Author: kannadanewsnow57

ಶಿವಮೊಗ್ಗ : ಸರ್ಕಾರಿ ಶಾಲೆಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, ಸರ್ಕಾರಿ ಶಾಲೆಯಲ್ಲಿ ಓದಿದ 20 ಸಾವಿರ ವಿದ್ಯಾರ್ಥಿಗಳಿಗೆ ಉಚಿತ ನೀಟ್ ತರಬೇತಿ ನೀಡಲಾಗುವುದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ಈ ಕುರಿತು ಮಾಹಿತಿ ನೀಡಿರುವ ಸಚಿವರು, ಪ್ರಸ್ತುತ ಎಲ್ಲ ಪೋಷಕರಿಗೆ ತಮ್ಮ ಮಕ್ಕಳಿಗೆ ನೀಟ್ ತರಬೇತಿ ಕೊಡಿಸುವುದು ಸಾಧ್ಯವಿಲ್ಲ. ಅತಿ ದುಬಾರಿ, ಆದ್ದರಿಂದ ರಾಜ್ಯ ಸರ್ಕಾರ ಹೊಸ ಯೋಜನೆ ಜಾರಿಗೆ ತಂದು ಮೊದಲ ಹಂತದಲ್ಲಿ ಸರ್ಕಾರಿ ಶಾಲೆಯಲ್ಲಿ ಓದಿದ 20 ಸಾವಿರ ವಿದ್ಯಾರ್ಥಿಗಳಿಗೆ ಉಚಿತ ನೀಟ್ ತರಬೇತಿ ನೀಡಲಿದೆ. ಈ ಯೋಜನೆ ಮುಂದಿನ ವರ್ಷದಿಂದ ಜಾರಿಗೆ ಬರಲಿದೆ. ರಾಜ್ಯದಲ್ಲಿ 50 ಸಾವಿರ ಶಿಕ್ಷಕರ ಕೊರತೆ ಇತ್ತು. ಕಡಿಮೆ ಕಾಲಮಿತಿಯಲ್ಲಿ 45 ಸಾವಿರ ಅತಿಥಿ ಶಿಕ್ಷಕರನ್ನು ನೇಮಿಸಿ ಶಿಕ್ಷಣ ನೀಡಲಾಗುತ್ತಿದೆ. ಮಕ್ಕಳ ಪೌಷ್ಟಿಕಾಂಶಕ್ಕೆ ಹೆಚ್ಚಿನ ಒತ್ತು ನೀಡಲಾಗಿದ್ದು 8ನೇ ತರಗತಿವರೆಗೆ ಮಾತ್ರ ನೀಡಲಾಗುತ್ತಿದ್ದ ಮೊಟ್ಟೆಯನ್ನು 10 ನೇ ತರಗತಿವರೆಗೆ ವಿಸ್ತರಿಸಲಾಗಿದೆ. ರಾಗಿ ಮಾಲ್ಟ್ ನೀಡಲಾಗುತ್ತಿದೆ. ಹಾಗೂ…

Read More

ಬೆಂಗಳೂರು : ಡೆಂಗ್ಯೂ ಮುಂತಾದ ರೋಗಗಳ ಕುರಿತು ರಾಜ್ಯದ ಶಾಲೆಗಳಲ್ಲಿ ಕೈಗೊಳ್ಳಬೇಕಾದ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳ ಕುರಿತು ಶಿಕ್ಷಣ ಇಲಾಖೆ ಮಹತ್ವದ ಆದೇಶ ಹೊರಡಿಸಿದೆ. ವಿಷಯಕ್ಕೆ ಸಂಬಂಧಿಸಿದಂತೆ, ರಾಜ್ಯದಲ್ಲಿ ಪ್ರಸ್ತುತ ಡೆಂಗ್ಯೂ, ಚಿಕೂನ್‌ಗುನ್ಯ ಹಾಗೂ ಜಿಕಾ ಮುಂತಾದ ರೋಗಗಳು ವ್ಯಾಪಕವಾಗಿ ಹರಡುತ್ತಿದ್ದು, ಸಾರ್ವಜನಿಕ ಆರೋಗ್ಯದ ಹಿತದೃಷ್ಟಿಯಿಂದ ಈ ರೋಗಗಳು ಹರಡದಂತೆ ನಿಯಂತ್ರಿಸಲು ಸಂಬಂಧಿಸಿದ ಇಲಾಖೆಗಳು ಮತ್ತು ಶಾಲೆಗಳು ಸೇರಿದಂತೆ ಸಮುದಾಯದ ಸಹಭಾಗಿತ್ವದಲ್ಲಿ ವಹಿಸಬೇಕಾದ ಮುಂಜಾಗ್ರತಾ ಕ್ರಮಗಳು ಹಾಗೂ ಈ ರೋಗಗಳ ಲಕ್ಷಣಗಳು ಕಂಡು ಬಂದಲ್ಲಿ ವಹಿಸಬೇಕಾದ ಅಗತ್ಯ ಕ್ರಮಗಳ ಕುರಿತು ವಿಸ್ತ್ರತವಾದ ಮಾರ್ಗಸೂಚಿಗಳನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಇಲಾಖೆಯ ವತಿಯಿಂದ ಉಲ್ಲೇಖ (1) & (2) ರಂತೆ ಈಗಾಗಲೇ ಹೊರಡಿಸಲಾಗಿದೆ. ಈ ಕುರಿತು ಶಾಲಾ ವಿದ್ಯಾರ್ಥಿಗಳ, ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳ ಆರೋಗ್ಯ ಮತ್ತು ಸುರಕ್ಷತೆಯ ಹಿತದೃಷ್ಟಿಯಿಂದ ಈ ಕೆಳಕಂಡ ಅಗತ್ಯ ಕ್ರಮಗಳನ್ನು ಸಕಾಲದಲ್ಲಿ ತೆಗೆದುಕೊಳ್ಳಲು ಆಯಾ ಶಾಲೆಯ ಮುಖ್ಯೋಪಾಧ್ಯಾಯರು ಹಾಗೂ ಶೈಕ್ಷಣಿಕ ಉಸ್ತುವಾರಿ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ…

Read More

ಬೆಂಗಳೂರು : ಕುರಿ ಕಳ್ಳತನ ತಡೆಯಲು ಕುರುಬರಿಗೆ ಬಂದೂಕು ನೀಡಲು ಸಿಎಂ ಸಿದ್ದರಾಮಯ್ಯ ಮುಂದಾಗಿದ್ದು, ಇದು ಅಸಂಬದ್ಧ, ದೋಷಪೂರಿತ ಮತ್ತು ಕುರುಬ ಜಾತಿ ರಾಜಕಾರಣ ಎಂದು ನಟ ಚೇತನ್‌ ಸಿಎಂ ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದ್ದಾರೆ. ಈ ಬಗ್ಗೆ ಪೋಸ್ಟ್‌ ಮಾಡಿರುವ ಅವರು,  ಕುರಿ ಕಳ್ಳತನ ತಡೆಯಲು ಕುರುಬರಿಗೆ ಬಂದೂಕು ನೀಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮುಂದಾಗಿದ್ದಾರೆ ಮತ್ತು ಅರಣ್ಯ ಪ್ರದೇಶಗಳಲ್ಲಿ ಕುರಿ ಮೇಯಿಸಲು ಕೂಡ ಅವಕಾಶ ನೀಡಲು ಮುಂದಾಗಿದ್ದಾರೆ ಇದು ಅಸಂಬದ್ಧ, ದೋಷಪೂರಿತ ಮತ್ತು ಕುರುಬ ಜಾತಿ ರಾಜಕಾರಣ. ಸದೃಢ ಪ್ರಜಾಪ್ರಭುತ್ವಕ್ಕೆ ಪೊಲೀಸ್ ಮತ್ತು ರಕ್ಷಣೆಯ ಅಗತ್ಯವಿದೆಯೇ ಹೊರತು ಬಂದೂಕು ಹೊಡೆಯುವ ಕುರುಬರಲ್ಲ.  ಅಲ್ಲದೆ, ಕಾಡುಗಳಲ್ಲಿನ ಮೇಯಿಸುವಿಕೆಯು ಈಗಾಗಲೇ ದುರ್ಬಲವಾಗಿರುವ ನಮ್ಮ ಪರಿಸರ ವ್ಯವಸ್ಥೆಗಳನ್ನು ನಾಶಪಡಿಸುತ್ತದೆ. ವಿನಾಶಕಾರಿ-ರಾಮಯ್ಯ ಎಂದು ಬರೆದುಕೊಂಡಿದ್ದಾರೆ.

Read More

ಬೆಂಗಳೂರು: ಕನ್ನಡದ ಕಿರುತೆರೆಯಲ್ಲಿ ನಿರೂಪಕಿಯಾಗಿ ಜನಪ್ರಿಯವಾಗಿದ್ದಂತ ಅಪರ್ಣಾ ಅವರು ಇನ್ನಿಲ್ಲವಾಗಿದ್ದಾರೆ. ಕ್ಯಾನ್ಸರ್ ನಿಂದ ಬಳಲುತ್ತಿದ್ದಂತ ಖ್ಯಾತ ನಿರೂಪಕಿ ಅಪರ್ಣಾ ಅವರು ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ. ಇಂದು ಬೆಳಗ್ಗೆ 7:30 ಗಂಟೆ ಕರೆದುಕೊಂಡು ಬರುತ್ತೇನೆ, ಮನೆ ಬಳಿ 11:30 ರವರೆಗೂ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುತ್ತದೆ. 12 ಗಂಟೆಗೆ ಬನಶಂಕರಿಯ ವಿದ್ಯುತ್ ಚಿತಾಗಾರದಲ್ಲಿ ಅಂತಿಮ ವಿಧಿವಿಧಾನ ನೆರವೇರಿಸಲಾಗುತ್ತದೆ. ಬನಶಂಕರಿ ಎರಡನೇ ಹಂತದಲ್ಲಿರೋ ಮನೆಯಲ್ಲಿ ಸಾರ್ವಜನಿಕರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುತ್ತದೆ ಎಂದು ಅಪರ್ಣಾ ಪತಿ ತಿಳಿಸಿದ್ದಾರೆ. ಹೀಗಿದೆ ಅಪರ್ಣಾ ಬದುಕಿನ ಜರ್ನಿಯ ಹಿನ್ನೋಟ ಇಂದು ಕ್ಯಾನ್ಸರ್ ನಿಂದ ನಿಧನರಾಗಿರುವಂತ ಕನ್ನಡದ ಖ್ಯಾತ ನಿರೂಪಕಿ ಅಪರ್ಣಾ ಅವರು, 1989ರಲ್ಲಿ ನಿರೂಪಕಿಯಾಗಿ ಟಿವಿ ಮಾಧ್ಯಮಕ್ಕೆ ಸೇರಿದರು. ಅದಕ್ಕೂ ಮುನ್ನಾ 1984ರಲ್ಲಿ ತೆರೆಕಂಡಂತ ಖ್ಯಾತ ನಿರ್ದೇಶಕ ಪುಟ್ಟಣ್ಣ ಕಣಗಾಲ್ ನಿರ್ದೇಶನದ ಮಸಣದ ಹೂ ಚಿತ್ರದಲ್ಲಿಯೂ ಕಾಣಿಸಿಕೊಂಡು, ಸಿನಿ ರಂಗದ ಜರ್ನಿ ಆರಂಭಗೊಂಡಿತ್ತು. ಮಸಣದ ಹೂ ಬಳಿಕ ಇನ್ಸ್ ಪೆಕ್ಟರ್ ವಿಕ್ರಮ್ ಸೇರಿದಂತೆ ಹಲವು ಚಿತ್ರಗಳಲ್ಲಿ ಅಪರ್ಣಾ ನಟಿಸಿ,…

Read More

ಚಿತ್ರದುರ್ಗ : ಭರಮಸಾಗರ-ಚಿತ್ರದುರ್ಗ ಮಧ್ಯದ 29 ಕಿ.ಮೀ ಉದ್ದದ ರೈಲ್ವೇ ಭೂಸ್ವಾಧೀನ ಪ್ರಕ್ರಿಯೆ ಶೇ.90 ರಷ್ಟು ಮುಕ್ತಾಯಗೊಂಡಿದ್ದು, ಭೂಮಿ ಹಸ್ತಾಂತರ ಮಾಡಲಾಗಿದೆ. ಕಾಮಗಾರಿಯ ಟೆಂಡೆರ್ ಪ್ರಕ್ರಿಯೆ ಪೂರ್ಣಗೊಂಡಿದೆ. ಶೀಘ್ರವೇ ರಾಜ್ಯದವರೇ ಆದ ರೈಲ್ವೇ ರಾಜ್ಯ ಖಾತೆ ಸಚಿವ ವಿ.ಸೋಮಣ್ಣ ಅವರಿಂದ ಕಾಮಗಾರಿಯ ಭೂಮಿ ಪೂಜೆ ಕಾರ್ಯಕ್ರಮ ಹಮ್ಮಿಕೊಳ್ಳುವಂತೆ ಸಂಸದ ಗೋವಿಂದ ಎಂ ಕಾರಜೋಳ ರೈಲ್ವೇ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ರೈಲ್ವೇ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಅವರು ಮಾತನಾಡಿದರು. ದಾವಣಗೆರೆ-ಚಿತ್ರದುರ್ಗ-ತುಮಕೂರು ನೇರ ರೈಲ್ವೇ ಯೋಜನೆ ಜಿಲ್ಲೆ ಅಗತ್ಯವಾಗಿದೆ. ಯೋಜನೆಗೆ ಚಿತ್ರದುರ್ಗ ಜಿಲ್ಲಾ ವ್ಯಾಪ್ತಿಯ ಒಟ್ಟು 1210 ಎಕೆರೆ ಭೂಮಿ ಅವಶ್ಯಕವಾಗಿದೆ. ಇದರಲ್ಲಿ 1053 ಎಕರೆ ಭೂಮಿ ಸ್ವಾಧೀನ ಪಡಿಸಿಕೊಂಡು ರೈಲ್ವೇ ಇಲಾಖೆ ನೀಡಲಾಗಿದೆ. ಬಾಕಿ ಇರುವ 145 ಎಕರೆ ಭೂ ಸ್ವಾಧೀನ ಪ್ರಕ್ರಿಯ ಅಂತಿಮ ಹಂತದಲ್ಲಿದೆ. ಯೋಜನೆ ವಿಳಂಭವಾಗದAತೆ ರೈಲ್ವೇ ಕಾಮಗಾರಿಗೆ ಅಗತ್ಯ ಇರುವ ಭೂಮಿ ಸ್ವಾಧೀನ ಹಾಗೂ ರೈಲ್ವೇ ಇಲಾಖೆಗೆ ಭೂಮಿ…

Read More

ಬೆಂಗಳೂರು : ರಾಜ್ಯದಲ್ಲಿ ದಿನೇ ದಿನೇ ಡೆಂಘಿ ಪ್ರಕರಣಗಳು ಹೆಚ್ಚುತ್ತಿರುವುದರಿಂದ ಇದೀಗ ರಾಜ್ಯದಲ್ಲಿ ಕಳೆದ ನಿನ್ನೆ ಒಂದೇ ದಿನ 381 ಹೊಸ ಪ್ರಕಾರಣಗಳು ಪತ್ತೆಯಾಗಿವೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ. ರಾಜ್ಯದಲ್ಲಿ ಕಳೆದ ನಿನ್ನೆ ಒಂದೇ ದಿನ 381 ಹೊಸ ಪ್ರಕಾರಣಗಳು ಪತ್ತೆಯಾಗಿವೆ ಪ್ರಸ್ತುತ ರಾಜ್ಯದಲ್ಲಿ ಇಲ್ಲಿಯವರೆಗೆ 8221 ಪ್ರಕರಣಗಳು ಏರಿಕೆಯಾಗಿದೆ ಎಂದು ಆರೋಗ್ಯ ಇಲಾಖೆ ಬಿಡುಗಡೆ ಮಾಡಿದ ವರದಿಯಲ್ಲಿ ಬಹಿರಂಗವಾಗಿದೆ. ಅಲ್ಲದೆ ರಾಜ್ಯದ ಗಡಿ ಭಾಗದಲ್ಲಿ ಕೂಡ ಡೆಂಘಿ ಪ್ರಕರಣಗಳು ಹೆಚ್ಚಿದ್ದು, ಬೀದರ್ ಜಿಲ್ಲೆಯಲ್ಲಿ ಕಳೆದ 2 ದಿನಗಳಲ್ಲಿ 6 ಡೆಂಘಿ ಪ್ರಕರಣಗಳು ಪತ್ತೆಯಾಗಿವೆ. ಆದ್ದರಿಂದ ದಿನದಿಂದ ದಿನಕ್ಕೆ ರಾಜ್ಯದಲ್ಲಿ ಡೆಂಘಿ ಪ್ರಕರಣಗಳು ಹೆಚ್ಚುತ್ತಿದ್ದು, ಆರೋಗ್ಯ ಇಲಾಖೆ ಸೋಂಕು ತಡೆಗಟ್ಟಲು ಅಗತ್ಯ ಕ್ರಮಗಳನ್ನು ಕೈಗೊಂಡಿದೆ.

Read More

ಬಳ್ಳಾರಿ : ರಾಜ್ಯದಲ್ಲಿ ಐಪಿ ಸೆಟ್ ಆರ್.ಆರ್ ನಂಬರ್‍ಗೆ ಆಧಾರ್ ಸಂಖ್ಯೆ ಲಿಂಕ್ ಮಾಡುತ್ತಿರುವುದು ದಾಖಲಾತಿಗಾಗಿ ಮಾತ್ರವೇ ಹೊರತು ಬೇರೆ ಉದ್ದೇಶವಿಲ್ಲ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಅವರು ಹೇಳಿದರು. ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಗುರುವಾರ ಇಂಧನ ಇಲಾಖೆಗೆ ಸಂಬಂಧಿಸಿದಂತೆ ಜಿಲ್ಲೆಯ ಜನಪ್ರತಿನಿಧಿಗಳು ಮತ್ತು ಇಲಾಖೆ ಅಧಿಕಾರಿಗಳೊಂದಿಗಿನ ಸಭೆ ಬಳಿಕ ಸುದ್ದಿಗೋಷ್ಠಿಯನ್ನುದ್ದೇಶಿಸಿ ಅವರು ಮಾತನಾಡಿದರು. ಐಪಿ ಸೆಟ್‍ಗಳ ಸಂಖ್ಯೆ ತಿಳಿದುಕೊಂಡು ಸಮರ್ಪಕ ವಿದ್ಯುತ್ ಪೂರೈಕೆಗೆ ಅನುಕೂಲವಾಗುವಂತೆ ಐಪಿ ಸೆಟ್‍ಗಳ ಆರ್.ಆರ್.ನಂಬರ್ ಗೆ ಆಧಾರ್ ಸಂಖ್ಯೆ ಜೋಡಿಸಲಾಗುತ್ತಿದೆ ಎಂದು ಸ್ಪಷ್ಟಪಡಿಸಿದರು. “ರಾಜ್ಯದಲ್ಲಿ 10 ಎಚ್.ಪಿ.ವರೆಗಿನ ಕೃಷಿ ಪಂಪ್ ಸೆಟ್‍ಗಳಿಗೆ ಈಗಾಗಲೇ ಉಚಿತವಾಗಿ ವಿದ್ಯುತ್ ಪೂರೈಸಲಾಗುತ್ತಿದೆ. ಆದರೆ, ಅವುಗಳಿಗೆ ಎಷ್ಟು ವಿದ್ಯುತ್ ಬೇಕು ಎಂಬ ಬಗ್ಗೆ ಸ್ಪಷ್ಟತೆ ಇಲ್ಲದೆ ಗೊಂದಲ ಉಂಟಾಗುತ್ತಿದೆ. ಅಕ್ರಮ ಪಂಪ್ ಸೆಟ್‍ಗಳಿಂದಾಗಿ ಸಕ್ರಮ ಪಂಪ್‍ಸೆಟ್‍ಗಳಿಗೂ ವಿದ್ಯುತ್ ಸಮಸ್ಯೆಯಾಗುತ್ತಿದೆ. ಐಪಿ ಸೆಟ್‍ಗಳ ಆರ್.ಆರ್ ನಂಬರ್‍ಗಳಿಗೆ ಆಧಾರ್ ಜೋಡಣೆ ಮಾಡಿದರೆ ಎಷ್ಟು ಪಂಪ್ ಸೆಟ್‍ಗಳಿವೆ ಮತ್ತು ಅವುಗಳಿಗೆ ಎಷ್ಟು ವಿದ್ಯುತ್ ಬೇಕು…

Read More

ಶಿವಮೊಗ್ಗ : ಶಿಕ್ಷಕ ಅಭ್ಯರ್ಥಿಗಳಿಗೆ ರಾಜ್ಯ ಸರ್ಕಾರ ಸಿಹಿಸುದ್ದಿಯೊಂದು ನೀಡಿದ್ದು, ಹಂತ ಹಂತವಾಗಿ ಶಿಕ್ಷಕರ ನೇಮಕಾತಿ ಮಾಡಲಾಗುವುದು. ಈ ವರ್ಷ ಸುಮಾರು 10 ಸಾವಿರ ಸರ್ಕಾರಿ ಶಿಕ್ಷಕರ ನೇಮಕ ಮಾಡಲಾಗುವುದು. ಅನುದಾನಿತ ಶಾಲೆಗಳಿಗೂ 2020 ರಿಂದ ಮಂಜೂರಾತಿ ನೀಡಲು ಮತ್ತು ಅವರ ಅಭಿವೃದ್ದಿಗಾಗಿ ಪ್ರಯತ್ನಿಸಲಾಗುವುದು ಎಂದು ಸಚಿವ ಮಧು ಬಂಗಾರಪ್ಪ ತಿಳಿಸಿದರು. ಶಾಲಾ ಶಿಕ್ಷಣ ಇಲಾಖೆ ವತಿಯಿಂದ ಗುರುವಾರ ನಗರದ ಅಂಬೇಡ್ಕರ್ ಭವನದಲ್ಲಿ 2022-23 ನೇ ಸಾಲಿನಲ್ಲಿ ಎಸ್ ಎಸ್‍ಎಲ್‍ಸಿಯಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಲ್ಯಾಪ್‍ಟಾಪ್ ವಿತರಣೆ ಹಾಗೂ 2023-24 ನೇ ಸಾಲಿನಲ್ಲಿ ಎಸ್ ಎಸ್ ಎಲ್‍ಸಿಯಲ್ಲಿ ಶೇ.100 ಫಲಿತಾಂಶ ಪಡೆದ ಶಾಲೆಗಳಿಗೆ ಏರ್ಪಡಿಸಲಾಗಿದ್ದ ಅಭಿನಂದನಾ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಕಾರ್ಯಕ್ರಮದಲ್ಲಿ 2022-23 ನೇ ಸಾಲಿನಲ್ಲಿ ಎಸ್‍ಎಸ್‍ಎಲ್‍ಸಿಯಲ್ಲಿ ಅತಿ ಹೆಚ್ಚು ಅಂಕ ಪಡೆದ ಜಿಲ್ಲೆಯ 3 ಮತ್ತು ತಾಲ್ಲೂಕುಗಳಿಂದ ತಲಾ 3 ವಿದ್ಯಾರ್ಥಿಗಳಿಗೆ ಉಚಿತವಾಗಿ ಲ್ಯಾಪ್ ಟಾಪ್ ವಿತರಣೆ ಮಾಡಲಾಯಿತು ಹಾಗೂ 2023-24 ನೇ ಸಾಲಿನಲ್ಲಿ ಎಸ್‍ಎಸ್…

Read More

ಬೆಂಗಳೂರು : ರಾಜ್ಯ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ವತಿಯಿಂದ ಜುಲೈ, 13 ರಂದು ರಾಜ್ಯದ ಜಿಲ್ಲೆಯ ವಿವಿಧ ಹಂತದ ಎಲ್ಲಾ ನ್ಯಾಯಾಲಯಗಳಲ್ಲಿ ‘ರಾಷ್ಟ್ರೀಯ ಲೋಕ್ ಅದಾಲತ್’ ನಡೆಯಲಿದೆ. ಸಾರ್ವಜನಿಕರು ತಮ್ಮ ವ್ಯಾಜ್ಯ ಪೂರ್ವ ಮತ್ತು ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳಿಗೆ ತಕ್ಷಣ ಪರಿಹಾರ ಪಡೆದುಕೊಳ್ಳಲು ರಾಷ್ಟ್ರೀಯ ಲೋಕ ಅದಾಲತ್ ಸುವರ್ಣ ಅವಕಾಶವಾಗಿದೆ. ವ್ಯಾಜ್ಯ ಪೂರ್ವ ಪ್ರಕರಣಗಳು ಚೆಕ್ ಅಮಾನ್ಯದ ಪ್ರಕರಣಗಳು, ಬ್ಯಾಂಕ್ ವಸೂಲಾತಿ ಪ್ರಕರಣಗಳು, ಉದ್ಯೋಗದಲ್ಲಿ ಪುನರ್ ಸ್ಥಾಪಿಸಲ್ಪಡುವ ಪ್ರಕರಣಗಳು, ವಿದ್ಯುತ್ ಹಾಗೂ ನೀರಿನ ಶುಲ್ಕಗಳು, ಇತರೆ ಪ್ರಕರಣಗಳು (ರಾಜೀಯಾಗಬಲ್ಲ ಅಪರಾಧಿಕ ಪ್ರಕರಣಗಳು, ವೈವಾಹಿಕ ಪ್ರಕರಣಗಳು ಮತ್ತು ಇತರೆ ಸಿವಿಲ್ ಪ್ರಕರಣಗಳು ಮತ್ತಿತರ), ಕರ್ನಾಟಕ ರಿಯಲ್ ಎಸ್ಟೇಟ್ ಪ್ರಾಧಿಕಾರಕ್ಕೆ ಸಂಬಂಧಪಟ್ಟ ಪ್ರಕರಣಗಳು, ಜಿಲ್ಲಾ ಗ್ರಾಹಕರ ವೇದಿಕೆಯಲ್ಲಿನ ಪ್ರಕರಣಗಳು, ಸಾಲ ವಸೂಲಾತಿ ನ್ಯಾಯಾಧೀಕರಣದ ಪ್ರಕರಣಗಳು, ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗ, ಖಾಯಂ ಜನತಾ ನ್ಯಾಯಾಲಯದಲ್ಲಿನ ಪ್ರಕರಣಗಳು. ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳು ರಾಜಿಯಾಗಬಲ್ಲ ಅಪರಾಧಿಕ ಪ್ರಕರಣಗಳು, ಚೆಕ್ ಅಮಾನ್ಯದ ಪ್ರಕರಣಗಳು,…

Read More

ಬೆಂಗಳೂರು : ರಾಜ್ಯಾದ್ಯಂತ ಡೆಂಗ್ಯೂ ಜ್ವರ ಪ್ರಕರಣಗಳು ಹೆಚ್ವಳವಾಗಿದ್ದು. ಈ ಹಿನ್ನಲೆಯಲ್ಲಿ ಆರೋಗ್ಯ ಇಲಾಖೆ ಸುತ್ತೊಲೆ ಹೊರಡಿಸಿದ್ದು,  ಎನ್ ವಿ ಬಿ ಡಿಸಿ ಪಿ : ಡೆಂಗಿ ಜ್ವರ ಮುಂಜಾಗ್ರತೆ ಹಾಗೂ ನಿಯಂತ್ರಣ, ಹೆಚ್ಚುವರಿ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಲು ಸೂಚನೆ ನೀಡಿದೆ. ಪ್ರಸ್ತುತ ರಾಜ್ಯದ ಡೆಂಗಿ ಜ್ವರ ಪರಿಸ್ಥಿತಿ ಹಾಗೂ ಮಳೆಗಾಲದ ಹಿನ್ನೆಲೆಯಲ್ಲಿ, ಡೆಂಗಿ ಜ್ವರ ಪ್ರಕರಣಗಳ ಚಿಕಿತ್ಸೆ ಹಾಗೂ ಸಮರ್ಪಕ ನಿರ್ವಹಣೆಯು ಪ್ರಮುಖವಾಗಿದ್ದು, ಫಲಿತಾಂಶ ಆಧಾರಿತವಾಗಿರುವುದು ಅಗತ್ಯವಾಗಿದೆ. ಅದರಂತೆ, ಸಂಬಂಧಪಟ್ಟವರು ಈ ಕೆಳಕಂಡ ಹೆಚ್ಚುವರಿ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಲು ಸೂಚಿಸಿದೆ. 1. ರಾಜ್ಯದ ದೈನಂದಿನ ಡೆಂಗಿ ಜ್ವರ ಪರಿಸ್ಥಿತಿಯ ಸೂಕ್ಷ್ಮ ಮೇಲ್ವಿಚಾರಣೆ ಹಾಗೂ ಉಸ್ತುವಾರಿಗಾಗಿ, ಎನ್ ವಿ ಬಿ ಡಿಸಿ ಪಿ ವಿಭಾಗದಿಂದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ನಿರ್ದೇಶನಾಲಯ, ಆರೋಗ್ಯಸೌಧ, ಬೆಂಗಳೂರು, ಇಲ್ಲಿ’ಡೆಂಗಿ ವಾರ್ ರೂಮ್ ‘ಅನ್ನು ಸಕ್ರಿಯಗೊಳಿಸುವುದು. 2. ಎಲ್ಲಾ ಜಿಲ್ಲೆಗಳು / ಬಿಬಿಎಂಪಿ ವ್ಯಾಪ್ತಿಯ ಡೆಂಗಿ ಜ್ವರ ಪರಿಸ್ಥಿತಿಯ ಮೇಲ್ವಿಚಾರಣೆ ಹಾಗೂ ದತ್ತಾಂಶ/ಮಾಹಿತಿ ಸಂಗ್ರಹಣೆಗಾಗಿ…

Read More