Author: kannadanewsnow57

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರವು ಭರ್ಜರಿ ಸಿಹಿಸುದ್ದಿ ನೀಡಿದ್ದು, ನೌಕರರಿಗೆ ಏಳನೇ ವೇತನ ಆಯೋಗದ ಶಿಫಾರಸುಗಳ ಆಗಸ್ಟ್‌ನಲ್ಲಿ ಜಾರಿಗೆ ಬರುವುದು ಖಚಿತವಾಗಿದೆ. ಏಳನೇ ವೇತನ ಆಯೋಗದ ಶಿಫಾರಸುಗಳ ಹಣಕಾಸು ಹೊಂದಾಣಿಕೆ ಕುರಿತಂತೆ ಪರಿಶೀಲನೆ ನಡೆಸಿ ಮಾಹಿತಿ ಕೊಡುವಂತೆ ಸಿಎಂ ಸಿದ್ದರಾಮಯ್ಯ ನೀಡಿದ್ದ ಸೂಚನೆಗೆ ಆರ್ಥಿಕ ಇಲಾಖೆಗೆ ಒಪ್ಪಿಗೆ ನೀಡಿದ್ದು, ಆಗಸ್ಟ್‌ ನಲ್ಲಿ ಏಳನೇ ವೇತನ ಆಯೋಗ ಜಾರಿಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ಏಳನೇ ವೇತನ ಆಯೋಗ ಶೇ.27.5 ಹೆಚ್ಚಳಕ್ಕೆ ಶಿಫಾರಸು ಮಾಡಿತ್ತು. ಹಿಂದಿನ ಸರ್ಕಾರ ಶೇ.17 ಮಧ್ಯಂತರ ಪರಿಹಾರ ನೀಡಿತ್ತು. ಇದೀಗ ಉಳಿದ ಶೇ.10.5 ಹೆಚ್ಚಳ ನೀಡಲು ನಿರ್ಧರಿಸಲಾಗಿದೆ. ವೇತನ ಹೆಚ್ಚಳಕ್ಕಾಗಿಯೇ ಬಜೆಟ್‌ನಲ್ಲಿ 14 ಸಾವಿರ ಕೋಟಿ ರೂ.ಗಳನ್ನು ಸರ್ಕಾರ ಮೀಸಲಿಟ್ಟಿದ್ದು,  ಜು. 15 ರಂದು ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ವೇತನ ಪರಿಷ್ಕರಣೆಗೆ ಸಂಬಂಧಿಸಿದಂತೆ ಚರ್ಚೆ ನಡೆಸಿ ಬಳಿಕ ಆದೇಶ ಪ್ರಕಟವಾಗಿ ಜಾರಿಗೆ ಬರಲಿದೆ ಹೇಳಲಾಗಿದೆ. ಇಲ್ಲಿದೆ ಕರ್ನಾಟಕ 7ನೇ ರಾಜ್ಯ ವೇತನ ಆಯೋಗ…

Read More

ವಿಜಯಪುರ : ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲೂಕಿನ ಕೃಷ್ಣಾನಗರದ ನಂದಿ ಸಹಕಾರಿ ಸಕ್ಕರೆ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಪೋಟಗೊಂಡಿರುವ ಘಟನೆ ನಡೆದಿದೆ.  ಕೃಷ್ಣಾನಗರದ ನಂದಿ ಸಹಕಾರಿ ಸಕ್ಕರೆ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಪೋಟಗೊಂಡ ಪರಿಣಾಮ ಹೊತ್ತಿ ಉರಿದಿದೆ. ಈ ವೆಳೆ ಅಲ್ಲೇ ಕೆಲಸ ಮಾಡುತ್ತಿದ್ದ ಕಾರ್ಮಿಕರು ಅದೃಷ್ಟವಶಾತ್‌ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕಳಪೆ ಬಾಯ್ಲರ್‌ ನಿರ್ಮಾಣದಿಂದ ಸ್ಪೋಟ ಸಂಭವಿಸಿದೆ ಎಂದು ರೈತರು ಆರೋಪಿಸಿದ್ದರು, ಈ ಬಗ್ಗೆ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.

Read More

ಮೈಸೂರು : ರಾಜ್ಯದ 163 ತಾಲೂಕುಗಳಲ್ಲಿ ಬಗರ್‌ ಹುಕುಂ ಸಮಿತಿ ರಚಿಸಲಾಗಿದ್ದು, ಸಮಿತಿಗಳಿಗೆ 4.38 ಎಕರೆಗಿಂದ ಕಡಿಮೆ ಭೂಮಿ ಇರುವವರಿಗೆ ಮಾತ್ರ ಸಕ್ರಮ ಮಾಡಿಕೊಡಲು ಅವಕಾಶವಿದೆ ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಡ ರೈತರಿಗೆ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ಅಕ್ರಮ ಸಾಗುವಳಿಯ ಸಕ್ರಮೀಕರಣಕ್ಕಾಗಿ ಬಗರ್‌ಹುಕುಂ ಅಡಿ ರಾಜ್ಯ ಸರ್ಕಾರ ಅರ್ಜಿ ಸ್ವೀಕರಿಸಿದೆ. ಲಕ್ಷಾಂತರ ಅರ್ಜಿಗಳು ಈಗಾಗಲೇ ಸಲ್ಲಿಕೆಯಾಗಿದ್ದು, ಈ ಎಲ್ಲಾ ಅರ್ಜಿಗಳನ್ನು ಮುಂದಿನ 8 ತಿಂಗಳಲ್ಲಿ ವಿಲೇವಾರಿ ಮಾಡಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿರುವುದಾಗಿ ಸಚಿವರು ತಿಳಿಸಿದರು. ರಾಜ್ಯಾದ್ಯಂತ 163 ಕ್ಷೇತ್ರಗಳಲ್ಲಿ ಬಗರ್‌ ಹುಕುಂ ಸಾಗುವಳಿ ಸಕ್ರಮೀಕರಣ ಸಮಿತಿ ರಚಿಸಲಾಗಿದೆ. ಜುಲೈ ತಿಂಗಳಿಂದ ಆರಂಭಿಸಿ ಪ್ರತಿ ತಿಂಗಳೂ ತಾಲೂಕವಾರು ತಿಂಗಳಿಗೆ ಇಷ್ಟು ಅರ್ಜಿ ವಿಲೇಗೆ ಜಿಲ್ಲಾಧಿಕಾರಿಗಳು ತಹಶೀಲ್ದಾರ್‌ಗೆ ಸೂಚಿಸಬೇಕು. ಶಾಸಕರ ನೇತೃತ್ವದ ಸಮಿತಿಯಲ್ಲಿ ತಹಶೀಲ್ದಾರರು ಈ ಎಲ್ಲಾ ಅರ್ಜಿಗಳಲ್ಲಿ ರೈತರಿಗೆ ಭೂ ಮಂಜೂರು ಮಾಡುವ ಮುನ್ನ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಬೇಕು. ಅವರಿಗೆ ಆ ಜಾಗದ ಕಳೆದ…

Read More

ಬೆಂಗಳೂರು : ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲುಪಾಲಾಗಿರುವ ನಟ ದರ್ಶನ್‌ ತೂಕದಲ್ಲಿ ಭಾರೀ ಇಳಿಕೆಯಾಗಿದ್ದು, ತಿಂಗಳೊಳಗೆ 10ಕೆಜಿಯಷ್ಟು ತೂಕ ಇಳಿಕೆಯಾಗಿದೆ. ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶ್ನ ಆರೋಗ್ಯದ ಬಗ್ಗೆ ಜೈಲಾಧಿಕಾರಿಗಳು ನಿಗಾ ವಹಿಸಿದ್ದಾರೆ. ಮೆಡಿಕಲ್‌ ಟೆಸ್ಟ್‌ ವೇಳೆ 107 ಕೆಜಿ ಇದ್ದ ನಟ ದರ್ಶನ್‌ ತೂಕ ಇದೀಗ 10ಕೆಜಿ ಇಳಿಕೆಯಾಗಿ 97 ಕೆಜಿಗೆ ಇಳಿದಿದೆ. ಹೀಗಾಗಿ ಜೈಲಾಧಿಕಾರಿಗಳು ನಟ ದರ್ಶನ್‌ ಆರೋಗ್ಯದ ಮೇಲೆ ನಿಗಾ ಇಟ್ಟಿದ್ದಾರೆ. ವೇಗವಾಗಿ ತೂಕ ಇಳಿಯುವುದು ಅಪಾಯಕಾರಿಯಾಗಿದೆ. ಮೊದಲ ದಿನಚರಿಗೂ ಈಗಿನ ದಿನಚರಿಗೆ ವ್ಯತ್ಯಾಸವಾಗಿದ್ದು, ಹೀಗಾಗಿ ನಟ ದರ್ಶನ್‌ ದೇಹದ ತೂಕದಲ್ಲಿ ಇಳಿಕೆಯಾಗಿದೆ. ನಿಯಮಿತ ಆರೋಗ್ಯ ತಪಾಸಣೆಗೆ ಜೈಲಾಧಿಕಾರಿಗಳು ಮುಂದಾಗಿದ್ದಾರೆ.

Read More

ಬೆಂಗಳೂರು : 2024-25ನೇ ಸಾಲಿನ ರಾಜ್ಯ ಸರ್ಕಾರಿ ನೌಕರರ ವರ್ಗಾವಣೆಗೆ ರಾಜ್ಯ ಸರ್ಕಾರದಿಂದ ಮಾರ್ಗಸೂಚಿಯನ್ನು ಪ್ರಕಟಿಸಲಾಗಿದ್ದು, ವಿಶೇಷ ಚೇತನ ಸರ್ಕಾರಿ ನೌಕರರಿಗೆ ವಿನಾಯಿತಿ ನೀಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ವಿಶೇಷ ಚೇತನ ನೌಕರರಿಗೆ ಸಂಬಂಧಿಸಿದಂತೆ ಕೆಲವು ವಿನಾಯಿತಿಗಳು: (1) ವಿಶೇಷ ಚೇತನ ನೌಕರರಿಗೆ ನಿಯತಕಾಲಿಕ ಮತ್ತು ಪುನರಾವರ್ತಿತ ವರ್ಗಾವಣೆಗಳಿಂದ ವಿನಾಯಿತಿ ನೀಡುವುದು; (2) ವಿಶೇಷ ಚೇತನರು ನೇಮಕಾತಿಗೆ ಆಯ್ಕೆಯಾದ ನಂತರದಲ್ಲಿ ನೀಡುವ ಪ್ರಾರಂಭಿಕ ಸ್ಥಳ ನಿಯುಕ್ತಿಯನ್ನು (Initial posting) ಹಾಗೂ ಪದೋನ್ನತಿಯ ನಂತರದಲ್ಲಿ ಅವರ ವರ್ಗಾವಣೆ ಅವಶ್ಯಕವೆನಿಸಿದಲ್ಲಿ ಸಾಧ್ಯವಾದಷ್ಟು ಹತ್ತಿರದ ಸ್ಥಳಕ್ಕೆ ಸ್ಥಳನಿಯುಕ್ತಿಗೊಳಿಸುವುದು. (3) ಸರ್ಕಾರಿ ನೌಕರನ ಅವಲಂಬಿತ ಮಕ್ಕಳು, ಪತಿ/ಪತ್ನಿ, ತಂದೆ, ತಾಯಿ ಇವರುಗಳು ತೀವ್ರತರವಾದ ಅಂಗವೈಕಲ್ಯವನ್ನು ಹೊಂದಿದ್ದಲ್ಲಿ ಹಾಗೂ ಸರ್ಕಾರಿ ನೌಕರನು ಅವರ ನಿರ್ವಹಣೆ ಹಾಗೂ ಪುನರ್ ವಸತಿಯ ಜವಾಬ್ದಾರಿ ಹೊತ್ತು ಅಂಗವಿಕಲರ ಹಕ್ಕುಗಳನ್ನು ಸಂರಕ್ಷಣೆ ಮಾಡುವಲ್ಲಿ ಹೆಚ್ಚಿನ ಪಾತ್ರವಹಿಸುತ್ತಿದ್ದಲ್ಲಿ ಅಂತಹ ನೌಕರರುಗಳಿಗೆ ಸಂಬಂಧಿಸಿದ ದಾಖಲೆಗಳನ್ನು ಹಾಜರುಪಡಿಸುವ ಷರತ್ತಿಗೊಳಪಟ್ಟು, ಅಂತಹ ದಾಖಲೆಗಳನ್ನು ಪರಿಶೀಲಿಸಿ, ನಿಯತಕಾಲಿಕ ವರ್ಗಾವಣೆಗಳಿಂದ ವಿನಾಯಿತಿ…

Read More

ಬಳ್ಳಾರಿ : ಬಳ್ಳಾರಿ ತಾಲ್ಲೂಕಿನ ಜಾಲಿಬೆಂಚಿ ಕ್ರಾಸ್ ನಲ್ಲಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಪ್ರಾಯೋಜಿಸಲ್ಪಟ್ಟ ಮಹಿಳಾ ಪೂರಕ ಪೌಷ್ಟಿಕ ಆಹಾರ ಉತ್ಪಾದನಾ ಘಟಕಕ್ಕೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಆರ್. ಹೆಬ್ಬಾಳಕರ್ ಶನಿವಾರ ದಿಢೀರ್ ಭೇಟಿ ನೀಡಿ, ಪರಿಶೀಲಿಸಿದರು. ಘಟಕದಲ್ಲಿ ಉತ್ಪಾದನಾ ಆಹಾರ ಸಾಮಗ್ರಿಗಳ ಗುಣಮಟ್ಟವನ್ನು ಪರೀಕ್ಷಿಸಿದರು. ಉತ್ಪಾದನಾ ಘಟಕದ ಕಾರ್ಯನಿರತ ಮಹಿಳೆಯರಿಂದಲೇ ಆಹಾರ ಸಾಮಗ್ರಿಗಳ ಗುಣಮಟ್ಟದ ಬಗ್ಗೆ ಮಾಹಿತಿ ಪಡೆದರು. ಅಂಗನವಾಡಿಗಳಿಗೆ ಪೂರೈಕೆ ಮಾಡುವ ಆಹಾರ ಸಾಮಗ್ರಿಗಳಲ್ಲಿ, ಅದರಲ್ಲೂ ಉತ್ಪಾದನೆಯಲ್ಲಿ ಗುಣಮಟ್ಟವನ್ನು ಕಾಯ್ದುಕೊಳ್ಳಬೇಕೆಂದು ಸಂಬಂಧಪಟ್ಟವರಿಗೆ ಸಚಿವರು ಸೂಚಿಸಿದರು. ಇದೇ ವೇಳೆ, ಪುಷ್ಟಿ ನ್ಯೂಟ್ರಿಮಿಕ್ಸ್, ಗೋಧಿ ನುಚ್ಚು ಹಾಲಿನ ಪುಡಿ, ಅರಿಶಿಣ ಪುಡಿ ಇತ್ಯಾದಿ ಆಹಾರ ಸಾಮಗ್ರಿಗಳ ಗುಣಮಟ್ಟವನ್ನು ಪರೀಕ್ಷಿಸಿದರಲ್ಲದೇ, ಉತ್ಪಾದನಾ ಆಹಾರ ಸಮಗ್ರಗಳ ಬಗ್ಗೆ ಸ್ಥಳದಲ್ಲಿದ್ದ ಶಿಶು ಅಭಿವೃದ್ಧಿ ಯೋಜನಾ ಅಧಿಕಾರಿಯಿಂದ ಮಾಹಿತಿ ಪಡೆದರು. ಈ ವೇಳೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಜಂಟಿ ನಿರ್ದೇಶಕರು ಹಾಗೂ ಸಚಿವರ ವಿಶೇಷ ಕರ್ತವ್ಯ ಅಧಿಕಾರಿ…

Read More

ಬೆಂಗಳೂರು : ಕೆಎಸ್‌ ಆರ್‌ ಟಿಸಿ ಬಸ್‌ ಪ್ರಯಾಣಿಕರಿಗೆ ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ಅವರು ನೆಮ್ಮದಿಯ ಸುದ್ದಿ ನೀಡಿದ್ದು, ಕೆಎಸ್‌ ಆರ್‌ ಟಿಸಿ ಬಸ್‌ ಪ್ರಯಾಣ ದರವನ್ನು ಸದ್ಯಕ್ಕೆ ಏರಿಕೆ ಮಾಡುವುದಿಲ್ಲ ಎಂದು ಸಚಿವ ರಾಮಲಿಂಗ ರೆಡ್ಡಿ ಸ್ಪಷ್ಟನೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಸ್‌ ಪ್ರಯಾಣ ದರವನ್ನು ಸದ್ಯಕ್ಕೆ ಏರಿಕೆ ಮಾಡುವುದಿಲ್ಲ. ಕೆಎಸ್‌ ಆರ್‌ ಟಿಸಿ ಸೇರಿದಂತೆ ಉಳಿದ ಮೂರು ನಿಗಮಗಳ ಪ್ರಯಾಣ ದರವನ್ನು 2020 ರಲ್ಲಿ ಹೆಚ್ಚಿಸಲಾಗಿದೆ. ಬಿಎಂಟಿಸಿ ಪ್ರಯಾಣ ದರವನ್ನು2014 ರ ಬಳಿಕ ಜಾಸ್ತಿ ಮಾಡಿಲ್ಲ. ಡೀಸೆಲ್‌ ಬೆಲೆ, ಸಿಬ್ಬಂದಿ ವೇತನ, ಸೇರಿದಂತೆ ನಿರ್ವಹಣಾ ವೆಚ್ಚ ಜಾಸ್ತಿಯಾಗಿದೆ. ಆದರೆ ಪ್ರಯಾಣ ದರ ಏರಿಕೆ ಸಂಬಂಧ ಯಾವುದೇ ಪ್ರಸ್ತಾವನೆ ಬಂದಿಲ್ಲ ಎಂದು ತಿಳಿಸಿದ್ದಾರೆ. ಇನ್ನು ಸಾರಿಗೆ ನಿಗಮಗಳಲ್ಲಿ ಸಿಬ್ಬಂದಿ ಕೊರತೆ ಇದ್ದು, ಶೀಘ್ರವೇ ಹಂತ ಹಂತವಾಗಿ ನಿಗಮಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

Read More

ಬಳ್ಳಾರಿ : ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳಿಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ಸಿಹಿಸುದ್ದಿ ನೀಡಿದ್ದು, ಜೂನ್‌ ತಿಂಗಳ ಗೃಹಲಕ್ಷ್ಮಿ ಹಣ ಶೀಘ್ರವೇ ಖಾತೆಗೆ ಜಮಾ ಮಾಡಲಾಗುವುದು ಎಂದು ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲೊಂದಾದ ಗೃಹಲಕ್ಷ್ಮಿ ಯೋಜನೆಗೆ ಒಟ್ಟು ಶೇ.98 ರಷ್ಟು ಮಹಿಳೆಯರು ನೋಂದಾಯಿಸಿಕೊಂಡಿದ್ದು, ಇಲ್ಲಿಯವರೆಗೆ ಎಲ್ಲಾ ತಿಂಗಳ ಹಣ ಜಮೆಯಾಗುತ್ತಿದೆ. ಜೂನ್ ತಿಂಗಳ ಹಣವು ವಾರದಲ್ಲಿಯೇ ತಮ್ಮ ಖಾತೆಗಳಿಗೆ ಜಮೆಯಾಗಲಿದೆ. ಪ್ರಸ್ತಕ ತಿಂಗಳಿನ ಹಣವು ತದನಂತರ ಪಾವತಿಯಾಗಲಿದ್ದು, ಎಲ್ಲಾ ಮಹಿಳೆಯರಿಗೂ ತಲುಪಲಿದೆ ಎಂದರು. ರಾಜ್ಯ ಸರ್ಕಾರವು ಸಮಾಜದ ಅಭಿವೃದ್ಧಿಗೆ ಬದ್ಧವಾಗಿದ್ದು, ಅದರಲ್ಲೂ ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣವಾಗುತ್ತಿದೆ. ಮುಖ್ಯವಾಗಿ ಗೃಹಲಕ್ಷ್ಮಿ ಯೋಜನೆಯಿಂದ ಪ್ರತಿ ಮಹಿಳೆಯು ಮನೆಯ ಯಜಮಾನಿಯಾಗಿದ್ದಾಳೆ. ಇದರ ಶ್ರೇಯಸ್ಸು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಸಲ್ಲುತ್ತದೆ ಎಂದು ಅವರು ನುಡಿದರು. ರಾಜ್ಯದಲ್ಲಿನ 7 ಸಾವಿರಕ್ಕೂ ಹೆಚ್ಚಿನ ಅಂಗನವಾಡಿ ಕೇಂದ್ರಗಳನ್ನು ಉನ್ನತೀಕರಿಸಲಾಗುವುದು. ಈ ಮೂಲಕ ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರಿಗೆ ನುರಿತರಿಂದ ಕೌಶಲ್ಯಾಭಿವೃದ್ಧಿ ತರಬೇತಿಗೆ ಆದ್ಯತೆ ನೀಡಲಾಗುತ್ತದೆ. ಇದರಿಂದ ಮಕ್ಕಳ ಸರ್ವತೋಮುಖ…

Read More

ಕಾರವಾರ : ರಾಜ್ಯದಲ್ಲಿ ಡೆಂಗ್ಯೂ ಮಹಮಾರಿಗೆ ಮತ್ತೊಂದು ಬಲಿಯಾಗಿದ್ದು, ಜ್ವರದಿಂದ ಬಳಲುತ್ತಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯಲ್ಲಿ ನಡೆದಿದೆ. ಉತ್ತರ ಕನ್ನಡ ಶಿರಸಿಯ ಕಸ್ತೂರಬಾ ನಗರದ ಸುಹಾನಾ ಮಹ್ಮದ್ ಶಫಿ (12) ಶಂಕಿತ ಡೆಂಗ್ಯೂ ಜ್ವರಕ್ಕೆ ಬಲಿಯಾಗಿದ್ದಾರೆ. ಡೆಂಗ್ಯೂ ಲಕ್ಷಣಗಳು ಕಂಡುಬಂದಿದ್ದ ಹಿನ್ನೆಲೆಯಲ್ಲಿ ಖಾಸಗಿ ಆಸ್ಪತ್ರೆಯಲ್ಲಿ ಜ್ವರಕ್ಕೆ ಬಾಲಕಿ ಚಿಕಿತ್ಸೆ ಪಡೆಯುತ್ತಿದ್ದಳು. ಚಿಕಿತ್ಸೆ ಫಲಿಸದ ಹಿನ್ನೆಲೆಯಲ್ಲಿ ಬಾಲಕಿ ಕೊನೆಯುಸಿರೆಳೆದಿದ್ದಾಳೆ. ಉತ್ತರ ಕನ್ನಡ ಜಿಲ್ಲೆಯಲ್ಲೂ ಡೆಂಗ್ಯೂ ಜ್ವರದ ಅಬ್ಬರ ಹೆಚ್ಚಳವಾಗಿದ್ದು, ಇದುವರೆಗೆ 122 ಡೆಂಗ್ಯೂ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ರಾಜ್ಯಾದ್ಯಂತ ಡೆಂಗ್ಯೂ ಪ್ರಕರಣಗಳ ಸಂಖ್ಯೆ ಏಳು ಸಾವಿರದ ಗಡಿ ದಾಟಿದ್ದು, ಜನರಲ್ಲಿ ಆತಂಕ ಮೂಡಿಸಿದೆ.

Read More

ಬೆಂಗಳೂರು : ರಾಜ್ಯ ಸರ್ಕಾರವು ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ಪೊಲೀಸ್‌ ಇಲಾಖೆಯಲ್ಲಿ ಶೀಘ್ರವೇ 400ಕ್ಕೂ ಹೆಚ್ಚಿನ ಸಬ್ ಇನ್ಸ್‌ಪೆಕ್ಟರ್‌ ಗಳ (PSI) ನೇಮಕಕ್ಕೆ ಗ್ರೀನ್‌ ಸಿಗ್ನಲ್‌ ನೀಡಿದೆ. ಈ ಕುರಿತು ಮಾಹಿತಿ ನೀಡಿರುವ ರಾಜ್ಯ ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಹಾಗೂ ಗೃಹ ಇಲಾಖೆ ಪ್ರಧಾನ ಕಾರ್ಯದರ್ಶಿ ಎಸ್.ಆರ್.ಉಮಾಶಂಕರ್, ರಾಜ್ಯದಲ್ಲಿ 400ಕ್ಕೂ ಹೆಚ್ಚಿನ ಪಿಎಸ್‌ ಐಗಳ ನೇಮಕಾತಿ ಸಂಬಂಧ ಗೃಹ ಇಲಾಖೆ ಸಲ್ಲಿಸಿದ ಪ್ರಸ್ತಾವನೆಗೆ ರಾಜ್ಯ ಸರ್ಕಾರ ಗ್ರೀನ್‌ ಸಿಗ್ನಲ್‌ ನೀಡಿದ್ದು, ಶೀಘ್ರವೇ ಈ ಬಗ್ಗೆ ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಲಿದೆ ಎಂದು ತಿಳಿಸಿದ್ದಾರೆ. ಇನ್ನು 545 ಪಿಎಸ್‌ಐ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಅಂತಿಮ ಹಂತಕ್ಕೆ ಬಂದಿದೆ. ಈ ನೇಮಕಾತಿ ವಿಚಾರವಾಗಿ ಹೈದರಾಬಾದ್ ಕರ್ನಾಟಕ ಮೀಸಲು ಸಂಬಂಧ ತಾಂತ್ರಿಕ ಅಡಚರಣೆ ಎದುರಾಗಿತ್ತು. ಈ ಬಗ್ಗೆ ಡಿಐಪಿಆರ್‌ನಿಂದ ಅಭಿಪ್ರಾಯ ಕೋರಲಾಗಿದೆ ಎಂದು ಹೇಳಿದ್ದಾರೆ.

Read More