Author: kannadanewsnow57

ಬೆಂಗಳೂರು : ರಾಜ್ಯದಲ್ಲಿ ಹೆಚ್ಚುತ್ತಿರುವ ಡೆಂಗ್ಯೂ ಪ್ರಕರಣಗಳ ತಡೆಗೆ ಜಿಲ್ಲಾ ಮಟ್ಟದಲ್ಲಿ ಕಾರ್ಯಪಡೆ ರಚನೆಗೆ ಸಿಎಂ ಸಿದ್ದರಾಮಯ್ಯ ಸೂಚಿಸಿದ್ದಾರೆ. ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳು ಹೆಚ್ಚಾಗುತ್ತಿದ್ದು, ಸಂಪೂರ್ಣ ನಿಯಂತ್ರಣಕ್ಕೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು. ರಾಜ್ಯದಲ್ಲಿ ಇದುವರೆಗೆ 7,362 ಪ್ರಕರಣ ಪತ್ತೆಯಾಗಿದ್ದು, ಪ್ರಸ್ತುತ 303 ಸಕ್ರಿಯ ಪ್ರಕರಣಗಳಿವೆ. 7 ಸಾವು ಸಂಭವಿಸಿದೆ. ಸೊಳ್ಳೆ ನಿಯಂತ್ರಣಕ್ಕೆ ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು ಎಂದು ತಿಳಿಸಿದ್ದಾರೆ. ರಾಜ್ಯದಲ್ಲಿ ಆರೋಗ್ಯ ತುರ್ತುಸ್ಥಿತಿಯನ್ನು ಘೋಷಿಸುವ ಅಗತ್ಯವಿಲ್ಲ ಎಂದು ತಜ್ಞರು ಅಭಿಪ್ರಾಯ ಪಟ್ಟಿದ್ದಾರೆ. ಪ್ರತಿ ಜಿಲ್ಲಾಸ್ಪತ್ರೆಯಲ್ಲಿ ಡೆಂಗ್ಯೂ ಚಿಕಿತ್ಸೆಗೆ ವಿಶೇಷ ವಾರ್ಡ್‌ ಸಜ್ಜುಗೊಳಿಸಬೇಕು. ಮೆಡಿಕಲ್‌ ಕಾಲೇಜುಗಳಲ್ಲಿಯೂ ಚಿಕಿತ್ಸೆಗೆ ವ್ಯವಸ್ಥೆ ಕಲ್ಪಿಸಬೇಕು. ಡೆಂಗ್ಯೂ ಪತ್ತೆಗೆ ಪರೀಕ್ಷೆ ಹೆಚ್ಚಿಸಬೇಕು. ಡೆಂಗ್ಯೂ ಪಾಸಿಟಿವ್‌ ಇರುವ ವ್ಯಕ್ತಿಗಳ ಆರೋಗ್ಯ ಸ್ಥಿತಿಯ ಮೇಲೆ ನಿಗಾ ಇರಿಸಬೇಕು ಜಿಲ್ಲಾ ಮಟ್ಟದಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳನ್ನು ಒಳಗೊಂಡ ಟಾಸ್ಕ್‌ಫೋರ್ಸ್‌ ರಚಿಸಬೇಕು. ಮಳೆಗಾಲ ಮುಗಿಯುವ ತನಕ ಅಧಿಕಾರಿಗಳು ಪ್ರತಿದಿನ ಸಭೆಗಳನ್ನು ನಡೆಸಿ ಪರಿಶೀಲನೆ ನಡೆಸಬೇಕು. ಪ್ರಸ್ತುತ ಸಾಲಿನಲ್ಲಿ 215 ನಮ್ಮ ಕ್ಲಿನಿಕ್‌ಗಳನ್ನು ಆರಂಭಿಸಲು ಅನುಮೋದನೆ…

Read More

ಬೆಂಗಳೂರು : ಪ್ರವಾಸೋದ್ಯಮ ಅಭಿವೃದ್ಧಿ ಮೂಲಕ ಉದ್ಯೋಗ ಸೃಷ್ಟಿಸುವ ಸಲುವಾಗಿ ಹೊಸ ಪ್ರವಾಸೋದ್ಯಮ ನೀತಿ ರೂಪಿಸಲು ನಿರ್ಧರಿಸಲಾಗಿದ್ದು, ಅಗತ್ಯವಿರುವ ನೀಲಿನಕ್ಷೆ ರೂಪಿಸಿ ಸಲ್ಲಿಸುವಂತೆ ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಸೂಚಿಸಿದ್ದಾರೆ. ರಾಜ್ಯ ಪ್ರವಾಸೋದ್ಯಮಕ್ಕೆ ಹೆಚ್ಚು ಅವಕಾಶ ಇರುವ ರಾಜ್ಯ. 320 ಕಿಮಿ ಕರಾವಳಿ ಪ್ರದೇಶವಿದೆ. ಇದುವರೆಗೆ ನಮಗೆ ಅದನ್ನು ಸಮರ್ಪಕವಾಗಿ ಬಳಸಿಕೊಳ್ಳಲು ಸಾಧ್ಯವಾಗಿಲ್ಲ. ಉಡುಪಿ, ಮಂಗಳೂರು, ಉತ್ತರಕನ್ನಡ ಜಿಲ್ಲೆಗಳಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಗೆ ಸ್ಥಳೀಯರೊಂದಿಗೆ ಸೇರಿಕೊಂಡು ಪ್ರೇಕ್ಷಣೀಯ ಸ್ಥಳಗಳ ಅಭಿವೃದ್ಧಿಪಡಿಸುವ ಕುರಿತು ಜಿಲ್ಲಾಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಸಿಎಂ ಸೂಚನೆ ನೀಡಿದರು. ಇದರಿಂದ ಉದ್ಯೋಗ ಸೃಷ್ಟಿ ಸಾಧ್ಯವಿದೆ. ಹೊಸ ಪ್ರವಾಸೋದ್ಯಮ ನೀತಿ ರಚಿಸಲು ನಿರ್ಧರಿಸಲಾಗಿದ್ದು, ಈ ಕುರಿತು ವಿಸ್ತೃತವಾದ ಸಮಾಲೋಚನೆ ನಡೆಸಬೇಕು ಎಂದು ಹೇಳಿದರು ಅನೇಕ ರಾಜ್ಯಗಳಿಗೆ ಪ್ರವಾಸೋದ್ಯಮವೇ ಪ್ರಮುಖ ಆದಾಯ. ನೆರೆಯ ಕೇರಳದಷ್ಟು ಕೂಡಾ ಪ್ರವಾಸೋದ್ಯಮ ಅಭಿವೃದ್ಧಿ ನಮಗೆ ಸಾಧ್ಯವಾಗಿಲ್ಲ. ಪ್ರವಾಸೋದ್ಯಮದ ಸಮಗ್ರ ಅಭಿವೃದ್ಧಿಗೆ ನೀಲನಕಾಶೆ ಸಿದ್ಧಪಡಿಸಬೇಕು ಪ್ರವಾಸೋದ್ಯಮ ಮೂಲಸೌಲಭ್ಯಗಳು ಅತ್ಯಂತ ಕಡಿಮೆಯಿದೆ. ಮಧುಗಿರಿಯಲ್ಲಿರುವ ಏಕಶಿಲಾ ಬೆಟ್ಟ ಹಿಂದಿನ ಬಾರಿ ಸರ್ಕಾರ ಇದ್ದಾಗ…

Read More

ಬೆಂಗಳೂರು : ರಾಜ್ಯ ಸರಕಾರಿ ನೌಕರರು ಸೇವೆ ಸಲ್ಲಿಸುತ್ತಲೇ ಬೇರೆ ಹುದ್ದೆಗೆ ನೇಮಕಾತಿ ಹೊಂದಲು ಮತ್ತು ಸದರಿ ಹುದ್ದೆಗೆ ಅರ್ಜಿ ಸಲ್ಲಿಸಲು ಮೊದಲೇ ಸೇವೆ ಸಲ್ಲಿಸುತ್ತಿರುವ ಇಲಾಖೆಯ ಮುಖ್ಯಸ್ಥರಿಂದ NOC (No objection Certificate) ನಿರಾಕ್ಷೇಪಣಾ ಪತ್ರ ಪಡೆಯಬೇಕಾಗಿತ್ತು.ಆದರೆ ಇದೀಗ ಆ ನಿಯಮವನ್ನು ತಿದ್ದುಪಡಿ ಮಾಡಿ ಆಯ್ಕೆಯಾದ ನಂತರವೂ ಇಲಾಖೆಯಿಂದ NOC ಪಡೆಯಲು ಅವಕಾಶ ಕಲ್ಪಿಸಲಾಗಿದೆ. ಇದಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ರಾಜ್ಯ ಪತ್ರ ಹೊರಡಿಸಿದೆ. ಕರ್ನಾಟಕ ನಾಗರಿಕ ಸೇವಾ (ಸಾಮಾನ್ಯ ನೇಮಕಾತಿ) ನಿಯಮಗಳು, 1977ಕ್ಕೆ ಮತ್ತಷ್ಟು ತಿದ್ದುಪಡಿ ಮಾಡಲು ಕರ್ನಾಟಕ ರಾಜ್ಯ ಸಿವಿಲ್ ಸೇವಾ ಅಧಿನಿಯಮ, 1978 (1990ರ ಅಧಿನಿಯಮ ಸಂಖ್ಯೆ: 14)ರ 3ನೇ ಪ್ರಕರಣದ 2(ಎ) ಉಪ ಪ್ರಕರಣವನ್ನು ಪ್ರಕರಣ 8ರೊಂದಿಗೆ ಓದಿಕೊಂಡು ಅದರಲ್ಲಿ ಅಗತ್ಯಪಡಿಸಲಾದಂತೆ, ಕರಡು ನಿಯಮಗಳನ್ನು ದಿನಾಂಕ:07.08.2020ರ ರಾಜ್ಯ ಪತ್ರದ ವಿಶೇಷ ಸಂಚಿಕೆಯ ಭಾಗ IV-ಎ(ನಂ-391)ರಲ್ಲಿ ಅಧಿಸೂಚನೆ ಹೊರಡಿಸಿದೆ. 3ನೇ ಪ್ರಕರಣದ 1ನೇ ಉಪ ಪ್ರಕರಣವನ್ನು 8ನೇ ಪ್ರಕರಣದೊಂದಿಗೆ ಓದಿಕೊಂಡಂತೆ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಕರ್ನಾಟಕ…

Read More

ಬೆಂಗಳೂರು : ಉದ್ಯೋಗಾಕಾಂಕ್ಷಿ ಮಹಿಳೆಯರಿಗೆ ರಾಜ್ಯ ಸರ್ಕಾರವು ಭರ್ಜರಿ ಸಿಹಿಸುದ್ದಿ ನೀಡಿದ್ದು, ಶೀಘ್ರವೇ 4180 ಅಂಗನವಾಡಿ ಕಾರ್ಯಕರ್ತೆ, 9411 ಸಹಾಯಕಿಯರ ಹುದ್ದೆಗಳ ನೇಮಕಾತಿ ನಡೆಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮತ್ತು ಉಸ್ತುವಾರಿ ಕಾರ್ಯದರ್ಶಿಗಳ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಅಂಗನವಾಡಿ ಕಾರ್ಯಕರ್ತೆಯರ 4180 ಹುದ್ದೆಗಳು ಹಾಗೂ ಸಹಾಯಕಿಯರ 9411 ಹುದ್ದೆಗಳು ಖಾಲಿಯಿದ್ದು, ನೇಮಕಾತಿ ಪ್ರಕ್ರಿಯೆಯನ್ನು ಡಿಸೆಂಬರ್‌ ಅಂತ್ಯದ ಒಳಗಾಗಿ ಪೂರ್ಣಗೊಳಿಸಬೇಕು. ನಗರ ಪ್ರದೇಶದಲ್ಲಿ ಸಹಾಯಕಿಯರ ಹುದ್ದೆಯ ಗೌರವಧನ ಹೆಚ್ಚಳಕ್ಕೆ ಪ್ರಸ್ತಾವನೆ ಸಲ್ಲಿಸುವಂತೆ ಸಿಎಂ ಸೂಚನೆ ನೀಡಿದರು. ಕೇಂದ್ರ ಸರ್ಕಾರದ ವಿವಿಧ ಯೋಜನೆಗಳ ಅಡಿ ಹೆಚ್ಚಿನ ಅನುದಾನ ಪಡೆಯಲು ಪ್ರಯತ್ನಿಸಬೇಕು ಎಂದರು. ಬಜೆಟ್‌ನಲ್ಲಿ ಘೋಷಿಸಿರುವಂತೆ 2 ಸಾವಿರ ಪಂಚಾಯತ್‌ ವ್ಯಾಪ್ತಿಯಲ್ಲಿ ಮಾದರಿ ಶಾಲೆಗಳನ್ನು ಸಿಎಸ್‌ಆರ್‌ ಅಡಿಯಲ್ಲಿ ನಿರ್ಮಿಸುವ ಮಹತ್ವಾಕಾಂಕ್ಷೆಯ ಯೋಜನೆ ಆರಂಭಿಸಲಾಗಿದೆ. ಇದಕ್ಕಾಗಿ ಹಿರಿಯ ಸಚಿವರು ಹಾಗೂ ಅಧಿಕಾರಿಗಳ ಸಮಿತಿಯನ್ನು ರಚಿಸಲಾಗಿದೆ. ರಾಜ್ಯದಲ್ಲಿ ಖಾಸಗಿ ಕಂಪೆನಿಗಳು ಕಾಯ್ದೆ ಪ್ರಕಾರ ಕಳೆದ ಸಾಲಿನಲ್ಲಿ…

Read More

ಬೆಂಗಳೂರು : ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರಿಗೆ ಸಿಎಂ ಸಿದ್ದರಾಮಯ್ಯ ಭರ್ಜರಿ ಸಿಹಿಸುದ್ದಿ ನೀಡಿದ್ದು, ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಗೌರವಧನ ಹೆಚ್ಚಳ ಸಂಬಂಧ ಪ್ರಸ್ತಾವನೆ ಸಲ್ಲಿಸುವಂತೆ ಸೂಚನೆ ನೀಡಿದ್ದಾರೆ. ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮತ್ತು ಉಸ್ತುವಾರಿ ಕಾರ್ಯದರ್ಶಿಗಳ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಅಂಗನವಾಡಿ ಕಾರ್ಯಕರ್ತೆಯರ 4180 ಹುದ್ದೆಗಳು ಹಾಗೂ ಸಹಾಯಕಿಯರ 9411 ಹುದ್ದೆಗಳು ಖಾಲಿಯಿದ್ದು, ನೇಮಕಾತಿ ಪ್ರಕ್ರಿಯೆಯನ್ನು ಡಿಸೆಂಬರ್‌ ಅಂತ್ಯದ ಒಳಗಾಗಿ ಪೂರ್ಣಗೊಳಿಸಬೇಕು. ನಗರ ಪ್ರದೇಶದಲ್ಲಿ ಸಹಾಯಕಿಯರ ಹುದ್ದೆಯ ಗೌರವಧನ ಹೆಚ್ಚಳಕ್ಕೆ ಪ್ರಸ್ತಾವನೆ ಸಲ್ಲಿಸುವಂತೆ ಸಿಎಂ ಸೂಚನೆ ನೀಡಿದರು. ಕೇಂದ್ರ ಸರ್ಕಾರದ ವಿವಿಧ ಯೋಜನೆಗಳ ಅಡಿ ಹೆಚ್ಚಿನ ಅನುದಾನ ಪಡೆಯಲು ಪ್ರಯತ್ನಿಸಬೇಕು ಎಂದರು. ಬಜೆಟ್‌ನಲ್ಲಿ ಘೋಷಿಸಿರುವಂತೆ 2 ಸಾವಿರ ಪಂಚಾಯತ್‌ ವ್ಯಾಪ್ತಿಯಲ್ಲಿ ಮಾದರಿ ಶಾಲೆಗಳನ್ನು ಸಿಎಸ್‌ಆರ್‌ ಅಡಿಯಲ್ಲಿ ನಿರ್ಮಿಸುವ ಮಹತ್ವಾಕಾಂಕ್ಷೆಯ ಯೋಜನೆ ಆರಂಭಿಸಲಾಗಿದೆ. ಇದಕ್ಕಾಗಿ ಹಿರಿಯ ಸಚಿವರು ಹಾಗೂ ಅಧಿಕಾರಿಗಳ ಸಮಿತಿಯನ್ನು ರಚಿಸಲಾಗಿದೆ. ರಾಜ್ಯದಲ್ಲಿ ಖಾಸಗಿ ಕಂಪೆನಿಗಳು ಕಾಯ್ದೆ ಪ್ರಕಾರ ಕಳೆದ ಸಾಲಿನಲ್ಲಿ 8163 ಕೋಟಿ…

Read More

ಬೆಂಗಳೂರು : ಕೌನ್ಸಿಲ್ ಫಾರ್ ದಿ ಇಂಡಿಯನ್ ಸ್ಕೂಲ್ ಸರ್ಟಿಫಿಕೇಟ್ ಎಕ್ಸಾಮಿನೇಷನ್ಸ್ (ಸಿಐಎಸ್ಸಿಇ) ಮಂಗಳವಾರ ತನ್ನ ಸದಸ್ಯ ಶಾಲೆಗಳಿಗೆ ಕರ್ನಾಟಕದಲ್ಲಿ ಕನ್ನಡವನ್ನು ಪ್ರಥಮ ಅಥವಾ ದ್ವಿತೀಯ ಭಾಷೆಯಾಗಿ ಕಲಿಸುವಂತೆ ತನ್ನ ಸದಸ್ಯ ಶಾಲೆಗಳಿಗೆ ನಿರ್ದೇಶನ ನೀಡಿದೆ. ಕನ್ನಡ ಭಾಷಾ ಕಲಿಕಾ ಕಾಯ್ದೆ 2015ರ ಅಡಿಯಲ್ಲಿ ಅಧಿಸೂಚಿತವಾಗಿರುವ ಕರ್ನಾಟಕ ಶಿಕ್ಷಣ ಸಂಸ್ಥೆಗಳ (ನೋ ಅಬ್ಜೆಕ್ಷನ್ ಸರ್ಟಿಫಿಕೇಟ್ ಮತ್ತು ಕಂಟ್ರೋಲ್) ನಿಯಮಗಳಲ್ಲಿ, ಐಸಿಎಸ್ಇ ಮತ್ತು ಸಿಬಿಎಸ್ಇ ಶಾಲೆಗಳಲ್ಲಿ ಕನ್ನಡವನ್ನು ಪ್ರಥಮ ಅಥವಾ ದ್ವಿತೀಯ ಭಾಷೆಯಾಗಿ ಕಲಿಸುವುದನ್ನು ರಾಜ್ಯ ಸರ್ಕಾರ ಕಡ್ಡಾಯಗೊಳಿಸಿದೆ. ಅನೇಕ ಶಾಲೆಗಳು ಈ ನಿಯಮವನ್ನು ವಿರೋಧಿಸುತ್ತಿದ್ದರೂ, ಸಿಐಎಸ್ಸಿಇ ಮುಖ್ಯ ಕಾರ್ಯನಿರ್ವಾಹಕ ಮತ್ತು ಕಾರ್ಯದರ್ಶಿ ಜೋಸೆಫ್ ಎಮ್ಯಾನುಯೆಲ್ ಮತ್ತು ಸಿಐಎಸ್ಸಿಇ ಅಧ್ಯಕ್ಷ ಜಿ.ಇಮ್ಯಾನ್ಯುಯೆಲ್ ಅವರು ಮಂಗಳವಾರ ಸಿಐಎಸ್ಸಿಇ ಶಾಲೆಗಳ ಪ್ರಾಂಶುಪಾಲರ ಸಭೆಯಲ್ಲಿ ಶಾಲೆಗಳು ರಾಜ್ಯದ ಬೋಧನಾ ನೀತಿಗಳನ್ನು ಅನುಸರಿಸಬೇಕಾಗುತ್ತದೆ ಎಂದು ಹೇಳಿದರು. ಎಲ್ಲಾ ಶಾಲೆಗಳು ಕನ್ನಡವನ್ನು ಪ್ರಥಮ ಅಥವಾ ದ್ವಿತೀಯ ಭಾಷೆಯಾಗಿ ಕಲಿಸಬೇಕು ಎಂದು ಕರ್ನಾಟಕ ಸರ್ಕಾರ ಆದೇಶಿಸಿದ್ದರೆ, ಅದನ್ನು ಸಿಐಎಸ್ಸಿಇ ಶಾಲೆಗಳು ಅನುಸರಿಸಬೇಕು”…

Read More

ಬೆಂಗಳೂರು : ಗೋಮಾಳ ಸೇರಿದಂತೆ ಎಲ್ಲಾ ಮಾದರಿ ಸರ್ಕಾರಿ ಜಾಗಗಳನ್ನು ಈ ವರ್ಷಾಂತ್ಯಕ್ಕೆ ಸರ್ವೆ ಮಾಡಿ, ಒತ್ತುವರಿ ತೆರವುಗೊಳಿಸಬೇಕು ಎಂದು ಸಿಎಂ ಸಿದ್ದರಾಮಯ್ಯ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಎಲ್ಲಾ ಜಿಲ್ಲಾಧಿಕಾರಿಗಳು, ಜಿಪಂ ಮುಖ್ಯಕಾರ್ಯನಿರ್ವಹಣಾಧಿಕಾರಿ ಗಳು, ಜಿಲ್ಲಾ ಪೊಲೀಸ್ ವರಿಷ್ಠಾಧಿ ಕಾರಿಗಳು, ಇಲಾಖಾ ಕಾರ್ಯದರ್ಶಿಗಳು ಮತ್ತು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳ ಸಭೆಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ರಾಜ್ಯದಲ್ಲಿ ಈಗಾಗಲೇ ಶೇ.75ರಷ್ಟು ಸರ್ಕಾ ರಿ ಜಾಗಗಳ ಸರ್ವೆ ಕಾರ್ಯ ಪೂರ್ಣಗೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಉಳಿದ ಶೇ.25ರಷ್ಟು ಜಾಗಗಳ ಸರ್ವೆ ಕಾರ್ಯವನ್ನು ಈ ವರ್ಷಾಂತ್ಯದೊಳಗೆ ಪೂರ್ಣಗೊಳಿಸಿ ರಾಜ್ಯದಲ್ಲಿ ಒಟ್ಟಾರೆ ಎಷ್ಟು ಸರ್ಕಾರಿ ಜಾಗವಿದೆ ಎಂಬ ಲ್ಯಾಂಡ್ ಬ್ಯಾಂಕ್ ಮಾಡಿ ಸಲ್ಲಿಸಬೇಕು. ಪ್ರತೀ ತಾಲ್ಲೂಕಿನ ತಹಶೀಲ್ದಾರರ ಕಚೇರಿ ಯಲ್ಲೂ ತಮ್ಮ ತಾಲ್ಲೂಕಿನಲ್ಲಿರುವ ಸರ್ಕಾರಿ ಜಾಗ ಎಷ್ಟು ಎಂಬ ಮಾಹಿತಿಯನ್ನು ಪ್ರಕಟಿ ಸಬೇಕು ಎಂದು ಸೂಚಿಸಲಾಗಿದೆ. ರಾಜ್ಯದಲ್ಲಿ ಪ್ರಸ್ತುತ ಮುಂಗಾರು ಹಂಗಾಮಿನಲ್ಲಿ 82.48 ಲಕ್ಷ ಹೆಕ್ಟೆರ್‌ ಬಿತ್ತನೆ ಗುರಿ ಇದ್ದು, ಇದುವರೆಗೆ 50.91 ಲಕ್ಷ ಹೆಕ್ಟೇರ್‌…

Read More

ನವದೆಹಲಿ : ಪಂಚ ಗ್ಯಾರಂಟಿ ಯೋಜನೆಗಳಿಗೆ ಎಸ್‌ ಸಿ, ಎಸ್‌ ಟಿ ನಿಧಿಯನ್ನು ಮರು ಹಂಚಿಕೆ ಮಾಡುತ್ತಿದೆ ಎಂಬ ಆರೋಪದ ಕುರಿತು ರಾಷ್ಟ್ರೀಯ ಪರಿಶಿಷ್ಟ ಜಾತಿಗಳ ಆಯೋಗವು ಕರ್ನಾಟಕ ರಾಜ್ಯಕ್ಕೆ ನೋಟಿಸ್‌ ನೀಡಿ ವರದಿ ನೀಡಿದೆ. ಮಾಧ್ಯಮ ವರದಿಯ ನಂತರ, ಕರ್ನಾಟಕದಲ್ಲಿ ಪರಿಶಿಷ್ಟ ಜಾತಿ ಉಪ ಯೋಜನೆ (ಎಸ್ಸಿಎಸ್ಪಿ) ಮತ್ತು ಬುಡಕಟ್ಟು ಉಪ ಯೋಜನೆ (ಟಿಎಸ್ಪಿ) ನಿಧಿಯನ್ನು ಗ್ಯಾರಂಟಿ ಯೋಜನೆಗಳಿಗೆ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಎನ್ಸಿಎಸ್ಸಿ ಸ್ವಯಂಪ್ರೇರಿತವಾಗಿ ಗಮನ ಹರಿಸಿದೆ. ಕರ್ನಾಟಕದ ಮುಖ್ಯ ಕಾರ್ಯದರ್ಶಿಗೆ ಬರೆದ ಅಧಿಕೃತ ಸಂವಹನದಲ್ಲಿ, ಐದು ಗ್ಯಾರಂಟಿ ಯೋಜನೆಗಳು ಎಂದು ಕರೆಯಲ್ಪಡುವ ವಿವಿಧ ಕಲ್ಯಾಣ ಯೋಜನೆಗಳನ್ನು ಜಾರಿಗೆ ತರಲು ಮೂಲತಃ ಎಸ್ಸಿಎಸ್ಪಿ ಮತ್ತು ಟಿಎಸ್ಪಿ ಅಡಿಯಲ್ಲಿ ನಿಗದಿಪಡಿಸಿದ 14,730 ಕೋಟಿ ರೂ.ಗಳನ್ನು ಮರುಹಂಚಿಕೆ ಮಾಡಲು ಕರ್ನಾಟಕ ಸರ್ಕಾರ ನಿರ್ಧರಿಸಿದೆ ಎಂದು ಎನ್ಸಿಎಸ್ಸಿ ಎತ್ತಿ ತೋರಿಸಿದೆ. ಎಸ್ಸಿ / ಎಸ್ಟಿ ಸಮುದಾಯಗಳ ಸಾಮಾಜಿಕ ಮತ್ತು ಆರ್ಥಿಕ ಕಲ್ಯಾಣವನ್ನು ಉತ್ತೇಜಿಸುವಲ್ಲಿ ಈ ನಿಧಿಗಳ ಮಹತ್ವವನ್ನು ಆಯೋಗವು ಒತ್ತಿಹೇಳಿದೆ. ಕರ್ನಾಟಕ…

Read More

ಬೆಂಗಳೂರು: ಇಂದು ಬೆಳಗ್ಗೆ 11.30ಕ್ಕೆ ಕೆಲ ದಿನಗಳ ಹಿಂದೆ ನಡೆದಿದ್ದಂತ ಎಸ್ ಎಸ್ ಎಲ್ ಸಿ ಪರೀಕ್ಷೆ-2ರ ( SSLC Exam 2 ) ಫಲಿತಾಂಶ ಪ್ರಕಟವಾಗಲಿದೆ. ಪತ್ರಿಕಾ ಪ್ರಕಟಣೆಯಲ್ಲಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ಅಧ್ಯಕ್ಷರು ಮಾಹಿತಿ ನೀಡಿದ್ದಾರೆ. 2024ರ ಎಸ್ ಎಸ್ ಎಲ್ ಸಿ ಪರೀಕ್ಷೆ-2ರ ಫಲಿತಾಂಶವನ್ನು ದಿನಾಂಕ 10-07-2024ರ ಬೆಳಿಗ್ಗೆ 11.30ಕ್ಕೆ NICಯ ಜಾಲತಾಣ https://karresults.nic.in ನಲ್ಲಿ ಪ್ರಕಟಿಸಲಾಗುತ್ತದೆ ಅಂತ ತಿಳಿಸಿದ್ದಾರೆ. ಅಂದಹಾಗೇ ದಿನಾಂಕ 14-06-2024ರಿಂದ 22-06-2024ರವರೆಗೆ 2024ರ ಎಸ್ ಎಸ್ ಎಲ್ ಸಿ ಪರೀಕ್ಷೆ -2 ಅನ್ನು ನಡೆಸಲಾಯಿತು. 2024ರ ಎಸ್.ಎಸ್.ಎಲ್.ಸಿ. ಪರೀಕ್ಷೆ-2ರ ವಿಜ್ಞಾನ, ದ್ವಿತೀಯ ಭಾಷೆ ಇಂಗ್ಲಿಷ್ ಮತ್ತು ದ್ವಿತೀಯ ಭಾಷೆ ಕನ್ನಡ ವಿಷಯದ ಕೀ ಉತ್ತರಗಳನ್ನು ದಿನಾಂಕ:21.06.2024 ರಂದು ಮಂಡಲಿಯ ಜಾಲತಾಣದಲ್ಲಿ http://kseeb.karnataka.gov.inನಲ್ಲಿ ಪ್ರಕಟಿಸಲಾಗಿದೆ. ಈ ರೀತಿ ರಿಸಲ್ಟ್‌ ಚೆಕ್‌ ಮಾಡಿಕೊಳ್ಳಿ ಕರ್ನಾಟಕ ಪರೀಕ್ಷ ಮಂಡಳಿಯ ಅಧಿಕೃತ ವೆಬ್‌ಸೈಟ್‌ kseab.karnataka.gov.in ಓಪನ್‌ ಮಾಡಿ ವೆಬ್‌ಸೈಟ್‌ ಮುಖಪುಟದಲ್ಲಿ ಕರ್ನಾಟಕ ಎಸ್‌ಎಸ್‌ಎಲ್‌ಸಿ ಪೂರಕ…

Read More

ಬೆಂಗಳೂರು : ಅನರ್ಹ ಬಿಪಿಎಲ್‌ ಕಾರ್ಡ್‌ಗಳನ್ನು ಕೈಬಿಟ್ಟು ಅರ್ಹ ಫಲಾನುಭವಿಗಳಿಗೆ ಬಿಪಿಎಲ್‌ ಕಾರ್ಡ್‌ಗಳನ್ನು ಒದಗಿಸಲು ತ್ವರಿತವಾಗಿ ಕ್ರಮ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಕೂಡಲೇ ಸಮಗ್ರ ಪರಿಶೀಲನೆ ನಡೆಸಿ ಅನರ್ಹ ಬಿಪಿಎಲ್‌ ಕಾರ್ಡ್‌ ಕೈಬಿಡಲು ಕ್ರಮ ಕೈಗೊಳ್ಳಬೇಕು. ಹಾಗೆಯೇ ಬಿಪಿಎಲ್‌ ಕುಟುಂಬಗಳಲ್ಲಿನ ಮೃತ ಸದಸ್ಯರ ಹೆಸರು ತೆಗೆದು ಹಾಕುವ ಪ್ರಕ್ರಿಯೆಯನ್ನು ತ್ವರಿತವಾಗಿ ಕೈಗೊಳ್ಳಬೇಕು. ಜನರನ್ನು ಅನಗತ್ಯವಾಗಿ ಅಲೆದಾಡಿಸಬಾರದು. ಅವರ ಸಮಸ್ಯೆ, ದೂರುಗಳನ್ನು ಆಲಿಸಿ ಅಗತ್ಯ ಪರಿಹಾರ ಒದಗಿಸಬೇಕು ಎಂದು ಸೂಚಿಸಿದ್ದಾರೆ.

Read More