Author: kannadanewsnow57

ಬೆಂಗಳೂರು : ರಾಜ್ಯದ ರೈತರಿಗೆ ಸಿಎಂ ಸಿದ್ದರಾಮಯ್ಯ ಸಿಹಿಸುದ್ದಿ ನೀಡಿದ್ದು, ಗಂಗಾ ಕಲ್ಯಾಣ ಯೋಜನೆಯಡಿ ವಿದ್ಯುತ್ ಸಂಪರ್ಕ ಕಲ್ಪಿಸದೆ ಬಾಕಿ ಉಳಿದಿರುವ ಪಂಪ್ ಸೆಟ್‌ಗಳಿಗೆ ಶೀಘ್ರ ವಿದ್ಯುತ್ ಸಂಪರ್ಕ ಒದಗಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.  ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸೋಮವಾರ ನಡೆದ ಡಿಸಿಗಳು ಮತ್ತು ಸಿಇಒಗಳು ಹಾಗೂ ಉಸ್ತುವಾರಿ ಕಾರ್ಯದರ್ಶಿಗಳ ಸಭೆಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಈ ವರ್ಷ ಮಳೆಯಿಂದ ಮನೆ, ಬೆಳೆ ಹಾನಿ ಆಗಿರುವವರಿಗೆ ಎಸ್.ಡಿ.ಆರ್.ಎಫ್ ಪ್ರಕಾರ ಪರಿಹಾರವನ್ನು ಕೂಡಲೇ ಇತ್ಯರ್ಥ ಮಾಡಬೇಕು.ಗಂಗಾ ಕಲ್ಯಾಣ ಯೋಜನೆಯಡಿ ವಿದ್ಯುತ್ ಸಂಪರ್ಕ ಕಲ್ಪಿಸದೆ ಬಾಕಿ ಉಳಿದಿರುವ ಪಂಪ್ ಸೆಟ್‌ಗಳಿಗೆ ಶೀಘ್ರ ವಿದ್ಯುತ್ ಸಂಪರ್ಕ ಒದಗಿಸಬೇಕು ಎಂದು ಹೇಳಿದ್ದಾರೆ. ಬುಡಕಟ್ಟು ಜನರಿಗೆ ಅರಣ್ಯ ಜಮೀನು ಮಂಜೂರು ಮಾಡಲು 26,126 ಅರ್ಜಿಗಳು ಬಾಕಿ ಇವೆ. ಇವುಗಳನ್ನು ತ್ವರಿತವಾಗಿ ವಿಲೇವಾರಿ ಮಾಡಬೇಕು. ಅವರ ಹಾಡಿಗಳಿಗೆ ಹೋಗಲು ರಸ್ತೆ ಸಂಪರ್ಕ ಇರುವುದಿಲ್ಲ. ಈ ಬಗ್ಗೆ ಸೂಕ್ತ ಸುತ್ತೋಲೆ ಹೊರಡಿಸಿ ಅಗತ್ಯ ಮೂಲಸೌಕರ್ಯ ಒದಗಿಸಿ. ರಾಜ್ಯದಲ್ಲಿ 2225 ಗ್ರಾಮಗಳು…

Read More

ಬೆಂಗಳೂರು : ಚುನಾವಣೆ ನೀತಿ ಸಂಹಿತೆಯಿಂದಾಗಿ ಜೂನ್‌ ತಿಂಗಳ ಗೃಹಲಕ್ಷ್ಮಿ ಹಣ ಸ್ಪಲ್ಪ ತಡವಾಗಿದೆ. ಇಂದು ಅಥವಾ ನಾಳೆ ಬಿಡುಗಡೆಯಾಗಲಿದೆ. ಜುಲೈ ತಿಂಗಳದ್ದು ಇದೇ 15ರೊಳಗೆ ಪಾವತಿಯಾಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ತಿಳಿಸಿದ್ದಾರೆ. ಇನ್ನೂ ಸಾಕಷ್ಟು ಜನ ಬ್ಯಾಂಕ್ ನಲ್ಲಿ ಖಾತೆ (Bank Account) ಹೊಂದಿದ್ದರು ಕೂಡ ಆಧಾರ ಸೀಡಿಂಗ್ (Aadhar seeding) ಮಾಡಿಕೊಂಡಿಲ್ಲ. ಹೀಗಾಗಿ ಅವರಿಗೆ ಹಣ ಬರುತ್ತಿಲ್ಲ. ಗೃಹಲಕ್ಷ್ಮಿ ಯೋಜನೆಯಡಿ ನೋಂದಾಯಿಸಿಕೊಂಡರೂ ಸಹಾಯಧನ ಪಾವತಿಯಾಗದ ಫಲಾನುಭವಿಗಳು ಕೂಡಲೇ ಅರ್ಜಿಯೊಂದಿಗೆ ಇ-ಕೆವೈಸಿ ಸಂಬಂಧಿತ ಸಮಸ್ಯೆಗಳನ್ನು ಬ್ಯಾಂಕ್‌ಗಳಲ್ಲಿ ಪರಿಹರಿಸಿಕೊಳ್ಳಬೇಕು. ಬಳಿಕ ನ್ಯಾಯಬೆಲೆ ಅಂಗಡಿಗಳಿಗೆ ಹೋಗಿ, ಇ-ಕೆವೈಸಿ ಅಪ್‌ಡೇಟ್‌ ಮಾಡಿಸಿ, ದೃಢೀಕರಣ ಪಡೆದು ಅವುಗಳನ್ನು ತಮ್ಮ ಸಮೀಪದ ನ್ಯಾಯಬೆಲೆ ಅಂಗಡಿ ಕೇಂದ್ರಗಳ ಕಾರ್ಯಕರ್ತೆಯರಿಗೆ ಒದಗಿಸಿದರೆ, ಸಹಾಯಧನ ಪಾವತಿಸಲು ಕ್ರಮವಹಿಸಲಾಗುವುದು ಎನ್ನಲಾಗಿದೆ. https://twitter.com/KarnatakaVarthe/status/1810286391693066744?ref_src=twsrc%5Etfw%7Ctwcamp%5Etweetembed%7Ctwterm%5E1810286391693066744%7Ctwgr%5Ebbc6202f3887d6a920fcffd031858c3d08062e53%7Ctwcon%5Es1_c10&ref_url=https%3A%2F%2Fapi-news.dailyhunt.in%2F

Read More

ಬೆಂಗಳೂರು : ಆಗಸ್ಟ್-15ರ ಸ್ವಾತಂತ್ರ್ಯ ದಿನಾಚರಣೆ ಮತ್ತು ನವೆಂಬರ್- 260 ಸಂವಿಧಾನದ ದಿನಾಚರಣೆ ಸಂದರ್ಭದಲ್ಲಿ ಡಾ.ಬಿ.ಆರ್ ಅಂಬೇಡ್ಕ‌ರವರ ಭಾವಚಿತ್ರವನ್ನು ಕಡ್ಡಾಯವಾಗಿ ಇಡಬೇಕು ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಉಲ್ಲೇಖಿತ ಸುತ್ತೋಲೆಯಲ್ಲಿ ಸೂಚಿಸಿರುವಂತೆ, ಜನವರಿ 26ರ ಗಣರಾಜ್ಯೋತ್ಸವ ದಿನದೊಂದಿಗೆ ಆಗಸ್ಟ್-15ರ ಸ್ಥಾತಂತ್ರ್ಯ ದಿನಾಚರಣೆಯಂದು ಕೂಡ ರಾಜ್ಯದ ಎಲ್ಲಾ ಸರ್ಕಾರಿ ಕಛೇರಿಗಳು, ಸರ್ಕಾರಿ ಸ್ವಾಮ್ಯಕ್ಕೆ ಒಳಪಡುವ ಸಂಸ್ಥೆಗಳು ಹಾಗೂ ಶಾಲಾ ಕಾಲೇಜು ಸೇರಿದಂತೆ ಸರ್ಕಾರದ ವತಿಯಿಂದ ನಡೆಯುವ ಎಲ್ಲಾ ಸಮಾರಂಭಗಳಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಭಾವಚಿತ್ರದೊಂದಿಗೆ ಸಂವಿಧಾನದ ಪಿತಾಮಹ, ಭಾರತ ರತ್ನ ಡಾ।।ಬಿ.ಆರ್.ಅಂಬೇಡ್ಕರ್ ರವರ ಭಾವಚಿತ್ರವನ್ನು ಸಹ ಕಡ್ಡಾಯವಾಗಿ ಇಡುವಂತೆ ಸೂಚಿಸಿದೆ. ಮುಂದುವರೆದು, ನವೆಂಬರ್-26ರ ಸಂವಿಧಾನದ ದಿನಾಚರಣೆ ಸಂದರ್ಭದಲ್ಲಿ ಮೇಲ್ಕಂಡ ಎಲ್ಲಾ ಸಂಸ್ಥೆಗಳು, ಶಾಲಾ ಕಾಲೇಜು ಹಾಗೂ ಸರ್ಕಾರಿ ಕಛೇರಿಗಳಲ್ಲಿ ಸಂವಿಧಾನದ ಪಿತಾಮಹ, ಭಾರತ ರತ್ನ ಡಾ।।ಬಿ.ಆರ್.ಅಂಬೇಡ್ಕರ್ ರವರ ಭಾವಚಿತ್ರವನ್ನು ಕಡ್ಡಾಯವಾಗಿ ಇಡುವಂತೆ ಸೂಚಿಸಿದೆ.

Read More

ಬೆಂಗಳೂರು : ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಕೆಲವು ದಿನಗಳಿಂದ ನಿರಂತರವಾಗಿ ಮಳೆಯಾಗುತ್ತಿದ್ದು, ಹವಾಮಾನ ಇಲಾಖೆಯ ರೆಡ್ ಅಲರ್ಟ್ ಮುನ್ಸೂಚನೆಯಂತೆ ಮಳೆಯ ತೀವ್ರತೆ ಹೆಚ್ಚಾಗುವುದರಿಂದ ಮುಂಜಾಗೃತ ಕ್ರಮವಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ದಿನಾಂಕ:09.07.2024 ರಂದು ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ತಾಲೂಕಿನ ಅಂಗನವಾಡಿ ಕೇಂದ್ರಗಳಿಗೆ, ಹಾಗೂ ಪ್ರಾಥಮಿಕ, ಪ್ರೌಢ ಶಾಲೆ, ಪದವಿ ಪೂರ್ವ ಕಾಲೇಜುಗಳ ವಿದ್ಯಾರ್ಥಿಗಳಿಗೆ ರಜೆಯನ್ನು ಘೋಷಿಸಲಾಗಿರುತ್ತದೆ. ಉಳಿದಂತೆ ಎಲ್ಲಾ ಪದವಿ, ಸ್ನಾತಕೊತ್ತರ ಪದವಿ, ಡಿಪ್ಲೋಮ, ಇಂಜಿನಿಯರಿಂಗ್, ಐ.ಟಿ.ಐ ಗಳಿಗೆ ರಜೆ ಘೋಷಿಸಿರುವುದಿಲ್ಲ. ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಸೋಮವಾರ ಬೆಳಗ್ಗೆ ಉಡುಪಿ ನಗರದ ಹಲವು ಪ್ರದೇಶಗಳಲ್ಲಿ ಕೃತಕ ನೆರೆ ಸೃಷ್ಟಿಯಾಗಿದ್ದು, ನೂರಾರು ಮನೆಗಳು ಜಲಾವೃತಗೊಂಡಿವೆ. ಇದರಿಂದ ನಗರದಲ್ಲಿ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಹಲವು ಅಂಗಡಿಗಳಿಗೆ ನೀರು ನುಗ್ಗಿದ ಪರಿಣಾಮ ಸೊತ್ತುಗಳು ಹಾನಿಯಾಗಿ ಲಕ್ಷಾಂತರ ರೂ. ನಷ್ಟ ಉಂಟಾಗಿದೆ. ನೆರೆ ಯಿಂದ ಸಿಲುಕಿರುವ ಮನೆಗಳಿಂದ 30ಕ್ಕೂ ಅಧಿಕ ಮಂದಿಯನ್ನು ಅಗ್ನಿಶಾಮಕ ದಳ, ನಗರಸಭೆ ಸಿಬ್ಬಂದಿ ರಕ್ಷಿಸಿ…

Read More

ನವದೆಹಲಿ: ಸಂದೇಶ್ಖಾಲಿಯಲ್ಲಿ ಮಹಿಳೆಯರ ವಿರುದ್ಧದ ಅಪರಾಧಗಳು ಮತ್ತು ಭೂ ಕಬಳಿಕೆ ಆರೋಪಗಳ ಬಗ್ಗೆ ಸಿಬಿಐ ತನಿಖೆಗೆ ನಿರ್ದೇಶಿಸಿದ ಕಲ್ಕತ್ತಾ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಪಶ್ಚಿಮ ಬಂಗಾಳ ಸರ್ಕಾರ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ ವಜಾಗೊಳಿಸಿದೆ. “ಯಾರನ್ನಾದರೂ ರಕ್ಷಿಸಲು ರಾಜ್ಯವು ಏಕೆ ಆಸಕ್ತಿ ವಹಿಸಬೇಕು?” ಎಂದು ನ್ಯಾಯಮೂರ್ತಿಗಳಾದ ಬಿ.ಆರ್.ಗವಾಯಿ ಮತ್ತು ಕೆ.ವಿ.ವಿಶ್ವನಾಥನ್ ಅವರ ನ್ಯಾಯಪೀಠ ಅಭಿಪ್ರಾಯಪಟ್ಟಿದೆ, ವಿಚಾರಣೆಯ ಕೊನೆಯ ದಿನಾಂಕದಂದು, ಸುಪ್ರೀಂ ಕೋರ್ಟ್ ಈ ನಿರ್ದಿಷ್ಟ ಪ್ರಶ್ನೆಯನ್ನು ಕೇಳಿದ ನಂತರ ಈ ವಿಷಯವನ್ನು ಮುಂದೂಡಬೇಕು ಎಂದು ರಾಜ್ಯದ ಪರ ವಕೀಲರು ಹೇಳಿದರು. ” ಕಲ್ಕತ್ತಾ ಹೈಕೋರ್ಟ್ನ ಏಪ್ರಿಲ್ 10 ರ ಆದೇಶವನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿದ್ದ ಮನವಿಯನ್ನು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸಿತು. ಏಪ್ರಿಲ್ 29 ರಂದು ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಕೆಲವು ಖಾಸಗಿ ವ್ಯಕ್ತಿಗಳ ಹಿತಾಸಕ್ತಿಯನ್ನು ರಕ್ಷಿಸಲು ರಾಜ್ಯವು ಏಕೆ ಅರ್ಜಿದಾರರಾಗಿ ಬರಬೇಕು ಎಂದು ಪಶ್ಚಿಮ ಬಂಗಾಳ ಸರ್ಕಾರವನ್ನು ಕೇಳಿತ್ತು. ಹೈಕೋರ್ಟ್ ಆದೇಶವು ಪೊಲೀಸ್ ಪಡೆ…

Read More

ಹಾವೇರಿ : ರಾಜ್ಯದಲ್ಲಿ ಡೆಂಗ್ಯೂ ಜ್ವರದ ಅಬ್ಬರದ ನಡುವೆ ಇಲಿ ಜ್ವರದ ಆತಂಕ ಎದುರಾಗಿದ್ದು, ಹಾವೇರಿ ಜಿಲ್ಲೆಯಲ್ಲಿ ಇಲಿ ಜ್ವರಕ್ಕೆ ಮೊದಲ ಬಲಿಯಾಗಿದೆ.  ಹಾವೇರಿ ಜಿಲ್ಲೆಯ ಹಾನಗಲ್ಲ ತಾಲೂಕಿನ ಅರಳೇಶ್ವರ  ಗ್ರಾಮದ ಉಮೇಶ್‌ (೭೨) ಇಲಿಜ್ವರದಿಂದ ಮೃತಪಟ್ಟಿದ್ದಾರೆ. ಇಲಿ ಜ್ವರ ದೃಢಪಟ್ಟ ಹಿನ್ನೆಲೆಯಲ್ಲಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಎರಡು ದಿನಗಳ ಹಿಂದೆಯೇ ಮೃತಪಟ್ಟಿದ್ದಾರೆ. ಇನ್ನೂ ಹಾವೇರಿ ತಾಲೂಕಿನಲ್ಲೂ ಬಾಲಕನಿಗೆ ಇಲಿ ಜ್ವರ ದೃಢಪಟ್ಟಿದ್ದು, ಹಾವೇರಿಯ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

Read More

ನವದೆಹಲಿ : ಇಂದಿನ ಇಂಟರ್‌ ನೆಟ್‌ ಯುಗದಲ್ಲಿ ಜನರು ರಿಲ್ಸ್‌ ಹುಚ್ಚಿಗೆ ಮಾಡಬಾರದ ಕೆಲಸಗಳನ್ನು ಮಾಡುತ್ತಿದ್ದಾರೆ. ಈ ನಡುವೆ ನವ ಜೋಡಿಯೋಂದು ಲೈಕ್ಸ್‌ ಹುಚ್ಚಿಗೆ ಬಿದ್ದು ಮೊದಲ ರಾತ್ರಿ ಬಳಿಕ ವಿಡಿಯೋ ಮಾಡಿ ಹರಿಬಿಟ್ಟಿದ್ದು, ವಿಡಿಯೋ ಭಾರೀ ವೈರಲ್‌ ಆಗಿದೆ. ಹೊಸದಾಗಿ ಮದುವೆಯಾದ ನವ ಜೋಡಿಗಳು ಫಸ್ಟ್‌ ನೈಟ್‌ ಮುಗಿದ ಬಳಿಕ ವಿಡಿಯೋ ಮಾಡಿ ಹರಿಬಿಟ್ಟಿದ್ದು, ಜನರು ಸಾಮಾಜಿಕ ಮಾಧ್ಯಮದಲ್ಲಿ ದಂಪತಿಗಳನ್ನು ಟ್ರೋಲ್ ಮಾಡುತ್ತಿದ್ದಾರೆ. ವೀಡಿಯೊದಲ್ಲಿ ದಂಪತಿಗಳು ಕಾಣಿಸಿಕೊಂಡಿದ್ದಾರೆ, ಇಬ್ಬರೂ ಇತ್ತೀಚೆಗೆ ಮದುವೆಯಾಗಿದ್ದಾರೆ ಎಂದು ತೋರುತ್ತದೆ. ವರನು ವಧುವನ್ನು ಕೇಳುತ್ತಿದ್ದಾನೆ, ನಮ್ಮ ಮದುವೆಯ ರಾತ್ರಿ ಹೇಗಿತ್ತು? ಎಂದು ಕೇಳಿದ್ದಾನೆ. ಇದಕ್ಕೆ ಚೆನ್ನಾಗಿತ್ತು ಎಂದು ಮದುಮಗಳು ಹೇಳಿದ್ದಾರೆ. ಬಳಿಕ ಇಬ್ಬರೂ ಹಾಸಿಗೆಯ ಕಡೆಗೆ ಹೋಗಿ ಅಲಂಕಾರಗಳನ್ನು ತೋರಿಸಲು ಪ್ರಾರಂಭಿಸಿದರು. https://twitter.com/SaffronSunanda/status/1809145106441654293?ref_src=twsrc%5Etfw%7Ctwcamp%5Etweetembed%7Ctwterm%5E1809145106441654293%7Ctwgr%5E286b61c1f55d2cb6e31203e2e90b9c23a1e4e1c6%7Ctwcon%5Es1_c10&ref_url=https%3A%2F%2Fapi-news.dailyhunt.in%2F ವಧು ಮತ್ತು ವರನ ಮಲಗುವ ಕೋಣೆಯ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ಸಾಕಷ್ಟು ವೈರಲ್ ಆಗುತ್ತಿದೆ. ಸೋಷಿಯಲ್ ಮೀಡಿಯಾದಲ್ಲಿ ಅನೇಕ ಜನರು ಅವರಿಬ್ಬರನ್ನು ಈ ಕೃತ್ಯಕ್ಕಾಗಿ ಟ್ರೋಲ್ ಮಾಡುತ್ತಿದ್ದಾರೆ. ಈ ವಿಡಿಯೋವನ್ನು ಸುನಂದಾ…

Read More

ಬೆಂಗಳೂರು : ʻರೈತ ಹಂತಕʼ ಸಿದ್ದರಾಮಯ್ಯ ಸರ್ಕಾರದ 1, ವರ್ಷದ ಅವಧಿಯಲ್ಲಿ 1,182 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವಿಪಕ್ಷ ನಾಯಕ ಆರ್.‌ ಅಶೋಕ್‌ ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು ಟ್ವೀಟ್‌ ಮಾಡಿರುವ ಆರ್‌. ಅಶೋಕ್‌, ಕರ್ನಾಟಕದ ಇತಿಹಾಸದಲ್ಲಿಯೇ ಅತಿ ಭಂಡ ಸರ್ಕಾರವೆಂದರೆ ಅದು ರೈತ ವಿರೋಧಿ, ರೈತ ಹಂತಕ ಸಿದ್ದರಾಮಯ್ಯ ಸರ್ಕಾರ. ರೈತ ಹಂತಕ Indian National Congress – Karnataka ಸರ್ಕಾರದ ಒಂದು ವರ್ಷದ ಅವಧಿಯಲ್ಲಿ ರಾಜ್ಯದ 1,182 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದು ಕಾಂಗ್ರೆಸ್‌ನ ರೈತ ವಿರೋಧಿ ನೀತಿಯ ಜ್ವಲಂತ ನಿದರ್ಶನ. ಪರಿಹರಕ್ಕಾಗಿಯೇ ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಾರೆ ಎಂದು ಅವಹೇಳನ ಮಾಡುತ್ತಾ, ರೈತರಿಗೆ ಸಿಗಬೇಕಾದ ಪರಿಹಾರ ಕೊಡದೇ ಮೀನಮೇಷ ಎಣಿಸುತ್ತಾ ಕಾಲಹರಣ ಮಾಡಿದ ಕಾಂಗ್ರೆಸ್ ಸರ್ಕಾರ ರೈತರನ್ನ ಆತ್ಮಹತ್ಯೆಗೆ ಶರಣಾಗುವಂತೆ ಮಾಡಿದೆ. ಅನ್ನದಾತರ ಶಾಪ ಈ ಸರ್ಕಾರಕ್ಕೆ ತಟ್ಟದೇ ಇರದು ಎಂದಿದ್ದಾರೆ. ಸ್ವಯಂಘೋಷಿತ ಆರ್ಥಿಕ ತಜ್ಞ ಸಿಎಂ ಸಿದ್ದರಾಮಯ್ಯನವರ ದುರಾಡಳಿತದಲ್ಲಿ, ಗುತ್ತಿಗೆದಾರರ ಬಾಕಿ ಹಣ ಪಾವತಿಗೆ ದುಡ್ಡಿಲ್ಲ,…

Read More

ಬೆಂಗಳೂರು : ಜಿಲ್ಲಾಧಿಕಾರಿಗಳಿಗೆ ಮಹಾರಾಜರಲ್ಲ, ಬೀದಿಗಿಳಿದು ʻಡೆಂಗ್ಯೂʼ ನಿಯಂತ್ರಿಸದಿದ್ದರೆ ಕಠಿಣ ಕ್ರಮಕೈಗೊಳ್ಳಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಜಿಲ್ಲಾಧಿಕಾರಿಗಳಿಗೆ ಖಡಕ್‌ ಎಚ್ಚರಿಕೆ ನೀಡಿದ್ದಾರೆ. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸೋಮವಾರ ನಡೆದ ಡಿಸಿಗಳು ಮತ್ತು ಸಿಇಒಗಳು ಹಾಗೂ ಉಸ್ತುವಾರಿ ಕಾರ್ಯದರ್ಶಿಗಳ ಸಭೆಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ತಹಶೀಲ್ದಾರ್, ಜಿಲ್ಲಾಧಿಕಾರಿಗಳ ಸಮೇತ ಜಿಲ್ಲಾ , ತಾಲ್ಲೂಕು ಮಟ್ಟದ ಅಧಿಕಾರಿಗಳು ಜನರನ್ನು ನೇರ ಭೇಟಿ ಮಾಡುತ್ತಿಲ್ಲ. ಅಧಿಕಾರಿಗಳು ಕರ್ತವ್ಯ ನಿರ್ವಹಿಸುವ ಕಡೆಯೇ ಉಳಿಯಬೇಕು ಎನ್ನುವ ನನ್ನ ಸೂಚನೆ ಸರಿಯಾಗಿ ಪಾಲನೆ ಆಗುತ್ತಿಲ್ಲ. PDO ಗಳು, VA ಗಳು ಕೆಲಸ ಮಾಡುವ ಜಾಗದಲ್ಲೇ ಉಳಿಯಬೇಕು. ಈ ಬಗ್ಗೆ DC, CEO ಗಳು ಗಮನ ಹರಿಸಬೇಕು ಎಂದರು. ಸಂಚಾರಿ ಕುರಿಗಾಹಿಗಳಿಗೆ ಗುರುತಿನ ಚೀಟಿ ನೀಡಬೇಕು, ಕುರಿ-ಮೇಕೆಗಳ ಟೆಂಟ್ ಹಾಕಿರುವ ಸ್ಥಳಕ್ಕೇ ಹೋಗಿ ಲಸಿಕೆ ಮತ್ತು ಚುಚ್ಚುಮದ್ದುಗಳನ್ನು ನೀಡಬೇಕು, ಸಂಚಾರಿ ಕುರಿಗಾಹಿಗಳಿಗೆ ಬಂದೂಕು ಲೈಸೆನ್ಸ್ ಕೊಡುವುದು ಕಡ್ಡಾಯ. ಕುರಿ ಕಳ್ಳತನ ತಡೆಯಲು ಇದು ಅಗತ್ಯ ಎನ್ನುವ ಸ್ಪಷ್ಟ ಸೂಚನೆಗಳನ್ನು ನೀಡಿದರು ಮಣ್ಣಿನ…

Read More

ಬೆಂಗಳೂರು : ರೈತರಿಗೆ ಮಣ್ಣಿನ ಆರೋಗ್ಯ ಕಾರ್ಡ್ ಅನ್ನು ಕಡ್ಡಾಯವಾಗಿ ನೀಡಬೇಕು. ಪ್ರತೀ ಎರಡು ವರ್ಷಕ್ಕೊಮ್ಮೆ ಮಣ್ಣಿನ ಪರೀಕ್ಷೆ ನಡೆಸಬೇಕು ಎಂದು ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸೋಮವಾರ ನಡೆದ ಡಿಸಿಗಳು ಮತ್ತು ಸಿಇಒಗಳು ಹಾಗೂ ಉಸ್ತುವಾರಿ ಕಾರ್ಯದರ್ಶಿಗಳ ಸಭೆಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಮಣ್ಣಿನ ಫಲವತ್ತತೆ ಕಡಿಮೆ ಆಗುತ್ತಿದೆ. ಇದನ್ನು ಹೆಚ್ಚಿಸಲು ಅಗತ್ಯ ಕ್ರಮ ಕೈಗೊಳ್ಳುವ ಜೊತೆಗೆ ರೈತರಿಗೆ ಮಣ್ಣಿನ ಆರೋಗ್ಯ ಕಾರ್ಡ್ ಅನ್ನು ಕಡ್ಡಾಯವಾಗಿ ನೀಡಬೇಕು. ಪ್ರತೀ ಎರಡು ವರ್ಷಕ್ಕೊಮ್ಮೆ ಮಣ್ಣಿನ ಪರೀಕ್ಷೆ ನಡೆಸಬೇಕು ಎಂದು ಸೂಚಿಸಿದ್ದಾರೆ. ಸರ್ಕಾರದ ಕಾರ್ಯಕ್ರಮಗಳು, ಯೋಜನೆಗಳು ಪರಿಣಾಮಕಾರಿಯಾಗಿ ಜನ ಸಾಮಾನ್ಯರಿಗೆ ತಲುಪಿಸಲು ಜಿಲ್ಲಾ ಮಟ್ಟದ ಅಧಿಕಾರಿಗಳು ಕ್ರಿಯಾಶೀಲತೆಯಿಂದ, ಸಮನ್ವಯತೆಯಿಂದ ಕೆಲಸ ಮಾಡಬೇಕು. ಆಗ ಮಾತ್ರ ಸರ್ಕಾರದ ಕಾಳಜಿಗಳು ಜನರಿಗೆ ತಲುಪಲು ಸಾಧ್ಯ’ ಎಂದರು. ಸಂಚಾರಿ ಕುರಿಗಾಹಿಗಳಿಗೆ ಗುರುತಿನ ಚೀಟಿ ನೀಡಬೇಕು, ಕುರಿ-ಮೇಕೆಗಳ ಟೆಂಟ್ ಹಾಕಿರುವ ಸ್ಥಳಕ್ಕೇ ಹೋಗಿ ಲಸಿಕೆ ಮತ್ತು ಚುಚ್ಚುಮದ್ದುಗಳನ್ನು ನೀಡಬೇಕು, ಸಂಚಾರಿ ಕುರಿಗಾಹಿಗಳಿಗೆ ಬಂದೂಕು ಲೈಸೆನ್ಸ್…

Read More