Author: kannadanewsnow57

ಮಡಿಕೇರಿ : ಸರ್ಕಾರದ ಪ್ರಮುಖ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಯುವನಿಧಿ ಯೋಜನೆಯು ಡಿಸೆಂಬರ್ 26 ರಿಂದ ನೋಂದಣಿ ಪ್ರಕ್ರಿಯೆ ಚಾಲನೆಗೊಂಡಿದೆ. ಪ್ರತೀ ತಿಂಗಳು 3,000 ಮತ್ತು 1500 ರೂ. ನಿರುದ್ಯೋಗ ಭತ್ಯೆಯನ್ನು ನೀಡುವ ಯೋಜನೆ ಆಗಿದೆ. ಜನವರಿ 12 ರಿಂದ ಅರ್ಹ ಫಲಾನುಭವಿಗಳ ಖಾತೆಗೆ ನೇರ ನಗದು ವರ್ಗಾವಣೆ ಆರಂಭವಾಗಿದ್ದು, ಜಿಲ್ಲೆಯಲ್ಲಿ ಯುವನಿಧಿ ಯೋಜನೆಗೆ ಇದುವರೆಗೆ 1134 ಮಂದಿ ಹೆಸರು ನೋಂದಣಿ ಮಾಡಿದ್ದು, 562 ಮಂದಿಗೆ ಯುವನಿಧಿ ಯೋಜನೆ ತಲುಪುತಿದೆ. ಯುವನಿಧಿ ಯೋಜನೆ ಪಡೆಯುತ್ತಿರುವವರು ಪ್ರತಿ ತಿಂಗಳು ಸ್ವಯಂ ದೃಢೀಕರಣವನ್ನು ಆನ್‍ಲೈನ್ ಮೂಲಕ ಸಲ್ಲಿಸಬೇಕಿದೆ ಎಂದು ಜಿಲ್ಲಾ ಉದ್ಯೋಗವಿನಿಯಮಾಯಾಧಿಕಾರಿ ರೇಖಾ ಗಣಪತಿ ಅವರು ತಿಳಿಸಿದ್ದಾರೆ. ಕುಶಾಲನಗರ ತಾಲ್ಲೂಕಿನಲ್ಲಿ 177, ಮಡಿಕೇರಿ ತಾಲ್ಲೂಕಿನಲ್ಲಿ 304, ಪೊನ್ನಂಪೇಟೆ ತಾಲ್ಲೂಕಿನಲ್ಲಿ 133, ಸೋಮವಾರಪೇಟೆ ತಾಲ್ಲೂಕಿನಲ್ಲಿ 317, ವಿರಾಜಪೇಟೆ ತಾಲ್ಲೂಕಿನಲ್ಲಿ 203 ಮಂದಿ ಹೆಸರು ನೋಂದಾಯಿಸಿದ್ದಾರೆ. ಯುವನಿಧಿ ಯೋಜನೆ ಫಲಾನುಭವಿಗಳ ಗಮನಕ್ಕೆ: ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯ ಮುಖಾಂತರ ಸರ್ಕಾರದ ಮಹತ್ತರ ಯೋಜನೆಯಾದ ಯುವಜನತೆಯ ಉಜ್ವಲ…

Read More

ಬೆಂಗಳೂರು: ರಾಜ್ಯ ಸರ್ಕಾರದಿಂದ ವಿಧಾನಮಂಡಲದ ಮುಂಗಾರು ಅಧಿವೇಶನ ಕರೆಯಲು ರಾಜ್ಯಪಾಲರಿಗೆ ಶಿಫಾರಸ್ಸು ಮಾಡಲಾಗಿತ್ತು. ಈ ಶಿಫಾರಸ್ಸಿಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅನುಮೋದನೆ ನೀಡಿದ್ದು, ಜುಲೈ.15ರಿಂದ ವಿಧಾನ ಮಂಡಲದ ಮುಂಗಾರು ಅಧಿವೇಶನ ನಿಗದಿ ಪಡಿಸಿ ಗೆಜೆಟ್ ಅಧಿಸೂಚನೆಯಲ್ಲಿ ಅಧಿಕೃತ ಆದೇಶ ಹೊರಡಿಸಿದ್ದಾರೆ. ವಿಶೇಷ ರಾಜ್ಯಪತ್ರಿಕೆಯಲ್ಲಿ ಅಧಿಸೂಚನೆ ಹೊರಡಿಸಿರುವಂತ ರಾಜ್ಯಪಾಲ ಥಾವರ್ ಚಂಗ್ ಗೆಹ್ಲೋಟ್ ಅವರು, ಭಾರತ ಸಂವಿಧಾನದ 174ನೇ ಅನುಚ್ಛೇದದ (1)ನೇ ಖಂಡದ ಮೂಲಕ ನನಗೆ ಪ್ರದತ್ತವಾದ ಅಧಿಕಾರಗಳನ್ನು ಚಲಾಯಿಸಿ, ಜುಲೈ.15, 2024ರಂದು ಸೋಮವಾರ ಪೂರ್ವಾಹ್ನ 11 ಗಂಟೆಗೆ ಬೆಂಗಳೂರಿನಲ್ಲಿ ಕರ್ನಾಟಕ ವಿಧಾನಸಭೆಯನ್ನು ಸಮಾವೇಶಗೊಳಿಸಬೇಕೆಂದು ಈ ಮೂಲಕ ಕರೆಯುತ್ತಿದ್ದೇನೆ ಅಂತ ತಿಳಿಸಿದ್ದಾರೆ. ಅಂದಹಾಗೇ ನಿನ್ನೆ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವರಾದ ಹೆಚ್ ಕೆ ಪಾಟೀಲ್ ಅವರು, ಕರ್ನಾಟಕ ರಾಜ್ಯ ವಿಧಾನಮಂಡಲದ ಮುಂಗಾರು ಅಧಿವೇಶನವನ್ನು ದಿನಾಂಕ: 15.07.2024 ರಿಂದ 26.07.2024 ರವರೆಗೆ ಕರೆಯಲು ಗೌರವಾನ್ವಿತ ರಾಜ್ಯಪಾಲರಿಗೆ ಶಿಫಾರಸ್ಸು ಮಾಡಲಾಗಿದೆ ಎಂದಿದ್ದರು. ದಿನಾಂಕ: 20.06.2024 ರಂದು ನಡೆದ ಸಚಿವ ಸಂಪುಟದ ಸಭೆಯಲ್ಲಿ…

Read More

ಮೈಸೂರು : ರಾಜ್ಯದಲ್ಲಿ 1,000 ಗ್ರಾಮ ಆಡಳಿತಾಧಿಕಾರಿಗಳು, 750 ಸರ್ಕಾರಿ ಸರ್ವೇಯರ್ ಭರ್ತಿ ಪ್ರಕಿಯೆ ನಡೆದಿದೆ. ಇದರ ಜೊತೆಗೆ 34 ಎ.ಡಿ.ಎಲ್.ಆರ್ ನೇಮಕಾತಿ ಸಹ ನಡೆದಿದೆ ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ 1,000 ಗ್ರಾಮ ಆಡಳಿತಾಧಿಕಾರಿಗಳು, 750 ಸರ್ಕಾರಿ ಸರ್ವೇಯರ್ ಭರ್ತಿ ಪ್ರಕಿಯೆ ನಡೆದಿದೆ. ಇದರ ಜೊತೆಗೆ 34 ಎ.ಡಿ.ಎಲ್.ಆರ್ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಇದರಿಂದ ಸರ್ವೇಯರ್ ಇಲಾಖೆಗೆ ಬಲ ಬರಲಿದೆ. ಇದನ್ನು‌ ಬಳಸಿಕೊಂಡು ಪ್ರಸ್ತುತ ಇರುವ 22 ಲಕ್ಷ ಬಹು ಮಾಲೀಕತ್ವದ ಆರ್.ಟಿ.ಸಿ. ಗಳನ್ನು ಅವರವರಿಗೆ ಪ್ರತ್ಯೇಕವಾಗಿ ಪೋಡಿ ಮಾಡಿ ಆರ್.ಟಿ.ಸಿ. ಮಾಡಿಸಿ ಕೊಡಬೇಕಾಗಿದೆ. ಇದಕ್ಕಾಗಿ ರೋಡ್ ಮ್ಯಾಪ್ ಸಿದ್ಧಗೊಳಿಸಲಾಗುತ್ತಿದೆ ಎಂದರು. ಇನ್ನು ರಾಜ್ಯದಾದ್ಯಂತ ಸುಮಾರು 4 ಕೋಟಿ ಆರ್‌ಟಿಸಿ ಮಾಲೀಕರಿದ್ದಾರೆ. ಈ ಪೈಕಿ 1.92 ಕೋಟಿ ಆರ್‌ಟಿಸಿದಾರರನ್ನು ಸಂಪರ್ಕಿಸಿ ಆ ಪೈಕಿ 1.20 ಕೋಟಿ ಆರ್‌ಟಿಸಿಗಳ್ನು ಒಟಿಪಿ (One Time Password) ಮೂಲಕ ಇಕೆವೈಸಿ ಮಾಡಲಾಗಿದೆ. ಇನ್ನೂ ಮೈಸೂರು ವಿಭಾಗದಲ್ಲಿ 1.37…

Read More

ಮೈಸೂರು : ಅಕ್ರಮ ಜಮೀನು ಮಾರಾಟಕ್ಕೆ ರಾಜ್ಯ ಸರ್ಕಾರ ಮಹತ್ವದ ಕ್ರಮ ಕೈಗೊಂಡಿದ್ದು, ಆರ್‌ ಟಿಸಿಗಳನ್ನು ಆಧಾರ್‌ ಗೆ ಲಿಂಕ್‌ ಮಾಡುವಂತೆ ಕಂದಾಯ ಸಚಿವ ಕೃಷ್ಣಬೈರೇಗೌಡ ಸೂಚಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಾದ್ಯಂತ ಸುಮಾರು 4 ಕೋಟಿ ಆರ್‌ಟಿಸಿ ಮಾಲೀಕರಿದ್ದಾರೆ. ಈ ಪೈಕಿ 1.92 ಕೋಟಿ ಆರ್‌ಟಿಸಿದಾರರನ್ನು ಸಂಪರ್ಕಿಸಿ ಆ ಪೈಕಿ 1.20 ಕೋಟಿ ಆರ್‌ಟಿಸಿಗಳ್ನು ಒಟಿಪಿ (One Time Password) ಮೂಲಕ ಇಕೆವೈಸಿ ಮಾಡಲಾಗಿದೆ. ಇನ್ನೂ ಮೈಸೂರು ವಿಭಾಗದಲ್ಲಿ 1.37 ಕೋಟಿ ಆರ್‌ಟಿಸಿ ಮಾಲೀಕರಿದ್ದು ಈ ಪೈಕಿ 36 ಲಕ್ಷ ಆರ್‌ಟಿಸಿಗಳನ್ನು ಮಾತ್ರ ಆಧಾರ್‌ ಜೊತೆಗೆ ಜೋಡಿಸಲಾಗಿದೆ. ಅಂದರೆ ಶೇ. 35 ರಷ್ಟು ಕೆಲಸ ಮಾತ್ರ ಆಗಿದ್ದು, ಇದು ಸಾಲದು. ಇದೇ ಜುಲೈ ತಿಂಗಳ ಒಳಗಾಗಿ ಆಧಾರ್‌ ಸೀಡಿಂಗ್‌ ವಿಚಾರದಲ್ಲಿ ಶೇ. 90 ರಷ್ಟು ಪ್ರಗತಿ ಸಾಧಿಸಬೇಕು” ಎಂದು ಅಧಿಕಾರಿಗಳಿಗೆ ತಾಕೀತು ಮಾಡಲಾಗಿದೆ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ತಿಳಿಸಿದರು. ಆರ್‌ಟಿಸಿಗಳನ್ನು ಆಧಾರ್‌ಗೆ ಲಿಂಕ್‌ ಮಾಡುವ ಮೂಲಕ ಯಾರದ್ದೋ…

Read More

ಬೆಂಗಳೂರು : ರಾಜ್ಯ ಸರ್ಕಾರವು ಶಿಕ್ಷಕ ಹುದ್ದೆ ಆಕಾಂಕ್ಷಿಗಳಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ಸರ್ಕಾರಿ ಶಾಲೆಗಳಿಗೆ 10 ಸಾವಿರ ಶಿಕ್ಷಕರ ನೇಮಕಕ್ಕೆ ಅನುಮತಿ ನೀಡುವಂತೆ ಕೋರಿ ಆರ್ಥಿಕ ಇಲಾಖೆಗೆ ಪ್ರಸ್ತಾವನೆ ಸಲ್ಲಿಸಲಾಗಿದೆ. ರಾಜ್ಯ ಸರ್ಕಾರಿ ಶಾಲೆಗಳಲ್ಲಿ ಖಾಲಿ ಇರುವ 10 ಸಾವಿರ ಶಿಕ್ಷಕರ ನೇಮಕಾತಿ ಸಂಬಂಧಿಸಿದಂತೆ ಶಿಕ್ಷಣ ಇಲಾಖೆಯು ಪ್ರಕ್ರಿಯೆಗಳನ್ನು ಮಾಡಿಕೊಳ್ಳುತ್ತಿದ್ದು, ಆರ್ಥಿಕ ಇಲಾಖೆಗೆ ಪ್ರಸ್ತಾವನೆ ಸಲ್ಲಿಸಿದೆ. ಅನುಮತಿ ನೀಡಿದ ತಕ್ಷಣ ಅಧಿಸೂಚನೆ ಹೊರಡಿಸಿ ಪ್ರಕ್ರಿಯೆಗೆ ಚಾಲನೆ ನೀಡಲಿದೆ ಎನ್ನಲಾಗಿದೆ. ರಾಜ್ಯದ ಪ್ರಾಥಮಿಕ ಶಾಲೆಗಳಿಗೆ 35 ಸಾವಿರ ಮತ್ತು ಪ್ರೌಢಶಾಲೆಗಳಲ್ಲಿ 10 ಸಾವಿರ ಸೇರಿ 45 ಸಾವಿರ ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲು ಶಿಕ್ಷಣ ಇಲಾಖೆಯು ಅನುಮತಿ ನೀಡಿದೆ. ಇನ್ನು ಶಿಕ್ಷಕರ ನೇಮಕಾತಿ ಪರೀಕ್ಷೆ ಬರೆಯಲು 1.25 ಲಕ್ಷ ಮಂದಿ ಟಿಇಟಿ ಉತ್ತೀರ್ಣರಾಗಿ ಅರ್ಹತೆ ಪಡೆದಿದ್ದು, ಇದೀಗ ಮತ್ತೆ ಈಗ ಜೂ.30ರಂದು ಟಿಇಟಿ ನಡೆಸಲಾಗಿದ್ದು, 2.5 ಲಕ್ಷ ಮಂದಿ ಟಿಇಟಿ ಬರೆದಿದ್ದಾರೆ. ಕನಿಷ್ಠ 1.5 ಲಕ್ಷ ಮಂದಿ ಅರ್ಹ ಅಭ್ಯರ್ಥಿಗಳಿದ್ದಾರೆ.

Read More

ನವದೆಹಲಿ : ಗ್ರಾಹಕರಿಗೆ ಜಿಯೋ ಮತ್ತು ಏರ್‌ ಟೆಲ್‌ ಬಿಗ್‌ ಶಾಕ್‌ ನೀಡಿದ್ದು, ಇಂದಿನಿಂದ ರಿಚಾರ್ಜ್‌ ದರ ಹೆಚ್ಚಳವಾಗಲಿದೆ. ಈ ಮೂಲಕ ಬೆಲೆ ಏರಿಕೆಯಿಂದ ತತ್ತರಿಸಿರುವ ಗ್ರಾಹಕರಿಗೆ ರಿಚಾರ್ಜ್‌ ದರವೂ ಕೈಸುಡಲಿದೆ. ರಿಲಯನ್ಸ್ ಜಿಯೋ ತನ್ನ ಪ್ರಿಪೇಯ್ಡ್ ಮತ್ತು ಪೋಸ್ಟ್ಪೇಯ್ಡ್ ಯೋಜನೆಗಳಲ್ಲಿ 12% ರಿಂದ 25% ವರೆಗೆ ಸುಂಕ ಹೆಚ್ಚಳವನ್ನ ಘೋಷಿಸಿದೆ . ಹೊಸ ಯೋಜನೆಗಳು ಜುಲೈ 3 ರ ಇಂದಿನಿಂದ ಜಾರಿಗೆ ಬರಲಿವೆ. ಅದ್ರಂತೆ, ಅತ್ಯಂತ ಸಕ್ರಿಯ ಯೋಜನೆ 28 ದಿನಗಳ ಮಾನ್ಯತೆಯೊಂದಿಗೆ ದಿನಕ್ಕೆ 1.5 ಜಿಬಿ ಡೇಟಾವನ್ನು ಹೊಂದಿದೆ. ಒಟ್ಟಾರೆಯಾಗಿ ಜಿಯೋ ಪ್ರೀಪೆಯ್ಡ್ ಗ್ರಾಹಕರಿಗೆ ಬಿಗ್ ಶಾಕ್ ಎನ್ನುವಂತೆ ಟ್ಯಾರಿಫ್ ದರ ಶೇ.20ರಷ್ಟು ಹೆಚ್ಚಳವಾಗಲಿದ್ದು, ನಿಮ್ಮ ಜೇಬಿಗೆ ಕತ್ತರಿ ಬೀಳೋದು ಗ್ಯಾರಂಟಿ ಎನ್ನುವಂತೆ ಆಗಿದೆ. ಹೊಸ ಪೋಸ್ಟ್ ಪೇಯ್ಡ್ ಯೋಜನೆಗಳು ಪೋಸ್ಟ್ ಪೇಯ್ಡ್ ಯೋಜನೆಗಳು ಸಹ ಹೆಚ್ಚು ದುಬಾರಿಯಾಗಿವೆ. 30 ಜಿಬಿ ಡೇಟಾವನ್ನು ಒದಗಿಸುತ್ತಿದ್ದ 299 ರೂ.ಗಳ ಯೋಜನೆಯ ಬೆಲೆ ಈಗ ಬಿಲ್ಲಿಂಗ್ ಚಕ್ರಕ್ಕೆ 349 ರೂ. 75…

Read More

ಬೆಂಗಲೂರು : ರಾಜ್ಯ ಪಠ್ಯಕ್ರಮದ ರಾಜ್ಯ ಪಠ್ಯಕ್ರಮದ 5, 8 ಹಾಗೂ 9 ನೇ ತರಗತಿಗಳಿಗೆ ʻಮೌಲ್ಯಾಂಕನ ಪರೀಕ್ಷೆʼ ಮುಂದುವರಿಸುವಂತೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸುತ್ತೋಲೆ ಹೊರಡಿಸಿದೆ. 2024-25ನೇ ಶೈಕ್ಷಣಿಕ ಸಾಲಿನಲ್ಲಿ ಕರ್ನಾಟಕ ರಾಜ್ಯ ಪಠ್ಯಕ್ರಮದ 1ರಿಂದ 10ನೇ ತರಗತಿಶಾಲೆಗಳಿಗೆ2024-25ನೇ ಸಾಲಿನ ಶೈಕ್ಷಣಿಕ ಚಟುವಟಿಕೆಗಳ ವಾರ್ಷಿಕ ಕ್ರಿಯಾಯೋಜನೆ ಹಾಗೂ ಶೈಕ್ಷಣಿಕ ಮಾರ್ಗದರ್ಶಿಯನ್ನು ಉಲ್ಲೇಖಗಳನ್ವಯ ಹೊರಡಿಸಲಾಗಿದೆ. ಇದನ್ನು ಆಧರಿಸಿ ಶಾಲೆಗಳಲ್ಲಿ ಪಠ್ಯವಸ್ತು ಬೋಧನೆ ಹಾಗೂ ಮೌಲ್ಯಾಂಕನ ಕುರಿತು ವಹಿಸಬೇಕಾದ ಕ್ರಮಗಳನ್ನು ಈ ಕೆಳಕಂಡಂತೆ ಸೂಚಿಸಿ, ಅದರಂತೆ ಕ್ರಮವಹಿಸಲು ತಿಳಿಸಿದೆ. 1. ರಾಜ್ಯದ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳಲ್ಲಿ 1 ರಿಂದ 10ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ದಿನಾಂಕ:29-05-2024 ರಿಂದ ಶೈಕ್ಷಣಿಕ ವರ್ಷವು ಪ್ರಾರಂಭವಾಗಿದೆ. 2022-23 ನೇ ಶೈಕ್ಷಣಿಕ ಸಾಲಿನಲ್ಲಿ ಕಲಿಕಾ ಚೇತರಿಕೆ’ ಉಪಕ್ರಮವನ್ನು ಮತ್ತು 2023-24 ನೇ ಸಾಲಿನಲ್ಲಿ ‘ಕಲಿಕಾ ಬಲವರ್ಧನೆ’ ಕಾರ್ಯಕ್ರಮದಡಿ ಕಲಿವಿನ ಫಲಾಧಾರಿತ ವಿದ್ಯಾರ್ಥಿಗಳ ಚಟುವಟಿಕೆ ಪುಸ್ತಕ ಹಾಗೂ ಶಿಕ್ಷಕರ ಚಟುವಟಿಕೆ ಕೋಶಗಳನ್ನು…

Read More

ಬೆಂಗಳೂರು : ಶಾಲಾ ಮಕ್ಕಳ ಬ್ಯಾಗ್‌ ಹೊರೆ ತಗ್ಗಿಸಲು ರಾಜ್ಯ ಸರ್ಕಾರವು ಮಹತ್ವದ ಕ್ರಮ ಕೈಗೊಂಡಿದ್ದು, ಮೊದಲರ್ಧ ಶೇ. ೫೦ ರಷ್ಟು ಪಠ್ಯ ಹಾಗೂ ನಂತರದ ಅರ್ಧ ಶೇ. ೫೦ ರಷ್ಟು ಪಠ್ಯದ ನಿಯಮ ಅನುಸರಿಸುವಂತೆ ಸೂಚನೆ ನೀಡಲಾಗಿದೆ. ಶಾಲಾ ಬ್ಯಾಗ್ ಹೊರೆ ತಗ್ಗಿಸುವ ನಿಟ್ಟಿನಲ್ಲಿ 2024-25 ನೇ ಸಾಲಿನಲ್ಲಿ ಪಠ್ಯಪುಸ್ತಕಗಳನ್ನು ಭಾಗ-1 ಮತ್ತು ಭಾಗ-2 ರಂತೆ ಪ್ರತ್ಯೇಕವಾಗಿ ಮುದ್ರಿಸಲಾಗಿದೆ. ಭಾಗ-1 ರ ಪಠ್ಯ ಶೇ.50 ಹಾಗೂ ಭಾಗ-2 ರ ಪಠ್ಯ ಶೇ.50 ಒಟ್ಟು ಸೇರಿ ಶೇ.100 ರಷ್ಟು ಪಠ್ಯವನ್ನು ಮೌಲ್ಯಾಂಕನಕ್ಕೆ ಒಳಪಡಿಸುವ ವಿಧಾನವನ್ನು ನೀಡಲಾಗಿದ್ದು, ಅದರಂತೆ ಕ್ರಮವಹಿಸುವಂತೆ ಸೂಚನೆ ನೀಡಲಾಗಿದೆ. ರಾಜ್ಯದ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳಲ್ಲಿ 1 ರಿಂದ 10ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ದಿನಾಂಕ:29-05-2024 ರಿಂದ ಶೈಕ್ಷಣಿಕ ವರ್ಷವು ಪ್ರಾರಂಭವಾಗಿದೆ. 2022-23 ನೇ ಶೈಕ್ಷಣಿಕ ಸಾಲಿನಲ್ಲಿ ಕಲಿಕಾ ಚೇತರಿಕೆ’ ಉಪಕ್ರಮವನ್ನು ಮತ್ತು 2023-24 ನೇ ಸಾಲಿನಲ್ಲಿ ‘ಕಲಿಕಾ ಬಲವರ್ಧನೆ’ ಕಾರ್ಯಕ್ರಮದಡಿ ಕಲಿವಿನ ಫಲಾಧಾರಿತ…

Read More

ಬೆಂಗಳೂರು : ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸೋ ಕೆಲಸ ಮಾಡಲಾಗಿದೆ. ನಾಲ್ವರು ಕೆಎಎಸ್ ಅಧಿಕಾರಿ ಹಾಗೂ 25 ಮಂದಿ ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶಿಸಿದೆ. ಕರ್ನಾಟಕ ಆಡಳಿತ ಸೇವೆಗೆ ಸೇರಿದ ಈ ಕೆಳಕಂಡ ಅಧಿಕಾರಿಗಳನ್ನು ಸಾರ್ವಜನಿಕ ಹಾಗೂ ಆಡಳಿತಾತ್ಮಕ ಹಿತದೃಷ್ಠಿಯಿಂದ ಈ ಕೂಡಲೇ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಅವರುಗಳ ಹೆಸರಿನ ಮುಂದೆ ನಮೂದಿಸಿರುವ ಹುದ್ದೆಗಳಿಗೆ ವರ್ಗಾಯಿಸಿ / ಸ್ಥಳನಿಯುಕ್ತಿಗೊಳಿಸಿ ಆದೇಶಿಸಿದೆ. ವರ್ಗಾವಣೆಗೊಂಡ ಕೆಎಎಸ್‌ ಅಧಿಕಾರಿಗಳು ಡಾ. ಜಗದೀಶ್‌ ಕೆ. ನಾಯಕ್‌ ರಘುನಂದನ್‌ ಎ.ಎನ್‌ ಪ್ರಸನ್ನ ಕುಮಾರ್‌ ವಿ.ಕೆ ಹುಲ್ಲುಮನಿ ತಿಮ್ಮಣ್ಣ ವರ್ಗಾವಣೆಗೊಂಡ ʻಐಪಿಎಸ್‌ʼ ಅಧಿಕಾರಿಗಳು ಬಿ. ರಮೇಶ -ಡಿಐಜಿಪಿ, ಪೂರ್ವ ವಲಯ, ದಾವಣಗೆರೆ ಎನ್. ವಿಷ್ಣು ವರ್ಧನ್ -ಎಸ್.ಪಿ. ಮೈಸೂರು ಜಿಲ್ಲೆ ಸೀಮಾ ಲಾಟ್ಕರ್ -ಪೊಲೀಸ್ ಆಯುಕ್ತರು, ಮೈಸೂರು ನಗರ ರೇಣುಕಾ ಸುಕುಮಾರ -ಎಐಜಿಪಿ ಬೆಂಗಳೂರು ಡಿಜಿ ಕಚೇರಿ ಸಿ.ಕೆ. ಬಾಬಾ -ಎಸ್.ಪಿ. ಬೆಂಗಳೂರು ಗ್ರಾಮಾಂತರ ಸುಮನ್ ಡಿ. ಪೆನ್ನೇಕರ್ -ಎಸ್‌ ಪಿ, ಬಿಎಂಟಿಎಫ್…

Read More

ಮೈಸೂರು : ರಾಜ್ಯದ 163 ತಾಲೂಕುಗಳಲ್ಲಿ ಬಗರ್‌ ಹುಕುಂ ಸಮಿತಿ ರಚಿಸಲಾಗಿದ್ದು, ಸಮಿತಿಗಳಿಗೆ 4.38 ಎಕರೆಗಿಂದ ಕಡಿಮೆ ಭೂಮಿ ಇರುವವರಿಗೆ ಮಾತ್ರ ಸಕ್ರಮ ಮಾಡಿಕೊಡಲು ಅವಕಾಶವಿದೆ ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಡ ರೈತರಿಗೆ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ಅಕ್ರಮ ಸಾಗುವಳಿಯ ಸಕ್ರಮೀಕರಣಕ್ಕಾಗಿ ಬಗರ್‌ಹುಕುಂ ಅಡಿ ರಾಜ್ಯ ಸರ್ಕಾರ ಅರ್ಜಿ ಸ್ವೀಕರಿಸಿದೆ. ಲಕ್ಷಾಂತರ ಅರ್ಜಿಗಳು ಈಗಾಗಲೇ ಸಲ್ಲಿಕೆಯಾಗಿದ್ದು, ಈ ಎಲ್ಲಾ ಅರ್ಜಿಗಳನ್ನು ಮುಂದಿನ 8 ತಿಂಗಳಲ್ಲಿ ವಿಲೇವಾರಿ ಮಾಡಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿರುವುದಾಗಿ ಸಚಿವರು ತಿಳಿಸಿದರು. ರಾಜ್ಯಾದ್ಯಂತ 163 ಕ್ಷೇತ್ರಗಳಲ್ಲಿ ಬಗರ್‌ ಹುಕುಂ ಸಾಗುವಳಿ ಸಕ್ರಮೀಕರಣ ಸಮಿತಿ ರಚಿಸಲಾಗಿದೆ. ಜುಲೈ ತಿಂಗಳಿಂದ ಆರಂಭಿಸಿ ಪ್ರತಿ ತಿಂಗಳೂ ತಾಲೂಕವಾರು ತಿಂಗಳಿಗೆ ಇಷ್ಟು ಅರ್ಜಿ ವಿಲೇಗೆ ಜಿಲ್ಲಾಧಿಕಾರಿಗಳು ತಹಶೀಲ್ದಾರ್‌ಗೆ ಸೂಚಿಸಬೇಕು. ಶಾಸಕರ ನೇತೃತ್ವದ ಸಮಿತಿಯಲ್ಲಿ ತಹಶೀಲ್ದಾರರು ಈ ಎಲ್ಲಾ ಅರ್ಜಿಗಳಲ್ಲಿ ರೈತರಿಗೆ ಭೂ ಮಂಜೂರು ಮಾಡುವ ಮುನ್ನ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಬೇಕು. ಅವರಿಗೆ ಆ ಜಾಗದ ಕಳೆದ…

Read More