Author: kannadanewsnow57

ಕಲ್ಕತ್ತಾ : ಭಾರತೀಯ ಖ್ಯಾತ ಗಾಯಕಿ ಉಷಾ ಉತುಪ್ ಅವರ ಪತಿ ಜಾನಿ ಚಾಕೋ ಉತುಪ್(78) ಸೋಮವಾರ ಕೋಲ್ಕತ್ತಾದಲ್ಲಿ ನಿಧನರಾದರು ಎಂದು ಅವರ ಕುಟುಂಬ ತಿಳಿಸಿದೆ. ಅವರನ್ನು ಹತ್ತಿರದ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಅವರು ಮೃತಪಟ್ಟಿದ್ದಾರೆ ಎಂದು ಘೋಷಿಸಲಾಯಿತು ಎಂದು ಅವರು ಹೇಳಿದರು. ಉಷಾ ಅವರಲ್ಲದೆ, ಜಾನಿ ಅವರಿಗೆ ಒಬ್ಬ ಮಗ ಮತ್ತು ಮಗಳು ಇದ್ದಾರೆ. ಅಂತಿಮ ವಿಧಿಗಳು ಮಂಗಳವಾರ ನಡೆಯಲಿವೆ ಎಂದು ಕುಟುಂಬ ತಿಳಿಸಿದೆ. ಈ ವರ್ಷದ ಆರಂಭದಲ್ಲಿ, ಉಷಾ ಉತುಪ್ ಅವರಿಗೆ ಸಂಗೀತ ಕ್ಷೇತ್ರಕ್ಕೆ ನೀಡಿದ ಕೊಡುಗೆಗಾಗಿ ಮೂರನೇ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಪದ್ಮಭೂಷಣವನ್ನು ನೀಡಿ ಗೌರವಿಸಲಾಯಿತು. ಪಾಪ್ ಐಕಾನ್ ರಾಣಿ ಎಂದು ಜನಪ್ರಿಯವಾಗಿ ಕರೆಯಲ್ಪಡುವ ಗಾಯಕಿ ಈ ಮಾನ್ಯತೆಯ ಬಗ್ಗೆ ನ್ಯೂಸ್ 18 ನೊಂದಿಗೆ ಪ್ರತ್ಯೇಕವಾಗಿ ಮಾತನಾಡಿದರು. “ಇದು ನಂಬಲಾಗದ ಕ್ಷಣವಾಗಿದೆ. ಆ ಭಾವನೆ ಇನ್ನೂ ಇಳಿದಿಲ್ಲ. ನನ್ನ ಪ್ರತಿಭೆಯನ್ನು ಗುರುತಿಸಿದ ಭಾರತ ಸರ್ಕಾರಕ್ಕೆ ನಾನು ಕೃತಜ್ಞನಾಗಿದ್ದೇನೆ” ಎಂದು ಅವರು ಹೇಳಿದರು.

Read More

ಬೆಂಗಳೂರು : ರಾಜ್ಯದಲ್ಲಿ ಡೆಂಘಿ, ಝೀಕಾ ವೈರಸ್‌ ವೇಗವಾಗಿ ಹರಡುತ್ತಿದೆ. ರೋಗಗಳ ನಿಯಂತ್ರಣಕ್ಕೆ ರಾಜ್ಯ ಸರ್ಕಾರವು ಗ್ರಾಮ ಪಂಚಾಯಿತಿಗೆ ಕೆಲವು ಸೂಚನೆಗಳನ್ನು ನೀಡಿದೆ. ಡೆಂಘಿ, ಝೀಕಾ ನಿಯಂತ್ರಣಕ್ಕೆ ರಾಜ್ಯ ಸರ್ಕಾರದಿಂದ ಗ್ರಾಮ ಪಂಚಾಯಿತಿಗಳಿಗೆ ನೀಡಲಾದ ಸೂಚನೆಗಳು * ಕುಡಿಯುವ ನೀರಿನ ಟ್ಯಾಂಕ್, ಶೌಚಾಲಯಗಳಲ್ಲಿ ನೀರು ಸಂಗ್ರಹಿಸುವ ತೊಟ್ಟಿಗಳನ್ನು ವಾರಕ್ಕೊಮ್ಮೆ ಶುಚಿಗೊಳಿಸಬೇಕು * ಮನೆ, ಅಂಗಡಿ, ವಾಣಿಜ್ಯ ಸಂಕೀರ್ಣ, ಸಾರ್ವಜನಿಕ ಸ್ಥಳಗಳಲ್ಲಿ ದೀರ್ಘಕಾಲ ನೀರು ನಿಲ್ಲದಂತೆ ಕ್ರಮ ವಹಿಸಬೇಕು * ಅಂಗನವಾಡಿ, ಶಾಲಾ – ಕಾಲೇಜುಗಳ ಚಾವಣಿಗಳು, ಆವರಣಗಳಲ್ಲಿ ನೀರು ನಿಲ್ಲದಂತೆ ಕ್ರಮ ಕೈಗೊಳ್ಳುವುದು * ನಲ್ಲಿ ಹಾಗೂ ಕೊಳವೆ ಬಾವಿಗಳಿಂದ ನೀರು ಸರಾಗವಾಗಿ ಹರಿಯುವಂತೆ ಸೂಕ್ತ ಚರಂಡಿ ವ್ಯವಸ್ಥೆ ಮಾಡಬೇಕು * ಮಳೆ ನೀರು ಸಂಗ್ರಹವಾಗದಂತೆ ಕ್ರಮವಹಿಸಲು ನಿವೇಶನಗಳ ಮಾಲೀಕರಿಗೆ ಸೂಚನೆ ನೀಡಬೇಕು. ಪಾಲಿಸದವರಿಗೆ ದಂಡ ವಿಧಿಸಬೇಕು. * ಎಳನೀರು ಮಾರಾಟಗಾರರು ಒಡೆದ ಎಳೆನೀರು ಚಿಪ್ಪುಗಳಲ್ಲಿ ನೀರು ಶೇಖರಣೆ ತಡೆಗಟ್ಟಲು ಅವುಗಳನ್ನು ನಾಲ್ಕು ಭಾಗಗಳಾಗಿ ಒಡೆದು ಬೋರಲು ಇಡಬೇಕು * ಡೆಂಘಿ…

Read More

ಬೆಂಗಳೂರಿನ : ರಾತ್ರಿ ಅವಧಿಗೆ ಮೀರಿ ಪಬ್‌ ತೆರೆದಿದ್ದ ಹಿನ್ನೆಲೆಯಲ್ಲಿ ಕ್ರಿಕೆಟಿಗ ವಿರಾಟ್‌ ಕೊಹ್ಲಿ ಅವರ ಮಾಲೀಕತ್ವದ ಬೆಂಗಳೂರಿನ ಪಬ್‌ ಮೇಲೆ ಎಫ್‌ ಐಆರ್‌ ದಾಖಲಾಗಿದೆ. ತಡರಾತ್ರಿವರೆಗೂ ಪಬ್‌ ತೆರೆದಿದ್ದ ಹಿನ್ನೆಲೆಯಲ್ಲಿ ವಿರಾಟ್‌ ಕೊಹ್ಲಿ ಮಾಲೀಕತ್ವದ ಒನ್ 8 ಕಮ್ಯೂನ್  ಪಬ್‌ ಮೇಲೆ ಪೊಲೀಸರು ದಾಳಿ ನಡೆಸಿದ್ದು, ಎಫ್‌ ಐಆರ್‌ ದಾಖಲಿಸಿದ್ದಾರೆ. ಸರ್ಕಾರದ ನಿಗದಿಪಡಿಸಿರುವ ನಿಯಮಗಳನ್ನ ಮೀರಿ ಕಾರ್ಯ ನಿರ್ವಹಿಸುತ್ತಿರುವ ರೆಸ್ಟೋರೆಂಟ್, ಬಾರ್, ಪಬ್ ವಿರುದ್ಧ ಜು.6ರಂದು ರಾತ್ರಿ ಕಬ್ಬನ್ ಪಾರ್ಕ್ ಠಾಣಾ ಪೊಲೀಸರು ವಿಶೇಷ ಕಾರ್ಯಾಚರಣೆ ಕೈಗೊಂಡಿದ್ದರು. ಈ ವೇಳೆ, ಅವಧಿ ಮೀರಿದ ಬಳಿಕವೂ ಗ್ರಾಹಕರಿಗೆ ಅನುವು ಮಾಡಿಕೊಡುತ್ತಿದ್ದ ಆರೋಪದಡಿ ನಗರದ ಕಸ್ತೂರಬಾ ರಸ್ತೆಯಲ್ಲಿರುವ ಒನ್ 8 ಕಮ್ಯೂನ ವಿರುದ್ಧ ಕಬ್ಬನ್ ಪಾರ್ಕ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಬಳ್ಳಾರಿ : ನಾಯಿ ಕಡಿತ ಸೇರಿದಂತೆ ಯಾವುದೇ ಪ್ರಾಣಿ ಕಡಿತ ಉಂಟಾದಲ್ಲಿ ಕೂಡಲೇ ಸ್ವಚ್ಛ ನೀರಿನಲ್ಲಿ ಸಾಬೂನಿನಿಂದ ತೊಳೆದು ಕೂಡಲೇ ಹತ್ತಿರದ ಸರ್ಕಾರಿ ಆಸ್ಪತ್ರೆಯಲ್ಲಿ ರೇಬೀಸ್ ಚುಚ್ಚುಮದ್ದು ಪಡೆಯಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ವೈ.ರಮೇಶ್ ಬಾಬು ಅವರು ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಸರ್ವೇಕ್ಷಣಾ ಘಟಕ ಇವರ ಸಂಯುಕ್ತಾಶ್ರಯದಲ್ಲಿ ಡಿಹೆಚ್‍ಓ ಕಚೇರಿ ಸಭಾಂಗಣದಲ್ಲಿ ಶನಿವಾರ ನಡೆದ ವಿಶ್ವ ಪ್ರಾಣಿಜನ್ಯ ರೋಗಗಳ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಝೂನೋಟಿಕ್ ಖಾಯಿಲೆಯಾಗಿದ್ದ ರೇಬೀಸ್ ರೋಗಕ್ಕೆ 1885 ರ ಜು.06 ರಂದು ಲೂಯಿ ಪಾಸ್ಟರ್ ಮೊದಲ ಲಸಿಕೆಯನ್ನು ಯಶಸ್ವಿಯಾಗಿ ಕಂಡುಹಿಡಿದ ದಿನದ ಸ್ಮರಣಾರ್ಥವಾಗಿ “ವಿಶ್ವ ಪ್ರಾಣಿಜನ್ಯ ರೋಗಗಳ ದಿನ”ವನ್ನು ಆಚರಣೆ ಮಾಡಲಾಗುತ್ತದೆ ಎಂದು ಅವರು ತಿಳಿಸಿದರು. ಸಾಕಿದ ಅಥವಾ ಬೀದಿ ನಾಯಿಗಳು ಮತ್ಯಾವುದೇ ಪ್ರಾಣಿ ಕಡಿತ ಉಂಟಾದ ಸಂದರ್ಭದಲ್ಲಿ ಸೋಪಿನ ಮೂಲಕ ನೀರಿನಿಂದ ಗಾಯ ಅಥವಾ ಪರಿಚಿದ ಸ್ಥಳವನ್ನು ಸುಮಾರು 15…

Read More

ಬೆಂಗಳೂರು : ಅನರ್ಹ ಬಿಪಿಎಲ್‌ ಕಾರ್ಡ್‌ ಹೊಂದಿರುವವರಿಗೆ ಸಿಎಂ ಸಿದ್ದರಾಮಯ್ಯ ಬಿಗ್‌ ಶಾಕ್‌ ನೀಡಿದ್ದು, ಶೀಘ್ರವೇ ಅನರ್ಹ ಬಿಪಿಎಲ್‌ ಕಾರ್ಡ್‌ ರದ್ದು ಮಾಡಲಾಗುವುದು ಎಂದು ತಿಳಿಸಿದ್ದಾರೆ. ಜಿಲ್ಲಾಧಿಕಾರಿಗಳ ಸಭೆಯಲ್ಲಿ ಮತನಾಡಿದ ಸಿಎಂ ಸಿದ್ದರಾಮಯ್ಯ, ರಾಜ್ಯದಲ್ಲಿ 4,37,23,911 ಜನರು ಬಿಪಿಎಲ್‌ ಕಾರ್ಡ್‌ ಸೌಲಭ್ಯ ಪಡೆಯುತ್ತಿದ್ದು, ಶೇ.80ರಷ್ಟು ಕುಟುಂಬಗಳು ಬಿಪಿಎಲ್‌ ಅಡಿಯಲ್ಲಿವೆ. 1.27 ಕೋಟಿ ಬಿಪಿಎಲ್‌ ಕುಟುಂಬಗಳಿವೆ. ಹೊಸ ಕಾರ್ಡ್‌ಗಳಿಗೆ 2.95 ಲಕ್ಷ ಅರ್ಜಿ ಬಾಕಿಯಿದೆ. ನೀತಿ ಆಯೋಗದ ಪ್ರಕಾರ ರಾಜ್ಯದಲ್ಲಿ ಬಡವರ ಸಂಖ್ಯೆ ಕಡಿಮೆಯಾಗಿದ್ದರೂ, ಬಿಪಿಎಲ್‌ ಕಾರ್ಡ್‌ ಪ್ರಮಾಣ ಕಡಿಮೆಯಾಗದಿರಲು ಕಾರಣವೇನು? ತಮಿಳುನಾಡಿನಲ್ಲಿ ಬಿಪಿಎಲ್‌ ಪ್ರಮಾಣ ಶೇ. 40ರಷ್ಟಿದೆ. ಈ ಕುರಿತು ಪರಿಶೀಲನೆ ನಡೆಸಿ, ಅನರ್ಹರನ್ನು ಕೈಬಿಡುವ ಕಾರ್ಯ ನಡೆಯಬೇಕು. ಇದೇ ರೀತಿ ಮೃತ ಸದಸ್ಯರ ಹೆಸರು ತೆಗೆದು ಹಾಕುವ ಪ್ರಕ್ರಿಯೆ ತ್ವರಿತಗೊಳಿಸಬೇಕು ಎಂದು ಹೇಳಿದರು. ಇನ್ನೂ ಸುಳ್ಳು ಮಾಹಿತಿ ನೀಡಿ ಬಿಪಿಎಲ್‌ ಕಾರ್ಡ್‌ ಪಡೆದುಕೊಂಡು ಗೃಹಲಕ್ಷ್ಮಿ ಯೋಜನೆಯ ಹಣ ಪಡೆಯುತ್ತಿರುವ ಮಹಿಳೆಯರಿಗೂ ಇನ್ಮುಂದೆ ಗೃಹ ಲಕ್ಷ್ಮಿ ಹಣ ಬರುವುದಿಲ್ಲ ಎನ್ನಲಾಗಿದೆ. ಗೃಹಲಕ್ಷ್ಮಿ…

Read More

ಬೆಂಗಳೂರು : ಸರ್ಕಾರಿ ಭೂಮಿ ಒತ್ತುವರಿ ಮಾಡಿಕೊಂಡವರಿಗೆ ಸಿಎಂ ಸಿದ್ದರಾಮಯ್ಯ ಶಾಕ್‌ ನೀಡಿದ್ದು, 91,000 ಜಮೀನುಗಳು ಒತ್ತವರಿಯಾಗಿರುವುದನ್ನು ಗುರುತಿಸಲಾಗಿದೆ. ಆಗಸ್ಟ್‌ ತಿಂಗಳಿನಿಂದ ಸರ್ವೇಯರುಗಳ ಲಭ್ಯತೆ ನೋಡಿಕೊಂಡು ಒತ್ತುವರಿ ತೆರವು ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ. ಈ ಕುರಿತು ಮಾಹಿತಿ ನೀಡಿರುವ ಸಿಎಂ ಸಿದ್ದರಾಮಯ್ಯ, ರಾಜ್ಯದಲ್ಲಿ 1.40 ಕೋಟಿ ಎಕರೆ ಸರ್ಕಾರಿ ಜಮೀನು ಇದ್ದು, ಲ್ಯಾಂಡ್‌ ಬೀಟ್‌ ಮೊಬೈಲ್ ತಂತ್ರಾಂಶದ ಮೂಲಕ ದತ್ತಾಂಶ ಸೃಜಿಸಲಾಗಿದೆ. 14.32 ಲಕ್ಷ ಸರ್ಕಾರಿ ಜಮೀನುಗಳ ಸ್ಥಳ ಪರಿಶೀಲನೆಗೆ ಸೂಚಿಸಲಾಗಿದೆ. ಈ ಪೈಕಿ 10.78 ಲಕ್ಷ ಜಮೀನುಗಳಿಗೆ ಗ್ರಾಮಲೆಕ್ಕಾಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಇದರಲ್ಲಿ ಕಂದಾಯ ಇಲಾಖೆಯ 1.93 ಲಕ್ಷ ಜಮೀನುಗಳು ಇದ್ದು, ವಿವಿಧ 20 ಇಲಾಖೆಗಳ ಜಮೀನುಗಳನ್ನೂ ಗುರುತಿಸಲಾಗಿದೆ ಎಂದು ತಿಳಿಸಿದ್ದಾರೆ. ಕೆರೆ ಮತ್ತು ಸ್ಮಶಾನಗಳ ಹೆಚ್ಚುವರಿ ಜವಾಬ್ದಾರಿ ತೆಗೆದುಕೊಂಡು, ಸಮೀಕ್ಷೆ ನಡೆಸಲಾಗಿದೆ. ಒಟ್ಟು 91,000 ಜಮೀನುಗಳು ಒತ್ತವರಿಯಾಗಿರುವುದನ್ನು ಗುರುತಿಸಲಾಗಿದೆ. ಆಗಸ್ಟ್‌ ತಿಂಗಳಿನಿಂದ ಸರ್ವೇಯರುಗಳ ಲಭ್ಯತೆ ನೋಡಿಕೊಂಡು ಒತ್ತುವರಿ ತೆರವು ಮಾಡಲು ಕ್ರಮ ಕೈಗೊಳ್ಳಲಾಗುವುದು. ಇತರ…

Read More

ಬೆಂಗಳೂರು : ಬೆಂಗಳೂರು ನಗರ ವ್ಯಾಪ್ತಿಯಲ್ಲಿ 70 ಸ್ಥಳಗಳಲ್ಲಿ ಹೊಸ ಇಂದಿರಾ ಕ್ಯಾಂಟೀನ್‌ ನಿರ್ಮಿಸಲು ಅನುಮೋದನೆ ನೀಡಲಾಗಿದ್ದು, ಆದಷ್ಟು ಬೇಗನೆ ಸ್ಥಳ ಗುರುತಿಸಬೇಕು ಎಂದು ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ಈ ಕುರಿತು ಮಾಹಿತಿ ನೀಡಿರುವ ಸಿಎಂ ಸಿದ್ದರಾಮಯ್ಯ, ಈಗಾಗಲೇ ಅನುಮತಿ ನೀಡಲಾಗಿರುವ ಹೊಸ ಇಂದಿರಾ ಕ್ಯಾಂಟೀನ್‌ಗಳ ನಿರ್ಮಾಣಕ್ಕೆ ಆದಷ್ಟು ಬೇಗನೆ ಜಾಗ ಗುರುತಿಸಬೇಕು. ಬೆಂಗಳೂರು ನಗರ ವ್ಯಾಪ್ತಿಯಲ್ಲಿ 70 ಸ್ಥಳಗಳಲ್ಲಿ ಹೊಸ ಇಂದಿರಾ ಕ್ಯಾಂಟೀನ್‌ ನಿರ್ಮಿಸಲು ಅನುಮೋದನೆ ನೀಡಲಾಗಿದ್ದು, ಆದಷ್ಟು ಬೇಗನೆ ಸ್ಥಳ ಗುರುತಿಸಬೇಕು. ಹೊಸ ಮೆನು ಟೆಂಡರ್‌ ಪ್ರಕ್ರಿಯೆಯನ್ನು ಆದಷ್ಟು ಬೇಗನೆ ಪೂರ್ಣಗೊಳಿಸಬೇಕು ಎಂದು ಹೇಳಿದರು. ಕಲುಷಿತ ನೀರು ಪೂರೈಕೆಯಾಗದಂತೆ ಎಚ್ಚರಿಕೆ ವಹಿಸಬೇಕು. ಕಲುಷಿತ ನೀರಿನಿಂದ ಯಾವುದೇ ತೊಂದರೆ ಉಂಟಾದರೆ ಸಂಬಂಧಪಟ್ಟ ಅಧಿಕಾರಿಯನ್ನು ನೇರ ಜವಾಬ್ದಾರಿ ಮಾಡಲಾಗುವುದು. ತುಕ್ಕು ಹಿಡಿದ ಹಳೆಯ ಪೈಪ್‌ ಬದಲಾವಣೆ ಮಾಡಬೇಕು. ಪ್ರತಿ 15ದಿನಗಳಿಗೊಮ್ಮೆ ನೀರಿನ ಮೂಲದಲ್ಲಿ ಹಾಗೂ ವಿತರಣಾ ಬಿಂದುವಿನಲ್ಲಿನ ನೀರಿನ ಗುಣಮಟ್ಟವನ್ನು ಪ್ರಯೋಗಾಲಯದಲ್ಲಿ ಕಡ್ಡಾಯವಾಗಿ ಪರೀಕ್ಷೆ ಮಾಡಬೇಕು. ನೀರಿನ ಗುಣಮಟ್ಟ ಪರೀಕ್ಷೆಯಲ್ಲಿ…

Read More

ಬೆಂಗಳೂರು : ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆಯ(KARTET-2024) ಪತ್ರಿಕೆ-1 ಮತ್ತು ಪತ್ರಿಕೆ-2ರ ಕೀ ಉತ್ತರಗಳನ್ನ ಬಿಡುಗಡೆ ಮಾಡಿದೆ. ದಿನಾಂಕ:30/06/2024 ರಂದು ನಡೆದ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ-2024ರ ಪರೀಕ್ಷೆಯ ಪತ್ರಿಕೆ-1 ಮತ್ತು ಪತ್ರಿಕೆ-2ರ ಕೀ-ಉತ್ತರಗಳನ್ನು ದಿನಾಂಕ:08/07/2024 ರಂದು ಇಲಾಖಾ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ. ಪ್ರಕಟಿತ ಕೀ-ಉತ್ತರಗಳಿಗೆ ಆಕ್ಷೇಪಣೆಗಳನ್ನು ಸಲ್ಲಿಸುವ ಬಗ್ಗೆ ಅಭ್ಯರ್ಥಿಗಳು ಕೆಳಕಂಡ ಸೂಚನೆಗಳನ್ನು ಪಾಲಿಸುವುದು. 1. ಪತ್ರಿಕೆ-1 ಮತ್ತು ಪತ್ರಿಕೆ-2ಕ್ಕೆ ಸಂಬಂಧಿಸಿದಂತೆ ಪ್ರಕಟಿತ ಕೀ-ಉತ್ತರಗಳಿಗೆ ಆನ್‌ಲೈನ್ ಮೂಲಕ ಆಕ್ಷೇಪಣೆ ಸಲ್ಲಿಸಲು ದಿನಾಂಕ:13/07/2024 ರ ಸಂಜೆ 5.30 ರವರೆಗೆ ಅವಕಾಶ ಕಲ್ಪಿಸಿದೆ. 2. ಕೀ-ಉತ್ತರಗಳಿಗೆ ಆಕ್ಷೇಪಣೆಗಳನ್ನು ಕೇವಲ ಆನ್‌ಲೈನ್ ಮೂಲಕ ಸಲ್ಲಿಸಬೇಕು. ಆನ್‌ಲೈನ್ ಮೂಲಕ ಹೊರತುಪಡಿಸಿ ಇತರೆ ಯಾವುದೇ ವಿಧಾನದಲ್ಲಿ ಆಕ್ಷೇಪಣೆ ಸಲ್ಲಿಸಿದಲ್ಲಿ, ಅವುಗಳನ್ನು ಪರಿಗಣಿಸಲಾಗುವುದಿಲ್ಲ. 3. ಅಭ್ಯರ್ಥಿಗಳು ತಮ್ಮ ಅರ್ಜಿ/ ನೋಂದಣಿ ಸಂಖ್ಯೆ ಮತ್ತು ಜನ್ಮದಿನಾಂಕವನ್ನು ನಮೂದಿಸುವ ಮೂಲಕ https://schooleducation.karnataka.gov.in ನೋಂದಾಯಿತ ಮೊಬೈಲ್ ಸಂಖ್ಯೆಗೆ ಬರುವ OTP ನಮೂದಿಸಿದ ನಂತರ ಆಕ್ಷೇಪಣೆಗೆ ಸಂಬಂಧಿಸಿದ ವೆಬ್‌ಪೆಜ್ ತೆರೆದುಕೊಳ್ಳುತ್ತದೆ. 4. ಅಭ್ಯರ್ಥಿಯು ಸಲ್ಲಿಸುವ ಆಕ್ಷೇಪಣೆಗಳೊಂದಿಗೆ…

Read More

ನವದೆಹಲಿ : ಒಪ್ಪಿಗೆ ಮೇರೆಗೆ ದೈಹಿಕ ಸಂಬಂಧ ಹೊಂದುವುದು ಅತ್ಯಾಚಾರವಲ್ಲ ಎಂದು ಮಧ್ಯ ಪ್ರದೇಶ ಹೈಕೋರ್ಟ್‌ ಮಹತ್ವದ ತೀರ್ಪು ನೀಡಿದ್ದು, ಮಹಿಳೆಯೊಬ್ಬಳ ದೂರಿನ ಮೇರೆಗೆ ವ್ಯಕ್ತಿಯೊಬ್ಬನ ವಿರುದ್ಧ ದಾಖಲಾಗಿದ್ದ ಅತ್ಯಾಚಾರ ಪ್ರಕರಣವನ್ನು ರದ್ದುಗೊಳಿಸಿದೆ. ಇಬ್ಬರೂ ತಮ್ಮ ಸ್ವಂತ ಇಚ್ಛೆಯಿಂದ 10 ವರ್ಷಗಳಿಗಿಂತ ಹೆಚ್ಚು ಕಾಲ ಸಂಬಂಧದಲ್ಲಿದ್ದರು ಎಂದು ಅದು ಹೇಳಿದೆ. ನ್ಯಾಯಮೂರ್ತಿ ಸಂಜಯ್ ದ್ವಿವೇದಿ ಅವರು ಜುಲೈ 2 ರ ಆದೇಶದಲ್ಲಿ, ಮಹಿಳೆ ಮತ್ತು ಪುರುಷ ಸುಶಿಕ್ಷಿತ ವ್ಯಕ್ತಿಗಳು ಮತ್ತು ಅವರು ಸ್ವಯಂಪ್ರೇರಿತವಾಗಿ 10 ವರ್ಷಗಳಿಗಿಂತ ಹೆಚ್ಚು ಕಾಲ ದೈಹಿಕ ಸಂಬಂಧ ಹೊಂದಿದ್ದರು. ಆ ವ್ಯಕ್ತಿ ಅವಳನ್ನು ಮದುವೆಯಾಗಲು ನಿರಾಕರಿಸಿದ ನಂತರ ಅವರು ಬೇರ್ಪಟ್ಟರು. ಇದರರ್ಥ ಅರ್ಜಿದಾರರ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಿಸಬಹುದು ಎಂದಲ್ಲ ಎಂದು ನ್ಯಾಯಾಲಯ ಹೇಳಿದೆ. ನನ್ನ ದೃಷ್ಟಿಯಲ್ಲಿ, ವಾಸ್ತವಿಕ ಸಂದರ್ಭಗಳ ಪ್ರಕಾರ, ಪ್ರಾಸಿಕ್ಯೂಟರ್ (ಮಹಿಳೆ) ತನ್ನ ದೂರಿನಲ್ಲಿ ಮತ್ತು 164 ಸಿಆರ್ಪಿಸಿಯ ಹೇಳಿಕೆಯಲ್ಲಿ ಹೇಳಿರುವಂತೆ. ಐಪಿಸಿ ಸೆಕ್ಷನ್ 375 (ಭಾರತೀಯ ದಂಡ ಸಂಹಿತೆ) ಅಡಿಯಲ್ಲಿ ವ್ಯಾಖ್ಯಾನಿಸಿದಂತೆ ಈ…

Read More

ಕಥುವಾ : ಜಮ್ಮು ಮತ್ತು ಕಾಶ್ಮೀರದ ಕಥುವಾ ಜಿಲ್ಲೆಯ ಮಚೇಡಿ ಪ್ರದೇಶದಲ್ಲಿ ಸೋಮವಾರ ಭಾರತೀಯ ಸೇನಾ ಬೆಂಗಾವಲು ವಾಹನದ ಮೇಲೆ ಭಯೋತ್ಪಾದಕರು ನಡೆಸಿದ ದಾಳಿಯಲ್ಲಿ ಐವರು ಸೇನಾ ಸಿಬ್ಬಂದಿ ಹುತಾತ್ಮರಾಗಿದ್ದಾರೆ ಮತ್ತು ಐದು ಮಂದಿ ಗಾಯಗೊಂಡಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಈ ಪ್ರದೇಶವು ಭಾರತೀಯ ಸೇನೆಯ 9 ಕಾರ್ಪ್ಸ್ ಅಡಿಯಲ್ಲಿ ಬರುತ್ತದೆ. ಭಯೋತ್ಪಾದಕರ ಗುಂಡಿನ ದಾಳಿಯ ನಂತರ, ನಮ್ಮ ಸೈನಿಕರು ಸಹ ಪ್ರತೀಕಾರ ತೀರಿಸಿಕೊಂಡರು ಎಂದು ರಕ್ಷಣಾ ಅಧಿಕಾರಿಗಳು ತಿಳಿಸಿದ್ದಾರೆ. ಕಥುವಾ ಪಟ್ಟಣದಿಂದ 150 ಕಿಲೋಮೀಟರ್ ದೂರದಲ್ಲಿರುವ ಲೋಹೈ ಮಲ್ಹಾರ್ನ ಬದ್ನೋಟಾ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಕೆಲವು ಸೇನಾ ವಾಹನಗಳು ಈ ಪ್ರದೇಶದಲ್ಲಿ ವಾಡಿಕೆಯ ಗಸ್ತು ತಿರುಗುತ್ತಿದ್ದವು. https://twitter.com/ANI/status/1810317789204222310

Read More