ್‌ಟಿ ವರ್ಲ್ಡ್’ ನ ‘ಎಕ್ಸ್’ ಖಾತೆಯನ್ನು ಭಾರತದಲ್ಲಿ ನಿಷೇಧಿಸಲಾಗಿದೆ. ಹೌದು, ಟರ್ಕಿಶ್ ಪ್ರಸಾರಕ ‘ಟಿಆರ್‌ಟಿ ವರ್ಲ್ಡ್’ ನ ‘ಎಕ್ಸ್’ ಖಾತೆಯನ್ನು ಭಾರತದಲ್ಲಿ ನಿಷೇಧಿಸಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ. ಚೀನಾದ ಪ್ರಚಾರ ಮಾಧ್ಯಮ ‘ಗ್ಲೋಬಲ್ ಟೈಮ್ಸ್’ ನ ‘X’ ಖಾತೆಯನ್ನು ಭಾರತದಲ್ಲಿ ತಡೆಹಿಡಿಯಲಾಗಿದ್ದು, ಈ ಬಗ್ಗೆ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ. https://twitter.com/ANI/status/1922546882997313540?ref_src=twsrc%5Egoogle%7Ctwcamp%5Eserp%7Ctwgr%5Etweet ಕೇಂದ್ರ ಸರ್ಕಾರವು ಕಳೆದ ವಾರ ಸಾಮಾಜಿಕ ಮಾಧ್ಯಮ ವೇದಿಕೆ X, ಸರ್ಕಾರದ ಕಾರ್ಯನಿರ್ವಾಹಕ ಆದೇಶಗಳನ್ನು ಅನುಸರಿಸಿ ಭಾರತದಲ್ಲಿ 8,000 ಖಾತೆಗಳನ್ನು ನಿರ್ಬಂಧಿಸಲು ಪ್ರಾರಂಭಿಸಿದೆ.

Read More

ಬೆಂಗಳೂರು : ಇನ್ಮುಂದೆ ರಾಜ್ಯ ಸರ್ಕಾರವು 108 ಅ್ಯಂಬುಲೆನ್ಸ್ ಕಾರ್ಯ ನಿರ್ವಹಿಸುತ್ತೆ, ಯಾವುದೇ ಏಜೆನ್ಸಿ ಮೂಲಕ 108 ಆ್ಯಂಬುಲೆನ್ಸ್ ಕಾರ್ಯ ನಿರ್ವಹಿಸಲ್ಲ, ಸರ್ಕಾರವೇ 108 ಆ್ಯಂಬುಲೆನ್ಸ್ ಸರ್ವೀಸ್ ನೀಡುತ್ತದೆ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಯಾವುದೇ ಏಜೆನ್ಸಿ ಮೂಲಕ 108 ಆ್ಯಂಬುಲೆನ್ಸ್ ಕಾರ್ಯ ನಿರ್ವಹಿಸಲ್ಲ, ಸರ್ಕಾರವೇ 108 ಆ್ಯಂಬುಲೆನ್ಸ್ ಸರ್ವೀಸ್ ನೀಡುತ್ತದೆ ಎಂದು ಹೇಳಿದ್ದಾರೆ.

Read More

ನೋಯ್ಡಾ : ಗ್ರೇಟರ್ ನೋಯ್ಡಾದಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದೆ. ಒಬ್ಬ ಯುವಕ ಶೌಚಾಲಯ ಬಳಸುತ್ತಿದ್ದಾಗ ಅದೇ ಕ್ಷಣದಲ್ಲಿ ಶೌಚಾಲಯದಲ್ಲಿ ಸ್ಫೋಟ ಸಂಭವಿಸಿ ಆ ಯುವಕ ತೀವ್ರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ಗ್ರೇಟರ್ ನೋಯ್ಡಾ ಬೀಟಾ-2 ಕೊಟ್ವಾಲಿ ಪ್ರದೇಶದಲ್ಲಿ ಶನಿವಾರ ಮಧ್ಯಾಹ್ನ ಆಘಾತಕಾರಿ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ಮನೆಯ ಶೌಚಾಲಯದಲ್ಲಿ ವೆಸ್ಟರ್ನ್ ಟಾಯ್ಲೆಟ್ ಸೀಟ್ ಒಡೆದು 20 ವರ್ಷದ ಯುವಕ ಗಂಭೀರವಾಗಿ ಗಾಯಗೊಂಡಿದ್ದಾನೆ. ಈ ಘಟನೆ ಸೆಕ್ಟರ್ -36 ರ ಮನೆ ಸಂಖ್ಯೆ ಸಿ -364 ರಲ್ಲಿ ನಡೆದಿದೆ. ಈ ಮನೆ ಸುನಿಲ್ ಪ್ರಧಾನ್ ಅವರಿಗೆ ಸೇರಿದೆ. ವರದಿಗಾರನ ಪ್ರಕಾರ, ಸುನಿಲ್ ಪ್ರಧಾನ್ ಅವರ ಮಗ ಆಶು ನಗರ್ ಮಧ್ಯಾಹ್ನ 3 ಗಂಟೆ ಸುಮಾರಿಗೆ ಶೌಚಾಲಯದಲ್ಲಿದ್ದರು. ಮಲವಿಸರ್ಜನೆಯ ನಂತರ ಅವನು ತೊಳೆಯಲು ಪ್ರಾರಂಭಿಸಿದ ತಕ್ಷಣ, ಶೌಚಾಲಯದ ಸೀಟ್ ದೊಡ್ಡ ಶಬ್ದದೊಂದಿಗೆ ಸ್ಫೋಟಗೊಂಡು ಬೆಂಕಿ ಹೊತ್ತಿಕೊಂಡಿತು. ಸ್ಫೋಟ ಮತ್ತು ಬೆಂಕಿಯಿಂದಾಗಿ ಆಶು ಅವರ ಮುಖ, ಕೈಗಳು, ಕಾಲುಗಳು ಮತ್ತು ಖಾಸಗಿ ಭಾಗಗಳು…

Read More

ನವದೆಹಲಿ : ಚೀನಾದ ಮುಖವಾಣಿ ಗ್ಲೋಬಲ್ ಟೈಮ್ಸ್ ನ ಎಕ್ಸ್ ಖಾತೆ ನಿಷೇಧದ ಬೆನ್ನಲ್ಲೇ, ಟರ್ಕಿಶ್ ಪ್ರಸಾರಕ ‘ಟಿಆರ್‌ಟಿ ವರ್ಲ್ಡ್’ ನ ‘ಎಕ್ಸ್’ ಖಾತೆಯನ್ನು ಭಾರತದಲ್ಲಿ ನಿಷೇಧಿಸಲಾಗಿದೆ. ಹೌದು, ಟರ್ಕಿಶ್ ಪ್ರಸಾರಕ ‘ಟಿಆರ್‌ಟಿ ವರ್ಲ್ಡ್’ ನ ‘ಎಕ್ಸ್’ ಖಾತೆಯನ್ನು ಭಾರತದಲ್ಲಿ ನಿಷೇಧಿಸಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ. https://twitter.com/ANI/status/1922546882997313540?ref_src=twsrc%5Egoogle%7Ctwcamp%5Eserp%7Ctwgr%5Etweet ಕೇಂದ್ರ ಸರ್ಕಾರವು ಕಳೆದ ವಾರ ಸಾಮಾಜಿಕ ಮಾಧ್ಯಮ ವೇದಿಕೆ X, ಸರ್ಕಾರದ ಕಾರ್ಯನಿರ್ವಾಹಕ ಆದೇಶಗಳನ್ನು ಅನುಸರಿಸಿ ಭಾರತದಲ್ಲಿ 8,000 ಖಾತೆಗಳನ್ನು ನಿರ್ಬಂಧಿಸಲು ಪ್ರಾರಂಭಿಸಿದೆ.

Read More

ಕಲಬುರಗಿ : ರಾಜ್ಯದಲ್ಲಿ ಈ ಬಾರಿ ಒಟ್ಟು 1,281 ಕೋಟಿ ರೂ. ತೆರಿಗೆ ಸಂಗ್ರಹವಾಗಿದೆ. ಇದು ದಾಖಲೆಯ ಸಂಗ್ರಹವಾಗಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. ಅಮೃತ್ ಯೋಜನೆಯಡಿಯಲ್ಲಿ ಚಿತ್ತಾಪುರ ಹಾಗೂ ವಾಡಿ ಪಟ್ಟಣಕ್ಕೆ ಕುಡಿಯುವ ನೀರು ಒದಗಿಸುವ ಯೋಜನೆಗೆ ಅಡಿಗಲ್ಲು, ಚಿತ್ತಾಪುರ ಪಟ್ಟಣದಲ್ಲಿ ನಿರ್ಮಾಣಗೊಂಡಿರುವ ಕ್ರೀಡಾಂಗಣ ಉದ್ಘಾಟನೆ ಸೇರಿದಂತೆ ಒಟ್ಟು ₹86.79 ಕೋಟಿ ವೆಚ್ಚದ ವಿವಿಧ ಕಾಮಗಾರಿಗಳಿಗೆ ಇಂದು ಅಡಿಗಲ್ಲು ನೆರವೇರಿಸಿ ಮಾತನಾಡಿದ ಅವರು,ರಾಜ್ಯಾದ್ಯಂತ 5,770 ಅರಿವು ಕೇಂದ್ರಗಳನ್ನು ಸ್ಥಾಪಿಸಲಾಗಿದ್ದು, ಗ್ರಾಮೀಣ ಭಾಗದ ಯುವಕ ಯುವತಿಯರ ಜ್ಞಾನಾರ್ಜನೆಗೆ ನೆರವಾಗುತ್ತಿದೆ. ರಾಜ್ಯದಲ್ಲಿ ಈ ಬಾರಿ ಒಟ್ಟು ₹1,281 ಕೋಟಿ ತೆರಿಗೆ ಸಂಗ್ರಹವಾಗಿದೆ. ಇದು ದಾಖಲೆಯ ಸಂಗ್ರಹವಾಗಿದೆ. ನರೇಗಾ ಯೋಜನೆಯಡಿಯಲ್ಲಿ ತಾಯಂದಿರು ಕೆಲಸ ಮಾಡಲು ಹೋದಾಗ ಅವರ ಮಕ್ಕಳನ್ನು ಬಿಟ್ಟು ಹೋಗಲು ರಾಜ್ಯಾದ್ಯಂತ 3,867 ಕೂಸಿನ ಮನೆಗಳನ್ನು ಸ್ಥಾಪಿಸಲಾಗಿದ್ದು, ಸುಮಾರು 50,000ಕ್ಕೂ ಹೆಚ್ಚು ಮಕ್ಕಳನ್ನು ಆರೈಕೆ ಮಾಡಲಾಗುತ್ತಿದೆ ಎಂದರು. ಚಿತ್ತಾಪುರ ಕ್ಷೇತ್ರದ ಗ್ರಾಮೀಣ ಭಾಗದ ಹಳ್ಳಿಗಳ ಅಭಿವೃದ್ಧಿಗಾಗಿ ₹150 ಕೋಟಿ ವೆಚ್ಚದ ಕ್ರಿಯಾಯೋಜನೆ…

Read More

ಬೆಂಗಳೂರು: 2025-26ನೇ ಸಾಲಿನ ರಾಜ್ಯ ಸರ್ಕಾರಿ ನೌಕರರ ಸಾಮಾನ್ಯ ವರ್ಗಾವಣೆಗೆ ಮೇ 15 ರ ನಾಳೆಯಿಂದ ಜೂನ್ 14 ರವರೆಗೆ ಅವಕಾಶ ನೀಡಲು ಸರ್ಕಾರ ನಿರ್ಧರಿಸಿದೆ. ಈ ಸಂಬಂಧ ರಾಜ್ಯ ಸರ್ಕಾರದಿಂದ ನಡವಳಿಯನ್ನು ಹೊರಡಿಸಲಾಗಿದೆ. ಅದರಲ್ಲಿ 2025-26 ಸಾಲಿನ ವರ್ಗಾವಣೆ ಮಾರ್ಗಸೂಚಿಗಳನ್ನು ಸರ್ಕಾರವು ಹೊರಡಿಸಲು ಇಚ್ಚಿಸುತ್ತದೆ. ಈ ವರ್ಗಾವಣೆ ಉದ್ದೇಶಕ್ಕಾಗಿ ಈಗಾಗಲೇ ಹೊರಡಿಸಲಾಗಿರುವ ಪ್ರತ್ಯೇಕ ಅಧಿನಿಯಮ / ನಿಯಮಗಳು ಅನ್ವಯವಾಗುವ ಸರ್ಕಾರಿ ನೌಕರರಿಗೆ ಈ ಮಾರ್ಗಸೂಚಿಗಳು ಅನ್ವಯವಾಗುವುದಿಲ್ಲ. 2. ವಿವರಣೆ:-ಈ ಆದೇಶದಲ್ಲಿ ಸಂದರ್ಭವು ಅನ್ಯಥಾ ಅಗತ್ಯಪಡಿಸದ ಹೊರತು,- (1) “ಸಕ್ಷಮ ಪ್ರಾಧಿಕಾರ” ಎಂದರೆ ನೇಮಕಾತಿ ಪ್ರಾಧಿಕಾರ ಅಥವಾ ವರ್ಗಾವಣೆ/ ಚಲನವಲನ ಮಾಡಲು ಅಧಿಕಾರ ಹೊಂದಿರುವ ಪ್ರಾಧಿಕಾರ. (2) “ವರ್ಗಾವಣೆ” ಎಂದರೆ ಒಬ್ಬ ಸರ್ಕಾರಿ ನೌಕರನನ್ನು ಒಂದು ಹುದ್ದೆಯಿಂದ ಮತ್ತೊಂದು ಹುದ್ದೆಯ ಕರ್ತವ್ಯಗಳನ್ನು ನಿರ್ವಹಿಸಲು ಒಂದು ಕೇಂದ್ರ ಸ್ಥಾನದಿಂದ ಮತ್ತೊಂದು ಕೇಂದ್ರ ಸ್ಥಾನಕ್ಕೆ ಅಥವಾ ಒಂದು ಇಲಾಖೆ/ಕ್ಷೇತ್ರ ಇಲಾಖೆ/ ಆಯುಕ್ತಾಲಯ/ನಿರ್ದೇಶನಾಲಯ, ಇತರೆ ಕಛೇರಿಯ ಪಸ್ತುತ ಇರುವ ಕೇಂದ್ರ ಸ್ನಾನವನ್ನು ಬದಲಾಯಿಸಿ ಬೇರೊಂದು ಕೇಂದ್ರ…

Read More