Author: kannadanewsnow57

ನವದೆಹಲಿ : ವಿಶ್ವಕಪ್‌ ಗೆದ್ದ ಬಳಿಕ ಮೊದಲ ಬಾರಿಗೆ ತಾಯ್ನಾಡಿಗೆ ಆಗಮಿಸಿದ ಟೀಂ ಇಂಡಿಯಾ ಆಟಗಾರರಿಗೆ ಅಭಿಮಾನಿಗಳಿಂದ ಅದ್ಧೂರಿ ಸ್ವಾಗತ ಸಿಕ್ಕಿದ್ದು, ಟೀಂ ಇಂಡಿಯಾ ಆಟಗಾರರ ಪರ ಅಭಿಮಾನಿಗಳ ಘೋಷಣೆ ಮುಗಿಲು ಮುಟ್ಟಿದೆ. ಟಿ 20 ವಿಶ್ವಕಪ್ ಟ್ರೋಫಿಯೊಂದಿಗೆ ರೋಹಿತ್ ಶರ್ಮಾ ಮತ್ತು ಭಾರತೀಯ ಆಟಗಾರರ ದೆಹಲಿ ಏರ್‌ ಪೋರ್ಟ್‌ ಗೆ ಬಂದಿಳಿದಿದ್ದಾರೆ. ಈ ವೇಳೆ ಟ್ರೋಫಿ ರೋಹಿತ್ ಶರ್ಮಾ ಅವರ ಕೈಯಲ್ಲಿದೆ. ವಿಮಾನ ನಿಲ್ದಾಣದಿಂದ ಹೊರಡುವಾಗ, ಅವರು ಅದನ್ನು ಕೈಯಲ್ಲಿ ಹಿಡಿದಿದ್ದರು. ಬಳಿಕ ಅದನ್ನು ಅಭಿಮಾನಿಗಳಿಗೆ ಎತ್ತಿ ತೋರಿಸಿದ್ದಾರೆ. ಈ ವೇಳೆ ಅಭಿಮಾನಿಗಳ ಸಂಭ್ರಮ ಮುಗಿಲು ಮುಟ್ಟಿದೆ. https://twitter.com/ANI/status/1808676394013966836?ref_src=twsrc%5Etfw%7Ctwcamp%5Etweetembed%7Ctwterm%5E1808676394013966836%7Ctwgr%5E1d2fddac81794020a3268b9ffdb311c4f7ad11c9%7Ctwcon%5Es1_c10&ref_url=https%3A%2F%2Fapi-news.dailyhunt.in%2F https://twitter.com/ANI/status/1808676075259466132?ref_src=twsrc%5Etfw%7Ctwcamp%5Etweetembed%7Ctwterm%5E1808676075259466132%7Ctwgr%5E1d2fddac81794020a3268b9ffdb311c4f7ad11c9%7Ctwcon%5Es1_c10&ref_url=https%3A%2F%2Fapi-news.dailyhunt.in%2F https://twitter.com/ANI/status/1808677287254184085?ref_src=twsrc%5Etfw%7Ctwcamp%5Etweetembed%7Ctwterm%5E1808677287254184085%7Ctwgr%5E1d2fddac81794020a3268b9ffdb311c4f7ad11c9%7Ctwcon%5Es1_c10&ref_url=https%3A%2F%2Fapi-news.dailyhunt.in%2F https://twitter.com/ANI/status/1808672462852202899?ref_src=twsrc%5Etfw%7Ctwcamp%5Etweetembed%7Ctwterm%5E1808672462852202899%7Ctwgr%5E1d2fddac81794020a3268b9ffdb311c4f7ad11c9%7Ctwcon%5Es1_c10&ref_url=https%3A%2F%2Fapi-news.dailyhunt.in%2F https://twitter.com/ANI/status/1808664837611999714?ref_src=twsrc%5Etfw%7Ctwcamp%5Etweetembed%7Ctwterm%5E1808664837611999714%7Ctwgr%5E1d2fddac81794020a3268b9ffdb311c4f7ad11c9%7Ctwcon%5Es1_c10&ref_url=https%3A%2F%2Fapi-news.dailyhunt.in%2F

Read More

ಉಡುಪಿ : ರಾಜ್ಯದಲ್ಲಿ ಹೃದಯಾಘಾತಕ್ಕೆ ಮತ್ತೊಂದು ಬಲಿಯಾಗಿದ್ದು, ಹೃದಯಾಘಾತದಿಂದ 10ನೇ ತರಗತಿ ವಿದ್ಯಾರ್ಥಿನಿ ಸಾವನ್ನಪ್ಪಿರುವ ಘಟನೆ ಉಡುಪಿ ಜಿಲ್ಲೆಯ ಮೂಡಬಳ್ಳೆಯಲ್ಲಿ ನಡೆದಿದೆ. ಮೂಡುಬೆಳ್ಳೆ ಸಂತ ಲಾರೆನ್ಸ್‌ ಕನ್ನಡ ಮಾಧ್ಯಮ ಪ್ರೌಢ ಶಾಲೆಯ 10ನೇ ತರಗತಿ ವಿದ್ಯಾರ್ಥಿನಿ ಭಾಗ್ಯಶ್ರೀ (16) ಹೃದಯಾಘಾತದಿಂದ ಮೃತಪಟ್ಟಿದ್ದಾಳೆ. ಪಳ್ಳಿ ದಾದಬೆಟ್ಟು ನಿವಾಸಿ ಜಯರಾಮ ಆಚಾರ್ಯ – ಚಂದ್ರಿಕಾ ದಂಪತಿ ಪುತ್ರಿ ಭಾಗ್ಯಶ್ರೀ ಬೆಳಿಗ್ಗೆ ಮನೆಯಲ್ಲಿ ಎದೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಆಕೆಯನ್ನು ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಆಕೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾಳೆ.

Read More

ಬೆಂಗಳೂರು : ಮೊಬೈಲ್ ನಲ್ಲಿ ಚಾರ್ಚ್ ಖಾಲಿಯಾದಾಗ ತಕ್ಷಣ ಫೋನ್ ಚಾರ್ಚಿಂಗ್ ಗೆ ಹಾಕುತ್ತೇವೆ. ಮೊಬೈಲ್ ಚಾರ್ಚ್ ಆಗಲು ಒಂದರಿಂದ ಎರಡು ಗಂಟೆ ತೆಗೆದುಕೊಳ್ಳಬಹುದು. ಆದರೆ ಮೊಬೈಲ್ ಚಾರ್ಚ್ ಮಾಡುವಾಗ ಅನೇಕರು ಕೆಲವು ತಪ್ಪುಗಳನ್ನುಮಾಡುತ್ತಾರೆ. ಇದರಿಂದಾಗಿ ಅವರ ಬ್ಯಾಟರಿ ಬಾಳಿಕೆ ಕಡಿಮೆಯಾಗುವುದು ಮಾತ್ರವಲ್ಲದೆ ಸ್ಮಾರ್ಟ್‌ಫೋನ್‌ನ ಬಾಳಿಕೆಯೂ ಕಡಿಮೆಯಾಗಲು ಪ್ರಾರಂಭಿಸುತ್ತದೆ. ಹಾಗಾದರೆ ನಿಮ್ಮ ಸ್ಮಾರ್ಟ್‌ಫೋನ್ ನಿಮ್ಮೊಂದಿಗೆ ದೀರ್ಘಕಾಲ ಉಳಿಯಬೇಕೆಂದರೆ, ಅದರಲ್ಲಿ ಯಾವುದೇ ತೊಂದರೆ ಉಂಟಾಗದಂತೆ ನೋಡಿಕೊಳ್ಳಲು ಇಂದಿನಿಂದಲೇ ಈ ತಪ್ಪಗಳನ್ನು ಮಾಡುವುದನ್ನಿ ನಿಲ್ಲಿಸಿ. ಪೂರ್ಣ ಚಾರ್ಜಿಂಗ್ ಮಾಡಬಾರದು ಹೆಚ್ಚಿನ ಬಳಕೆದಾರರು ತಮ್ಮ ಸ್ಮಾರ್ಟ್‌ಫೋನ್ ಅನ್ನು ಸಂಪೂರ್ಣವಾಗಿ ಚಾರ್ಜ್ ಮಾಡುತ್ತಾರೆ. ಆದರೆ ಇದನ್ನು ಮಾಡಬಾರದು. ಸ್ಮಾರ್ಟ್ಫೋನ್ ಯಾವಾಗಲೂ 80% ವರೆಗೆ ಮಾತ್ರ ಚಾರ್ಜ್ ಮಾಡಬೇಕು. ಇದರೊಂದಿಗೆ ಫೋನ್‌ನ ಬ್ಯಾಟರಿಯ ಆರೋಗ್ಯವು ಉತ್ತಮವಾಗಿರುತ್ತದೆ, ಆದರೆ ಸ್ಮಾರ್ಟ್‌ಫೋನ್ ಸಹ ದೀರ್ಘಕಾಲದವರೆಗೆ ಇರುತ್ತದೆ. ನಕಲಿ ಚಾರ್ಜರ್ ಬಳಕೆ ನಿಮ್ಮ ಸ್ಮಾರ್ಟ್ ಫೋನ್ ಅನ್ನು ಚಾರ್ಜ್ ಮಾಡಲು ನೀವು ನಕಲಿ ಚಾರ್ಜರ್ ಅನ್ನು ಬಳಸಿದರೆ, ಈ ಸಣ್ಣ ನಿರ್ಲಕ್ಷ್ಯವು ನಿಮಗೆ…

Read More

ನವದೆಹಲಿ : ಇನ್‌ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸನಲ್ ಸೆಲೆಕ್ಷನ್ (IBPS) 2025-2026ರ ಸಾಮಾನ್ಯ ನೇಮಕಾತಿ ಪ್ರಕ್ರಿಯೆ (CRP)-XIV ಅಧಿಸೂಚನೆಯನ್ನ ಬಿಡುಗಡೆ ಮಾಡಿದೆ. ಐಬಿಪಿಎಸ್ ಕ್ಲರ್ಕ್ ಅಧಿಸೂಚನೆಯ ಮೂಲಕ ಒಟ್ಟು 6128 ಹುದ್ದೆಗಳನ್ನ ಭರ್ತಿ ಮಾಡಲಾಗುತ್ತದೆ. ಬ್ಯಾಂಕ್ ಉದ್ಯೋಗಕ್ಕಾಗಿ ಕಾಯುತ್ತಿರುವ ನಿರುದ್ಯೋಗಿಗಳಿಗೆ ದೇಶಾದ್ಯಂತ ಸಾರ್ವಜನಿಕ ವಲಯದ ಬ್ಯಾಂಕ್‌ಗಳಲ್ಲಿ ಕ್ಲರ್ಕ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅವಕಾಶ ಸಿಕ್ಕಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕಂಪ್ಯೂಟರ್ ಜ್ಞಾನದೊಂದಿಗೆ ಯಾವುದೇ ಪದವಿಯಲ್ಲಿ ಉತ್ತೀರ್ಣರಾಗಿರಬೇಕು. ಜುಲೈ 1, 2024 ರಂತೆ ಅಭ್ಯರ್ಥಿಗಳ ವಯಸ್ಸು 20 ರಿಂದ 28 ವರ್ಷಗಳ ನಡುವೆ ಇರಬೇಕು. ಅಂದರೆ ಅರ್ಜಿದಾರರು ಜುಲೈ 2, 1996 ಮತ್ತು ಜುಲೈ 1, 2004ರ ನಡುವೆ ಜನಿಸಿದವರಾಗಿರಬೇಕು. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಜುಲೈ 1 ರಿಂದ ಆನ್‌ಲೈನ್‌’ನಲ್ಲಿ ಅರ್ಜಿ ಸಲ್ಲಿಸಬಹುದು. ಆನ್‌ಲೈನ್ ಅರ್ಜಿಗಳಿಗೆ ಕೊನೆಯ ದಿನಾಂಕ ಜುಲೈ 21, 2024. ಸಾಮಾನ್ಯ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಸಮಯದಲ್ಲಿ 850 ರೂಪಾಯಿ ಪಾವತಿಸಬೇಕು. SC, ST, PWD,…

Read More

ರಾಜ್ಯ ಸರ್ಕಾರದ ಪ್ರಮುಖ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಯುವನಿಧಿ ಯೋಜನೆಯು ಡಿಸೆಂಬರ್ 26 ರಿಂದ ನೋಂದಣಿ ಪ್ರಕ್ರಿಯೆ ಚಾಲನೆಗೊಂಡಿದೆ. ಪ್ರತೀ ತಿಂಗಳು 3,000 ಮತ್ತು 1500 ರೂ. ನಿರುದ್ಯೋಗ ಭತ್ಯೆಯನ್ನು ನೀಡುವ ಯೋಜನೆ ಆಗಿದೆ. ಜನವರಿ 12 ರಿಂದ ಅರ್ಹ ಫಲಾನುಭವಿಗಳ ಖಾತೆಗೆ ನೇರ ನಗದು ವರ್ಗಾವಣೆ ಆರಂಭವಾಗಿದ್ದು, ಜಿಲ್ಲೆಯಲ್ಲಿ ಯುವನಿಧಿ ಯೋಜನೆಗೆ ಇದುವರೆಗೆ 1134 ಮಂದಿ ಹೆಸರು ನೋಂದಣಿ ಮಾಡಿದ್ದು, 562 ಮಂದಿಗೆ ಯುವನಿಧಿ ಯೋಜನೆ ತಲುಪುತಿದೆ. ಯುವನಿಧಿ ಯೋಜನೆ ಪಡೆಯುತ್ತಿರುವವರು ಪ್ರತಿ ತಿಂಗಳು ಸ್ವಯಂ ದೃಢೀಕರಣವನ್ನು ಆನ್‍ಲೈನ್ ಮೂಲಕ ಸಲ್ಲಿಸಬೇಕಿದೆ ಎಂದು ಜಿಲ್ಲಾ ಉದ್ಯೋಗವಿನಿಯಮಾಯಾಧಿಕಾರಿ ರೇಖಾ ಗಣಪತಿ ಅವರು ತಿಳಿಸಿದ್ದಾರೆ. ಕುಶಾಲನಗರ ತಾಲ್ಲೂಕಿನಲ್ಲಿ 177, ಮಡಿಕೇರಿ ತಾಲ್ಲೂಕಿನಲ್ಲಿ 304, ಪೊನ್ನಂಪೇಟೆ ತಾಲ್ಲೂಕಿನಲ್ಲಿ 133, ಸೋಮವಾರಪೇಟೆ ತಾಲ್ಲೂಕಿನಲ್ಲಿ 317, ವಿರಾಜಪೇಟೆ ತಾಲ್ಲೂಕಿನಲ್ಲಿ 203 ಮಂದಿ ಹೆಸರು ನೋಂದಾಯಿಸಿದ್ದಾರೆ. ಯುವನಿಧಿ ಯೋಜನೆ ಫಲಾನುಭವಿಗಳ ಗಮನಕ್ಕೆ: ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯ ಮುಖಾಂತರ ಸರ್ಕಾರದ ಮಹತ್ತರ ಯೋಜನೆಯಾದ ಯುವಜನತೆಯ ಉಜ್ವಲ ಭವಿಷ್ಯಕ್ಕಾಗಿ…

Read More

ಬೆಂಗಳೂರು : ಮಲೆನಾಡು, ಕರಾವಳಿ ಸೇರಿದಂತೆ ರಾಜ್ಯಾದ್ಯಂತ ಇಂದು ಮಳೆಯ ಆರ್ಭಟ ಮುಂದುವರೆಯಲಿದ್ದು, ಹಲವು ಜಿಲ್ಲೆಗಳಿಗೆ ಯೆಲ್ಲೋ, ಆರೆಂಜ್‌ ಅಲರ್ಟ್ ಘೋಷಿಸಲಾಗಿದೆ. ಹವಾಮಾನ ಇಲಾಖೆಯ ಮಾಹಿತಿ ಪ್ರಕಾರ, ದಕ್ಷಿಣ ಕನ್ನಡ ಜಿಲ್ಲೆ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಇಂದಿನಿಂದ ನಾಲ್ಕೈದು ಭಾರೀ ಮಳೆಯಾಗಲಿದೆ. ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಶಿವಮೊಗ್ಗ ಹಾಗೂ ಕೊಡಗು ಜಿಲ್ಲೆಯಲ್ಲಿ ಭಾರೀ ಮಳೆಯ ಕಾರಣ, ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಇನ್ನೂ ಕರಾವಳಿ ಜಿಲ್ಲೆಯಲ್ಲಿ ಭಾರೀ ಮಳೆಯ ಕಾರಣ, ಗಾಳಿ ಜಾಸ್ತಿ ಇರಲಿದೆ. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಿದೆ.

Read More

ಬೆಂಗಳೂರು : ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸಿಇಟಿ ಅಭ್ಯರ್ಥಿಗಳ ದಾಖಲಾತಿ ಪರಿಶೀಲನಾ ಮಾಹಿತಿಯನ್ನು ಪ್ರಕಟಿಸಿದ್ದು, ತಪ್ಪು ಕಂಡುಬಂದಿದ್ದರೆ ಅಂತಹ ಅಭ್ಯರ್ಥಿಗಳು ಜುಲೈ 4 ರಿಂದ 6ರ ಒಳಗೆ ಮಲ್ಲೇಶ್ವರದ ಕಚೇರಿಗೆ ಖುದ್ದು ಹಾಜರಾಗಬೇಕು ಎಂದು ಕೆಇಎ ಹೇಳಿದೆ. ಒಂದು ಲಕ್ಷಕ್ಕಿಂತ ಒಳಗಿನ ರ್ಯಾಂಕಿಂಗ್‌ನ ವಿದ್ಯಾರ್ಥಿಗಳು ಜುಲೈ 4 ರಂದು 1.8 ಲಕ್ಷಕ್ಕಿಂತ ಒಳಗಿನವರು ಜುಲೈ 5 ರಂದು ಹಾಗೂ 1.8 ಲಕ್ಷಕ್ಕಿಂತ ಮೇಲ್ಪಟ್ಟು ರ್ಯಾಂಕ್‌ ಪಡೆದವರು ಜುಲೈ 6 ರಂದು ಕೆಇಎ ವೆಬ್‌ಸೈಟ್‌ನಲ್ಲಿ ಪ್ರಕಟಿಸಿರುವ ವೇಳಾಪಟ್ಟಿಯ ಪ್ರಕಾರ ಹಾಜರಾಗಬೇಕು. ಸಿಇಟಿಗೆ ಸಲ್ಲಿಸಿದ್ದ ಅರ್ಜಿ ಪ್ರತಿ, ಪ್ರವೇಶ ಪತ್ರ ಅಗತ್ಯವಿರುವ ಎಲ್ಲಾ ಮೂಲ ದಾಖಲೆಗಳು ಮತ್ತು ಎಲ್ಲಾ ಪ್ರಮಾಣ ಪತ್ರಗಳ ಎರಡು ಸೆಟ್‌ ಜೆರಾಕ್ಸ್‌ ಪ್ರತಿಗಳೊಂದಿಗೆ ಬರಬೇಕು. ಎಲ್ಲ ಮಾಹಿತಿ ಸರಿ ಇರುವವರು ಕೆಇಎ ಕಚೇರಿಗೆ ಭೇಟಿ ನೀಡುವ ಅಗತ್ಯವಿಲ್ಲ ಎಂದು ಸೂಚಿಸಿದೆ.

Read More

ನವದೆಹಲಿ: ಮಹಾರಾಷ್ಟ್ರದಿಂದ ಕೆಲವು ಜಿಕಾ ವೈರಸ್ ಪ್ರಕರಣಗಳು ವರದಿಯಾದ ಹಿನ್ನೆಲೆಯಲ್ಲಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಆರೋಗ್ಯ ಸೇವೆಗಳ ಮಹಾನಿರ್ದೇಶಕ (ಡಿಜಿಹೆಚ್ಎಸ್) ಡಾ.ಅತುಲ್ ಗೋಯೆಲ್ ಅವರು ದೇಶದಲ್ಲಿ ಜಿಕಾ ವೈರಸ್ ಪರಿಸ್ಥಿತಿಯ ಬಗ್ಗೆ ನಿರಂತರ ಜಾಗರೂಕತೆಯನ್ನು ಕಾಪಾಡಿಕೊಳ್ಳುವ ಅಗತ್ಯವನ್ನು ಎತ್ತಿ ತೋರಿಸುವ ಅಗತ್ಯವನ್ನು ಎತ್ತಿ ತೋರಿಸಲು ರಾಜ್ಯಗಳಿಗೆ ಸಲಹೆ ನೀಡಿದ್ದಾರೆ. ಪೀಡಿತ ಗರ್ಭಿಣಿ ಮಹಿಳೆಯ ಭ್ರೂಣದಲ್ಲಿ ಮೈಕ್ರೋಸೆಫಾಲಿ ಮತ್ತು ನರವೈಜ್ಞಾನಿಕ ಪರಿಣಾಮಗಳೊಂದಿಗೆ ಜಿಕಾ ಸಂಬಂಧ ಹೊಂದಿರುವುದರಿಂದ, ನಿಕಟ ಮೇಲ್ವಿಚಾರಣೆಗಾಗಿ ವೈದ್ಯರನ್ನು ಎಚ್ಚರಿಸಲು ರಾಜ್ಯಗಳಿಗೆ ಸೂಚಿಸಲಾಗಿದೆ. ಗರ್ಭಿಣಿಯರನ್ನು ಝಿಕಾ ವೈರಸ್ ಸೋಂಕಿಗಾಗಿ ಪರೀಕ್ಷಿಸಲು, ಝಿಕಾ ವೈರಸ್ ಸೋಂಕಿಗೆ ಒಳಗಾದ ತಾಯಂದಿರ ಭ್ರೂಣದ ಬೆಳವಣಿಗೆಯನ್ನು ಮೇಲ್ವಿಚಾರಣೆ ಮಾಡಲು ಮತ್ತು ಕೇಂದ್ರ ಸರ್ಕಾರದ ಮಾರ್ಗಸೂಚಿಗಳ ಪ್ರಕಾರ ಕಾರ್ಯನಿರ್ವಹಿಸಲು ಪೀಡಿತ ಪ್ರದೇಶಗಳಲ್ಲಿನ ಆರೋಗ್ಯ ಸೌಲಭ್ಯಗಳಿಗೆ ಅಥವಾ ಪೀಡಿತ ಪ್ರದೇಶಗಳಿಂದ ಪ್ರಕರಣಗಳನ್ನು ಪೂರೈಸುವವರಿಗೆ ಸೂಚನೆ ನೀಡುವಂತೆ ರಾಜ್ಯಗಳನ್ನು ಒತ್ತಾಯಿಸಲಾಗಿದೆ. ಈಡಿಸ್ ಆವರಣವನ್ನು ಸೊಳ್ಳೆ ಮುಕ್ತವಾಗಿಡಲು ಮೇಲ್ವಿಚಾರಣೆ ಮಾಡಲು ಮತ್ತು ಕಾರ್ಯನಿರ್ವಹಿಸಲು ನೋಡಲ್ ಅಧಿಕಾರಿಯನ್ನು ಗುರುತಿಸಲು ಆರೋಗ್ಯ ಸೌಲಭ್ಯಗಳು…

Read More

ಬೆಂಗಲೂರು : ರಾಜ್ಯದಲ್ಲಿ ಡೆಂಘಿ ಜ್ವರ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಡೆಂಘಿ ಪರೀಕ್ಷೆಗೆ ಆಸ್ಪತ್ರೆ ಹಾಗೂ ಪ್ರಯೋಗಾಲಯಗಳಲ್ಲಿ ಹೆಚ್ಚು ಹಣ ವಸೂಲಿ ಮಾಡುತ್ತಿರುವ ಹಿನ್ನೆಲೆಯಲ್ಲ ರಾಜ್ಯ ಸರ್ಕಾರ ಪರೀಕ್ಷಾ ಶುಲ್ಕಗಳನ್ನು ನಿಗದಿ ಮಾಡಿ ಆದೇಶ ಹೊರಡಿಸಿದೆ. ಈ ಕುರಿತಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಪದ್ಮ.ವಿ ಅವರು ನಡವಳಿಯನ್ನು ಹೊರಡಿಸಿದ್ದಾರೆ. ಅದರಲ್ಲಿ  ರಾಜ್ಯದಲ್ಲಿ ಡೆಂಗಿಜ್ವರ ಪತ್ತೆ ಹಚ್ಚುವ ಪರೀಕ್ಷೆಗಳಾದ ಎಲಿಸಾ ಹಾಗೂ ರಾಪಿಡ್ ಟೆಸ್‌ಗಳ ದರವನ್ನು ನಿಗದಿಗೊಳಿಸಲಾಗಿತ್ತು. ಖಾಸಗಿ ಆಸ್ಪತ್ರೆಗಳು ಹಾಗೂ ಖಾಸಗಿ ಪ್ರಯೋಗಶಾಲೆಗಳ ಡಯಾಗೋಸ್ಟಿಕ್ ಲ್ಯಾಬೋರೇಟರಿಗಳು ಡಂಗಿಜ್ವರ ಪತ್ತೆಹಚ್ಚುವ ಪರೀಕ್ಷೆಗಳಿಗೆ ವಿವಿಧ ದರಗಳನ್ನು ವಿಧಿಸಲಾಗುತ್ತಿದೆ ಎಂದಿದ್ದಾರೆ. ಪ್ರಸ್ತುತ ರಾಜ್ಯದಲ್ಲಿ ಡೆಂಗಿಜ್ವರ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕ ಹಿತದೃಷ್ಟಿಯಿಂದ ಮೇಲೆ ಓದಲಾದ ಕ್ರಮಾಂಕ (2)ರನ್ವಯ, ಡೆಂಗಿ ಜ್ವರ ಪತ್ತೆ ಹಚ್ಚುವ ELISA ಹಾಗೂ Rapid card test ದರಗಳನ್ನು (Screening test) ಪರಿಷ್ಕರಿಸಲು ಉದ್ದೇಶಿಸಲಾಗಿರುತ್ತದೆ ಎಂದು ಹೇಳಿದ್ದಾರೆ. ಪ್ರಸ್ತಾವನೆಯಲ್ಲಿ ತಿಳಿಸಿರುವ ಅಂಶಗಳ ಹಿನ್ನಲೆಯಲ್ಲಿ, ರಾಜ್ಯದ ಖಾಸಗಿ ಆಸ್ಪತ್ರೆಗಳಿಗೆ…

Read More

ಬೆಂಗಳೂರು : ಸರ್ಕಾರಿ ಆಸ್ತಿ ಒತ್ತುವರಿ ಮಾಡಿಕೊಂಡವರಿಗೆ ರಾಜ್ಯ ಸರ್ಕಾರ ಶಾಕ್‌ ನೀಡಿದ್ದು, ಆಗಸ್ಟ್‌ನಿಂದ ರಾಜ್ಯಾದ್ಯಂತ ಸರ್ಕಾರಿ ಆಸ್ತಿಗಳ ಒತ್ತುವರಿ ತೆರವು ಕಾರ್ಯ ಆರಂಭಿಸಲಾಗುವುದು ಎಂದು ಕಂದಾಯ ಇಲಾಖೆ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ. ಸರ್ಕಾರಿ ಜಮೀನುಗಳನ್ನು ಉಳಿಸಬೇಕು ಹಾಗೂ ಒತ್ತುವರಿಯನ್ನು ತೆರವುಗೊಳಿಸಬೇಕು ಎಂದು ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರೂ ಖಡಕ್‌ ಸೂಚನೆ ನೀಡಿದ್ದಾರೆ. ಇದೇ ಕಾರಣಕ್ಕೆ “ಬೀಟ್‌ ಸಿಸ್ಟಂ ಆ್ಯಪ್”ಅನ್ನು ಅಭಿವೃದ್ಧಿಪಡಿಸಲಾಯಿತು. ಈ ಆ್ಯಪ್ ಮೂಲಕ ಈಗಾಗಲೇ ಶೇ.70 ರಷ್ಟು ಸರ್ಕಾರಿ ಜಮೀನನ್ನು ಗುರುತಿಸಲಾಗಿದೆ. ಶೀಘ್ರ ಶೇ.100 ರಷ್ಟು ಜಮೀನನ್ನೂ ಗುರುತಿಸಬೇಕು. ತಹಶೀಲ್ದಾರರೇ ಮುಂದೆ ನಿಂತು ಒತ್ತುವರಿಯನ್ನು ತೆರವುಗೊಳಿಸುವ ಕೆಲಸ ಶುರು ಮಾಡಬೇಕು ಎಂದರು. ಅಲ್ಲದೆ, ಹಲವು ಕಡೆಗಳಲ್ಲಿ ಕೆರೆ ಮತ್ತು ಸ್ಮಶಾನ ಜಾಗಗಳನ್ನೇ ಒತ್ತುವರಿ ಮಾಡಲಾಗಿದೆ. ಇಂತಹ ಎಲ್ಲಾ ಜಮೀನಿನಲ್ಲೂ ಒತ್ತುವರಿ ತೆರವುಗೊಳಿಸಬೇಕು, ಅಲ್ಲದೆ, ಪ್ರತಿ ಮೂರು ತಿಂಗಳಿಗೊಮ್ಮೆ ಗ್ರಾಮ ಆಡಳಿತ ಅಧಿಕಾರಿಗಳು ಸರ್ಕಾರಿ ಜಮೀನಿಗೆ ಬೀಟ್‌ ಹಾಕಬೇಕು. ಆ ಮೂಲಕ ಸರ್ಕಾರಿ ಆಸ್ತಿಯನ್ನು ರಕ್ಷಿಸಬೇಕು” ಎಂದು ಅವರು ಒತ್ತಾಯಿಸಿದರು.

Read More