Author: kannadanewsnow57

ಬೆಂಗಳೂರು : ಕೆಎಸ್‌ ಆರ್‌ ಟಿಸಿ ಬಸ್‌ ಪ್ರಯಾಣಿಕರಿಗೆ ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ಅವರು ನೆಮ್ಮದಿಯ ಸುದ್ದಿ ನೀಡಿದ್ದು, ಕೆಎಸ್‌ ಆರ್‌ ಟಿಸಿ ಬಸ್‌ ಪ್ರಯಾಣ ದರವನ್ನು ಸದ್ಯಕ್ಕೆ ಏರಿಕೆ ಮಾಡುವುದಿಲ್ಲ ಎಂದು ಸಚಿವ ರಾಮಲಿಂಗ ರೆಡ್ಡಿ ಸ್ಪಷ್ಟನೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಸ್‌ ಪ್ರಯಾಣ ದರವನ್ನು ಸದ್ಯಕ್ಕೆ ಏರಿಕೆ ಮಾಡುವುದಿಲ್ಲ. ಕೆಎಸ್‌ ಆರ್‌ ಟಿಸಿ ಸೇರಿದಂತೆ ಉಳಿದ ಮೂರು ನಿಗಮಗಳ ಪ್ರಯಾಣ ದರವನ್ನು 2020 ರಲ್ಲಿ ಹೆಚ್ಚಿಸಲಾಗಿದೆ. ಬಿಎಂಟಿಸಿ ಪ್ರಯಾಣ ದರವನ್ನು2014 ರ ಬಳಿಕ ಜಾಸ್ತಿ ಮಾಡಿಲ್ಲ. ಡೀಸೆಲ್‌ ಬೆಲೆ, ಸಿಬ್ಬಂದಿ ವೇತನ, ಸೇರಿದಂತೆ ನಿರ್ವಹಣಾ ವೆಚ್ಚ ಜಾಸ್ತಿಯಾಗಿದೆ. ಆದರೆ ಪ್ರಯಾಣ ದರ ಏರಿಕೆ ಸಂಬಂಧ ಯಾವುದೇ ಪ್ರಸ್ತಾವನೆ ಬಂದಿಲ್ಲ ಎಂದು ತಿಳಿಸಿದ್ದಾರೆ. ಇನ್ನು ಸಾರಿಗೆ ನಿಗಮಗಳಲ್ಲಿ ಸಿಬ್ಬಂದಿ ಕೊರತೆ ಇದ್ದು, ಶೀಘ್ರವೇ ಹಂತ ಹಂತವಾಗಿ ನಿಗಮಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

Read More

ಬಳ್ಳಾರಿ : ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳಿಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ಸಿಹಿಸುದ್ದಿ ನೀಡಿದ್ದು, ಜೂನ್‌ ತಿಂಗಳ ಗೃಹಲಕ್ಷ್ಮಿ ಹಣ ಶೀಘ್ರವೇ ಖಾತೆಗೆ ಜಮಾ ಮಾಡಲಾಗುವುದು ಎಂದು ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲೊಂದಾದ ಗೃಹಲಕ್ಷ್ಮಿ ಯೋಜನೆಗೆ ಒಟ್ಟು ಶೇ.98 ರಷ್ಟು ಮಹಿಳೆಯರು ನೋಂದಾಯಿಸಿಕೊಂಡಿದ್ದು, ಇಲ್ಲಿಯವರೆಗೆ ಎಲ್ಲಾ ತಿಂಗಳ ಹಣ ಜಮೆಯಾಗುತ್ತಿದೆ. ಜೂನ್ ತಿಂಗಳ ಹಣವು ವಾರದಲ್ಲಿಯೇ ತಮ್ಮ ಖಾತೆಗಳಿಗೆ ಜಮೆಯಾಗಲಿದೆ. ಪ್ರಸ್ತಕ ತಿಂಗಳಿನ ಹಣವು ತದನಂತರ ಪಾವತಿಯಾಗಲಿದ್ದು, ಎಲ್ಲಾ ಮಹಿಳೆಯರಿಗೂ ತಲುಪಲಿದೆ ಎಂದರು. ರಾಜ್ಯ ಸರ್ಕಾರವು ಸಮಾಜದ ಅಭಿವೃದ್ಧಿಗೆ ಬದ್ಧವಾಗಿದ್ದು, ಅದರಲ್ಲೂ ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣವಾಗುತ್ತಿದೆ. ಮುಖ್ಯವಾಗಿ ಗೃಹಲಕ್ಷ್ಮಿ ಯೋಜನೆಯಿಂದ ಪ್ರತಿ ಮಹಿಳೆಯು ಮನೆಯ ಯಜಮಾನಿಯಾಗಿದ್ದಾಳೆ. ಇದರ ಶ್ರೇಯಸ್ಸು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಸಲ್ಲುತ್ತದೆ ಎಂದು ಅವರು ನುಡಿದರು. ರಾಜ್ಯದಲ್ಲಿನ 7 ಸಾವಿರಕ್ಕೂ ಹೆಚ್ಚಿನ ಅಂಗನವಾಡಿ ಕೇಂದ್ರಗಳನ್ನು ಉನ್ನತೀಕರಿಸಲಾಗುವುದು. ಈ ಮೂಲಕ ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರಿಗೆ ನುರಿತರಿಂದ ಕೌಶಲ್ಯಾಭಿವೃದ್ಧಿ ತರಬೇತಿಗೆ ಆದ್ಯತೆ ನೀಡಲಾಗುತ್ತದೆ. ಇದರಿಂದ ಮಕ್ಕಳ ಸರ್ವತೋಮುಖ…

Read More

ಕಾರವಾರ : ರಾಜ್ಯದಲ್ಲಿ ಡೆಂಗ್ಯೂ ಮಹಮಾರಿಗೆ ಮತ್ತೊಂದು ಬಲಿಯಾಗಿದ್ದು, ಜ್ವರದಿಂದ ಬಳಲುತ್ತಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯಲ್ಲಿ ನಡೆದಿದೆ. ಉತ್ತರ ಕನ್ನಡ ಶಿರಸಿಯ ಕಸ್ತೂರಬಾ ನಗರದ ಸುಹಾನಾ ಮಹ್ಮದ್ ಶಫಿ (12) ಶಂಕಿತ ಡೆಂಗ್ಯೂ ಜ್ವರಕ್ಕೆ ಬಲಿಯಾಗಿದ್ದಾರೆ. ಡೆಂಗ್ಯೂ ಲಕ್ಷಣಗಳು ಕಂಡುಬಂದಿದ್ದ ಹಿನ್ನೆಲೆಯಲ್ಲಿ ಖಾಸಗಿ ಆಸ್ಪತ್ರೆಯಲ್ಲಿ ಜ್ವರಕ್ಕೆ ಬಾಲಕಿ ಚಿಕಿತ್ಸೆ ಪಡೆಯುತ್ತಿದ್ದಳು. ಚಿಕಿತ್ಸೆ ಫಲಿಸದ ಹಿನ್ನೆಲೆಯಲ್ಲಿ ಬಾಲಕಿ ಕೊನೆಯುಸಿರೆಳೆದಿದ್ದಾಳೆ. ಉತ್ತರ ಕನ್ನಡ ಜಿಲ್ಲೆಯಲ್ಲೂ ಡೆಂಗ್ಯೂ ಜ್ವರದ ಅಬ್ಬರ ಹೆಚ್ಚಳವಾಗಿದ್ದು, ಇದುವರೆಗೆ 122 ಡೆಂಗ್ಯೂ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ರಾಜ್ಯಾದ್ಯಂತ ಡೆಂಗ್ಯೂ ಪ್ರಕರಣಗಳ ಸಂಖ್ಯೆ ಏಳು ಸಾವಿರದ ಗಡಿ ದಾಟಿದ್ದು, ಜನರಲ್ಲಿ ಆತಂಕ ಮೂಡಿಸಿದೆ.

Read More

ಬೆಂಗಳೂರು : ರಾಜ್ಯ ಸರ್ಕಾರವು ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ಪೊಲೀಸ್‌ ಇಲಾಖೆಯಲ್ಲಿ ಶೀಘ್ರವೇ 400ಕ್ಕೂ ಹೆಚ್ಚಿನ ಸಬ್ ಇನ್ಸ್‌ಪೆಕ್ಟರ್‌ ಗಳ (PSI) ನೇಮಕಕ್ಕೆ ಗ್ರೀನ್‌ ಸಿಗ್ನಲ್‌ ನೀಡಿದೆ. ಈ ಕುರಿತು ಮಾಹಿತಿ ನೀಡಿರುವ ರಾಜ್ಯ ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಹಾಗೂ ಗೃಹ ಇಲಾಖೆ ಪ್ರಧಾನ ಕಾರ್ಯದರ್ಶಿ ಎಸ್.ಆರ್.ಉಮಾಶಂಕರ್, ರಾಜ್ಯದಲ್ಲಿ 400ಕ್ಕೂ ಹೆಚ್ಚಿನ ಪಿಎಸ್‌ ಐಗಳ ನೇಮಕಾತಿ ಸಂಬಂಧ ಗೃಹ ಇಲಾಖೆ ಸಲ್ಲಿಸಿದ ಪ್ರಸ್ತಾವನೆಗೆ ರಾಜ್ಯ ಸರ್ಕಾರ ಗ್ರೀನ್‌ ಸಿಗ್ನಲ್‌ ನೀಡಿದ್ದು, ಶೀಘ್ರವೇ ಈ ಬಗ್ಗೆ ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಲಿದೆ ಎಂದು ತಿಳಿಸಿದ್ದಾರೆ. ಇನ್ನು 545 ಪಿಎಸ್‌ಐ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಅಂತಿಮ ಹಂತಕ್ಕೆ ಬಂದಿದೆ. ಈ ನೇಮಕಾತಿ ವಿಚಾರವಾಗಿ ಹೈದರಾಬಾದ್ ಕರ್ನಾಟಕ ಮೀಸಲು ಸಂಬಂಧ ತಾಂತ್ರಿಕ ಅಡಚರಣೆ ಎದುರಾಗಿತ್ತು. ಈ ಬಗ್ಗೆ ಡಿಐಪಿಆರ್‌ನಿಂದ ಅಭಿಪ್ರಾಯ ಕೋರಲಾಗಿದೆ ಎಂದು ಹೇಳಿದ್ದಾರೆ.

Read More

ಬೆಂಗಳೂರು : ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ವೈದ್ಯಕೀಯ ತುರ್ತು ಸ್ಥಿತಿ ಘೋಷಿಸುವಂತೆ ಸಂಸದ ಡಾ.ಸಿ.ಎನ್.‌ ಮಂಜುನಾಥ್‌ ಆಗ್ರಹಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಕೋವಿಡ್‌ ಮಾದರಿಯಲ್ಲಿ ಚಿಕಿತ್ಸಾ ವ್ಯವಸ್ಥೆ ಆಗಬೇಕು. ಹೀಗಾಗಿ ವೈದ್ಯಕೀಯ ತುರ್ತು ಸ್ಥಿತಿ ಘೋಷಿಸಬೇಕು. ಡೆಂಗ್ಯೂ ಜ್ವರ ನಿಯಂತ್ರಣ ಎಂದರೆ ಸೊಳ್ಳೆಗಳ ನಿಯಂತ್ರಣ, ಡೆಂಗ್ಯೂ ಕಾಯಿಲೆಗೆ ನಿಖರವಾದ ಚಿಕಿತ್ಸೆ ಇಲ್ಲ. ಸೊಳ್ಳೆಗಳ ನಿಯಂತ್ರಣ ಬಹಳ ಮುಖ್ಯವಾಗಿದೆ. ಡೆಂಗ್ಯೂ ಜ್ವರ ನಿಯಂತ್ರಣ ಆಗದೇ ಇದ್ದಲ್ಲಿ ಮಾರಕ ಕಾಯಿಲೆಗಳಾದ ಚಿಕೂನ್‌ ಗುನ್ಯಾ, ಝೀಕಾ ವೈರಸ್‌ ಬರಬಹುದು ಎಂದು ಹೇಳಿದ್ದಾರೆ. ಇನ್ನು ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಡೆಂಗ್ಯೂ ಪ್ರಕರಣಗಳು ಹೆಚ್ಚಳವಾಗಿದ್ದು, ರಾಜ್ಯದಲ್ಲಿ ಶನಿವಾರ ಒಂದೇ ದಿನ 175 ಮಂದಿಗೆ ಡೆಂಗ್ಯೂ ಜ್ವರ ದೃಢಪಟ್ಟಿದೆ. ಈ ಮೂಲಕ ಪ್ರಸಕ್ತ ವರ್ಷದಲ್ಲಿ ಡೆಂಗ್ಯೂ ಪ್ರಕರಣಗಳ ಸಂಖ್ಯೆ 7,000 ಗಡಿ ದಾಟಿದೆ. ಒಂದೇ ತಿಂಗಳಲ್ಲಿ ಆರು ಮಂದಿ ಬಲಿಯಾಗಿದ್ದಾರೆ. ರಾಜ್ಯದಲ್ಲಿ ಈ ವರ್ಷ 93012 ಡೆಂಗೆ ಶಂಕಿತರನ್ನು ಗುರುತಿಸಿ,…

Read More

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಿಂದ ಅಂತರ ನಿಗಮ ವರ್ಗಾವಣೆಗೆ ಸಂಬಂಧಿಸಿದಂತೆ ಸಲ್ಲಿಕೆಯಾಗಿದ್ದಂತ KSRTC ನೌಕರರ ಅರ್ಜಿಗಳನ್ನು ಪರಿಶೀಲಿಸಿದ ನಂತ್ರ, ವರ್ಗಾವಣೆ ಪಟ್ಟಿಯನ್ನು ಪ್ರಕಟಿಸಲಾಗಿದೆ. ಈ ಪಟ್ಟಿಗೆ ಆಕ್ಷೇಪಣೆಯನ್ನು ಸಲ್ಲಿಸೋದಕ್ಕೆ ಜುಲೈ.10ರವರೆಗೆ ಅವಕಾಶ ನೀಡಲಾಗಿದೆ. ಈ ಕುರಿತಂತೆ KSRTC ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ದರ್ಜೆ-3 ಮೇಲ್ವಿಚಾರಕೇತರ ಮತ್ತು ದರ್ಜೆ-4 ನೌಕರರ 2023ನೇ ಸಾಲಿನ ಅಂತರ ನಿಗಮ ವರ್ಗಾವಣೆ ಪ್ರಕ್ರಿಯೆ ದಿನಾಂಕ: 05-07-2023 ರ ಬೆಳಿಗ್ಗೆ 11:00 ಗಂಟೆಯಿಂದ ಪ್ರಾರಂಭವಾಗಿದ್ದು, ದಿನಾಂಕ:31-12-2023 ರ ಸಂಜೆ 5:30 ರವರೆಗೆ ಆನ್-ಲೈನ್ ಮೂಲಕ www.ksrtc.org/transfer ರಲ್ಲಿ ಪರಸ್ಪರ ವರ್ಗಾವಣೆಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿರುತ್ತದೆ ಎಂದಿದೆ. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ, ಬೆಂ.ಮ.ಸಾ.ಸಂಸ್ಥೆ, ಕ.ಕ.ರ.ಸಾ.ಸಂಸ್ಥೆ ಮತ್ತು ವಾ.ಕ.ರ.ಸಾ.ಸಂಸ್ಥೆಗಳ ದರ್ಜೆ-3 ಮೇಲ್ವಿಚಾರಕೇತರ ಮತ್ತು ದರ್ಜೆ-4 ರ ನೌಕರರಿಗೆ ಅಂತರ ನಿಗಮ ಪರಸ್ಪರ 958 ನೌಕರರು ಅರ್ಜಿ ಸಲ್ಲಿಸಿದ್ದು, ಈ ಪೈಕಿ 616 ನೌಕರರು ಅವರ ಕೋರಿಕೆ ಮೇರೆಗೆ ಅಂತರ ನಿಗಮ ಪರಸ್ಪರ ವರ್ಗಾವಣೆಗೊಂಡಿರುತ್ತಾರೆ. ಸದರಿ…

Read More

ಕುಲ್ಗಾಮ್‌ : ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ಶನಿವಾರ ನಡೆದ ಅವಳಿ ಎನ್ಕೌಂಟರ್ಗಳಲ್ಲಿ ಕನಿಷ್ಠ ನಾಲ್ಕು ಭಯೋತ್ಪಾದಕರು ಸಾವನ್ನಪ್ಪಿದ್ದಾರೆ ಮತ್ತು ಇಬ್ಬರು ಸೈನಿಕರು ಹುತಾತ್ಮರಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ದಕ್ಷಿಣ ಕಾಶ್ಮೀರ ಜಿಲ್ಲೆಯ ಫ್ರಿಸಲ್ ಚಿನ್ನಿಗಮ್ ಮತ್ತು ಮೊದರ್ಗಾಮ್ ಪ್ರದೇಶಗಳಲ್ಲಿ ಎನ್ಕೌಂಟರ್ಗಳು ನಡೆದಿವೆ. ಭಯೋತ್ಪಾದಕರ ವಿರುದ್ಧ ಹೋರಾಡುವಾಗ ಇಬ್ಬರು ಸೈನಿಕರು ಪ್ರಾಣ ಕಳೆದುಕೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಫ್ರಿಸಲ್ ಚಿನ್ನಿಗಮ್ ಪ್ರದೇಶದಲ್ಲಿ ಕಾರ್ಡನ್ ಮತ್ತು ಶೋಧ ಕಾರ್ಯಾಚರಣೆಯ ಸಮಯದಲ್ಲಿ ಭಯೋತ್ಪಾದಕರೊಂದಿಗೆ ಸಂಪರ್ಕವನ್ನು ಸ್ಥಾಪಿಸಲಾಗಿದೆ ಎಂದು ಅವರು ಹೇಳಿದರು. ಅಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಈವರೆಗೆ ನಾಲ್ವರು ಭಯೋತ್ಪಾದಕರು ಸಾವನ್ನಪ್ಪಿದ್ದಾರೆ, ಅವರ ಶವಗಳನ್ನು ನೋಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಎನ್ಕೌಂಟರ್ ಸ್ಥಳದ ಡ್ರೋನ್ ದೃಶ್ಯಾವಳಿಗಳು ನಾಲ್ಕು ಶವಗಳು ಅಲ್ಲಿ ಬಿದ್ದಿರುವುದನ್ನು ತೋರಿಸಿದೆ, ಆದರೆ ಗುಂಡಿನ ದಾಳಿ ಇನ್ನೂ ನಡೆಯುತ್ತಿರುವುದರಿಂದ ಅವುಗಳನ್ನು ಇನ್ನೂ ಹಿಂಪಡೆಯಲು ಸಾಧ್ಯವಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. https://twitter.com/AdityaRajKaul/status/1809608451938742740?ref_src=twsrc%5Etfw%7Ctwcamp%5Etweetembed%7Ctwterm%5E1809608451938742740%7Ctwgr%5E166c48fd89c993f278b7860025be8beddc8ab338%7Ctwcon%5Es1_c10&ref_url=https%3A%2F%2Fapi-news.dailyhunt.in%2F ಎನ್ಕೌಂಟರ್ ಸ್ಥಳಕ್ಕೆ ಭೇಟಿ ನೀಡಿದ ಕಾಶ್ಮೀರದ ಪೊಲೀಸ್ ಇನ್ಸ್ಪೆಕ್ಟರ್ ಜನರಲ್…

Read More

ಬೆಂಗಳೂರು : ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಡೆಂಗ್ಯೂ ಪ್ರಕರಣಗಳು ಹೆಚ್ಚಳವಾಗಿದ್ದು, ರಾಜ್ಯದಲ್ಲಿ ಶನಿವಾರ ಒಂದೇ ದಿನ 175 ಮಂದಿಗೆ ಡೆಂಗ್ಯೂ ಜ್ವರ ದೃಢಪಟ್ಟಿದೆ. ಈ ಮೂಲಕ ಪ್ರಸಕ್ತ ವರ್ಷದಲ್ಲಿ ಡೆಂಗ್ಯೂ ಪ್ರಕರಣಗಳ ಸಂಖ್ಯೆ 7,000 ಗಡಿ ದಾಟಿದೆ. ಒಂದೇ ತಿಂಗಳಲ್ಲಿ ಆರು ಮಂದಿ ಬಲಿಯಾಗಿದ್ದಾರೆ. ರಾಜ್ಯದಲ್ಲಿ ಈ ವರ್ಷ 93012 ಡೆಂಗೆ ಶಂಕಿತರನ್ನು ಗುರುತಿಸಿ, ತಪಾಸಣೆಗೆ ಒಳಪಡಿಸಲಾಗಿದೆ. 40918 ಮಂದಿಯ ರಕ್ತ ಪರೀಕ್ಷೆ ನಡೆಸಲಾಗಿದೆ. ಒಟ್ಟು 5,098 ಮಂದಿಗೆ ಡೆಂಗ್ಯೂ ದೃಪಟ್ಟಿದ್ದರೆ ಬಿಬಿಎಂಪಿ ವ್ಯಾಪ್ತಿಯಲ್ಲಿ ಒಟ್ಟು 1,908 ಮಂದಿ ಸೇರಿ ಒಟ್ಟು 7006 ಮಂದಿಗೆ ಡೆಂಗ್ಯೂ ಜ್ವರ ಇರುವುದು ದೃಢಪಟ್ಟಿದೆ. ಶನಿವಾರ ಒಂದೇ ದಿನ ಬಿಬಿಎಂಪಿ ವ್ಯಾಪ್ತಿಯಲ್ಲಿ 115, ಮಂಡ್ಯ 26, ಗದಗ 8, ವಿಜಯಪುರ 9, ಉಡುಪಿ 2, ಉತ್ತರ ಕನ್ನಡ, ಬಳ್ಳಾರಿ ಜಿಲ್ಲೆಗಳಲ್ಲಿ ತಲಾ ಒಂದೊಂದು ಪ್ರಕರಣಗಳು ದಾಖಲಾಗಿವೆ. ಈಡಿಸ್ ಸೊಳ್ಳೆಯಿಂದ ಡೆಂಗ್ಯೂ ಹರಡುತ್ತದೆ. ಸೋಂಕಿತ ಸೊಳ್ಳೆ ಕಚ್ಚಿದ ನಾಲ್ಕರಿಂದ ಏಳು ದಿನಗಳಲ್ಲಿ ಹಲವಾರು ಚಿಹ್ನೆಗಳು ಮತ್ತು ರೋಗಲಕ್ಷಣಗಳನ್ನು…

Read More

ವಿಜಯಪುರ : ವಿಜಯಪುರ ಜಿಲ್ಲೆಯಲ್ಲಿ ತಡರಾತ್ರಿ ಮತ್ತೆ ಭೂಕಂಪ ಸಂಭವಿಸಿದ್ದು, ಜನರು ಭಯಭೀತರಾಗಿ ಮನೆಗಳಿಂದ ಹೊರಗೆ ಓಡಿ ಬಂದಿರುವ ಘಟನೆ ನಡೆದಿದೆ. ವಿಜಯಪುರ ಜಿಲ್ಲೆಯ ತಿಕೋಟ ತಾಲೂಕಿನ ಸೋಮದೇವರಹಟ್ಟಿ, ಕಳಕವಟಗಿ, ಹುಬನೂರು, ಟಕ್ಕಳಗಿ ಭಾಗದಲ್ಲಿ ರಾತ್ರಿ ಭೂಕಂಪನದ ಅನುಭವವಾಗಿದ್ದು, ಜನರು ಭಯಭೀತರಾಗಿ ಮನೆಗಳಿಂದ ಹೊರಗೆ ಓಡಿ ಬಂದಿದ್ದಾರೆ. ರಾತ್ರಿ 9.26  ರ ಸುಮಾರಿಗೆ ಭೂಕಂಪನವಾಗಿದ್ದು, ಮನೆಯಲ್ಲಿ ಮಲಗಿದ್ದ ಜನರು ಭಯಭೀತರಾಗಿ ಹೊರಗೆ ಓಡಿ ಬಂದಿದ್ದು, ರಾತ್ರಿಯಲ್ಲ ಮನೆಯ ಹೊರಗೆ ಕಳೆದಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Read More

ಬೆಂಗಳೂರು: ಫೇಕ್ ನ್ಯೂಸ್ ಗಳು ಸಮಾಜದ ನೆಮ್ಮದಿಗೆ ಕಂಟಕವಾಗಿವೆ. ಇವು ವಿಪರೀತ ಹೆಚ್ಚಾಗುತ್ತಿವೆ. ಇವುಗಳ ತಡೆಗೆ fact check ಘಟಕಗಳನ್ನು ಮಾಡಿದ್ದೇವೆ. ಆದರೂ ಫೇಕ್ ನ್ಯೂಸ್ ಗಳು ಹೆಚ್ಚಾಗುತ್ತಿವೆ. ಇದನ್ನು ಸಹಿಸಲು ಸಾಧ್ಯವಿಲ್ಲ. ಸದ್ಯ ಫೇಕ್ ನ್ಯೂಸ್ ತಡೆಯಲು ಆಗುತ್ತಿರುವ ಕೆಲಸ ಸಾಲುತ್ತಿಲ್ಲ ಎಂದು ಪೊಲೀಸರಿಗೆ ಸಿಎಂ ಸಿದ್ಧರಾಮಯ್ಯ ಖಡಕ್ ಎಚ್ಚರಿಕೆ ನೀಡಿದ್ದಾರೆ. ರಾಜ್ಯ ಪೊಲೀಸ್ ಮಹಾ ನಿರ್ದೇಶಕರ ಕಚೇರಿಯಲ್ಲಿ 2024ರ ಹಿರಿಯ ಪೊಲೀಸ್ ಅಧಿಕಾರಿಗಳ ಸಮಾವೇಷವನ್ನು ಉದ್ಘಾಟಿಸಿ, ನೂತನ ತಂತ್ರಾಂಶಗಳನ್ನು ಬಿಡುಗಡೆಗೊಳಿಸಿ ಮಾತನಾಡಿದರು. ಕೃತಕ ಬುದ್ದಿಮತ್ತೆ ಬಳಸಿ. ಸ್ವಯಂ ಪ್ರೇರಿತ ದೂರುಗಳನ್ನು ಹೆಚ್ಚೆಚ್ಚು ದಾಖಲಿಸಿ ಯಾವುದೇ ಮುಲಾಜಿಲ್ಲದೆ ಕಠಿಣ ಕ್ರಮ ಕೈಗೊಳ್ಳಲೇಬೇಕು ಎಂದು ಸ್ಪಷ್ಟ ಸೂಚನೆ ನೀಡಿದರು. ಡ್ರಗ್ಸ್ ಪೂರ್ತಿ ನಿಂತಿಲ್ಲ ಏಕೆ? ಡ್ರಗ್ಸ್ ಮಾರೋರು ಯಾರು? ರೌಡಿಗಳು ಯಾರು?/ರಿಯಲ್ ಎಸ್ಟೇಟ್ ಮಾಡೋರು ಯಾರು ಎನ್ನುವುದು ಆಯಾ ಠಾಣಾಧಿಕಾರಿಗಳಿಗೆ ಗೊತ್ತಿರತ್ತೆ. ಆದರೂ ಯಾಕೆ ನಿಲ್ಲುತ್ತಿಲ್ಲ‌ ಎಂದು ಪ್ರಶ್ನಿಸಿದರು. ನಿಮಗೆ ಗನ್ ಗಳನ್ನು ಕೊಟ್ಟಿರುವುದು ಏಕೆ ? ಈ ಬಗ್ಗೆ ರೌಡಿಗಳಿಗೆ…

Read More