Author: kannadanewsnow57

ಬೆಂಗಳೂರು : ಜಿಲ್ಲಾಧಿಕಾರಿಗಳಿಗೆ ಮಹಾರಾಜರು ಎನ್ನುವ ಭಾವನೆ ಇದ್ದರೆ ಅಭಿವೃದ್ಧಿ ಮತ್ತು ಪ್ರಗತಿ ಸಾಧ್ಯವಿಲ್ಲ. ರಾಜಕಾರಣಿಗಳು ಮತ್ತು ಅಧಿಕಾರಿಗಳು ಇಬ್ಬರೂ ಜನ ಸೇವಕರು ಎನ್ನುವುದನ್ನು ನೆನಪಿನಲ್ಲಿಟ್ಟುಕೊಂಡು ಜನಸೇವೆ ಮಾಡಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದರು. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ DC ಮತ್ತು CEO ಹಾಗೂ ಉಸ್ತುವಾರಿ ಕಾರ್ಯದರ್ಶಿಗಳ ಸಭೆಯಲ್ಲಿ ಈ ಸೂಚನೆ ನೀಡಿದರು. ಸರ್ಕಾರದ ಕಾರ್ಯಕ್ರಮಗಳು, ಯೋಜನೆಗಳು ಪರಿಣಾಮಕಾರಿಯಾಗಿ ಜನ ಸಾಮಾನ್ಯರಿಗೆ ತಲುಪಿಸಲು DC-SP-CEO ಗಳು ಕ್ರಿಯಾಶೀಲತೆಯಿಂದ, ಸಮನ್ವಯತೆಯಿಂದ ಕೆಲಸ ಮಾಡಬೇಕು. ಆಗ ಮಾತ್ರ ಸರ್ಕಾರದ ಕಾಳಜಿಗಳು ಜನರಿಗೆ ತಲುಪಲು ಸಾಧ್ಯ ಎಂದರು. ರಾಜ್ಯದಲ್ಲಿ ಡೆಂಗ್ಯು ನಿಯಂತ್ರಣಕ್ಕೆ ಸಮರೋಪಾದಿಯಲ್ಲಿ ಕೆಲಸ ಮಾಡಿ. DC, DHO ಗಳು ತಾಲ್ಲೂಕು ಮಟ್ಟದ ಅಧಿಕಾರಿಗಳ ಜೊತೆ ಸಭೆ ಮಾಡಿ ಕ್ಷಿಪ್ರವಾಗಿ ಕೆಲಸ ಮಾಡಿ ಎಂದು ಸೂಚಿಸಿದರು. ಇಷ್ಟು ದಿನ ಉದಾಸೀನ, ನಿರ್ಲಕ್ಷ್ಯಕ್ಕೆ, ಕರ್ತವ್ಯಲೋಪಕ್ಕೆ ಕೆಳ ಹಂತದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ. ಇವತ್ತಿನಿಂದ ಹಿರಿಯ ಅಧಿಕಾರಿಗಳನ್ನೂ ಹೊಣೆ ಮಾಡಿ ಕ್ರಮ ಕೈಗೊಳ್ಳುತ್ತೇನೆ ಎಂದು…

Read More

ಬೆಂಗಳೂರು : ಉದ್ಯೋಗಾಕಾಂಕ್ಷಿಗಳಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, ಶೀಘ್ರವೇ 737 ಸರ್ವೇಯರ್’ ನೇಮಕಾತಿಗೆ ಆಧಿಸೂಚನೆ ಪ್ರಕಟಿಸಲಾಗುವುದು ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಹೇಳಿದ್ದಾರೆ. ಜಿಲ್ಲಾಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಪೋಡಿ ಮತ್ತು ದುರುಸ್ತ್‌ ಪ್ರಕರಣಗಳು ಬಹಳ ಸಂಖ್ಯೆಯಲ್ಲಿ ಬಾಕಿ ಇರುವುದರಿಂದ, ಅಭಿಯಾನ ಮಾದರಿಯಲ್ಲಿ ಪೂರ್ಣಗೊಳಿಸಬೇಕು ಎಂದು ಸೂಚಿಸಿದರು. ಇದಕ್ಕೇ ಹೆಚ್ಚುವರಿ ಸರ್ವೇಯರುಗಳ ಅಗತ್ಯವಿದೆ. 737 ಹುದ್ದೆಗಳಿಗೆ ಅನುಮತಿ ದೊರೆತಿದ್ದು, ಶೀಘ್ರವೇ ನೇಮಕ ಮಾಡಿಕೊಳ್ಳಲು ಕ್ರಮ ವಹಿಸಲಾಗುವುದು ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿರು. ಇನ್ನೂ ಭೂ ಸುರಕ್ಷಾ ಕಾರ್ಯಕ್ರಮದಡಿ ಎಲ್ಲ ದಾಖಲೆಗಳನ್ನು ಸ್ಕ್ಯಾನ್‌ ಮಾಡಿ, ಇಂಡೆಕ್ಸ್‌ ಮಾಡಿ ಡಿಜಿಟಲೀಕರಣ ಮಾಡಲಾಗಿದೆ. ಈ ವರೆಗೆ 3.28 ಕೋಟಿ ಪುಟಗಳನ್ನು ಸ್ಕ್ಯಾನ್‌ ಮಾಡಲಾಗಿದೆ. 31 ತಾಲ್ಲೂಕಿನಲ್ಲಿ ಪ್ರಾಯೋಗಿಕವಾಗಿ ಕೈಗೆತ್ತಿಕೊಳ್ಳಲಾಗಿದ್ದು, ಆಗಸ್ಟ್‌ನಲ್ಲಿ ಎಲ್ಲ ತಾಲ್ಲೂಕುಗಳಲ್ಲಿ ಕೈಗೊಳ್ಳಲಾಗುವುದು. ಮುಂದಿನ ಒಂದು ವರ್ಷದೊಳಗೆ ದಾಖಲೆಗಳ ಡಿಜಿಟಲೀಕರಣ ಪ್ರಕ್ರಿಯೆ ಪೂರ್ಣಗೊಳಿಸಲಾಗುವುದು. ಇದರಿಂದ ಸಾರ್ವಜನಿಕರಿಗೆ ದಾಖಲೆಗಳನ್ನು ಒದಗಿಸುವುದರ ಜೊತೆಗೆ, ದಾಖಲೆಗಳ ತಿರುಚುವಿಕೆ, ದಾಖಲೆಗಳ ನಾಪತ್ತೆ ಮೊದಲಾದವುಗಳನ್ನು…

Read More

ಬೆಂಗಳೂರು : ಅನರ್ಹ ಬಿಪಿಎಲ್‌ ಕಾರ್ಡ್‌ ಹೊಂದಿರುವವರಿಗೆ ಸಿಎಂ ಸಿದ್ದರಾಮಯ್ಯ ಬಿಗ್‌ ಶಾಕ್‌ ನೀಡಿದ್ದು, ಶೀಘ್ರವೇ ಅನರ್ಹ ಬಿಪಿಎಲ್‌ ಕಾರ್ಡ್‌ ರದ್ದು ಮಾಡಲಾಗುವುದು ಎಂದು ತಿಳಿಸಿದ್ದಾರೆ. ಜಿಲ್ಲಾಧಿಕಾರಿಗಳ ಸಭೆಯಲ್ಲಿ ಮತನಾಡಿದ ಸಿಎಂ ಸಿದ್ದರಾಮಯ್ಯ, ರಾಜ್ಯದಲ್ಲಿ 4,37,23,911 ಜನರು ಬಿಪಿಎಲ್‌ ಕಾರ್ಡ್‌ ಸೌಲಭ್ಯ ಪಡೆಯುತ್ತಿದ್ದು, ಶೇ.80ರಷ್ಟು ಕುಟುಂಬಗಳು ಬಿಪಿಎಲ್‌ ಅಡಿಯಲ್ಲಿವೆ. 1.27 ಕೋಟಿ ಬಿಪಿಎಲ್‌ ಕುಟುಂಬಗಳಿವೆ. ಹೊಸ ಕಾರ್ಡ್‌ಗಳಿಗೆ 2.95 ಲಕ್ಷ ಅರ್ಜಿ ಬಾಕಿಯಿದೆ. ನೀತಿ ಆಯೋಗದ ಪ್ರಕಾರ ರಾಜ್ಯದಲ್ಲಿ ಬಡವರ ಸಂಖ್ಯೆ ಕಡಿಮೆಯಾಗಿದ್ದರೂ, ಬಿಪಿಎಲ್‌ ಕಾರ್ಡ್‌ ಪ್ರಮಾಣ ಕಡಿಮೆಯಾಗದಿರಲು ಕಾರಣವೇನು? ತಮಿಳುನಾಡಿನಲ್ಲಿ ಬಿಪಿಎಲ್‌ ಪ್ರಮಾಣ ಶೇ. 40ರಷ್ಟಿದೆ. ಈ ಕುರಿತು ಪರಿಶೀಲನೆ ನಡೆಸಿ, ಅನರ್ಹರನ್ನು ಕೈಬಿಡುವ ಕಾರ್ಯ ನಡೆಯಬೇಕು. ಇದೇ ರೀತಿ ಮೃತ ಸದಸ್ಯರ ಹೆಸರು ತೆಗೆದು ಹಾಕುವ ಪ್ರಕ್ರಿಯೆ ತ್ವರಿತಗೊಳಿಸಬೇಕು ಎಂದು ಹೇಳಿದರು.

Read More

ದಾವಣಗೆರೆ : ಮಾಜಿ ಸಚಿವ ಬಿ.ಸಿ.ಪಾಟೀಲ್‌ ಅಳಿಯ ಕೆ.ಜಿ ಪ್ರತಾಪ್‌ ಕುಮಾರ್‌ (42) ಸೋಮವಾರ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದು, ಇಂದು ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಕತ್ತಲಗೆರೆ ಗ್ರಾಮದಲ್ಲಿ ಅಂತ್ಯಕ್ರಿಯೆ ನಡೆಯಲಿದೆ. ಬಿ.ಸಿ.ಪಾಟೀಲ್‌ ಅವರ ಪುತ್ರಿ ಸೌಮ್ಯಾ ಪಾಟೀಲ್‌ ರನ್ನು 2008 ರಲ್ಲಿ ವಿವಾಹವಾಗಿದ್ದ ಪ್ರತಾಪ್‌ ಕುಮಾರ್‌ ಹೊನ್ನಾಳಿ ತಾಲೂಕಿನ ಶಿವಮೊಗ್ಗ-ಹರಿಹರ ರಸ್ತೆಯಲ್ಲಿರುವ ಅರಕೆರೆ ಗ್ರಾಮದ ರಸ್ತೆ ಬಳಿ ಪ್ರತಾಪ್‌ ಅವರ ಕಾರು ಪತ್ತೆಯಾಗಿದ್ದು, ಕೂಡಲೇ ಸ್ಥಳೀಯರು ಕಿಟಿಕಿ ಗಾಜಿನ ಮೂಲಕ ನೋಡಿದಾಗ, ಕಾರಿನ ಮುಂದಿನ ಸೀಟು ಬಳಿ ಕೃಷಿಗೆ ಬಳಸುವ ಕೀಟನಾಶಕದ ಬಾಟಲಿ ಕಂಡಿದೆ. ಪಕ್ಕದಲ್ಲೇ ಪ್ರತಾಪ್‌ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದರು. ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ ಮಾರ್ಗಮಧ್ಯೆಯೇ ಪ್ರತಾಪ್‌ ಸಾವನ್ನಪ್ಪಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. ಇನ್ನು ಇಂದು ಮಧ್ಯಾಹ್ನ 2 ಗಂಟೆಗೆ ದಾವಣಗೆರೆ ಜಿಲಲೆಯ ಚನ್ನಗಿರಿ ತಾಲೂಕಿನ ಕತ್ತಲಗೆರೆಯಲ್ಲಿ ಪ್ರತಾಪ್‌ ಕುಮಾರ್‌ ಅಂತ್ಯಕ್ರಿಯೆ ನಡೆಯಲಿದೆ ಎಂದು ಸಂಬಂಧಿಕರು ತಿಳಿಸಿದ್ದಾರೆ.

Read More

ಬೆಂಗಳೂರು : ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಡೆಂಗ್ಯೂ ಪ್ರಕರಣಗಳು ಹೆಚ್ಚಳವಾಗಿದ್ದು, ರಾಜ್ಯದಲ್ಲಿ ಸೋಮವಾರ 197 ಮಂದಿಗೆ ಡೆಂಗ್ಯೂ ಜ್ವರ ದೃಢಪಟ್ಟಿದೆ. ಈ ಮೂಲಕ ಪ್ರಸಕ್ತ ವರ್ಷದಲ್ಲಿ ಡೆಂಗ್ಯೂ ಪ್ರಕರಣಗಳ ಸಂಖ್ಯೆ 7,362ಕ್ಕೆ ಏರಿಕೆಯಾಗಿದೆ. ಸೋಮವಾರ 197 ಪ್ರಕರಣಗಳು ದೃಢಪಟ್ಟಿದ್ದು, ಒಬ್ಬರು ಮೃತರಾಗಿದ್ದಾರೆ. ಇದರೊಂದಿಗೆ ಡೆಂಗೆಯಿಂದ ಸಾವಿಗೀಡಾದವರ ಸಂಖ್ಯೆ 7ಕ್ಕೆ ಏರಿಕೆಯಾಗಿದೆ. ಜು.8ರಂದು 892 ಪರೀಕ್ಷೆಗಳನ್ನು ನಡೆಸಲಾಗಿತ್ತು. ಸದ್ಯ ರಾಜ್ಯದ ವಿವಿಧ ಆಸ್ಪತ್ರೆಗಳಲ್ಲಿ 46 ಡೆಂಗೆ ಸಂತ್ರಸ್ತರು ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಈ ವರ್ಷ ವರದಿಯಾದ ಒಟ್ಟು ಡೆಂಗೆ ಪ್ರಕರಣಗಳ ಸಂಖ್ಯೆ 7,362ಕ್ಕೆ ಏರಿಕೆಯಾಗಿದೆ ಡೆಂಗ್ಯೂ ಜ್ವರದ ಲಕ್ಷಣಗಳು * ತೀವ್ರ ಹಠಾತ್ ಜ್ವರ * ತೀವ್ರ ತಲೆನೋವು * ತೀವ್ರ ಕೀಲು ಮತ್ತು ಸ್ನಾಯು ನೋವು * ರೆಟ್ರೊ-ಆರ್ಬಿಟಲ್ ನೋವು, ಕಣ್ಣುಗಳ ಸಣ್ಣದೊಂದು ಚಲನೆಯಿಂದಲೂ ಇದು ಉಲ್ಬಣಗೊಳ್ಳಬಹುದು * ವಾಕರಿಕೆ ಮತ್ತು ವಾಂತಿ * ದಡಾರ: ದದ್ದುಗಳು ಮುಂಡದ ಮೇಲೆ ಪ್ರಾರಂಭವಾಗಬಹುದು ಮತ್ತು ಮೇಲಿನ ಮತ್ತು ಕೆಳಗಿನ ಅಂಗಗಳಿಗೆ ವಿಸ್ತರಿಸಬಹುದು. ದದ್ದುಗಳು ಎದೆಯಿಂದ…

Read More

ಬೆಂಗಳೂರು : ರಾಜ್ಯ ಸರ್ಕಾರಿ ಸೇವೆಗೆ 2006 ರ ಏಪ್ರಿಲ್‌ 1ರ ಪೂರ್ವದಲ್ಲಿನ ನೇಮಕಾತಿ ಅಧಿಸೂಚನೆಗಳ ಮೂಲಕ ಆಯ್ಕೆ ಅಗಿರುವ ನೌಕರರನ್ನು ಹಳೇ ಪಿಂಚಣಿ ಯೋಜನೆಗೆ ಒಳಪಡಿಸಲು ಎಲ್ಲಾ ಇಲಾಖೆಗಳಿಂದ ಕ್ರೋಢಿಕೃತ ಮಾಹಿತಿಯನ್ನು ಆರ್ಥಿಕ ಇಲಾಖೆ ಕೋರಿದೆ. ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ, ಉಲ್ಲೇಖಿತ ಸರ್ಕಾರದ ಆದೇಶದಲ್ಲಿ ದಿನಾಂಕ: 01.04.2006ರ ಪೂರ್ವದಲ್ಲಿ ರಾಜ್ಯ ಸಿವಿಲ್ ಸೇವೆಗಳಲ್ಲಿನ ಖಾಲಿ ಹುದ್ದೆಗಳ ಭರ್ತಿಗಾಗಿ ಹೊರಡಿಸಿದ ನೇಮಕಾತಿ ಅಧಿಸೂಚನೆಗಳ ಮೇರೆಗೆ ಆಯ್ಕೆ ಹೊಂದಿ ದಿನಾಂಕ: 01.04.2006ರಂದು ಅಥವಾ ಆ ದಿನಾಂಕದ ನಂತರ ಸೇವೆಗೆ ಸೇರಿರುವ ಕಾರಣದಿಂದ ನೂತನ ಅಂಶದಾಯಿ ಕೊಡುಗೆ ಯೋಜನೆಯ (ರಾಷ್ಟ್ರೀಯ ಪಿಂಚಣಿ ಯೋಜನೆ) ವ್ಯಾಪ್ತಿಗೊಳಪಟ್ಟಿರುವ ಸರ್ಕಾರಿ ನೌಕರರನ್ನು ಸರ್ಕಾರವು ಅವರ ಅಭಿಮತದ ಮೇರೆಗೆ ಕೆಲವು ಷರತ್ತುಗಳಿಗೊಳಪಟ್ಟು ಒಂದು ಬಾರಿಯ ಕ್ರಮವಾಗಿ ಹಿಂದಿನ ಡಿಫೈನ್ ಪಿಂಚಣಿ ಯೋಜನೆಯ ವ್ಯಾಪ್ತಿಗೊಳಪಡಿಸಲು ಒಪ್ಪಿಗೆ ನೀಡಿ ಆದೇಶಿಸಲಾಗಿದೆ. 2. ಸದರಿ ಆದೇಶದನ್ವಯ ನೌಕರರು ತಮ್ಮ ಅಭಿಮತವನ್ನು ಚಲಾಯಿಸಲು ಕೊನೆಯ ದಿನಾಂಕ: 30.06.2024 ಆಗಿರುತ್ತದೆ. ನೌಕರರ ಆಯ್ಕೆಗನುಸಾರ ಅವರು ಹಿಂದಿನ ಡಿಫೈನ್ಸ್…

Read More

ಮೈಸೂರು : ರಾಜ್ಯದಲ್ಲಿ ಭಾರೀ ಸದ್ದು ಮಾಡುತ್ತಿರುವ ಮೈಸೂರು ಅಭಿವೃದ್ಧಿ ಪ್ರಾಧಿಕಾರ (ಮುಡಾ)ದ ನಿವೇಶನ ಹಂಚಿಕೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮದ ಕುರಿತು ಹೈಕೋರ್ಟ್‌ ಸಿಜೆಗೆ ದೂರು ನೀಡಲಾಗಿದೆ. ಮುಡಾ ನಿವೇಶನ ಅಕ್ರಮಕ್ಕೆ ಸಂಬಂಧಿಸಿದಂತೆ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಹೈಕೋರ್ಟ್‌ ಸಿಜೆ ಮತ್ತು ರಾಜ್ಯಪಾಲರಿಗೆ ಬಿಜೆಪಿ ಶಾಸಕ ಟಿ.ಎಸ್.‌ ಶ್ರೀವತ್ಸ ಅವರು ದೂರು ನೀಡಿದ್ದು, ಈ ಸಂಬಂಧ ಅಗತ್ಯ ದಾಖಲೆಗಳನ್ನೂ ಸಲ್ಲಿಸಿದ್ದಾರೆ. ಮುಡಾ ನಿವೇಶನ ಅಕ್ರಮದ ಕುರಿತು ಸಂಪೂರ್ಣ ದಾಖಲೆಗಳಿದ್ದು, ಅವಕಾಶ ನೀಡಿದ್ರೆ ಖುದ್ದು ಹಾಜರಾಗಿ ಪ್ರಕರಣದ ಸಂಪೂರ್ಣ ವಿವರ ನೀಡುವುದಾಗಿ ಮನವಿ ಮಾಡಿದ್ದಾರೆ.

Read More

ಬೆಂಗಳೂರು : ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳ ಕುರಿತು ಸಮೀಕ್ಷೆ ನಡೆಸುವಂತೆ ಜಿಲ್ಲಾಧಿಕಾರಿಗಳ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ಗ್ಯಾರಂಟಿ ಯೋಜನೆಗಳ ಕುರಿತು ಜಾಗೃತಿ ಮೂಡಿಸಲು ಹಾಗೂ ಫಲಾನುಭವಿಗಳಿಂದ ಪ್ರತಿಕ್ರಿಯೆ ಪಡೆಯಲು ಸಮೀಕ್ಷೆ ಕಾರ್ಯವನ್ನು ಚುರುಕುಗೊಳಿಸಬೇಕು. ರಾಜ್ಯದಲ್ಲಿ 84,52,317 ಕುಟುಂಬಗಳ ಸುಮಾರು 5 ಕೋಟಿ ಜನರ ಸಮೀಕ್ಷೆ ನಡೆಸಬೇಕಾಗಿದೆ ಎಂದು ತಿಳಿಸಿದ್ದಾರೆ. ಇನ್ನೂ ರಾಜ್ಯದಲ್ಲಿ 4,37,23,911 ಜನರು ಬಿಪಿಎಲ್ ಕಾರ್ಡ್ ಸೌಲಭ್ಯ ಪಡೆಯುತ್ತಿದ್ದು, ಶೇ.80ರಷ್ಟು ಕುಟುಂಬಗಳು ಬಿಪಿಎಲ್ ಅಡಿಯಲ್ಲಿವೆ. 1.27 ಕೋಟಿ ಬಿಪಿಎಲ್ ಕುಟುಂಬಗಳಿವೆ. ಹೊಸ ಕಾರ್ಡ್‌ಗಳಿಗೆ 2.95 ಲಕ್ಷ ಅರ್ಜಿ ಬಾಕಿಯಿದೆ. ನೀತಿ ಆಯೋಗದ ಪ್ರಕಾರ ರಾಜ್ಯದಲ್ಲಿ ಬಡವರ ಸಂಖ್ಯೆ ಕಡಿಮೆಯಾಗಿದ್ದರೂ, ಬಿಪಿಎಲ್ ಕಾರ್ಡ್ ಪ್ರಮಾಣ ಕಡಿಮೆಯಾಗದಿರಲು ಕಾರಣವೇನು? ತಮಿಳುನಾಡಿನಲ್ಲಿ ಬಿಪಿಎಲ್ ಪ್ರಮಾಣ ಶೇ. 40ರಷ್ಟಿದೆ. ಈ ಕುರಿತು ಪರಿಶೀಲನೆ ನಡೆಸಿ, ಅನರ್ಹರನ್ನು ಕೈಬಿಡುವ ಕಾರ್ಯ ನಡೆಯಬೇಕು. ಇದೇ ರೀತಿ ಮೃತ ಸದಸ್ಯರ ಹೆಸರು ತೆಗೆದು ಹಾಕುವ ಪ್ರಕ್ರಿಯೆ ತ್ವರಿತಗೊಳಿಸಬೇಕು ಎಂದು ಹೇಳಿದ್ದಾರೆ.

Read More

ಬೆಂಗಳೂರು : ಜಮೀನು ಮಾರಾಟದಲ್ಲಿ ವಂಚನೆ ತಡೆಯಲು ಪಹಣಿ-ಆಧಾ‌ರ್ ಜೋಡಣೆ ಕೈಗೊಳ್ಳಲಾಗುತ್ತಿದೆ. ಇದನ್ನು ಶೀಘ್ರವೇ ಪೂರ್ಣಗೊಳಿಸಬೇಕು ಎಂದು ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ವಿಧಾನಸೌಧದಲ್ಲಿ ಸೋಮವಾರ ಜಿಲ್ಲಾಧಿಕಾರಿಗಳು, ಜಿ.ಪಂ ಸಿಇಓಗಳೊಂದಿಗೆ ನಡೆದ ಸಭೆ ವೇಳೆ ಕಂದಾಯ ಇಲಾಖೆಗೆ ಸಂಬಂಧಿಸಿದ ಪ್ರಗತಿ ಪರಿಶೀಲನೆ ನಡೆಸಿದ ಅವರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಒಬ್ಬರು ಮೂರ್ನಾಲ್ಕು ದಶಕಗಳಿಂದ ಜಮೀನು ಸಾಗುವಳಿ ಮಾಡುತ್ತಿದ್ದು, ಅದಕ್ಕೆ ಬೇರೆ ವ್ಯಕ್ತಿಗಳು ಭೂ ಮಂಜೂರಾತಿ ಮಾಡಿಸಿಕೊಳ್ಳುವ ಪ್ರಕರಣಗಳು ಹೆಚ್ಚಾಗುತ್ತಿದ್ದು, ಇಂತಹ ಸ್ಥಳಕ್ಕೆ ಭೇಟಿ ನೀಡಿ, ಮಹಜರು ನಡೆಸಿ, ಭೂಮಂಜೂರಾತಿ ರದ್ದುಪಡಿಸಬೇಕು. ಭೂಮಿಯ ಸ್ವಾಧೀನ ಹೊಂದಿರುವವರಿಗೆ ಮಂಜೂರು ಮಾಡಬೇಕು. ಪೋಡಿ ಮತ್ತು ದುರುಸ್ ಪ್ರಕರಣಗಳು ಬಹಳ ಸಂಖ್ಯೆಯಲ್ಲಿ ಬಾಕಿ ಇರುವುದರಿಂದ, ಅಭಿಯಾನ ಮಾದರಿಯಲ್ಲಿ ಪೂರ್ಣಗೊಳಿಸಬೇಕು ಎಂದು ಹೇಳಿದ್ದಾರೆ. ಭೂ ಸುರಕ್ಷಾ ಕಾರ್ಯಕ್ರಮದಡಿ ಎಲ್ಲ ದಾಖಲೆಗಳನ್ನು ಸ್ಕ್ಯಾನ್ ಮಾಡಿ, ಇಂಡೆಕ್ಸ್ ಮಾಡಿ ಡಿಜಿಟಲೀಕರಣ ಮಾಡಲಾಗಿದೆ. ಈ ವರೆಗೆ 3.28 ಕೋಟಿ ಪುಟಗಳನ್ನು ಸ್ಕ್ಯಾನ್ ಮಾಡಲಾಗಿದೆ. 31 ತಾಲ್ಲೂಕಿನಲ್ಲಿ ಪ್ರಾಯೋಗಿಕವಾಗಿ ಕೈಗೆತ್ತಿಕೊಳ್ಳಲಾಗಿದ್ದು, ಆಗಸ್ಟ್‌ನಲ್ಲಿ ಎಲ್ಲ…

Read More

ಬೆಂಗಳೂರು : LKG, UKG ಮತ್ತು 1ನೇ ತರಗತಿಗೆ ಮಕ್ಕಳ ಶಾಲಾ ಪ್ರವೇಶ ದಾಖಲಾತಿಗೆ ಅರ್ಹ ಗರಿಷ್ಟ ವಯೋಮಾನವನ್ನು ಪರಿಷ್ಕರಿಸುವ ಬಗ್ಗೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಮೇಲೆ ಓದಲಾದ ಕ್ರಮಾಂಕ (1)ರ ಸರ್ಕಾರದ ಆದೇಶದಲ್ಲಿ ಶಿಕ್ಷಣ ಹಕ್ಕು ಕಾಯ್ದೆ-2009 ಮತ್ತು ಕಡ್ಡಾಯ ಶಿಕ್ಷಣ ನಿಯಮಗಳು 2012ರಂತೆ ಶೈಕ್ಷಣಿಕ ವರ್ಷದ ಜೂನ್ ಒಂದನೇ ತಾರೀಖಿಗೆ ಕಡ್ಡಾಯವಾಗಿ 06 ವರ್ಷಗಳು ಪೂರ್ಣಗೊಂಡಿರುವ ಮಗುವನ್ನು ಒಂದನೇ ತರಗತಿಗೆ ದಾಖಲಿಸಲು ವಯೋಮಿತಿಯನ್ನು ನಿಗಧಿಪಡಿಸಲಾಗಿರುತ್ತದೆ. ಮೇಲೆ ಓದಲಾದ ಕ್ರಮಾಂಕ (2)ರಲ್ಲಿ ಸರ್ಕಾರದ ಆದೇಶ ಸಂಖ್ಯೆ:ಇಪಿ 260 ಪಿಜಿಸಿ 2021, ದಿನಾಂಕ:26.07.2022ರ ಆದೇಶದಲ್ಲಿ ಜೂನ್ ಒಂದನೇ ತಾರೀಖಿಗೆ ಕಡ್ಡಾಯವಾಗಿ 06 ವರ್ಷಗಳು ಪೂರ್ಣಗೊಂಡಿರುವ ಮಗುವನ್ನು ಒಂದನೇ ತರಗತಿಗೆ ದಾಖಲಿಸಲು ವಯೋಮಿತಿಯನ್ನು ನಿಗಧಿಪಡಿಸಲಾಗಿರುವುದನ್ನು 2025-26ನೇ ಶೈಕ್ಷಣಿಕ ಸಾಲಿನಿಂದ ಅನ್ವಯವಾಗುವಂತೆ ತಿದ್ದುಪಡಿ ಮಾಡಿ ಆದೇಶಿಸಲಾಗಿರುತ್ತದೆ. ಮೇಲೆ ಓದಲಾದ ಕ್ರಮಾಂಕ (3)ರ ಆಯುಕ್ತರು, ಶಾಲಾ ಶಿಕ್ಷಣ ಇಲಾಖೆ, ಬೆಂಗಳೂರು ಇವರ ಪತ್ರದಲ್ಲಿ LKG, UKG ಮತ್ತು 01ನೇ ತರಗತಿ ಪ್ರವೇಶಕ್ಕೆ ಈಗಾಗಲೇ ದಾಖಲಾತಿಗೆ…

Read More