Subscribe to Updates
Get the latest creative news from FooBar about art, design and business.
Author: kannadanewsnow57
ನವದೆಹಲಿ : ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇರಾನ್-ಇಸ್ರೇಲ್ ನಡುವೆ ಕದನ ವಿರಾಮ ಘೋಷಿಸಿದ ಬೆನ್ನಲ್ಲೇ ಇಸ್ರೇಲ್ ಮೇಲೆ ಇರಾನ್ ಕ್ಷಿಪಣಿ ದಾಳಿ ನಡೆಸಿದೆ. ಇರಾನ್ ವಾಯುಸೇನೆಯು ಇಸ್ರೇಲ್ ನ ಬಿರ್ ಸೇವಾ ಪ್ರದೇಶದಲ್ಲಿ ಮೂವರು ನಾಗರಿಕರು ಸಾವನ್ನಪ್ಪಿದ್ದಾರೆ. ಇರಾನ್ ದಾಳಿಯಿಂದ ಇಸ್ರೇಲ್ ನ ಹಲವು ಕಟ್ಟಡಗಳಿಗೆ ಹಾನಿಯಾಗಿದೆ.
ನವದೆಹಲಿ : ಭಾರತೀಯ ಷೇರು ಮಾರುಕಟ್ಟೆಯಲ್ಲಿ ಮಹತ್ವದ ಬೆಳವಣಿಗೆಗೆ ಸಾಕ್ಷಿಯಾಗಿದೆ. ದಿನದ ವಹಿವಾಟಿನ ಸಮಯದಲ್ಲಿ ಸೆನ್ಸೆಕ್ಸ್ 800 ಕ್ಕೂ ಹೆಚ್ಚು ಅಂಕ ಏರಿಕೆಯಾಗಿದ್ದು, ಮತ್ತು ನಿಫ್ಟಿ 25,000 ಗಡಿ ದಾಟಿದೆ. ಸೆನ್ಸೆಕ್ಸ್ 800 ಅಂಕಗಳ ಜಿಗಿತ. ನಿಫ್ಟಿ 25,200 ದಾಟಿದೆ; ಅದಾನಿ ಪೋರ್ಟ್ಸ್ ಶೇ. 4 ರಷ್ಟು ಏರಿಕೆಯಾಗಿದೆ ಎಂದು ವರದಿಯಾಗಿದೆ.
ನವದೆಹಲಿ : ಇಂದು ಬೆಳ್ಳಂಬೆಳಗ್ಗೆ ರಾಜಧಾನಿ ದೆಹಲಿಯ ಭಾಟಿ ಗಣಿ ಪ್ರದೇಶದಲ್ಲಿ ನಡೆದ ಉನ್ನತ ಮಟ್ಟದ ಎನ್ಕೌಂಟರ್ನಲ್ಲಿ ಮೋಸ್ಟ್ ವಾಂಟೇಡ್ ಕ್ರಿಮಿನಲ್ ರೋಮಿಲ್ ನನ್ನು ಹತ್ಯೆ ಮಾಡಲಾಗಿದೆ. ದೆಹಲಿ ಪೊಲೀಸ್ ವಿಶೇಷ ಘಟಕ ಮತ್ತು ಹರಿಯಾಣ ಎಸ್ಟಿಎಫ್ ನಡೆಸಿದ ಎನ್ಕೌಂಟರ್ನಲ್ಲಿ ಕುಖ್ಯಾತ ದರೋಡೆಕೋರ ರೋಮಿಲ್ ಬೊಹ್ರಾ ಎಂಬಾತನ ತಲೆಗೆ 3 ಲಕ್ಷ ರೂ. ಬಹುಮಾನವಿತ್ತು. ಈ ಕಾರ್ಯಾಚರಣೆಯಲ್ಲಿ, ಇನ್ಸ್ಪೆಕ್ಟರ್ ಮತ್ತು ಎಸ್ಐ ಸೇರಿದಂತೆ ಇಬ್ಬರು ಪೊಲೀಸರು ಗಾಯಗೊಂಡರು. ಗುಂಡು ಇಬ್ಬರ ಗುಂಡು ನಿರೋಧಕ ಜಾಕೆಟ್ಗಳಿಗೆ ತಗುಲಿ ದೊಡ್ಡ ಅನಾಹುತವೊಂದು ತಪ್ಪಿತು. ದೆಹಲಿ-ಹರಿಯಾಣ ಗಡಿಯಲ್ಲಿ ಎನ್ಕೌಂಟರ್ : ಮೋಸ್ಟ್ ವಾಂಟೆಡ್ ಕ್ರಿಮಿನಲ್ `ರೋಮಿಲ್ ಬೊಹ್ರಾ’ ಹತ್ಯೆ | Romil Bohra
ಬೆಂಗಳೂರು : ಕಾರುಗಳ ಓವರ್ ಟೆಕ್ ವಿಚಾರದಲ್ಲಿ ಗಲಾಟೆಯಾಗಿ ಕಾರಿನಲ್ಲಿದ್ದ ಮುಸ್ಲಿಂ ವ್ಯಕ್ತಿಗಳಿಗೆ ಮಾಜಿ ಸಂಸದ ಅನಂತ್ ಕುಮಾರ್ ಹೆಗಡೆ ಬೆಂಬಲಿಗರು ಹಲ್ಲೆ ಮಾಡಿದ ಆರೋಪ ಕೇಳಿ ಬಂದಿದ್ದು, ಇದೀಗ ಅನಂತ್ ಕುಮಾರ್ ಹೆಗಡೆ ಸೇರಿದಂತೆ ಮೂವರು ವಿರುದ್ಧ ಎಫ್ ಐಆರ್ ದಾಖಲಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲೂಕಿನ ಹಳೇ ನಿಜಗಲ್ ಬಳಿ ಇನ್ನೋವಾ ಕಾರಿನಲ್ಲಿದ್ದ ನಾಲ್ವರ ಮೇಲೆ ಹಲ್ಲೆ, ಗೂಂಡಾಗಿರಿ ನಡೆಸಿದ ಆರೋಪದಲ್ಲಿ ಕೇಂದ್ರದ ಮಾಜಿ ಸಚಿವ, ಉತ್ತರ ಕನ್ನಡ ಕ್ಷೇತ್ರದ ಮಾಜಿ ಸಂಸದ ಅನಂತ ಕುಮಾರ್ ಹೆಗಡೆ, ಕಾರು ಚಾಲಕ ಹಾಗೂ ಗನ್ಮ್ಯಾನ್ ಮೇಲೆ ಎಫ್ಐಆರ್ ದಾಖಲಾಗಿದೆ. ಅನಂತ್ ಕುಮಾರ್ ಹೆಗಡೆ ಅವರು ತೆರಳುತ್ತಿದ್ದ ಕಾರನ್ನು, ಓವರ್ ಟೇಕ್ ಮಾಡಲಾಯಿತು ಎಂಬ ಕಾರಣಕ್ಕೆ ಇನ್ನೋವಾ ಕಾರಿನಲ್ಲಿದ್ದ ನಾಲ್ವರ ಮೇಲೆ, ಅನಂತ್ ಕುಮಾರ್ ಹೆಗಡೆ ಪುತ್ರ ಅಶುತೋಷ್, ಚಾಲಕ ಹಾಗೂ ಗನ್ಮ್ಯಾನ್ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಸೋಂಪುರ ಹೋಬಳಿಯ ಹಾಲೇನಹಳ್ಳಿ ಗ್ರಾಮದ ಸಲ್ಮಾನ್ ಖಾನ್(30), ಸೈಫ್ ಖಾನ್(28)…
ನವದೆಹಲಿ : ಇಂದು ಬೆಳಗಿನ ಜಾವ 3:30 ಕ್ಕೆ ಮಶಾದ್ ನಿಂದ ನವದೆಹಲಿಗೆ ಬಂದಿಳಿದ ವಿಶೇಷ ವಿಮಾನದಲ್ಲಿ 292 ಭಾರತೀಯ ಪ್ರಜೆಗಳನ್ನು ಇರಾನ್ ನಿಂದ ಸ್ಥಳಾಂತರಿಸಲಾಯಿತು. 2295 ಭಾರತೀಯ ಪ್ರಜೆಗಳನ್ನು ಈಗ ಇರಾನ್ ನಿಂದ ಮನೆಗೆ ಕರೆತರಲಾಗಿದೆ ಎಂದು ವಿದೇಶಾಂಗ ಸಚಿವಾಲಯದ ಅಧಿಕೃತ ವಕ್ತಾರ ರಣಧೀರ್ ಜೈಸ್ವಾಲ್ ಟ್ವೀಟ್ ಮಾಡಿದ್ದಾರೆ. https://twitter.com/ANI/status/1937346449014247476?ref_src=twsrc%5Egoogle%7Ctwcamp%5Eserp%7Ctwgr%5Etweet
ಹಾಸನ : ಹಾಸನ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಸಕಲೇಶಪುರ ತಾಲೂಕಿನ ನಲ್ಲಿ ಇಂದು ಪ್ರಾಥಮಿಕ, ಪ್ರೌಢಶಾಲೆಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಕೆ.ಎಸ್. ಲತಾಕುಮಾರಿ ಆದೇಶ ಹೊರಡಿಸಿದ್ದಾರೆ. ಹಾಸನ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕಲೇಶಪುರ ತಾಲೂಕಿನ ಪ್ರಾಥಮಿಕ, ಪ್ರೌಢಶಾಲೆಗಳಿಗೆ ಇಂದು ರಜೆ ಘೋಷಿಸಲಾಗಿದೆ. ರಾಜ್ಯದ ಕರಾವಳಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ತುಮಕೂರು, ರಾಮನಗರ, ಮಂಡ್ಯ, ಮೈಸೂರು, ವಿಜಯನಗರ, ಹಾಸನ, ದಾವಣಗೆರೆ, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಕೊಡಗು, ಕರಾವಳಿ, ಮಲೆನಾಡು ಸೇರಿ ರಾಜ್ಯದ ಹಲವಡೆ ಜೂ.23ರಿಂದ ಜೂ.29ರವರೆಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. . ಕರಾವಳಿಯಲ್ಲಿ ಜೂ.23ರಿಂದ ಜೂ.29ರವರೆಗೆ ಆರೆಂಜ್ ಅಲರ್ಟ್ ಘೋಷಿಸ ಲಾಗಿದೆ. ಇಂದಿನಿಂದ ಜೂ.29ರವರೆಗೆ ಕೊಡಗು, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ.
ನವದೆಹಲ : ಇಸ್ರೇಲ್ ಮತ್ತು ಇರಾನ್ ನಡುವಿನ ಉದ್ವಿಗ್ನತೆಯ ನಡುವೆ, ಎಮಿರೇಟ್ಸ್ ಏರ್ಲೈನ್ಸ್ ಪ್ರಯಾಣಿಕರಿಗೆ ಸಂಚಾರ ಸಲಹೆಯನ್ನು ನೀಡಿದೆ. ತನ್ನ ಎಲ್ಲಾ ವಿಮಾನಗಳು ನಿಗದಿತ ಸಮಯದಂತೆ ಕಾರ್ಯನಿರ್ವಹಿಸುತ್ತವೆ ಎಂದು ವಿಮಾನಯಾನ ಸಂಸ್ಥೆಗಳು ತಿಳಿಸಿವೆ. ಸಂಘರ್ಷದ ಪ್ರದೇಶಗಳಿಂದ ಗಣನೀಯ ದೂರದಲ್ಲಿರುವ ವಿಮಾನ ಮಾರ್ಗಗಳನ್ನು ಬಳಸಿಕೊಂಡು ವಿಮಾನಗಳು ನಿಗದಿತ ಸಮಯದಂತೆ ಕಾರ್ಯನಿರ್ವಹಿಸುವುದನ್ನು ಮುಂದುವರಿಸುತ್ತವೆ ಎಂದು ಕಂಪನಿ ತಿಳಿಸಿದೆ. ಇತ್ತೀಚಿನ ಪ್ರಾದೇಶಿಕ ಉದ್ವಿಗ್ನತೆಯಿಂದಾಗಿ, ಜೂನ್ 23 ರಂದು ಎಮಿರೇಟ್ಸ್ ಏರ್ಲೈನ್ಸ್ನ ಹಲವಾರು ವಿಮಾನಗಳನ್ನು ದುಬೈಗೆ ಮರು ನಿಗದಿಪಡಿಸಲಾಗಿದೆ ಆದರೆ ಯಾವುದೇ ಮಾರ್ಗ ಬದಲಾವಣೆ ಮಾಡಲಾಗಿಲ್ಲ ಎಂದು ಕಂಪನಿ ತಿಳಿಸಿದೆ. ವಿಮಾನಯಾನ ತಂಡಗಳು ನಿರಂತರವಾಗಿ ಕೆಲಸ ಮಾಡುತ್ತಿವೆ ದೀರ್ಘ ಮಾರ್ಗ ಬದಲಾವಣೆ ಅಥವಾ ವಾಯುಪ್ರದೇಶದಲ್ಲಿನ ದಟ್ಟಣೆಯಿಂದಾಗಿ ಕೆಲವು ವಿಮಾನಗಳು ವಿಳಂಬವಾಗಬಹುದು ಎಂದು ವಿಮಾನಯಾನ ಸಂಸ್ಥೆಗಳು ಪ್ರಯಾಣಿಕರಿಗೆ ತಿಳಿಸಿವೆ. ವೇಳಾಪಟ್ಟಿಯನ್ನು ನಿರ್ವಹಿಸಲು ಮತ್ತು ನಮ್ಮ ಗ್ರಾಹಕರಿಗೆ ಯಾವುದೇ ಅಡಚಣೆ ಅಥವಾ ಅನಾನುಕೂಲತೆಯನ್ನು ಕಡಿಮೆ ಮಾಡಲು ವಿಮಾನಯಾನ ತಂಡಗಳು ಶ್ರಮಿಸುತ್ತಿವೆ. ಗ್ರಾಹಕರಿಗೆ ಸಲಹೆ ನೀಡಲಾಗಿದೆ ಎಮಿರೇಟ್ಸ್ ಏರ್ಲೈನ್ಸ್ ಎಕ್ಸ್ ಹ್ಯಾಂಡಲ್ನಲ್ಲಿ…
ಬೆಂಗಳೂರು : ಪ್ರಸಕ್ತ ಶೈಕ್ಷಣಿಕ ಸಾಲಿನಿಂದ ಮಕ್ಕಳ ಹಾಜರಾತಿಗೆ ಅತ್ಯಾಧುನಿಕ (ಚಹರೆ ಗುರುತಿಸುವ ಹಾಜರಾತಿ ವ್ಯವಸ್ಥೆ) ತಂತ್ರಜ್ಞಾನವನ್ನು ಬಳಸಿಕೊಳ್ಳಲು ಉದ್ದೇಶಿಸಲಾಗಿದ್ದು, ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳ ಹೆಸರು ಕೂಗಿ ಹಾಜರಾತಿ ಪಡೆಯುವ ಬದಲಾಗಿ, ಶಿಕ್ಷಕರು ಮೊಬೈಲ್ನಲ್ಲಿ ವಿದ್ಯಾರ್ಥಿಗಳ ಫೋಟೋ ಕ್ಲಿಕ್ಕಿಸಿಕೊಳ್ಳುವ ಮೂಲಕ ಹಾಜರಾತಿ ದಾಖಲಿಸಿ ಕೊಳ್ಳಲಿದ್ದಾರೆ. ಹೌದು,’ನಿರಂತರ’ ಯೋಜನೆ ಮತ್ತು ಅನುದಾನಿತ ಸೇರಿ 52,686 ಶಾಲೆಗಳ 52 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳ ಹಾಜರಾತಿಯನ್ನು ಕೃತಕ ಬುದ್ಧಿಮತ್ತೆ ಚಾಲಿತ, ಮುಖ ಚಹರೆ ಗುರುತು ಆಧಾರಿತವಾಗಿ (ಎಐ ಫೇಶಿಯಲ್ ರಿಕಗ್ನಿಷನ್) ತೆಗೆದುಕೊಳ್ಳಲಾಗುತ್ತದೆ. ಈ ಯೋಜನೆಯು ಸುಮಾರು 5 ಕೋಟಿ ರು. ವೆಚ್ಚದ್ದಾಗಿದೆ. ಶಿಕ್ಷಕರ ಮೊಬೈಲ್ ಆ್ಯಪ್ ಬಳಸಿ ವಿದ್ಯಾರ್ಥಿಗಳ ಫೋಟೋ ಸೆರೆ ಹಿಡಿಯಲಾಗುತ್ತದೆ. ಫೋಟೋ ಮೂಲಕವೇ ವಿದ್ಯಾರ್ಥಿಗಳ ಹಾಜರಾತಿ ಖಚಿತಪಡಿಸುವ ವ್ಯವಸ್ಥೆ ಇರಲಿದೆ. ಇದರಿಂದ ನಕಲಿ ಹಾಜರಾತಿ ತಡೆಗೆ ಅನುಕೂಲವಾಗಲಿದೆ. ರಾಜ್ಯದ 52686 ಶಾಲೆಗಳ 52 ಲಕ್ಷ ವಿದ್ಯಾರ್ಥಿಗಳ ಹಾಜರಾತಿಗೆ ಇದನ್ನು ಬಳಕೆ ಮಾಡಲಾಗುತ್ತದೆ. ಮೇಲೆ ಓದಲಾದ ಕ್ರಮಾಂಕ (1)ರಲ್ಲಿ 2025-26ನೇ ಸಾಲಿನಲ್ಲಿ ಸರ್ಕಾರವು…
ಪಡಿತರ ಚೀಟಿದಾರರು ನ್ಯಾಯಬೆಲೆ ಅಂಗಡಿ ಹಂತದಲ್ಲಿ ಆಧಾರ್ ದೃಢೀಕರಣ (ಇ-ಕೆವೈಸಿ) ಯನ್ನು ಉಚಿತವಾಗಿ ಮಾಡಲು ಜೂನ್ 30ರವರೆಗೆ ಅವಕಾಶ ಕಲ್ಪಿಸಿಕೊಡಲಾಗಿದೆ. ಪಡಿತರ ಚೀಟಿದಾರರು ಆಧಾರ್ ದೃಢೀಕರಣ (ಇ-ಕೆವೈಸಿ) ಯನ್ನು ತಮ್ಮ ಹತ್ತಿರದ ನ್ಯಾಯಬೆಲೆ ಅಂಗಡಿಗಳಿಗೆ ಭೇಟಿ ನೀಡಿ, ಬೆರಳಚ್ಚು ಮೂಲಕ ತಮ್ಮ ಗುರುತು, ನೋಂದಣಿ ಅಥವಾ ಮರು ನೋಂದಣಿ ಮಾಡಿಸದೆ ಇರುವ ಎಲ್ಲಾ ಸದಸ್ಯರು ಜೂನ್ 30ರೊಳಗೆ ಬಯೋಮೆಟ್ರಿಕ್ ಸಂಗ್ರಹಣೆ (ಇ-ಕೆವೈಸಿ) ಮಾಡಿಸಿಕೊಳ್ಳಲು ಅಂತಿಮ ಅವಕಾಶವನ್ನು ನೀಡಲಾಗಿದ್ದು, ಇದಕ್ಕೆ ಯಾವುದೇ ಹಣ ನೀಡುವಂತಿಲ್ಲ. ಇ-ಕೆವೈಸಿ ಮಾಡಿಸಿಕೊಳ್ಳದೇ ಇರುವ ಪಡಿತರ ಚೀಟಿದಾರರಿಗೆ ಮುಂದಿನ ತಿಂಗಳು ಆಹಾರ ಧಾನ್ಯ ವಿತರಣೆಯನ್ನು ಸ್ಥಗಿತಗೊಳಿಸಲಾಗುವುದು ಮತ್ತು ಆಧಾರ್ ದೃಢೀಕರಣ (ಇ-ಕೆವೈಸಿ)ಯನ್ನು ಮಾಡದೇ ಇರುವ ಫಲಾನುಭವಿಗಳಿಗೆ ಜುಲೈ ಮಾಹೆಯಲ್ಲಿ ಪಡಿತರ ಹಂಚಿಕೆಯನ್ನು ಸ್ಥಗಿತಗೊಳಿಸಲು ಕ್ರಮವಹಿಸಲಾಗುವುದು ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯು ಪ್ರಕಟಣೆಯಲ್ಲಿ ತಿಳಿಸಿದೆ. ಇ-ಕೆವೈಸಿ ಮಾಡುವುದು ನಿಮ್ಮ ಸ್ಥಳೀಯ ಪಡಿತರ ಅಥವಾ ಪಿಡಿಎಸ್ ಡೀಲರ್‌ಗೆ ಭೇಟಿ ನೀಡಿ ಕುಟುಂಬದ ಮುಖ್ಯಸ್ಥರ ಆಧಾರ್ ಸಂಖ್ಯೆಯನ್ನು…
ಬಂಧುಗಳೇ ಹಿಂದೂ ಧರ್ಮದ ಶಾಸ್ತ್ರ ಮತ್ತು ಪುರಾತನ ಸನಾತನ ಕಾಲದಿಂದಲ್ಲೂ ಮಂತ್ರಗಳ ಶಕ್ತಿಯು ತುಂಬಾನೇ ತೀವ್ರವಾಗಿರುತ್ತದೆ ಎಲ್ಲಾ ಮಂತ್ರಗಳ ಶಕ್ತಿಯು ಯಾವ ಮಟ್ಟಿಗೆ ಇರುತ್ತದೆ ಎಂದರೆ ಎಲ್ಲಾ ದೇವಾನುದೇವತೆಗಳನ್ನು ನಿಮ್ಮ ಬಂಧನದಲ್ಲಿ ಬಂದಿಸಿ ಇಡಬಹುದಾಗಿದೆ ಬೇಡ ಎಂದರೂ ಸಹ ಆ ದೇವತೆಗಳು ನಿಮಗೆ ಸಹಾಯ ಕೂಡ ಮಾಡುತ್ತಾರೆ. ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ಸಿಂಗದೂರು ಚೌಡಮ್ಮನವರ ಉಪಾಸಕರು ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564 ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ಇಲ್ಲಿ ಶತಸಿದ್ಧ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ ಹೆಂಡತಿ ಕಿರಿಕಿರಿ, ಮದುವೆಯಲ್ಲಿ ಅಡೆತಡೆ, ಸಂತಾನ ಸಮಸ್ಯೆ, ಮಕ್ಕಳು ಹೇಳಿದ ಮಾತು ಕೇಳದಿದ್ದರೆ, ವಿದ್ಯಾಭ್ಯಾಸದಲ್ಲಿ ಕಿರಿಕಿರಿ, ಆರೋಗ್ಯ ಸಮಸ್ಯೆ, ಆಸ್ತಿಯಲ್ಲಿ ಕಿರಿಕಿರಿ, ಮಾಟ ಮಂತ್ರ,…














