Author: kannadanewsnow57

ಬೆಂಗಳೂರು : ರೇಣುಕಾಸ್ವಾಮಿ ಹತ್ಯೆ ಪ್ರಕರಣ ಸಂಬಂಧ ತನಿಖೆ ನಡೆಸುತ್ತಿರುವ ಪೊಲೀಸರು ಇದೀಗ ಶಾಸಕರೊಬ್ಬರ ಕಾರು ಚಾಲಕನಿಗೆ ಎಸ್‌ ಐಟಿ ನೋಟಿಸ್‌ ನೀಡಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ಪ್ರದೋಶ್‌ ಗೆ ಪಿಕಪ್‌ ಮಾಡಿದ್ದ ಆರೋಪ ಸಂಬಂಧ ಶಾಸಕರೊಬ್ಬರ ಕಾರು ಚಾಲಕರಾಗಿರುವ ಕಾರ್ತಿಕ್‌ ಪುರೋಹಿತ್‌ ಗೆ ವಿಚಾರಣೆಗೆ ಹಾಜರಾಗುವಂತೆ ಎಸ್‌ ಐಟಿ ನೋಟಿಸ್‌ ನೀಡಿದ್ದಾರೆ. ಪ್ರಕರಣ ಆರೋಪಿ ಪ್ರದೋಶ್‌ ನನ್ನು ತನ್ನ ಕಾರಿನಲ್ಲೇ ಗಿರಿನಗರಕ್ಕೆ ಕಾರ್ತಿಕ್‌ ಪುರೋಹಿತ್‌ ಕರೆತಂದಿದ್ದ ಎನ್ನಲಾಗಿದ್ದು, ಅಂದು ಏನಾಯ್ತು ಎಂಬುದರ ಕುರಿತು ಮಾಹಿತಿ ಪಡೆಯಲು ವಿಚಾರಣೆಗೆ ಹಾಜರಾಗುವಂತೆ ಎಸ್‌ ಐಟಿ ನೋಟಿಸ್‌ ನೀಡಿದೆ.

Read More

ಯಾದಗಿರಿ : ಯಾದಗಿರಿಯಲ್ಲಿ ಘೋರ ದುರಂತವೊಂದು ಸಂಭವಿಸಿದ್ದು, 2 ತಿಂಗಳ ಮಗುವನ್ನು ಬಾವಿಗೆ ಎಸೆದ ಅಪ್ರಾಪ್ತ ಬಾಲಕಿ ಕೊಲೆ ಮಾಡಿರುವ ಘಟನೆ ನಡೆದಿದೆ. ಯಾದಗಿರಿಯ ಅಂಬೇಡ್ಕರ್ ನಗರದ ನಾಗೇಶ ಹಾಗೂ ಚಿಟ್ಟೆಮ್ಮ ದಂಪತಿಯ ಮಗಳಾದ ಮೀನಾಕ್ಷಿ (2ತಿಂಗಳು)ಯನ್ನು ಪೋಸ್ಟ್ ಆಫೀಸ್ ಹಿಂದೆಯಿರುವ ಬಾವಿಯಲ್ಲಿ ಎಸೆದು ಅಪ್ರಾಪ್ತೆ ಬಾಲಕಿ ಕೊಲೆ ಮಾಡಿದ್ದಳು, ಘಟನೆ ಬಗ್ಗೆ ಶನಿವಾರ ನಗರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆರೋಪಿ ಬಾಲಕಿಯು ಮಗುವಿನ ಚಿಕ್ಕಪ್ಪನನ್ನು ಪ್ರೀತಿಸುತ್ತಿದ್ದಳು. ಆದರೆ, ಸಂಬಂಧದಲ್ಲಿ ತಂಗಿಯಾಗಿದ್ದ ಆರೋಪಿಯನ್ನು ಪ್ರೀತಿಸದ ಯುವಕ ಬೇರೆ ಯುವತಿಯನ್ನು ಪ್ರೀತಿಸುತ್ತಿದ್ದ ಎನ್ನಲಾಗಿದೆ. ಹೀಗಾಗಿ ಯುವಕನನ್ನು ಜೈಲಿಗೆ ಕಳುಹಿಸಲು ಬಾಲಕಿಯೇ ಎರಡು ತಿಂಗಳ ಮಗುವನ್ನು ಕೊಲೆ ಮಾಡಿದ್ದಾಳೆ ಎಂದು ಯಾದಗಿರಿ ಪೋಲಿಸರು ತಿಳಿಸಿದ್ದಾರೆ.

Read More

ಬೆಂಗಳೂರು : ಉದ್ಯೋಗಾಕಾಂಕ್ಷಿಗಳಿಗೆ ಕರ್ನಾಟಕ ರಾಜ್ಯ ಸಾರಿಗೆ ಸಂಸ್ಥೆ (KSRTC) ಭರ್ಜರಿ ಸಿಹಿಸುದ್ದಿ ನೀಡಿದ್ದು, ಕೆಎಸ್‌ಆರ್‌ಟಿಸಿ ಚಾಲಕ, ಅಪ್ರೆಂಟಿಸ್ ಟ್ರೈನಿಗಳು, ಎಸ್‌ಡಿಎ, ಕಚೇರಿ ಸಹಾಯಕ ಸೇರಿದಂತೆ 3553 ಹುದ್ದೆಗಳ ನೇಮಕಾತಿಗೆ ಅನುಮೋದನೆ ನೀಡಲಾಗಿದೆ. ನೇಮಕಾತಿ ಕುರಿತು ಇಲ್ಲಿದೆ ಸಂಪೂರ್ಣ ಮಾಹಿತಿ ಸಂಸ್ಥೆ ಹೆಸರು: KSRTC ಒಟ್ಟು ಹುದ್ದೆ: 3553 ಅಧಿಸೂಚನೆ: ಶೀಘ್ರವೇ  ಪ್ರಕಟ ಅರ್ಜಿ ಸಲ್ಲಿಕೆ ದಿನಾಂಕ: ಶೀಘ್ರವೇ ಪ್ರಕಟವಾಗಲಿದೆ ಅಧಿಕೃತ ವೆಬ್‌ಸೈಟ್: ಹೆಚ್ಚಿನ ಮಾಹಿತಿಗೆ ಸಂಪರ್ಕಿಸಿ https://ksrtc.in/ ವಯೋಮಿತಿ ಕೆಎಸ್‌ಆರ್‌ಟಿಸಿ ನೇಮಕಾತಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯ ಕನಿಷ್ಠ ವಯೋಮಿತಿಯನ್ನು 18 ವರ್ಷದಿಂದ ಗರಿಷ್ಠ 40 ವರ್ಷಗಳವರೆಗೆ ನಿಗದಿ ಮಾಡಲಾಗಿದೆ. ಅರ್ಜಿ ಶುಲ್ಕ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳ ಪೈಕಿ ಸಾಮಾನ್ಯ 2A, 2B, 3A ಮತ್ತು 3B ಅವರಿಗೆ ರೂ. 500 ನಿಗದಿಪಡಿಸಲಾಗಿದೆ. ಇತರ ವರ್ಗದ ಅಭ್ಯರ್ಥಿಗಳಿಗೆ ಇತರರಿಗೆ ರೂ. 250 ನಗದಿ ಮಾಡಲಾಗಿದೆ. ಆನ್ ಲೈನ್ ಮೂಲಕ ಅರ್ಜಿ ಶುಲ್ಕ ಪಾವತಿಸಬೇಕಿದೆ. ಶೈಕ್ಷಣಿಕ ಅರ್ಹತೆ ಅರ್ಜಿ ಸಲ್ಲಿಸಲು ಇಷ್ಟವಿರುವ ಅರ್ಹ…

Read More

ಬೆಂಗಳೂರು : ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಡೆಂಗ್ಯೂ ಪ್ರಕರಣಗಳು ಹೆಚ್ಚಳವಾಗಿದ್ದು, ರಾಜ್ಯದಲ್ಲಿ ಭಾನುವಾರ ಒಂದೇ ದಿನ 159 ಮಂದಿಗೆ ಡೆಂಗ್ಯೂ ಜ್ವರ ದೃಢಪಟ್ಟಿದೆ. ಈ ಮೂಲಕ ಪ್ರಸಕ್ತ ವರ್ಷದಲ್ಲಿ ಡೆಂಗ್ಯೂ ಪ್ರಕರಣಗಳ ಸಂಖ್ಯೆ 7,165ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಈ ವರ್ಷ 93012 ಡೆಂಗೆ ಶಂಕಿತರನ್ನು ಗುರುತಿಸಿ, ತಪಾಸಣೆಗೆ ಒಳಪಡಿಸಲಾಗಿದೆ. 40918 ಮಂದಿಯ ರಕ್ತ ಪರೀಕ್ಷೆ ನಡೆಸಲಾಗಿದೆ. ಒಟ್ಟು 5,098 ಮಂದಿಗೆ ಡೆಂಗ್ಯೂ ದೃಪಟ್ಟಿದ್ದರೆ ಬಿಬಿಎಂಪಿ ವ್ಯಾಪ್ತಿಯಲ್ಲಿ ಒಟ್ಟು 1,908 ಮಂದಿ ಸೇರಿ ಒಟ್ಟು 7,165 ಮಂದಿಗೆ ಡೆಂಗ್ಯೂ ಜ್ವರ ಇರುವುದು ದೃಢಪಟ್ಟಿದೆ. ಭಾನುವಾರ ಒಂದೇ ದಿನ ಬಿಬಿಎಂಪಿ ವ್ಯಾಪ್ತಿ ಸೇರಿ ಒಟ್ಟು 159 ಮಂದಿಗೆ ಸೋಂಕು ದೃಢಪಟ್ಟಿದೆ. ಡೆಂಗ್ಯೂ ಜ್ವರದ ಲಕ್ಷಣಗಳು * ತೀವ್ರ ಹಠಾತ್ ಜ್ವರ * ತೀವ್ರ ತಲೆನೋವು * ತೀವ್ರ ಕೀಲು ಮತ್ತು ಸ್ನಾಯು ನೋವು * ರೆಟ್ರೊ-ಆರ್ಬಿಟಲ್ ನೋವು, ಕಣ್ಣುಗಳ ಸಣ್ಣದೊಂದು ಚಲನೆಯಿಂದಲೂ ಇದು ಉಲ್ಬಣಗೊಳ್ಳಬಹುದು * ವಾಕರಿಕೆ ಮತ್ತು ವಾಂತಿ * ದಡಾರ: ದದ್ದುಗಳು…

Read More

ಬೆಂಗಳೂರು: ಕರಾವಳಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದೂ ಮಳೆಯಾಗುವ ಸಾಧ್ಯತೆ ಇದ್ದು, ಹಲವು ಜಿಲ್ಲೆಗಳಿಗೆ ಹವಾಮಾನ ಇಲಾಖೆ ಆರೆಂಜ್‌, ಯೆಲ್ಲೋ ಅಲರ್ಟ್‌ ಘೋಷಿಸಿದೆ. ಜುಲೈ 8 ಮತ್ತು 9 ರಂದು ಕರಾವಳಿಯ ಎಲ್ಲಾ ಜಿಲ್ಲೆಗಳಲ್ಲಿ ಅಲರ್ಟ್ ನೀಡಲಾಗಿದೆ. ಇದೇ ಅವಧಿಯಲ್ಲಿ ಒಳನಾಡಿನ ಜಿಲ್ಲೆಗಳಲ್ಲೂ ವ್ಯಾಪಕ ಮಳೆಯಾಗಲಿದ್ದು, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳಿಗೆ ಮೊದಲ ದಿನ ಆರೆಂಜ್, ಎರಡನೇ ದಿನ ಯೆಲ್ಲೊ ಅಲರ್ಟ್ ನೀಡಲಾಗಿದೆ. ಬೆಳಗಾವಿ, ಬೀದರ್, ಕಲಬುರಗಿ, ಯಾದಗಿರಿ ಜಿಲ್ಲೆಗಳಿಗೆ ಎರಡು ದಿನ ಯೆಲ್ಲೊ ಅಲರ್ಟ್ ನೀಡಲಾಗಿದೆ. ಇನ್ನೂ ಉತ್ತರ ಕನ್ನಡ ಜಿಲ್ಲೆಯ ಕರಾವಳಿ ಭಾಗದಲ್ಲಿ ವ್ಯಾಪಕ ಮಳೆ ಸುರಿಯುತ್ತಿರುವುದರಿಂದ, ಶಾಲಾ ಮಕ್ಕಳ ಹಿತದೃಷ್ಟಿಯಿಂದ ಭಟ್ಕಳ, ಹೊನ್ನಾವರ, ಕುಮಟಾ, ಅಂಕೋಲಾ ಮತ್ತು ಕಾರವಾರ ತಾಲೂಕಿನ ಎಲ್ಲಾ ಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ಜುಲೈ 8 ರಂದು ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಲಕ್ಷ್ಮೀ ಪ್ರಿಯ ತಿಳಿಸಿದ್ದಾರೆ.

Read More

ಬೆಂಗಳೂರು : ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಭೀಕರ ಹತ್ಯೆ ನಡೆದಿದ್ದು, ಹಳೇ ದ್ವೇಷದ ಹಿನ್ನೆಲೆಯಲ್ಲಿ ಗ್ರಾಮಪಂಚಾಯಿತಿ ಸದಸ್ಯನ ಬರ್ಬರವಾಗಿ ಕೊಲೆ ಮಾಡಲಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಬೈಲನರಸಾಪುರ ಗ್ರಾಮದಲ್ಲಿ ಗ್ರಾಮಪಂಚಾಯಿತಿ ಸದಸ್ಯರೊಬ್ಬರನ್ನು ದುಷ್ಕರ್ಮಿ ಬರ್ಬರವಾಗಿ ಹತ್ಯೆ ಮಾಡಿದ್ದಾನೆ. ಬೈಲನರಸಾಪುರ ಗ್ರಾಮಪಂಚಾಯಿತಿ ಸದಸ್ಯ ಅಪಾಕ್‌ ಅಮೀರ್‌ ಖಾನ್‌ (45) ನನ್ನು ಅದೇ ಗ್ರಾಮದ ಮೆಹಬೂಬ್‌ ಎಂಬಾತ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದಾನೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.

Read More

ಬೆಂಗಳೂರು : ಗ್ಯಾರಂಟಿ ಯೋಜನೆ ಫಲಾನುಭವಿಗಳಿಗೆ ರಾಜ್ಯ ಸರ್ಕಾರ ಬಿಗ್‌ ಶಾಕ್‌ ನೀಡಲು ತಯಾರಿ ನಡೆಸುತ್ತಿದ್ದು, ಗ್ಯಾರಂಟಿ ಫಲಾನುಭವಿಗಳಲ್ಲಿ ಶೇ.50ರಷ್ಟು ಕಡಿಮೆ ಮಾಡಲು ರಾಜ್ಯ ಸರ್ಕಾರ ಸಿದ್ಧತೆ ನಡೆಸಿದೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆ‌ರ್.ಅಶೋಕ್ ಹೇಳಿದ್ದಾರೆ. ಸಂಸದ ಡಾ.ಕೆ. ಸುಧಾಕರ್ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಅಭಿವೃದ್ಧಿ ಕೆಲಸಗಳಿಗೆ ಸರಕಾರ ಅನುದಾನ ನೀಡುತ್ತಿಲ್ಲ. ಹೀಗಾಗಿ ಗ್ಯಾರಂಟಿ ಫಲಾನುಭವಿಗಳಲ್ಲಿ ಶೇ.50ರಷ್ಟು ಕಡಿಮೆ ಮಾಡಲು ರಾಜ್ಯ ಸರ್ಕಾರ ತಯಾರಿ ನಡೆಸುತ್ತಿದೆ ಎಂದು ತಿಳಿಸಿದ್ದಾರೆ. ಗ್ಯಾರಂಟಿಗಳಿಗಾಗಿ ಹಾಲು, ಮದ್ಯ, ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಮಾಡಿರುವ ರಾಜ್ಯ ಸರ್ಕಾರ ರೈತರಿಗೆ 900 ಕೋಟಿ ರೂ. ಹಾಲಿನ ಪ್ರೋತ್ಸಾಹ ಧನವೂ ನೀಡಿಲ್ಲ. ಈಗಲೂ ವಿಧಾನಸಭಾ ಚುನಾವಣೆ ನಡೆದರೆ ನಾವು 143 ಸ್ಥಾನ ಗೆಲ್ಲುತ್ತೇವೆ ಎಂದರು.

Read More

ಬೆಂಗಳೂರು : ಏಳನೇ ವೇತನ ಆಯೋಗದ ವರದಿ, ಹಳೆ ಪಿಂಚಣಿ ವ್ಯವಸ್ಥೆ ಹಾಗೂ ಆರೋಗ್ಯ ಸಂಜೀವಿನಿ ಯೋಜನೆ ಜಾರಿಗೆ ಆಗ್ರಹಿಸಿ ಜುಲೈ 29 ರಿಂದ ʻಅನಿರ್ದಿಷ್ಟಾವಧಿ ಮುಷ್ಕರಕ್ಕೆ ಸರ್ಕಾರಿ ನೌಕರರು ನಿರ್ಧರಿಸಿದ್ದಾರೆ. ಚಿಕ್ಕಮಗಳೂರಿನಲ್ಲಿ ಭಾನುವಾರ ನಡೆದ ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ಕಾರ್ಯಕಾರಿಣಿ ಸಭೆ ಬಳಿಕ ಮಾತನಾಡಿದ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.‌ ಷಡಕ್ಷರಿ,7ನೇ ವೇತನ ಆಯೋಗ ವರದಿ ನೀಡಿ 19 ತಿಂಗಳುಗಳೇ ಕಳೆದರೂ ರಾಜ್ಯ ಸರಕಾರ ಇನ್ನೂ ಜಾರಿಗೊಳಿಸಿಲ್ಲ. ನೌಕರರಿಗೆ ಹಳೆ ಪಿಂಚಣಿ ಯೋಜನೆ ಮುಂದುವರಿಸುವುದು, ಆರೋಗ್ಯ ಸಂಜೀವಿನಿ ಯೋಜನೆ ಜಾರಿ ಸೇರಿದಂತೆ ಯಾವುದೇ ಬೇಡಿಕೆಗಳಿಗೂ ಸರ್ಕಾರ ಸ್ಪಂದಿಸಿಲ್ಲ ಹೀಗಾಗಿ ಅನಿರ್ದಿಷ್ಟಾವಧಿ ಮುಷ್ಕರ ನಡೆಸಲಾಗುವುದು ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ. ಎರಡು ಹಂತಗಳಲ್ಲಿ ಹೋರಾಟ ನಡೆಯಲಿದೆ. ಮೊದಲ ಹಂತವಾಗಿ ಜುಲೈ 8ರಿಂದ 14ರವರೆಗೆ ತಾಲೂಕು, ಜಿಲ್ಲಾ ಕೇಂದ್ರಗಳಲ್ಲಿ ಮನವಿ ಸಲ್ಲಿಕೆ ಆಂದೋಲನ ನಡೆಯಲಿದೆ. ಮನವಿ ಸಲ್ಲಿಕೆ ನಂತರ ಜುಲೈ 23ರಂದು ಬೆಂಗಳೂರಿನಲ್ಲಿ ಮತ್ತೊಮ್ಮೆ ರಾಜ್ಯ ಕಾರ್ಯಕಾರಿಣಿ…

Read More

ಬಳ್ಳಾರಿ : ಯಜಮಾನಿಯರಿಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ಸಿಹಿಸುದ್ದಿ ನೀಡಿದ್ದು, ಜೂನ್‌ ತಿಂಗಳ ಗೃಹಲಕ್ಷ್ಮಿ ಹಣ ಈ ವಾರವೇ ಖಾತೆಗೆ ಜಮಾ ಆಗಲಿದೆ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಲ್ಕರ್‌ ಮಾಹಿತಿ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗೃಹಲಕ್ಷ್ಮಿ ಯೋಜನೆಗೆ ಒಟ್ಟು ಶೇ.98 ರಷ್ಟು ಮಹಿಳೆಯರು ನೋಂದಾಯಿಸಿಕೊಂಡಿದ್ದು, ಇಲ್ಲಿಯವರೆಗೆ ಎಲ್ಲಾ ತಿಂಗಳ ಹಣ ಜಮೆಯಾಗುತ್ತಿದೆ. ಜೂನ್ ತಿಂಗಳ ಹಣವು ವಾರದಲ್ಲಿಯೇ ತಮ್ಮ ಖಾತೆಗಳಿಗೆ ಜಮೆಯಾಗಲಿದೆ. ಪ್ರಸ್ತಕ ತಿಂಗಳಿನ ಹಣವು ತದನಂತರ ಪಾವತಿಯಾಗಲಿದ್ದು, ಎಲ್ಲಾ ಮಹಿಳೆಯರಿಗೂ ತಲುಪಲಿದೆ ಎಂದರು. ರಾಜ್ಯ ಸರ್ಕಾರವು ಸಮಾಜದ ಅಭಿವೃದ್ಧಿಗೆ ಬದ್ಧವಾಗಿದ್ದು, ಅದರಲ್ಲೂ ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣವಾಗುತ್ತಿದೆ. ಮುಖ್ಯವಾಗಿ ಗೃಹಲಕ್ಷ್ಮಿ ಯೋಜನೆಯಿಂದ ಪ್ರತಿ ಮಹಿಳೆಯು ಮನೆಯ ಯಜಮಾನಿಯಾಗಿದ್ದಾಳೆ. ಇದರ ಶ್ರೇಯಸ್ಸು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಸಲ್ಲುತ್ತದೆ ಎಂದು ಅವರು ನುಡಿದರು. ರಾಜ್ಯದಲ್ಲಿನ 7 ಸಾವಿರಕ್ಕೂ ಹೆಚ್ಚಿನ ಅಂಗನವಾಡಿ ಕೇಂದ್ರಗಳನ್ನು ಉನ್ನತೀಕರಿಸಲಾಗುವುದು. ಈ ಮೂಲಕ ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರಿಗೆ ನುರಿತರಿಂದ ಕೌಶಲ್ಯಾಭಿವೃದ್ಧಿ ತರಬೇತಿಗೆ ಆದ್ಯತೆ ನೀಡಲಾಗುತ್ತದೆ. ಇದರಿಂದ ಮಕ್ಕಳ ಸರ್ವತೋಮುಖ ಬೆಳವಣಿಗೆ,…

Read More

ಬೆಂಗಳೂರು : ವೇತನ ಹೆಚ್ಚಳ, ಹಳೆಯ ಪಿಂಚಣಿ ಯೋಜನೆ ಜಾರಿ ನಿರೀಕ್ಷೆಯಲ್ಲಿರುವ ರಾಜ್ಯ ಸರ್ಕಾರಿ ನೌಕರರಿಗೆ ಗೃಹ ಸಚಿವ ಡಾ.ಜಿ. ಪರಮೇಶ್ವರ್‌ ಅವರು ಭರ್ಜರಿ ಸಿಹಿಸುದ್ದಿ ನೀಡಿದ್ದು, 7ನೇ ವೇತನ ಆಯೋಗ ಶಿಫಾರಸು ಹಾಗೂ ಹಳೆಯ ಪಿಂಚಣಿ ಯೋಜನೆ ಜಾರಿಗೆ ರಾಜ್ಯ ಸರ್ಕಾರ ಬದ್ಧವಾಗಿದೆ ಎಂದು ತಿಳಿಸಿದ್ದಾರೆ. ಈ ಕುರಿತು ಮಾಹಿತಿ ನೀಡಿರುವ ಸಚಿವ ಡಾ.ಜಿ. ಪರಮೇಶ್ವರ್‌ ಅವರು, ಸರ್ಕಾರದ ಮುಂದಿರುವ 7ನೇ ವೇತನ ಆಯೋಗ ಶಿಫಾರಸ್ಸನ್ನು ಜಾರಿಗೆ ತರಲು 18,000 ಕೋಟಿ ರೂ. ಬೇಕು. ಇದರ ಜತೆಗೆ ಒಪಿಎಸ್ ಜಾರಿಗೂ ನೂರಾರು ಕೋಟಿ ರು. ಬೇಕು. ಹಾಗಾಗಿ ಒಂದೇ ದಿನದಲ್ಲಿ ಎಲ್ಲವನ್ನೂ ಜಾರಿಗೆ ತರಲು ಸಾಧ್ಯವಿಲ್ಲ. ಕಾಂಗ್ರೆಸ್ ಸರ್ಕಾರವೇ 6ನೇ ವೇತನ ಆಯೋಗ ಜಾರಿಗೆ ತಂದಿದೆ. ನಾವು ಯಾರಿಗೂ ಮೋಸ ಮಾಡಲ್ಲ, ತಾಳ್ಮೆಯಿಂದ ಇರಿ ಎಂದು ಭರವಸೆ ನೀಡಿದ್ದಾರೆ. ಅನುದಾನಿತ ಶಾಲೆಗಳ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ನೇಮಕ ಸಂಬಂಧಿಸಿದಂತೆ ಸರ್ಕಾರ ಶೀಘ್ರವೇ ಸೂಕ್ತ ನಿರ್ಧಾರಕ್ಕೆ ಬರಲಿದೆ. ನಾನು ಕೂಡ…

Read More