Author: kannadanewsnow57

ಹಾಸನ : ಹಾಸನ ಜಿಲ್ಲೆಯಲ್ಲಿ ಮಳೆಯ ಆರ್ಭಟ ಮುಂದುವರೆದಿದ್ದು, ಸಕಲೇಶಪುರ ತಾಲೂಕಿನ ಹೆಗ್ಗದ್ದೆ ಮಾರನಹಳ್ಳಿ ಬಳಿ ಮಣ್ಣು ಕುಸಿತವಾಗಿದ್ದು, ಶಿರಾಡಿಘಾಟ್ ಮಾರ್ಗದಲ್ಲಿ ವಾಹನಗಳ ಸಂಚಾರ ಬಂದ್ ಮಾಡಲಾಗಿದೆ. ಸಕಲೇಶಪುರ ತಾಲೂಕಿನ ಹೆಗ್ಗದ್ದೆ ಮಾರನಹಳ್ಳಿ ಬಳಿ ಮಣ್ಣು ಕುಸಿತವಾಗಿದ್ದು,ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿ ಮಾರ್ಗದಲ್ಲಿ ವಾಹನಗಳ ಸಂಚಾರವನ್ನು ಬಂದ್ ಮಾಡಲಾಗಿದೆ. ಪರ್ಯಾಯ ಸಂಚಾರ ಮಾರ್ಗವನ್ನು ಜಿಲ್ಲಾಧಿಕಾರಿಗಳು ಸೂಚಿಸಿದ್ದು, ಮಂಗಳೂರು ಕಡೆಗೆ ತೆರಳುವ ವಾಹನಗಳಿಗೆ ಬೇಲೂರು ಮೂಲಕ ಚಾರ್ಮಾಡಿ ಘಾಟ್ ರಸ್ತೆ ಬಳಸುವಂತೆ ಸೂಚನೆ ನೀಡಲಾಗಿದೆ. ಮಂಗಳೂರು ಕಡೆಯಿಂದ ಬರುವ ವಾಹನ ಸವಾರರು ಕೊಡಗಿನ ಸಂಪಾಜೆ ಮಾರ್ಗದಲ್ಲಿ ಸಂಚರಿಸಲು ಸೂಚನೆ ನೀಡಿ ಹಾಸನ ಡಿಸಿ ಲತಾಕುಮಾರಿ ಆದೇಶ ಹೊರಡಿಸಿದ್ದಾರೆ. ಭೂಕುಸಿತ ಸಂಭವಿಸಿದ ಕಾರಣ ಶಿರಾಡಿ ಘಾಟ್ ಮಾರ್ಗದಲ್ಲಿ ಟ್ರಾಫಿಕ್ ಉಂಟಾಗಿ ವಾಹನ ಸವಾರರು ಪರದಾಡುವಂತಾಯಿತು. ಸಕಲೇಶಪುರ ಬಳಿಯೇ ನೂರಾರು ವಾಹನಗಳು ನಿಂತಿವೆ. ಮಾರ್ಗಮಧ್ಯೆ ಪ್ರಯಾಣಿಕರು ಸಂಕಷ್ಟಕ್ಕೆ ಸಿಲುಕಿದ್ದಾರೆ.

Read More

ನವದೆಹಲಿ : ಚೀನಾದ ಯುನ್ನಾನ್ ಪ್ರಾಂತ್ಯದ ಬಾವಲಿಗಳ ಮೂತ್ರಪಿಂಡಗಳಲ್ಲಿ ಈ ಹಿಂದೆ ತಿಳಿದಿಲ್ಲದ 20 ವೈರಸ್‌ಗಳನ್ನು ಸಂಶೋಧಕರು ಕಂಡುಹಿಡಿದಿದ್ದಾರೆ. ಈ ವೈರಸ್‌ಗಳಲ್ಲಿ ಎರಡು ಮಾರಕ ನಿಪಾ ಮತ್ತು ಹೆಂಡ್ರಾ ವೈರಸ್‌ಗಳಿಗೆ ಗಮನಾರ್ಹವಾಗಿ ಹೋಲುತ್ತವೆ, ಇವೆರಡೂ ಮಾನವರಲ್ಲಿ ತೀವ್ರವಾದ ಮೆದುಳಿನ ಉರಿಯೂತ ಮತ್ತು ಉಸಿರಾಟದ ವೈಫಲ್ಯವನ್ನು ಉಂಟುಮಾಡುತ್ತವೆ ಎಂದು ತಿಳಿದುಬಂದಿದೆ. PLOS ಪ್ಯಾಥೋಜೆನ್ಸ್‌ನಲ್ಲಿ ಪ್ರಕಟವಾದ ಈ ಅಧ್ಯಯನವು ವೈರಸ್‌ಗಳಿಗೆ ಮಾತ್ರವಲ್ಲದೆ, ಅವು ಎಲ್ಲಿ ಕಂಡುಬಂದವು ಎಂಬುದರ ಬಗ್ಗೆಯೂ ಗಮನ ಸೆಳೆದಿದೆ, ಮೂತ್ರವನ್ನು ಉತ್ಪಾದಿಸುವ ಅಂಗ, ಈ ವೈರಸ್‌ಗಳು ಹೇಗೆ ಹರಡಬಹುದು ಎಂಬುದರ ಬಗ್ಗೆ ಕಳವಳವನ್ನು ಹುಟ್ಟುಹಾಕಿದೆ. 2017 ಮತ್ತು 2021 ರ ನಡುವೆ, ವಿಜ್ಞಾನಿಗಳು ಯುನ್ನಾನ್‌ನ ಐದು ವಿಭಿನ್ನ ತಾಣಗಳಲ್ಲಿ 142 ಬಾವಲಿಗಳ ಮೂತ್ರಪಿಂಡದ ಅಂಗಾಂಶ ಮಾದರಿಗಳನ್ನು ಸಂಗ್ರಹಿಸಿದರು. ಜೆನೆಟಿಕ್ ಅನುಕ್ರಮವು ಸಂಕೀರ್ಣ ಸೂಕ್ಷ್ಮಜೀವಿ ಜಾಲ ಅಥವಾ “ಇನ್ಫೆಕ್ಟೋಮ್” ಅನ್ನು ಬಹಿರಂಗಪಡಿಸಿತು, ಇದರಲ್ಲಿ 22 ವೈರಸ್‌ಗಳು ಸೇರಿವೆ. ಇವುಗಳಲ್ಲಿ 20 ವಿಜ್ಞಾನಕ್ಕೆ ಸಂಪೂರ್ಣವಾಗಿ ಹೊಸದು. ಯುನ್ನಾನ್ ಬ್ಯಾಟ್ ಹೆನಿಪಾವೈರಸ್ 1 ಮತ್ತು 2…

Read More

ರುದ್ರಪ್ರಯಾಗ: ಉತ್ತರಾಖಂಡದ ರುದ್ರಪ್ರಯಾಗ ಜಿಲ್ಲೆಯ ಘೋಲ್ತಿರ್‌ನಲ್ಲಿ ಇಂದು ಬೆಳಿಗ್ಗೆ ಒಂದು ದೊಡ್ಡ ಅಪಘಾತ ಸಂಭವಿಸಿದೆ. ಉಕ್ಕಿ ಹರಿಯುತ್ತಿದ್ದ ಅಲಕನಂದಾ ನದಿಯಲ್ಲಿ ಇಡೀ ಬಸ್ ಮುಳುಗಿತು. ಸುಮಾರು ಐದು ಜನರು ನದಿಯಲ್ಲಿ ಮುಳುಗಿ ನಾಪತ್ತೆಯಾಗಿದ್ದಾರೆ ವರದಿಯಾಗಿದೆ. ಅಪಘಾತದ ನಂತರ, ಸ್ಥಳದಲ್ಲಿ ಅವ್ಯವಸ್ಥೆ ಉಂಟಾಗಿದೆ. ಅಪಘಾತದ ಬಗ್ಗೆ ಮಾಹಿತಿ ಪಡೆದ ನಂತರ ಭದ್ರತಾ ಸಂಸ್ಥೆಗಳು ಸ್ಥಳಕ್ಕೆ ತಲುಪಿವೆ. ಆದಾಗ್ಯೂ, ಆಡಳಿತಾತ್ಮಕ ದೃಢೀಕರಣ ಇನ್ನೂ ಮಾಡಲಾಗಿಲ್ಲ. ಸ್ವೀಕರಿಸಿದ ಮಾಹಿತಿಯ ಪ್ರಕಾರ, ಈ ಅಪಘಾತ ಬದ್ರಿನಾಥ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದೆ. https://twitter.com/ANI/status/1938082397100380401?ref_src=twsrc%5Etfw%7Ctwcamp%5Etweetembed%7Ctwterm%5E1938082397100380401%7Ctwgr%5E6a8c0a122992b5638bfe59bb5c42cb5822817028%7Ctwcon%5Es1_c10&ref_url=https%3A%2F%2Fkannadadunia.com%2Fone-dead-several-missing-after-bus-falls-into-river-in-uttarakhand-watch-video%2F

Read More

ಬೆಂಗಳೂರು: ವಿದ್ಯುತ್ ಗ್ರಾಹಕರ ಕನಿಷ್ಠ ವಿದ್ಯುತ್ ಶುಲ್ಕಕ್ಕೆ ತೆರಿಗೆ ವಿಧಿಸುವಂತಿಲ್ಲ ಎಂಬುದಾಗಿ ಕರ್ನಾಟಕ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಇಂದು ಸಲ್ಲಿಸಲಾಗಿದ್ದಂತ ಅರ್ಜಿಯ ವಿಚಾರಣೆ ನಡೆಸಿದಂತ ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿ ಅನಂತ್ ರಾಮನಾಥ್ ಹೆಗ್ಡೆ ಅವರಿದ್ದಂತ ನ್ಯಾಯಪೀಠವು ಈ ಆದೇಶ ಮಾಡಿದೆ. ತಿದ್ದುಪಡಿ ನಿಯಮ ಪ್ರಶ್ನಿಸಿ 2008ರಲ್ಲಿ ಬೆಂಗಳೂರಿನ ಸೋನಾ ಸಿಂಥೆಟಿಕ್ಸ್ ಕಂಪನಿ, ಶ್ರೀ ಕೃಷ್ಣ ಸ್ಟಿನ್ನಿಂಗ್ ಮತ್ತು ವೀವಿಂಗ್ ಮಿಲ್ಸ್ ಪ್ರೈವೇಟ್ ಲಿಮಿಟೆಡ್ ಸೇರಿದಂತೆ 10 ಕಂಪನಿಗಳು, 2009ರಲ್ಲಿ ಎಫ್.ಕೆ.ಸಿ.ಸಿ.ಐ. ಸಲ್ಲಿಸಿದ್ದ ಎರಡು ಪ್ರತ್ಯೇಕ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಅನಂತ ರಾಮನಾಥ ಹೆಗಡೆ ಅವರಿದ್ದ ಪೀಠದಿಂದ ಈ ಮಹತ್ವದ ಆದೇಶ ಹೊರಡಿಸಲಾಗಿದೆ. ಭಾಗ್ಯ ಜ್ಯೋತಿ, ಕುಟೀರ ಜ್ಯೋತಿ, ಕೃಷಿ ಪಂಪ್ ಸೆಟ್ ಗಳನ್ನು ಹೊರತುಪಡಿಸಿ ಇನ್ನುಳಿದ ಎಲ್ಲಾ ವರ್ಗದ ವಿದ್ಯುತ್ ಬಳಕೆ ಮಾಡುವ ಗ್ರಾಹಕರಿಗೆ ಕನಿಷ್ಠ ಶುಲ್ಕದ ಮೇಲೆ ವಿಧಿಸಲು ಕರ್ನಾಟಕ ವಿದ್ಯುತ್ ಬಳಕೆ ಮೇಲಿನ ತೆರಿಗೆ ಕಾಯ್ದೆಗೆ ರಾಜ್ಯ ಸರ್ಕಾರ ತಂದಿದ್ದ ತಿದ್ದುಪಡಿ ನಿಯಮ ಆಸಾಂವಿಧಾನಿಕ ಎಂದು…

Read More

ಏಕ ಬಳಕೆಯ ಪ್ಲಾಸ್ಟಿಕ್ ವಸ್ತುಗಳ ಉತ್ಪಾದನೆ, ಮಾರಾಟ, ಸಂಗ್ರಹಣೆ, ವಿತರಣೆ ಹಾಗೂ ಬಳಕೆ ನಿಷೇಧಿಸಲಾಗಿದೆ ಎಂದು ಬಳ್ಳಾರಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ಹ್ಯಾರೀಸ್ ಸುಮೈರ್ ಅವರು ತಿಳಿಸಿದ್ದಾರೆ. ಈ ಕುರಿತು ಪ್ರಕಟಣೆ ಹೊರಡಿಸಿರುವ ಅವರು, ರಸ್ತೆಗಳಲ್ಲಿ ಮತ್ತು ಕಾಲುವೆಗಳಲ್ಲಿ ಪ್ಲಾಸ್ಟಿಕ್ ಕಸದ ರಾಶಿಗಳು, ಏಕ ಬಳಕೆಯ ಪ್ಲಾಸ್ಟಿಕ್ ವಸ್ತುಗಳು ಪರಿಸರ ಹಾಗೂ ಆರೋಗ್ಯದ ಮೇಲೆ ಬೀರುವ ದುಷ್ಪರಿಣಾಮಗಳ ಬಗ್ಗೆ ಮುಖ್ಯಮಂತ್ರಿಗಳು ತೀವ್ರ ಆತಂಕ ವ್ಯಕ್ತಪಡಿಸಿದ್ದು, ಈ ಬಗ್ಗೆ ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂದು ಸೂಚಿಸಿದ್ದಾರೆ ಎಂದು ಜಿಪಂ ಸಿಇಒ ಅವರು ತಿಳಿಸಿದ್ದಾರೆ. ಪರಿಸರ ಸಂರಕ್ಷಣಾ ಕಾಯ್ದೆಯ ಸೆಕ್ಷನ್ 5 ರಡಿ ಹಾಗೂ ಪ್ಲಾಸ್ಟಿಕ್ ತ್ಯಾಜ್ಯ ನಿರ್ವಹಣಾ ನಿಯಮಗಳು 2016, 2021 ರ ತಿದ್ದುಪಡಿ ಅನ್ವಯ ಕ್ಯಾರಿ ಬ್ಯಾಗ್ ಇತ್ಯಾದಿಗಳಲ್ಲಿ 120 ಮೈಕ್ರಾನ್ ಗಿಂತ ಕಡಿಮೆ ಗಾತ್ರದ ಎಲ್ಲಾ ಕೆಲವು ಏಕ ಬಳಕೆಯ ಪ್ಲಾಸ್ಟಿಕ್ ವಸ್ತುಗಳ ಉತ್ಪಾದನೆ, ಮಾರಾಟ, ಸಂಗ್ರಹಣೆ, ವಿತರಣೆ ಹಾಗೂ ಬಳಕೆ ನಿಷೇಧಿಸಲಾಗಿದೆ. ಹಾಗಾಗಿ ಸ್ಥಳೀಯ…

Read More

ಕರ್ನಾಟಕ ಆರ್ಯವೈಶ್ಯ ಸಮುದಾಯ ಅಭಿವೃದ್ಧಿ ನಿಗಮದಿಂದ 2025-26ನೇ ಸಾಲಿನಲ್ಲಿ ಅನುಷ್ಠಾನಗೊಳಿಸುತ್ತಿರುವ ಯೋಜನೆಗಳಡಿ ಸಾಲ-ಸೌಲಭ್ಯವನ್ನು ಪಡೆಯಲು ಅರ್ಹ ಫಲಾನುಭವಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ನಿಗಮದಿಂದ ಸ್ವಯಂ-ಉದ್ಯೋಗ ನೇರಸಾಲ ಯೋಜನೆ, ಬ್ಯಾಂಕ್‌ಗಳ ಸಹಯೋಗದೊಂದಿಗೆ ಆರ್ಯವೈಶ್ಯ ಆಹಾರವಾಹಿನಿ/ ವಾಹಿನಿಯೋಜನೆ, ವಾಸವಿ ಜಲಶಕ್ತಿ ಯೋಜನೆ, ಅರಿವು ಶೈಕ್ಷಣಿಕ ಸಾಲ ಯೋಜನೆ(ಸಿಇಟಿ ಹಾಗೂ ನೀಟ್ ಕೌನ್ಸೆಲಿಂಗ್ ಮುಗಿದ ನಂತರ ಅರ್ಜಿಗಳನ್ನು ಆಹ್ವಾನಿಸಲಾಗುವುದು) ಯೋಜನೆಗಳನ್ನು ಅನುಷ್ಠಾನಗೊಳಿಸಲಾಗುತ್ತಿದೆ. ಸಾಮಾನ್ಯ ವರ್ಗದಲ್ಲಿನ ಆರ್ಯ ವೈಶ್ಯ ಸಮುದಾಯಕ್ಕೆ ಸೇರಿದ ಅರ್ಹ ಫಲಾನುಭವಿಗಳು ಕರ್ನಾಟಕ ರಾಜ್ಯದವರಾಗಿದ್ದು, ಅವರ ಖಾಯಂ ವಿಳಾಸವು ಕರ್ನಾಟಕ ರಾಜ್ಯದಲ್ಲಿರಬೇಕು. ನಮೂನೆ-ಜಿ ಯಲ್ಲಿ ಜಾತಿ ಮತ್ತು ಆದಾಯ ಪ್ರಮಾಣಪತ್ರ ಪಡೆದಿರಬೇಕು.  ಮೊಬೈಲ್ ಸಂಖ್ಯೆಯು ಆಧಾರ್‌ಗೆ ಜೋಡಣಡಯಾಗಿರಬೇಕು ಹಾಗೂ ಆಧಾರ್ ಸಂಖ್ಯೆಯು ಬ್ಯಾಂಕ್ ಖಾತೆಗೆ ಸೀಡಿಂಗ್ ಆಗಿರಬೇಕು. ಫಲಾನುಭವಿಗಳನ್ನು ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಅಧ್ಯಕ್ಷತೆಯಲ್ಲಿ ರಚಿಸಿರುವ ಜಿಲ್ಲಾಮಟ್ಟದ ಆಯ್ಕೆ ಸಮಿತಿಯ ಮೂಲಕ ಆಯ್ಕೆ ಮಾಡಲಾಗುವುದು. ಅರ್ಹ ಫಲಾನುಭವಿಗಳು ವೆಬ್‌ಸೈಟ್  http//kacdc.karnataka.gov.in  ಮೂಲಕ ಜುಲೈ 31 ರೊಳಗೆ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ನಿಗಮದ ಸಹಾಯವಾಣಿ:…

Read More

ಹಾವೇರಿ : ಹಾವೇರಿಯಲ್ಲಿ ಭೀಕರವಾದ ಕೊಲೆ ನಡೆದಿದ್ದು, ಹಾಡಹಗಲೇ ಮಾರಕಾಸ್ತ್ರಗಳಿಂದ ಕೊಚ್ಚಿ ಗುತ್ತಿಗೆದಾರನನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆಗೆ ಸಂಬಂಧಿಸಿದಂತೆ ಇದೀಗ ಪೊಲೀಸರು ಆರೋಪಿಗಳ ಮೇಲೆ ಫೈರಿಂಗ್ ಮಾಡಿದ್ದಾರೆ. ಗುತ್ತಿಗೆದಾರ ಶಿವನಾಂದ ಕುನ್ನೂರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಆರೋಪಿಗಳಾದ ಅಶ್ರಫ್, ನಾಗರಾಜ್ ಕಾಲಿಗೆ ಪೊಲೀಸರು ಫೈರಿಂಗ್ ಮಾಡಿದ್ದಾರೆ.ಕೊಲೆ ಆರೋಪಿಗಳಾದ ಅಶ್ರಫ್, ನಾಗರಾಜ್ ಎಂಬುವವರನ್ನು ವಶಕ್ಕೆ ಪಡೆಯಲು ಪೊಲೀಸರು ಹಾನಗಲ್ ತಾಲೂಕಿನ ಕೊಂಡೋಜಿ ಕ್ರಾಸ್ ಬಳಿ ಹೋದಾಗ ಆರೋಪಿಗಳು ಪೊಲೀಸರ ಮೇಲೆ ದಾಳಿ ನಡೆಸಲು ಯತ್ನಿಸಿದ್ದಾರೆ . ಕೂಡಲೇ ಪೊಲೀಸರು ಆರೋಪಿಗಳ ಮೇಲೆ ಫೈರಿಂಗ್ ಮಾಡಿ ಆರೋಪಿಗಳನ್ನು ಬಂಧಿಸಿದ್ದಾರೆ. ಸದ್ಯ. ಗಾಯಾಳುಗಳನ್ನ ಹಾವೇರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಹಾವೇರಿ ಜಿಲ್ಲೆಯ ಶಿಗ್ಗಾವಿ ಪಟ್ಟಣದ ಗಂಗೆಭಾವಿ ಕ್ರಾಸ್ ಬಳಿ ಪ್ರಥಮ ದರ್ಜೆ ಗುತ್ತಿಗೆದಾರ ಶಿವಾನಂದ ಕುನ್ನೂರು (40) ಎನ್ನುವ ಗುತ್ತಿಗೆದಾರರನ್ನು ಭೀಕರವಾಗಿ ಕೊಲೆ ಮಾಡಲಾಗಿದೆ. ಆಸ್ತಿಯ ವಿಚಾರಕ್ಕೆ ಗುತ್ತಿಗೆದಾರ ಶಿವಾನಂದ ಕುನ್ನೂರು ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಸುಪಾರಿ ಕೊಟ್ಟು ಸಂಬಂಧಿಕರೇ ಶಿವಾನಂದ…

Read More

ಬೆಂಗಳೂರು : ರಾಜ್ಯದಲ್ಲಿ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಸುರಿಯುತ್ತಿದ್ದು, ಇಂದು ಹಲವು ಜಿಲ್ಲೆಗಳಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ರಾಜ್ಯದಲ್ಲಿ ಮುಂಗಾರು ಚುರುಕುಗೊಂಡಿದ್ದು, ವಿವಿಧ ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಇನ್ನೂ ಮೂರ್ನಾಲ್ಕು ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿಯ ಮೂರು ಜಿಲ್ಲೆಗಳಿಗೆ ಮುಂದಿನ ಎರಡು ದಿನಕ್ಕೆ ಆರೆಂಜ್ ಅಲರ್ಟ್ ಹಾಗೂ ನಂತರದನಂತರದ ಎರಡು ದಿನಕ್ಕೆ ಯೆಲ್ಲೋ ಅಲರ್ಟ್ ನೀಡಲಾ ಗಿದೆ. ಉಳಿದಂತೆ ಬಾಗಲಕೋಟೆ, ಬೆಳಗಾವಿ, ಧಾರವಾಡ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ಮುಂದಿನ ಮೂರು ದಿನಗಳಿಗೆ ಯೆಲ್ಲೋ ಅಲರ್ಟ್ನ ಎಚ್ಚರಿಕೆ ನೀಡಲಾಗಿದೆ. ಬೆಳಗಾವಿ ಜಿಲ್ಲೆಯ ಬೆಳಗಾವಿ ನಗರ, ಬೆಳಗಾವಿ ಗ್ರಾಮೀಣ, ಖಾನಾಪುರ, ಕಿತ್ತೂರು ತಾಲೂಕು ಶಾಲೆ, ಅಂಗನವಾಡಿಗಳಿಗೆ ರಜೆ ನೀಡಲಾಗಿದೆ. ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ, ದಾಂಡೇಲಿ ತಾಲೂಕುಗಳಲ್ಲಿ ಎಲ್ಲಾ ಅಂಗನವಾಡಿ ಮತ್ತು ಶಾಲೆಗಳಿಗೆ ಗುರುವಾರ ರಜೆ ಘೋಷಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಬೆಳ್ತಂಗಡಿ ತಾಲೂಕಿನ ಶಾಲೆಗಳಿಗೆ ಇಂದು…

Read More

ಹಾಸನ : ಹಾಸನ ಜಿಲ್ಲೆಯಲ್ಲಿ ಮಳೆಯ ಆರ್ಭಟ ಮುಂದುವರೆದಿದ್ದು, ಸಕಲೇಶಪುರ ತಾಲೂಕಿನ ಹೆಗ್ಗದ್ದೆ ಮಾರನಹಳ್ಳಿ ಬಳಿ ಮಣ್ಣು ಕುಸಿತವಾಗಿದ್ದು, ಶಿರಾಡಿಘಾಟ್ ಮಾರ್ಗದಲ್ಲಿ ವಾಹನಗಳ ಸಂಚಾರ ಬಂದ್ ಮಾಡಲಾಗಿದೆ. ಸಕಲೇಶಪುರ ತಾಲೂಕಿನ ಹೆಗ್ಗದ್ದೆ ಮಾರನಹಳ್ಳಿ ಬಳಿ ಮಣ್ಣು ಕುಸಿತವಾಗಿದ್ದು,ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿ ಮಾರ್ಗದಲ್ಲಿ ವಾಹನಗಳ ಸಂಚಾರವನ್ನು ಬಂದ್ ಮಾಡಲಾಗಿದೆ.

Read More

ಬೆಂಗಳೂರು :ರಾಷ್ಟ್ರೀಯ ಪಿಂಚಣಿ ಯೋಜನೆಗೆ ಒಳಪಟ್ಟ ಸರ್ಕಾರಿ ಅಧಿಕಾರಿ/ನೌಕರರು ಪ್ರಾನ್ ಖಾತೆಯನ್ನು ಪಡೆಯುವ ಮುಂಚಿತವಾಗಿ ಮೃತಪಟ್ಟಲ್ಲಿ ಕುಟುಂಬ ಪಿಂಚಣಿ ಮಂಜೂರು ಮಾಡುವ ಕುರಿತು ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಮೇಲೆ ಓದಲಾದ (1) ರ ಆದೇಶದಲ್ಲಿ ದಿನಾಂಕ: 01.04.2006 ರಂದು ಮತ್ತು ತದನಂತರ ಸರ್ಕಾರಿ ಸೇವೆಗೆ ಸೇರುವ ನೌಕರರಿಗೆ ರಾಷ್ಟ್ರೀಯ ಪಿಂಚಣಿ ಯೋಜನೆಯನ್ನು (ಎನ್.ಪಿ.ಎಸ್.) ಕಡ್ಡಾಯಗೊಳಿಸಿ ಆದೇಶಿಸಲಾಗಿದೆ. ಮೇಲೆ ಓದಲಾದ (2) ರ ಆದೇಶದಲ್ಲಿ ರಾಷ್ಟ್ರೀಯ ಪಿಂಚಣಿ ಯೋಜನೆಗೆ ಒಳಪಡುವ ಸರ್ಕಾರಿ ನೌಕರರು ಸೇವೆಯಲ್ಲಿರುವಾಗಲೇ ಮೃತಪಟ್ನಲ್ಲಿ ಅವರ ಕುಟುಂಬಕ್ಕೆ ಇಡಿಗಂಟಿನ ಪರಿಹಾರ ಸೌಲಭ್ಯವನ್ನು ವಿಸ್ತರಿಸಿ ಆದೇಶಿಸಲಾಗಿದೆ. ಮೇಲೆ ಓದಲಾದ (3) ರ ಆದೇಶದಲ್ಲಿ ದಿನಾಂಕ: 01.04.2006 ರಂದು ಮತ್ತು ತದನಂತರ ಸರ್ಕಾರಿ ಸೇವೆಗೆ ಸೇರಿದ ರಾಷ್ಟ್ರೀಯ ಪಿಂಚಣಿ ಯೋಜನೆಗೆ ಒಳಪಡುವ ನೌಕರರಿಗೆ ನಿವೃತ್ತಿ ಉಪದಾನ, ಮರಣ ಉಪದಾನ ಹಾಗೂ ಮೃತರ ನಾಮನಿರ್ದೇಶಿತರಿಗೆ ಕುಟುಂಬ ಪಿಂಚಣಿಯನ್ನು ಮೃತರ ನಾಮನಿರ್ದೇಶಿತರು ಆಯ್ಕೆ ಮಾಡಿಕೊಂಡಲ್ಲಿ ಮೃತ ನೌಕರರ ಪ್ರಾನ್ ಖಾತೆಯಲ್ಲಿರುವ ಸಂಪೂರ್ಣ ಮೊತ್ತವನ್ನು ಸರ್ಕಾರವು…

Read More