Author: kannadanewsnow57

ನವದೆಹಲಿ : ರಾಷ್ಟ್ರೀಯ ಪಿಂಚಣಿ ವ್ಯವಸ್ಥೆ (NPS) ಅಕ್ಟೋಬರ್ 1, 2025 ರಿಂದ ಪ್ರಮುಖ ಬದಲಾವಣೆಗೆ ಒಳಗಾಗಲಿದೆ. ಪಿಂಚಣಿ ನಿಧಿ ನಿಯಂತ್ರಣ ಮತ್ತು ಅಭಿವೃದ್ಧಿ ಪ್ರಾಧಿಕಾರ (PFRDA) ಸರ್ಕಾರೇತರ ವಲಯದಲ್ಲಿರುವವರು ತಮ್ಮ ನಿವೃತ್ತಿ ಉಳಿತಾಯವನ್ನು ಉತ್ತಮವಾಗಿ ನಿರ್ವಹಿಸಲು ಅನುವು ಮಾಡಿಕೊಡುವ ಹೊಸ ನಿಯಮಗಳನ್ನು ಪ್ರಕಟಿಸಿದೆ.  ಮಲ್ಟಿಪಲ್ ಸ್ಕೀಮ್ ಫ್ರೇಮ್ವರ್ಕ್ (MSF) ಎಂದು ಕರೆಯಲ್ಪಡುವ ಹೊಸ ನಿಯಮವು NPS ಅನ್ನು ಹೆಚ್ಚು ಹೊಂದಿಕೊಳ್ಳುವಂತೆ ಮಾಡುತ್ತದೆ. ಇದು ಅದನ್ನು ಹೆಚ್ಚು ಹೊಂದಿಕೊಳ್ಳುವಂತೆ ಮಾಡುತ್ತದೆ. ಈ ಬದಲಾವಣೆಯು ಕಾರ್ಪೊರೇಟ್ ಉದ್ಯೋಗಿಗಳು, ಗಿಗ್ ವರ್ಕರ್ಗಳು ಮತ್ತು ವೃತ್ತಿಪರರಿಗೆ ವಿಶೇಷವಾಗಿ ಪ್ರಯೋಜನಕಾರಿಯಾಗಿದೆ. ನೀವು ಬಹು ಯೋಜನೆಗಳಲ್ಲಿ ಹಣವನ್ನು ಹೂಡಿಕೆ ಮಾಡಬಹುದು: ಈ ಹಿಂದೆ, NPS ಪ್ರತಿ ಪ್ಯಾನ್ ಸಂಖ್ಯೆಗೆ ಒಂದೇ ಯೋಜನೆಯಲ್ಲಿ ಹೂಡಿಕೆ ಮಾಡಲು ಅವಕಾಶ ನೀಡಿತ್ತು. ಆದಾಗ್ಯೂ, ಹೊಸ ನಿಯಮಗಳ ಅಡಿಯಲ್ಲಿ, ನೀವು ಒಂದೇ ಖಾತೆಯಲ್ಲಿ ಹೂಡಿಕೆ ಮಾಡಬಹುದು. ನೀವು 100 ಪ್ರತಿಶತದವರೆಗೆ ಹೂಡಿಕೆ ಮಾಡಬಹುದು. ಇದರರ್ಥ ನೀವು ಎರಡು ಅಥವಾ ಹೆಚ್ಚಿನ ಆದಾಯವನ್ನು ಪಡೆಯಬಹುದು. ಇದರರ್ಥ…

Read More

ಹಾಸನ : ರಾಜ್ಯದಲ್ಲಿ ಮತ್ತೊಂದು ಬೆಚ್ಚಿ ಬೀಳಿಸುವ ಘಟನೆ ನಡೆದಿದ್ದು, ಅಪ್ರಾಪ್ತನೊಬ್ಬ ಮಹಿಳೆಯ ಮೇಲೆ ಕಲ್ಲಿನಿಂದ ಹಲ್ಲೆ ಮಾಡಿ ಬರ್ಬರವಾಗಿ ಹತ್ಯೆಗೈದ ಪ್ರಕರಣ ಹಾಸನ ಜಿಲ್ಲೆಯಲ್ಲಿ ನಡೆದಿದೆ. ಹಾಸನ ಜಿಲ್ಲೆಯ ಅರಸೀಕೆರೆಯ ಬಂದೂರು ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಕೊಲೆಯಾದ ಮಹಿಳೆಯನ್ನು ಮೀನಾಕ್ಷಮ್ಮ (43) ಎಂದು ಗುರುತಿಸಲಾಗಿದೆ. ಹತ್ಯೆಗೈದ ಬಾಲಕ ಚಿಕ್ಕಂದಿನಲ್ಲಿದ್ದಾಗಲೇ ತಂದೆ-ತಾಯಿಯನ್ನು ಕಳೆದುಕೊಂಡು, ಮೀನಾಕ್ಷಮ್ಮರ ಮನೆಯಲ್ಲಿ ಮನೆಗೆಲಸ ಮಾಡಿಕೊಂಡಿದ್ದ. ಸೆ.15ರಂದು ಬಾಲಕ ಜಗಳ ಮಾಡುತ್ತಿದ್ದ ವೇಳೆ ಮೀನಾಕ್ಷಮ್ಮ ತಲೆಗೆ ಕಲ್ಲಿನಿಂದ ಹಲ್ಲೆ ಮಾಡಿ ಕೊಲೆ ಮಾಡಿದ್ದ. ಸೆ.16 ರಂದು ತಮ್ಮ ತಾಯಿಯದ್ದು ಅನುಮಾನಸ್ಪದ ಸಾವು ಎಂದು ಅವರ ಪುತ್ರ ದಿನೇಶ್ ಪೊಲೀಸರಿಗೆ ದೂರು ನೀಡಿದ್ದರು. ಅಪ್ರಾಪ್ತನನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದಾಗ ಸತ್ಯಾಂಶ ಬೆಳಕಿಗೆ ಬಂದಿದೆ.

Read More

ಬೆಂಗಳೂರು : ಬೆಂಗಳೂರಿನಲ್ಲಿ 17 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಪ್ರಕರಣದಲ್ಲಿ ಕಾಮುಕ ಯೋಗಗುರು ನಿರಂಜನಾ ಮೂರ್ತಿ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿ ಯೋಗ ಸೆಂಟರ್ ನೆಡೆಸುತ್ತಿದ್ದ ನಿರಂಜನಾ ಮೂರ್ತಿ ಎಂಬಾತ ಯೋಗ ಕ್ಲಾಸ್ ಗೆ ಸೇರಿದ್ದ ಅಪ್ರಾಪ್ತೆಯನ್ನು ಪುಸಲಾಯಿಸಿ ಅತ್ಯಾಚಾರ ಎಸಗಿದ್ದ. ಸದ್ಯ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಇನ್ನೂ ಆರೋಪಿ ನಿರಂಜನ ಮೂರ್ತಿ 7-8 ಮಹಿಳೆಯರ ಮೇಲೂ ಅತ್ಯಾಚಾರ ಎಸಗಿರುವ ಆರೋಪ ಕೇಳಿಬಂದಿದೆ. ಯುವತಿಯರ ಮೇಲೂ ಅತ್ಯಾಚಾರ ಎಸಗಿರುವುದು ಬೆಳಕಿಗೆ ಬಂದಿದೆ. ಬಾಲಕಿ ಓರ್ವಳ ದೂರಿನ ಅನ್ವಯ ಅರೋಪಿ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿದ್ದು, ರಾಜರಾಜೇಶ್ವರಿ ಪೊಲೀಸರಿಂದ ವಿಚಾರಣೆ ಮುಂದುವರೆದಿದೆ.

Read More

ಬೆಂಗಳೂರು : ಬೆಂಗಳೂರಿನ ರಿಂಗ್ ರಸ್ತೆಯಲ್ಲಿ ಟ್ರಾಫಿಕ್ ಕಂಟ್ರೋಲ್ ಗಾಗಿ ಮಾರ್ಗ ಬದಲಾವಣೆ ಮಾಡಲಾಗಿದ್ದು, ಬೆಂಗಳೂರಿನ ಎಚ್ಎಎಲ್ ಠಾಣಾ ವ್ಯಾಪ್ತಿಯ ರಿಂಗ ರಸ್ತೆಯಲ್ಲಿ ಮಾರ್ಗ ಬದಲಾವಣೆ ಮಾಡಲಾಗಿದೆ. ಸೆಪ್ಟೆಂಬರ್ 19 ರಿಂದ 26ರವರೆಗೆ ತಾತ್ಕಾಲಿಕವಾಗಿ ಮಾರ್ಗ ಬದಲಾವಣೆ ಮಾಡಲಾಗಿದೆ ಲೇ ಅರೇಬಿಯಾ, ಬಿರಿಯಾನಿ ಜೋನ್ ಕ್ರೋಮ್ ಜಂಕ್ಷನ್ ನಿಂದ ಮಾರತಹಳ್ಳಿ, ಕಾಡುಬೀಸನಹಳ್ಳಿ ಸರ್ವಿಸ್ ರಸ್ತೆ ಅವರಿಗೆ ಸಂಚಾರ ನಿರ್ಬಂಧಿಸಲಾಗಿದೆ. ಹೆಚ್.ಎ.ಎಲ್ ಏರ್‌ಪೋರ್ಟ್ ಸಂಚಾರ ಪೊಲೀಸ್ ಠಾಣೆ ಸರಹದ್ದಿನ ಹೊರವರ್ತುಲ ರಸ್ತೆಯಲ್ಲಿನ ಸಂಚಾರ ದಟ್ಟಣೆಯನ್ನು ನಿಯಂತ್ರಿಸುವ ಸಂಬಂಧ ದಿನಾಂಕ:19.09.2025 ರಿಂದ ಸಾರ್ವಜನಿಕರ ಮತ್ತು ವಾಹನ ಸವಾರರ ಹಿತದೃಷ್ಟಿಯಿಂದ ತಾತ್ಕಾಲಿಕವಾಗಿ ಈ ಕೆಳಕಂಡ ಸಂಚಾರ ಮಾರ್ಪಾಡು ಮಾಡಲಾಗಿರುತ್ತದೆ. ದಿನಾಂಕ ಮತ್ತು ಸಮಯ 19.09.2025 ರಿಂದ 26.09.2025ರವರೆಗೆ (ಒಂದು ವಾರ) ವಾಹನ ನಿರ್ಬಂಧಿಸಲಾದ ರಸ್ತೆ ಮಾರ್ಗ + ಲೇ ಅರೇಬಿಯಾ, ಬಿರಿಯಾನಿ ಜೋನ್ ಮತ್ತು ಕ್ರೋಮ ಜಂಕ್ಷನ್ ಬಳಿ ಹೊರವರ್ತುಲ ರಸ್ತೆಯಿಂದ ಮಾರತ್ತಹಳ್ಳಿ-ಕಾಡುಬೀಸನಹಳ್ಳಿ ಸರ್ವಿಸ್ ರಸ್ತೆಗೆ ಸಂಚರಿಸುವ ಎಲ್ಲಾ ಮಾದರಿಯ ವಾಹನಗಳನ್ನು ತಾತ್ಕಾಲಿಕವಾಗಿ ನಿರ್ಬಂಧಿಸಲಾಗಿರುತ್ತದೆ. ನಿರ್ಬಂಧಿಸಲಾದ…

Read More

ನವದೆಹಲಿ: ಸರ್ಕಾರಿ ಸ್ವಾಮ್ಯದ ಟೆಲಿಕಾಂ ಕಂಪನಿಯ ಮೊಬೈಲ್ ಸಂಪರ್ಕ ವ್ಯಾಪ್ತಿಯನ್ನು ದೇಶಾದ್ಯಂತ ವಿಸ್ತರಿಸಲು ಅಂಚೆ ಇಲಾಖೆ (DoP) ಮತ್ತು ಭಾರತ್ ಸಂಚಾರ್ ನಿಗಮ್ ಲಿಮಿಟೆಡ್ (BSNL) ಬುಧವಾರ ತಿಳುವಳಿಕೆ ಒಪ್ಪಂದಕ್ಕೆ ಸಹಿ ಹಾಕಿವೆ. ದೇಶಾದ್ಯಂತ BSNL ಸಿಮ್ ಕಾರ್ಡ್‌ಗಳು ಮತ್ತು ಮೊಬೈಲ್ ರೀಚಾರ್ಜ್ ಸೇವೆಗಳ ಮಾರಾಟಕ್ಕಾಗಿ ಅಂಚೆ ಇಲಾಖೆಯು ತನ್ನ 1.65 ಲಕ್ಷಕ್ಕೂ ಹೆಚ್ಚು ಅಂಚೆ ಕಚೇರಿಗಳ ವಿಶಾಲ ಜಾಲವನ್ನು ಬಳಸಿಕೊಳ್ಳಲಿದೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ. ಭಾರತದ ಬಹುತೇಕ ಪ್ರತಿಯೊಂದು ಹಳ್ಳಿ ಮತ್ತು ಪಟ್ಟಣವನ್ನು ಮುಟ್ಟುವ ಇಂಡಿಯಾ ಪೋಸ್ಟ್‌ನ ವ್ಯಾಪ್ತಿಯು BSNL ಗೆ ನಗರ ಮತ್ತು ಗ್ರಾಮೀಣ ಭೌಗೋಳಿಕ ಪ್ರದೇಶಗಳಲ್ಲಿ ತನ್ನ ಉಪಸ್ಥಿತಿಯನ್ನು ಹೆಚ್ಚಿಸಲು ಪ್ರಬಲವಾದ ಕೊನೆಯ ಮೈಲಿ ಚಾನಲ್ ಆಗಿ ಕಾರ್ಯನಿರ್ವಹಿಸುತ್ತದೆ ಎಂದು ಅದು ಹೇಳಿದೆ. “ಈ ಉಪಕ್ರಮವು ಬಿಎಸ್ಎನ್ಎಲ್ ನ ಟೆಲಿಕಾಂ ಸೇವೆಗಳನ್ನು ಹೆಚ್ಚು ಸುಲಭವಾಗಿ ಮತ್ತು ಕೈಗೆಟುಕುವಂತೆ ಮಾಡುವ ಗುರಿಯನ್ನು ಹೊಂದಿದೆ, ವಿಶೇಷವಾಗಿ ದೇಶದ ದೂರದ ಭಾಗಗಳ ನಾಗರಿಕರಿಗೆ, ವಿಶೇಷವಾಗಿ ಸೀಮಿತ ಸಂಪರ್ಕದೊಂದಿಗೆ ಹೋರಾಡುವವರಿಗೆ,” ಎಂದು…

Read More

ಕೃಷಿ ಇಲಾಖೆಯಿಂದ 2025-26ನೇ ಸಾಲಿನ ಪಿಎಂ – ಆರ್.ಕೆ.ವಿ.ವೈ – ಪಿಡಿಎಂಸಿ ಯೋಜನೆಯ ಸೂಕ್ಷ್ಮ ನೀರಾವರಿ ಯೋಜನೆಯಡಿ ತುಂತುರು ನೀರಾವರಿ ಘಟಕವನ್ನು ಸರ್ಕಾರದ ಸಹಾಯಧನದಡಿ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ.  ಕೇಂದ್ರ ಮತ್ತು ರಾಜ್ಯ ಸರ್ಕಾರದ ಮಹಾತ್ವಕಾಂಶಿ ಯೋಜನೆಯಲ್ಲೊಂದಾದ ಪಿಎಂ – ಆರ್.ಕೆ.ವಿ.ವೈ – ಪಿಡಿಎಂಸಿ ಯೋಜನೆಯ ಸೂಕ್ಷ್ಮ ನೀರಾವರಿ ಯೋಜನೆಯಡಿ ತುಂತುರು ನೀರಾವರಿ ಘಟಕವನ್ನು (ಸ್ಪ್ರಿಂಕ್ಲರ್ಸ್) ಶೇ. 90 ರಷ್ಟು ಸರ್ಕಾರ ಸಹಾಯಧನದಡಿ ವಿತರಿಸಲಾಗುತ್ತಿದೆ. ರೈತರು ಹೊಂದಿರುವ ಹಿಡುವಳಿಗನುಗುಣವಾಗಿ ಗರಿಷ್ಟ 5 ಹೆಕ್ಟರ್ ವರೆಗೆ ಸರ್ಕಾರದಿಂದ ಸಹಾಯಧನ ಪಡೆಯಲು ಅವಕಾಶವಿರುತ್ತದೆ. ಈ ಯೋಜನೆಯಡಿಯಲ್ಲಿ ಎಲ್ಲಾ ವರ್ಗದ ರೈತರಿಗೆ ಮೊದಲು 2 ಹೆಕ್ಟರ್ ಪ್ರದೇಶದವರಗೆ ಶೇ. 90 ರಷ್ಟು ಮತ್ತು 2 ಹೆಕ್ಟರ್ ತದನಂತರದ ಪ್ರದೇಶಕ್ಕೆ ನಂತರ ಶೇ 45 ರಷ್ಟು ಸಹಾಯಧನ ಪಡೆಯಬಹುದಾಗಿದೆ.  2 ಹೆಕ್ಟರ್ಗೆ ಸಂಭಂದಿಸಿದಂತೆ ಈಗಾಗಲೇ 1 ಹೆಕ್ಟರ್ಗೆ ಸಹಾಯಧನ ಪಡೆದಿದ್ದಲ್ಲಿ ಅಂತಹ ರೈತರಿಗೆ ಬಾಕಿ 1 ಹೆಕ್ಟರ್ಗೆ 90% ಸಹಾಯಧನ ಪಡೆಯಬಹುದಾಗಿರುತ್ತದೆ. ಈಗಾಗಲೇ 2025-26ನೇ ಸಾಲಿನ ಕ್ರೀಯಾ…

Read More

ಗಣೇಶ ಹಬ್ಬ ಮತ್ತು ಈದ್ ಮಿಲಾದ್ ಹಬ್ಬದ ಆಚರಣೆ ಪೂರ್ಣಗೊಳ್ಳುವವರೆಗೆ ಮುಂಜಾಗ್ರತಾ ಕ್ರಮವಾಗಿ ಸಾರ್ವಜನಿಕ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಜಿಲ್ಲೆಯಾದ್ಯಂತ ಆ. 27 ರಿಂದ ಸೆ.15 ರವರೆಗೆ ಡಿಜೆ ಸಿಸ್ಟಂ ಬಳಕೆಯ ನಿಷೇಧವನ್ನು ಸೆ. 30 ರವರೆಗೆ ಮುಂದುವರೆಸಿ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಆದೇಶಿಸಿದ್ದಾರೆ. ಜಿಲ್ಲೆಯ ಪ್ರಮುಖ ಗಣಪತಿ ಮೂರ್ತಿ ವಿಸರ್ಜನೆ ಹಾಗೂ ಈದ್ ಮಿಲಾದ್ ಮೆರವಣಿಗೆ ಇರುವುದರಿಂದ ಸಾರ್ವಜನಿಕ ಹಿತದೃಷ್ಟಿಯಿಂದ, ಸೌಹಾರ್ದತೆ ಮತ್ತು ಶಾಂತಿ ಕಾಪಾಡುವ ಸಲುವಾಗಿ ಗಣೇಶೋತ್ಸವ ಮತ್ತು ಈದ್ ಮಿಲಾದ್ ಹಬ್ಬಗಳ ಆಚರಣೆಗಳು ಪೂರ್ಣಗೊಳ್ಳುವವರೆಗೆ ಜಿಲ್ಲೆಯಾದ್ಯಂತ ಡಿಜೆ ಸಿಸ್ಟಂಗಳ ಬಳಕೆಯನ್ನು ಸೆ. 30 ರವರೆಗೆ ನಿಷೇಧಿಸಿ ಆದೇಶಿಸಲಾಗಿದೆ .

Read More

ಕಲಬುರಗಿ : ಸಾಲ ಮನ್ನಾ ನಿರೀಕ್ಷೆಯಲ್ಲಿರುವ ರೈತರಿಗೆ ಸಿಹಿಸುದ್ದಿ, ಬೆಳೆ ಹಾನಿ ಹಿನ್ನೆಲೆಯಲ್ಲಿ ರೈತರು ಸಾಲ ಮನ್ನಾ ಮಾಡುವಂತೆ ಕೇಳುತ್ತಿರುವುದು ಗಮನಕ್ಕೆ ಬಂದಿದೆ. ಈ ಬಗ್ಗೆ ಪರಿಶೀಲನೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಬೆಳೆಹಾನಿ ಹಿನ್ನೆಲೆಯಲ್ಲಿ ಜಂಟಿ ಸಮೀಕ್ಷೆ ನಡೆಸಲಾಗುತ್ತಿದೆ. ವಾರದಲ್ಲಿ ಜಂಟಿ ಸಮೀಕ್ಷೆಯ ಅಂತಿಮ ವರದಿ ಬಂದ ಬಳಿಕ ಬೆಳೆ ಹಾನಿಗೆ ಪರಿಹಾರ ನೀಡಲಾಗುವುದು ಎಂದು ಹೇಳಿದ್ದಾರೆ. ಅತಿವೃಷ್ಟಿ ಪೀಡಿತ ಪ್ರದೇಶಗಳ ಜಂಟಿ ಸಮೀಕ್ಷೆ ಮುಗಿಯುತ್ತಿದ್ದಂತೆ, ಅಧಿಕಾರಿಗಳು ತಕ್ಷಣ ಕಾರ್ಯಪ್ರವೃತ್ತರಾಗಿ ಬೆಳೆ ಹಾನಿಗೆ ಸಮರ್ಪಕವಾಗಿ ಪರಿಹಾರ ತಲುಪಿಸಬೇಕು. ಮಾನವ- ಜಾನುವಾರು ಜೀವ ಹಾನಿಗಳಿಗೆ ಶೇ.100 ರಷ್ಟು ಪರಿಹಾರ ಒದಗಿಸಿರುವ ರೀತಿಯಲ್ಲೇ ಬೆಳೆ ಹಾನಿಗೂ ಒದಗಿಸಬೇಕು ಎಂದರು. ಕಳೆದ ಬಾರಿಗಿಂತ ಈ ಬಾರಿ ಉತ್ತಮ ಮಳೆ ಆಗಿದೆ. ವಾಡಿಕೆಗಿಂತ ಶೇ17 ರಷ್ಟು ಮಳೆ ಹೆಚ್ಚಾಗಿದೆ. 37 ಜನರ ಜೀವ ಹಾನಿ ಪ್ರಕರಣಗಳು ವರದಿಯಾಗಿದ್ದು, ಎಲ್ಲಾ ಪರಿಹಾರ ನೀಡಲಾಗಿದೆ. 175 ಜಾನುವಾರುಗಳ ಪ್ರಾಣ ಹಾನಿ…

Read More

ಬೆಂಗಳೂರು : ರಾಜ್ಯಾದ್ಯಂತ ಸೆಪ್ಟೆಂಬರ್ 22 ರಿಂದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಗೆ ಜಿಲ್ಲಾ ಮಟ್ಟದಲ್ಲಿ ನಿಗದಿತ ಸಂಖ್ಯೆಯಷ್ಟು ಶಿಕ್ಷಕರು ಲಭ್ಯವಿಲ್ಲದೇ ಇದ್ದಲ್ಲಿ ಇತರೆ ಮೂಲಗಳಿಂದ ಪಡೆಯುವ ಬಗ್ಗೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ, ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಗೆ ಜಿಲ್ಲಾ ಮಟ್ಟದಲ್ಲಿ ನಿಗದಿತ ಸಂಖ್ಯೆಯಷ್ಟು ಶಿಕ್ಷಕರು ಲಭ್ಯವಿಲ್ಲದೇ ಇರುವ ಬಗ್ಗೆ ಕೆಲವು ಜಿಲ್ಲೆಗಳಿಂದ ಮಾಹಿತಿ ನೀಡಿ ಈ ಬಗ್ಗೆ ಮುಂದಿನ ನಿರ್ದೇಶನವನ್ನು ಕೋರಿರುತ್ತಾರೆ. ಈ ಬಗ್ಗೆ ಉಲ್ಲೇಖಿತದಲ್ಲಿ ನಡೆದ ಆಯೋಗದ ಸಭೆಯಲ್ಲಿ ಚರ್ಚಿಸಲಾಗಿದ್ದು, ಅನುದಾನಿತ ಶಾಲೆಗಳ ಖಾಯಂ ಶಿಕ್ಷಕರು, ನಗರ ಮತ್ತು ಗ್ರಾಮೀಣ ಸ್ಥಳೀಯ ಸಂಸ್ಥೆಗಳ ಖಾಯಂ ಸಿಬ್ಬಂದಿಗಳು ಮತ್ತು ಇತರೆ ಇಲಾಖೆಗಳ ಖಾಯಂ ಸಿಬ್ಬಂದಿಗಳನ್ನು ಬಳಸಿಕೊಂಡು, ಸಮೀಕ್ಷಾ ಕಾರ್ಯವನ್ನು ಪೂರ್ಣಗೊಳಿಸಲು ಜಿಲ್ಲೆಗಳಿಗೆ ತಿಳಿಸುವಂತೆ ತೀರ್ಮಾನಿಸಲಾಗಿರುತ್ತದೆ. ಅದರಂತೆ, ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಗೆ ಅಗತ್ಯ ಸಂಖ್ಯೆಯಷ್ಟು ಸಮೀಕ್ಷಾದಾರರನ್ನು ನಿಯೋಜಿಸಲು ಕ್ರಮ ವಹಿಸುವಂತೆ ಕೋರಿದೆ.

Read More

ಕಾರ್ಮಿಕ ಇಲಾಖೆಯಲ್ಲಿ ಅಸಂಘಟಿತ ಕಾರ್ಮಿಕರಿಗೆ ಹಲವು ಯೋಜನೆ ಜಾರಿಗೊಳಿಸಿದ್ದು, ಆ ದಿಸೆಯಲ್ಲಿ ಅಸಂಘಟಿತ ಕಾರ್ಮಿಕರು ಕಾರ್ಮಿಕ ಇಲಾಖೆಯಲ್ಲಿ ಹೆಸರು ನೋಂದಾಯಿಸುವಂತೆ ಕಾರ್ಮಿಕ ಸಚಿವರಾದ ಸಂತೋಷ್.ಎಸ್.ಲಾಡ್ ಅವರು ಕರೆ ನೀಡಿದ್ದಾರೆ. ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿ, ಕಾರ್ಮಿಕ ಇಲಾಖೆ, ಸಾರಿಗೆ ಇಲಾಖೆ, ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ಇವರ ಸಹಯೋಗದಲ್ಲಿ ನಗರದ ಕ್ರಿಸ್ಟಲ್ ಸಭಾಂಗಣದಲ್ಲಿ ಕೊಡಗು ಜಿಲ್ಲೆಯ ವಿವಿಧ ವರ್ಗಗಳ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ ಹಾಗೂ ಮಂಡಳಿಯ ವಿವಿಧ ಯೋಜನೆಗಳ ಕುರಿತು ಬುಧವಾರ ನಡೆದ ಅರಿವು ಕಾರ್ಯಕ್ರಮಕ್ಕೆ ಚಾಲನೆ ನೀಡಿ ಸಚಿವರು ಮಾತನಾಡಿದರು. ಕಾರ್ಮಿಕ ಇಲಾಖೆಯಲ್ಲಿ 26 ರಿಂದ 101 ರೀತಿಯ ಅಸಂಘಟಿತ ಕಾರ್ಮಿಕರಿಗೆ ಸರ್ಕಾರ ಹಲವು ಯೋಜನೆ ಜಾರಿಗೊಳಿಸಿದೆ. ಇವುಗಳನ್ನು ಪಡೆದುಕೊಳ್ಳಲು ಮುಂದಾಗಬೇಕು ಎಂದು ಸಂತೋಷ್ ಎಸ್.ಲಾಡ್ ಅವರು ಕೋರಿದರು. ಸರ್ಕಾರ ಪ್ರಮುಖವಾಗಿ ಗಿಗ್ ಕಾರ್ಮಿಕರಿಗೆ ವಿಮಾ ಯೋಜನೆಯನ್ನು ಜಾರಿಗೊಳಿಸಿರುವುದು ಇಡೀ ದೇಶದಲ್ಲಿ ವಿಶೇಷವಾಗಿದೆ ಎಂದರು. ಸ್ವಿಗ್ಗಿ, ಜೊಮೆಟೋಗಳಂತ ಸಂಸ್ಥೆಯಲ್ಲಿ ಆಹಾರ ಸರಬರಾಜು ಮಾಡುವ…

Read More