Author: kannadanewsnow57

ಬೆಂಗಳೂರು : ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಬಿ.ನಾಗೇಂದ್ರ ಅವರನ್ನು ಇಡಿ ಅಧಿಕಾರಿಗಳು ವಶಕ್ಕೆ ಪಡೆದಿದ್ದು, ಇಂದು ನ್ಯಾಯಾಧೀಶರ ನಿವಾಸಕ್ಕೆ ಕರೆತಂದಿದ್ದಾರೆ. ಈ ವೇಳೆ ನ್ಯಾಯಾಧೀಶರು ಜುಲೈ 18 ರವರೆಗೆ ಇಡಿ ಕಸ್ಟಡಿಗೆ ನೀಡಿ ಆದೇಶ ಹೊರಡಿಸಿದ್ದಾರೆ. ಬೆಂಗಳೂರಿನ ಸಂಪಿಗೆಹಳ್ಳಿಯಲ್ಲಿರುವ ನ್ಯಾಯಾಧೀಶರ ನಿವಾಸದಕ್ಕೆ ನಾಗೇಂದ್ರ ಅವರನ್ನು ಇಡಿ ಅಧಿಕಾರಿಗಳು ಕರೆತಂದಿದ್ದರು. ಈ ವೇಳೆ ವಿಚಾರಣೆ ನಡೆಸಿದ ನ್ಯಾಯಾಧೀಶ ಗಜಾನನ ಭಟ್‌, ನಾಗೇಂದ್ರ ಅವರನ್ನು ಜುಲೈ 18 ರ ವರೆಗೆ ಇಡಿ ಕಸ್ಟಡಿಗೆ ನೀಡಿ ಆದೇಶ ಹೊರಡಿಸಿದ್ದಾರೆ. ವಾಲ್ಮೀಕಿ ಅಭಿವೃದ್ಧಿ ನಿಗಮದ ಅವ್ಯವಹಾರ ಪ್ರಕರಣ ಸಂಬಂಧ ಇಡಿ ಅಧಿಕಾರಿಗಳು ಮಾಜಿ ಸಚಿವ ಬಿ.ನಾಗೇಂದ್ರ ಅವರ ನಿವಾಸ, ಆಪ್ತರ ಮನೆಗಳ ಮೇಲೆ ದಾಳಿ ನಡೆಸಿದ್ದಾರೆ. ನಾಗೇಂದ್ರ ಅವರ ಮನೆಯಲ್ಲಿ ಆಸ್ತಿ ಪತ್ರಗಳು ದೊರೆತಿದ್ದವು ಎನ್ನಲಾಗಿದೆ. ವಾಲ್ಮೀಕಿ ನಿಗಮದ ಅಧಿಕಾರಿ ಚಂದ್ರಶೇಖರನ್ ಮೇ 26ರಂದು ಆತ್ಮಹತ್ಯೆ ಮಾಡಿಕೊಂಡಿದ್ದರು. ಆಮೇಲೆ ನಿಗಮದಲ್ಲಿ 187 ಕೋಟಿ ಹಗರಣ ಆಗಿರೋದು ಬಯಲಾದ…

Read More

ಬೆಂಗಳೂರು : ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತ್ತೊಂದು ಬರ್ಬರ ಹತ್ಯೆಯಾಗಿದ್ದು, ಕಾರು ಅಪಘಾತ ಮಾಡಿ ಮಾರಕಾಸ್ತ್ರದಿಂದ ಯುವಕನನ್ನು ಕೊಲೆ ಮಾಡಿರುವ ಘಟನೆ ನಡೆದಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಗಂಗಾಪುರ ಬಳಿ ಯುವಕನ ಕಾರು ಅಪಘಾತ ಮಾಡಿ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಲೆ ಮಾಡಿರುವ ಘಟನೆ ನಡೆದಿದೆ. ಕೋಲಾರದಿಂದ ಹೊಸಕೋಟೆ ಕಡೆಗೆ ಕಾರಿನಲ್ಲಿ ಬರುತ್ತಿದ್ದ ಕೋಲಾರ ಮೂಲದ ಭಾರ್ಗವ್‌ (೨೪) ಎಂಬಾತನನ್ನು ದುಷ್ಕರ್ಮಿಗಳು ಕೊಲೆ ಮಾಡಿದ್ದಾರೆ. ಕಾರಿನಲ್ಲಿ ಬರುತ್ತಿದ್ದ ಭಾರ್ಗವ್‌ ನನ್ನು ಚೇಸ್‌ ಮಾಡಿ ಬ್ರೇಕ್‌ ಹಾಕಿ ಭಾರ್ಗವ್‌ ಕಾರು ಡಿಕ್ಕಿಯಾಗುವಂತೆ ಮಾಡಿದ ಆರೋಪಿಗಳು ಇದೇ ನೆಪವೊಡ್ಡಿ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದಾರೆ. ಕೊಲೆ ಮಾಡಿ ಆರೋಪಿಗಳು ಎಸ್ಕೇಪ್‌ ಆಗಿದ್ದು, ನಂದಗುಡಿ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Read More

ಅಬುಜಾ: ಉತ್ತರ-ಮಧ್ಯ ನೈಜೀರಿಯಾದಲ್ಲಿ ಘೋರ ದುರಂತ ಸಂಭವಿಸಿದೆ. ಇಲ್ಲಿ ಎರಡು ಅಂತಸ್ತಿನ ಶಾಲೆ ಕುಸಿದಿದೆ. ತರಗತಿಗಳು ನಡೆಯುತ್ತಿದ್ದಾಗ ಈ ಘಟನೆ ನಡೆದಿದೆ. ಅಪಘಾತದಲ್ಲಿ ಕನಿಷ್ಠ 22 ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ ಮತ್ತು 100 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅವಶೇಷಗಳ ಅಡಿಯಲ್ಲಿ ಸಿಲುಕಿದ್ದಾರೆ ಎಂದು ಶಂಕಿಸಲಾಗಿದೆ. ಅವಶೇಷಗಳಲ್ಲಿ ಸಿಲುಕಿರುವ ವಿದ್ಯಾರ್ಥಿಗಳಿಗಾಗಿ ಶೋಧ ನಡೆಯುತ್ತಿದೆ. ಪರಿಹಾರ ಮತ್ತು ರಕ್ಷಣಾ ತಂಡಗಳನ್ನು ಸ್ಥಳದಲ್ಲಿ ನಿಯೋಜಿಸಲಾಗಿದೆ. ತರಗತಿ ವೇಳೆ ಕುಸಿದ ಕಟ್ಟಡ ವಾಸ್ತವವಾಗಿ, ಪ್ರಸ್ಥಭೂಮಿ ರಾಜ್ಯದ ಬುಸಾ ಬುಜಿ ಸಮುದಾಯದ ಸೇಂಟ್ಸ್ ಅಕಾಡೆಮಿ ಕಾಲೇಜಿಗೆ ವಿದ್ಯಾರ್ಥಿಗಳು ಅಧ್ಯಯನಕ್ಕಾಗಿ ಬಂದರು. ತರಗತಿಗಳು ಪ್ರಾರಂಭವಾದ ಸ್ವಲ್ಪ ಸಮಯದ ನಂತರ ಶಾಲಾ ಕಟ್ಟಡ ಕುಸಿದಿದೆ. ಅಪಘಾತದಲ್ಲಿ ಗಾಯಗೊಂಡವರಲ್ಲಿ ಹೆಚ್ಚಿನವರು 15 ವರ್ಷ ಅಥವಾ ಅದಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳು ಎಂದು ಹೇಳಲಾಗಿದೆ. ಒಟ್ಟು 154 ವಿದ್ಯಾರ್ಥಿಗಳು ಸಿಕ್ಕಿಬಿದ್ದಿದ್ದು, ಅವರಲ್ಲಿ 132 ಮಂದಿಯನ್ನು ರಕ್ಷಿಸಲಾಗಿದೆ ಎಂದು ಪೊಲೀಸ್ ವಕ್ತಾರ ಆಲ್ಫ್ರೆಡ್ ಅಲಾಬೊ ತಿಳಿಸಿದ್ದಾರೆ. ವಿದ್ಯಾರ್ಥಿಗಳು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅಪಘಾತದಲ್ಲಿ 22 ವಿದ್ಯಾರ್ಥಿಗಳು…

Read More

ಬೆಂಗಳೂರು : ರಾಜ್ಯದ ಶಾಲೆಗಳಲ್ಲಿ ಎಲ್‌ ಕೆಜಿ, ಯುಕೆಜಿ ಮತ್ತು 1 ನೇ ತರಗತಿಗೆ ಮಕ್ಕಳ ಪ್ರವೇಶಕ್ಕೆ ಎದುರಾಗುತ್ತಿದ್ದ ಗರಿಷ್ಠ ವಯೋಮಿತಿ ಗೊಂದಲಗಳಿಗೆ ಶಿಕ್ಷಣ ಇಲಾಖೆ ವಯೋಮಿತಿ ನಿಗದಿಪಡಿಸಿದ್ದು, ಇನ್ಮುಂದೆ 8 ವರ್ಷ ಮೀರಿದರೆ 1 ನೇ ತರಗತಿಗೆ ಪ್ರವೇಶ ನಿರ್ಬಂಧಿಸಿದ್ದು, ವಯಸ್ಸಿಗೆ ಅನುಗುಣವಾಗಿ ಬೇರೆ ತರಗತಿಗೆ ಪ್ರವೇಶ ನೀಡಲು ನಿರ್ಧರಿಸಿದೆ. ಶಾಲಾ ವಿದ್ಯಾರ್ಥಿಗಳ ಪ್ರವೇಶ ವಯೋಮಿತಿ ಗೊಂದಲಕ್ಕೆ ಶಿಕ್ಷಣ ಇಲಾಖೆ ತೆರೆ ಎಳೆದಿದ್ದು, ಈ ಶೈಕ್ಷಣಿಕ ವರ್ಷ ಈಗಾಗಲೇ ಮುಕ್ತಾಯವಾಗಿದ್ದರೂ 2023-24 ರಿಂದ 2025-26ನೇ ವರ್ಷದವರೆಗೆ ಕನಿಷ್ಠ ಮತ್ತು ಗರಿಷ್ಠ ವಯೋಮಿತಿ ನಿಗದಿ ಮಾಡಿ ಗೊಂದಲಕ್ಕೆ ತೆರೆ ಎಳೆದಿದೆ. ಸರ್ಕಾರದ ಆದೇಶದಲ್ಲಿ ಶಿಕ್ಷಣ ಹಕ್ಕು ಕಾಯ್ದೆ-2009 ಮತ್ತು ಕಡ್ಡಾಯ ಶಿಕ್ಷಣ ನಿಯಮಗಳು 2012ರಂತೆ ಶೈಕ್ಷಣಿಕ ವರ್ಷದ ಜೂನ್ ಒಂದನೇ ತಾರೀಖಿಗೆ ಕಡ್ಡಾಯವಾಗಿ 06 ವರ್ಷಗಳು ಪೂರ್ಣಗೊಂಡಿರುವ ಮಗುವನ್ನು ಒಂದನೇ ತರಗತಿಗೆ ದಾಖಲಿಸಲು ವಯೋಮಿತಿಯನ್ನು ನಿಗಧಿಪಡಿಸಲಾಗಿರುತ್ತದೆ. ಮೇಲೆ ಓದಲಾದ ಕ್ರಮಾಂಕ (2)ರಲ್ಲಿ ಸರ್ಕಾರದ ಆದೇಶ ಸಂಖ್ಯೆ:ಇಪಿ 260 ಪಿಜಿಸಿ 2021, ದಿನಾಂಕ:26.07.2022ರ…

Read More

ನವದೆಹಲಿ : ಆದಾಯ ತೆರಿಗೆ ರಿಟರ್ನ್ಸ್ ಸಲ್ಲಿಸಲು ಕೊನೆಯ ದಿನಾಂಕ ಜುಲೈ 31, 2024. ಕೊನೆಯ ಕ್ಷಣದ ವಿಳಂಬ ಅಥವಾ ಹೆಚ್ಚಿನ ದಂಡವನ್ನು ತಪ್ಪಿಸಲು ತೆರಿಗೆದಾರರು ಎಲ್ಲಾ ಅಗತ್ಯ ಮಾಹಿತಿ ಮತ್ತು ದಾಖಲೆಗಳನ್ನು ತಮ್ಮೊಂದಿಗೆ ಹೊಂದಿರಬೇಕು. ತೆರಿಗೆ ನಿಯಮಗಳನ್ನು ಅನುಸರಿಸಲು ಮತ್ತು ಅನಗತ್ಯ ದಂಡಗಳನ್ನು ತಪ್ಪಿಸಲು ಐಟಿಆರ್ ಅನ್ನು ಸರಿಯಾಗಿ ಸಲ್ಲಿಸುವುದು ಮುಖ್ಯ. ಈ ನಿರ್ಧಾರವನ್ನು ತೆಗೆದುಕೊಳ್ಳಲು, ನೀವು ನಿಮ್ಮ ಐಟಿಆರ್ ಅನ್ನು ಸಮಯಕ್ಕೆ ಸರಿಯಾಗಿ ಸಲ್ಲಿಸಬೇಕು ಮತ್ತು ಯಾವುದೇ ತೊಂದರೆಯಿಲ್ಲದೆ, ಈ 9 ವಿಷಯಗಳನ್ನು ನೆನಪಿನಲ್ಲಿಡಿ. 1. ಅಗತ್ಯವಿರುವ ಎಲ್ಲಾ ದಾಖಲೆಗಳನ್ನು ಸಂಗ್ರಹಿಸಿ. ಫಾರ್ಮ್ 16, ಫಾರ್ಮ್ 26 ಎಎಸ್, ಬ್ಯಾಂಕ್ ಸ್ಟೇಟ್ಮೆಂಟ್ಗಳು, ಹೂಡಿಕೆ ಮೂಲಗಳು ಮುಂತಾದ ಎಲ್ಲಾ ದಾಖಲೆಗಳನ್ನು ನೀವು ಹೊಂದಿದ್ದೀರಿ ಎಂದು ಖಚಿತಪಡಿಸಿಕೊಳ್ಳಿ. ಹಂತ 2: ಸರಿಯಾದ ಐಟಿಆರ್ ಫಾರ್ಮ್ ಅನ್ನು ಆಯ್ಕೆ ಮಾಡಿ. ನಿಮ್ಮ ಆದಾಯದ ಮೂಲ ಮತ್ತು ವರ್ಗದ ಆಧಾರದ ಮೇಲೆ ಐಟಿಆರ್ ಫಾರ್ಮ್ ಅನ್ನು ಆರಿಸಿ. 3. ಆದಾಯದ ಎಲ್ಲಾ ಮೂಲಗಳನ್ನು ತಿಳಿದುಕೊಳ್ಳಿ.…

Read More

ಬೆಂಗಳೂರು : ರಾಜ್ಯದಲ್ಲಿ ಇಂದಿನಿಂದ ಮೂರು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಹವಾಮಾನ ಇಲಾಖೆಯು ಹಲವು ಜಿಲ್ಲೆಗಳಿಗೆ ರೆಡ್‌, ಯೆಲ್ಲೋ, ಆರೆಂಜ್‌ ಘೋಷಿಸಲಾಗಿದೆ. ಹವಾಮಾನ ಇಲಾಖೆಯ ಮಾಹಿತಿ ಪ್ರಕಾರ, ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಇಂದು, ನಾಳೆ ರೆಡ್ ಅಲರ್ಟ್ ನೀಡಲಾಗಿದೆ. ಸಮುದ್ರದಲ್ಲಿ ಎತ್ತರದ ಅಲೆಗಳು ಏಳಲಿವೆ. ಈ ಹಿನ್ನೆಲೆಯಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಹಾಗೂ ಸಮುದ್ರ ದಡದ ಬಳಿ ಪ್ರವಾಸಿಗರು ತೆರಳದಂತೆ ಇಲಾಖೆ ಎಚ್ಚರಿಕೆ ಕೊಟ್ಟಿದೆ. ಇನ್ನು ಚಿಕ್ಕಮಗಳೂರು, ಕೊಡಗು, ಶಿವಮೊಗ್ಗದಲ್ಲಿಯೂ ಭಾರೀ ಮಳೆಯಾಗುವ ಹಿನ್ನೆಲೆಯಲ್ಲಿ ಆರೇಂಜ್ ಅಲರ್ಟ್ ನೀಡಲಾಗಿದೆ. ಬೆಳಗಾವಿ, ಕಲಬುರಗಿ, ಯಾದಗಿರಿ, ರಾಯಚೂರು, ವಿಜಯಪುರ, ಕೊಪ್ಪಳ, ದಾವಣಗೆರೆ, ಹಾಸನ, ಮೈಸೂರು ಜಿಲ್ಲೆಗಳಲ್ಲಿ ಇಂದು, ನಾಳೆ ಯೆಲ್ಲೋ ಆಲರ್ಟ್ ಘೋಷಿಸಲಾಗಿದೆ.

Read More

ಬೆಂಗಳೂರು : ರಾಜ್ಯ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ವತಿಯಿಂದ ಜುಲೈ, 13 ರಂದು ರಾಜ್ಯದ ಜಿಲ್ಲೆಯ ವಿವಿಧ ಹಂತದ ಎಲ್ಲಾ ನ್ಯಾಯಾಲಯಗಳಲ್ಲಿ ‘ರಾಷ್ಟ್ರೀಯ ಲೋಕ್ ಅದಾಲತ್’ ನಡೆಯಲಿದೆ. ಸಾರ್ವಜನಿಕರು ತಮ್ಮ ವ್ಯಾಜ್ಯ ಪೂರ್ವ ಮತ್ತು ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳಿಗೆ ತಕ್ಷಣ ಪರಿಹಾರ ಪಡೆದುಕೊಳ್ಳಲು ರಾಷ್ಟ್ರೀಯ ಲೋಕ ಅದಾಲತ್ ಸುವರ್ಣ ಅವಕಾಶವಾಗಿದೆ. ವ್ಯಾಜ್ಯ ಪೂರ್ವ ಪ್ರಕರಣಗಳು ಚೆಕ್ ಅಮಾನ್ಯದ ಪ್ರಕರಣಗಳು, ಬ್ಯಾಂಕ್ ವಸೂಲಾತಿ ಪ್ರಕರಣಗಳು, ಉದ್ಯೋಗದಲ್ಲಿ ಪುನರ್ ಸ್ಥಾಪಿಸಲ್ಪಡುವ ಪ್ರಕರಣಗಳು, ವಿದ್ಯುತ್ ಹಾಗೂ ನೀರಿನ ಶುಲ್ಕಗಳು, ಇತರೆ ಪ್ರಕರಣಗಳು (ರಾಜೀಯಾಗಬಲ್ಲ ಅಪರಾಧಿಕ ಪ್ರಕರಣಗಳು, ವೈವಾಹಿಕ ಪ್ರಕರಣಗಳು ಮತ್ತು ಇತರೆ ಸಿವಿಲ್ ಪ್ರಕರಣಗಳು ಮತ್ತಿತರ), ಕರ್ನಾಟಕ ರಿಯಲ್ ಎಸ್ಟೇಟ್ ಪ್ರಾಧಿಕಾರಕ್ಕೆ ಸಂಬಂಧಪಟ್ಟ ಪ್ರಕರಣಗಳು, ಜಿಲ್ಲಾ ಗ್ರಾಹಕರ ವೇದಿಕೆಯಲ್ಲಿನ ಪ್ರಕರಣಗಳು, ಸಾಲ ವಸೂಲಾತಿ ನ್ಯಾಯಾಧೀಕರಣದ ಪ್ರಕರಣಗಳು, ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗ, ಖಾಯಂ ಜನತಾ ನ್ಯಾಯಾಲಯದಲ್ಲಿನ ಪ್ರಕರಣಗಳು. ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳು ರಾಜಿಯಾಗಬಲ್ಲ ಅಪರಾಧಿಕ ಪ್ರಕರಣಗಳು, ಚೆಕ್ ಅಮಾನ್ಯದ ಪ್ರಕರಣಗಳು,…

Read More

ನವದೆಹಲಿ : ಹೊಸ ಪ್ರಯಾಣಿಕರ ಅನುಕೂಲಕ್ಕಾಗಿ ಭಾರತೀಯ ರೈಲ್ವೆ ನಿಯಮಗಳನ್ನು ಬಿಗಿಗೊಳಿಸಿದ್ದು, ಇದು ಲಕ್ಷಾಂತರ ರೈಲು ಪ್ರಯಾಣಿಕರ ಮೇಲೆ ಪರಿಣಾಮ ಬೀರುತ್ತದೆ. ಜುಲೈ 1 ರಿಂದ ವೇಟಿಂಗ್ ಟಿಕೆಟ್ಗಳಲ್ಲಿ ಪ್ರಯಾಣಿಸಲು ರೈಲ್ವೆ ಕಠಿಣ ನಿರ್ಧಾರ ತೆಗೆದುಕೊಂಡಿದೆ. ಪ್ರಯಾಣಿಕರು ಈಗ ನಿಯಮವನ್ನು ಉಲ್ಲಂಘಿಸಿದರೆ, ಅವರಿಗೆ ದಂಡ ವಿಧಿಸಲಾಗುತ್ತದೆ ರೈಲ್ವೆ ಹೇಳಿದೆ. ಇದಕ್ಕಾಗಿ, ರೈಲಿನಲ್ಲಿ ಟಿಕೆಟ್ ಪರಿಶೀಲಿಸುವ ರೈಲ್ವೆ ಉದ್ಯೋಗಿಗಳಿಗೆ ಕಠಿಣ ಆದೇಶಗಳನ್ನು ನೀಡಲಾಗುವುದು. ವೇಟಿಂಗ್ ಟಿಕೆಟ್ಗಳಲ್ಲಿ ಕಾಯ್ದಿರಿಸಿದ ಬೋಗಿಗಳಲ್ಲಿ ಪ್ರಯಾಣಿಸುವುದನ್ನು ರೈಲ್ವೆ ಈಗ ಸಂಪೂರ್ಣವಾಗಿ ನಿಷೇಧಿಸಿದೆ ಎಂದು ಹೇಳಲಾಗುತ್ತಿದೆ. ಇದರರ್ಥ ನಿಮ್ಮ ಟಿಕೆಟ್ ಕಾಯುತ್ತಿದ್ದರೆ ನೀವು ಎಸಿ ಅಥವಾ ಸ್ಲೀಪರ್ ಬೋಗಿಗಳಲ್ಲಿ ಪ್ರಯಾಣಿಸಲು ಸಾಧ್ಯವಿಲ್ಲ. ನೀವು ನಿಲ್ದಾಣದಿಂದ ಆಫ್ ಲೈನ್ ನಲ್ಲಿ ಟಿಕೆಟ್ ಖರೀದಿಸದಿದ್ದರೂ ಸಹ. ಕಾಯ್ದಿರಿಸಿದ ಬೋಗಿಗಳಲ್ಲಿ ಅಂತಹ ಟಿಕೆಟ್ ಗಳನ್ನು ಪ್ರಯಾಣಿಸುವುದನ್ನು ರೈಲ್ವೆ ನಿಷೇಧಿಸಿದೆ. ಕಾಯ್ದಿರಿಸಿದ ಬೋಗಿಗಳಲ್ಲಿ ದೃಢಪಡಿಸಿದ ಟಿಕೆಟ್ಗಳೊಂದಿಗೆ ಪ್ರಯಾಣಿಸುವವರ ಅನುಕೂಲಕ್ಕಾಗಿ ಈ ನಿರ್ಧಾರವನ್ನು ಜಾರಿಗೆ ತರಲಾಗಿದ್ದರೂ, ಕಾಯುವ ಟಿಕೆಟ್ಗಳಲ್ಲಿ ಪ್ರಯಾಣಿಸುವ ಲಕ್ಷಾಂತರ ಪ್ರಯಾಣಿಕರ ಮೇಲೆ ಇದು ದೊಡ್ಡ…

Read More

ನವದೆಹಲಿ: ಏಷ್ಯಾದ ಅತ್ಯಂತ ಶ್ರೀಮಂತ ವ್ಯಕ್ತಿ ಮುಖೇಶ್ ಅಂಬಾನಿ ಅವರ ಪುತ್ರ ಅನಂತ್ ಅಂಬಾನಿ ಮತ್ತು ಔಷಧೀಯ ಉದ್ಯಮಿ ವೀರೇನ್ ಮರ್ಚೆಂಟ್ ಅವರ ಪುತ್ರಿ ರಾಧಿಕಾ ಮರ್ಚೆಂಟ್ ಶುಕ್ರವಾರ ಅದ್ಧೂರಿ ಸಮಾರಂಭದಲ್ಲಿ ವಿವಾಹವಾದರು. ಮದುವೆಯಲ್ಲಿ ರಾಜಕಾರಣಿಗಳು, ಬಾಲಿವುಡ್‌ ಮತ್ತು ದಕ್ಷಿಣ ಭಾರತದ ಚಿತ್ರರಂಗದ ಸೆಲೆಬ್ರಿಟಿಗಳು, ಹಾಲಿವುಡ್ ಮತ್ತು ದೇಶದ ಬಹುತೇಕ ಎಲ್ಲಾ ಉನ್ನತ ಕ್ರಿಕೆಟಿಗರು ಭಾಗವಹಿಸಿದ್ದರು. ಅಮೆರಿಕದ ರಿಯಾಲಿಟಿ ಟಿವಿ ತಾರೆ ಕಿಮ್ ಕಾರ್ದಶಿಯಾನ್ ಮತ್ತು ಅವರ ಸಹೋದರಿ ಕ್ಲೋಯಿ ಕಾರ್ದಶಿಯಾನ್, ನೈಜೀರಿಯನ್ ರ್ಯಾಪರ್ ರೆಮಾ, ಯುಕೆ ಮಾಜಿ ಪ್ರಧಾನಿ ಟೋನಿ ಬ್ಲೇರ್, ಸೌದಿ ಅರಾಮ್ಕೋ ಸಿಇಒ ಅಮೀನ್ ನಾಸರ್, ಸ್ಯಾಮ್ಸಂಗ್ ಎಲೆಕ್ಟ್ರಾನಿಕ್ಸ್ ಅಧ್ಯಕ್ಷ ಜೇ ಲೀ ಮತ್ತು ಔಷಧೀಯ ಕಂಪನಿ ಜಿಎಸ್ಕೆ ಪಿಎಲ್ಸಿಯ ಸಿಇಒ ಎಮ್ಮಾ ವಾಲ್ಮ್ಸ್ಲೆ ಸಮಾರಂಭದಲ್ಲಿ ಉಪಸ್ಥಿತರಿದ್ದರು. ಅಮಿತಾಭ್ ಬಚ್ಚನ್, ಶಾರುಖ್ ಖಾನ್ ಮತ್ತು ಸಲ್ಮಾನ್ ಖಾನ್ ರಿಂದ ಹಿಡಿದು ಅಜಯ್ ದೇವಗನ್, ರಣಬೀರ್ ಕಪೂರ್, ಆಲಿಯಾ ಭಟ್, ಟೈಗರ್ ಶ್ರಾಫ್ ಮತ್ತು ವರುಣ್ ಧವನ್ ಸೇರಿದಂತೆ…

Read More

ಬೆಂಗಳೂರು: ರಾಜ್ಯಾಧ್ಯಂತ  ಡೆಂಗ್ಯೂ ಆರ್ಭಟಿಸಿದೆ. ನಿನ್ನೆ ಒಂದೇ ದಿನ 437 ಜನರಿಗೆ ಡೆಂಗ್ಯೂ ಪಾಸಿಟಿವ್ ಅಂತ ಪರೀಕ್ಷೆಯಲ್ಲಿ ದೃಢಪಟ್ಟಿದೆ. ಈ ಕುರಿತಂತೆ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಮಾಹಿತಿ ನೀಡಿದ್ದು, ನಿನ್ನೆ ಒಂದೇ ದಿನ 2704 ಜನರನ್ನು ಡೆಂಗ್ಯೂ ಪತ್ತೆ ಪರೀಕ್ಷೆಗೆ ಒಳಪಡಿಸಲಾಗಿದೆ. ಇವರಲ್ಲಿ 437 ಮಂದಿಗೆ ಡೆಂಗ್ಯೂ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ. ಹೀಗಾಗಿ ಸೋಂಕಿತರ ಸಂಖ್ಯೆ 8,658ಕ್ಕೆ ಏರಿಕೆಯಾಗಿದೆ ಅಂತ ತಿಳಿಸಿದೆ. ಇಂದು 1 ವರ್ಷದೊಳಗಿನ 7 ಮಕ್ಕಳಿಗೆ, 18 ವರ್ಷದೊಳಗಿನ 154 ಮಕ್ಕಳಿಗೆ, 18 ವರ್ಷ ಮೇಲ್ಪಟ್ಟ 276 ಸೇರಿದಂತೆ 437 ಜನರಿಗೆ ಡೆಂಗ್ಯೂ ಪತ್ತೆಯಾಗಿದೆ ಎಂದು ಮಾಹಿತಿ ನೀಡಿದೆ. ಬಿಬಿಎಂಪಿ ವ್ಯಾಪ್ತಿಯಲ್ಲಿ 165, ಬೆಂಗಳೂರು ನಗರದಲ್ಲಿ 10, ಬೆಂಗಳೂರು ಗ್ರಾಮಾಂತರ 5, ರಾಮನಗರ 14, ಕೋಲಾರ 19, ಚಿಕ್ಕಬಳ್ಳಾಪುರ 7, ತಮಕೂರು 5, ಚಿತ್ರದುರ್ಗ 3, ದಾವಣಗೆರೆ 24, ಬೆಳಗಾವಿ 32, ಗದಗ 15, ಉತ್ತರ ಕನ್ನಡ 01, ಕಲಬುರ್ಗಿ 20 ಜನರಿಗೆ ಡೆಂಗ್ಯೂ…

Read More