Subscribe to Updates
Get the latest creative news from FooBar about art, design and business.
Author: kannadanewsnow57
ನವದೆಹಲಿ : ಡಿಜಿಟಲ್ ಪಾವತಿಗಳನ್ನ ಹೆಚ್ಚು ಸುಲಭವಾಗಿ ಮತ್ತು ವೇಗವಾಗಿ ಮಾಡುವ ಪ್ರಯತ್ನದಲ್ಲಿ, ಭಾರತೀಯ ರಾಷ್ಟ್ರೀಯ ಪಾವತಿ ನಿಗಮ (NPCI) ಮತ್ತೊಂದು ಪ್ರಮುಖ ನಿರ್ಧಾರವನ್ನು ತೆಗೆದುಕೊಂಡಿದೆ. ಬಂಡವಾಳ ಮಾರುಕಟ್ಟೆ ಹೂಡಿಕೆಗಳು, ವಿಮಾ ಕಂತುಗಳು, ಕ್ರೆಡಿಟ್ ಕಾರ್ಡ್ ಬಿಲ್’ಗಳು, ಪ್ರಯಾಣ ಮತ್ತು ಸರ್ಕಾರಿ ಪಾವತಿಗಳಂತಹ ಆಯ್ದ ವ್ಯಾಪಾರಿ ವರ್ಗಗಳಿಗೆ ಈ ಬದಲಾವಣೆ ಅನ್ವಯಿಸುತ್ತದೆ. ಮಾಸಿಕ ಮಿತಿಯನ್ನ ಕ್ಯಾಲೆಂಡರ್ ತಿಂಗಳ ಆಧಾರದ ಮೇಲೆ ಲೆಕ್ಕಹಾಕಲಾಗುತ್ತದೆ, ಪ್ರತಿ ವರ್ಗಕ್ಕೂ ವಿಭಿನ್ನ ಮಿತಿಗಳು ಅನ್ವಯವಾಗುತ್ತವೆ. P2P (ವ್ಯಕ್ತಿಯಿಂದ ವ್ಯಕ್ತಿಗೆ) ವರ್ಗಾವಣೆಗಳು ದಿನಕ್ಕೆ 1 ಲಕ್ಷ ರೂ.ಗಳಲ್ಲಿ ಬದಲಾಗದೆ ಉಳಿಯುತ್ತವೆ. ಇನ್ನು ಮುಂದೆ, UPI ಮೂಲಕ 24 ಗಂಟೆಗಳ ಒಳಗೆ 10 ಲಕ್ಷ ರೂ. ವರೆಗಿನ ವಹಿವಾಟುಗಳನ್ನ ಮಾಡಬಹುದು. ವಿಶೇಷವಾಗಿ ತೆರಿಗೆ ಪಾವತಿ ಮತ್ತು ಇತರ ಹಣಕಾಸು ಸೇವೆಗಳಿಗೆ ಸಂಬಂಧಿಸಿದ ವರ್ಗಗಳಿಗೆ ಈ ಬದಲಾವಣೆ ಮಾಡಲಾಗಿದೆ. ಈ ಹೊಸ ವ್ಯವಸ್ಥೆಯು ಸೆಪ್ಟೆಂಬರ್ 15, 2025ರಿಂದ ಜಾರಿಗೆ ಬರಲಿದೆ. ಆದಾಯ ತೆರಿಗೆ ರಿಟರ್ನ್ಸ್ ಸಲ್ಲಿಸಲು ಕೊನೆಯ ದಿನಾಂಕವನ್ನ ಗಮನದಲ್ಲಿಟ್ಟುಕೊಂಡು NPCI…
ಮೊದಲು ಬಂದ ಸಂದೇಶಗಳಿಗೂ ಈಗ ಬರುತ್ತಿರುವ ಸಂದೇಶಗಳಿಗೂ ದೊಡ್ಡ ವ್ಯತ್ಯಾಸವಿದೆ ಎಂದು ನೀವು ಗಮನಿಸಿದ್ದೀರಾ? ಹೌದು.. ಸೈಬರ್ ಅಪರಾಧಗಳು ಮೊದಲಿಗಿಂತ ಹೆಚ್ಚಾಗಿವೆ ಎಂದು ತಿಳಿದಿದೆ, ಸರಿಯೇ? ಈ ಸೈಬರ್ ಅಪರಾಧಗಳನ್ನು ಪರಿಶೀಲಿಸಲು ಕೇಂದ್ರ ಸರ್ಕಾರ ಕೆಲವು ಕ್ರಮಗಳನ್ನು ತೆಗೆದುಕೊಂಡಿದೆ. ಇದರ ಭಾಗವಾಗಿ, ಕೆಲವು ವ್ಯವಹಾರ ಸಂಬಂಧಿತ ಕಂಪನಿಗಳು ಮಾಡಿದ ಜಾಹೀರಾತುಗಳು, ಸರ್ಕಾರದಿಂದ ಬಂದ ಸಂದೇಶಗಳು ಮತ್ತು ಇತರ ಅಗತ್ಯಗಳ ಆಧಾರದ ಮೇಲೆ SMS ಬರುತ್ತಿದೆ. ಆದಾಗ್ಯೂ, ಇವುಗಳಲ್ಲಿ ಯಾವುದು ನಿಜ..? ಯಾವುದು ಸುಳ್ಳು..? ನಿರ್ಧರಿಸುವುದು ತುಂಬಾ ಕಷ್ಟ. ಮತ್ತು ಸಂದೇಶಗಳನ್ನು ಪರಿಶೀಲಿಸಲು ನಾವು ಯಾವ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳಬಹುದು.. ಇತ್ತೀಚಿನ ದಿನಗಳಲ್ಲಿ ನಮ್ಮ ಮೊಬೈಲ್ ಫೋನ್ಗೆ ಬರುತ್ತಿರುವ SMS ವಿಳಾಸದ ಕೊನೆಯಲ್ಲಿ S, G, T, P ನಂತಹ ಅಕ್ಷರಗಳನ್ನು ನೀವು ಗಮನಿಸಿದ್ದೀರಾ? ಅವು ಏಕೆ ಇವೆ ಎಂದು ನೀವು ಎಂದಾದರೂ ಯೋಚಿಸಿದ್ದೀರಾ? ಇಲ್ಲ.. ವಾಸ್ತವವಾಗಿ, ಸೈಬರ್ ಅಪರಾಧಗಳನ್ನು ತಡೆಗಟ್ಟಲು, SMS ಕಳುಹಿಸುವ ಕಂಪನಿಗಳು ಮೊದಲು TRAI DLT ವ್ಯವಸ್ಥೆಯ ಮೂಲಕ ನೋಂದಾಯಿಸಿಕೊಳ್ಳಬೇಕು.…
2025-26ನೇ ಸಾಲಿನಲ್ಲಿ ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿಯಲ್ಲಿ ತುಂತುರು ನೀರಾವರಿ ಘಟಕಗಳಿಗೆ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ. ರೈತರು ಅರ್ಜಿ ನಮೂನೆಯೊಂದಿಗೆ ಆಧಾರ್ ಕಾರ್ಡ್, ನೀರಾವರಿ ಪ್ರಮಾಣ ಪತ್ರ, ಪಹಣಿ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಇದ್ದಲ್ಲಿ ಪ್ರಮಾಣ ಪತ್ರ, ನೋಟರಿಯೊಂದಿಗೆ ರೂ.20/- ಗಳ ಛಾಪಾ ಕಾಗದ, ಬ್ಯಾಂಕ್ ಪಾಸ್ ಬುಕ್, ಆರ್.ಟಿ.ಜಿ.ಎಸ್. ಪತ್ರಗಳನ್ನು ಸಲ್ಲಿಸಬೇಕು. ಎಫ್ಐಡಿಯನ್ನು ಕಡ್ಡಾಯವಾಗಿ ಹೊಂದಿರಬೇಕು. ರೈತರು ಈಗಾಗಲೇ ಎಫ್ಐಡಿಯನ್ನು ಹೊಂದಿದ್ದಲ್ಲಿ ಅಥವಾ ಹೊಂದಿರದೆ ಇದ್ದಲ್ಲಿ ತಮ್ಮ ಎಲ್ಲಾ ಪಹಣಿಗಳನ್ನು ಎಫ್ಐಡಿಗೆ ಜೋಡಣೆ ಮಾಡಿಕೊಳ್ಳಬೇಕು. ಆಸಕ್ತ ರೈತರು ಸಂಬಂಧಿಸಿದ ರೈತ ಸಂಪರ್ಕ ಕೇಂದ್ರಗಳಿಗೆ ತೆರಳಿ ಅರ್ಜಿ ಸಲ್ಲಿಸಿ ಯೋಜನೆಯ ಸದುಪಯೋಗ ಪಡೆದುಕೊಳ್ಳಬೇಕು ಎಂದು ಕೊಪ್ಪಳ ಸಹಾಯಕ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆಂಗಳೂರು : ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದು ಬೆಂಗಳೂರು, ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಉತ್ತರ ಕರ್ನಾಟಕದ ಒಳನಾಡಿನಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಇಲ್ಲಿ ಗುಡುಗು ಸಹಿತ ಗಂಟೆಗೆ 30-40 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ. ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳ ಹಲವೆಡೆ ಗಂಟೆಗೆ 30-40 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ. ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ ,ಶಿವಮೊಗ್ಗ ಜಿಲ್ಲೆಗಳಲ್ಲಿಯೂ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಬೆಂಗಳೂರು : ಇಬ್ಬರು ಮಕ್ಕಳು, ಪತಿಯನ್ನು ಕೊಂದು ಪತ್ನಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಗೊಣಕನಹಳ್ಳಿ ಗ್ರಾಮದಲ್ಲಿ ನಡೆದಿದೆ. ಗೊಣಕನಹಳ್ಳಿ ಗ್ರಾಮದಲ್ಲಿ ಶಿವು (32), ಮಕ್ಕಳಾದ ಚಂದ್ರಕಲಾ (11), ಉದಯ್ ಸೂರ್ಯ (7) ಸಾವನ್ನಪ್ಪಿದ್ದು, ಇಬ್ಬರು ಮಕ್ಕಳು, ಪತಿಯನ್ನು ಕೊಂದ ಬಳಿಕ ಪತ್ನಿಯೂ ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ಅದೃಷ್ಟವಶಾತ್ ಮಂಜುಳಾ ಪ್ರಾಣಾಪಾಯದಿಂದ ಪಾರಾಗಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು,ಪರಿಶೀಲನೆ ನಡೆಸಿದ್ದಾರೆ. ಶಿವು ಅಪಘಾತದಲ್ಲಿ ಗಾಯಗೊಂಡ ಕಾರಣ ಚಿಕಿತ್ಸೆಗೆ ಸಾಲ ಮಾಡಿಕೊಂಡಿದ್ದರು. ಸಾಲ ತೀರಿಸಲು ಸಂಕಷ್ಟವಾಗಿದ್ದು, ದಂಪತಿ ಆತ್ಮಹತ್ಯೆಗೆ ನಿರ್ಧರಿಸಿದ್ದಾರೆ. ಮಕ್ಕಳು ತಬ್ಬಲಿಗಳಾಗುತ್ತಾರೆ ಎಂದು ಅವರನ್ನು ಕೂಡ ಸಾಯಿಸಲು ದಂಪತಿ ನಿರ್ಧರಿಸಿದ್ದರು. ಪತಿ, ಮಕ್ಕಳಿಗೆ ವೇಲ್ ನಿಂದ ಬಿಗಿದು ಕೊಲೆ ಮಾಡಿದ್ದ ಮಂಜುಳಾ ನಂತರ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಹಗ್ಗ ತುಂಡಾದ ಕಾರಣ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಅಸ್ವಸ್ಥಗೊಂಡ ಮಂಜುಳಾ ಅವರನ್ನು ಹೊಸಕೋಟೆ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಹೊಸಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ…
ಬೆಂಗಳೂರು: ಕರ್ನಾಟಕದಲ್ಲಿ ಶಾಲಾ ಮಕ್ಕಳಿಗೆ ಸೆಪ್ಟೆಂಬರ್ 20ರಿಂದ ದಸರಾ ರಜೆ ಆರಂಭವಾಗಲಿದೆ. ಸೆಪ್ಟೆಂಬರ್ ಹಾಗೂ ಅಕ್ಟೋಬರ್ನಲ್ಲಿ ಒಟ್ಟು 18 ದಿನಗಳು ರಜೆ ಸಿಗಲಿದೆ. ಈ ಬಗ್ಗೆ ಕರ್ನಾಟಕ ಶಿಕ್ಷಣ ಇಲಾಖೆಯು ಮಾಹಿತಿ ನೀಡಿದ್ದು, ಶೈಕ್ಷಣಿಕ ವರ್ಷ ಆರಂಭದಲ್ಲಿಯೇ ರಜೆ ಹಾಗೂ ಕಾರ್ಯ ಚಟುವಟಿಕೆಗಳ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ. ಅದರಂತೆ ದಸರಾ ಸರಜೆಗೆ ಸೆಪ್ಟೆಂಬರ್ 20 ರಿಂದ ಆರಂಭವಾಗಿ ಅಕ್ಟೋಬರ್ 7ರವರೆಗೂ ಇರಲಿದೆ. 2025-26ನೇ ಶೈಕ್ಷಣಿಕ ಸಾಲಿನ ದಸರಾ ರಜೆ ಸೆಪ್ಟೆಂಬರ್ 20ರಿಂದ ಆರಂಭವಾಗಲಿದ್ದು, ಅಕ್ಟೋಬರ್ 7 ರವರೆಗೆ ಇರಲಿದ್ದು, ಶಿಕ್ಷಣ ಇಲಾಖೆಯ ಆದೇಶದ ಪ್ರಕಾರ ಶಾಲಾ ವಿದ್ಯಾರ್ಥಿಗಳಿಗೆ ದಸರಾ ರಜೆಯೂ ಒಟ್ಟು 18 ದಿನ ಇರಲಿದೆ. ಅಕ್ಟೋಬರ್ 8 ರಿಂದ 2ನೇ ಅವಧಿಯು ಪ್ರಾರಂಭವಾಗಲಿದ್ದು, 2026ರ ಏಪ್ರಿಲ್ 10 ತನಕ ಶಾಲೆ ನಡೆಯಲಿದೆ. 2025- 2026ರ ಶೈಕ್ಷಣಿಕ ವರ್ಷದ ಶಾಲಾ ಅವಧಿಯ ಮಾರ್ಗದರ್ಶಿಯನ್ನು ಸಾರ್ವಜನಿಕ ಶಿಕ್ಷಣ ಇಲಾಖೆ ಪ್ರಕಟಿಸಿದ್ದು, ಶಾಲೆಗಳು ಆರಂಭಕ್ಕೂ ಮುನ್ನ ಪ್ರಕಟಣೆ ಹೊರಡಿಸಿತ್ತು. ಅದರ ನಿಯಮಾನುಸಾರದಂತೆ ರಜೆಗಳು ಘೋಷಣೆಯಾಗಿವೆ.
ಬೆಂಗಳೂರು : ಬೆಂಗಳೂರು ನಗರ ಜಿಲ್ಲಾ ವ್ಯಾಪ್ತಿಯಲ್ಲಿ ಒತ್ತುವರಿಯಾಗಿರುವ ರೂ. 4.30 ಕೋಟಿ ಅಂದಾಜು ಮೌಲ್ಯದ ಒಟ್ಟು 3 ಎಕರೆ 0.01 ಗುಂಟೆ ಸರ್ಕಾರಿ ಜಮೀನನ್ನು ಬೆಂಗಳೂರು ನಗರ ಜಿಲ್ಲಾಧಿಕಾರಿಗಳಾದ ಜಿ.ಜಗದೀಶ ಅವರ ನೇತೃತ್ವದಲ್ಲಿ ತೆರವುಗೊಳಿಸಿ ಸರ್ಕಾರದ ವಶಕ್ಕೆ ಪಡೆಯಲಾಯಿತು. ಇಂದು ಬೆಂಗಳೂರು ನಗರ ಜಿಲ್ಲೆಯಾದ್ಯಂತ ವಿವಿಧ ತಾಲ್ಲೂಕುಗಳ ತಹಶೀಲ್ದಾರ್ ಗಳು ತಮ್ಮ ವ್ಯಾಪ್ತಿಯಲ್ಲಿ ಅಕ್ರಮವಾಗಿ ಒತ್ತುವರಿಯಾಗಿದ್ದ ಸ್ಮಶಾನ, ಕಾಲುದಾರಿ, ಸರ್ಕಾರಿ ಕೆರೆ, ಸರ್ಕಾರಿ ಗುಂಡು ತೋಪು ಮತ್ತು ಸರ್ಕಾರಿ ಗೋಮಾಳ ಜಾಗಗಳಿಗೆ ಭೇಟಿ ನೀಡಿ ತೆರವು ಕಾರ್ಯಾಚರಣೆ ಕೈಗೊಂಡರು. ಆನೇಕಲ್ ತಾಲ್ಲೂಕಿನ ಕಸಬಾ ಹೋಬಳಿಯ ಕುಂಬಾರನಹಳ್ಳಿ ಗ್ರಾಮದ ಸ.ನಂ. 107 ಸ್ಮಶಾನ ಒಟ್ಟು ಒತ್ತುವರಿ ತೆರವುಗೊಳಿಸಿರುವ ವಿಸ್ತೀರ್ಣ 0.05 ಗುಂಟೆಗಳಾಗಿದ್ದು ಅಂದಾಜು ಮೌಲ್ಯ ರೂ 0.10 ಲಕ್ಷಗಳಾಗಿರುತ್ತದೆ. ಬೆಂಗಳೂರು ದಕ್ಷಿಣ ತಾಲ್ಲೂಕಿನ ತಾವರಕೆರೆ ಹೋಬಳಿಯ ಪುರದಪಾಳ್ಯ ಗ್ರಾಮದ ಸ.ನಂ. 19/5 ಕಾಲುದಾರಿ ಒಟ್ಟು ಒತ್ತುವರಿ ತೆರವುಗೊಳಿಸಿರುವ ವಿಸ್ತೀರ್ಣ 0.08 ಗುಂಟೆಗಳಾಗಿದ್ದು, ಅಂದಾಜು ಮೌಲ್ಯ ರೂ 0.20 ಲಕ್ಷಗಳಾಗಿರುತ್ತದೆ. ಬೇಗೂರು ಹೋಬಳಿಯ…
ಮೈಸೂರು: ಅಸಮಾನತೆಗಳನ್ನು ತೊಡೆಯುವ ಉದ್ದೇಶದಿಂದ, ಕಳೆದ ಬಾರಿ ನಮ್ಮ ಸರ್ಕಾರ ಅಸ್ತಿತ್ವಕ್ಕೆ ಬಂದಾಗ ಪ್ರಥಮ ಹೆಜ್ಜೆಯಾಗಿ ಅನ್ನಭಾಗ್ಯ ಯೋಜನೆ ಜಾರಿಗೆ ತಂದಿದ್ದು. ನಮ್ಮ ಸರ್ಕಾರ ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದ ಉದ್ದೇಶವೂ ಕೂಡಾ ಇದೇ ಆಗಿದೆ. ಗ್ಯಾರಂಟಿ ಯೋಜನೆಗಳಿಗಾಗಿ ಸರ್ಕಾರ ಕಳೆದ ಎರಡು ವರ್ಷ ಮೂರು ತಿಂಗಳಲ್ಲಿ 1 ಲಕ್ಷ ಕೋಟಿ ರೂಪಾಯಿಗಳನ್ನು ವೆಚ್ಚ ಮಾಡಿದೆ ಎಂಬುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ತಿಳಿಸಿದ್ದಾರೆ. ಅವರು JSS ಪ್ರಸಾದ ನಿಲಯಗಳ ಹಿರಿಯ ವಿದ್ಯಾರ್ಥಿಗಳ ಗೃಹ ನಿರ್ಮಾಣ ಸಹಕಾರ ಸಂಘ ನಿಯಮಿತ ಮೈಸೂರು ಇವರ ವತಿಯಿಂದ ಮೈಸೂರಿನ ವರುಣ ಕೆರೆಯ ಪಕ್ಕದಲ್ಲಿರುವ ಶ್ರೀ ಶಿವರಾತ್ರಿ ರಾಜೇಂದ್ರ ನಗರದಲ್ಲಿ ಆಯೋಜಿಸಲಾಗಿದ್ದ ಶ್ರೀ ಶಿವರಾತ್ರಿ ರಾಜೇಂದ್ರ ಅನುಭವ ಮಂಟಪ ಹಾಗೂ ಸಂಘದ ಕಚೇರಿ ಯನ್ನು ಉದ್ಘಾಟನೆ ಮಾಡಿದ ನಂತರ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿ ದರು. ಜೆಎಸ್ಎಸ್ ಕಾಲೇಜಿನ ಹಳೆಯ ವಿದ್ಯಾರ್ಥಿಗಳು ಸೇರಿ ಗೃಹ ನಿರ್ಮಾಣ ಸಂಘವನ್ನು ಸ್ಥಾಪಿಸಿದ್ದಾರೆ. ಸಂಘದ ಮೂಲಕ ನಿವೇಶನಗಳನ್ನು ಹಂಚಿಕೆ ಮಾಡುವ ಕೆಲಸವನ್ನು ಮಾಡಿದ್ದಾರೆ.…
ಬೆಂಗಳೂರು : ಸರ್ಕಾರದಿಂದ ನೇರವಾಗಿ /ಪರೋಕ್ಷವಾಗಿ ನೇಮಕಗೊಂಡಿರುವ ಎಲ್ಲಾ ‘ಎ’ ಗುಂಪಿನ ಅರ್ಹ ಅಧಿಕಾರಿಗಳು ಕಡ್ಡಾಯವಾಗಿ ಸಂಬಳ ಪ್ಯಾಕೇಜಿನಲ್ಲಿ ನೋಂದಾಯಿಸಿಕೊಳ್ಳುವುದನ್ನು ಖಚಿತಪಡಿಸಿಕೊಳ್ಳುವಲ್ಲಿ ಹೆಚ್ಚುವರಿ 15 ದಿನಗಳ ಕಾಲಾವಧಿಯನ್ನು ವಿಸ್ತರಿಸುವ ಕುರಿತು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ ಉಲ್ಲೇಖಿತ ಪತ್ರದಲ್ಲಿ ಎಲ್ಲಾ ಅರ್ಹ ‘ಎ’ ಗುಂಪಿನ ಅಧಿಕಾರಿಗಳಿಗೆ ಕಡ್ಡಾಯವಾಗಿ ಸಂಬಳ ಪ್ಯಾಕೇಜಿನಲ್ಲಿ ನೋಂದಾಯಿಸಿಕೊಳ್ಳುವುದನ್ನು ಖಚಿತಪಡಿಸಿಕೊಳ್ಳಲು ಹಾಗೂ ದಿನಾಂಕ: 15.09.2025ರೊಳಗಡೆ ನೋಂದಾಯಿಸಿಕೊಳ್ಳದ ಅಧಿಕಾರಿಗಳ ಸಂಬಳದ ವಿತರಣೆಯನ್ನು ತಡೆಹಿಡಿಯಲು ಕ್ರಮ ಕೈಗೊಳ್ಳಲು ತಿಳಿಸಲಾಗಿತ್ತು. ಆದರೆ, ‘ಎ’ ಗುಂಪಿನ ಅಧಿಕಾರಿಗಳು ಸಂಬಳ ಪ್ಯಾಕೇಜಿನಲ್ಲಿ ನೋಂದಾಯಿಸಿಕೊಳ್ಳುವಲ್ಲಿ ಇನ್ನೂ ಹೆಚ್ಚಿನ ಕಾಲಾವಕಾಶ ಕೋರಿದ್ದರಿಂದ, ‘ಎ’ ಗುಂಪಿನ ಅಧಿಕಾರಿಗಳಿಗೆ ಸಂಬಳ ಪ್ಯಾಕೇಜಿನಲ್ಲಿ ನೋಂದಾಯಿಸಿಕೊಳ್ಳಲು ದಿನಾಂಕ:30.09.2025ರ ವರೆಗೆ ಕಾಲಾವಕಾಶವನ್ನು ವಿಸ್ತರಿಸಲಾಗಿದೆ.
ಮಂಡ್ಯ : ಮಂಡ್ಯ ಸಕ್ಕರೆ ಕಾರ್ಖಾನೆಯನ್ನು ಮುಚ್ಚುವುದು ಸಾಧ್ಯವಿಲ್ಲ. ಆದರೆ ಅದನ್ನು ಲಾಭದಾಯಕವಾಗಿಸಲು ಮಾಡಬೇಕಾದ ಕೆಲಸಗಳೇನು ಎಂದು ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಶಾಸಕರು ಚರ್ಚೆ ಮಾಡಬೇಕು. ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನಲ್ಲಿ ಆಯೋಜಿಸಿದ್ದ ಗಗನಚುಕ್ಕಿ ಜಲಪಾತೋತ್ಸವ -2025 ರಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ,ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಮಂಡ್ಯ ಸಕ್ಕರೆ ಕಾರ್ಖಾನೆಗೆ 113 ಕೋಟಿಗಳನ್ನು ಒದಗಿಸಿದೆ. ಅಧಿಕಾರಕ್ಕೆ ಬಂದ ಕೂಡಲೇ 50 ಕೋಟಿಗಳನ್ನು ಒದಗಿಸಿ, ನಂತರ 52 ಕೋಟಿ ರೂ.ಗಳ ವಿದ್ಯುತ್ ಶಕ್ತಿಯ ಬಾಕಿ ಬಿಲ್ ಅನ್ನು ಮನ್ನಾ ಮಾಡಲಾಯಿತು. ಇದಲ್ಲದೆ 10 ಕೋಟಿಯನ್ನು ಮತ್ತೆ ಒದಗಿಸಲಾಗಿದೆ. ಮಂಡ್ಯ ಸಕ್ಕರೆ ಕಾರ್ಖಾನೆಯನ್ನು ನಷ್ಟವಿಲ್ಲದ ರೀತಿಯಲ್ಲಿ ನಡೆಸಿಕೊಂಡು ಹೋಗಬೇಕು. ಇದಕ್ಕೆ ಅಗತ್ಯವಿರುವ ಬಾಯ್ಲಿಂಗ್ ಹೌಸ್ ವ್ಯವಸ್ಥೆಯನ್ನು ಒದಗಿಸಲಾಗುವುದು ಎಂದರು. ಪ್ರವಾಸೋದ್ಯಮವನ್ನು ಉತ್ತೇಜಿಸಲು ಹಾಗೂ ಪ್ರಕೃತಿ ಸೌಂದರ್ಯವನ್ನು ಜನರು ಕಾಣಲು ಬರಬೇಕು ಎಂಬ ಉದ್ದೇಶದಿಂದ ಸರ್ಕಾರವೇ ಜಲಪಾತೋತ್ಸವವನ್ನು ಆಚರಿಸುತ್ತಾ ಬಂದಿದೆ. ಕರ್ನಾಟಕದಲ್ಲಿ ಅನೇಕ ನದಿಗಳಿವೆ. ಕಾವೇರಿ, ಕೃಷ್ಣಾ, ತುಂಗಭದ್ರೆ, ಶರಾವತಿ ನದಿಗಳು…














