Author: kannadanewsnow57

ನವದೆಹಲಿ : ಜುಲೈ 23ರಂದು ಕೇಂದ್ರದ ನರೇಂದ್ರ ಮೋದಿ ಸರ್ಕಾರದ 3.O ಬಜೆಟ್ ಅನ್ನು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಮಂಡಿಸಲಿದ್ದು, ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಆಯು ಷ್ಮಾನ್ ಭಾರತ್ ಆರೋಗ್ಯ ವಿಮಾ ಯೋಜನೆ ಯಡಿ ಸದ್ಯ ಇರುವ 5 ಲಕ್ಷ ರು. ವಿಮೆ ಮೊತ್ತವನ್ನು 10 ಲಕ್ಷ ರೂ.ಗೆ ಹೆಚ್ಚಳ ಮಾಡಲು ಚಿಂತನೆ ನಡೆಸಿದೆ. ಜು.23ರಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾ ರಾಮನ್ ಅವರು ಮಂಡಿಸುವ ಬಜೆಟ್‌ನಲ್ಲಿ ಈ ಕುರಿತು ಅಧಿಕೃತ ಘೋಷಣೆ ಹೊರಬೀಳ ಲಿದೆ ಎನ್ನಲಾಗಿದೆ. ಸದ್ಯ 16ರಿಂದ 59 ವರ್ಷ ದೊಳಗಿನವರು ಈ ಯೋಜನೆಯಡಿ ವಾರ್ಷಿಕ 5 ಲಕ್ಷ ರು. ಆರೋಗ್ಯ ವಿಮೆಗೆ (ಪ್ರತಿ ಕುಟುಂಬಕ್ಕೆ) ಅರ್ಹರಾಗಿದ್ದಾರೆ. ಈ ಯೋಜನೆಯ ಮೊತ್ತವನ್ನು 5 ಲಕ್ಷ ರೂಪಾಯಿಂದ 10 ಲಕ್ಷ ರೂಪಾಯಿಗೆ ಏರಿಕೆ ಮಾಡುವ ಸಂಬಂಧ ಕೇಂದ್ರವು ಚಿಂತನೆ ಮಾಡಿದೆ ಎಂದು ವರದಿಯಾಗಿದೆ. ಸದ್ಯ ಬಡವರಿಗೆ ಆಯುಷ್ಮಾನ್‌ ಭಾರತ್‌ ಯೋಜನೆ ಅಡಿ 5 ಲಕ್ಷ ರೂಪಾಯಿವರೆಗೆ…

Read More

ವಿಜಯಪುರ : ವಿಜಯಪುರ ಜಿಲ್ಲೆಯಲ್ಲಿ ಮತ್ತೆ ಭೂಕಂಪನದ ಅನುಭವವಾಗಿದ್ದು, ಸ್ಪೋಟದಂತ ಶಬ್ದ ಕೇಳಿಬಂದು ಭೂಮಿ ನಡುಗುವ ಅನುಭವವಾಗಿದೆ. ವಿಜಯಪುರ ಜಿಲ್ಲೆಯ ಇಂಡಿಪಟ್ಟಣದ ಸುತ್ತಮುತ್ತಲಿನ ಗ್ರಾಮಗಳಲ್ಲಿ ಭೂಕಂಪನದ ಅನುಭವವಾಗಿದ್ದು, ಜನರು ಭಯಭೀತರಾಗಿ ಮನೆಗಳಿಂದ ಹೊರಗೆ ಓಡಿ ಬಂದಿದ್ದಾರೆ. ಇಂದು ಬೆಳಗ್ಗೆ 10.53 ರ ಸುಮಾರಿಗೆ ಇಂಡಿ, ತಡವಲಗಾ, ಇಂಗಳಗಿ, ಹಂಗಳಗಿ, ನಿಂಬಾಳ, ಹೊರ್ತಿ ಗ್ರಾಮದ ಸುತ್ತಮುತ್ತ ಭೂಮಿ ಕಂಪಿಸಿದ ಅನುಭವವಾಗಿದೆ. ಮೊದಲು ಸ್ಪೋಟದಂತಹ ಶಬ್ದ ಕೇಳಿಬಂದಿದ್ದು, ಬಳಿಕ ಭೂಮಿ ನಡುಗಿದ ಅನುಭವವಾಗಿದೆ ಎಂದು ವರದಿಯಾಗಿದೆ.

Read More

ರಾಮನಗರ : ಸಹಕಾರ ಸಂಘದ ಚುನಾವಣೆ ಮುಂದೂಡಿದ ಹಿನ್ನೆಲೆಯಲ್ಲಿ ರಾಮನಗರದಲ್ಲಿ ನಿಖಿಲ್ ಕುಮಾರಸ್ವಾಮಿ ನೇತೃತ್ವದಲ್ಲಿ ಜೆಡಿಎಸ್ ಕಾರ್ಯಕರ್ತರು ಬೃಹತ್ ಪ್ರತಿಭಟನೆ ನಡೆಸಿದ್ದು, ಪೊಲೀಸರು ಲಾಠಿ ಚಾರ್ಜ್ ನಡೆಸಿದ್ದಾರೆ. ಸಹಕಾರ ಸಂಘದ ಚುನಾವಣೆ ಮುಂದೂಡಿದ ಹಿನ್ನೆಲೆ ಚುನಾವಣೆಗೆ ಪಟ್ಟು ಹಿಡಿದು ರಾಮನಗರದ ಕಂದಾಯ ಭವನದ ಬಳಿ ನಿಖಿಲ್ ಕುಮಾರಸ್ವಾಮಿ ನೇತೃತ್ವದಲ್ಲಿ ಜೆಡಿಎಸ್‌ ಕಾರ್ಯಕರ್ತರು ಬೃಹತ್ ಪ್ರತಿಭಟನೆ ನಡೆಸಿದ್ದಾರೆ. ಈ ವೇಳೆ ಪ್ರತಿಭಟನೆ ವಿಕೋಪಕ್ಕೆ ತಿರುಗುತ್ತಿದ್ದಂತೆ ಪೊಲೀಸರು ಲಘು ಲಾಠಿ ಚಾರ್ಜ್‌ ನಡೆಸಿದ್ದಾರೆ. ರಾಮನಗರದ ಕಂದಾಯ ಭವನದ ಬಳಿ ಇಂದು ಭಾರಿ ಹೈಡ್ರಾಮಾ ನಡೆದಿದ್ದು, ಪ್ರತಿಭಟನಾಕಾರರು ಹಾಗೂ ಪೊಲೀಸರ ನಡುವೆ ಮಾತಿನ ಚಕಮಕಿ ನಡೆದಿದೆ. ಪೊಲೀಸರು ನಿಖಿಲ್ ಕುಮಾರ್ ಸೇರಿದಂತೆ ಹಲವು ಜೆಡಿಎಸ್‌ ನಾಯಕರು, ಕಾರ್ಯಕರ್ತರನ್ನು ತಮ್ಮ ವಶಕ್ಕೆ ಪಡೆದುಕೊಂಡಿದ್ದಾರೆ.

Read More

ಬೆಂಗಳೂರು : ಮಕ್ಕಳನ್ನು ಶಾಲಾ ವಾಹನಗಳಲ್ಲಿ ಶಾಲೆಗೇ ಕಳುಹಿಸುವ ಪೋಷಕರೇ ಎಚ್ಚರ, ಬೆಂಗಳೂರಿನಲ್ಲಿ ಸಂಚಾರಿ ಪೊಲೀಸರು ಇಂದು ಮದ್ಯ ಸೇವಿಸಿ ಶಾಲಾ ವಾಹನ ಚಲಾಯಿಸುತ್ತಿದ್ದ 23 ವಾಹನಗಳ ಚಾಲಕರ ವಿರುದ್ಧ ದೂರು ದಾಖಲಿಸಿದ್ದಾರೆ. ಬೆಂಗಳೂರಿನಲ್ಲಿ ಇಂದು ಕಾರ್ಯಾಚರಣೆ ನಡೆಸಿರುವ ಸಂಚಾರಿ ಪೊಲೀಸರು ಬರೋಬ್ಬರಿ 23 ಶಾಲಾ ವಾಹನಗಳ ಚಾಲಕರ ವಿರುದ್ಧ 185 ಐಎಂವಿ ಕಾಯ್ದೆಯಡಿ ಪ್ರಕರಣ ದಾಖಲಿಸಿ ವಶಕ್ಕೆ ಪಡೆದುಕೊಂಡಿದ್ದಾರೆ. ಒಟ್ಟು 3016 ವಾಹನಗಳ ತಪಾಸಣೆ ನಡೆಸಲಾಗಿದ್ದು, ಈ ವೇಳೆ ಇನ್ನೂ ಫಿಟ್ನೆಸ್‌ ಸರ್ಟಿಫಿಕೇಟ್‌ ಇಲ್ಲದ ೧೧ ವಾಹನಗಳ ವಿರುದ್ಧವೂ ದೂರು ದಾಖಲಾಗಿದೆ. ಸದ್ಯ ಸಂಚಾರಿ ಪೊಲೀಸರು ಈ ವಾಹನಗಳ ಚಾಲಕರ ವಿರುದ್ಧ ದೂರು ದಾಖಲಿಸಿದ್ದು, ಚಾಲಕರ ಲೈಸೆನ್ಸ್‌ ಸಸ್ಪೆಂಡ್‌ ಮಾಡುವಂತೆ ಆರ್‌ ಟಿಒಗೆ ಸೂಚನೆ ನೀಡಿದ್ದಾರೆ.

Read More

ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಕಥುವಾದಲ್ಲಿ ನಿನ್ನೆ ನಡೆದ ಭಯೋತ್ಪಾದಕ ದಾಳಿಯಲ್ಲಿ ಐವರು ಸೈನಿಕರು ಸಾವನ್ನಪ್ಪಿದ್ದು, ಅವರ ಕುಟುಂಬಗಳಿಗೆ ರಕ್ಷಣಾ ಕಾರ್ಯದರ್ಶಿ ಗಿರಿಧರ್ ಅರಮಾನೆ ಸಂತಾಪ ಸೂಚಿಸಿದ್ದಾರೆ. ದಾಳಿಯ ನಂತರ ಬಲವಾದ ಸಂದೇಶವನ್ನು ಕಳುಹಿಸಿದ ರಕ್ಷಣಾ ಕಾರ್ಯದರ್ಶಿ, “ಕಥುವಾದ ಬದ್ನೋಟಾದಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ ಐವರು ಧೈರ್ಯಶಾಲಿಗಳನ್ನು ಕಳೆದುಕೊಂಡಿರುವುದಕ್ಕೆ ನಾನು ತೀವ್ರ ದುಃಖವನ್ನು ವ್ಯಕ್ತಪಡಿಸುತ್ತೇನೆ ಮತ್ತು ದುಃಖಿತ ಕುಟುಂಬಗಳಿಗೆ ಆಳವಾದ ಸಂತಾಪವನ್ನು ವ್ಯಕ್ತಪಡಿಸುತ್ತೇನೆ. ರಾಷ್ಟ್ರಕ್ಕೆ ಅವರ ನಿಸ್ವಾರ್ಥ ಸೇವೆಯನ್ನು ಯಾವಾಗಲೂ ನೆನಪಿಸಿಕೊಳ್ಳಲಾಗುತ್ತದೆ ಮತ್ತು ಅವರ ತ್ಯಾಗವು ವ್ಯರ್ಥವಾಗುವುದಿಲ್ಲ ಮತ್ತು ಭಾರತವು ದಾಳಿಯ ಹಿಂದಿನ ದುಷ್ಟ ಶಕ್ತಿಗಳನ್ನು ಸೋಲಿಸುತ್ತದೆ” ಎಂದು ಹೇಳಿದರು. ಈ ಹೇಳಿಕೆಗಳನ್ನು ರಕ್ಷಣಾ ಸಚಿವಾಲಯವು ಎಕ್ಸ್ ನಲ್ಲಿ ಪೋಸ್ಟ್ ನಲ್ಲಿ ಹಂಚಿಕೊಂಡಿದೆ. ಕಥುವಾದ ದೂರದ ಮಚೆಡಿ ಪ್ರದೇಶದಲ್ಲಿ ಗಸ್ತು ತಂಡದ ಮೇಲೆ ಭಯೋತ್ಪಾದಕರು ನಿನ್ನೆ ನಡೆಸಿದ ದಾಳಿಯಲ್ಲಿ ಜೂನಿಯರ್ ಕಮಿಷನ್ಡ್ ಅಧಿಕಾರಿ ಸೇರಿದಂತೆ ಐವರು ಸೇನಾ ಸಿಬ್ಬಂದಿ ಸಾವನ್ನಪ್ಪಿದ್ದಾರೆ ಮತ್ತು ಅನೇಕರು ಗಾಯಗೊಂಡಿದ್ದಾರೆ. ನಿನ್ನೆ ಮಧ್ಯಾಹ್ನ ಗ್ರೆನೇಡ್ ಮತ್ತು ಗುಂಡಿನ…

Read More

ಮಾಸ್ಕೋ : ಎರಡು ದಿನಗಳ ರಷ್ಯಾ ಭೇಟಿಯ ಭಾಗವಾಗಿ ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಮಾಸ್ಕೋದಲ್ಲಿ ಭಾರತೀಯ ಸಮುದಾಯವನ್ನು ಉದ್ದೇಶಿಸಿ ಮಾತನಾಡಿದರು. ಭಾರತ ಮತ್ತು ರಷ್ಯಾ ನಡುವೆ ಬಲವಾದ ಬಂಧವನ್ನು ನಿರ್ಮಿಸುವಲ್ಲಿ ಅಧ್ಯಕ್ಷ ಪುಟಿನ್ ಅವರ ಪ್ರಯತ್ನಗಳನ್ನು ಪ್ರಧಾನಿ ಮೋದಿ ಶ್ಲಾಘಿಸಿದರು. “ರಷ್ಯಾ ಭಾರತದ ವಿಶ್ವಾಸಾರ್ಹ ಸ್ನೇಹಿತ. ನಮ್ಮ ಸ್ನೇಹವು ಪರಸ್ಪರ ನಂಬಿಕೆ ಮತ್ತು ಗೌರವವನ್ನು ಆಧರಿಸಿದೆ. ಉಭಯ ದೇಶಗಳ ನಡುವಿನ ಸಂವಹನವನ್ನು ಬಲಪಡಿಸಲು ಕೇಂದ್ರವು ಪ್ರಯತ್ನಿಸುತ್ತಿದೆ ಮತ್ತು ರಷ್ಯಾದಲ್ಲಿ ಎರಡು ಭಾರತೀಯ ದೂತಾವಾಸಗಳನ್ನು ಪ್ರಾರಂಭಿಸುವುದಾಗಿ ಅವರು ಘೋಷಿಸಿದರು. “ನಾನು 140 ಕೋಟಿ ಭಾರತೀಯರ ಪ್ರೀತಿ ಮತ್ತು ರಾಷ್ಟ್ರದ ಮಣ್ಣಿನ ಪರಿಮಳವನ್ನು ನನ್ನೊಂದಿಗೆ ತರುತ್ತೇನೆ” ಎಂದು ಹೇಳುವ ಮೂಲಕ ಅವರು ತಮ್ಮ ಭಾಷಣವನ್ನು ಪ್ರಾರಂಭಿಸಿದರು. ಮೂರನೇ ಬಾರಿಗೆ ರಾಷ್ಟ್ರದ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ನಂತರ ಮೊದಲ ಬಾರಿಗೆ ಭಾರತೀಯ ವಲಸಿಗರನ್ನುದ್ದೇಶಿಸಿ ಅವರು ಮಾಡಿದ ಭಾಷಣದ ಪ್ರಮುಖ ಉಲ್ಲೇಖಗಳು ಇಲ್ಲಿವೆ. “ನಾನು ಮೂರನೇ ಬಾರಿಗೆ ಭಾರತದ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿ…

Read More

ಬೆಂಗಳೂರು : ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲುಪಾಲಾಗಿರುವ ನಟ ದರ್ಶನ್‌ ಇದೀಗ ಹೈಕೋರ್ಟ್‌ ಗೆ ರಿಟ್‌ ಅರ್ಜಿ ಸಲ್ಲಿಸಿದ್ದಾರೆ.  ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್‌ ತಮಗೆ ಊಟ, ಹಾಸಿಗೆ, ಪುಸ್ತಕಗಳನ್ನು ಮನೆಯಿಂದ ಪಡೆಯಲು ಅನುಮತಿ ಕೋರಿ ಜೈಲು ಅಧಿಕಾರಿಗಳಿಗೆ ನಿರ್ದೇಶನ ಕೋರಿ ಹೈಕೋರ್ಟ್‌ ಗೆ ನಟ ದರ್ಶನ್‌ ಅವರು ರಿಟ್‌ ಅರ್ಜಿ ಸಲ್ಲಿಸಿದ್ದಾರೆ. ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್‌, ಪವಿತ್ರಾಗೌಡ ಸೇರಿದಂತೆ 17 ಆರೋಪಿಗಳು ಜೈಲುಪಾಲಾಗಿದ್ದು, ಪೊಲೀಸರು ಪ್ರಕರಣ ಸಂಬಂಧ ಚಾರ್ಜ್‌ ಶೀಟ್‌ ಸಲ್ಲಿಸಲು ಸಿದ್ದತೆ ನಡೆಸಿದ್ದಾರೆ. ಈ ನಡುವೆ ನಟ ದರ್ಶನ್‌ ಹೈಕೋರ್ಟ್‌ ಗೆ ರಿಟ್‌ ಅರ್ಜಿ ಸಲ್ಲಿಸಿದ್ದಾರೆ.

Read More

ಬಾಗಲಕೋಟೆ : ರಾಜ್ಯ ಕಾಂಗ್ರೆಸ್‌ ಸರ್ಕಾರವು ಗ್ಯಾರಂಟಿ ಯೋಜನೆಗಳಿಗಾಗಿ ಎಸ್‌ ಸಿ, ಎಸ್ ಟಿ ಸಮುದಾಯದ ಹಣ ಬಳಕೆ ಮಾಡಿಕೊಳ್ಳುತ್ತಿದೆ ಎಂದು ಸಂಸದ ಗೋವಿಂದ ಕಾರಜೋಳ ಆರೋಪಿಸಿದ್ದಾರೆ.   ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಅಭಿವೃದ್ಧಿ ಕೆಲಸ ಆಗುತ್ತಿಲ್ಲ. ಹಣ ವಾಪಸ್‌ ತೆಗೆದುಕೊಂಡಿದ್ದಾರೆ. ಗ್ಯಾರಂಟಿ ಯೋಜನೆಗಳಿಗೆ ನಮ್ಮ ಆಕ್ಷೇಪಣೆ ಇಲ್ಲ. ಗ್ಯಾರಂಟಿ ಯೋಜನೆ ಮೂಲಕ ವೋಟ್‌ ಬ್ಯಾಂಕ್‌ ರಾಜಕಾರಣ ಮಾಡಬಾರದು ಎಂದು ವಾಗ್ದಾಳಿ ನಡೆಸಿದ್ದಾರೆ. ಎಸ್‌ ಸಿ-ಎಸ್‌ ಟಿ ಸಮುದಾಯದ 24 ಸಾವಿರ ಕೋಟಿ ರೂ. ಹಣ ದುರ್ಬಳಕೆ ಆಗಿದೆ. ಆ ಹಣವನ್ನು ಗ್ಯಾರಂಟಿ ಯೋಜನೆಗಳಿಗೆ ಬಳಕೆ ಮಾಡಿಕೊಂಡಿದ್ದಾರೆ. ಎಸ್‌ ಸಿ, ಎಸ್‌ ಟಿ ಸಮುದಾಯದ ಕಲ್ಯಾಣಕ್ಕೆ ಇರುವ ಹಣವನ್ನು ಗ್ಯಾರಂಟಿ ಯೋಜನೆಗಳಿಗೆ ಬಳಸಬಾರದು ಎಂದು ಹೇಳಿದ್ದಾರೆ.

Read More

ಮಾಸ್ಕೋ: ಪ್ರಧಾನಿ ನರೇಂದ್ರ ಮೋದಿ ಅವರಿಗೆ 2019 ರಲ್ಲಿ ನೀಡಲಾದ ಆರ್ಡರ್ ಆಫ್ ಸೇಂಟ್ ಆಂಡ್ರ್ಯೂ ದಿ ಅಪೊಸ್ಟಲ್ ದಿ ಫಸ್ಟ್ ಕಾಲ್ ಪ್ರಶಸ್ತಿಯನ್ನು ಮಂಗಳವಾರ ಮಾಸ್ಕೋ ಕ್ರೆಮ್ಲಿನ್ ನ ಸೇಂಟ್ ಕ್ಯಾಥರೀನ್ ಹಾಲ್ ನಲ್ಲಿ ಔಪಚಾರಿಕವಾಗಿ ಪ್ರದಾನ ಮಾಡಲಾಗುವುದು. ರಷ್ಯಾ ಮತ್ತು ಭಾರತದ ನಡುವಿನ ವಿಶೇಷ ಕಾರ್ಯತಂತ್ರದ ಪಾಲುದಾರಿಕೆ ಮತ್ತು ಉಭಯ ದೇಶಗಳ ನಡುವಿನ ಸ್ನೇಹಪರ ಸಂಬಂಧಗಳ ಅಭಿವೃದ್ಧಿಗೆ ನೀಡಿದ ವಿಶಿಷ್ಟ ಕೊಡುಗೆಗಾಗಿ ಈ ಆದೇಶವನ್ನು ಭಾರತದ ಪ್ರಧಾನಿಗೆ ನೀಡಲಾಯಿತು. ಯೇಸುವಿನ ಮೊದಲ ಅಪೊಸ್ತಲ ಮತ್ತು ರಷ್ಯಾದ ಪೋಷಕ ಸಂತ ಸಂತ ಆಂಡ್ರ್ಯೂ ಅವರ ಗೌರವಾರ್ಥವಾಗಿ 1698 ರಲ್ಲಿ ಜಾರ್ ಪೀಟರ್ ದಿ ಗ್ರೇಟ್ ಈ ಆದೇಶವನ್ನು ಸ್ಥಾಪಿಸಿದರು. ಇದನ್ನು ಅತ್ಯಂತ ಅತ್ಯುತ್ತಮ ನಾಗರಿಕ ಅಥವಾ ಮಿಲಿಟರಿ ಸೇವೆಗೆ ಮಾತ್ರ ನೀಡಲಾಗುತ್ತದೆ. https://Twitter.com/RusEmbIndia/status/1116632385485983745?ref_src=twsrc%5Etfw%7Ctwcamp%5Etweetembed%7Ctwterm%5E1116632385485983745%7Ctwgr%5E9b500e39e5d4c6048064ad3c8ea1e1d5d0f871bb%7Ctwcon%5Es1_&ref_url=https%3A%2F%2Fkannadadunia.com%2Flive-news%2Fprime-minister-modi-has-been-awarded-russias-highest-civilian-honor-the-st-andrew-award%2F

Read More

ಬೆಂಗಳೂರು : ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರುನಾಮಕರಣ ಮಾಡುವಂತೆ ಡಿ.ಕೆ. ಶಿವಕುಮಾರ್‌ ನೇತೃತ್ವದ ೧೨ ಶಾಸಕರ ನಿಯೋಗ ಸಿಎಂ ಸಿದ್ದರಾಮಯ್ಯಗೆ ಮನವಿ ಮಾಡಿದೆ. ರಾಮನಗರ, ಚನ್ನಪಟ್ಟಣ, ಮಾಗಡಿ, ಕನಕಪುರ ಹಾಗೂ ಹಾರೋಹಳ್ಳಿ ತಾಲ್ಲೂಕುಗಳನ್ನು ಒಳಗೊಂಡ ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರುನಾಮಕರಣ ಮಾಡಿ ಹಾಗೂ ರಾಮನಗರವನ್ನು ಇದರ ಜಿಲ್ಲಾ ಕೇಂದ್ರವಾಗಿ ಘೋಷಣೆ ಮಾಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಹಲವು ಕಾಂಗ್ರೆಸ್‌ ಶಾಸಕರು ಮನವಿ ಮಾಡಿದ್ದಾರೆ. 1986ರ ಸಾಲಿನಲ್ಲಿ ದೊಡ್ಡಬಳ್ಳಾಪುರ, ನೆಲಮಂಗಲ, ದೇವನಹಳ್ಳಿ, ಹೊಸಕೋಟೆ, ಚನ್ನಪಟ್ಟಣ, ರಾಮನಗರ, ಮಾಗಡಿ ಹಾಗೂ ಕನಕಪುರ ತಾಲ್ಲೂಕುಗಳನ್ನು ಸೇರಿಸಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯನ್ನಾಗಿ ಘೋಷಿಸಲಾಗಿತ್ತು.

Read More