Author: kannadanewsnow57

ಬೆಂಗಳೂರು : ಹೈಕೋರ್ಟ್‌ಗೆ ಮೇ.5 ರ ನಾಳೆಯಿಂದ ಮೇ 31ರವರೆಗೆ ಬೇಸಿಗೆ ರಜೆ ಇರಲಿದ್ದು, ಕೋರ್ಟ್ ಕಲಾಪಗಳು ಜೂ.2ರಿಂದ ಪುನರಾರಂಭವಾಗಲಿವೆ. ರಜೆ ಅವಧಿಯಲ್ಲಿ ತುರ್ತು ಅರ್ಜಿಗಳ ವಿಚಾರಣೆಗೆ ಬೆಂಗಳೂರಿನ ಪ್ರಧಾನ ಪೀಠ, ಧಾರವಾಡ ಮತ್ತು ಕಲಬುರಗಿ ಪೀಠಗಳಲ್ಲಿ ಮೇ 6, 8, 13, 15, 20, 22, 27 ಮತ್ತು 29ರಂದು ರಜಾಕಾಲದ ಪೀಠಗಳು ಕಾರ್ಯ ನಿರ್ವಹಿಸಲಿವೆ. ರಜೆ ಅವಧಿಯಲ್ಲಿ ಬೆಂಗಳೂರು ಮತ್ತು ಧಾರವಾಡ ಪೀಠಗಳು ಬೆಳಗ್ಗೆ 10.30ರಿಂದ ಕಲಾಪ ಆರಂಭಿಸಿದರೆ, ಕಲಬುರಗಿ ಪೀಠ ಬೆಳಿಗ್ಗೆ 8ಕ್ಕೆ ಕಾರ್ಯಾರಂಭಗೊಳ್ಳಲಿದೆ. ಈ ಅವಧಿಯಲ್ಲಿ ಕಾರ್ಯ ನಿರ್ವಹಿಸುವ ರಜಾಪೀಠಗಳಿಗೆ ನ್ಯಾಯಮೂರ್ತಿಗಳನ್ನು ನಿಯೋಜಿಸಿ ಸಿಜೆ ಸೂಚನೆ ಮೇರೆಗೆ ರಿಜಿಸ್ಟ್ರಾ‌ರ್ ಜನರಲ್ ಆದೇಶ ಹೊರಡಿಸಿದ್ದಾರೆ. ರಜೆ ಅವಧಿ ಯಲ್ಲಿ ಯಾವುದೇ ಮೇಲ್ಮನವಿ ಹಾಗೂ ಹಳೆಯ ಅರ್ಜಿಗಳ ವಿಚಾರಣೆ ಕೈಗೆತ್ತಿಕೊಳ್ಳುವುದಿಲ್ಲ. ಕೇವಲ ತುರ್ತು ಅರ್ಜಿಗಳನ್ನು ಮಾತ್ರ ವಿಚಾರಣೆಗೆ ಪರಿಗಣಿಸಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Read More

ರಾಜ್ಯ ಸರಕಾರಿ ನೌಕರರ ಮತ್ತು ಅವಲಂಬಿತ ಕುಟುಂಬ ಸದಸ್ಯರ ಹಿತಾಸಕ್ತಿಗಳನ್ನು ರಕ್ಷಿಸುವ ಸಲುವಾಗಿ ವಿವಿಧ ಬ್ಯಾಂಕುಗಳಲ್ಲಿ ಒದಗಿಸುವ “ಸಂಬಳ ಪ್ಯಾಕೇಜ್”ಗಳ ಅಡಿಯಲ್ಲಿ ಖಾತೆಗಳನ್ನು ತೆರೆಯುವುದು ಮತ್ತು ಆಯ್ಕೆ ಮಾಡಿಕೊಳ್ಳುವುದನ್ನು ಎಲ್ಲಾ ಅಧಿಕಾರಿ, ನೌಕರರಿಗೆ ಕಡ್ಡಾಯಗೊಳಿಸಿ, ಆದೇಶಿಸಲಾಗಿದೆ ಎಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ತಿಳಿಸಿದ್ದಾರೆ. ಈ ಕುರಿತು ಸುತ್ತೋಲೆ ಹೊರಡಿಸಿರುವ ಅವರು ಜಿಲ್ಲೆಯಲ್ಲಿನ ಪ್ರತಿ ಸರಕಾರಿ ನೌಕರ ಸಂಬಳ ಪ್ಯಾಕೇಜ್ ಖಾತೆ ಹೊಂದಿ, ಅದರ ಪ್ರಯೋಜನ ಪಡೆಯಬೇಕು. ಆದ್ದರಿಂದ ಜಿಲ್ಲೆಯ ಎಲ್ಲ ಇಲಾಖೆಗಳು ಜಿಲ್ಲಾ ಮುಖ್ಯಸ್ಥರು ತಮ್ಮ ಇಲಾಖೆಯ ಜಿಲ್ಲಾ, ತಾಲೂಕು, ಗ್ರಾಮಮಟ್ಟದಲ್ಲಿರುವ ಡಿ.ಡಿ.ಓ ಗಳ ಮೂಲಕ ಪ್ರತಿ ನೌಕರನ ವೇತನ ಪಾವತಿ ಖಾತೆ ಸಂಬಳ ಪ್ಯಾಕೇಜ್ ಖಾತೆ ಆಗಿರುವದನ್ನು ಖಚಿತಪಡಿಸಿಕೊಳ್ಳಬೇಕು. ಒಂದು ವೇಳೆ ಅವರ ವೇತನ ಖಾತೆಯು ಸಂಬಳ ವೇತನ ಖಾತೆ ಆಗಿರದಿದ್ದಲ್ಲಿ ತಾವೇ ಖುದ್ದು ಮುತುವರ್ಜಿ, ಜವಾಬ್ದಾರಿ ವಹಿಸಿ ಮಾಡಿಸಬೇಕು ಎಂದು ಅವರು ನಿರ್ದೇಶನ ನೀಡಿದ್ದಾರೆ. ಪ್ರತಿ ಸರಕಾರಿ ನೌಕರನಿಗೆ ಸಂಬಳ ಪ್ಯಾಕೇಜ್ ಖಾತೆ ಮತ್ತು ಪಿ.ಎಂ.ಜೆ.ಜೆ.ಬಿ.ವೈ ಹಾಗೂ…

Read More

ಚಿಕ್ಕಮಗಳೂರು : ಪಹಲ್ಗಾಮ್‌ ಉಗ್ರರ ದಾಳಿ, ಸುಹಾಸ್‌ ಹತ್ಯೆ ಖಂಡಿಸಿ ನಾಳೆ ಚಿಕ್ಕಮಗಳೂರು ಜಿಲ್ಲಾ ಬಂದ್‌ ಗೆ ಕರೆ ನೀಡಲಾಗಿದೆ. ಪಹಲ್ಗಾಮ್‌ ಉಗ್ರರ ದಾಳಿ ಹಾಗೂ ಸುಹಾಸ್‌ ಶೆಟ್ಟಿ ಹತ್ಯೆ ಖಂಡಿಸಿ ನಾಳೆ ಚಿಕ್ಕಮಗಳೂರು ಜಿಲ್ಲಾ ಬಂದ್‌ ಗೆ ಬಜರಂಗದಳ, VHP ಕರೆ ನೀಡಿದೆ. ಚಿಕ್ಕಮಗಳೂರು ನಗರ ಸೇರಿದಂತೆ ಎಲ್ಲಾ 9 ತಾಲೂಕುಗಳಲ್ಲಿ ಬಂದ್‌ ಗೆ ಕರೆ ನೀಡಲಾಗಿದೆ. ನಾಳೆ ಬೆಳಗ್ಗೆ 6 ಗಂಟೆಯಿಂದ ಸಂಜೆ6 ಗಂಟೆಯವರೆಗೆ ಬಂದ್‌ ಇರಲಿದೆ. ಸ್ವಯಂಪ್ರೇರಿತವಾಗಿ ಅಂಗಡಿಗಳನ್ನು ಮುಚ್ಚುವಂತೆ ಸಂಘಟನೆಗಳು ಮನವಿ ಮಾಡಿವೆ.

Read More

ಬೆಂಗಳೂರು: ನಕ್ಸಲ್ ನಿಗ್ರಹ ಪಡೆ ಮಾದರಿಯಲ್ಲೇ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಕೋಮು ಹಿಂಸೆ ನಿಗ್ರಹ ಕಾರ್ಯಪಡೆ ರಚನೆ ಮಾಡಲಾಗುತ್ತದೆ ಎಂಬುದಾಗಿ ಗೃಹ ಸಚಿವ ಡಾ.ಜಿ ಪರಮೇಶ್ವರ್ ತಿಳಿಸಿದ್ದಾರೆ. ಕರಾವಳಿಯ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಕೋಮು ಹಿಂಸಾಚಾರ ನಿಯಂತ್ರಿಸಲು ನಕ್ಸಲ್‌ ನಿಗ್ರಹ ಪಡೆ ಮಾದರಿಯಲ್ಲಿ ʼಕೋಮು ಹಿಂಸೆ ನಿಗ್ರಹ ಕಾರ್ಯಪಡೆʼಯನ್ನು ರಚಿಸಲಿದ್ದೇವೆ. ಇದು ಪೊಲೀಸರ ಸಹಯೋಗದಲ್ಲಿ ಕೆಲಸ ಮಾಡಲಿದೆ. ಯಾರು ಕೋಮು ಚಟುವಟಿಕೆಯನ್ನು ನಡೆಸುತ್ತಾರೆ, ಯಾರು ಅದನ್ನು ಬೆಂಬಲಿಸುತ್ತಾರೆ, ಅಂತಹವರ ಮೇಲೆ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳುವ ಅಧಿಕಾರವನ್ನು ಈ ಕಾರ್ಯಪಡೆಗೆ ಒದಗಿಸುತ್ತೇವೆ ಎಂದು ತಿಳಿಸಿದ್ದಾರೆ. https://twitter.com/KarnatakaVarthe/status/1918655931707257165 ಮಂಗಳೂರು ಶಾಂತಿಗೆ ಬರುತ್ತಿತ್ತು. ಕಳೆದ ನಾಲ್ಕೈದು ದಿನದಿಂದ ಆದ ಘಟನೆ ಮತ್ತು ನಿನ್ನೆ ನಡೆದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯನ್ನೇ ಬೆಚ್ಚಿ ಬೀಳಿಸಿದೆ. ನಾವು ಇದನ್ನು ಹೀಗೆ ಮುಂದುವರಿಯಲು ಯಾವುದೇ ಕಾರಣಕ್ಕು ಬಿಡುವುದಿಲ್ಲ. ಆರೋಪಿಗಳ ಪತ್ತೆಗಾಗಿ ಈಗಾಗಲೇ ನಾಲ್ಕು ತಂಡಗಳನ್ನು ರಚನೆ ಮಾಡಲಾಗಿದ್ದು, ಶೋಧ ನಡೆಸಿದ್ದಾರೆ. ಇನ್ನು ಮುಂದೆಯೂ ಇಂತಹ ಘಟನೆ…

Read More

ಬೆಂಗಳೂರು : ಜೂನ್ ತಿಂಗಳ ಅಂತ್ಯದೊಳಗೆ ರಾಜ್ಯದ ಎಲ್ಲಾ 3514 ಕಂದಾಯ ಗ್ರಾಮಗಳಿಗೂ ಅಂತಿಮ ಅಧಿಸೂಚನೆ ಹೊರಡಿಸಬೇಕು. ಡಿಸೆಂಬರ್ ಅಂತ್ಯದೊಳಗೆ ಎಲ್ಲರಿಗೂ ಹಕ್ಕುಪತ್ರ ನೀಡುವ ಮೂಲಕ ಬಡವರ ಕೆಲಸವನ್ನು ಈ ವರ್ಷದೊಳಗೆ ಮುಗಿಸಬೇಕು ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಎಲ್ಲಾ ಜಿಲ್ಲಾಧಿಕಾರಿಗಳಿಗೂ ಇಂದು ಗಡುವು ನಿಗದಿಗೊಳಿಸಿದ್ದಾರೆ. ಶನಿವಾರ ವಿಕಾಸೌಧದಿಂದ ವಿಡಿಯೋ ಕಾನ್ಫರೆನ್ಸ್ ಮೂಲಕ ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳ ಸಭೆ ನಡೆಸಿ ಸೂಚನೆ ನೀಡಿದ ಅವರು, “ಮೂಲಭೂತ ಸೌಕರ್ಯಗಳಿಂದ ವಂಚಿತರಾಗಿರುವ ಕಡು ಬಡವರಿಗೆ ಕಂದಾಯ ಗ್ರಾಮಗಳನ್ನು ರಚಿಸಿ ಶಾಶ್ವತ ಪರಿಹಾರ ನೀಡಬೇಕು ಎಂಬ ಉದ್ದೇಶದಿಂದಲೇ 2017 ರಲ್ಲಿ ಕಾನೂನಿಗೆ ತಿದ್ದುಪಡಿ ತರಲಾಗಿತ್ತು. ಆದರೆ ಅನುಷ್ಠಾನ ಈವರೆಗೆ ಪೂರ್ಣಗೊಳ್ಳದಿರುವುದು ದುರಾದೃಷ್ಟ. ಈ ಹಿಂದೆ ಹಲವರಿಗೆ ಹಕ್ಕುಪತ್ರ ನೀಡಿದ್ದರೂ, ಇನ್ನೂ ಆಗಬೇಕಾದ ಕೆಲಸ ಸಾಕಷ್ಟು ಬಾಕಿ ಇದೆ” ಎಂದು ವಿಷಾದಿಸಿದರು. “ಪ್ರಸ್ತುತ ಅಂಕಿ ಅಂಶಗಳ ಪ್ರಕಾರ ರಾಜ್ಯಾದ್ಯಂತ 3,514 ಕಂದಾಯ ಗ್ರಾಮಗಳಿದ್ದು, ಈವರೆಗೆ 2600 ಕಂದಾಯ ಗ್ರಾಮಗಳಿಗೆ ಅಂತಿಮ ಅಧಿಸೂಚನೆ ಹೊರಡಿಸಲಾಗಿದೆ. ಕಳೆದ ಸರ್ಕಾರದ…

Read More

ಬೆಂಗಳೂರು : ಪರಿಶಿಷ್ಟ ಜಾತಿಯಲ್ಲಿ ಒಳ ಮೀಸಲು ಕಲ್ಪಿಸುವ ಸಲುವಾಗಿ ದತ್ತಾಂಶ ಸಂಗ್ರಹ ಉದ್ದೇಶದೊಂದಿಗೆ ನಿವೃತ್ತ ನ್ಯಾ| ಎಚ್.ಎನ್ ನಾಗಮೋಹನ್‌ ದಾಸ್‌ ನೇತೃತ್ವದ ಆಯೋಗ ಸೋಮವಾರದಿಂದ ಸಮೀಕ್ಷೆ ಆರಂಭಿಸಲಿದೆ. ಗೌರವಾನ್ವಿತ ನ್ಯಾಯಮೂರ್ತಿಗಳಾದ ಶ್ರೀ ಹೆಚ್ ಎನ್ ನಾಗಮೋಹನ ದಾಸ್ ಇವರ ಏಕ ಸದಸ್ಯ ವಿಚಾರಣಾ ಆಯೋಗದಿಂದ ಪರಿಶಿಷ್ಟ ಜಾತಿಯ ಒಳ ಮೀಸಲಾತಿ ಕುರಿತು ದತ್ತಾಂಶ ಸಂಗ್ರಹಿಸಲು ಸರ್ಕಾರದಿಂದ ನಡೆಸಲು ಉದ್ದೇಶಿಸಿರುವ ಸಮೀಕ್ಷಾ ಕಾರ್ಯವನ್ನು ಸರ್ಕಾರದ ಅಗತ್ಯ ಕಾರ್ಯವೆಂದು ಪರಿಗಣಿಸಿ, ಕರಾರುವಕ್ಕಾದ ಪ್ರಮಾಣೀಕೃತ ಮಾಹಿತಿಯನ್ನು ಪಡೆಯುವ ಸಲುವಾಗಿ ಸಮೀಕ್ಷಾ ಕಾರ್ಯಕ್ಕೆ ಶಿಕ್ಷಕರನ್ನು ಗಣತಿದಾರರನ್ನಾಗಿ (Enumerators) ಗುರುತಿಸಲು ಹಾಗೂ ಅದರೊಂದಿಗೆ ೫.10 ರಷ್ಟು ಶಿಕ್ಷಕರನ್ನು ಹೆಚ್ಚುವರಿಯಾಗಿ ಕಾಯ್ದಿರಿಸಲು ಹಾಗೂ 10 ರಿಂದ 12 ಗಣತಿದಾರರಿಗೆ ಓರ್ವ ಮೇಲ್ವಿಚಾರಕರನ್ನು ಗುರುತಿಸಲು ಆದೇಶಿಸಿದ. ಮುಂದುವರೆದು, ಬೆಂಗಳೂರು ಮತ್ತು ಮೈಸೂರು ವಿಭಾಗಗಳಿಗೆ ಆಯುಕ್ತರು, ಶಾಲಾ ಶಿಕ್ಷಣ ಇಲಾಖೆ, ಬೆಂಗಳೂರು ಇವರು ನೋಡಲ್ ಅಧಿಕಾರಿಯಾಗಿದ್ದು, ಈ ಕುರಿತು ಸಂಪೂರ್ಣ ಮೇಲ್ವಿಚಾರಣೆ ಮತ್ತು ಮಾರ್ಗದರ್ಶನ ಮಾಡತಕ್ಕದ್ದು ಮತ್ತು ಸಂಬಂಧಪಟ್ಟ ಜಿಲ್ಲಾಧಿಕಾರಿಗಳು/ಆಯುಕ್ತರು. ಬೃಹತ್…

Read More

ಬೆಂಗಳೂರು : ಶಿಕ್ಷಕ ಹುದ್ದೆ ಆಕಾಂಕ್ಷಿಗಳಿಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಭರ್ಜರಿ ಸಿಹಿಸುದ್ದಿ ನೀಡಿದ್ದು, ಶೀಘ್ರವೇ ರಾಜ್ಯದಲ್ಲಿ 19,000 ಶಿಕ್ಷಕರ ನೇಮಕಾತಿ ಮಾಡಲಾಗುವುದು ಎಂದು ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಒಳ ಮೀಸಲಾತಿ ಸಂಬಂಧ ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್ ಸಮಿತಿಯು ವರದಿ ನೀಡಿದ ಬಳಿಕ 19 ಸಾವಿರ ಶಿಕ್ಷಕರ ನೇಮಕಾತಿ ಮಾಡಲಾಗುವುದು ಎಂದು ಹೇಳಿದ್ದಾರೆ. ರಾಜ್ಯದ ಕಲ್ಯಾಣ ಕರ್ನಾಟಕ ಭಾಗದ ಶಾಲೆಗಳಿಗೆ 5000 ಶಿಕ್ಷಕರು, ಉಳಿದ ಭಾಗದಲ್ಲಿ 5000 ಸೇರಿ ಒಟ್ಟು 10 ಸಾವಿರ ಶಿಕ್ಷಕರ ನೇಮಕಾತಿ ಮಾಡಿಕೊಳ್ಳುವುದಾಗಿ ಈಗಾಗಲೇ ಬಜೆಟ್‌ನಲ್ಲಿ ಮುಖ್ಯಮಂತ್ರಿಗಳು ಘೋಷಿಸಿದ್ದಾರೆ. ಇದರ ಜೊತೆಗೆ ಇನ್ನೂ ಒಂಬತ್ತು ಹುದ್ದೆಗಳು ಸೇರಿ 19 ಸಾವಿರ ಶಿಕ್ಷಕರನ್ನು ನೇಮಕ ಮಾಡಿಕೊಳ್ಳುವ ಉದ್ದೇಶವಿದೆ. ನಾಗಮೋಹನದಾಸ್ ಸಮಿತಿ ವರದಿ ಬಂದ ಬಳಿಕ ಈ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗುವುದು ಎಂದು ತಿಳಿಸಿದ್ದಾರೆ.

Read More

ಬೆಂಗಳೂರು : ಪ್ರಸಕ್ತ 2025ನೇ ಸಾಲಿನ ನೀಟ್-ಯುಜಿ ಪರೀಕ್ಷೆಯು ಮೇ 4ರ ಇಂದು ಮಧ್ಯಾಹ್ನ 2ರಿಂದ ಸಂಜೆ 5ರ ವರೆಗೆ ರಾಜ್ಯದ ಒಟ್ಟು 381 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದ್ದು, ರಾಜ್ಯದಲ್ಲಿ 1.49 ಲಕ್ಷ ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದಾರೆ. 381 ಪರೀಕ್ಷಾ ಕೇಂದ್ರಗಳಲ್ಲಿ ಮಧ್ಯಾಹ್ನ 2 ಗಂಟೆಯಿಂದ ಸಂಜೆ 5 ಗಂಟೆವರೆಗೆ ಪರೀಕ್ಷೆ ನಡೆಯಲಿದೆ. ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 1.30ರ ಅವಧಿ ಯಲ್ಲಿ ವಿದ್ಯಾರ್ಥಿಗಳ ಹಾಜರಾತಿಗೆ ಅವಕಾಶ ಇರಲಿದೆ. ವಿದ್ಯಾರ್ಥಿಗಳು ಪ್ರವೇಶಾತಿ ಪತ್ರದೊಂದಿಗೆ ಕಾಲೇಜಿನಿಂದ ನೀಡಲ್ಪಟ್ಟಿ ರುವ ಗುರುತಿನ ಚೀಟಿ, ಆಧಾರ್ ಕಾರ್ಡ್, ಪಾನ್ ಕಾರ್ಡ್, ಡಿಎಲ್, ಮತದಾರರ ಗುರುತಿನ ಚೀಟಿ ಅಥವಾ ಇತರೆ ಯಾವುದಾದರೂ ಅಂಗೀಕೃತ ಗುರುತಿನ ಚೀಟಿ, ಎರಡು ಪಾಸ್ ಪೋರ್ಟ್ ಅಳತೆಯ ಫೋಟೊಗ ಳೊಂದಿಗೆ ಪರೀಕ್ಷಾ ಕೇಂದ್ರಕ್ಕೆ ಹಾಜರಾಗ ಬೇಕು. ಪೊಲೀಸ್ ಸಿಬ್ಬಂದಿ ವತಿಯಿಂದ ವಿದ್ಯಾರ್ಥಿಗಳ ತಪಾಸಣೆ ನಡೆಯಲಿದೆ. ವಿದ್ಯಾರ್ಥಿಗಳಿಗೆ ಈ ನಿಯಮಗಳ ಪಾಲನೆ ಕಡ್ಡಾಯ ಹಾಜರಾಗುವ ವಿದ್ಯಾರ್ಥಿಗಳಿಗೆ ಬಯೋ ಮೆಟ್ರಿಕ್ ಹಾಜರಾತಿ ಕಡ್ಡಾಯವಾಗಿದ್ದು, ವಿದ್ಯಾರ್ಥಿಗಳು ಪ್ರವೇಶಾತಿ ಪತ್ರದಲ್ಲಿ…

Read More

ಪಣಜಿ: ಗೋವಾದ ಶಿರ್ಗಾವೊದ ಶ್ರೀ ಲೈರೈ ದೇವಿಯ ದೇವಾಲಯದ ಉತ್ಸವದಲ್ಲಿ ಕಾಲ್ತುಳಿತಕ್ಕೆ ಕನಿಷ್ಠ 7 ಜನರು ಸಾವನ್ನಪ್ಪಿದ್ದಾರೆ. 50ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.  ಈ ಘಟನೆಯನ್ನು ಖಂಡಿಸಿರುವ ಕಾಂಗ್ರೆಸ್, “ಶಿರ್ಗಾವೊದ ಶ್ರೀ ಲೈರೈ ದೇವಿಯ ಜಾತ್ರೋತ್ಸವದಲ್ಲಿ ಕಾಲ್ತುಳಿತದಿಂದ ಗೋವಾ ಕಾಂಗ್ರೆಸ್ ತೀವ್ರ ದುಃಖಿತವಾಗಿದೆ. ನಾವು ಈ ದುರಂತ ಘಟನೆಯನ್ನು ಖಂಡಿಸುತ್ತೇವೆ ಮತ್ತು ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ಕುಟುಂಬಗಳಿಗೆ ಹೃತ್ಪೂರ್ವಕ ಸಂತಾಪವನ್ನು ವ್ಯಕ್ತಪಡಿಸುತ್ತೇವೆ. ಗಾಯಗೊಂಡವರೆಲ್ಲರೂ ಶೀಘ್ರ ಗುಣಮುಖರಾಗಲಿ ಎಂದು ಹಾರೈಸುತ್ತೇನೆ” ಎಂದಿದ್ದಾರೆ. ಗಾಯಾಳುಗಳನ್ನು ಗೋವಾ ವೈದ್ಯಕೀಯ ಕಾಲೇಜು ಮತ್ತು ಮಾಪುಸಾದ ಉತ್ತರ ಗೋವಾ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಗೊಂಡವರಲ್ಲಿ ಕೆಲವರ ಸ್ಥಿತಿ ಗಂಭೀರವಾಗಿದೆ ಎಂದು ವರದಿಯಾಗಿದೆ. https://twitter.com/AHindinews/status/1918510417531347257?ref_src=twsrc%5Etfw%7Ctwcamp%5Etweetembed%7Ctwterm%5E1918510417531347257%7Ctwgr%5Ee90dfa1417b269f643e5d08f412896578338dd3a%7Ctwcon%5Es1_c10&ref_url=https%3A%2F%2Fapi-news.dailyhunt.in%2F https://twitter.com/DrPramodPSawant/status/1918500226618249596?ref_src=twsrc%5Etfw%7Ctwcamp%5Etweetembed%7Ctwterm%5E1918500226618249596%7Ctwgr%5E872fbda77578f0963ba17a81002c37d597bc57e4%7Ctwcon%5Es1_c10&ref_url=https%3A%2F%2Fapi-news.dailyhunt.in%2F https://twitter.com/iamRahilM/status/1918493109081497890?ref_src=twsrc%5Etfw%7Ctwcamp%5Etweetembed%7Ctwterm%5E1918493109081497890%7Ctwgr%5E48f8528798431808edd0649683d0894b2057a09e%7Ctwcon%5Es1_c10&ref_url=https%3A%2F%2Fapi-news.dailyhunt.in%2F

Read More

ಮಂಗಳೂರು : ರೌಡಿಶೀಟರ್‌, ಹಿಂದೂ ಕಾರ್ಯಕರ್ತ ಸುಹಾಸ್‌ ಶೆಟ್ಟಿ ಹತ್ಯೆ ಪ್ರಕರಣ ಸಂಬಂಧ ತನಿಖೆ ನಡೆಸುತ್ತಿರುವ ಪೊಲೀಸರು ಇದೀಗ ಪ್ರತೀಕಾರದ ಪೋಸ್ಟ್‌ ಹಾಗೂ ಸಂದೇಶಗಳ ಸಂಬಂಧ 12 ಎಫ್‌ ಐಆರ್‌ ದಾಖಲಿಸಿದ್ದಾರೆ. ರೌಡಿ ಸುಹಾಸ್‌ ಹತ್ಯೆ ಪ್ರಕರಣದಲ್ಲಿ ಪ್ರತೀಕಾರದ ಪೋಸ್ಟ್‌ ಗಳ ವಿರುದ್ದ ಕೊನೆಗೂ ಪೊಲೀಸರು ಎಚ್ಚೆತ್ತುಕೊಂಡಿದ್ದು, ಪ್ರತೀಕಾರದ ಸಂದೇಶ, ಪೋಸ್ಟ್‌ ಸಂಬಂಧ 12 ಪ್ರಕರಣಗಳನ್ನು ದಾಖಲಿಸಿಕೊಂಡಿದ್ದಾರೆ. ಮಂಗಳೂರು ಉತ್ತರ, ಮಂಗಳೂರು ದಕ್ಷಿಣ, ಮುಲ್ಕಿ, ಉರ್ವಾ ಬರ್ಕೆ, ಮೂಡಬಿದಿರೆ, ಕಾವೂರು ಠಾಣೆಗಳಲ್ಲಿ ಎಫ್‌ ಐಆರ್‌ ದಾಖಲಾಗಿದೆ.

Read More