Author: kannadanewsnow57

ನವದೆಹಲಿ : ಪ್ರಪಂಚದಾದ್ಯಂತ ಪುರುಷರು ಮತ್ತು ಮಹಿಳೆಯರಲ್ಲಿ ಸಾವಿಗೆ ಹೃದ್ರೋಗಗಳು ಪ್ರಮುಖ ಕಾರಣವಾಗಿದೆ. ತಜ್ಞರ ಪ್ರಕಾರ, ಹೃದಯದ ಸಮಸ್ಯೆಗಳಿಂದಾಗಿ ಸಾವು ಅಥವಾ ಯಾವುದೇ ಮಾರಣಾಂತಿಕ ಸ್ಥಿತಿಯನ್ನು ತಡೆಗಟ್ಟಲು ಉತ್ತಮ ಮಾರ್ಗವೆಂದರೆ ಮುನ್ನೆಚ್ಚರಿಕೆಗಳು ಮತ್ತು ಹೃದಯಾಘಾತದ ಚಿಹ್ನೆಗಳ ಬಗ್ಗೆ ಎಲ್ಲವನ್ನೂ ತಿಳಿದುಕೊಳ್ಳುವುದು. ಎದೆ ಬಿಗಿತ ಮತ್ತು ದೇಹದ ಮೇಲ್ಭಾಗದ ನೋವಿನಂತಹ ರೋಗಲಕ್ಷಣಗಳು ಹೆಚ್ಚು ಸ್ಪಷ್ಟವಾಗಿದ್ದರೂ, ಹೃದಯಾಘಾತವು ಎದೆಯುರಿ ಅಥವಾ ಆಯಾಸದಂತಹ ಮತ್ತೊಂದು ಕಾಯಿಲೆ ಎಂದು ಸುಲಭವಾಗಿ ತಪ್ಪಾಗಿ ಭಾವಿಸಬಹುದಾದ ಇತರ ಚಿಹ್ನೆಗಳನ್ನು ಪ್ರಸ್ತುತಪಡಿಸುತ್ತದೆ. ಆದ್ದರಿಂದ, ಈ ಚಿಹ್ನೆಗಳನ್ನು ಗುರುತಿಸುವುದು ಮತ್ತು ಆರಂಭಿಕ ಮಧ್ಯಸ್ಥಿಕೆಯನ್ನು ಪಡೆಯುವುದು ಜೀವನ ಮತ್ತು ಸಾವಿನ ನಡುವಿನ ವ್ಯತ್ಯಾಸವಾಗಿದೆ. ನೀವು ಹೃದಯಾಘಾತಕ್ಕೆ ಕನಿಷ್ಠ ಒಂದು ತಿಂಗಳ ಮೊದಲು ನಿಮ್ಮ ದೇಹವು ತೋರಿಸಬಹುದಾದ ಸಾಮಾನ್ಯ ರೋಗಲಕ್ಷಣಗಳು ಇಲ್ಲಿವೆ. ಅತಿಯಾದ ಒತ್ತಡವನ್ನು ಅನುಭವಿಸುವುದು ಅಮೇರಿಕನ್ ಹಾರ್ಟ್ ಅಸೋಸಿಯೇಷನ್ ಪ್ರಕಾರ, ಹೃದಯಾಘಾತದ ಆರಂಭಿಕ ಲಕ್ಷಣವೆಂದರೆ ಅಹಿತಕರ ಒತ್ತಡ, ಹಿಂಡುವಿಕೆ, ಹೊಟ್ಟೆ ತುಂಬುವಿಕೆ ಅಥವಾ ನಿಮ್ಮ ಎದೆಯ ಮಧ್ಯದಲ್ಲಿ ನೋವು. ಈ ಅಸ್ವಸ್ಥತೆಯು ಸಾಮಾನ್ಯವಾಗಿ ಒಂದು…

Read More

ಬೆಂಗಳೂರು : ಕಾಂಗ್ರೆಸ್‌ ಕಾರ್ಯಕರ್ತರ ಸಮಸ್ಯೆಗಳ ಪರಿಹಾರಕ್ಕೆ ಇಂದು ಸಿಎಂ ಸಿದ್ದರಾಮಯ್ಯ ಮಹತ್ವದ ಕಾರ್ಯಕರ್ತರ ಸ್ಪಂದನಾ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ. ಹೌದು, ಇಂದು ಬೆಂಗಳೂರಿನ ಕಾಂಗ್ರೆಸ್‌ ಕಚೇರಿಯ ಭಾರತ್‌ ಜೋಡೋ ಭವನದಲ್ಲಿ ಕಾಂಗ್ರೆಸ್‌ ಕಾರ್ಯಕರ್ತರ ಸಮಸ್ಯೆಗಳ ಪರಿಹಾರಕ್ಕಾಗಿ ಕಾಂಗ್ರೆಸ್‌ ಕಾರ್ಯಕರ್ತರ ಸ್ಪಂದನಾ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ. ಈ ಕುರಿತು ಟ್ವೀಟರ್‌ ನಲ್ಲಿ ಮಾಹಿತಿ ನೀಡಿರುವ ಸಿಎಂ ಸಿದ್ದರಾಮಯ್ಯ, ಕಾಂಗ್ರೆಸ್ ಪಕ್ಷಕ್ಕಾಗಿ ನಿಷ್ಠೆಯಿಂದ ದುಡಿದಿರುವ ನಿಮ್ಮ ಅಹವಾಲು ಆಲಿಸುವುದು ನಮ್ಮ ಸರ್ಕಾರದ ಕರ್ತವ್ಯವಾಗಿದೆ. ಇಂದು ಬೆಂಗಳೂರಿನ ಕಾಂಗ್ರೆಸ್ ಕಾಂಗ್ರೆಸ್ ಕಚೇರಿಯ ಭಾರತ್ ಜೋಡೋ ಭವನದಲ್ಲಿ ನಾನು ನಿಮ್ಮ ಅಹವಾಲುಗಳಿಗೆ ಕಿವಿಯಾಗಲು ಕಾಯುತ್ತಿರುತ್ತೇನೆ. ಕಾಂಗ್ರೆಸ್ ಪಕ್ಷ ಒಂದು ಕುಟುಂಬದಂತೆ, ನಮ್ಮವರ ಕಷ್ಟಕ್ಕೆ ನೆರವಾಗುವುದು ಕುಟುಂಬದ ಸದಸ್ಯನಾದ ನನ್ನ ಕರ್ತವ್ಯ. ನಾಳೆ ಭಾರತ್ ಜೋಡೋ ಭವನದಲ್ಲಿ‌ ಸಿಗೋಣ ಎಂದು ಟ್ವೀಟ್‌ ಮಾಡಿದ್ದಾರೆ. https://Twitter.com/i/status/1811783801988587762

Read More

ಬೆಂಗಳೂರು : ಹಳೆ ಪಿಂಚಣಿ ವ್ಯವಸ್ಥೆ (OPS) ಜಾರಿಗೆ ಹಾಗೂ 8ನೇ ವೇತನ ಆಯೋಗದ ವರದಿ ಜಾರಿಗಾಗಿ ಬೇಡಿಕೆಯಿಟ್ಟು ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಷಡಕ್ಷರಿ ನೇತೃತ್ವದಲ್ಲಿ ಇಂದು ವಿಧಾನಸೌಧದಲ್ಲಿ ಪ್ರತಿಭಟನೆ ಮಾಡಲಾಗಿದೆ.ಒಂದು ವೇಳೆ ಹಳೆಯ ಪಿಂಚಣಿ ಯೋಜನೆ ಜಾರಿಯಾಗದಿದ್ದರೆ ಜುಲೈ 29ರಿಂದ ಮುಷ್ಕರ ಮಾಡುವುದಾಗಿ ಎಚ್ಚರಿಕೆ ನೀಡಿದ್ದಾರೆ. 7ನೇ ವೇತನ ಆಯೋಗ ಹಾಗೂ ಹಳೆ ಪಿಂಚಣಿ ಯೋಜನೆ (OPS) ಜಾರಿ ಕುರಿತು ಸರ್ಕಾರಿ ನೌಕರರ ಬಹಳ ದಿನಗಳ ಬೇಡಿಕೆ ಆಗಿದ್ದು ತಮ್ಮ ಬೇಡಿಕೆ ಈಡೇರಿಸಿದರೆ ಮಾತ್ರ ಕೆಲಸಕ್ಕೆ ಹಾಜರಾಗುತ್ತೇವೆ. ಬೇಡಿಕೆ ಈಡೇರಿಸದಿದ್ದರೆ ಕೆಲಸ ಮಾಡದೇ ಮನೆಯಲ್ಲಿರುತ್ತೇವೆ ಎಂದು ರಾಜ್ಯ ಸರ್ಕಾರಕ್ಕೆ ಸರ್ಕಾರಿ ನೌಕರರ ಸಂಘದಿಂದ ಎಚ್ಚರಿಕೆ ನೀಡಲಾಗಿದೆ. 7ನೇ ವೇತನ ಆಯೋಗದ ವರದಿ ಜಾರಿಗಾಗಿ ಮತ್ತು ಹಳೆ ಪಿಂಚಣಿ ವ್ಯವಸ್ಥೆಗೆ ಬೇಡಿಕೆಯಿಟ್ಟು ರಾಜ್ಯಾದ್ಯಂತ ಅನಿರ್ಧಿಷ್ಟಾವಧಿ ಮುಷ್ಕರಕ್ಕೆ ಸರ್ಕಾರಿ ನೌಕರರ ಸಂಘ ಈ ಹಿಂದೆ ಕೂಡ ಕರೆಕೊಟ್ಟಿತ್ತು. ಸರ್ಕಾರಿ ಸೇವೆಗಳಲ್ಲಿ ವ್ಯತ್ಯಯವಾಗಬಾರದು. ಸಾರ್ವಜನಿಕರಿಗೆ ತೊಂದರೆಯಾಗಬಾರದು ಸರ್ಕಾರ ಕಸರತ್ತು ನಡೆಸಿತ್ತು. ಸರ್ಕಾರದ…

Read More

ಚಿಕ್ಕಬಳ್ಳಾಪುರ : ರಾಜ್ಯದಲ್ಲಿ ಡೆಂಗ್ಯೂ ಮಹಾಮಾರಿ ಅಬ್ಬರ ಜೋರಾಗಿದ್ದು,  ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಡೆಂಗ್ಯೂ ಜ್ವರಕ್ಕೆ ಮತ್ತೊಂದು ಬಲಿಯಾಗಿದೆ.   ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲೂಕಿನ ನಾಮಗೊಂಡ್ಲು ಗ್ರಾಮದ ಯಶಸ್ವಿನಿ (೧೮) ಎಂಬ ಯುವತಿ ಡೆಂಗ್ಯೂ ಜ್ವರಕ್ಕೆ ಸಾವನ್ನಪ್ಪಿರುವುದಾಗಿ ವರದಿಯಾಗಿದೆ. ಕಳೆದೊಂದು ವಾರದಿಂದ ತೀವ್ರ ಜ್ವರದಿಂದ ಬಳಲುತ್ತಿದ್ದ ಯಶಸ್ವಿನಿಯನ್ನು ಗೌರಿಬಿದನೂರು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು.ಬಳಿಕ ಬೆಂಗಳೂರಿನ ಖಾಸಗಿ ಅಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಅದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಸಾವನ್ನಪ್ಪಿದ್ದಾರೆ. ಯಶಸ್ವಿನಿ ಪ್ರಥಮ ವರ್ಷದ ಪದವಿ ತರಗತಿಗೆ ಪ್ರವೇಶ ಪಡೆದಿದ್ದರು.

Read More

ಬೆಂಗಳೂರು : ಬೆಂಗಳೂರಿನಲ್ಲಿ ಘೋರ ದುರಂತವೊಂದು ಸಂಭವಿಸಿದ್ದು, ರೈಲು ಹರಿದ ಪರಿಣಾಮ ದಂಪತಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಬೆಂಗಳೂರಿನ ಕೆಳಗಿನನಾಯಕರಂಡಹಳ್ಳಿಯಲ್ಲಿ ರೈಲಿಗೆ ಸಿಲುಕಿ ದಂಪತಿ ಸಾವನ್ನಪ್ಪಿದ್ದಾರೆ. ಹಳಿ ಮೇಲೆ ಕುರಿ ಮೇಯಿಸುತ್ತಿದ್ದ ವೇಳೆ ಏಕಾಏಕಿ ರೈಲು ಬಂದ ಹಿನ್ನೆಲೆಯಲ್ಲಿ ದಂಪತಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ರೈಲ್ವೆ ಹಳಿ ಮೇಲೆ ಮೇಕೆ ಮೇಯಿಸುತ್ತಿದ್ದ ಚಂದ್ರನಾಯಕ್‌ ಹಾಗೂ ಜಯಬಾಯಿ ಎಂಬ ದಂಪತಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಚಂದ್ರನಾಯಕ್‌ ಹಳಿ ಮೇಲೆ ಕುರಿತು ಮೇಯಿಸುತ್ತಿದ್ದ ವೇಳೆ ರೈಲು ಬಂದಿದೆ. ರೈಲು ಬರುತ್ತಿದ್ದನ್ನು ಕಂಡು ಪತ್ನಿ ರಕ್ಷಣೆಗೆ ಧಾವಿಸಿದ್ದ ಜಯಬಾಯಿ ಕೂಡ ಸಾವನ್ನಪ್ಪಿದ್ದಾರೆ. ಯಶವಂತಪುರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಬೆಂಗಳುರು : ಆರೋಗ್ಯ ರಕ್ಷಕ ಆಯುಷ್ಮಾನ್ ಭಾರತ್-ಪ್ರಧಾನಮಂತ್ರಿಗಳ ಜನ ಆರೋಗ್ಯ ಯೋಜನಾ ಮುಖ್ಯಮಂತ್ರಿ ಆರೋಗ್ಯ ಕರ್ನಾಟಕ ಯೋಜನೆಯ ಪ್ರಯೋಜನ ಪಡೆಯಲು ಇಂದೇ ಆಯುಷ್ಮಾನ್ ಕಾರ್ಡ್ ಮಾಡಿಸಿ. ಆಯುಷ್ಮಾನ್ ಕಾರ್ಡ್‍ಗಳನ್ನು ನಿಮ್ಮ ಹತ್ತಿರದ ಗ್ರಾಮ ಒನ್ ನಿಂದ ರೇಷನ್‍ಕಾರ್ಡ್ ಲಿಂಕ್ ಆಗಿರುವ ಆಧಾರ್ ಕಾರ್ಡ್ ಹಾಗೂ ಮೊಬೈಲ್ ಸಂಖ್ಯೆ ನೀಡಿ ಉಚಿತವಾಗಿ ಪಡೆಯಿರಿ. ಆಯುಷ್ಮಾನ್ ಕಾರ್ಡ್ ಹೊಂದಿರುವ ಬಿಪಿಎಲ್ ಕಾರ್ಡ್‍ನ ಪ್ರತೀ ಕುಟುಂಬಗಳಿಗೆ ರೂ.5 ಲಕ್ಷ ವಾರ್ಷಿಕ ಮಿತಿಯೊಳಗೆ ಉಚಿತ ಚಿಕಿತ್ಸೆ, ಎಪಿಎಲ್ ಕಾರ್ಡ್‍ನ ಪ್ರತೀ ಕುಟುಂಬಗಳಿಗೆ ಪ್ಯಾಕೇಜ್ ದರದಲ್ಲಿ ಶೇ.30 ರಷ್ಟು ವಾರ್ಷಿಕವಾಗಿ ರೂ.1.5 ಲಕ್ಷದ ಮಿತಿಯೊಳಗೆ ಉಚಿತ ಚಿಕಿತ್ಸಾ ವೆಚ್ಚವನ್ನು ಸರ್ಕಾರ ಸಂಸ್ಥೆಗೆ ಭರಿಸುತ್ತದೆ. ಈ ಕಾರ್ಡ್‍ನ ನೆರವಿನಿಂದ ದೇಶದಲ್ಲಿ ಎಲ್ಲೇ ಇದ್ದರೂ ಉಚಿತವಾಗಿ ಚಿಕಿತ್ಸೆಯನ್ನು ಪಡೆಯಲು ಪೋರ್ಟಬಿಲಿಟಿ ಸೌಲಭ್ಯವಿದೆ. ತುರ್ತು ಸಂದರ್ಭದಲ್ಲಿ 171 ಚಿಕಿತ್ಸಾ ವಿಧಾನಗಳಿಗೆ ರೋಗಿಯು ನೇರವಾಗಿ ಸರ್ಕಾರಿ ಅಥವಾ ನೋಂದಾಯಿತ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯಬಹುದು. ರೆಫರಲ್ ಅವಶ್ಯಕತೆ ಇರುವುದಿಲ್ಲ. ಈ ಕಾರ್ಡ್‍ನ್ನು 14 ಸಂಖ್ಯೆಯ…

Read More

ಬೆಂಗಳೂರು : ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಬಿ.ನಾಗೇಂದ್ರ ಅವರನ್ನು ಜುಲೈ 18 ರವರೆಗೆ ಇಡಿ ಕಸ್ಟಡಿಗೆ ನೀಡಿ ಕೋರ್ಟ್‌ ಆದೇಶ ಹೊರಡಿಸಿದೆ. ಬೆಂಗಳೂರಿನ ಶಾಂತಿನಗರದ ಇಡಿ ಕಚೇರಿ ಬಳಿ ಮಾತನಾಡಿದ ಬಿ.ನಾಗೇಂದ್ರ, ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ನನ್ನ ಪಾತ್ರವಿಲ್ಲ. ಇಡಿ ಅಧಿಕಾರಿಗಳು ಯಾಕೆ ನನ್ನನ್ನು ಬಂಧಿಸಿದ್ದಾರೆ ಎಂದು ಗೊತ್ತಿಲ್ಲ ಎಂದು ಹೇಳಿದ್ದಾರೆ. ಬೆಂಗಳೂರಿನ ಸಂಪಿಗೆಹಳ್ಳಿಯಲ್ಲಿರುವ ನ್ಯಾಯಾಧೀಶರ ನಿವಾಸದಕ್ಕೆ ನಾಗೇಂದ್ರ ಅವರನ್ನು ಇಡಿ ಅಧಿಕಾರಿಗಳು ಕರೆತಂದಿದ್ದರು. ಈ ವೇಳೆ ವಿಚಾರಣೆ ನಡೆಸಿದ ನ್ಯಾಯಾಧೀಶ ಗಜಾನನ ಭಟ್‌, ನಾಗೇಂದ್ರ ಅವರನ್ನು ಜುಲೈ 18 ರ ವರೆಗೆ ಇಡಿ ಕಸ್ಟಡಿಗೆ ನೀಡಿ ಆದೇಶ ಹೊರಡಿಸಿದ್ದಾರೆ. ವಾಲ್ಮೀಕಿ ಅಭಿವೃದ್ಧಿ ನಿಗಮದ ಅವ್ಯವಹಾರ ಪ್ರಕರಣ ಸಂಬಂಧ ಇಡಿ ಅಧಿಕಾರಿಗಳು ಮಾಜಿ ಸಚಿವ ಬಿ.ನಾಗೇಂದ್ರ ಅವರ ನಿವಾಸ, ಆಪ್ತರ ಮನೆಗಳ ಮೇಲೆ ದಾಳಿ ನಡೆಸಿದ್ದಾರೆ. ನಾಗೇಂದ್ರ ಅವರ ಮನೆಯಲ್ಲಿ ಆಸ್ತಿ ಪತ್ರಗಳು ದೊರೆತಿದ್ದವು ಎನ್ನಲಾಗಿದೆ.…

Read More

ಚಾಮರಾಜನಗರ : ಸಿಎಂ ಸಿದ್ದರಾಮಯ್ಯ ಸ್ವೀಕರಿಸಿದ್ದ ಮನವಿ ಪತ್ರಗಳು ಕಸದ ರಾಶಿಯಲ್ಲಿ ಪತ್ತೆಯಾಗಿದ್ದು, ರೈತರು, ಸಾರ್ವಜನಿಕರಿಂದ ಭಾರೀ ಆಕ್ರೋಶಕ್ಕೆ ಕಾರಣವಾಗಿದೆ. ಹೌದು, ಕಳೆದ ಬುಧವಾರ ಸಿಎಂ ಸಿದ್ದರಾಮಯ್ಯ ಅವರು ಚಾಮರಾಜನಗರದಲ್ಲಿ ಕಾಂಗ್ರೆಸ್‌ ಕೃತಜ್ಞನತಾ ಸಮಾವೇಶದಲ್ಲಿ ಪಾಲ್ಗೊಂಡಿದ್ದ ಸಿಎಂ ಸಿದ್ದರಾಮಯ್ಯಗೆ ರೈತರು, ಆಕ್ಸಿಜನ್‌ ದುರಂತ ಸಂತ್ರಸ್ತರು ಸೇರಿದಂತೆ ಸಾರ್ವಜನಿಕರು ವಿವಿಧ ಬೇಡಿಕೆಗಳನ್ನು ಬಗೆಹರಿಸುವಂತೆ ಮನವಿ ಸಲ್ಲಿಸಿದ್ದರು. ಚಾಮರಾಜನಗರದ ಡಾ.ಬಿ.ಆರ್.‌ ಅಂಬೇಡ್ಕರ್‌ ಕ್ರೀಡಾಂಗಣದ ಕಸದ ರಾಶಿಯಲ್ಲಿ ರೈತರು, ಸಾರ್ವಜನಿಕರು ಸಲ್ಲಿಸಿದ್ದ ಮನವಿ ಪತ್ರಗಳು ಪತ್ತೆಯಾಗಿದ್ದು, ರೈತರು, ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಗಂಟಗಟ್ಟೆಲೇ ಕಾದು ಮನವಿ ಪತ್ರ ಸಲ್ಲಿಸಿದ್ರೆ ಇದೀಗ ಮನವಿ ಪತ್ರಗಳು ಕಸದ ರಾಶಿಯಲ್ಲಿ ಪತ್ತೆಯಾಗಿವೆ. ಕೂಡಲೇ ಸಿಎಂ ಸಿದ್ದರಾಮಯ್ಯ ಜನರ ಕ್ಷಮೆ ಕೋರಬೇಕು. ಇಲ್ಲದಿದ್ದರೆ ಸಿಎಂ ಜಿಲ್ಲೆಗೆ ಬಂದಾಗ ಕಪು ಬಾವುಟ ಪ್ರದರ್ಶಿಸುವುದಾಗಿ ರೈತರು ಎಚ್ಚರಿಕೆ ನೀಡಿದ್ದಾರೆ.

Read More

ನವದೆಹಲಿ: ಏಷ್ಯಾದ ಅತ್ಯಂತ ಶ್ರೀಮಂತ ವ್ಯಕ್ತಿ ಮುಖೇಶ್ ಅಂಬಾನಿ ಅವರ ಪುತ್ರ ಅನಂತ್ ಅಂಬಾನಿ ಮತ್ತು ಔಷಧೀಯ ಉದ್ಯಮಿ ವೀರೇನ್ ಮರ್ಚೆಂಟ್ ಅವರ ಪುತ್ರಿ ರಾಧಿಕಾ ಮರ್ಚೆಂಟ್ ಶುಕ್ರವಾರ ಅದ್ಧೂರಿ ಸಮಾರಂಭದಲ್ಲಿ ವಿವಾಹವಾದರು. ವಿವಾಹದ ಮೊದಲ ವಿಡಿಯೋ ಅನಾವರಣಗೊಂಡಿದೆ. ಮದುವೆಯಲ್ಲಿ ರಾಜಕಾರಣಿಗಳು, ಬಾಲಿವುಡ್‌ ಮತ್ತು ದಕ್ಷಿಣ ಭಾರತದ ಚಿತ್ರರಂಗದ ಸೆಲೆಬ್ರಿಟಿಗಳು, ಹಾಲಿವುಡ್ ಮತ್ತು ದೇಶದ ಬಹುತೇಕ ಎಲ್ಲಾ ಉನ್ನತ ಕ್ರಿಕೆಟಿಗರು ಭಾಗವಹಿಸಿದ್ದರು. ಅಮೆರಿಕದ ರಿಯಾಲಿಟಿ ಟಿವಿ ತಾರೆ ಕಿಮ್ ಕಾರ್ದಶಿಯಾನ್ ಮತ್ತು ಅವರ ಸಹೋದರಿ ಕ್ಲೋಯಿ ಕಾರ್ದಶಿಯಾನ್, ನೈಜೀರಿಯನ್ ರ್ಯಾಪರ್ ರೆಮಾ, ಯುಕೆ ಮಾಜಿ ಪ್ರಧಾನಿ ಟೋನಿ ಬ್ಲೇರ್, ಸೌದಿ ಅರಾಮ್ಕೋ ಸಿಇಒ ಅಮೀನ್ ನಾಸರ್, ಸ್ಯಾಮ್ಸಂಗ್ ಎಲೆಕ್ಟ್ರಾನಿಕ್ಸ್ ಅಧ್ಯಕ್ಷ ಜೇ ಲೀ ಮತ್ತು ಔಷಧೀಯ ಕಂಪನಿ ಜಿಎಸ್ಕೆ ಪಿಎಲ್ಸಿಯ ಸಿಇಒ ಎಮ್ಮಾ ವಾಲ್ಮ್ಸ್ಲೆ ಸಮಾರಂಭದಲ್ಲಿ ಉಪಸ್ಥಿತರಿದ್ದರು. ಅಮಿತಾಭ್ ಬಚ್ಚನ್, ಶಾರುಖ್ ಖಾನ್ ಮತ್ತು ಸಲ್ಮಾನ್ ಖಾನ್ ರಿಂದ ಹಿಡಿದು ಅಜಯ್ ದೇವಗನ್, ರಣಬೀರ್ ಕಪೂರ್, ಆಲಿಯಾ ಭಟ್, ಟೈಗರ್ ಶ್ರಾಫ್…

Read More

ಬೆಂಗಳೂರು : ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಬಿ.ನಾಗೇಂದ್ರ ಅವರನ್ನು ಇಡಿ ಅಧಿಕಾರಿಗಳು ವಶಕ್ಕೆ ಪಡೆದಿದ್ದು, ಇಂದು ನ್ಯಾಯಾಧೀಶರ ನಿವಾಸಕ್ಕೆ ಕರೆತಂದಿದ್ದಾರೆ. ಈ ವೇಳೆ ನ್ಯಾಯಾಧೀಶರು ಜುಲೈ 18 ರವರೆಗೆ ಇಡಿ ಕಸ್ಟಡಿಗೆ ನೀಡಿ ಆದೇಶ ಹೊರಡಿಸಿದ್ದಾರೆ. ಬೆಂಗಳೂರಿನ ಸಂಪಿಗೆಹಳ್ಳಿಯಲ್ಲಿರುವ ನ್ಯಾಯಾಧೀಶರ ನಿವಾಸದಕ್ಕೆ ನಾಗೇಂದ್ರ ಅವರನ್ನು ಇಡಿ ಅಧಿಕಾರಿಗಳು ಕರೆತಂದಿದ್ದರು. ಈ ವೇಳೆ ವಿಚಾರಣೆ ನಡೆಸಿದ ನ್ಯಾಯಾಧೀಶ ಗಜಾನನ ಭಟ್‌, ನಾಗೇಂದ್ರ ಅವರನ್ನು ಜುಲೈ 18 ರ ವರೆಗೆ ಇಡಿ ಕಸ್ಟಡಿಗೆ ನೀಡಿ ಆದೇಶ ಹೊರಡಿಸಿದ್ದಾರೆ. ವಾಲ್ಮೀಕಿ ಅಭಿವೃದ್ಧಿ ನಿಗಮದ ಅವ್ಯವಹಾರ ಪ್ರಕರಣ ಸಂಬಂಧ ಇಡಿ ಅಧಿಕಾರಿಗಳು ಮಾಜಿ ಸಚಿವ ಬಿ.ನಾಗೇಂದ್ರ ಅವರ ನಿವಾಸ, ಆಪ್ತರ ಮನೆಗಳ ಮೇಲೆ ದಾಳಿ ನಡೆಸಿದ್ದಾರೆ. ನಾಗೇಂದ್ರ ಅವರ ಮನೆಯಲ್ಲಿ ಆಸ್ತಿ ಪತ್ರಗಳು ದೊರೆತಿದ್ದವು ಎನ್ನಲಾಗಿದೆ. ವಾಲ್ಮೀಕಿ ನಿಗಮದ ಅಧಿಕಾರಿ ಚಂದ್ರಶೇಖರನ್ ಮೇ 26ರಂದು ಆತ್ಮಹತ್ಯೆ ಮಾಡಿಕೊಂಡಿದ್ದರು. ಆಮೇಲೆ ನಿಗಮದಲ್ಲಿ 187 ಕೋಟಿ ಹಗರಣ ಆಗಿರೋದು ಬಯಲಾದ…

Read More