Subscribe to Updates
Get the latest creative news from FooBar about art, design and business.
Author: kannadanewsnow57
ಹೈದರಾಬಾದ್ : ಆಂಧ್ರ ಪ್ರದೇಶದ ಮಾಜಿ ಮುಖ್ಯಮಂತ್ರಿ ಮತ್ತು ವೈಎಸ್ಆರ್ಸಿಪಿ ಮುಖ್ಯಸ್ಥ ವೈಎಸ್ ಜಗನ್ ಮೋಹನ್ ರೆಡ್ಡಿ ಅವರು ಸತ್ತೇನಪಲ್ಲಿ ಕ್ಷೇತ್ರದ ರೆಂಟಪಲ್ಲಕ್ಕೆ ಭೇಟಿ ನೀಡಿದ್ದ ವೇಳೆ ಘೋರ ಘಟನೆಯೊಂದು ನಡೆದಿದೆ. ಈ ಭೇಟಿಯ ಸಮಯದಲ್ಲಿ, ಎಟುಕುರು ಬೈಪಾಸ್ ಬಳಿ ಜಗನ್ ಅವರ ಬೆಂಗಾವಲು ಪಡೆಯಲ್ಲಿ ವಾಹನ ಡಿಕ್ಕಿ ಹೊಡೆದು ಸಿಂಗಯ್ಯ ಎಂಬ ವ್ಯಕ್ತಿ ಸಾವನ್ನಪ್ಪಿದರು. ಈ ಪ್ರಕರಣದಲ್ಲಿ ಇತ್ತೀಚೆಗೆ ಪ್ರಮುಖ ತಿರುವು ಸಿಕ್ಕಿದೆ. ಜಗನ್ ಪ್ರಯಾಣಿಸುತ್ತಿದ್ದ ವಾಹನ ಸಿಂಗಯ್ಯಗೆ ಡಿಕ್ಕಿ ಹೊಡೆದಿರುವ ಶಂಕೆಗಳಿವೆ. ಇದರೊಂದಿಗೆ, ಸ್ಥಳಕ್ಕೆ ಪ್ರವೇಶಿಸಿದ ಪೊಲೀಸರು ಘಟನೆಯ ಸ್ಥಳದಿಂದ ಸಿಸಿಟಿವಿ ದೃಶ್ಯಾವಳಿಗಳ ಜೊತೆಗೆ ಪ್ರತ್ಯಕ್ಷದರ್ಶಿಗಳಿಂದ ಸಾಕ್ಷ್ಯಗಳನ್ನು ಸಂಗ್ರಹಿಸಲು ಪ್ರಾರಂಭಿಸಿದರು. ಈ ಪ್ರಕ್ರಿಯೆಯಲ್ಲಿ, ಪೊಲೀಸರಿಗೆ ಪ್ರಮುಖ ಪುರಾವೆಗಳು ಸಿಕ್ಕಿವೆ. ಜಗನ್ ಪ್ರಯಾಣಿಸುತ್ತಿದ್ದ ಕಾರಿನ ಚಕ್ರಗಳ ಕೆಳಗೆ ಬಿದ್ದು ನಜ್ಜುಗುಜ್ಜಾಗುತ್ತಿರುವ ವ್ಯಕ್ತಿಯನ್ನು ತೋರಿಸುವ ವೀಡಿಯೊ ಸಾಕ್ಷ್ಯವನ್ನು ಪೊಲೀಸರು ಸೆರೆಹಿಡಿದಿದ್ದಾರೆ. ಈ ವೀಡಿಯೊ ಈಗ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ವೀಡಿಯೊದಲ್ಲಿ, ಜಗನ್ ತನ್ನ ಪಕ್ಷದ ಕಾರ್ಯಕರ್ತರನ್ನು ಕಾರಿನಲ್ಲಿ ಸ್ವಾಗತಿಸುತ್ತಿದ್ದಾಗ, ಒಬ್ಬ…
ಕೊಪ್ಪಳ : ಇತ್ತೀಚಿಗೆ ಪೊಲೀಸ್ ಇಲಾಖೆಯಲ್ಲಿ ಪಿಎಸ್ಐ ನೇಮಕಾತಿಯಲ್ಲಿ ಬಹುದೊಡ್ಡ ಹಗರಣ ನಡೆದಿತ್ತು. ಹಾಗಾಗಿ ಕಳೆದ ಐದು ವರ್ಷದಿಂದ ಯಾವುದೇ ನೇಮಕಾತಿ ಆಗಿಲ್ಲ. ಇದೀಗ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಒಂದು ಸಾವಿರ ಪಿಎಸ್ಐ ಹುದ್ದೆಗಳನ್ನು ಶೀಘ್ರದಲ್ಲಿ ಭರ್ತಿ ಮಾಡಲಾಗುತ್ತದೆ ಎಂದು ಗೃಹ ಸಚಿವ ಜಿ.ಪರಮೇಶ್ವರ ಅವರು ತಿಳಿಸಿದರು. ಕೊಪ್ಪಳದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈಗಾಗಲೇ 500 ಪಿಎಸ್ಐ ಹುದ್ದೆಗಳಿಗೆ ನೇಮಕಾತಿ ನಡೆದಿದ್ದು, ಅವರೆಲ್ಲ ತರಬೇತಿ ಪಡೆಯುತ್ತಿದ್ದಾರೆ. ರಾಜ್ಯದಲ್ಲಿ ಎಂಟು ಸಾವಿರ ಕಾನ್ಸ್ಟೇಬಲ್ ಹುದ್ದೆಗಳು ಖಾಲಿ ಇವೆ. ಆದ್ಯತೆಯ ಮೇರೆಗೆ ಭರ್ತಿ ಮಾಡಿಕೊಳ್ಳಲು ಕ್ರಮ ಕೈಗೊಳ್ಳಲಾಗುವುದು. ಜೊತೆಗೆ ರಾಜ್ಯದಲ್ಲಿ ಹೆಚ್ಚುವರಿ ಟ್ರಾಫಿಕ್ ಪೊಲೀಸ್ ಸ್ಟೇಷನ್ ಸೇರಿದಂತೆ ಇನ್ನಿತರ ಕಾರ್ಯಚಟುವಟಿಕೆಗಳಿಗೆ ಮುಂದಿನ ಬಜೆಟ್ನಲ್ಲಿ ಅನುದಾನ ಮೀಸಲಿಡಲಾಗುವುದು ಎಂದರು. ರಾಜ್ಯದಲ್ಲಿ 8000 ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳು ಖಾಲಿಯಿದ್ದು, ಆಯಾ ಜಿಲ್ಲೆಯಲ್ಲಿ ಎಷ್ಟು ಪೊಲೀಸ್ ಸಿಬ್ಬಂದಿ ಕೊರತೆ ಇದೆ ಎನ್ನುವುದರ ವರದಿ ಪಡೆಯಲಾಗಿದೆ. ಆದ್ಯತೆಯ ಮೇರೆಗೆ ಹಂತ ಹಂತವಾಗಿ ನೇಮಕಾತಿ ಪ್ರಕ್ರಿಯೆ ನಡೆಸಲಾಗುವುದು ಎಂದು ತಿಳಿಸಿದ್ದಾರೆ.…
ಹಾಸನ : ಇತ್ತೀಚಿಗೆ ಯುವಜನತೆಯಲ್ಲಿ ಹೃದಯಾಘಾತ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದೆ. ನಿನ್ನೆ ಒಂದೇ ದಿನದಲ್ಲಿ ಹಾಸನದಲ್ಲಿ ಹೃದಯಾಘಾತಕ್ಕೆ ಇಬ್ಬರು ಬಲಿಯಾಗಿದ್ದಾರೆ. ನಗರದ ಸತ್ಯಮಂಗಲ ಬಡಾವಣೆಯಲ್ಲಿ ಹೃದಯಾಘಾತದಿಂದ 35 ವರ್ಷದ ಯುವಕನೊಬ್ಬ ಮೃತಪಟ್ಟಿರುವ ಘಟನೆ ನಡೆದಿದೆ. ಮೃತರನ್ನು ಚೇತನ್ (35) ಎಂದು ಗುರುತಿಸಲಾಗಿದೆ. ಮೂಲತಃ ಮಂಡ್ಯದ ಕಿಕ್ಕೇರಿ ಮೂಲದ ಚೇತನ್, ಹಾಸನ ನಗರದ ಹಳೇ ಬಸ್ ನಿಲ್ದಾಣದ ಬಳಿ ಮೊಬೈಲ್ ಅಂಗಡಿ ನಡೆಸುತ್ತಿದ್ದರು. ಸತ್ಯಮಂಗಲ ಬಡಾವಣೆಯಲ್ಲಿ ಪತ್ನಿ ಮತ್ತು ಮಗುವಿನೊಂದಿಗೆ ವಾಸವಿದ್ದರು. ಶನಿವಾರ ಮಧ್ಯಾಹ್ನದ ವೇಳೆಗೆ ಚೇತನ್ ಊಟಕ್ಕೆ ಕುಳಿತುಕೊಳ್ಳುವಾಗ ದಿಢೀರ್ ಎದೆನೋವು ಕಾಣಿಸಿಕೊಂಡಿದೆ ಎನ್ನಲಾಗಿದೆ. “ಎದೆ ನೋಯುತ್ತಿದೆ” ಎಂದು ಪತ್ನಿಗೆ ತಿಳಿಸಿ ತಕ್ಷಣವೇ ಎದ್ದು ನಿಂತು ಕುಸಿದು ಬಿದ್ದಾರೆ. ಪತ್ನಿ ಅವರನ್ನು ಆಸ್ಪತ್ರೆಗೆ ಕರೆದೊಯ್ದರೂ, ಅಷ್ಟರಲ್ಲಾಗಲೇ ಚೇತನ್ ಮೃತಪಟ್ಟಿದ್ದರು. ಅದೇ ರೀತಿಯಾಗಿ ಬೇಲೂರು ಪಟ್ಟಣದ ಸಮಾಜ ಸೇವಕ ನಿಶಾದ್ ಅಹಮ್ಮದ್ (35) ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಇವರು ಜೀವನ ನಿರ್ವಹಣೆಗಾಗಿ ಪಟ್ಟಣದಲ್ಲಿ ಟೀ ಕ್ಯಾಂಟೀನ್ ಒಂದನ್ನು ನಡೆಸುತ್ತಿದ್ದರು. ಜೊತೆಗೆ ಸಮಾಜ ಸೇವಕ ಎಂದು ಗುರುತಿಸಿಕೊಂಡಿದ್ದರು.…
ಬೆಂಗಳೂರು: ವರ್ಗಾವಣೆಯ ನಿರೀಕ್ಷೆಯಲ್ಲಿರುವ ರಾಜ್ಯದ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರು, ಮುಖ್ಯ ಶಿಕ್ಷಕರ ವರ್ಗಾವಣೆಗೆ ಶಿಕ್ಷಣ ಇಲಾಖೆಯಿಂದ ಪರೀಕ್ಷಿತ ವೇಳಾಪಟ್ಟಿ ಪ್ರಕಟಿಸಲಾಗಿದ್ದು, ಘಟಕದೊಳಗೆ ಮತ್ತು ಹೊರಗೆ ಕೋರಿಕೆ ಮತ್ತು ಪರಸ್ಪರ ವರ್ಗಾವಣೆಗೆ ಅರ್ಜಿ ಸಲ್ಲಿಸಲು ಜು. 5ರವರೆಗೆ ಅವಕಾಶ ಕಲ್ಪಿಸಲಾಗಿದೆ. ಆಡಳಿತಾತ್ಮಕ ಕಾರಣದಿಂದ ವೇಳಾಪಟ್ಟಿ ಪರಿಷ್ಕರಿಸಿದ್ದು, ಆದ್ಯತೆ ಕೋರುವ ಪ್ರಕರಣಗಳಲ್ಲಿ ಸಮರ್ಪಕ ದಾಖಲೆ ಸಲ್ಲಿಸದ ಶಿಕ್ಷಕರ ಅರ್ಜಿಗಳನ್ನು ತಿರಸ್ಕರಿಸುವಂತೆ ಸೂಚಿಸಲಾಗಿದೆ. ಹೆಚ್ಚುವರಿ ಶಿಕ್ಷಕರು ಸಲ್ಲಿಸಿರುವ ದಾಖಲೆಗಳ ಪರಿಶೀಲನೆಗೆ ಜುಲೈ 7, ಆಕ್ಷೇಪಣೆ ಪರಿಶೀಲಿಸಿ ತಾತ್ಕಾಲಿಕ ಆದ್ಯತಾ ಪಟ್ಟಿ ನೀಡಲು ಜುಲೈ 8, ಕೋರಿಕೆ ಹೆಚ್ಚುವರಿ ಶಿಕ್ಷಕರ ಸಮರ್ಪಕ ಮರು ಹೊಂದಾಣಿಕೆಗೆ ಜುಲೈ 15 ರಂದು ಕೌನ್ಸೆಲಿಂಗ್ ನಡೆಸಲು ತಿಳಿಸಲಾಗಿದೆ. ಶಿಕ್ಷಕರ ಅನುಕೂಲಕ್ಕೆ ಜುಲೈ 19ರಂದು ಖಾಲಿ ಹುದ್ದೆಗಳ ಪ್ರಕಟಣೆ, ಜುಲೈ 21 ರಂದು ವರ್ಗಾವಣೆಗೆ ಅರ್ಹರಾಗಿರುವ ಶಿಕ್ಷಕರ ಅಂತಿಮ ವೇಳಾಪಟ್ಟಿ ಪ್ರಕಟಿಸಲು ತಿಳಿಸಲಾಗಿದೆ. ಜು. 24ರಿಂದ ಕೌನ್ಸೆಲಿಂಗ್ ನಡೆಯಲಿದೆ. ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ನಿರ್ದೇಶಕರು, ಎಲ್ಲಾ ಜಿಲ್ಲಾ ಉಪ…
ಬೆಂಗಳೂರು: ರಾಜ್ಯದಲ್ಲಿ ಮತ್ತೆ ಇಂದಿನಿಂದ ಮುಂಗಾರು ಚುರುಕಾಗಿದ್ದು, ಕರಾವಳಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ 1 ವಾರ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೊಡಗು, ಕರಾವಳಿ, ಮಲೆನಾಡು ಸೇರಿ ರಾಜ್ಯದ ಹಲವಡೆ ಜೂ.23ರಿಂದ ಜೂ.29ರವರೆಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. . ಕರಾವಳಿಯಲ್ಲಿ ಜೂ.23ರಿಂದ ಜೂ.29ರವರೆಗೆ ಆರೆಂಜ್ ಅಲರ್ಟ್ ಘೋಷಿಸ ಲಾಗಿದೆ. ಇಂದಿನಿಂದ ಒಂದು ವಾರ ಕೊಡಗು, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ತುಮಕೂರು, ರಾಮನಗರ, ಮಂಡ್ಯ, ಮೈಸೂರು, ವಿಜಯನಗರ, ಹಾಸನ, ದಾವಣಗೆರೆ, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ಕೊಡಗಿನ ಕೆಲವೆಡೆ ಉತ್ತಮ ಮಳೆಯಾಗಿದ್ದು, ಕೃಷಿ ಚಟುವಟಿಕೆ ಚುರುಕುಗೊಂಡಿವೆ. ಉತ್ತಮ ಮಳೆಯಾದ ಕಾರಣ ಯಾದಗಿರಿಯ ಬಸವಸಾಗರ ಜಲಾಶಯದ 14 ಕ್ರಸ್ಟ್ಗೇಟ್ ಗಳ ಮೂಲಕ 42,820 ಸಾವಿರ ಕ್ಯೂಸೆಕ್ ನೀರು ಬಿಡಲಾಗುತ್ತಿದೆ.
ಬೆಂಗಳೂರು: ನಗರದ ಎಲಿಟ ಪ್ರೋಮೆನೇಡ್ ಮತ್ತು ಅರೆಹಳ್ಳಿ ಉಪಕೇಂದ್ರ ನಿವðಹಣಾ ಕಾಮಗಾರಿ ನಿಮಿತ್ತ ಜೂನ್ 23ರ ಸೋಮವಾರ ಬೆಳಿಗ್ಗೆ 10.00 ರಿಂದ ಮಧ್ಯಾಹ್ನ 4.00 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ. ಎಲಿಟ ಪ್ರೋಮೆನೇಡ್ ಅಪಾಟ್ðಮೆಂಟ್, ಕೆ.ಆರ್. ಲೇಔಟ್, ಶಾರದನಗರ, ಚುಂಚಗಟ್ಟ ಮತ್ತು ಸುತ್ತಮುತ್ತಲ ಪ್ರದೇಶಗಳು, ಅರೇಹಳ್ಳಿ, ಇಟ್ಟಮಡು, ಏಜಿಎಸ್ ಲೇಔಟ್, ಚಿಕ್ಕಲಸಂದ್ರ, ಟಿ.ಜಿ. ಲೇಔಟ್, ಭುವನೇಶ್ವರಿನಗರ ಇಸ್ರೋ ಲೇಔಟ್, ಇಸ್ರೋ ಲೇಔಟ್ ಇಂಡಸ್ರ್ಟಿಯಲ್ ಏರಿಯಾ, ಕುಮಾರಸ್ವಾಮಿ ಬಡಾವಣೆ, ವಿಠ್ಠಲ ನಗರ, ವಿಕ್ರಮ್ ನಗರ, ಯೆಲಚೇನಹಳ್ಳಿ, ಸುತ್ತಮುತ್ತಲ ಪ್ರದೇಶ, ಚಿಕ್ಕಲಸಂದ್ರ ವಿಲೇಜ್, ಕದಿರೇನಹಳ್ಳಿ, ಅಬ್ಬಯ್ಯ ನಾಯ್ಡು ಸ್ಟುಡಿಯೋ ಸುತ್ತಮುತ್ತಲ ಪ್ರದೇಶ, ನಾಯ್ಡು ಲೇಔಟ್, ಎಜಿಎಸ್ ಲೇಔಟ್ ಮತ್ತು ಸುತ್ತಮುತ್ತಲ ಪ್ರದೇಶಗಳಲ್ಲಿ ವಿದ್ಯುತ್ ಇರುವುದಿಲ್ಲ.
ಬೆಂಗಳೂರು: ರಾಜ್ಯ ಸರಕಾರಿ ನೌಕರರಿಗೆ ‘ಸಂಧ್ಯಾ ಕಿರಣ’ ಯೋಜನೆಯಡಿ ಪ್ರಾಯೋಗಿಕವಾಗಿ ಜಾರಿ ಮಾಡಿರುವ ನಗದು ರಹಿತ ಚಿಕಿತ್ಸೆ ಸೌಲಭ್ಯವನ್ನು ಎಲ್ಲ ಕಡೆಗಳಿಗೆ ವಿಸ್ತರಣೆ ಮಾಡಲಾಗುವುದು ಎಂದು ರಾಜ್ಯ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಹೇಳಿದರು. ರಾಜ್ಯ ಸರ್ಕಾರಿ ನಿವೃತ್ತ ನೌಕರರ ಸಂಘದ ರಾಜ್ಯ ಪರಿಷತ್ ಮಹಾಸಭೆಯಲ್ಲಿ ಅವರು ಅಭಿನಂದನೆ ಸ್ವೀಕರಿಸಿ ಮಾತನಾಡಿದ ಅವರು, ರಾಜ್ಯ ಸರ್ಕಾರಿ ನಿವೃತ್ತ ನೌಕರರಿಗಾಗಿ ಸಂಧ್ಯಾ ಕಿರಣ ಯೋಜನೆ ಜಾರಿಗೊಳಿಸಲಾಗಿದೆ. ನಗದು ರಹಿತ ಚಿಕಿತ್ಸೆ ನೀಡುವ ಉದ್ದೇಶದಿಂದ ಪ್ರಾಯೋಗಿಕವಾಗಿ ನಡೆಸುತ್ತಿದ್ದು, ಇದು ಯಶಸ್ವಿಯದಲ್ಲಿ ಎಲ್ಲಾ ಕಡೆಗೆ ವಿಸ್ತರಿಸುವುದಾಗಿ ತಿಳಿಸಿದ್ದಾರೆ ನಿವೃತ್ತ ನೌಕರರ ಆರೋಗ್ಯ ಸುರಕ್ಷತೆಗಾಗಿ ‘ಸಂಧ್ಯಾ ಕಿರಣ’ ಯೋಜನೆ ಜಾರಿಯಲ್ಲಿದೆ. ಚಿಕಿತ್ಸೆ ಪಡೆದು ಬಿಲ್ಗಳು ಸಲ್ಲಿಸಿದ ಬಳಿಕ ಮರುಪಾವತಿ ವ್ಯವಸ್ಥೆ ಇದೆ. ಇದನ್ನು ನಗದು ರಹಿತ ಮಾಡುವ ಉದ್ದೇಶದಿಂದ ಪ್ರಾಯೋಗಿಕ ಜಾರಿಗೆ ಸೂಚನೆ ನೀಡಲಾಗಿದೆ. ಮರುಪಾವತಿಗೂ ಮತ್ತು ನಗದು ರಹಿತ ಸೇವೆ ನೀಡಿದ ಆಸ್ಪತ್ರೆಗಳ ಪಾವತಿ ವ್ಯತ್ಯಾಸವನ್ನು ಗಮನಿಸಿ, ಮುಂದಿನ ನಿರ್ಧಾರ ತೆಗೆದುಕೊಳ್ಳಲಾಗುವುದು’ ಎಂದು ಅವರು ಹೇಳಿದರು.
ಬೆಂಗಳೂರು : ಪ್ರಸಕ್ತ ಶೈಕ್ಷಣಿಕ ಸಾಲಿನಿಂದ ಮಕ್ಕಳ ಹಾಜರಾತಿಗೆ ಅತ್ಯಾಧುನಿಕ (ಚಹರೆ ಗುರುತಿಸುವ ಹಾಜರಾತಿ ವ್ಯವಸ್ಥೆ) ತಂತ್ರಜ್ಞಾನವನ್ನು ಬಳಸಿಕೊಳ್ಳಲು ಉದ್ದೇಶಿಸಲಾಗಿದ್ದು, ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳ ಹೆಸರು ಕೂಗಿ ಹಾಜರಾತಿ ಪಡೆಯುವ ಬದಲಾಗಿ, ಶಿಕ್ಷಕರು ಮೊಬೈಲ್ನಲ್ಲಿ ವಿದ್ಯಾರ್ಥಿಗಳ ಫೋಟೋ ಕ್ಲಿಕ್ಕಿಸಿಕೊಳ್ಳುವ ಮೂಲಕ ಹಾಜರಾತಿ ದಾಖಲಿಸಿ ಕೊಳ್ಳಲಿದ್ದಾರೆ. ಹೌದು,’ನಿರಂತರ’ ಯೋಜನೆ ಮತ್ತು ಅನುದಾನಿತ ಸೇರಿ 52,686 ಶಾಲೆಗಳ 52 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳ ಹಾಜರಾತಿಯನ್ನು ಕೃತಕ ಬುದ್ಧಿಮತ್ತೆ ಚಾಲಿತ, ಮುಖ ಚಹರೆ ಗುರುತು ಆಧಾರಿತವಾಗಿ (ಎಐ ಫೇಶಿಯಲ್ ರಿಕಗ್ನಿಷನ್) ತೆಗೆದುಕೊಳ್ಳಲಾಗುತ್ತದೆ. ಈ ಯೋಜನೆಯು ಸುಮಾರು 5 ಕೋಟಿ ರು. ವೆಚ್ಚದ್ದಾಗಿದೆ. ಶಿಕ್ಷಕರ ಮೊಬೈಲ್ ಆ್ಯಪ್ ಬಳಸಿ ವಿದ್ಯಾರ್ಥಿಗಳ ಫೋಟೋ ಸೆರೆ ಹಿಡಿಯಲಾಗುತ್ತದೆ. ಫೋಟೋ ಮೂಲಕವೇ ವಿದ್ಯಾರ್ಥಿಗಳ ಹಾಜರಾತಿ ಖಚಿತಪಡಿಸುವ ವ್ಯವಸ್ಥೆ ಇರಲಿದೆ. ಇದರಿಂದ ನಕಲಿ ಹಾಜರಾತಿ ತಡೆಗೆ ಅನುಕೂಲವಾಗಲಿದೆ. ರಾಜ್ಯದ 52686 ಶಾಲೆಗಳ 52 ಲಕ್ಷ ವಿದ್ಯಾರ್ಥಿಗಳ ಹಾಜರಾತಿಗೆ ಇದನ್ನು ಬಳಕೆ ಮಾಡಲಾಗುತ್ತದೆ. ಮೇಲೆ ಓದಲಾದ ಕ್ರಮಾಂಕ (1)ರಲ್ಲಿ 2025-26ನೇ ಸಾಲಿನಲ್ಲಿ ಸರ್ಕಾರವು…
ಇಂಗ್ಲೆಂಡ್ ಮತ್ತು ಭಾರತ ನಡುವೆ ನಡೆಯುತ್ತಿರುವ ಟೆಸ್ಟ್ ಸರಣಿಯ ಮಧ್ಯೆ, ಮುಂದಿನ 8 ತಿಂಗಳ ನಂತರ ಐಸಿಸಿ ಪುರುಷರ ಟಿ20 ವಿಶ್ವಕಪ್ 2026 ಆರಂಭವಾಗಲಿದ್ದು, ಇದನ್ನು ಭಾರತ ಮತ್ತು ಶ್ರೀಲಂಕಾ ಜಂಟಿಯಾಗಿ ಆಯೋಜಿಸಲಿವೆ. ಇಲ್ಲಿಯವರೆಗೆ 13 ತಂಡಗಳು ಈ ಪಂದ್ಯಾವಳಿಗೆ ಅರ್ಹತೆ ಪಡೆದಿವೆ, ಇತ್ತೀಚೆಗೆ ಕೆನಡಾ ಕೂಡ ಇದರೊಂದಿಗೆ ಸೇರಿಕೊಂಡಿದೆ. ಕೆನಡಾ ಎರಡನೇ ಬಾರಿಗೆ ಭಾರತದಲ್ಲಿ ಆಡಲಿದೆ ಭಾರತದಲ್ಲಿ ನಡೆಯಲಿರುವ ವಿಶ್ವಕಪ್ನಲ್ಲಿ ಕೆನಡಾ ಭಾಗವಹಿಸುತ್ತಿರುವುದು ಇದು ಎರಡನೇ ಬಾರಿ. ಇದಕ್ಕೂ ಮೊದಲು, ಅವರು ಭಾರತ, ಶ್ರೀಲಂಕಾ ಮತ್ತು ಬಾಂಗ್ಲಾದೇಶದಲ್ಲಿ ಜಂಟಿಯಾಗಿ ಆಯೋಜಿಸಲಾಗಿದ್ದ 2011 ರ ODI ವಿಶ್ವಕಪ್ನಲ್ಲಿ ಭಾಗವಹಿಸಿದ್ದರು. ಆದಾಗ್ಯೂ, ಆ ಪಂದ್ಯಾವಳಿಯಲ್ಲಿ ಅವರು ಕೇವಲ ಒಂದು ಪಂದ್ಯವನ್ನು ಗೆದ್ದರು. ಈ ವರ್ಷದ 2024 ರ T20 ವಿಶ್ವಕಪ್ನಲ್ಲಿ ಕೆನಡಾ ಮೊದಲ ಬಾರಿಗೆ ಅರ್ಹತೆ ಪಡೆಯಿತು. ಅವರು ಐರ್ಲೆಂಡ್ ವಿರುದ್ಧ ಗೆದ್ದರು, ಆದರೆ ಭಾರತದ ವಿರುದ್ಧದ ಪಂದ್ಯವನ್ನು ಮಳೆಯಿಂದಾಗಿ ರದ್ದುಗೊಳಿಸಲಾಯಿತು, ಇದು ಪಂದ್ಯಾವಳಿಯಿಂದ ನಿರ್ಗಮಿಸಲು ಖಚಿತಪಡಿಸಿತು. ಇಲ್ಲಿಯವರೆಗೆ ಅರ್ಹತೆ ಪಡೆದ ತಂಡಗಳು…
ಚಿನ್ನದ ಸಾಲ ಕ್ಷೇತ್ರದಲ್ಲಿ ಹೊಸ ಕ್ರಾಂತಿಯನ್ನು ತರಲು ಭಾರತೀಯ ರಿಸರ್ವ್ ಬ್ಯಾಂಕ್ (ಆರ್ಬಿಐ) ನಿಯಮಗಳಲ್ಲಿ ಪ್ರಮುಖ ಬದಲಾವಣೆಗಳನ್ನು ಮಾಡಿದೆ. ಈ ಬದಲಾವಣೆಗಳು ಸಾಲದಾತರಿಗೆ ತಮ್ಮ ವ್ಯವಹಾರ ಮಾದರಿಯನ್ನು ಮತ್ತಷ್ಟು ಬಲಪಡಿಸಲು ಅವಕಾಶವನ್ನು ನೀಡುವುದಲ್ಲದೆ, ಸಣ್ಣ ಸಾಲಗಾರರು ತಮ್ಮ ಚಿನ್ನಕ್ಕೆ ಹೆಚ್ಚಿನ ಮೌಲ್ಯವನ್ನು ಪಡೆಯಲು ಅವಕಾಶವನ್ನು ಒದಗಿಸುತ್ತಿವೆ. ಎಸ್ & ಪಿ ಗ್ಲೋಬಲ್ ರೇಟಿಂಗ್ಸ್ನ ಇತ್ತೀಚಿನ ವರದಿಯ ಪ್ರಕಾರ, ಚಿನ್ನದ ಸಾಲಗಳಿಗೆ ಸಾಲ-ಮೌಲ್ಯ (ಎಲ್ಟಿವಿ) ಅನುಪಾತವನ್ನು ಹೊಸ ನಿಯಮಗಳ ಅಡಿಯಲ್ಲಿ ಮತ್ತಷ್ಟು ಸ್ಪಷ್ಟಪಡಿಸಲಾಗಿದೆ, ಇದು ಗ್ರಾಹಕರಿಗೆ ಕಡಿಮೆ ಅವಧಿಗೆ ಹೆಚ್ಚಿನ ಸಾಲಗಳನ್ನು ಪಡೆಯಲು ಅನುವು ಮಾಡಿಕೊಡುತ್ತದೆ. ಈ ಹೊಸ ನಿಯಮಗಳನ್ನು ವಿವರವಾಗಿ ಅರ್ಥಮಾಡಿಕೊಳ್ಳೋಣ ಮತ್ತು 10 ಗ್ರಾಂ ಚಿನ್ನದ ಮೇಲೆ ನೀವು ಎಷ್ಟು ಚಿನ್ನದ ಸಾಲವನ್ನು ಪಡೆಯಬಹುದು ಎಂಬುದನ್ನು ತಿಳಿದುಕೊಳ್ಳೋಣ, ಜೊತೆಗೆ ಬ್ಯಾಂಕ್ ಅಥವಾ ಎನ್ಬಿಎಫ್ಸಿಯಿಂದ ಸಾಲ ತೆಗೆದುಕೊಳ್ಳುವುದು ನಿಮಗೆ ಉತ್ತಮವೇ ಎಂದು ನೋಡೋಣ. ಆರ್ಬಿಐನ ಹೊಸ ನಿಯಮಗಳು: ಚಿನ್ನದ ಸಾಲದಲ್ಲಿ ಏನು ಬದಲಾಗಿದೆ? ಚಿನ್ನದ ಸಾಲ ಪ್ರಕ್ರಿಯೆಯನ್ನು ಹೆಚ್ಚು ಪಾರದರ್ಶಕವಾಗಿಸಲು ಆರ್ಬಿಐ…













